Home Blog Page 294

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆಯನ್ನು ವಿರೋಧಿಸುತ್ತಾರೆ: CM ಸಿದ್ದರಾಮಯ್ಯ

0

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.

ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ

ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ ಎಂದರು. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು.

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ ಎಂದರು.

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ತಿಳಿಸಿದರು.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ ಪುನರುಚ್ಚಾರ
ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಟಾಂಗ್ ರಾಜಕೀಯದ ನಡುವೆ ಮಾರ್ಕ್ ಕೌಂಟ್‌ಡೌನ್: ದರ್ಶನ್ ಪತ್ನಿ ಮಾತಿಗೆ ಟಕ್ಕರ್ ಕೊಡ್ತಾರ ಕಿಚ್ಚ?

ಮಾರ್ಕ್ ಚಿತ್ರದ ಪ್ರೀ–ರಿಲೀಸ್ ವೇದಿಕೆಯಿಂದ ಆರಂಭವಾದ ಹೇಳಿಕೆಗಳ ಸರಣಿ ಇದೀಗ ಸ್ಟಾರ್ ಟಾಕ್ ವಾರ್ ರೂಪ ಪಡೆದಿದೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ ಟಾಂಗ್ ಮಾತುಗಳು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಈ ಬೆಳವಣಿಗೆಯ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅಭಿಮಾನಿಗಳೊಂದಿಗೆ ಮಾತನಾಡುತ್ತಾ, “ದರ್ಶನ್ ಇಲ್ಲದಾಗ ಕೆಲವರು ವೇದಿಕೆಗಳ ಮೇಲೆ, ಚಾನಲ್‌ಗಳಲ್ಲಿ ಕುಳಿತು ಏನೇನೋ ಮಾತಾಡುತ್ತಾರೆ. ಆದರೆ ಅವರು ಬಂದಾಗ ಎಲ್ಲಿರುತ್ತಾರೆ ಅನ್ನೋದೇ ಗೊತ್ತಾಗೋದಿಲ್ಲ” ಎಂದು ಪರೋಕ್ಷವಾಗಿ ಟೀಕಿಸಿದ್ದರು. ಜೊತೆಗೆ, “ಯಾರು ಏನೇ ಅಂದರೂ ಕೋಪ ಮಾಡಿಕೊಳ್ಳಬೇಡಿ, ಬೇಜಾರ್ ಮಾಡಿಕೊಳ್ಳಬೇಡಿ” ಎಂಬ ಸಂದೇಶವನ್ನೂ ನೀಡಿದ್ದಾರೆ.

ಈ ಮಾತುಗಳಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡ್ತಾರಾ? ಅಥವಾ “ಯುದ್ಧಕ್ಕೆ ಸಿದ್ಧ, ಮಾತಿಗೆ ಬದ್ಧ” ಎನ್ನುವ ಹೇಳಿಕೆಗೆ ಸ್ಪಷ್ಟನೆ ಕೊಡ್ತಾರಾ? ಎಂಬ ಪ್ರಶ್ನೆಗಳು ಈಗ ಅಭಿಮಾನಿ ವಲಯದಲ್ಲಿ ಚರ್ಚೆಯಾಗುತ್ತಿವೆ. ಈ ಎಲ್ಲದ ನಡುವೆಯೂ ಕಿಚ್ಚ ಸುದೀಪ್ ಮಾರ್ಕ್ ರಿಲೀಸ್ ಕೌಂಟ್‌ಡೌನ್ ಪೋಸ್ಟ್ ಹಾಕಿರುವುದು, ವಿವಾದಕ್ಕಿಂತ ಸಿನಿಮಾಗೆ ಹೆಚ್ಚು ಗಮನ ನೀಡುತ್ತಿರುವ ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಟ್ಟಿನಲ್ಲಿ, ಮಾರ್ಕ್ ಸಿನಿಮಾ ಬಿಡುಗಡೆಯ ಮುನ್ನವೇ ಸ್ಟಾರ್ ಹೇಳಿಕೆಗಳು, ಪ್ರತಿಕ್ರಿಯೆಗಳು ಹಾಗೂ ಅಭಿಮಾನಿಗಳ ಟಾಕ್ ವಾರ್ ಕನ್ನಡ ಸಿನಿರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರ ಇನ್ನಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

ಪೈರಸಿ ವಿರುದ್ಧ ‘ಡೆವಿಲ್’ ಚಿತ್ರತಂಡದ ಮನವಿ; 11ನೇ ದಿನ 1.24 ಕೋಟಿ ರೂ. ಕಲೆಕ್ಷನ್

ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಯಾಗಿ 12 ದಿನಗಳನ್ನು ಪೂರೈಸಿದ್ದು, ಬಾಕ್ಸಾಫೀಸ್ ಪಯಣದಲ್ಲಿ ಏರಿಳಿತ ಅನುಭವಿಸುತ್ತಿದೆ. ಜೈಲಿನಲ್ಲಿ ಇರುವ ಸಂದರ್ಭದಲ್ಲೇ ರಿಲೀಸ್ ಆದ ಈ ಸಿನಿಮಾ ಹೇಗೆ ಪ್ರದರ್ಶನ ನೀಡಲಿದೆ ಎಂಬ ಕುತೂಹಲ ಇಡೀ ಸಿನಿ ವಲಯದಲ್ಲಿತ್ತು. ಇತ್ತ ಅಭಿಮಾನಿಗಳು ಭರ್ಜರಿ ಬೆಂಬಲ ನೀಡಿದರೂ, ಪೈರಸಿ ದೊಡ್ಡ ಹೊಡೆತ ನೀಡಿದೆ.

ಪೈರಸಿ ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ‘ಡೆವಿಲ್’ ಚಿತ್ರತಂಡ, 10,500ಕ್ಕೂ ಹೆಚ್ಚು ಅಕ್ರಮ ಲಿಂಕ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದೆ. ಪೈರಸಿ ಕಾರಣದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗುತ್ತಿದೆ ಎಂದು ಹೇಳಿರುವ ತಂಡ, ಪ್ರೇಕ್ಷಕರು ಕಾನೂನುಬದ್ಧವಾಗಿ ಥಿಯೇಟರ್‌ಗಳಲ್ಲಿ ಸಿನಿಮಾ ವೀಕ್ಷಿಸಬೇಕು ಎಂದು ಮನವಿ ಮಾಡಿದೆ.

ಆದರೆ, ಕಲೆಕ್ಷನ್ ವಿಚಾರದಲ್ಲಿ ‘ಡೆವಿಲ್’ ಮತ್ತೆ ಚೇತರಿಕೆಯ ಲಕ್ಷಣ ತೋರಿದೆ. 7ನೇ ದಿನದಿಂದ ಲಕ್ಷಗಳ ಮಟ್ಟಕ್ಕೆ ಕುಸಿದಿದ್ದ ಕಲೆಕ್ಷನ್, 11ನೇ ದಿನ ಮತ್ತೆ ಕೋಟಿ ಗಡಿ ದಾಟಿದೆ. ಸ್ಯಾಕ್ನಿಲ್ಕ್ ಅಂದಾಜಿನಂತೆ, 11ನೇ ದಿನ ಸಿನಿಮಾ 1.24 ಕೋಟಿ ರೂ. ಗಳಿಸಿದ್ದು, 10ನೇ ದಿನದ 71 ಲಕ್ಷ ರೂ.ಗಿಂತ ಗಮನಾರ್ಹ ಏರಿಕೆ ಕಂಡಿದೆ. ಈ ಬೆಳವಣಿಗೆ ಚಿತ್ರತಂಡಕ್ಕೆ ತಾತ್ಕಾಲಿಕ ರಿಲೀಫ್ ನೀಡಿದಂತಾಗಿದೆ.

Dalit CM: ದಲಿತ ಸಿಎಂ ಚರ್ಚೆ ಮುನ್ನೆಲೆಗೆ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು?

0

ಬೆಂಗಳೂರು: ದಲಿತ ಮುಖ್ಯಮಂತ್ರಿ ವಿಚಾರವಾಗಿ ಸ್ವಾಮೀಜಿಗಳು ಹಾಗೂ ವಿವಿಧ ಸಂಘಟನೆಗಳು ಧ್ವನಿ ಎತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಅದು ಅವರ ಭಾವನೆ, ಅವರ ಅನಿಸಿಕೆ. ಅದನ್ನು ತಪ್ಪು ಎಂದು ನಾನು ಹೇಗೆ ಹೇಳಲು ಸಾಧ್ಯ? ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಅಷ್ಟೆ” ಎಂದು ಹೇಳಿದ್ದಾರೆ.

ಇನ್ನು ದ್ವೇಷ ಭಾಷಣ ಮಸೂದೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಗೃಹ ಸಚಿವರು, “ಈ ಮಸೂದೆ ಯಾರನ್ನೂ ಟಾರ್ಗೆಟ್ ಮಾಡಿ ತರಲಾಗಿಲ್ಲ. ಯಾರು ದ್ವೇಷ ಭಾಷಣ ಮಾಡ್ತಾರೋ ಅವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಎಲ್ಲರೂ ಕಾನೂನಿಗೆ ಗೌರವ ನೀಡಬೇಕು ಎಂದು ಹೇಳಿದ್ದಾರೆ.

ದ್ವೇಷ ಭಾಷಣಗಳಿಂದ ಈಗಾಗಲೇ ಹಲವು ಕೊಲೆಗಳು ನಡೆದಿರುವುದನ್ನು ಉಲ್ಲೇಖಿಸಿದ ಪರಮೇಶ್ವರ್, “ಅಂತಹ ಘಟನೆಗಳನ್ನು ತಡೆಯುವ ಸಲುವಾಗಿಯೇ ದ್ವೇಷ ಭಾಷಣಗಳನ್ನು ಹತ್ತಿಕ್ಕಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ” ಎಂದು ತಿಳಿಸಿದ್ದಾರೆ.

ಈ ವಿಷಯದಲ್ಲೂ ಬಿಜೆಪಿ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದ ಅವರು, ಅಧಿವೇಶನದಲ್ಲಿ ಮಸೂದೆ ಪಾಸ್ ಆಗಿದ್ದು, ಶೀಘ್ರದಲ್ಲೇ ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ ಎಂದರು. “ರಾಜ್ಯಪಾಲರು ಮಸೂದೆ ಕುರಿತು ಯಾವುದೇ ವಿವರಣೆ ಕೇಳಿದರೆ, ಸರ್ಕಾರದಿಂದ ಸಂಪೂರ್ಣ ಸ್ಪಷ್ಟನೆ ನೀಡಲಾಗುತ್ತದೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

Gold Rate: ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ!

0

2025ರ ಆರಂಭದಿಂದಲೇ ಚಿನ್ನ ಮತ್ತು ಬೆಳ್ಳಿ ಬೆಲೆಗಳು ರಾಕೆಟ್‌ನಂತೆ ಏರಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದೀಗ ಡಬಲ್​ ಆಗಿದೆ. ಬಂಗಾರ ಪ್ರಿಯರಿಗೆ ದೊಡ್ಡ ಹೊಡೆತ ಬಿದ್ದಿದೆ. ಮದುವೆ ಮುಂಜಿ ಹಬ್ಬಕ್ಕೆ ಚಿನ್ನ ಬೆಳ್ಳಿ ಖರೀದಿ ಮಾಡಬೇಕು ಅಂದುಕೊಂಡವರ ಕನಸಿಗೆ ಎಳ್ಳು ನೀರು ಬಿಟ್ಟಂತಾಗಿದೆ. ಇದು ಅನೇಕರಿಗೆ ಆಭರಣ ಖರೀದಿಯನ್ನು ಕಷ್ಟಕರಗೊಳಿಸಿದೆ.

ಇನ್ನೂ ಚಿನ್ನದ ಬೆಲೆ ಭಾರಿ ಜಿಗಿತ ಕಂಡಿದ್ದು, ಮತ್ತೊಮ್ಮೆ ಗರಿಷ್ಠ ಬೆಲೆಯ ಜಿಗಿತ ಕಂಡಿದೆ. ಹೌದು ಚಿನ್ನದ ಬೆಲೆ ಗ್ರಾಮ್​ಗೆ 100 ರೂ ಏರಿದರೆ, ಬೆಳ್ಳಿ ಬೆಲೆ 5 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 12,300 ರೂನಿಂದ 12,400 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,528 ರೂ ಮುಟ್ಟಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 214 ರೂನಿಂದ 219 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 231 ರೂ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 21,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 21,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,528 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,400 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,146 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 219 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,528 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,400 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 219 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,400 ರೂ
  • ಚೆನ್ನೈ: 12,480 ರೂ
  • ಮುಂಬೈ: 12,400 ರೂ
  • ದೆಹಲಿ: 12,415 ರೂ
  • ಕೋಲ್ಕತಾ: 12,400 ರೂ
  • ಕೇರಳ: 12,400 ರೂ
  • ಅಹ್ಮದಾಬಾದ್: 12,405 ರೂ
  • ಜೈಪುರ್: 12,415 ರೂ
  • ಲಕ್ನೋ: 12,415 ರೂ
  • ಭುವನೇಶ್ವರ್: 12,400 ರೂ

ಬೆಳಗಾವಿ| ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; 30 ಮಂದಿಗೆ ಗಾಯ

0

ಬೆಳಗಾವಿ:- ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ವಾಹನವೊಂದು ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಜರುಗಿದೆ.

ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಪರಿಣಾಮ ಸುಮಾರು 9ಕ್ಕೂ ಹೆಚ್ಚು ಜನರ ಕೈಕಾಲು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ ರೈತರು, ಮಹಿಳೆಯರು ಸಮಾವೇಶಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ಬೆಳಗಾವಿ ಹಾಗೂ ಬೈಲಹೊಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಆಯುರ್ವೇದಿಕ್ ವೈದ್ಯೆ ಸಾವು.! 

0

ಬೆಂಗಳೂರು: ಅನುಮಾನಾಸ್ಪದವಾಗಿ ಆಯುರ್ವೇದಿಕ್ ವೈದ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ನಗರದ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಜರಹಳ್ಳಿ ನಿವಾಸಿ ಶೂಲಿ ಮಂಡೋಲಿ (32) ಮೃತ ವೈದ್ಯೆಯಾಗಿದ್ದಾರೆ.

ಡಿಸೆಂಬರ್ 19ರಂದು ಅನಾರೋಗ್ಯದ ಹಿನ್ನೆಲೆ ಶೂಲಿ ಮಂಡೋಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಬಂದಿದ್ದರು. ಆದರೆ ಮರುದಿನ ಮತ್ತೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಈ ಸಾವಿನ ಬಗ್ಗೆ ಮೃತಳ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಪತಿ ಅನೀರ್ ಬನ್ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂಬ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಪೋಸ್ಟ್‌ಮಾರ್ಟಂ ವರದಿ ಮತ್ತು ಇತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಸಿ ಹಾಲನ್ನು ಮುಖಕ್ಕೆ ಹಚ್ಚುವುದರಿಂದ ದೊರೆಯುವ ಪ್ರಯೋಜನಗಳೇನು ಗೊತ್ತಾ..?

0

ಹಾಲು ಆರೋಗ್ಯಕ್ಕೆ ಮಾತ್ರವಲ್ಲದೆ ಚರ್ಮದ ಆರೈಕೆಯಲ್ಲಿಯೂ ಅತ್ಯಂತ ಉಪಯುಕ್ತವೆಂದು ಪರಿಗಣಿಸಲಾಗಿದೆ. ಹಸಿ ಹಾಲಿನಲ್ಲಿ ಲ್ಯಾಕ್ಟಿಕ್ ಆಮ್ಲ, ವಿಟಮಿನ್ ಎ, ಪ್ರೋಟೀನ್ ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಚರ್ಮವನ್ನು ಪೋಷಿಸಿ ಆರೋಗ್ಯಕರವಾಗಿ ಕಾಪಾಡಲು ಸಹಾಯ ಮಾಡುತ್ತವೆ. ಹಸಿ ಹಾಲನ್ನು ನಿಯಮಿತವಾಗಿ ಮುಖಕ್ಕೆ ಹಚ್ಚುವುದರಿಂದ ಹಲವು ಚರ್ಮದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಹಸಿ ಹಾಲನ್ನು ಮುಖಕ್ಕೆ ಹಚ್ಚುವುದರಿಂದ ದೊರೆಯುವ ಪ್ರಯೋಜನಗಳು

ತ್ವಚೆಯ ಹೊಳಪು ಹೆಚ್ಚುತ್ತದೆ:
ಹಸಿ ಹಾಲನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮ ಆಳವಾಗಿ ಸ್ವಚ್ಛವಾಗುತ್ತದೆ. ಇದರಲ್ಲಿ ಇರುವ ಪೋಷಕಾಂಶಗಳು ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಿ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತವೆ. ಸುಕ್ಕುಗಳನ್ನು ಕಡಿಮೆ ಮಾಡುವಲ್ಲಿಯೂ ಇದು ಸಹಕಾರಿಯಾಗಿದೆ.

ಶುಷ್ಕತೆಯನ್ನು ಹೋಗಲಾಡಿಸುತ್ತದೆ:
ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಣಿಸುವ ಚರ್ಮದ ಶುಷ್ಕತೆಯನ್ನು ಹಸಿ ಹಾಲು ನಿವಾರಿಸುತ್ತದೆ. ದುಬಾರಿ ಕ್ರೀಮ್ ಅಥವಾ ಲೋಷನ್‌ಗಳ ಬದಲಿಗೆ ಬೆಳಿಗ್ಗೆ ಮತ್ತು ಸಂಜೆ ಹಸಿ ಹಾಲನ್ನು ಮುಖಕ್ಕೆ ಹಚ್ಚಿದರೆ ಚರ್ಮ ಮೃದುಗೊಳ್ಳುತ್ತದೆ.

ಸುಕ್ಕು ನಿವಾರಣೆಗೆ ಸಹಕಾರಿ:
ಹಾಲಿನಲ್ಲಿ ಇರುವ ವಿಟಮಿನ್ ಎ ಮತ್ತು ವಯಸ್ಸಾಗುವಿಕೆ ವಿರೋಧಿ ಗುಣಗಳು ಅಕಾಲಿಕ ವೃದ್ಧಾಪ್ಯ ಲಕ್ಷಣಗಳನ್ನು ಕಡಿಮೆ ಮಾಡುತ್ತವೆ. ಜೊತೆಗೆ ಚರ್ಮದ ಕಿರಿಕಿರಿ ಹಾಗೂ ಉರಿಯನ್ನು ಶಮನಗೊಳಿಸಲು ಸಹ ಸಹಾಯ ಮಾಡುತ್ತದೆ.

ಕಲೆ ಹಾಗೂ ಟ್ಯಾನಿಂಗ್ ನಿವಾರಣೆ:
ಹಸಿ ಹಾಲು ಮುಖದ ಕಲೆಗಳು ಮತ್ತು ಟ್ಯಾನಿಂಗ್ ಕಡಿಮೆ ಮಾಡಲು ಪರಿಣಾಮಕಾರಿ. ಹತ್ತಿ ಉಂಡೆಯನ್ನು ಹಸಿ ಹಾಲಿನಲ್ಲಿ ಅದ್ದಿ ಮುಖಕ್ಕೆ ಹಚ್ಚಿ 10–20 ನಿಮಿಷಗಳ ನಂತರ ತೊಳೆಯುವುದರಿಂದ ಉತ್ತಮ ಫಲಿತಾಂಶ ಕಾಣಬಹುದು.

ಚರ್ಮ ಹೈಡ್ರೇಟ್ ಆಗುತ್ತದೆ:
ಹಸಿ ಹಾಲು ಚರ್ಮಕ್ಕೆ ಅಗತ್ಯವಾದ ತೇವಾಂಶವನ್ನು ಒದಗಿಸಿ, ಡ್ರೈನೆಸ್ ಆಗದಂತೆ ಕಾಪಾಡುತ್ತದೆ.

ಆಳವಾದ ಸ್ವಚ್ಛತೆ:
ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ, ಮುಖವನ್ನು ಹೊಳೆಯುವಂತೆ ಹಾಗೂ ಮೃದುವಾಗಿಡಲು ಹಸಿ ಹಾಲು ಸಹಾಯಕವಾಗಿದೆ.

ಹಸಿ ಹಾಲನ್ನು ಯಾವಾಗ ಹಚ್ಚಬೇಕು?
ಚರ್ಮವನ್ನು ಆಳವಾಗಿ ಶುದ್ಧಗೊಳಿಸಿ ಮೃದುವಾಗಿಡಲು ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಸಿ ಹಾಲನ್ನು ಹಚ್ಚಿ. ಬೆಳಗ್ಗೆ ಸ್ವಚ್ಛ ನೀರಿನಿಂದ ಮುಖ ತೊಳೆಯಿರಿ. ನಿಯಮಿತ ಬಳಕೆಯಿಂದ ಚರ್ಮದಲ್ಲಿ ಸ್ಪಷ್ಟವಾದ ಸಕಾರಾತ್ಮಕ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ.

ರಂಗಭೂಮಿಯಿಂದ ಬೆಳ್ಳಿ ತೆರೆಗೆ ‘ಕ್ಯಾಲೆಂಡರ್’; ನವೀನ್ ಶಕ್ತಿ ನಿರ್ದೇಶನದ ಚಿತ್ರಕ್ಕೆ ಮೊದಲ ಹಾಡು ಅನಾವರಣ

ಬೆಂಗಳೂರು: ‘ಕ್ಯಾಲೆಂಡರ್’ ಚಿತ್ರದ ಮೊದಲ ಹಾಡು ‘ನಾನ್ಯಾರೊ’ ಬಿಡುಗಡೆಗೊಂಡಿದ್ದು, ಚಿತ್ರತಂಡದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಚಿತ್ರದ ಮೂಲಕ ಆದರ್ಶ ಗುಂಡುರಾಜ್ ಮೊದಲ ಬಾರಿಗೆ ನಿರ್ದೇಶಕನಾಗಿಯೂ ಹೊರಹೊಮ್ಮಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ನವೀನ್ ಶಕ್ತಿ, “ಆದರ್ಶ ಗುಂಡುರಾಜ್ ಮೂಲತಃ ರಂಗಭೂಮಿಯ ಕಲಾವಿದರು. ಅವರು 5000ಕ್ಕೂ ಹೆಚ್ಚು ಬೀದಿ ನಾಟಕಗಳನ್ನು ಮಾಡಿದ್ದಾರೆ. ನಿರ್ದೇಶಕನಾಗಿ ಇದು ಅವರ ಮೊದಲ ಸಿನಿಮಾ. ‘ಕ್ಯಾಲೆಂಡರ್’ನಲ್ಲಿ ಎಲ್ಲರ ಮನಸ್ಸಿಗೂ ಹತ್ತಿರವಾಗುವ ಕಥೆ ಇದೆ” ಎಂದರು.

ಚಿತ್ರಕ್ಕೆ ರಮೇಶ್ ಕೊಯಿರಾ ಛಾಯಾಗ್ರಹಣ ಮಾಡಿದ್ದು, ಸುನಾದ್ ಗೌತಮ್ ಸಂಗೀತ ನಿರ್ದೇಶನ ನೀಡಿದ್ದಾರೆ. ನಾಯಕನಾಗಿ ಆದರ್ಶ ಗುಂಡುರಾಜ್ ಅಭಿನಯಿಸಿದ್ದು, ನಾಯಕಿಯರಾಗಿ ಸುಶ್ಮಿತಾ ಹಾಗೂ ನಿವಿಷ್ಕ ಪಾಟೀಲ್ ಕಾಣಿಸಿಕೊಂಡಿದ್ದಾರೆ.

ವಿಶೇಷ ಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ನಟಿಸಿದ್ದು, ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡು, ಸುಚೇಂದ್ರ ಪ್ರಸಾದ್ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಸುನಾದ್ ಗೌತಮ್ ಹಾಗೂ ಗಾಯಕಿ ಅನುಷ್ಕಾ ಮಾತನಾಡಿದರು. ನಾಯಕಿಯರಾದ ಸುಶ್ಮಿತಾ ಮತ್ತು ನಿವಿಷ್ಕ ಪಾಟೀಲ್ ತಮ್ಮ ಪಾತ್ರಗಳ ಕುರಿತು ವಿವರಿಸಿದರು. ಸದ್ಯದಲ್ಲೇ ಕ್ಯಾಲೆಂಡರ್ ಸಿನಿಮಾ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಭಾರೀ ನೇಮಕಾತಿ: ಮಹಿಳೆಯರೇ ಹೆಚ್ಚು ನೇಮಕ

0

ಬೆಂಗಳೂರು: ದೇವನಹಳ್ಳಿ ಸಮೀಪ ಫಾಕ್ಸ್‌ಕಾನ್ ಕಂಪನಿಯ ಐಫೋನ್ ಅಸೆಂಬ್ಲಿ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ವರದಿಗಳ ಪ್ರಕಾರ, ಕೇವಲ ಎಂಟು ತಿಂಗಳಲ್ಲಿ ಈ ಫ್ಯಾಕ್ಟರಿಯಲ್ಲಿ ಸುಮಾರು 30,000 ಉದ್ಯೋಗಿಗಳನ್ನು ನೇಮಕ ಮಾಡಲಾಗಿದೆ.

ಇದು ಭಾರತದಲ್ಲಿಯೇ ಯಾವುದೇ ಸಂಸ್ಥೆಯು ಇಷ್ಟು ವೇಗದಲ್ಲಿ ಮಾಡಿರುವ ಅತ್ಯಂತ ದೊಡ್ಡ ನೇಮಕಾತಿಯಾಗಿದ್ದು, ಶೇ. 80ರಷ್ಟು ನೇಮಕವಾದವರು ಮಹಿಳೆಯರು ಆಗಿದ್ದಾರೆ. ಫ್ಯಾಕ್ಟರಿಯಲ್ಲಿ ಹೆಚ್ಚಿನವರು 19–24 ವಯೋಮಾನದ ಯುವಕರು ಹಾಗೂ ಹೆಚ್ಚಿನವರಿಗೆ ಇದು ಮೊದಲ ಉದ್ಯೋಗವಾಗಿದೆ. ಪಿಯುಸಿ ಅಥವಾ ಡಿಪ್ಲೊಮಾ ಪದವೀಧರರಿಗೆ ಆರು ತಿಂಗಳ ತರಬೇತಿ ನೀಡಿದ ನಂತರ ಅವರನ್ನು ಐಫೋನ್ ಅಸೆಂಬ್ಲಿ ಯುನಿಟ್‌ಗಳಲ್ಲಿ ಕೆಲಸಕ್ಕೆ ಸೇರಿಸಲಾಗುತ್ತದೆ. ಉದ್ಯೋಗಿಗಳ ಸುಲಭ ಸೌಕರ್ಯಕ್ಕಾಗಿ ಫ್ಯಾಕ್ಟರಿ ಹತ್ತಿರ ಟೌನ್‌ಶಿಪ್ ನಿರ್ಮಿಸಲಾಗುತ್ತಿದೆ.

2024 ಏಪ್ರಿಲ್-ಮೇ ತಿಂಗಳಲ್ಲಿ ಐಫೋನ್-16 ಅಸೆಂಬ್ಲಿಂಗ್ ಪ್ರಾರಂಭಗೊಂಡಿದ್ದು, ಈಗ ಐಫೋನ್-17 ಪ್ರೋ ಮ್ಯಾಕ್ಸ್ ಮಾದರಿಯ ಫೋನ್‌ಗಳನ್ನು ತಯಾರಿಸುತ್ತಿದ್ದಾರೆ. 300 ಎಕರೆ ಪ್ರದೇಶದಲ್ಲಿ ನಿರ್ಮಿತ ಘಟಕವು 50,000 ಜನರಿಗೆ ಉದ್ಯೋಗ ನೀಡಲು ಸಾಕ್ಷಮವಾಗಿದೆ, ಮತ್ತು ತಮಿಳುನಾಡಿನ ಫ್ಯಾಕ್ಟರಿಗಳಿಗಿಂತಲೂ ವಿಶಾಲವಾಗಿದೆ.

ಇತ್ತೀಚಿನ ದಿನಗಳಲ್ಲಿ ಐಟಿ ವೃತ್ತಿಪರರ ನೇಮಕಾತಿ ಕೂಡ ವೇಗವಾಗಿದೆ. 2025ರ ಒಳಗೆ 18 ಲಕ್ಷ ಹುದ್ದೆಗಳ ನೇಮಕಾತಿ ನಡೆದಿದ್ದು, ಹಿಂದಿನ ವರ್ಷದೊಂದಿಗೆ ಹೋಲಿಸಿದರೆ ಶೇ. 16ರಷ್ಟು ಹೆಚ್ಚಾಗಿದೆ. ಆದರೆ ಹೆಚ್ಚಿನ ನೇಮಕಾತಿ ಗ್ಲೋಬಲ್ ಕೇಪಬಿಲಿಟಿ ಸೆಂಟರ್‌ಗಳ ಮೂಲಕ ನಡೆಯುತ್ತಿದೆ.

error: Content is protected !!