Home Blog Page 3023

ವಿಜಯೇಂದ್ರನ ಕೈಯಿಂದ ಅಧಿಕಾರ ಡಿಸಿಗಳಿಗೆ ಹೋಗಲಿ!

ವಿಜಯಸಾಕ್ಷಿ ಸುದ್ದಿ, ಮೈಸೂರು

ಇನ್ನೂ 15 ದಿನ ಲಾಕ್ ಡೌನ್ ಮುಂದುವರೆಸಬೇಕು ಹಾಗೂ ಶ್ರಮಿಕ ವರ್ಗದವರಿಗೆ ತಲಾ ರೂ. 5 ಸಾವಿರ ಪರಿಹಾರ ಘೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ಮಾನಿಟರ್ ಮಾಡಲು ನಿಯೋಜಿಸಬೇಕು. ಪ್ರತಿ ಜಿಲ್ಲೆಗೂ ರೂ. 100 ಕೋಟಿ ಅನುದಾನ ನೀಡಬೇಕು. ಜಿಲ್ಲಾಧಿಕಾರಿಗಳಿಗೆ ಹಣ ನೀಡಿ ಬಳಕೆಯ ಸ್ವತಂತ್ರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಒಂದು ದಿನವೂ ಹಳ್ಳಿಯತ್ತ ತೆರಳಿಲ್ಲ. ಟಾಸ್ಕ್ ಪೋರ್ಸ್ ನವರು ಕೂಡ ಹಳ್ಳಿಯತ್ತ ಮುಖ ಮಾಡುತ್ತಿಲ್ಲ. ಹಳ್ಳಿಯಲ್ಲಿ ಸಾಯುತ್ತಿರುವವರು ಶ್ರಮಿಕರು, ಅಹಿಂದ ವರ್ಗದವರೇ ಹೆಚ್ಚು. ಕೂಡಲೇ ಮಾಂಸದ ಅಂಗಡಿಗಳನ್ನು ಮುಚ್ಚಬೇಕು. ಮಾಂಸದ ಅಂಗಡಿಯ ಮುಂದೆ ಪ್ರತಿ ದಿನವೂ ಜಾತ್ರೆ ಇರುತ್ತದೆ ಎಂದು ಮನವಿ ಮಾಡಿದ್ದಾರೆ.

ಪ್ರತಿ ಹಣದ ಬಿಲ್ ಕೂಡ ವಿಜಯೇಂದ್ರನ ಕಡೆಯಿಂದ ಕ್ಲಿಯರ್ ಆಗಬೇಕು. ಹಣದ ಬಿಡುಗಡೆಯ ಕೇಂದ್ರೀಕರಣ ಮೊದಲು ತಪ್ಪಬೇಕು. ಡಿಸಿಗಳಿಗೆ ಹಣ ಖರ್ಚು ಮಾಡುವ ಅಧಿಕಾರ ನೀಡಬೇಕು. ಸರಕಾರ ನಡೆಸುವವರು ಹೆಣದ ಮೇಲೆ ಹಣ ಮಾಡಲು ಹೋಗಬೇಡಿ ಎಂದು ಹೇಳಿದ್ದಾರೆ.

ಕೊರೊನಾ ಸಂಕಷ್ಟ 1250 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಹಾಮಾರಿಯ 2ನೇ ಅಲೆಯಿಂದ ಜನ ಕಂಗಾಲಾಗಿದ್ದಾರೆ. ಲಾಕ್ ಡೌನ್ ನಿಂದಾಗಿ ಬಡವರಿಗೆ ಸರ್ಕಾರ ಆಸರೆಯಾಗುವ ಪ್ರಯತ್ನ ಮಾಡುತ್ತಿದೆ. ಬಡವರು ಹಾಗೂ ಶ್ರಮಿಕ ವರ್ಗದ ಜನರಿಗೆ ಸಿಎಂ ಯಡಿಯೂರಪ್ಪ ಅವರು ರೂ. 1,250 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ ರೂ. 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ ರೂ. 10 ಸಾವಿರ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ.

ಆಟೋ, ಕ್ಯಾಬ್ ಚಾಲಕರಿಗೆ ರೂ. 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ ರೂ. 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತರಿಗೆ ರೂ. 2 ಸಾವಿರ, ರಸ್ತೆ ಬದಿ ವ್ಯಾಪಾರಿಗಳಿಗೆ ರೂ. 2 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ ರೂ. 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ ರೂ. 3 ಸಾವಿರ ಘೋಷಿಸಿದ್ದಾರೆ. ಅಲ್ಲದೇ, ಸಾಲ ಮರುಪಾವತಿಗೆ ಜುಲೈವರೆಗೆ ಅವಧಿ ವಿಸ್ತರಣೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ತಲೆಗೆ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ರೇಷನ್ ಕೊಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಸಾಲ ಮರುಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿಯನ್ನು ಸರ್ಕಾರವೇ ಭರಿಸಲಿದೆ. ಅಲ್ಲದೇ, ಲಾಕ್ ಡೌನ್ ಬಗ್ಗೆ ಮೇ. 23ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರತಿ ಪಂಚಾಯತಿಗೆ ಕೋವಿಡ್ ನಿರ್ವಹಣೆಗೆ ರೂ. 50 ಸಾವಿರ ಹಣ ನೀಡಲಾಗುವುದು. ಅಲ್ಲದೇ, ಲೈನ್ ಮ್ಯಾನ್, ಗ್ಯಾಸ್ ತಲುಪಿಸೋರು, ಶಿಕ್ಷಕರು ಫ್ರಂಟ್ ಲೈನ್ ವರ್ಕರ್ಸ್ ಎಂದು ಸರ್ಕಾರ ಘೋಷಿಸಿದೆ.

ಆತಂಕಕಾರಿ ಸುದ್ದಿ…ಸಾವಿನಲ್ಲಿ ದೆಹಲಿ ಹಿಂದಿಕ್ಕಿದ ಕರ್ನಾಟಕ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮಹಾಮಾರಿ 2ನೇ ಅಲೆ ಎಗ್ಗಿಲ್ಲದೆ ಸಾಗುತ್ತಿದೆ. ಹೀಗಾಗಿ ಸರ್ಕಾರ ಆರಂಭದಲ್ಲಿ ಕರ್ಫ್ಯೂ ಜಾರಿ ಮಾಡಿ, ತದನಂತರ ಲಾಕ್ ಡೌನ್ ಘೋಷಿಸಿದೆ. ಆದರೂ ಸೋಂಕು ತಹಬದಿಗೆ ಬರುತ್ತಿಲ್ಲ. ಗಮನಾರ್ಹ ಇಳಿಕೆ ಕಾಣುತ್ತಿಲ್ಲ. ಈ ನಡುವೆ ರಾಜ್ಯದಲ್ಲಿ ಮರಣ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕೇವಲ 17 ದಿನಗಳಲ್ಲಿಯೇ 6,790 ಜನ ಸೋಂಕಿಗೆ ಬಲಿಯಾಗಿದ್ದಾರೆ. ಮೊದಲ ಅಲೆಯಲ್ಲಿ ಹೆಚ್ಚಿನ ಸಾವು ಕಂಡಿದ್ದ ದೆಹಲಿಯನ್ನು ಸದ್ಯ ರಾಜ್ಯ ಹಿಂದಿಕ್ಕಿದೆ. ಹೀಗಾಗಿ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡುತ್ತಿದೆ.

ಅತೀ ಹೆಚ್ಚು ಸಾವು ಸಂಭವಿಸಿದ ರಾಜ್ಯಗಳ ಪಟ್ಟಿಯಲ್ಲಿ ರಾಜ್ಯ ಎರಡನೆಯ ಸ್ಥಾನದಲ್ಲಿದೆ. ಮೇ. 17ರ ವೇಳೆಗೆ ರಾಜ್ಯದಲ್ಲಿ ಒಟ್ಟು 22,313 ಕೋವಿಡ್ ಸಾವುಗಳು ವರದಿಯಾಗಿವೆ. ದೆಹಲಿಯಲ್ಲಿ 21,846 ಜನ ಪ್ರಾಣ ಕಳೆದುಕೊಂಡಿದ್ದಾರೆ. ಎರಡನೇ ಅಲೆಯ ಮೇ ತಿಂಗಳಲ್ಲಿಯೇ ರಾಜ್ಯದಲ್ಲಿ ಸಾವು ಹೆಚ್ಚಾಗಿವೆ.

ರಾಜ್ಯಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿದ್ದು, ಮಹಾರಾಷ್ಟ್ರದಲ್ಲಿ. ಆ ರಾಜ್ಯದಲ್ಲಿ 82 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದೆಹಲಿ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿಯೇ ದೇಶದಲ್ಲಿ ಇಲ್ಲಿಯವರೆಗೂ 2.8 ಲಕ್ಷ ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕ್ಷೀಣ…ಸಾವಿನಲ್ಲಿ ಹೆಚ್ಚು

ವಿಜಯಸಾಕ್ಷಿ ಸುದ್ದಿ, ನವದೆಹಲಿ

ದೇಶದಲ್ಲಿ ಮಹಾಮಾರಿಯ 2ನೇ ಅಲೆ ಇನ್ನೂ ಶಾಂತವಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ ತುಸು ಇಳಿಕೆ ಕಂಡಿದ್ದರೂ ಸಾವಿನಲ್ಲಿ ಏರಿಕೆಯಾಗಿದೆ. ಈ ಸಂದರ್ಭದಲ್ಲಿ ದೇಶದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿವೆ. 4529 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಸಾವನ್ನಪ್ಪಿದವರ ಸಂಖ್ಯೆ 2,83,248ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,89,851 ಜನ ಗುಣಮುಖರಾಗುವುದರೊಂದಿಗೆ ಇಲ್ಲಿಯವರೆಗೂ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,58,09,302 ಮಂದಿಗೆ ಲಸಿಕೆ ನೀಡಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಇನ್ನಿಲ್ಲ!

ವಿಜಯಸಾಕ್ಷಿ ಸುದ್ದಿ, ತುಮಕೂರು

ಎಸ್ಸೆಸ್ಸೆಲ್ಸಿ, ಪಿಯುಸಿ, ಪೊಲೀಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಕಿಂಗ್ ಪಿನ್ ಶಿವಕುಮಾರ್ ನನ್ನು ಮಹಾಮಾರಿ ಬಲಿ ಪಡೆದಿದೆ. ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆ ಕಾಗ್ಗೆರೆ ಮೂಲದ ಶಿವಕುಮಾರ್ (65) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಶಿವಕುಮಾರ್ ವಿರುದ್ಧ 2011ರಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಹಾಗೂ 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವಾಗಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ 2013ರಲ್ಲಿ ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ದೇವೇಂದ್ರ, ತುಮಕೂರಿನ ಗುಬ್ಬಿ ಮೂಲದ ಮಲ್ಲೇಶ್ ಎಂಬುವವರನ್ನು ಪೊಲೀಸರು ಬಂದಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಅವರು ಕಿಂಗ್ಪಿ ನ್ ಶಿವಕುಮಾರ್ ಎಂಬ ವಿಷಯ ಬೆಳಕಿಗೆ ಬಂದಿತ್ತು. ಹೀಗಾಗಿ ಬೆಂಗಳೂರು ಪೊಲೀಸರು ಆತನನ್ನು ಬಂಧಿಸಿದ್ದರು.
ಆನಂತರ ಹೊರಗೆ ಬಂದಿದ್ದ ಈ ವ್ಯಕ್ತಿ 2016ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಹಾಗೂ 2018ರಲ್ಲಿ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ. ಆನಂತರ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ, ಈಗ ಈ ವ್ಯಕ್ತಿಯನ್ನು ಮಹಾಮಾರಿ ಬಲಿ ಪಡೆದಿದೆ.

ಕೊರೊನಾ ವಾರಿಯರ್ಸ್ ಬಲಿ ಪಡೆದ ಮಹಾಮಾರಿ!

ವಿಜಯಸಾಕ್ಷಿ ಸುದ್ದಿ, ಮೈಸೂರು

ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್ ನ ಅಟ್ಟಹಾಸ ಶುರುವಾಗಿದೆ. ಸದ್ಯ ಮೊದಲ ಬಲಿಯನ್ನು ಕೂಡ ಈ ಫಂಗಸ್ ಪಡೆದಿದೆ. ಕೊರೊನಾ ವಾರಿಯರ್ಸ್ ಗಳನ್ನು ಬಲಿ ಪಡೆದಿದೆ. ಮಹಾನಗರ ಪಾಲಿಕೆಯ ಗುತ್ತಿಗೆ ನೌಕರ ವಿನೋದ್ ಹಾಗೂ ಕೋವಿಡ್ ಮೃತ ದೇಹ ಸಾಗಿಸುತ್ತಿದ್ದ ಆಂಬುಲೇನ್ಸ್ ಚಾಲಕ ರವಿ ಬಲಿಯಾಗಿದ್ದಾರೆ.

ಕಳೆದ ಹದಿನಾರು ದಿನಗಳ ಹಿಂದೆ ರವಿ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ನೊಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪಾಲಿಕೆ ನೌಕರ ವಿನೋದ್ ಅವರು ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂರು ದಿನಗಳ ಹಿಂದೆ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರನ್ನು ಸಾವನ್ನಪ್ಪಿದ್ದಾರೆ.

ರಾಜ್ಯದ ಜನರಿಗೆ ಸಿಕ್ಕ ಶುಭ ಸುದ್ದಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕೆಲವು ದಿನಗಳಿಂದ ಲಸಿಕೆಯ ಅಭಾವ ಸೃಷ್ಟಿಯಾಗಿತ್ತು. ಇದರಿಂದಾಗಿ ಸಾಕಷ್ಟು ಅವಾಂತಾರಗಳು ಉಂಟಾಗಿದ್ದವು. ಆದರೆ, ಸದ್ಯ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಲಸಿಕೆ ಕೊರತೆ ಎದುರಿಸುತ್ತಿರುವ ಕರ್ನಾಟಕಕ್ಕೆ ಕೊರೊನಾ ಲಸಿಕೆ ಪೂರೈಕೆ ಆಗಿದೆ. ರಾಜ್ಯ ಸರ್ಕಾರದ ನೇರ ಖರೀದಿ ಪ್ರಕ್ರಿಯೆಯಿಂದಾಗಿ 2 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆ ರಾಜ್ಯಕ್ಕೆ ಬಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ರಾಜ್ಯದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ದೇಶದ 25 ನಗರಗಳಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಸುವುದಾಗಿ ಭಾರತ್ ಬಯೋಟೆಕ್ ಸಂಸ್ಥೆ ಒಪ್ಪಿಗೆ ಸೂಚಿಸಿದೆ. ಸದ್ಯ ರಾಜ್ಯದಲ್ಲಿ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಬಂದಿರುವುದರಿಂದಾಗಿ ಜನ ನೆಮ್ಮದಿಯಿಂದ ಉಸಿರಾಡುತ್ತಿದ್ದಾರೆ.

ಈ ಲಸಿಕೆಗಳನ್ನು ಆನಂದರಾವ್ ವೃತ್ತದ ಉಗ್ರಾಣದಲ್ಲಿ ಸಂಗ್ರಹ ಮಾಡಲಾಗುತ್ತಿದೆ. ಎರಡನೇ ಡೋಸ್ ಲಸಿಕೆ ಪಡೆಯಲು ಜನರು ಕಾಯುತ್ತಿದ್ದು, ಸದ್ಯ 2 ಲಕ್ಷ ಡೋಸ್ ಪೂರೈಕೆ ಆಗಿರುವುದರಿಂದ ಪರಿಸ್ಥಿತಿ ನಿಭಾಯಿಸುವುದು ಕೊಂಚ ಸುಲಭವಾಗಲಿದೆ.

ಲಸಿಕೆಯ ವಿವರದ ಜತೆಗೆ ಕೊವಿನ್ ಪೋರ್ಟಲ್ ನಲ್ಲಿ ಯಾವ ಕೇಂದ್ರಗಳಲ್ಲಿ ಉಚಿತ ಲಸಿಕೆ ಲಭ್ಯವಿದೆ ಹಾಗೂ ಯಾವ ಕೇಂದ್ರದಲ್ಲಿ ಹಣಕೊಟ್ಟು ಲಸಿಕೆ ಪಡೆಯಬೇಕು ಎಂಬ ವಿವರವೂ ಸಿಗಲಿದೆ.

ಹತೋಟಿಗೆ ಬಾರದ ಕೊರೊನಾ – ರಾಜ್ಯದಲ್ಲಿ ಮತ್ತೆ ಮುಂದುವರೆಯುವುದೇ ಲಾಕ್ ಡೌನ್?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದೆ. ಆರಂಭದಲ್ಲಿ ಸರ್ಕಾರ ಕರ್ಫ್ಯೂ ಜಾರಿಗೊಳಿಸಿತ್ತು. ಇದಕ್ಕೆ ಕೊರೊನಾ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿತ್ತು. ಆದರೂ ಮಹಾಮಾರಿ ಹತೋಟಿಗೆ ಬರುತ್ತಿಲ್ಲ. ಹೀಗಾಗಿ ಮತ್ತೆ ಲಾಕ್ ಡೌನ್ ಮುಂದುವರೆಯಲಿದೆ ಎನ್ನಲಾಗುತ್ತಿದೆ.

ಸಿಎಂ ಯಡಿಯೂರಪ್ಪ ಅವರು ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಏಕೆಂದರೆ ಸಿಎಂ ಅವರು ಇಂದು ಬೆಳಿಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಭೆಯಲ್ಲಿ ಲಾಕ್‍ ಡೌನ್ ವಿಷಯದ ಬಗ್ಗೆಯೇ ಅವರು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸದ್ಯದ ಸ್ಥಿತಿಯಲ್ಲಂತೂ ಕೊರೊನಾ ಹತೋಟಿಗೆ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಅನಿವಾರ್ಯ. ಆದರೆ, ಲಾಕ್ ಡೌನ್ ಅನ್ನು ಎಷ್ಟು ದಿನಗಳಿಗೆ ವಿಸ್ತರಿಸುತ್ತಾರೆ ಎಂಬುವುದು ಮಾತ್ರ ಇನ್ನೂ ತಿಳಿದು ಬಂದಿಲ್ಲ. ಇನ್ನೂ 14 ದಿನಗಳ ಕಾಲವಾದರೂ ಕಠಿಣ ಲಾಕ್ ಡೌನ್ ಬೇಕು ಎಂದು ತಜ್ಞರು ಈಗಾಗಲೇ ಸಿಎಂ ಅವರಿಗೆ ಮನವರಿಕೆ ಮಾಡಿ ಕೊಟ್ಟಿದ್ದಾರೆ.

ಲಾಕ್‍ ಡೌನ್ ಮುಂದುವರೆಸಲು ಸಂಪುಟದ ಸಚಿವರು ಕೂಡ ಬೆಂಬಲ ಸೂಚಿಸಿದ್ದಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಲಾಕ್ ಡೌನ್ ಅನಿವಾರ್ಯ ಎಂದು ಸಿಎಂ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇರುವುದರಿಂದಾಗಿ ವಿಶೇಷ ಪ್ಯಾಕೇಜ್ ಘೋಷಣೆಯಾಗಬಹುದು ಎನ್ನಲಾಗುತ್ತಿದೆ. ರೂ. 500 ಕೋಟಿ ಮೌಲ್ಯದ ವಿಶೇಷ ಪ್ಯಾಕೇಜ್ ನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡುವ ಸಾಧ್ಯತೆ ಇದೆ. ನಿನ್ನೆ ಸಿಎಂ ಯಡಿಯೂರಪ್ಪ ಅವರು ಹಣಕಾಸು ಇಲಾಖೆಯ ಅಧಿಕಾರಿಗೊಳೊಂದಿಗೆ ಸಭೆ ನಡೆಸಿದ್ದಾರೆ. ಹೀಗಾಗಿಯೇ ಬಡವರಿಗೆ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿರೋಧ ಪಕ್ಷದ ನಾಯಕರು ಕೂಡ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಸರ್ಕಾರಕ್ಕೆ ಸಲಹೆ – ಸೂಚನೆ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಲಾಕ್ ಡೌನ್ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಒಂದು ತಿಂಗಳು ಕಾಲ ಲಾಕ್ ಡೌನ್ ಜಾರಿ ಮಾಡಿ ಎಂದು ಹೇಳಿದ್ದಾರೆ.

ಮತ್ತೊಮ್ಮೆ ಕೊರೊನಾ ರೋಗಿಗಳ ಪಾಲಿಗೆ ದೇವರಾದ ಶಾಸಕ ರೇಣುಕಾಚಾರ್ಯ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ರಾಜ್ಯದಲ್ಲಿ ಮಹಾಮಾರಿಯ ಎರಡನೇ ಅಲೆಯ ಕಾಟ ಶುರುವಾದಾಗಿನಿಂದ ಸಾವು – ನೋವುಗಳೇ ಹೆಚ್ಚಾಗುತ್ತಿವೆ. ಕೊರೊನಾದೊಂದಿಗೆ ರೂಂಪಾತರ ವೈರಸ್, ಬ್ಲ್ಯಾಕ್ ಫಂಗಸ್ ನಂತಹ ಬಾಧೆ ಜನರನ್ನು ಮತ್ತಷ್ಟು ನಿತ್ರಾಣಗೊಳಿಸುತ್ತಿವೆ. ಇದರೊಂದಿಗೆ ಆಕ್ಸಿಜನ್ ಕೊರತೆ, ಜನರ ಪ್ರಾಣವನ್ನೇ ಕಸಿದುಕೊಳ್ಳುತ್ತಿದೆ. ಈ ಮಧ್ಯೆ ಹಲವು ಜನನಾಯಕರು ಇದಕ್ಕೂ ನಮಗೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದರೆ, ಹಲವರು ಮಾತ್ರ ಹಗಲಿರುಳು ಜನ ಸೇವೆ ಮಾಡುತ್ತಿದ್ದಾರೆ. ಈ ಸಾಲಿಗೆ ಶಾಸಕ ರೇಣುಕಾರ್ಯ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದರೆ ಬಹುಶಃ ತಪ್ಪಾಗಲಾರದು.

ಇತ್ತೀಚೆಗಷ್ಟೇ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು, ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದಾಗ ಮಧ್ಯರಾತ್ರಿ ಧಾವಿಸಿ ತಮ್ಮದೇ ಕಾರಿನಲ್ಲಿ ಆಕ್ಸಿಜನ್ ಪೂರೈಕೆ ಮಾಡಿದ್ದರು. ಸದ್ಯ ಮತ್ತ ಇಂತಹ ಕೆಲಸ ಮಾಡಿರುವ ಅವರು ಸುಮಾರು 45 ಜನ ಕೊರೊನಾ ರೋಗಿಗಳ ಪ್ರಾಣ ರಕ್ಷಿಸಿದ್ದಾರೆ.

ಎಂ.ಪಿ.ರೇಣುಕಾಚಾರ್ಯ ಅವರ ಸಮಯಪ್ರಜ್ಞೆಯಿಂದಾಗಿ ಸುಮಾರು 45 ಜನರು ಬದುಕುಳಿದಿದ್ದಾರೆ. ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಮಧ್ಯರಾತ್ರಿ ತಮ್ಮ ಸ್ವಂತ ಖರ್ಚಿನಲ್ಲಿ 25 ಆಕ್ಸಿಜನ್ ಸಿಲಿಂಡರ್ ಗಳನ್ನು ಪೂರೈಕೆ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಕೂಡಲೇ ಎಚ್ಚೆತ್ತ ವೈದ್ಯರು ಮೆಡಿಕಲ್ ಆಕ್ಸಿಜನ್ ಕೊರತೆ ಬಗ್ಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಭದ್ರಾವತಿ, ಹರಿಹರದಿಂದ ಮೆಡಿಕಲ್ ಆಕ್ಸಿಜನ್ ತರಲು ವ್ಯವಸ್ಥೆ ಮಾಡಿದ್ದಾರೆ. ಈ ಆಸ್ಪತ್ರೆಯಲ್ಲಿ ಒಟ್ಟು 45 ಜನ ಆಕ್ಸಿಜನ್ ಬೆಡ್ ನಲ್ಲಿದ್ದ ಕಾರಣ ಅವರೆಲ್ಲರ ಪ್ರಾಣ ಉಳಿಸಿದ್ದಾರೆ.

ಈ ಹಿಂದೆ ರಾತ್ರೋರಾತ್ರಿ ತಮ್ಮ ವಾಹನದಲ್ಲಿಯೇ ಆಕ್ಸಿಜನ್ ತಂದು, 20 ಜನರ ಪ್ರಾಣ ರಕ್ಷಿಸಿದ್ದರು. ಈಗ ಮತ್ತೆ ಅಂತಹ ಕಾರ್ಯಕ್ಕೆ ಪಾತ್ರರಾಗಿದ್ದಾರೆ. ಹೀಗಾಗಿ ಎಲ್ಲರೂ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವೆಂಟಿಲೇಟರ್ ಬೆಡ್ ಕೊಡಿಸಿ ಎಂದು ಶಾಸಕರ ಮುಂದೆ ಗೋಳಾಡಿದ ಮಹಿಳೆ!

ವಿಜಯಸಾಕ್ಷಿ ಸುದ್ದಿ, ಗದಗ

ಪತಿಗೆ ವೆಂಟಿಲೇಟರ್ ಬೆಡ್ ಸಿಗದ ಕಾರಣಕ್ಕೆ ಮಹಿಳೆಯೊಬ್ಬರು ಶಾಸಕ ಕಳಕಪ್ಪ ಬಂಡಿ ಎದುರು ಕಣ್ಣೀರಿಟ್ಟು ಗೋಳಾಡಿದ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ರೋಣ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಈ ಘಟನೆ ನಡೆದಿದೆ. ಪತಿಗೆ ವೆಂಟಿಲೇಟರ್ ಬೆಡ್ ಕೊಡಿಸಿ, ಜೀವ ಉಳಿಸುವಂತೆ ಪತ್ನಿ ಕಣ್ಣೀರು ಹಾಕಿದ್ದಾರೆ. ರೋಣ ತಾಲೂಕು ಆಸ್ಪತ್ರೆಗೆ ಶಾಸಕ ಕಳಕಪ್ಪ ಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಹಿಳೆ ಕಣ್ಣೀರು ಹಾಕಿದ್ದಾರೆ.

ವೆಂಟಿಲೇಟರ್ ಬೆಡ್ ಕೊಡಿಸುವಂತೆ ಕಣ್ಣೀರು ಹಾಕಿ, ಕೈಮುಗಿದು ಸೋಂಕಿತನ ಕುಟುಂಬಸ್ಥರು ಬೇಡಿಕೊಂಡಿದ್ದಾರೆ. ಸೋಂಕಿತ ತೀವ್ರ ಉಸಿರಾಟದಿಂದ ಬಳಲುತ್ತಿದ್ದಾರೆ. ಹೀಗಾಗಿ ವೆಂಟಿಲೇಟರ್ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದರು. ಆದರೆ, ಜಿಲ್ಲೆಯಲ್ಲಿ ವೆಂಟಿಲೇಟರ್ ಬೆಡ್ ಫುಲ್ ಆಗಿವೆ. ಅಲ್ಲದೇ, ಜಿಮ್ಸ್ ಆಸ್ಪತ್ರೆಯಲ್ಲಿಯೂ ವೆಂಟಿಲೇಟರ್ ಬೆಡ್ ಭರ್ತಿಯಾಗಿವೆ.

ಹೀಗಾಗಿ ವೆಂಟಿಲೇಟರ್ ಬೆಡ್ ಇಲ್ಲದೆ ಈ ಕುಟುಂಬ ಪರದಾಡುತ್ತಿತ್ತು. ವೆಂಟಿಲೇಟರ್ ಬೆಡ್ ಸಿಗದ ಕಾರಣಕ್ಕೆ ನಿನ್ನೆ ಮೂವರು ಸೋಂಕಿತರು ಸಾವನ್ನಪ್ಪಿದ್ದರು.

error: Content is protected !!