Home Blog Page 3

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

0

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಮೊದಲು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ರಿಹ್ಯಾಬಿಲಿಟೇಶನ್ ಕೇಂದ್ರದಿಂದ ಪರಾರಿಯಾಗಿದ್ದರು. ಅಲ್ಲಿಂದಲೇ ಕೇಂದ್ರದ ಮಾಲೀಕರ ಮೊಬೈಲ್ ಕದ್ದು, ಅದನ್ನು ಬಳಸಿ ರ‍್ಯಾಪಿಡೋ ಸೇವೆ ಬುಕ್ ಮಾಡಿದ್ದಾರೆ.

ಹುಸ್ಕೂರು ಬಳಿ ಆಟೋ ಬುಕ್ ಮಾಡಿಕೊಂಡು, ಚಾಲಕನನ್ನು ಜೋಹಳ್ಳಿ ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಡ್ರಾಪ್ ಮಾಡಿದ ನಂತರ ಹಣ ಕೇಳಿದ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ಕು ಹಲ್ಲುಗಳು ಮುರಿದಿವೆ.

ಆ ಬಳಿಕ ಆರೋಪಿಗಳು ಆಟೋ ಮತ್ತು ಮೊಬೈಲ್ ತೆಗೆದುಕೊಂಡು ಪರಾರಿಯಾಗಿ ಮಾಲೂರಿಗೆ ತೆರಳಿದ್ದಾರೆ. ಅಲ್ಲಿ “ತಂದೆಗೆ ಆರೋಗ್ಯ ಸರಿಯಿಲ್ಲ” ಎಂಬ ನೆಪ ಹೇಳಿ ಆಟೋವನ್ನು ಅಡಮಾನ ಇಟ್ಟು ಹಣ ಪಡೆದಿದ್ದಾರೆ.

ನಂತರ ಮತ್ತೆ ಬೆಂಗಳೂರಿಗೆ ಬಂದು ಸುತ್ತಾಡುತ್ತಿದ್ದರು. ಈ ನಡುವೆ, ಆರೋಪಿಗಳು ಮೊಬೈಲ್ ಅನ್ನು ಅಗತ್ಯವಿದ್ದಾಗ ಮಾತ್ರ ಆನ್ ಮಾಡಿ, ಬಳಿಕ ಆಫ್ ಮಾಡುತ್ತಿದ್ದರು. ಘಟನೆ ಸಂಬಂಧ ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಬಾಗಲೂರು ಪೊಲೀಸರು ತನಿಖೆ ಆರಂಭಿಸಿ, ಕಾನಿಷ್ ಸೇರಿದಂತೆ ಒಬ್ಬ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ರಂಗು: ರೌಡಿಶೀಟರ್ ಬರ್ತ್‌ಡೇಗೆ ಡ್ರಗ್ಸ್ ದಂಗಲ್, 15 ಮಂದಿಗೆ ಶಾಕ್!

ಚಾಮರಾಜನಗರ: ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ರಾಜ್ಯದ ಗಮನ ಸೆಳೆದಿದೆ. ರೌಡಿಶೀಟರ್ ಜಹೀರ್ ಜನ್ಮದಿನದ ಹೆಸರಿನಲ್ಲಿ ನಡೆದ ಈ ಪಾರ್ಟಿ, ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಈ ಪಾರ್ಟಿಯಲ್ಲಿ ಗಾಂಜಾ, ಚರಸ್ ಸೇವನೆ ನಡೆದಿದ್ದು, ಎಲ್ಲರೂ ಮೋಜುಮಸ್ತಿಯಲ್ಲಿ ತೊಡಗಿದ್ದರೆಂದು ವರದಿಯಾಗಿದೆ. ಪೊಲೀಸರ ದಾಳಿ ನಡೆಸಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ.

ಪಾರ್ಟಿಯಲ್ಲಿ ಒಟ್ಟು ಐವತ್ತು ಮಂದಿ ಭಾಗಿಯಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ 15 ಮಂದಿಗೆ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದ್ದು ಇದು ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ನೀಡಿದೆ. ಈ ಪಾರ್ಟಿ ನಡೆದಿರುವುದು ಎ1 ಕಾಂಟ್ರಾಕ್ಟರ್ ಫಯಾಜ್ ಖಾನ್ ರೆಸಾರ್ಟ್‌ನಲ್ಲಿ ಎಂಬುದು ಮತ್ತಷ್ಟು ಸಂಚಲನ ಮೂಡಿಸಿದೆ.

ಪ್ರಭಾವಿ ಸಂಪರ್ಕಗಳಿದ್ದ ವ್ಯಕ್ತಿಯ ರೆಸಾರ್ಟ್‌ನಲ್ಲಿ ಈ ರೀತಿ ಪಾರ್ಟಿ ನಡೆದಿರುವುದು ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಪಾರ್ಟಿಯಲ್ಲಿ ಜಹೀರ್ ಕುಟುಂಬ ಸದಸ್ಯರೂ ಇದ್ದಾರೆ ಎಂಬ ಮಾಹಿತಿ ಇನ್ನಷ್ಟು ಶಾಕ್ ನೀಡಿದೆ.

ಮಹಿಳೆಯರನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುತ್ತಿದ್ದು, ಪೊಲೀಸರ ತನಿಖೆ ಇನ್ನಷ್ಟು ಗಂಭೀರವಾಗಿದೆ. ಈಗ ಈ ಪ್ರಕರಣದಲ್ಲಿ ಇನ್ನೂ ಯಾರ ಹೆಸರು ಹೊರಬರುತ್ತದೆ? ಇನ್ನಷ್ಟು ದೊಡ್ಡ ಸಂಪರ್ಕಗಳು ಬಯಲಾಗುತ್ತವೆಯಾ? ಎಂಬ ಕುತೂಹಲ ಎಲ್ಲರಲ್ಲೂ ಹೆಚ್ಚಾಗಿದೆ.

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

0

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದತ್ತ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಎಸ್ಕಾರ್ಟ್ ವಾಹನದ ಮುಂಭಾಗ ಸಂಪೂರ್ಣ ನುಜ್ಜುನುಜ್ಜಾಗಿದ್ದು, ಬಸ್‌ನ ಹಿಂಭಾಗಕ್ಕೂ ಹಾನಿಯಾಗಿದೆ.

ಎಸ್ಕಾರ್ಟ್ ವಾಹನದ ಚಾಲಕ ಚನ್ನಬಸಪ್ಪ ಅರ್ಚಕ್ ಅತೀವೇಗದಲ್ಲಿ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

ಹಾವೇರಿಯಿಂದ ಗದಗಕ್ಕೆ ತೆರಳುತ್ತಿದ್ದ KA-27 F0726 ಸಂಖ್ಯೆಯ ಬಸ್‌ಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಭೀಕರ ಅಪಘಾತ: ಕಾರು ಬಾವಿಗೆ ಉರುಳಿ ಒಂದೇ ಕುಟುಂಬದ 9 ಮಂದಿ ಸಾವು!

0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕಾರು ಬಾವಿಗೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಾಹಿತಿಯ ಪ್ರಕಾರ, ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದ ರಾಜ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ, ದರ್ಗುಡೆ ಕುಟುಂಬವು ಮಾರುತಿ XL6 ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಖುಷಿ/ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ/ಗುಣವಂತಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ (13) ಹಾಗೂ ಸುನಿಲ್ ದತ್ತು ದರ್ಗುಡೆ (32) ಮೃತಪಟ್ಟಿದ್ದಾರೆ. ಮೃತರೆಲ್ಲರೂ ದಿಂಡೋರಿ ತಾಲೂಕಿನ ನಿವಾಸಿಗಳಾಗಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಾರು ನಿಯಂತ್ರಣ ಕಳೆದುಕೊಂಡಿರುವುದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ರಕ್ಷಣಾ ಕಾರ್ಯಾಚರಣೆ ತಕ್ಷಣ ಆರಂಭಗೊಂಡಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿದೆ. ಆದರೆ, ಜನಸಂದಣಿ ಹೆಚ್ಚಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ದಿಂಡೋರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿ ಗರ್ಭಪಾತ ಮಾಡಿಸಿದ್ದ ಸಮೀರ್?

0

ಹುಬ್ಬಳ್ಳಿ: ನಗರದಲ್ಲಿ ಸದ್ದು ಮಾಡುತ್ತಿರುವ ‘ಲವ್ ಜಿಹಾದ್’ ಪ್ರಕರಣ ಮತ್ತೊಂದು ಸ್ಫೋಟಕ ತಿರುವು ಪಡೆದಿದೆ. ಪ್ರೀತಿ ಮತ್ತು ಭರವಸೆಯ ಹೆಸರಿನಲ್ಲಿ ಆರಂಭವಾದ ಸಂಬಂಧ ಇದೀಗ ಗಂಭೀರ ಅಪರಾಧ ಆರೋಪಗಳ ಜಾಲವಾಗಿ ಬದಲಾಗಿದೆ.

ಜಿಮ್ ಟ್ರೈನರ್ ಸಮೀರ್, ‘ನಿನ್ನನ್ನು ದೊಡ್ಡ ಮಾಡೆಲ್ ಮಾಡುತ್ತೇನೆ’ ಎಂಬ ಕನಸು ತೋರಿಸಿ ಯುವತಿಯನ್ನು ತನ್ನತ್ತ ಸೆಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಕೆಯ ವಿಶ್ವಾಸವನ್ನು ಗಳಿಸಿದ ಬಳಿಕ, ಆತನಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇದಲ್ಲದೆ, ಈ ಪ್ರಕರಣಕ್ಕೆ ಈಗ ಶಾಕ್ ನೀಡುವ ಮತ್ತೊಂದು ಅಂಶ ಕೇಳಿ ಬಂದಿದೆ.  ಯುವತಿ ಗರ್ಭಿಣಿಯಾಗಿದ್ದು, ನಂತರ ಬಲವಂತವಾಗಿ ಗರ್ಭಪಾತ ಮಾಡಿಸಲಾಗಿದೆ ಎಂಬ ಗಂಭೀರ ಆರೋಪ ಸಮೀರ್‌ ವಿರುದ್ಧ ಕೇಳಿ ಬಂದಿದೆ. ಈ ಮಾಹಿತಿ ಹೊರಬಿದ್ದ ಬಳಿಕ ಪ್ರಕರಣದ ತೀವ್ರತೆ ಮತ್ತಷ್ಟು ಹೆಚ್ಚಾಗಿದೆ.

ಮೊದಲಿನಿಂದಲೇ ಈ ಪ್ರಕರಣದಲ್ಲಿ ಡ್ರಗ್ ನೀಡಿ ಅತ್ಯಾಚಾರ, ವಿಡಿಯೋ ಮಾಡಿ ಬೆದರಿಕೆ ಹಾಕುವುದು, ಬ್ಲ್ಯಾಕ್ಮೇಲ್ ಮಾಡುವುದು ಎಂಬ ಗಂಭೀರ ಆರೋಪಗಳು ಇದ್ದವು. ಆದರೆ, ಸಮೀರ್ ಈ ಎಲ್ಲ ಆರೋಪಗಳನ್ನು ತಳ್ಳಿಹಾಕುತ್ತಾ, ‘ವಿಡಿಯೋ ನಾನು ಮಾಡಿಲ್ಲ, ಆಕೆಯೇ ಚಿತ್ರೀಕರಿಸಿದ್ದಾಳೆ’ ಎಂದು ಹೇಳಿಕೆ ನೀಡಿದ್ದಾನೆ.

ಈ ಪರಸ್ಪರ ವಿರುದ್ಧ ಹೇಳಿಕೆಗಳ ನಡುವೆ, ಸತ್ಯವೇನು ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ಪೊಲೀಸರು ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಇಬ್ಬರನ್ನೂ ಮುಖಾಮುಖಿಯಾಗಿ ವಿಚಾರಣೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ: ಜಿಮ್‌ನಲ್ಲಿ ವರ್ಕೌಟ್ ಶುರು ಮಾಡಿದ ಗಿಲ್ಲಿ

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ ಮತ್ತೆ ಸದ್ದು ಮಾಡುತ್ತಿದ್ದಾರೆ! 2.2 ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ಸ್ಟಾರ್, ಈಗ ಸಂಪೂರ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಒಮ್ಮೆಯೂ ಫಿಟ್ನೆಸ್ ಬಗ್ಗೆ ತಲೆಕೆಡಿಸಿಕೊಳ್ಳದ ಗಿಲ್ಲಿ, ಬಿಗ್ ಬಾಸ್ ಮನೆಯಲ್ಲಿ ಶಾರ್ಟ್ಸ್-ಬನಿಯನ್ ಲುಕ್‌ನಲ್ಲಿ ಸಿಂಪಲ್ ಆಗಿ ಇದ್ದದ್ದು ಎಲ್ಲರಿಗೂ ಗೊತ್ತು. ಸ್ಟೈಲ್, ಜಿಮ್—ಇವುಗಳ ಬಗ್ಗೆ ಅವರಿಗೆ ಅಷ್ಟೇನೂ ಆಸಕ್ತಿ ಇರಲಿಲ್ಲ. ರಘು ಎಷ್ಟು ಸಲ ಹೇಳಿದರೂ, ಗಿಲ್ಲಿ ಅದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಲಿಲ್ಲ.

ಆದರೆ ಈಗ ಗಿಲ್ಲಿ ಸಂಪೂರ್ಣ ಬದಲಾಗಿದೆ! ಫಿಟ್ನೆಸ್ ಟ್ರೇನರ್ ಕೌಶಿಕ್ ಗೌಡ ಶೇರ್ ಮಾಡಿದ ವಿಡಿಯೋದಲ್ಲಿ ಅವರು ಹೆವಿ ವರ್ಕೌಟ್ ಮಾಡುತ್ತಿರುವುದು ವೈರಲ್ ಆಗಿದೆ. ಈ ದೃಶ್ಯ ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ.

“ಇದೀಗ ನಿಜವಾದ ಗಿಲ್ಲಿ ಶುರು!” “ಇನ್ಮೇಲೆ ಹೊಸ ಲೆಕ್ಕ!” ಎಂಬ ಕಾಮೆಂಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿವೆ.

ಈ ಸಡನ್‌ ಈ ಟ್ರಾನ್ಸ್‌ಫರ್ಮೇಶನ್ ಹೀರೋ ಎಂಟ್ರಿಗೆ ರೆಡಿಯಾಗಿರುವ ಸೂಚನೆಯಾ? ಅಥವಾ ಇನ್ನೇನಾದರೂ ದೊಡ್ಡ ಪ್ಲಾನ್ ಇದೆಯಾ? ಎನ್ನುವ ಪ್ರಶ್ನೆ ಈಗ ಹಾಟ್ ಟಾಪಿಕ್. ಆದರೆ, ಗಿಲ್ಲಿಗೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಇದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಹೀರೋ ಆಗಲಿ, ನಿರ್ದೇಶಕ ಆಗಲಿ—ಗಿಲ್ಲಿಯ ಮುಂದಿನ ಸ್ಟೆಪ್ ಏನು ಅನ್ನೋದು ಈಗ ಎಲ್ಲರ ಕುತೂಹಲ!

‘ಈಗ ನಾವು ಮೂವರು’; ಮದುವೆ ಆದ ಒಂದೇ ತಿಂಗಳಿಗೆ ಗುಡ್‌ ನ್ಯೂಸ್‌ ಕೊಟ್ರಾ ರಶ್ಮಿಕಾ?

ಟಾಲಿವುಡ್‌ನ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಡೆದ ಅವರ ಅದ್ದೂರಿ ಮದುವೆ ದೇಶದಾದ್ಯಂತ ಟ್ರೆಂಡ್ ಆಗಿದ್ದರೆ, ಈಗ ಒಂದು ಸಣ್ಣ ಇನ್‌ಸ್ಟಾಗ್ರಾಮ್ ಪೋಸ್ಟ್ ದೊಡ್ಡ ಚರ್ಚೆಗೆ ಕಾರಣವಾಗಿದೆ.

ರಶ್ಮಿಕಾ ತಮ್ಮ ಖಾತೆಯಲ್ಲಿ ಹಂಚಿಕೊಂಡಿರುವ ಗ್ರಾಫಿಕ್ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಜೋಡಿಯನ್ನು ಹೋಲುವ ಪಾತ್ರಗಳು ಕಾಣಿಸಿಕೊಂಡು, ಹಳದಿ ಹೂವಿನ ಸುತ್ತಲೂ ನಡೆಯುವ ಸುಂದರ ಕ್ಷಣಗಳನ್ನು ತೋರಿಸಲಾಗಿದೆ. ಎಲ್ಲವೂ ಸಂತೋಷಭರಿತವಾಗಿ ಮೂಡಿಬಂದಿದೆ.

ಆದರೆ, ಈ ವಿಡಿಯೋಗೆ ಅವರು ನೀಡಿರುವ ಕ್ಯಾಪ್ಷನ್ — “ಈಗ ನಾವು ಮೂವರು” — ಅಭಿಮಾನಿಗಳಲ್ಲಿ ಶಾಕ್ ಮೂಡಿಸಿದೆ. ಇದರಿಂದಾಗಿ, ರಶ್ಮಿಕಾ ಗರ್ಭಿಣಿಯಾಗಿದ್ದಾರೆಯೇ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದೆ.

ಕುತೂಹಲಕರ ವಿಷಯವೆಂದರೆ, ವಿಡಿಯೋದಲ್ಲಿಯೂ ಅಥವಾ ಪೋಸ್ಟ್‌ನಲ್ಲಿ ಎಲ್ಲಿಯೂ ಈ ವಿಷಯವನ್ನು ಸ್ಪಷ್ಟವಾಗಿ ಹೇಳಿಲ್ಲ. ಇದೇ ಕಾರಣಕ್ಕೆ ಈ ಪೋಸ್ಟ್ ಸಸ್ಪೆನ್ಸ್ ಹೆಚ್ಚಿಸಿದೆ.

ಇನ್ನೊಂದು ಟ್ವಿಸ್ಟ್ ಎಂದರೆ, ಈ ಪೋಸ್ಟ್‌ನಲ್ಲಿ ‘ಟೆರಿಬ್ಲಿ ಟೈನಿ ಪೋಸ್ಟ್’ ಖಾತೆಯನ್ನು ಟ್ಯಾಗ್ ಮಾಡಲಾಗಿದೆ. ಇದರಿಂದಾಗಿ ಇದು ಯಾವುದಾದರೂ ಬ್ರ್ಯಾಂಡ್ ಪ್ರಮೋಷನ್ ಅಥವಾ ಕ್ರಿಯೇಟಿವ್ ಕ್ಯಾಂಪೇನ್ ಆಗಿರಬಹುದು ಎನ್ನುವ ಅನುಮಾನವೂ ವ್ಯಕ್ತವಾಗಿದೆ.

ಅಂತಿಮ ಸತ್ಯ ಏನು ಎಂಬುದು ಇನ್ನೂ ತಿಳಿದಿಲ್ಲ. ಆದರೆ ಒಂದು ಸಣ್ಣ ಸಾಲು — “ಈಗ ನಾವು ಮೂವರು” — ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿಂದ ಒಟ್ಟು 272 ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು!

ಬೆಂಗಳೂರು: ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶ ಮೂಲದ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 272 ಜನರನ್ನು ಗಡಿಪಾರು ಮಾಡಲಾಗಿದೆ. ಗಡಿಪಾರು ಮಾಡಲ್ಪಟ್ಟವರಲ್ಲಿ 178 ಪುರುಷರು, 94 ಮಹಿಳೆಯರು ಹಾಗೂ 12 ಮಕ್ಕಳು ಸೇರಿದ್ದಾರೆ.

ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ದೇಶಾದ್ಯಂತ ನಡೆದ ಕಾರ್ಯಾಚರಣೆಯ ಭಾಗವಾಗಿ, ಬೆಂಗಳೂರಿನಲ್ಲಿ ನೆಲೆಸಿದ್ದ ಅಕ್ರಮ ವಲಸಿಗರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣದ ತನಿಖೆಯಲ್ಲಿ, ವಲಸಿಗರನ್ನು ಭಾರತಕ್ಕೆ ತರಲು ಕಾರ್ಯನಿರ್ವಹಿಸುತ್ತಿದ್ದ “ಟೇಕೆದಾರ್” ಎಂಬ ಮಧ್ಯವರ್ತಿಗಳ ಜಾಲ ಬಯಲಾಗಿದೆ. ಇವರು ಗಡಿದಾಟಿಸುವುದು ಹಾಗೂ ಕೆಲಸ ಒದಗಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿರುತ್ತಾರೆ.

ಮಾಹಿತಿಯ ಪ್ರಕಾರ, ಮೂವರು ಟೇಕೆದಾರ್ ರ ಸರಪಳಿಯ ಮೂಲಕ ವಲಸಿಗರನ್ನು ಭಾರತಕ್ಕೆ ತರಲಾಗುತ್ತಿತ್ತು. ಒಬ್ಬನು ಬಾಂಗ್ಲಾದೇಶದಿಂದ ಗಡಿಯವರೆಗೆ ಕರೆತರುತ್ತಿದ್ದರೆ, ಮತ್ತೊಬ್ಬನು ಗಡಿಯನ್ನು ದಾಟಿಸಿ ಒಳಗೆ ತರುತ್ತಿದ್ದ. ಮೂರನೇ ವ್ಯಕ್ತಿ ಭಾರತದಲ್ಲಿ ಉದ್ಯೋಗ ವ್ಯವಸ್ಥೆ ಮಾಡುತ್ತಿದ್ದ.

ಈ ಸಂಬಂಧ ಬೆಂಗಳೂರಿನಲ್ಲಿ ಇಬ್ಬರು ಮಧ್ಯವರ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಂಗ್ಲಾದೇಶ ಮೂಲದ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಗುರುತಿಸಲ್ಪಟ್ಟ ವಲಸಿಗರನ್ನು ತ್ರಿಪುರಾ ಗಡಿಯ ಮೂಲಕ ಗಡಿ ಭದ್ರತಾ ಪಡೆ ಸಹಾಯದಿಂದ ತಮ್ಮ ದೇಶಕ್ಕೆ ಹಿಂತಿರುಗಿಸಲಾಗಿದೆ.

50 ವರ್ಷದ ಓವರ್ ಟ್ಯಾಂಕ್ ಕುಸಿಯುವ ಭೀತಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದೇವನಹಳ್ಳಿ: ಗ್ರಾಮದಲ್ಲಿನ ಸುಮಾರು 50 ವರ್ಷಗಳ ಹಳೆಯ ಓವರ್ ಟ್ಯಾಂಕ್ ಕುಸಿಯುವ ಹಂತದಲ್ಲಿದ್ದು, ಸುತ್ತಮುತ್ತಲ ನಿವಾಸಿಗಳನ್ನು ಆತಂಕದಲ್ಲಿ ಮುಳುಗಿಸಿದೆ.

ಟ್ಯಾಂಕ್ ಕಟ್ಟಡದಲ್ಲಿ ದಿನನಿತ್ಯ ಬಿರುಕು ಬಿದ್ದಿದ್ದು, ಅದರಿಂದ ನೀರು ಲೀಕೇಜ್ ಆಗುತ್ತಿದೆ. ಪಕ್ಕದಲ್ಲೇ ವಿದ್ಯುತ್ ತಂತಿಗಳು ಹಾದು ಹೋಗಿದ್ದು, ಟ್ಯಾಂಕ್ ಬಳಿ ಅಂಗನವಾಡಿ ಕಾರ್ಯಾಲಯವಿರುವುದರಿಂದ ಮಕ್ಕಳ ಸುರಕ್ಷತೆ ಬಗ್ಗೆಯೂ ಆತಂಕ ಮೂಡಿಸಿದೆ.

ಅಪಾಯದಲ್ಲಿರುವ ಈ ಟ್ಯಾಂಕ್ ಮೂಲಕ ಪ್ರತಿದಿನವೂ ಸಾವಿರಾರು ಲೀಟರ್ ನೀರು ಸರಬರಾಜಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ PDO ಅವರಿಗೆ ಅನೇಕ ಸಲ ಮನವಿ ಮಾಡಿದರೂ, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದ ಜನಪ್ರತಿನಿಧಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ, ಇಲ್ಲದಿದ್ದರೆ ದೊಡ್ಡ ಅಪಾಯ ಸಂಭವಿಸಬಹುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು 3 ವರ್ಷದ ಗಂಡು ಚಿರತೆ ಸಾವು!

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಜರುಗಿದೆ.

ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ತಿಮ್ಮಲಾಪುರ ಗ್ರಾಮದ ಬಳಿ ಚಿರತೆಗೆ ವಾಹನ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಚಿಲಕನಹಟ್ಟಿ ಶಾಖೆಯ ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಚಿರತೆ ಸಾವನ್ನಪ್ಪಿರುವುದು ಗೊತ್ತಾಗಿದೆ.

ಘಟನೆ ಸಂಬಂಧ ಪ್ರಾದೇಶಿಕ ಅರಣ್ಯ ವಲಯದ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

error: Content is protected !!