Home Blog Page 285

ವೀಕ್‌ಡೇಸ್‌ʼನಲ್ಲಿ ಪ್ರೊಫೆಸರ್, ವೀಕೆಂಡ್ʼನಲ್ಲಿ ಕಳ್ಳತನ: ಅಧ್ಯಾಪಕಿ ಬಂಧನ

0

ಬೆಂಗಳೂರು: ವಾರದ ದಿನಗಳಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ, ವಾರಾಂತ್ಯದಲ್ಲಿ ಖತರ್ನಾಕ್ ಕಳ್ಳಿಯಾಗಿ ಬದಲಾಗುತ್ತಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಸಂಬಂಧಿಕಳಂತೆ ಪ್ರವೇಶಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಪ್ರೊಫೆಸರ್ ರೇವತಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಶಿವಮೊಗ್ಗ ಮೂಲದ ರೇವತಿ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ವಾಸವಾಗಿದ್ದು, ಬೆಳ್ಳಂದೂರು ಬಳಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು. ವಾರಪೂರ್ತಿ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದ ಈಕೆ, ಭಾನುವಾರ ಮಾತ್ರ ಮದುವೆ ಕಲ್ಯಾಣ ಮಂಟಪಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದಳು.

ಸಂಬಂಧಿಕಳಂತೆ ಮದುವೆ ಮನೆಯಲ್ಲಿ ಎಲ್ಲರೊಂದಿಗೆ ಮಾತನಾಡುತ್ತಾ ಅನುಮಾನ ಬಾರದಂತೆ ವರ್ತಿಸುತ್ತಿದ್ದ ರೇವತಿ, ಚಿನ್ನಾಭರಣ ಕದಿದು ಬಳಿಕ ಮದುವೆ ಊಟ ಕೂಡ ಮಾಡಿ ಅಲ್ಲಿಂದ ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ನವೆಂಬರ್ 25ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣ ಮಂಟಪದಲ್ಲಿ ಸಂಬಂಧಿಕಳಂತೆ ತೆರಳಿ ಮದುವೆ ಮನೆಯವರ ಚಿನ್ನಾಭರಣ ಕದ್ದಿದ್ದಳು. ಭಾನುವಾರಗಳಂದು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮದುವೆ ನಡೆಯುತ್ತಿದ್ದ ಹಾಲ್‌ಗಳಿಗೆ ಭೇಟಿ ನೀಡುತ್ತಿದ್ದಳು.

ಬಸವನಗುಡಿ ಪೊಲೀಸರ ವಿಚಾರಣೆ ವೇಳೆ ರೇವತಿ ಮೂರು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಬಂಧಿತಳಿಂದ ಸುಮಾರು 32 ಲಕ್ಷ ರೂ. ಮೌಲ್ಯದ 262 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಬೇರೆ ಬೇರೆ ಕಲ್ಯಾಣ ಮಂಟಪಗಳಲ್ಲಿ ಇದೇ ರೀತಿಯ ಕೃತ್ಯ ಎಸಗಿರುವ ಶಂಕೆ ಇದ್ದು, ಪೊಲೀಸರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಸಹಕಾರ ಸಂಘ ಕಚೇರಿ ಕಳ್ಳತನ ಪ್ರಕರಣ: ದೂರುದಾರನೇ ಆರೋಪಿ

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಡುಗೂರು ಗ್ರಾಮದಲ್ಲಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಹಣ ಕಳ್ಳತನ ಪ್ರಕರಣದಲ್ಲಿ ದೂರುದಾರನೇ ಆರೋಪಿ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಮೂರ್ತಿಯೇ ಈ ಕಳ್ಳತನದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಕಚೇರಿಯ ಕಬೋರ್ಡ್ ಅನ್ನು ಕಬ್ಬಿಣದ ರಾಡ್‌ನಿಂದ ಒಡೆದು 14 ಲಕ್ಷ 12 ಸಾವಿರ ರೂ. ಹಣ ಕಳ್ಳತನ ಮಾಡಲಾಗಿತ್ತು.

ಪ್ರಕರಣದ ತನಿಖೆ ವೇಳೆ ಚಂದ್ರಶೇಖರ ಮೂರ್ತಿಯೇ ಕೃತ್ಯ ನಡೆಸಿರುವುದು ಬಹಿರಂಗವಾಗಿದ್ದು, ಬಂಧಿತನಿಂದ ಇದುವರೆಗೆ 8 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.

Ashes 2025: ಆ್ಯಶಸ್ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಮತ್ತೆ ನಾಯಕ ಬದಲಾವಣೆ

0

ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತಮ್ಮ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಆಯ್ಕೆಯಾಗಿದ್ದು, ಮೊದಲೆರಡು ಪಂದ್ಯಗಳಲ್ಲಿ ಕೂಡ ಅವರು ನಾಯಕತ್ವ ವಹಿಸಿದ್ದರು.

ಹೀಗಾಗಿ, ಮೊದಲ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದ ಪ್ಯಾಟ್ ಕಮಿನ್ಸ್ ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಂಡಿರುವ ಕಮಿನ್ಸ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ತಂಡಕ್ಕೆ ಪ್ರಮುಖ ಕೊಡುಗೆ ನೀಡಿದ್ದರು. 5 ಪಂದ್ಯಗಳ ಸರಣಿಯಲ್ಲಿಯೂ ಆಸ್ಟ್ರೇಲಿಯಾ 3-0 ಅಂತರದಿಂದ ಜಯಹೊಂದಿದೆ.

ಪ್ಯಾಟ್ ಕಮಿನ್ಸ್ ಜೊತೆಗೆ, ಹಿರಿಯ ಸ್ಪಿನ್ನರ್ ನಾಥನ್ ಲಿಯಾನ್ ಕೂಡ ಕೊನೆಯ ಎರಡು ಪಂದ್ಯಗಳಿಗೆ ತಂಡದಲ್ಲಿ ಅಲಭ್ಯರಾಗಿದ್ದಾರೆ. ಇವರ ಬದಲಾಗಿ ಟಾಡ್ ಮರ್ಫಿ ಮತ್ತು ಜೆ. ರಿಚರ್ಡ್ಸನ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಈ ನಿರ್ಧಾರ ಕ್ರಿಕೆಟ್ ಆಸ್ಟ್ರೇಲಿಯಾ ತಂಡದ ಫಿಟ್ನೆಸ್ ಮತ್ತು ವಿಶ್ರಾಂತಿ ಹಿನ್ನಲೆಯಲ್ಲಿ ಕೈಗೊಂಡಿದೆ.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ಅಲೆಕ್ಸ್ ಕ್ಯಾರಿ , ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್, ಟಾಡ್ ಮರ್ಫಿ, ಮೈಕೆಲ್ ನೇಸರ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.

ಆ್ಯಶಸ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 8 ವಿಕೆಟ್​ಗಳ ಜಯ
  • ಎರಡನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 8 ವಿಕೆಟ್​ಗಳ ಜಯ
  • ಮೂರನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 82 ರನ್​ಗಳ ಜಯ
  • ನಾಲ್ಕನೇ ಟೆಸ್ಟ್: ಗುರುವಾರ ಡಿಸೆಂಬರ್ 26  ಡಿಸೆಂಬರ್ 30  ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ಐದನೇ ಟೆಸ್ಟ್: ಜನವರಿ 4 ಭಾನುವಾರ  ಜನವರಿ 8  ಸಿಡ್ನಿ ಕ್ರಿಕೆಟ್ ಮೈದಾನ.

ಹಾಸನದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!

0

ಹಾಸನ:ಅಪ್ರಾಪ್ತ ಬಾಲಕಿಯೊಬ್ಬಳಿಗೆ ನಿತ್ಯ ಚಾಕೋಲೆಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ, ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಂಜಿತ್ ಎಂಬಾತ ಕಳೆದ ಎಂಟು ತಿಂಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿ ಹೆರಿಗೆ ನಂತರ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನು ಕೆಲ ದಿನಗಳ ಕಾಲ ತಾಯಿ ಮತ್ತು ಮಗುವಿಗೆ ಆಸ್ಪತ್ರೆಯಲ್ಲಿ ಆರೈಕೆ ನೀಡಿದ ಬಳಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಹೆಚ್‌ಒ) ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಕೆಟ್​​ ಪ್ರೇಮಿಗಳಿಗೆ ಶಾಕ್: ಚಿನ್ನಸ್ವಾಮಿಯಲ್ಲಿ ನಾಳಿನ ಪಂದ್ಯಕ್ಕೆ ಅನುಮತಿ ಇಲ್ಲ!

0

ಬೆಂಗಳೂರು: ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ತಂಡಗಳ ನಡುವಿನ ವಿಜಯ್ ಹಜಾರೆ ಟೂರ್ನಿ ಪಂದ್ಯಕ್ಕೆ ಪೊಲೀಸರ ಅನುಮತಿ ನೀಡಲಾಗಿಲ್ಲ.

ಪಂದ್ಯ ನಡೆಯುವ ಪರಿಸ್ಥಿತಿಯನ್ನು ಪರಿಶೀಲಿಸಲು ಸೋಮವಾರ ಬೆಂಗಳೂರು ಆಯುಕ್ತ ಸೀಮಂತ್ ಕುಮಾರ್ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿಯೂ ಸ್ಥಳಕ್ಕೆ ಬಂದು ಸುರಕ್ಷತೆ ಕ್ರಮಗಳನ್ನು ತಪಾಸಣೆ ಮಾಡಿದರು.

ಪರಿಶೀಲನೆಯ ನಂತರ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸಿತು. ಅಂತಿಮವಾಗಿ, ಬೆಂಗಳೂರು ಪೊಲೀಸರು ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಅನುಮತಿ ನೀಡದ ನಿರ್ಧಾರ ಕೈಗೊಂಡಿದ್ದಾರೆ.

ಸ್ಟೇಡಿಯಂನಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಅಳವಡಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಬಂದಿದೆ. ಜೊತೆಗೆ ನಾಳೆ ಮ್ಯಾಚ್‌ಗೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಸೇರುವ ಆತಂಕ ವ್ಯಕ್ತವಾಗಿದೆ.

ಸ್ಟೇಡಿಯಂ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಹೀಗಾಗಿ ನಾಳೆ ಮತ್ತಷ್ಟು ಅಭಿಮಾನಿಗಳು ಸೇರಿದರೆ ಕಷ್ಟ ಅನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಗೇಟ್ ಅಗಲೀಕರಣ ಮತ್ತು ಜನ ಒಡಾಡಲು ಅನುಕೂಲವಾಗುವ ವಾತಾವರಣವನ್ನು ಸ್ಟೇಡಿಯಂ ನಿರ್ಮಾಣ ಮಾಡದ ಕಾರಣ ಪೊಲೀಸರು ಪಂದ್ಯ ಆಯೋಜನೆಗೆ ಅನುಮತಿ ನೀಡಿಲ್ಲ.

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ

0

ಬೆಂಗಳೂರು: ರಾಜ್ಯದಲ್ಲಿ ಸಹಕಾರ ಇಲಾಖೆ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಎನ್. ರಾಜಣ್ಣ ನೀಡಿದ ಒಂದೇ ಹೇಳಿಕೆಯಿಂದಾಗಿ ಸಚಿವ ಸ್ಥಾನದಿಂದ ವಜಾಗೊಂಡಿದ್ದರು. ಈ ಘಟನೆಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ರಾಜಣ್ಣ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 8 ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ.

ರಾಜಣ್ಣ ತಮ್ಮ ಹೇಳಿಕೆಯನ್ನು ತಿರಸ್ಕರಿಸಿ ಹರಡಿದವರಿಗೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದರ ಜೊತೆಗೆ, ದೆಹಲಿಗೆ ಬಂದು ನೇರವಾಗಿ ಮಾತಾಡಲು ಅವಕಾಶ ನೀಡುವಂತೆ ಪತ್ರದಲ್ಲಿ ವಿನಂತಿಸಿದ್ದಾರೆ. ಕಳೆದ ತಿಂಗಳ 17ರಂದು ಈ ಪತ್ರವನ್ನು ಇ-ಮೇಲ್ ಮೂಲಕ ರವಾನಿಸಲಾಗಿದೆ. ಪತ್ರದಲ್ಲಿ ರಾಜಣ್ಣ ಮಾಧ್ಯಮಗಳ ಮುಂದೆ ಹೇಳಿದ ಮಾತುಗಳು ಮತ್ತು ಬಂದ ಪ್ರಶ್ನೆಗಳ ವಿವರಗಳನ್ನು ಉಲ್ಲೇಖಿಸಿದ್ದಾರೆ.

“ನನ್ನ ಹೇಳಿಕೆಯ ಹಿಂದಿರುವ ಸತ್ಯವನ್ನು ತಿರಸ್ಕರಿಸಿ ನಿಮ್ಮ ಮುಂದೆ ತಪ್ಪು ಮಾಹಿತಿಯನ್ನು ನೀಡಲಾಗಿದೆ. ಈ ಹಿಂದೆ ಇರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ರಾಜಣ್ಣ ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಸಂಘಟನಾತ್ಮಕ ಲೋಪಗಳ ಬಗ್ಗೆ ಕೂಡ ಗಂಭೀರವಾಗಿ ಪ್ರಸ್ತಾಪಿಸಿದ್ದಾರೆ.  “ಕೆಪಿಸಿಸಿ ನೇಮಕ ಮಾಡಿದ ಬಿಎಲ್‌ಎಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ. ಈ ಲೋಪಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸರಿಯಾದ ಗಮನ ಹರಿಸಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು. ಈ ಲೋಪಗಳನ್ನು ಸರಿಪಡಿಸಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಇನ್ನೂ 8–10 ಸ್ಥಾನಗಳನ್ನು ಹೆಚ್ಚಾಗಿ ಸುಲಭವಾಗಿ ಗೆಲ್ಲಬಹುದಾಗಿತ್ತು ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿ ಸಚಿವ ಸ್ಥಾನ ತಪ್ಪುವಂತೆ ಮಾಡಿದವರ ಮುಖವಾಡ ಕಳಚಲು ರಾಜಣ್ಣ ತುದಿಗಾಲಲ್ಲಿ ನಿಂತಿದ್ದಾರೆ. ‘ನನ್ನ ಹೇಳಿಕೆಯ ಉದ್ದೇಶ ಪಕ್ಷವನ್ನು ಬಲಪಡಿಸುವುದೇ ಹೊರತು ಹಾನಿ ಮಾಡುವುದಲ್ಲ. ಈ ಎಲ್ಲ ವಿಷಯಗಳ ಬಗ್ಗೆ ನಾನು ನೇರವಾಗಿ ನಿಮ್ಮೊಂದಿಗೆ ಚರ್ಚಿಸಬೇಕಿದೆ. ದೆಹಲಿಗೆ ಬಂದು ಮಾತನಾಡಲು ಸಮಯ ನಿಗದಿಪಡಿಸಿ’ ಎಂದು ರಾಹುಲ್ ಗಾಂಧಿಯವರಲ್ಲಿ ವಿನಂತಿಸಿದ್ದಾರೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: 49 ಕಡೆಗಳಲ್ಲಿ ಆಸ್ತಿ ಮಾಡಿರುವ ಮಹಿಳಾ ಅಧಿಕಾರಿ!

0

ರಾಯಚೂರು: ಇಂದು ಗ್ರಾ‍ಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಎಐಇಇ ಬಿ. ವಿಜಯಲಕ್ಷ್ಮಿಗೆ ಸೇರಿದ ಎರಡು ಮನೆ ಸೇರಿ ಐದು ಕಡೆಗಳಲ್ಲಿ ದಾಳಿ ಮಾಡಲಾಗಿದೆ.. ಸಿಂಧನೂರಿನಲ್ಲಿ ಎಐಇಇ ಆಗಿರುವ ವಿಜಯಲಕ್ಷ್ಮಿ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಐದು ತಂಡಗಳು ದಾಳಿ ನಡೆಸಿದವು.

ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿನ ಮನೆ, ಗಂಗಾಪರಮೇಶ್ವರ ಲೇಔಟ್‌ನಲ್ಲಿನ ಮನೆ, ಯಾದಗಿರಿ, ಜೋಳದಹೆಡಗಿ ಹಾಗೂ ಸಿಂಧನೂರಿನಲ್ಲಿ ಆರ್‌ಡಬ್ಲ್ಯೂಎಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಒಟ್ಟು 49 ಸ್ಥಳಗಳಲ್ಲಿ ಬಿ. ವಿಜಯಲಕ್ಷ್ಮಿಗೆ ಸೇರಿದ ನಿವೇಶನಗಳು, ಮನೆ, ತೋಟದ ಮನೆ, ಜಮೀನು ದಾಖಲೆಗಳು ಹಾಗೂ ಚಿನ್ನಾಭರಣ ಪರಿಶೀಲನೆ ನಡೆಸಲಾಗಿದೆ. ಯಾದಗಿರಿಯಲ್ಲಿ ಲೇಔಟ್, ಜೋಳದಹೆಡಗಿಯಲ್ಲಿ ತೋಟದ ಮನೆ ಮತ್ತು ಚಂದ್ರಬಂಡಾ ರಾಷ್ಟ್ರೀಯ ಹೆದ್ದಾರಿ ಹತ್ತಿರ ಜಮೀನಿನ ಸ್ವತ್ತುಗಳನ್ನು ತಪಾಸಣೆ ಮಾಡಲಾಗಿದೆ.  ದಾಳಿ ವೇಳೆ ವಿಜಯಲಕ್ಷ್ಮಿ ಅವರು ಸೊಸೆಯ ಹೆರಿಗೆ ನಿಮಿತ್ತ ಹುಬ್ಬಳ್ಳಿಯಲ್ಲಿದ್ದು, ಅಧಿಕಾರಿಗಳು ತಕ್ಷಣ ರಾಯಚೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ.

IND-W vs SL-W: ಇಂದು ಭಾರತ- ಲಂಕಾ ನಡುವೆ 2ನೇ ಟಿ20 ಪಂದ್ಯ: ಎಷ್ಟು ಗಂಟೆಗೆ ಆರಂಭ?

0

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ಮಹಿಳಾ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ್ದ ಭಾರತ ವನಿತಾ ಪಡೆ (India Women vs Sri Lanka Women), ಇದೀಗ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯಲಿದೆ.

ಮೊದಲ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡ ಕೇವಲ 126 ರನ್‌ಗಳಿಗೆ ಸೀಮಿತಗೊಂಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಪರ ಜೆಮಿಮಾ ರೋಡ್ರಿಗ್ಸ್ 44 ಎಸೆತಗಳಲ್ಲಿ 69 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದು, ತಂಡವನ್ನು ಸುಲಭ ಜಯದತ್ತ ಕರೆದೊಯ್ದಿದ್ದರು.

ಇದೀಗ ಎರಡನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಇದೇ ರೀತಿಯ ಪ್ರದರ್ಶನ ನೀಡುವ ಉದ್ದೇಶ ಹೊಂದಿದ್ದು, ಇತ್ತ ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡವು ಬಲವಾದ ಪುನರಾಗಮನದ ನಿರೀಕ್ಷೆಯಲ್ಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ಇಂದು ವಿಶಾಖಪಟ್ಟಣಂನ ACA–VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.

ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರ ಪ್ರಸಾರವಾಗಿ ವೀಕ್ಷಿಸಬಹುದಾಗಿದ್ದು, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.

ಉಭಯ ತಂಡಗಳು

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಜೆಮಿಮಾ ರಾಡ್ರಿಗಸ್, ಶೆಫಾಲಿ ವರ್ಮಾ, ಹರ್ಲೀನ್ ಡಿಯೋಲ್, ಅಮನ್‌ಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಶ್ರೀ ಚರಣಿ, ವೈಷ್ಣವಿ ಶರ್ಮಾ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.

ಕಂಟ್ರೋಲ್ ತಪ್ಪಿ ಅಂಗಡಿ ಶಟರ್‌ಗೆ ಕಾರ್ ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

0

ಗದಗ: ನಗರದ ಮುಳಗುಂದ ರಸ್ತೆಯ ನೌಕರರ ಭವನದ ಬಳಿ ಕಾರೊಂದು ನಿಯಂತ್ರಣ ತಪ್ಪಿ ಅಂಗಡಿ ಶಟರ್‌ಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.

ಕಾರನ್ನು ಮೊಹಮ್ಮದ್ ಮಾಜ್ ಪಾಮಡಿ ಎಂಬಾತನು ಚಲಾಯಿಸುತ್ತಿದ್ದ ಎನ್ನಲಾಗಿದೆ. ಅತಿ ವೇಗವಾಗಿ ಕಾರ್ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಧೋಬಿ ಘಾಟ್‌ನಿಂದ ಮುಳಗುಂದ ನಾಕಾ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ಕಂಟ್ರೋಲ್ ತಪ್ಪಿ ಮಳಿಗೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ದೃಶ್ಯಗಳು ಮಳಿಗೆಗಳಿಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು, ಅಪಘಾತದ ನಂತರ ಚಾಲಕ ಕಾರಿನಿಂದ ಇಳಿದು ತನ್ನ ಮೊಬೈಲ್ ಗಾಗಿ ಕಾರಿನ ಹಿಂದಿನ ಡೋರ್ ಮುರಿಯುವ ದೃಶ್ಯ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರ್ ಡಿಕ್ಕಿಯ ರಭಸಕ್ಕೆ ಮಳಿಗೆಗಳ ಕಂಬಿ ಹಾಗೂ ಶಟರ್‌ಗೆ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯಗಳಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆ ಗದಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಶಾಸಕ ಪ್ರದೀಪ್ ಈಶ್ವರ್

0

ಚಿಕ್ಕಬಳ್ಳಾಪುರ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಸಚಿವ ಸ್ಥಾನ ಸಿಗುವ ಬಗ್ಗೆ ನಿರೀಕ್ಷೆ ಇದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್,

ಚಿಕ್ಕಬಳ್ಳಾಪುರದ ಎಲ್ಲಾ ಶಾಸಕರೂ ಒಟ್ಟಾಗಿ ಇದ್ದೇವೆ. ನನಗೆ ಸಚಿವ ಸ್ಥಾನ ಸಿಕ್ಕರೆ ಜಿಲ್ಲೆಯ ಎಲ್ಲಾ ಶಾಸಕರೂ ಸ್ವಾಗತಿಸುತ್ತಾರೆ. ಸಚಿವ ಎಂ.ಸಿ. ಸುಧಾಕರ್ ಸಾಹೇಬರು ಕೂಡ ಸ್ವಾಗತಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ನನ್ನನ್ನು ಬಿಟ್ಟು ಬೇರೆ ಶಾಸಕರಿಗೆ ಸಚಿವ ಸ್ಥಾನ ಸಿಕ್ಕರೂ ನಾನೂ ಸ್ವಾಗತಿಸುತ್ತೇನೆ. ಯೂತ್ ಕೋಟಾ ಹಾಗೂ ಸಮುದಾಯದ ಕೋಟಾದಡಿ ಸಚಿವ ಸ್ಥಾನ ನೀಡಲು ಅವಕಾಶವಿದೆ ಎಂದು ಅವರು ಹೇಳಿದರು.

ನಾನು ಸದಾ ಜನರ ಜೊತೆ ಇದ್ದೇನೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ದರಕಾಸ್ತು ಕಮಿಟಿ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.

ಕಳೆದ 15 ವರ್ಷಗಳಿಂದ ಕಮಿಟಿ ಮೀಟಿಂಗ್ ನಡೆದಿರಲಿಲ್ಲ. ಇದೀಗ ನಾನು ದರಕಾಸ್ತು ಕಮಿಟಿ ಅಧ್ಯಕ್ಷನಾಗಿರುವ ಕಾರಣ ಇಂದು ಸಭೆ ನಡೆಸಲಾಗಿದೆ ಎಂದು ಹೇಳಿದರು.

error: Content is protected !!