Home Blog Page 29

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​; ವಿವಾದದ ನಡುವೆಯೂ ನಾಳೆಯಿಂದ ದರ ಏರಿಕೆ ಫಿಕ್ಸ್, ಯಾವ ಮಾರ್ಗದಲ್ಲಿ ಎಷ್ಟಿದೆ?

0

ಬೆಂಗಳೂರು:- ಕಳೆದ ವರ್ಷವಷ್ಟೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ ಬೆನ್ನಲ್ಲೇ, ಇದೀಗ ಮತ್ತೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದೆ.

ಟಿಕೆಟ್ ದರ ಹೆಚ್ಚಳ ಕುರಿತಂತೆ ಕಳೆದ ಒಂದು ವಾರದಿಂದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ನಾಳೆಯಿಂದ ದರ ಏರಿಕೆ ಜಾರಿಯಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಟೀಕೆಗೆ ಒಳಗಾಗಿರುವ ಬೆಂಗಳೂರು ಮೆಟ್ರೋ, ಮತ್ತೊಮ್ಮೆ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ದರ ಏರಿಕೆ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ #BoycottMetro ಅಭಿಯಾನ ನಡೆದರೂ, BMRCL ತನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ BMRCL ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್, ಕೇಂದ್ರ ಸರ್ಕಾರದಿಂದ ದರ ಏರಿಕೆ ತಡೆಗೆ ಸಂಬಂಧಿಸಿದ ಯಾವುದೇ ಅಧಿಸೂಚನೆ ಬಂದಿಲ್ಲ. ಹೀಗಾಗಿ ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಒಂದು ವೇಳೆ ಕೇಂದ್ರ ಸರ್ಕಾರದಿಂದ ಕೊನೆಯ ಕ್ಷಣದಲ್ಲಿ ಆದೇಶ ಬಂದರೆ ಮಾತ್ರ ದರ ಏರಿಕೆ ತಾತ್ಕಾಲಿಕವಾಗಿ ನಿಲ್ಲಬಹುದು ಎಂದು ತಿಳಿಸಿದ್ದಾರೆ. ಆದರೆ ದರ ಏರಿಕೆ ತಡೆದರೂ ಅದು ಶಾಶ್ವತವಾಗಿರುವುದಿಲ್ಲ. ಇದೇ ವರ್ಷದ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಮತ್ತೆ ದರ ಹೆಚ್ಚಳವಾಗುವುದು ಖಚಿತ ಎನ್ನಲಾಗಿದೆ.

ಇನ್ನು, ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ.101.5ರಷ್ಟು ಹೆಚ್ಚಿಸಲಾಗಿತ್ತು. ಪ್ರಯಾಣಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ನಂತರ ದರವನ್ನು ಶೇ.71.5ಕ್ಕೆ ಇಳಿಸಲಾಗಿತ್ತು. ಇದೀಗ ಮತ್ತೆ ಶೇ.5ರಷ್ಟು ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ ಎಂದು BMRCL ಅಧಿಕೃತವಾಗಿ ಮಾಹಿತಿ ನೀಡಿದೆ.

ಪರಿಷ್ಕೃತ ದರಗಳಂತೆ, 0 ರಿಂದ 2 ಕಿಲೋಮೀಟರ್ ಪ್ರಯಾಣಕ್ಕೆ ಟಿಕೆಟ್ ದರ ₹10ರಿಂದ ₹11ಕ್ಕೆ ಏರಿಕೆಯಾಗಿದ್ದು, 25 ಕಿಲೋಮೀಟರ್‌ಗಿಂತ ಹೆಚ್ಚು ದೂರ ಪ್ರಯಾಣಕ್ಕೆ ಟಿಕೆಟ್ ದರ ₹90ರಿಂದ ₹95ಕ್ಕೆ ಹೆಚ್ಚಳವಾಗಿದೆ. ಮೆಜೆಸ್ಟಿಕ್–ವೈಟ್‌ಫೀಲ್ಡ್, ಮೆಜೆಸ್ಟಿಕ್–ಬೊಮ್ಮಸಂದ್ರ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ₹4ರಿಂದ ₹5ರ ವರೆಗೆ ದರ ಏರಿಕೆ ಕಂಡುಬಂದಿದೆ.

ಮೆಟ್ರೋ ದರ ಪರಿಷ್ಕರಣೆ ಕೇಂದ್ರ ಸರ್ಕಾರದ ಅಧಿಕಾರ: ದಿನೇಶ್ ಗುಂಡೂರಾವ್

0

ಕಲಬುರಗಿ: ಮೆಟ್ರೋ ಟಿಕೆಟ್ ದರಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ಸರ್ಕಾರದ ಮೇಲೆ ಅನಗತ್ಯವಾಗಿ ಆರೋಪ ಹೊರಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಹೆಚ್ಚಳ ವಿಚಾರದಲ್ಲಿ ಬಿಜೆಪಿಯವರು ಏನಾದರೂ ಆಗುತ್ತದೆ ಎಂದು ಕಾಯುತ್ತಾ, ರಾಜ್ಯ ಸರ್ಕಾರದ ಮೇಲೆ ಹೊಣೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈಗ ವಾಸ್ತವಾಂಶ ಹೊರಬಂದಿದ್ದು, ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ಮಾಡುವ ಅಧಿಕಾರ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದರು.

ಈ ವಿಷಯದಲ್ಲಿ ರಾಜ್ಯ ಸರ್ಕಾರ ಯಾರ ಮೇಲೂ ಹೊಣೆ ಹಾಕುತ್ತಿಲ್ಲ. ಹೀಗಾಗಿ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಬಳಿ ಈ ವಿಚಾರವನ್ನು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅಧಿಕೃತವಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದು, ಮೆಟ್ರೋ ದರ ಪರಿಷ್ಕರಣೆಗೆ ಸಮಿತಿ ರಚಿಸುವಂತೆ ಮನವಿ ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ; ತ್ವರಿತ ಕ್ರಮಕ್ಕೆ ಸಿದ್ದರಾಮಯ್ಯ ಸೂಚನೆ!

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಯ ಪ್ರಮುಖ ಭಾಗವಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಮ್ಮ ಜೀವಿತ ಪ್ರಮಾಣಪತ್ರ ಬ್ಯಾಂಕ್‌ಗೆ ಸಲ್ಲಿಸುವುದು ಕಡ್ಡಾಯವಾಗಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಿ , ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವುದನ್ನು ತಪ್ಪಿಸಬೇಕು. ಕುಟುಂಬದ ಜೀವನ ನಿರ್ವಹಣೆಗೆ ಹೆಚ್ಚು ಉಪಯೋಗವಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಪಾವತಿಯಾಗುವ ಮೊತ್ತವು ಮರಣ ಹೊಂದಿರುವ ಫಲಾನುಭವಿಗಳಿಗೆ ಕೆಲವು ಕಡೆ ಪಾವತಿಯಾಗುವುದನ್ನು ತಡೆಗಟ್ಟುವುದು ಅವಶ್ಯವಾಗಿರುತ್ತದೆ. ಇದರಿಂದ ಸರ್ಕಾರವು ಪಾವತಿಸುವ ಮೊತ್ತವು ಸದ್ವಿನಿಯೋಗವಾಗಲು ಹಾಗೂ ಸರ್ಕಾರದ ಹಣ ಇತರೆ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅನುಕೂಲವಾಗವ ನಿಟ್ಟಿನಲ್ಲಿ ಸರ್ಕಾರವು ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಕೊಪ್ಪಳ| ಸ್ಪೀರಿಟ್ ಕುಡಿದು ಯುವಕರಿಬ್ಬರು ಸಾವು!

0

ಕೊಪ್ಪಳ:- ಸ್ಪೀರಿಟ್ ಕುಡಿದು ಯುವಕರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಯಲ್ಲಿ ಜರುಗಿದೆ.

ಕೂಕನಪಳ್ಳಿ ನಿವಾಸಿಗಳಾದ ರಮೇಶ ಹೊಸಳ್ಳಿ, ಅಮರಯ್ಯ ಹಿರೇಮಠ ಮೃತ ಯುವಕರು. ಮೃತರು, ಫೆ 4 ರಂದು ಜಮೀನಿನಲ್ಲಿ ಪಾರ್ಟಿ ಮಾಡಲು ಹೋಗಿದ್ದರು. ಯುವಕರಿಗೆ ಸರಾಯಿ ಎಂದು ಮಾರುತಿ ಹಾಗು ಶರಣಪ್ಪ ಗುರಿಕಾರ ಎಂಬುವವರು ಸ್ಪೀರಿಟ್ ನೀಡಿದರು. ಸ್ಪೀರಿಟ್ ಕುಡಿದ ಬಳಿಕ ರಮೇಶ, ಶರಣಪ್ಪ ಹಂಚಿನಾಳ, ಆಮರಯ್ಯ ಹಿರೇಮಠ ಅಸ್ವಸ್ಥರಾಗಿ ಬಿದ್ದಿದ್ದಾರೆ. ಕೂಡಲೇ ಅವರುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ರಮೇಶ ನಿನ್ನೆ ಮೃತಪಟ್ರೆ, ಇಂದು ಹುಬ್ಬಳ್ಳಿಯಲ್ಲಿ ಅಮರಯ್ಯ ಹಿರೇಮಠ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಮೃತ ರಮೇಶ ತಂದೆಯಿಂದ ಮುನಿರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರಿದ ಕಾರು; ಮುಂದೇನಾಯ್ತು?

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಕಲ್ ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಸಂಪೂರ್ಣ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೊದಲ ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆ: ಮಂಟಪಕ್ಕೆ ನುಗ್ಗಿ ಗಂಡನಿಗೆ ಶಾಕ್ ಕೊಟ್ಟ ಹೆಂಡ್ತಿ!

0

ತುಮಕೂರು:- ಜಿಲ್ಲೆಯ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ಸಿನಿಮೀಯ ದೃಶ್ಯದಂತೆ ಹೋಲುವ ಅಚ್ಚರಿ ಘಟನೆ ಬೆಳಕಿಗೆ ಬಂದಿದೆ.

ತನಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿ ಪತ್ನಿ ಶಾಕ್ ಕೊಟ್ಟಿದ್ದಾಳೆ. ಥೇಟ್​​ ಸಿನಿಮಾ ಶೈಲಿಯ ದೃಶ್ಯ ನೆರೆದಿದ್ದವರನ್ನು ಅಚ್ಚರಿಗೊಳಿಸಿದ್ದು, ಪತ್ನಿಗೆ ಗೊತ್ತಾಗದಂತೆ ಮತ್ತೊಂದು ಮದುವೆ ಮಾಡಲಾಗ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಲೇಪಾಕ್ಷಿ ಎಂಬಾಕೆಯನ್ನ ಹರಿಪ್ರಸಾದ್ ಎಂಬುವವರು 2014ರಲ್ಲಿ ಮದುವೆ ಆಗಿದ್ದರು. ಮದುವೆ ಬಳಿಕ 10 ವರ್ಷ ಸಂಸಾರವನ್ನೂ ನಡೆಸಿದ್ದರು. ಆ ಬಳಿಕ ಕೌಟುಂಬಿಕ ಕಲಹದ ಕಾರಣಕ್ಕೆ ದಂಪತಿ ಬೇರೆಯಾಗಿದ್ದರು. ಈ ನಡುವೆ ಲೇಪಾಕ್ಷಿಗೆ ಗೊತ್ತಾಗದಂತೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಯುವತಿಯ ಜೊತೆಗೆ ಮದುವೆಗೆ ಹರಿಪ್ರಸಾದ್​ ಮುಂದಾಗಿದ್ದಾರೆ. ಅದರಂತೆ ಯಡೆಯೂರಿನ SLN ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗೆ ಪೊಲೀಸರ ಜೊತೆ ಲೇಪಾಕ್ಷಿ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಪತ್ನಿ ಕಂಡು ಹರಿಪ್ರಸಾದ್​​ ಕಕ್ಕಾಬಿಕ್ಕಿಯಾಗಿದ್ದರೆ, ನನಗೆ ಡಿವೋರ್ಸ್ ಕೊಡದೆ ಮೋಸ ಮಾಡಿದ್ದೀಯಾ ಅಂತ ಗಲಾಟೆ ತೆಗೆದ ಲೇಪಾಕ್ಷಿ ಕೊನೆಗೂ ಮದುವೆ ನಿಲ್ಲಿಸಿದ್ದಾರೆ. ಮತ್ತೊಂದು ಮದುವೆಯ ಆಸೆಯಲ್ಲಿ ಹಸೆಮಣೆ ಏರಿದ್ದ ಹರಿಪ್ರಸಾದ್​​, ತಾಳಿ ಕಟ್ಟದೆ ಪೊಲೀಸ್​​ ಠಾಣೆಗೆ ತೆರಳಿದ ಪ್ರಸಂಗ ನಡೆದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಲೇಪಾಕ್ಷಿ ಕುಟುಂಬಸ್ಥರು ಹರೀಶ್​​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿಜಯನಗರ | ಹಂಪಿಯಲ್ಲಿ ಪ್ರವಾಸಿಗರ ಮೇಲೆ ಹೆಜ್ಜೆನು ದಾಳಿ!

0

ವಿಜಯನಗರ:  ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಪ್ರದೇಶದಲ್ಲಿ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಹೆಜ್ಜೆನು ದಾಳಿ ನಡೆಸಿದ ಘಟನೆ ನಡೆದಿದೆ.

ಹಂಪಿಯ ಆನೆಯಾಳದ ಬಳಿ ಹೋಗುವ ದಾರಿಯಲ್ಲಿ ಹೆಜ್ಜೆನು ದಾಳಿ ಸಂಭವಿಸಿದ್ದು, ಇದರಿಂದ ಕೆಲಕಾಲ ಭಾರೀ ಆತಂಕ ಉಂಟಾಯಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿಲ್ಲ. ಹೆಜ್ಜೆನು ಕಡಿತಕ್ಕೆ ಭಯಗೊಂಡ ಪ್ರವಾಸಿಗರು ಹಾಗೂ ವೃದ್ಧರು ಸ್ಥಳದಿಂದ ಓಡಿ ತಪ್ಪಿಸಿಕೊಂಡರು.

ಹೆಜ್ಜೆನುಗಳಿಂದ ಪಾರಾಗಲು ಕೆಲವರು ಟವಲ್‌ಗಳು, ವೇಲ್‌ಗಳನ್ನು ದೇಹದ ಮೇಲೆ ಮುಚ್ಚಿಕೊಂಡು ಓಡಿದ ದೃಶ್ಯಗಳು ಕಂಡುಬಂದವು. ಸಮಯಕ್ಕೆ ಎಚ್ಚರಿಕೆ ವಹಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ. ಘಟನೆಯ ಬಳಿಕ ಪ್ರವಾಸಿಗರು ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಕನಕಪುರ| ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಆತಂಕಗೊಂಡ ಗ್ರಾಮಸ್ಥರು

0

ರಾಮನಗರ:- ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕನಕಪುರದ ತಾಲೂಕಿನ ಕಾಡುಶಿವನಹಳ್ಳಿ ಬಳಿ ಬಂದಿರುವ 40 ಕಾಡಾನೆಗಳು, ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಕಾಡಾನೆ ಹಿಂಡು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಕಾಡಾನೆಗಳನ್ನ ವಾಪಸ್ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟೊಟ್ಟಿಗೆ 40 ಕಾಡಾನೆಗಳು ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯ ಕಿರುಕುಳ; ಮನನೊಂದ ಗೃಹಿಣಿ ಸೂಸೈಡ್!

0

ಬೀದರ್:- ವೇಶ್ಯಾವಾಟಿಕೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ ಅತ್ತೆಯಿಂದ ಮಾನಸಿಕವಾಗಿ ನೊಂದಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.

22 ವರ್ಷದ ಅಂಜನಾಬಾಯಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಮೃತಪಟ್ಟಿದ್ದಾರೆ. ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್‌ ಕುಮಾರ್‌ ಬಸವಕಲ್ಯಾಣ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Gold Rate Today: ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್; ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

0

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಆಗಿದೆ.

ಚಿನ್ನದ ಬೆಲೆ ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದ್ದು, ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರವರಿ 8ಕ್ಕೆ):-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ.

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,745 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.

error: Content is protected !!