Home Blog Page 284

ಕಾನೂನು ವ್ಯಾಪ್ತಿಗೆ ಬಾರದವರು ಸಂಸತ್ತಿನ ಬಗ್ಗೆ ಮಾತನಾಡಬಾರದು: ಮೋಹನ್ ಭಾಗವತ್ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

0

ನವದೆಹಲಿ:- ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ ಎಂದು ಹೇಳುವ ಮೂಲಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ರಾಷ್ಟ್ರ ಮಾಡುವ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ ಎನ್ನುವುದು ಅಷ್ಟೇ ಸತ್ಯ. ಆರ್‌ಎಸ್‌ಎಸ್ ಸಂವಿಧಾನಿಕ ಚೌಕಟ್ಟಿನೊಳಗೆ ನೋಂದಾಯಿತ ಸಂಸ್ಥೆಯೇ ಅಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ನೋಂದಾಯಿಸದೇ ಇರುವವರು ಸಂಸತ್ತಿನ ಬಗ್ಗೆ ಮಾತನಾಡುವ ಹಕ್ಕು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.

ಹಿಂದೂ ರಾಷ್ಟ್ರ ಮಾಡಲು ಸಂವಿಧಾನ ಬದಲಾವಣೆ ಅಗತ್ಯವಿಲ್ಲ ಎಂಬ ಹೇಳಿಕೆ ಅಸಂಬದ್ಧವಾಗಿದೆ. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಹಾಗೂ ಗೃಹ ಸಚಿವರು ಮೋಹನ್ ಭಾಗವತ್ ಅವರ ಏಜೆಂಟ್‌ಗಳೇ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಸಂವಿಧಾನಕ್ಕೇ ಬದ್ಧರಾಗಿರಬೇಕು. ಮೋಹನ್ ಭಾಗವತ್‌ಗೆ Z+ ಭದ್ರತೆ ನೀಡಲಾಗಿದೆ, ದೇಶಕ್ಕಾಗಿ ಅವರ ಕೊಡುಗೆ ಏನು ಎಂಬುದನ್ನು ಸರ್ಕಾರ ಹೇಳಬೇಕು ಎಂದು ಆಗ್ರಹಿಸಿದರು.

ರಾಹುಲ್​ ಗಾಂಧಿಗೆ ಕೆ ಎನ್​ ರಾಜಣ್ಣ ಪತ್ರ ಬರೆದ ವಿಚಾರ: ಡಿಕೆ. ಸುರೇಶ್ ಹೇಳಿದ್ದೇನು..?

0

ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ-ತಾಯಿ, ಪೋಷಕರೇ ಸಮಾಧಾನ ಮಾಡಬೇಕು. ಅದೇ ರೀತಿ ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಪತ್ರದ ಕುರಿತು ಅವರನ್ನೇ ಕೇಳಬೇಕು. ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದು ಅವರವರ ಹಕ್ಕು. ಅವರ ಪ್ರತಿಪಾದನೆ, ಅವರ ವಿಚಾರ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮ ಪಕ್ಷದಲ್ಲಿ ಮಾತನಾಡಲು ಎಲ್ಲರಿಗೂ ಸ್ವಾತಂತ್ರ್ಯ ಇದೆ. ಯಾವುದೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಅವನ್ನು ಗಮನಿಸುತ್ತಿರುತ್ತದೆ. ಹಾಗಾಗಿಯೇ ಅವರು ಆ ಮಾತನ್ನು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಡಿ.ಕೆ. ಶಿವಕುಮಾರ್ ಸಾಮಾನ್ಯವಾಗಿ ದೆಹಲಿಗೆ ಹೋಗುತ್ತಾರೆ. ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತಾರೆ. ಜೊತೆಗೆ ಸಚಿವ ಪ್ರಿಯಾಂಕ್ ಅವರು ದೆಹಲಿಯಲ್ಲಿ ಸಭೆ ಕರೆದಿದ್ದು, ಆ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿ ಮಾತನಾಡಿದ ಡಿ.ಕೆ. ಸುರೇಶ್, ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಖರ್ಗೆಯವರ ಹೇಳಿಕೆ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಹೇಳಿದಂತೆ ನಾವು ನಡೆಯುತ್ತೇವೆ ಎಂದು ಹೇಳಿದರು.

ಹುಬ್ಬಳ್ಳಿ ಮರ್ಯಾದಾ ಹತ್ಯೆ ಕೇಸ್:‌ 24 ಗಂಟೆಯಲ್ಲೇ 6 ಜನ ಹಂತಕರು ಅರೆಸ್ಟ್​!

0

ಹುಬ್ಬಳ್ಳಿ: ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬದ ಸದಸ್ಯರು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಭಾನುವಾರ ನಡೆದಿತ್ತು.

 ಪ್ರಕರಣದಲ್ಲಿ ಒಟ್ಟು 6 ಜನರನ್ನು  ಬಂಧಿಸಲಾಗಿದೆಪೈಕಿ  ಇಡೀ  ಕುಟುಂಬ  ಜೈಲು  ಪಾಲಾಗಿದೆ  ಎಂದು  ಹೇಳಲಾಗುತ್ತಿದೆಅತ್ತ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಇದರಲ್ಲಿ ರೇಣವ್ವಳ ಸ್ಥಿತಿ ಚಿಂತಾಜನಕವಾಗಿದ್ದು, ಇನ್ನೂ ಐವರಿಗೆ ಚಿಕಿತ್ಸೆ ಮುಂದುವರೆದಿದೆ. ಅಲ್ಲದೇ ಘಟನೆ ಹಿನ್ನೆಲೆಯಲ್ಲಿ ಮಾನ್ಯಾಳ ಗಂಡ ವಿವೇಕಾನಂದ ಗೆ ಪೊಲೀಸ್ ಭದ್ರತೆ ನೀಡಲಾಗಿದ್ದು, ಓರ್ವ ಗನ್ ಮ್ಯಾನ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಮಾನ್ಯಾ ಮತ್ತು ವಿವೇಕಾನಂದ ಇಬ್ಬರೂ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಗ ಇನ್ಸ್ಟಾಗ್ರಾಂ ಮೆಸೆಜ್‍ನಿಂದ ಪ್ರೀತಿ ಹುಟ್ಟಿತ್ತು. ಈ ವಿಚಾರ ಎರಡೂ ಕುಟುಂಬಕ್ಕೂ ತಿಳಿದಿತ್ತು. ಇಬ್ಬರ ಪ್ರೀತಿಗೆ ಯುವತಿಯ ಕುಟುಂಬಸ್ಥರು ವಿರೋಧಿಸಿದ್ದರು.

ಯುವತಿ ಯಾವುದೇ ಕಾರಣಕ್ಕೂ ವಿವೇಕಾನಂದನನ್ನು ಬಿಟ್ಟು ಬದುಕೋದಿಲ್ಲ ಅಂತ ಹಠ ಹಿಡಿದಿದ್ದಳಂತೆ. ವಿವೇಕಾನಂದ ಮಾನ್ಯಾಳ ಜೊತೆ ಕಳೆದ ಜೂ.19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದ. ಈ ಸಮಯದಲ್ಲಿ ಪೊಲೀಸರು ಎರಡು ಕುಟುಂಬ ಕರೆದು ರಾಜಿ ಪಂಚಾಯತಿ ಮಾಡಿದ್ದರು ಎನ್ನಲಾಗಿದೆ.

ಸಂತ್ರಸ್ಥೆ ಮಾನ್ಯ ಪಾಟೀಲ್ ಆಕೆಯ ತಂದೆಯ ಮುದ್ದಿನ ಮಗಳಾಗಿದ್ದಳು. ಮಗಳನ್ನು ಇಂಜಿನೀಯರ್ ಮಾಡಿ ಅಮೇರಿಕಕ್ಕೆ ಕಳುಹಿಸೋ ಚಿಂತನೆ ತಂದೆಯದಾಗಿತ್ತು. ಆದ್ರೆ ಮುದ್ದಿನ ಮಗಳು ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಳು. ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದರು.

ಮಾನ್ಯ ಲಿಂಗಾಯತ ಸಮುದಾಯಕ್ಕೆ ಸೇರಿದ್ದಳು, ವಿವೇಕಾನಂದ ದಲಿತ ಸಮುದಾಯದವನಾಗಿದ್ದ. ಜಾತಿ ದ್ವೇಷದಿಂದ ಕುಪಿತರಾದ ಮಾನ್ಯ ತಂದೆ ಪ್ರಕಾಶ್ ಗೌಡ ಪಾಟೀಲ್ ಮತ್ತು ಸಂಬಂಧಿಕರು ಗರ್ಭಿಣಿ ಮಗಳನ್ನೇ  ಹೊಡೆದು  ಕೊಂದಿದ್ದಾರೆ  ಎಂಬ ಆರೋಪ ಕೇಳಿಬಂದಿದೆಈ ಕೃತ್ಯಕ್ಕೆ ಕುಟುಂಬದ ಹಲವು ಸದಸ್ಯರು ಸಹಕರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ರಾಜಧಾನಿ & ಕರಾವಳಿ ಜನಸಂಪರ್ಕಕ್ಕೆ ವಂದೇ ಭಾರತ್ ರೈಲು ಅನುಕೂಲಕರ: ಹೆಚ್‌.ಡಿ. ಕುಮಾರಸ್ವಾಮಿ

0

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.

ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಯಾವ ಮಾರ್ಗದಲ್ಲಿ?:

ಹಾಸನ, ಮಂಗಳೂರು ಜಂಕ್ಷನ್‌, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಸೇವೆಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲ ಆಗಲಿದೆ. ಅಲ್ಲದೆ, ಕರಾವಳಿ ಭಾಗದಲ್ಲಿರುವ ಪುಣ್ಯಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಹೋಗಿ ಬರುವುದು ಸುಲಭವಾಗುತ್ತದೆ. ಶಿಕ್ಷಣ ಹಾಗೂ ವೃತ್ತಿಪರ ಕಾರಣಗಳಿಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂಬ ಅಂಶಗಳನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದ ಐಟಿ ರಾಜಧಾನಿ ಆಗಿರುವ ಬೆಂಗಳೂರು ಮತ್ತು ಬಂದರು ನಗರ ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ಉಳಿದೆಲ್ಲಾ ಪ್ರಮುಖ ವಾಣಿಜ್ಯ ಕೇಂದ್ರಗಳು, ಬಂದರುಗಳು ಮತ್ತು ಪ್ರವಾಸಿ ತಾಣಗಳಿಗೆ ಹಾಗೂ ಗೋವಾ ನಡುವೆ ನೇರ ಹಾಗೂ ವೇಗದ ರೈಲು ಸಂಪರ್ಕ ಕಲ್ಪಿಸುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಚುರುಕಾಗಲಿವೆ ಎಂದು ಅವರು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

ಈ ರೈಲು ಸೇವೆ ಆರಂಭಿಸುವುದರಿಂದ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆ ಈಡೇರಿಸಿದಂತೆ ಆಗುತ್ತದೆ. ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಮಿಗಿಲಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ. ಉದ್ಯೋಗಾವಕಾಶಗಳ ವೃದ್ಧಿಗೂ ಸಹಕಾರಿಯಾಗಲಿದೆ. ಸಮಗ್ರ, ದಕ್ಷ ಮತ್ತು ಅತ್ಯಾಧುನಿಕ ಧ್ಯೇಯ ಕಾರ್ಯಜಾಲದ ಸರ್ಕಾರದ ಮುನ್ನೋಟಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ರೈಲು ಸಂಪರ್ಕವನ್ನು ಬೆಸೆಯುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮನವಿಯನ್ನು ಪರಿಗಣಿಸಿ ವಂದೇ ಭಾರತ್‌ ರೈಲು ಸೇವೆ ಆರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೈರುತ್ಯ ರೈಲ್ವೆಯ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ರೈಲ್ವೆ ಸಚಿವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಜ.29-ಫೆ.6ರವರೆಗೆ ಬೆಂಗಳೂರಿನಲ್ಲಿ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನಡೆಯುವ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು.

17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು Jan 29ರಿಂದ Feb 6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉತ್ಸವವನ್ನು ಉದ್ಘಾಟಿಸಲಿದ್ದಾರೆ.

ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳಿಂದ ಆಯ್ಕೆಯಾದ 200 ಸಿನಿಮಾಗಳು ಪ್ರದರ್ಶನವಾಗಲಿದ್ದು, ಒಟ್ಟು 400 ಪ್ರದರ್ಶನಗಳು ನಡೆಯಲಿವೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾಗಳ ಪ್ರದರ್ಶನವೂ ಉತ್ಸವದ ವಿಶೇಷ ಆಕರ್ಷಣೆಯಾಗಲಿದೆ.

ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಶೇಷ ವಿಭಾಗವನ್ನು ಆಯೋಜಿಸಲಾಗುತ್ತದೆ. ಮಹಿಳೆಯರ ಸಬಲೀಕರಣವನ್ನು ಥೀಮ್ ಆಗಿ ರೂಪಿಸುವ ಚಿಂತನೆ ಇದ್ದು, ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.

ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಎಲ್ಲಾ ಚಿತ್ರ ಪ್ರದರ್ಶನ ನಡೆಯಲಿದೆ. ಇದುವರೆಗೆ 110 ಚಿತ್ರಗಳಿಂದ ಅರ್ಜಿಗಳು ಬಂದಿದ್ದು, Dec 31 ಕೊನೆಯ ದಿನಾಂಕವಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟ ನಿರಾಕರಣೆ ಸಂಬಂಧ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಗೃಹ ಸಚಿವರು ಸಮಿತಿ ರಚನೆ ಮಾಡಿದ್ದಾರೆ. ನ್ಯಾ. ಕುನ್ಹಾ ವರದಿ ಶಿಫಾರಸುಗಳನ್ನು ಜಾರಿ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಈ ಸಭೆಯಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ಹಿರಿಯ ನಟಿ ಜಯಮಾಲ, ಸಾರಾ ಗೋವಿಂದ್ ಸೇರಿದಂತೆ ಚಿತ್ರೋದ್ಯಮದ ಗಣ್ಯರು ಉಪಸ್ಥಿತರಿದ್ದರು.

ತಿನ್ನುವ ಬ್ರೆಡ್ ನಲ್ಲಿ ಮಾದಕ ವಸ್ತು ಕೊಕೇನ್ ಪೆಡ್ಲಿಂಗ್..! ವಿದೇಶಿ ಮಹಿಳೆ ಅರೆಸ್ಟ್

0

ಬೆಂಗಳೂರು: ಬ್ರೇಡ್ ಪೀಸಗಳ ಮಧ್ಯೆ ಕೊಕೇನ್ ಇಟ್ಟು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಬಂಧಿತ ಆರೋಪಿಯಾಗಿದ್ದು,

ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ.

ಯಾರಿಗೂ ಅನುಮಾನ ಬಾರದಂತೆ ಬ್ರೆಡ್‌ನ ಒಳಭಾಗದ ಪೀಸ್ ಕಟ್ ಮಾಡಿ, ಅದರೊಳಗೆ ಕೊಕೇಕ್ ಇಟ್ಟು ಡ್ರಗ್ ಸಾಗಾಟ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಸದ್ಯ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕೌಟುಂಬಿಕ ಕಲಹ: 2 ತಿಂಗಳ ಗರ್ಭಿಣಿ ನೇಣಿಗೆ ಶರಣು! ಪತಿಯ ವಿರುದ್ಧ ಗಂಭೀರ ಆರೋಪ

0

ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡು ತಿಂಗಳ ಗರ್ಭಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಪುಷ್ಪ (25) ಎಂದು ಗುರುತಿಸಲಾಗಿದೆ. ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ ಖಾಸಗಿ ಗಾರ್ಮೆಂಟ್ಸ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.

ಅದೇ ಗಾರ್ಮೆಂಟ್ಸ್‌ಗೆ ಕೆಲಸಕ್ಕೆ ಹೋಗುತ್ತಿದ್ದ ಪುಷ್ಪ ಹಾಗೂ ಹರೀಶ್ ನಡುವೆ ಪ್ರೇಮಾಂಕುರವಾಗಿ ಬಳಿಕ ರಿಜಿಸ್ಟರ್ ಮ್ಯಾರೇಜ್ ನಡೆದಿತ್ತು. ಆದರೆ ಅನ್ಯಜಾತಿ ವಿವಾಹ ಎಂಬ ಕಾರಣಕ್ಕೆ ಹರೀಶ್ ಹಾಗೂ ಪುಷ್ಪ ಪೋಷಕರ ನಡುವೆ ತಾರತಮ್ಯ ಭಾವನೆ ಇದ್ದು, ಪುಷ್ಪ ಪೋಷಕರಿಗೆ ಹರೀಶ್ ಮನೆಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಎಲ್ಲವನ್ನೂ ಮೀರಿ ಪತಿಯೇ ಪರದೈವ ಎಂದು ನಂಬಿದ್ದ ಪುಷ್ಪ ಕಳೆದ ಎರಡು ವರ್ಷಗಳಿಂದ ಪತಿಯೊಂದಿಗೆ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದಳು. ದಂಪತಿಗೆ ಒಂದೂವರೆ ವರ್ಷದ ಗಂಡು ಮಗು ಇದ್ದು, ಪುಷ್ಪ ಇದೀಗ ಎರಡು ತಿಂಗಳ ಗರ್ಭಿಣಿಯಾಗಿದ್ದಳು. ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಪದೇಪದೇ ಕೌಟುಂಬಿಕ ಕಲಹ ಉಂಟಾಗಿ, ವಿಚ್ಛೇದನದ ಮಟ್ಟಕ್ಕೂ ವಿವಾದ ತಲುಪಿತ್ತು. ಈ ಹಿನ್ನೆಲೆ ಎರಡು ದಿನಗಳ ಹಿಂದಷ್ಟೇ ದಂಪತಿ ಪೊಲೀಸ್ ಠಾಣೆಗೆ ತೆರಳಿದ್ದರು. ರಾಜಿಸಂಧಾನದ ಮೂಲಕ ಮನೆಗೆ ಮರಳಿದ್ದ ಪುಷ್ಪ ಬಳಿಕ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಮನೆಯಲ್ಲಿದ್ದ ಪತಿ ಹರೀಶ್ ಅಸ್ವಸ್ಥಳಾಗಿದ್ದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಪುಷ್ಪ ಕೊನೆಯುಸಿರೆಳೆದಿದ್ದಾಳೆ. ವಿಷಯ ತಿಳಿದ ಪುಷ್ಪ ಪೋಷಕರು ಹಾಗೂ ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ, ಪತಿ ಹರೀಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕುಟುಂಬದಲ್ಲಿನ ಕೀಳರಿಮೆ ಹಾಗೂ ನಿರಂತರ ಕಿರುಕುಳವೇ ನಮ್ಮ ಮಗಳನ್ನು ಬಲಿ ಪಡೆದಿದೆ. ಇದನ್ನು ಮರೆಮಾಚಲು ಪುಷ್ಪಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ. ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ದುರ್ಬಲಳಲ್ಲ ಎಂದು ಆರೋಪಿಸಿದ್ದಾರೆ.ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹರೀಶ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಅಲ್ಲದೇ ಈ ಪ್ರಕರಣದ ಹಿಂದೆ ಮತ್ತೊಬ್ಬ ಮಹಿಳೆಯೊಂದಿಗೆ ಇದ್ದ ಅಕ್ರಮ ಸಂಬಂಧವೂ ಕೌಟುಂಬಿಕ ಕಲಹಕ್ಕೆ ಕಾರಣವಾಗಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ಅನುಮಾನಾಸ್ಪದ ಅಂಶಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಭಿಣಿ ಸಾವಿಗೆ ನ್ಯಾಯ ಒದಗಿಸುವಂತೆ ಪುಷ್ಪ ಸಂಬಂಧಿಗಳು ಆಗ್ರಹಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವೀಕ್‌ಡೇಸ್‌ʼನಲ್ಲಿ ಪ್ರೊಫೆಸರ್, ವೀಕೆಂಡ್ʼನಲ್ಲಿ ಕಳ್ಳತನ: ಅಧ್ಯಾಪಕಿ ಬಂಧನ

0

ಬೆಂಗಳೂರು: ವಾರದ ದಿನಗಳಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ, ವಾರಾಂತ್ಯದಲ್ಲಿ ಖತರ್ನಾಕ್ ಕಳ್ಳಿಯಾಗಿ ಬದಲಾಗುತ್ತಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಸಂಬಂಧಿಕಳಂತೆ ಪ್ರವೇಶಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಪ್ರೊಫೆಸರ್ ರೇವತಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಶಿವಮೊಗ್ಗ ಮೂಲದ ರೇವತಿ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ವಾಸವಾಗಿದ್ದು, ಬೆಳ್ಳಂದೂರು ಬಳಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು. ವಾರಪೂರ್ತಿ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದ ಈಕೆ, ಭಾನುವಾರ ಮಾತ್ರ ಮದುವೆ ಕಲ್ಯಾಣ ಮಂಟಪಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದಳು.

ಸಂಬಂಧಿಕಳಂತೆ ಮದುವೆ ಮನೆಯಲ್ಲಿ ಎಲ್ಲರೊಂದಿಗೆ ಮಾತನಾಡುತ್ತಾ ಅನುಮಾನ ಬಾರದಂತೆ ವರ್ತಿಸುತ್ತಿದ್ದ ರೇವತಿ, ಚಿನ್ನಾಭರಣ ಕದಿದು ಬಳಿಕ ಮದುವೆ ಊಟ ಕೂಡ ಮಾಡಿ ಅಲ್ಲಿಂದ ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ನವೆಂಬರ್ 25ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣ ಮಂಟಪದಲ್ಲಿ ಸಂಬಂಧಿಕಳಂತೆ ತೆರಳಿ ಮದುವೆ ಮನೆಯವರ ಚಿನ್ನಾಭರಣ ಕದ್ದಿದ್ದಳು. ಭಾನುವಾರಗಳಂದು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮದುವೆ ನಡೆಯುತ್ತಿದ್ದ ಹಾಲ್‌ಗಳಿಗೆ ಭೇಟಿ ನೀಡುತ್ತಿದ್ದಳು.

ಬಸವನಗುಡಿ ಪೊಲೀಸರ ವಿಚಾರಣೆ ವೇಳೆ ರೇವತಿ ಮೂರು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಬಂಧಿತಳಿಂದ ಸುಮಾರು 32 ಲಕ್ಷ ರೂ. ಮೌಲ್ಯದ 262 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಬೇರೆ ಬೇರೆ ಕಲ್ಯಾಣ ಮಂಟಪಗಳಲ್ಲಿ ಇದೇ ರೀತಿಯ ಕೃತ್ಯ ಎಸಗಿರುವ ಶಂಕೆ ಇದ್ದು, ಪೊಲೀಸರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಸಹಕಾರ ಸಂಘ ಕಚೇರಿ ಕಳ್ಳತನ ಪ್ರಕರಣ: ದೂರುದಾರನೇ ಆರೋಪಿ

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಡುಗೂರು ಗ್ರಾಮದಲ್ಲಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಹಣ ಕಳ್ಳತನ ಪ್ರಕರಣದಲ್ಲಿ ದೂರುದಾರನೇ ಆರೋಪಿ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಮೂರ್ತಿಯೇ ಈ ಕಳ್ಳತನದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಕಚೇರಿಯ ಕಬೋರ್ಡ್ ಅನ್ನು ಕಬ್ಬಿಣದ ರಾಡ್‌ನಿಂದ ಒಡೆದು 14 ಲಕ್ಷ 12 ಸಾವಿರ ರೂ. ಹಣ ಕಳ್ಳತನ ಮಾಡಲಾಗಿತ್ತು.

ಪ್ರಕರಣದ ತನಿಖೆ ವೇಳೆ ಚಂದ್ರಶೇಖರ ಮೂರ್ತಿಯೇ ಕೃತ್ಯ ನಡೆಸಿರುವುದು ಬಹಿರಂಗವಾಗಿದ್ದು, ಬಂಧಿತನಿಂದ ಇದುವರೆಗೆ 8 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.

Ashes 2025: ಆ್ಯಶಸ್ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಮತ್ತೆ ನಾಯಕ ಬದಲಾವಣೆ

0

ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತಮ್ಮ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಆಯ್ಕೆಯಾಗಿದ್ದು, ಮೊದಲೆರಡು ಪಂದ್ಯಗಳಲ್ಲಿ ಕೂಡ ಅವರು ನಾಯಕತ್ವ ವಹಿಸಿದ್ದರು.

ಹೀಗಾಗಿ, ಮೊದಲ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದ ಪ್ಯಾಟ್ ಕಮಿನ್ಸ್ ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಂಡಿರುವ ಕಮಿನ್ಸ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ತಂಡಕ್ಕೆ ಪ್ರಮುಖ ಕೊಡುಗೆ ನೀಡಿದ್ದರು. 5 ಪಂದ್ಯಗಳ ಸರಣಿಯಲ್ಲಿಯೂ ಆಸ್ಟ್ರೇಲಿಯಾ 3-0 ಅಂತರದಿಂದ ಜಯಹೊಂದಿದೆ.

ಪ್ಯಾಟ್ ಕಮಿನ್ಸ್ ಜೊತೆಗೆ, ಹಿರಿಯ ಸ್ಪಿನ್ನರ್ ನಾಥನ್ ಲಿಯಾನ್ ಕೂಡ ಕೊನೆಯ ಎರಡು ಪಂದ್ಯಗಳಿಗೆ ತಂಡದಲ್ಲಿ ಅಲಭ್ಯರಾಗಿದ್ದಾರೆ. ಇವರ ಬದಲಾಗಿ ಟಾಡ್ ಮರ್ಫಿ ಮತ್ತು ಜೆ. ರಿಚರ್ಡ್ಸನ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಈ ನಿರ್ಧಾರ ಕ್ರಿಕೆಟ್ ಆಸ್ಟ್ರೇಲಿಯಾ ತಂಡದ ಫಿಟ್ನೆಸ್ ಮತ್ತು ವಿಶ್ರಾಂತಿ ಹಿನ್ನಲೆಯಲ್ಲಿ ಕೈಗೊಂಡಿದೆ.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ಅಲೆಕ್ಸ್ ಕ್ಯಾರಿ , ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್, ಟಾಡ್ ಮರ್ಫಿ, ಮೈಕೆಲ್ ನೇಸರ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.

ಆ್ಯಶಸ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 8 ವಿಕೆಟ್​ಗಳ ಜಯ
  • ಎರಡನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 8 ವಿಕೆಟ್​ಗಳ ಜಯ
  • ಮೂರನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 82 ರನ್​ಗಳ ಜಯ
  • ನಾಲ್ಕನೇ ಟೆಸ್ಟ್: ಗುರುವಾರ ಡಿಸೆಂಬರ್ 26  ಡಿಸೆಂಬರ್ 30  ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ಐದನೇ ಟೆಸ್ಟ್: ಜನವರಿ 4 ಭಾನುವಾರ  ಜನವರಿ 8  ಸಿಡ್ನಿ ಕ್ರಿಕೆಟ್ ಮೈದಾನ.
error: Content is protected !!