Home Blog Page 3

ತಿಗಣೆ ಔಷಧಿ ವಾಸನೆ ತಾಳಲಾರದೆ ಪಿಜಿಯಲ್ಲಿ ಬಿಟೆಕ್ ವಿದ್ಯಾರ್ಥಿ ಸಾವು!

0

ಬೆಂಗಳೂರು: ತಿಗಣೆ ಔಷಧಿ ವಾಸನೆ ತಾಳಲಾರದೆ ಬಿಟೆಕ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಎಚ್ ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿರುಪತಿ ಮೂಲದ ಪವನ್ ಮೃತ ದುರ್ಧೈವಿಯಾಗಿದ್ದು, ತಿಗಣೆ ಔಷಧಿ ವಾಸನೆ ತಾಳಲಾರದೆ ಅಸ್ವಸ್ಥಗೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕೂಡಲೇ ಯುವಕನನ್ನು ಖಾಸಗಿ ಆಸ್ಪತ್ರೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.  ವಿದ್ಯಾರ್ಥಿ ಪವನ್​​ ವಾಸವಾಗಿದ್ದ ಪಿಜಿಯಲ್ಲಿ ತಿಗಣೆ ಔಷಧಿ ಸಿಂಪಡಣೆ ಮಾಡಿದ್ದರು. ಆ ಬಗ್ಗೆ ಮಾಹಿತಿ ಇಲ್ಲದೆ ಕೊಠಡಿಗೆ ತೆರಳಿದ್ದ.

ತಿಗಣೆ ಔಷಧದ ವಿಷಕಾರಿ ವಾಸನೆಯನ್ನು ಉಸಿರಾಡಿದ ಕಾರಣದಿಂದ ಪವನ್​​ ಅಸ್ವಸ್ಥನಾಗಿ ಕುಸಿದುಬಿದ್ದು, ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ‌ ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಬೆಂಗಳೂರಿನ ಹೆಚ್​​ಎಎಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ.

Yathindra Siddaramaiah: ಸಿಎಂ ಪುತ್ರನಿಂದಲೇ ಬಹಿರಂಗವಾಯ್ತು ಕರ್ನಾಟಕದ ಹೊಸ ʼನಾಯಕʼನ ಹೆಸರು!

0

ಬೆಳಗಾವಿ: ಯಾರ ಕುರ್ಚಿ ಅಲುಗಾಡಲಿದೆ? ಯಾವ ಸಚಿವರಿಗೆ ಕೊಕ್ ಕಾದಿದೆ? ಯಾವ ಹಿರಿ ತಲೆಯ ನಾಯಕರಿಗೆ ಎದುರಾಗುತ್ತೆ ಶಾಕ್? ನವೆಂಬರ್ ಕ್ರಾಂತಿಯೋ, ಇಲ್ಲ ಬ್ರಾಂತಿಯೋ? ನಾಯಕತ್ವ ಬದಲಾವಣೆ ಖಚಿತ ಅಂತಾ ಬಿಜೆಪಿಯವರು ನುಡಿಯುತ್ತಿರುವ ಭವಿಷ್ಯ ನಿಜವಾಗುತ್ತದೆಯಾ? ಈ ಎಲ್ಲಾ ಪ್ರಶ್ನೆಗಳು ಈಗ ಕರ್ನಾಟಕ ರಾಜಕೀಯದಲ್ಲಿ ಹೆಚ್ಚಾಗಿವೆ.

ಇದೆಲ್ಲರದ ಮಧ್ಯೆ ಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತು ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ.

ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್‌ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಹೇಳಿದ್ದಾರೆ. ಇವತ್ತು ತಂದೆಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ಈ ರೀತಿ ವೈಚಾರಿಕವಾಗಿ ಪ್ರಗತಿಪರವಾಗಿ ಸಿದ್ದಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶಶನ, ನೇತೃತ್ವ ವಹಿಸಿಕೊಳ್ಳಲು ಒಬ್ಬ ನಾಯಕ ಬೇಕು. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿ ವಹಿಸಿಕೊಳ್ಳಲು ಸಮರ್ಥರಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ದಾಂತದಲ್ಲಿ ನಂಬಿಕೆ ಇಟ್ಟುಕೊಂಡಿರುವ ಎಲ್ಲಾ ರಾಜಕಾರಣಿಗಳಿಗೆ ಮಾದರಿಯಾಗಿ ನಮ್ಮನ್ನು ಮುನ್ನಡೆಸುವ ನಂಬಿಕೆ ಇದೆ. ತತ್ವ ಬದ್ಧತೆ ಇರುವ ನಾಯಕರು ಸಿಗುವುದು ಬಹಳ ಕಷ್ಟ. ಅಂತಹ ಕೆಲಸವನ್ನು ಜಾರಕಿಹೊಳಿ ಮಾಡುತ್ತಿದ್ದಾರೆ. ಆ ಕೆಲಸ ಇದೇ ರೀತಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಚರ್ಮರೋಗ ತಜ್ಞ ಅರೆಸ್ಟ್

0

ಬೆಂಗಳೂರು: ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದ 21 ವರ್ಷದ ಯುವತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ವೈದ್ಯನೊಬ್ಬನನ್ನು ಅಶೋಕನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ್ ರೋಡ್ರಿಗಸ್ ಎಂದು ಗುರುತಿಸಲಾಗಿದ್ದು, ಚರ್ಮರೋಗ ತಜ್ಞನಾಗಿದ್ದ ಎಂದು ತಿಳಿದುಬಂದಿದೆ. ಸಂಬಂಧ 21 ವರ್ಷದ ಯುವತಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ವೈದ್ಯರು ಪರಿಸ್ಥಿತಿಯ ಲಾಭ ಪಡೆದು ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಹಲವಾರು ಬಾರಿ ತನ್ನನ್ನು ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಹಾಗೂ ನನ್ನ ಜತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಪರೀಕ್ಷೆ ಮಾಡಬೇಕು ಎಂದು ವೈದ್ಯರು ತನ್ನ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ. ಖಾಸಗಿಯಾಗಿ ಸಮಯ ಕಳೆಯಲು ಹೋಟೆಲ್ ರೂಮ್​​ಗೆ ಬರುವಂತೆ ಹೇಳಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆ ನಡೆದ ನಂತರ ಯುವತಿ ತನ್ನ ಮನೆಯವರಿಗೆ ತಿಳಿಸಿದ್ದು, ಯುವತಿಯ ಕುಟುಂಬದವರು, ಅಕ್ಕ-ಪಕ್ಕದ ನಿವಾಸಿಗಳೊಂದಿಗೆ ಕ್ಲಿನಿಕ್​​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಹಾಗೂ ವೈದ್ಯರನ್ನು ಬಂಧಿಸಿದ್ದಾರೆ. ಆದರೆ ವೈದ್ಯರು ಈ ಆರೋಪವನ್ನು ನಿರಾಕರಿಸಿದ್ದಾರೆ. ನಾನು ಮಾಡಿದ ಚಿಕಿತ್ಸೆಯ ಕ್ರಮವನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಸಿಂದಗಿ ಶಾಸಕ

0

ವಿಜಯಪುರ: ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ಇಂದು ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಘಟನೆಯ ವೇಳೆ ಶಾಸಕರ ಜೊತೆಗೆ ಅವರ ಪುತ್ರಿ ಹಾಗೂ ಸಹೋದರನ ಮಗ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿದ್ದ ಇನ್ನೋವಾ ಹೈಕ್ರಾಸ್ ಕಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಲಬುರ್ಗಿಯಿಂದ ಸಿಂದಗಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಡಿಕ್ಕಿಯಾದದ್ದು ತಿಳಿದುಬಂದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಮಂತ್ರಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ದಂಪತಿ!

0

ರಾಯಚೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಕಳೆದ ವಾರವಷ್ಟೇ ಹಾಸನಾಂಬೆ ದರ್ಶನ ಪಡೆದಿದ್ದ ಡಿಕೆಶಿ, ಇದೀಗ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆರಂಭದಲ್ಲಿ ಶ್ರೀ ಮಂಚಾಲಮ್ಮ ದೇವಿ ದರ್ಶನ ಪಡೆದುಕೊಂಡು ಬಳಿಕ ಮೂಲ ರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಆ ಬಳಿಕ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿಕೊಂಡರು. ನಂತರ ಶ್ರೀಗಳು ಶ್ರೀಮಠದ ಪರಂಪರೆ ಹಾಗೂ ಈಗಿನ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಇದೇ ವೇಳೆ, ಶ್ರೀಗಳು ಡಿ.ಕೆ‌.ಶಿವಕುಮಾರ ಹಾಗೂ ಅವರ ಪತ್ನಿ ಮತ್ತು ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಗೌರವಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತಾಡಿ, ಈ ಹಿಂದೆ ಜೋಡೊ ಯಾತ್ರೆ ವೇಳೆ ನಾನು ಹಾಗೂ ರಾಹುಲ್ ಗಾಂಧಿ ಅವರು ಮಂತ್ರಾಲಯ ಮಠಕ್ಕೆ ಬಂದಿದ್ದೆವು. ನಂತರ ಮತ್ತೊಮ್ಮೆ ರಾಯರ ಮಠಕ್ಕೆ ಬರಬೇಕು ಅನ್ನೋದು ಇತ್ತು‌. ಎಲ್ಲದಕ್ಕೂ ದೇವರ ಅನುಗ್ರಹ, ಗುರುವಿನ ಅನುಗ್ರಹ ಮುಖ್ಯ. ಇಂದು ವಿಶೇಷವಾದ ದಿನವೆಂದು ದರ್ಶನಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

0

ಬೆಂಗಳೂರು: ಇಡೀ ನಗರವೇ ನಾಚಿಕೆ ಪಡುವಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಹೌದು ನಗರದಲ್ಲಿ ಮಹಿಳೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಮಹಿಳೆ ವಾಸವಿದ್ದ ಬಾಡಿಗೆ ಮನೆಯಲ್ಲೇ ನಿನ್ನೆ ರಾತ್ರಿ ಮನೆಗೆ ನುಗ್ಗಿ ಮೂವರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದು,

ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಯುವಕರು ಪ್ರಕರಣ ನಂತರ ನಾಪತ್ತೆಯಾಗಿದ್ದಾರೆ, ಅವರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಗೂ ಹಾಗೂ ಈ ಯುವಕರಿಗೂ ಮೊದಲೇ ಪರಿಚಯವಿತ್ತೇ ಎನ್ನುವುದಿನ್ನೂ ದೃಢಪಟ್ಟಿಲ್ಲ.ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಯಾಗ್ತೀನಿ ಅಂತ ವಂಚನೆ: DJ ಹಳ್ಳಿ ಇನ್ಸ್ ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ! 

0

ಬೆಂಗಳೂರು: ಡಿ.ಜೆ‌ ಹಳ್ಳಿ ಇನ್ಸ್ಪೆಕ್ಟರ್ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಮದುವೆಯಾಗ್ತೀನಿ ಎಂದು ಇನ್ಸ್​​ಪೆಕ್ಟರ್​ ಆಗಾಗ ನನ್ನನ್ನು 8ನೇ ಮೈಲಿಯಲ್ಲಿರುವ ತಮ್ಮ ಮನೆ ಹಾಗೂ ಹೋಟೆಲ್​​ ರೂಮ್​​ಗೆ ಕರೆಸಿಕೊಳ್ತಿದ್ದರು. ಅನೇಕ ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಖಾಸಗಿ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ವಂಚಿಸುತ್ತಿದ್ದರು ಎಂದು ಮಹಿಳೆ ದೂರಿದ್ದಾರೆ.

ನಮ್ಮ ವಿಚಾರ ಯಾರಿಗಾದ್ರು ಹೇಳಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು ಎಂದಿದ್ದಾರೆ. ಪ್ರತಿ ಬಾರಿ ವಿಡಿಯೋ ಕಾಲ್ ಮಾಡು ಎಂದು ಇನ್ಸ್​ಪೆಕ್ಟರ್​ ಸುನೀಲ್​ ಪೀಡಿಸುತ್ತಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ. ಸದ್ಯ ವಂಚನೆಗೊಳಗಾದ ಸಂತ್ರಸ್ತ ಮಹಿಳೆ ಡಿಜಿ/ ಐಜಿಪಿಗೆ ದೂರು ನೀಡಿದ್ದಾರೆ. ಸೂಕ್ತ ನ್ಯಾಯ ಕೊಡಿಸಿ‌ ಎಂದು‌ ಡಿಜಿ ಬಳಿ ಸಂತ್ರಸ್ತೆ  ಮನವಿ ಮಾಡಿದ್ದಾರೆ.

 

ಕೆ.ಆರ್.ಪೇಟೆಯಲ್ಲಿ ವರುಣಾರ್ಭಟ: ಗೃಹ ಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯ ಮೇಲ್ಫಾವಣಿ ಪೀಸ್ ಪೀಸ್!

0

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ಬಾರಿ ಮಳೆ, ಗಾಳಿಗೆ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯ ಮೇಲ್ಫಾವಣಿ ಪೀಸ್ ಪೀಸ್ ಆಗಿದೆ. ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು,

ಮಳೆರಾಯನ ಅವಾಂತರದಿಂದ ಮೋಹಿನಿ-ಶಿವಕುಮಾರ್ ಎಂಬುವವರಿಗೆ ಸೇರಿದ ಹೊಸ ಮನೆ ಹಾನಿಯಾಗಿದೆ. ಶಿವಕುಮಾರ್ ಕುಟುಂಬ ಹಲವು ವರ್ಷಗಳಿಂದ  ಶಿಥಿಲಗೊಂಡ ಮನೆಯಲ್ಲಿದ್ದರು. ಇದೀಗ ಸಾಲ ಮಾಡಿ ನೂತನ ಮನೆ ನಿರ್ಮಾಣ ಮಾಡಿದ್ದರು.

ಇನ್ನು ಒಂದು ತಿಂಗಳಲ್ಲಿ ಮನೆ ಗೃಹಪ್ರವೇಶಕ್ಕೆ ಸಿದ್ಧತೆ ಮಾಡಲಾಗಿತ್ತು. ಆದ್ರೆ ಗಾಳಿ ಸಹಿತ ಭಾರಿ ಮಳೆಗೆ ಮನೆಯ ಸಿಮೆಂಟ್ ಸೀಟುಗಳು ಪುಡಿ ಪುಡಿಯಾಗಿದೆ. ವರುಣನ ವಕ್ರದೃಷ್ಟಿಗೆ ಸುಮಾರು ಒಂದು ಲಕ್ಷ ನಷ್ಟವಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ.

RSS ಪಥ ಸಂಚಲನದಲ್ಲಿ ಭಾಗವಹಿಸಿದ್ದ ಅಡುಗೆ ಸಿಬ್ಬಂದಿ ಕರ್ತವ್ಯದಿಂದ ಅಮಾನತು!

0

ಬೀದರ್‌: ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಇದೀಗ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.

ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ತಂದೆ ಅಶೋಕ ಕುಮಾರ್‌ ಅವರನ್ನು ಕೆಲಸದಿಂದ ತಾಲೂಕು ಆಡಳಿತ ಬಿಡುಗಡೆಗೊಳಿಸಿದೆ.

ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಸಿಬ್ಬಂದಿ ಪ್ರಮೋದ್ ಭಾಗಿಯಾಗಿದ್ದು ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.

ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಡೆದ ಪಥಸಂಚಲನದಲ್ಲಿಹಲವು ಸರ್ಕಾರಿ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ.

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು!

0

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಣಸಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನಕ್ಕೆ ಕಾರು ‌ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಸರಘಟ್ಟ ಮೂಲದ ಕನ್ನಯ್ಯ (62) ಮೃತ ಬೈಕ್ ಸವಾರನಾಗಿದ್ದು,

ದಾಬಸ್ ಪೇಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸರ್ವಿಸ್ ರಸ್ತೆ ಇಲ್ಲದ ಕಾರಣ ಮೆಣಸಿ ಗೇಟ್ ಬಳಿ ಅಪಘಾತಗಳು ನಿಲ್ಲುತ್ತಿಲ್ಲ, ಹತ್ತಾರು ಬಾರಿ ಸರ್ವಿಸ್ ರಸ್ತೆ ಮಾಡಲು ಮನವಿ ಕೊಟ್ಟರು ಎಸ್ ಟಿ ಆರ್ ಆರ್ ಅಧಿಕಾರಿಗಳು ಕೇರ್ ಮಾಡುತ್ತಿಲ್ಲ,

ಪ್ರತಿದಿನ ಅಪಘಾತ ನೋಡಿ ನೋಡಿ ಬೇಸತ್ತ ಜನರಿಂದ ಎಸ್ ಟಿ ಆರ್ ಆರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಸದ್ಯ ದ್ವಿಚಕ್ರ ವಾಹನಕ್ಕೆ ಕಾರು ‌ಡಿಕ್ಕಿಯಾಗಿ ಬೈಕ್ ಸವಾರ ಮೃತ ಪಟ್ಟಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!