Home Blog Page 3037

ನೂರಾರು ಕೆಜಿ ಅನ್ನ ಚಲ್ಲಿ ಮೌಢ್ಯ ಮೆರದ ಜನ!

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ರಾಜ್ಯದಲ್ಲಿ ಕೊರೊನಾ ತಾಂಡವಾಡುತ್ತಿದೆ. ಇಲ್ಲಯವರೆಗೆ ನಗರ ಪ್ರದೇಶಗಳಲ್ಲಿ ತನ್ನ ಅಟ್ಟಹಾಸ ಮೆರೆದಿದ್ದ. ಸೋಂಕು ಈಗ ಗ್ರಾಮೀಣ ಭಾಗದಲ್ಲಿ ಕೂಡ ತನ್ನ ಕಬಂಧಬಾಹು ಚಾಚುತ್ತಿದೆ. ಹೀಗಾಗಿ ಸರ್ಕಾರ ಕೊರೊನಾ ಕಟ್ಟಿ ಹಾಕಲು ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇದರ ಮಧ್ಯೆ ಜನರು ಮೌಢ್ಯದ ಮೊರೆ ಹೋಗುತ್ತಿದ್ದಾರೆ.

ಈಗಾಗಲೇ ಹಲವೆಡೆ ಜನರು ದೇವರಿಗೆ ಬಲಿ, ಪೂಜೆ, ಹೋಮ – ಹವನ ನಡೆಸುತ್ತಿದ್ದಾರೆ. ಹಲವೆಡೆ ಊರಿನ ನಾಲ್ಕು ದಿಕ್ಕುಗಳಿಗೂ ಮಂತ್ರಿಸಿದ ತೆಂಗಿನ ಕಾಯಿ ಕಟ್ಟಿದ್ದಾರೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಅನ್ನವನ್ನೇ ಮಣ್ಣುಪಾಲು ಮಾಡಿದ್ದಾರೆ.
ಜಲ್ಲೆಯ ಕಗ್ಗಲ್ಲು ಗ್ರಾಮದಲ್ಲಿ ಈ ರೀತಿಯ ಕಾರ್ಯ ನಡೆದಿದೆ. ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ನೂರಾರು ಕೆಜಿ ಅನ್ನವನ್ನು ಊರ ಹೊರಗೆ ಎಸೆದಿದ್ದಾರೆ. ಪ್ರತಿ ಮನೆಯಿಂದ ಐದು ಕೆಜಿ ಅಕ್ಕಿಯಿಂದ ಅನ್ನ ಮಾಡಿ ಸಂಗ್ರಹಿಸಿ ರಾತ್ರೋ ರಾತ್ರಿ ನೆಲಕ್ಕೆ ಸುರಿದಿದ್ದಾರೆ.

ಈ ರೀತಿಯಾಗಿ ಅನ್ನ ಎಸೆದರೆ ಸಾಂಕ್ರಾಮಿಕ ರೋಗ ಊರಿಗೆ ಬರುವುದಿಲ್ಲ ಎಂಬುವುದು ಗ್ರಾಮಸ್ಥರ ನಂಬಿಕೆಯಾಗಿದೆ. ಸಾಂಕ್ರಾಮಿಕ ರೋಗಗಳು ಬಂದ ಸಂದರ್ಭದಲ್ಲಿ ತಮ್ಮ ಹಿರಿಯರ ಕಾಲದಿಂದಲೂ ಈ ರೀತಿಯ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನ ಯಾವಾಗ? – ಕಾಂಗ್ರೆಸ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದರಲ್ಲಿರುವ ವ್ಯಕ್ತಿ ನಾನೇ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ಬಂಧನ ಯಾವಾಗ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಲೈಂಗಿಕ ಕ್ರಿಯೆ ನಡೆದಿರುವ ದೃಶ್ಯಾವಳಿಗಳನ್ನು ಹೊಂದಿರುವ ಸಿಡಿಯಲ್ಲಿ ಇರುವ ವ್ಯಕ್ತಿ ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ಬಂಧನ ಯಾವಾಗ ಎಂಬುವುದನ್ನು ಸರ್ಕಾರ ತಿಳಿಸಬೇಕಿದೆ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

‘ನಾನವನಲ್ಲ’ ಎಂದವರು ಈಗ ‘ನಾನೇ ಅವನು’ ಎನ್ನುತ್ತಿದ್ದಾರೆ. ಆ ಸಿಡಿ ಅಸಲಿ ಎಂದು ಹೇಳಿರುವ ರಮೇಶ್ ಜಾರಕಿಹೊಳಿ ಅವರು, ಸಿಡಿ ನಕಲಿ ಎಂದು ಹೇಳಿದ್ದೆ? ಎಸ್ ಐಟಿ ರಚನೆ ಮಾಡಿಸಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ಆರೋಪಿ ಒಪ್ಪಿಕೊಂಡಿದ್ದಾಯಿತು. ಇನ್ನಾದರೂ ಸಂತ್ರಸ್ತೆಯ ದೂರಿನ ಮೆರೆಗೆ ಬಂಧಿಸಿ ಕಾನೂನು ಪಾಲಿಸುವಿರಾ? ಇನ್ನಾದರೂ ನಿಮ್ಮ ಪ್ರಾಮಾಣಿಕತೆ ತೋರಿಸಿ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಡಿ ಲೇಡಿ ಕುಟುಂಬಸ್ಥರಿಗೆ ನೊಟೀಸ್ ನೀಡಿದ ಸಿಸಿಬಿ ಪೊಲೀಸರು!

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿಯ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದಾರೆ. ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನಲ್ಲಿ ತಿಳಿಸಿದ್ದಾರೆ.

ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸಿಡಿ ಯುವತಿಯ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಆ ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಹೀಗಾಗಿ ಜಿಲ್ಲೆಯ ನಿಡಗುಂದಿಯಲ್ಲಿರುವ ಯುವತಿ ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ.
ಮೇ. 21ರಂದು ಸಂತ್ರಸ್ತೆ ಕುಟುಂಬಸ್ಥರಿಗೆ ನೊಟೀಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯ್ ಕುಮಾರ್ ಅವರು ಯುವತಿ ಕುಟುಂಬಸ್ಥರಿಗೆ ನೀಡಿದ್ದಾರೆ. ಲಾಕ್ ಡೌನ್ ನಂತರ ವಿಚಾರಣೆಗೆ ಹಾಜರಾಗಬೇಕೆಂದು ನೊಟೀಸ್ ನಲ್ಲಿ ಸೂಚಿಸಲಾಗಿದೆ.

ಇತ್ತೀಚೆಗಷ್ಟೇ ರಮೇಶ್ ಜಾರಕಿಹೊಳಿ ಅವರು ಸಿಡಿಯಲ್ಲಿರುವವನು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.

ಹಳ್ಳಿಗಳಿಗೆ ನುಗ್ಗಿದ ಸೋಂಕು…ಸೋಂಕು ರಹಿತ ಕಾಯಿಲೆಗಳಿಂದ ಸಾಯುತ್ತಿರುವ ಜನ!

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಇಲ್ಲಿಯವರೆಗೆ ನಗರ ಪ್ರದೇಶದಲ್ಲಿ ತನ್ನ ಅಟ್ಟಹಾಸ ಮೆರೆದಿದ್ದ ಮಹಾಮಾರಿ, ಸದ್ಯ ಗ್ರಾಮೀಣ ಭಾಗಕ್ಕೆ ಎಗ್ಗಿಲ್ಲದೆ ಎಂಟ್ರಿ ಕೊಟ್ಟಿದೆ. ಆದರೆ, ಜನರು ಮಾತ್ರ ಆಸ್ಪತ್ರೆಗೆ ಹೋಗದೆ, ಸಾವು – ನೋವುಗಳನ್ನು ತಂದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಹಳ್ಳಿಗಳಲ್ಲಿ ಚಿತ್ರ – ವಿಚಿತ್ರ ಖಾಯಿಲೆಗಳು ಕಾಣಿಸಿಕೊಳ್ಳುತ್ತಿವೆ.

ಜಿಲ್ಲೆಯ ಗೋಕಾಕ್ ಹಾಗೂ ಮೂಡಲಗಿ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 20 ದಿನಗಳಲ್ಲಿ ಕೋವಿಡ್ ಹಾಗೂ ಇನ್ನಿತರ ರೋಗಗಳಿಂದ ಸುಮಾರು 700ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

ಮೂಡಲಗಿ ತಾಲೂಕಿನ ಮುನ್ಯಾಳ, ವಡ್ಡೆರಹಟ್ಟಿ, ರಾಜಾಪುರ, ತುಕ್ಕಾನಟ್ಟಿ ಗ್ರಾಮಗಳಲ್ಲಿಯೇ ಕೇವಲ 15 ದಿನಗಳಲ್ಲಿ ಸುಮಾರು 186 ಜನರು ಸಾವನ್ನಪ್ಪಿದ್ದಾರೆ. ಸರಣಿ ಸಾವಿನಿಂದ ಜನ ಕಂಗಾಲಾಗಿದ್ದಾರೆ.

ಕೊರೊನಾ ಸೇರಿದಂತೆ ಇನ್ನಿತರ ರೋಗಗಳಿಂದ ಜನ ಬಳಲುತ್ತಿದ್ದರೂ ಆಸ್ಪತ್ರೆಗೆ ತೆರಳುತ್ತಿಲ್ಲ. ಹೀಗಾಗಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಲ್ಲದೇ, ಮನೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಘಟನೆಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮನ್ನೇಕೋಟೆ ಗ್ರಾಮದಲ್ಲಿ 25 ದಿನಗಳಲ್ಲಿ ಸುಮಾರು 15 ಜನ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ಕದಡಿ ಗ್ರಾಮದಲ್ಲಿ 10 ದಿನಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದ ಹಳ್ಳಿಗಳಲ್ಲಿನ ಜನ ತುಂಬಾ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಯಾಸ್ ಚಂಡಮಾರುತ – ರಾಜ್ಯದಲ್ಲಿ ಇರಲಿದೆ ಮಳೆರಾಯನ ಅಬ್ಬರ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಯಾಸ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದಿನಿಂದ ಮೇ. 29ರ ವರೆಗೆ ಮಳೆರಾಯನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಈಗ ಯಾಸ್ ಚಂಡಮಾರುತದ ಪರಿಣಾಮ ಬಂಗಾಳ ಕೊಲ್ಲಿಯಲ್ಲಿ ‌ಪ್ರಭಲ ಚಂಡಮಾರುತ ಕಾಣಿಸಿಕೊಂಡಿದೆ.

ಯಾಸ್ ಚಂಡಮಾರುತದಿಂದಾಗಿ ಮೇ. 26ರಂದು ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವ್ಯಾಪಕ ಹಾನಿ ಸಂಭವಿಸುವ ಸಾಧ್ಯತೆ ಇದೆ. ಅಪ್ಪಳಿಸುವ ಸಮಯದಲ್ಲಿ, ಗಾಳಿಯ ವೇಗವು 155 ಕಿ.ಮೀ ನಿಂದ 185 ಕಿ.ಮೀ ವೇಗದಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ರೈತರಿಂದ ಕರಾಳ ದಿನ ಆಚರಣೆ!

ವಿಜಯಸಾಕ್ಷಿ ಸುದ್ದಿ, ಮೈಸೂರು

ರಾಜ್ಯದಲ್ಲಿ ರೈತರ ಹೋರಾಟಕ್ಕೆ ಮತ್ತೆ ಜೀವ ಬಂದಂತಾಗಿದೆ. ಮೇ. 26ರಂದು ರಾಜ್ಯಾದ್ಯಂತ ಕರಾಳ ದಿನಾಚರಣೆಗೆ ಕರೆ ನೀಡಲಾಗಿದೆ. ಈ ಕುರಿತು ಜಿಲ್ಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ರೈತರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಕರಾಳ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ.

ಕರಾಳ ದಿನಾಚರಣೆಯ ಹಿನ್ನೆಲೆಯಲ್ಲಿ ಮೇ. 26ರಂದು ಪ್ರತಿಯೊಬ್ಬರ ರೈತರ ಮನೆಯ ಮೇಲೆ ಕಪ್ಪು ಬಾವುಟ ಹಾರಿಸಬೇಕು. ಅಲ್ಲದೇ, ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ, ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಅಲ್ಲದೇ, ಪ್ರತಿಕೃತಿ ದಹನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು 7 ವರ್ಷಗಳೇ ಕಳೆದಿವೆ. ಆದರೆ, ಇಂತಹ ಕೆಟ್ಟ ಹಾಗೂ ದುಷ್ಟ ಸರ್ಕಾರವನ್ನೇ ಇಲ್ಲಿಯವರೆಗೆ ರೈತ ಸಂಕುಲ ಕಂಡಿಲ್ಲ. ಈ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದು ಅವರು ಕಿಡಿಕಾರಿದ್ದಾರೆ.

ಮುಂದುವರಿದ ಶುಭಸುದ್ದಿ, ಗುಣಮುಖರ ಸಂಖ್ಯೆಯಲ್ಲಿ ಗಣನೀಯ ಏರಿಕೆ, ನಾಲ್ವರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಸೋಂಕು ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗುತ್ತಿದೆ. ನಿನ್ನೆಯಿಂದ ಎರಡು ನೂರರ ಗಡಿ ದಾಟಿದ್ದ ಸೋಂಕಿನ ಸಂಖ್ಯೆ, ಇವತ್ತು ಕೂಡ ಎರಡು ನೂರರ ಗಡಿ ದಾಟಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಹೆಚ್ಚು.

ಇಂದಿನ 259 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 21665 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -93, ಮುಂಡರಗಿ-27, ನರಗುಂದ-31, ರೋಣ-24, ಶಿರಹಟ್ಟಿ-70, ಹೊರಜಿಲ್ಲೆಯ-14 ಸೇರಿದಂತೆ 259 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 222 ಕ್ಕೇರಿದೆ.

ಗದಗ ತಾಲೂಕಿನ ಕಳಸಾಪೂರ ನಿವಾಸಿ
75 ವರ್ಷದ ವ್ಯಕ್ತಿ ಮೇ-14 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 23 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 62 ವರ್ಷದ ವ್ಯಕ್ತಿ ಮೇ -12 ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 24 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಕಳಸಾಪೂರ ನಿವಾಸಿ 68 ವರ್ಷದ ವ್ಯಕ್ತಿ ಮೇ 14 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 24 ರಂದು ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಾಳ ನಿವಾಸಿ 40 ವರ್ಷದ ವ್ಯಕ್ತಿ ಮೇ 16 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 24 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಕೂಡ ದಾಖಲೆಯ 447 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 18388 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 3055 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಚಂದನವನದ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ ಇನ್ನಿಲ್ಲ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಂಗಭೂಮಿ, ಸಿನಿಮಾ ಹಾಗೂ ಧಾರಾವಾಹಿಯ ಹಿರಿಯ ಕಲಾವಿದ ಬಿ.ಎಂ. ಕೃಷ್ಣೇಗೌಡ(80) ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೃಷ್ಣೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ಸೋಂಕಿನಿಂದ ಗುಣಮುಕರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗಿನ ಜಾವ 4.15ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರನ್ನು ಸಾವನ್ನಪ್ಪಿದ್ದಾರೆ. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ತಿಂಗಳು ಕೃಷ್ಣೇಗೌಡರ ಪುತ್ರ ಸತೀಶ್ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.

ಮುಖ್ಯಮಂತ್ರಿ ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿ ಅಭಿನಯಿಸುವ ಮೂಲಕ ಕೃಷ್ಣೇ ಗೌಡ ಅವರು ಖ್ಯಾತಿ ಪಡೆದಿದ್ದರು. ಕನ್ನಡ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರು.
ಹಿರಿಯ ಕಲಾವಿದರನ್ನು ಕಳೆದುಕೊಂಡ ಚಂದನವನ ತಬ್ಬಲಿಯಾದಂತಾಗಿದೆ. ಹೀಗಾಗಿ ಹಲವು ನಟ – ನಟಿಯರು ಇವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ನಟಿಯ ಮನೆಗೆ ನುಗ್ಗಿ ಚಾಕುವಿನಿಂದ ತಂದೆಗೆ ಇರಿದ ದುಷ್ಕರ್ಮಿ!

ವಿಜಯಸಾಕ್ಷಿ ಸುದ್ದಿ, ಪುಣೆ

ಮರಾಠಿ ನಟಿ ಸೋನಾಲಿ ಕುಲಕರ್ಣಿ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿ ಅವರ ತಂದೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಹಾರಾಷ್ಟ್ರದ ಪುಣೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಟಿ ಸೋನಾಲಿ ಕುಲಕರ್ಣಿ ಅವರ ಅಪಾರ್ಟ್ ಮೆಂಟ್ ನಲ್ಲಿ ದರೋಡೆ ಮಾಡಲು ಆ ದುಷ್ಕರ್ಮಿ ಯತ್ನಿಸಿದ್ದಾನೆ. ಅಪಾರ್ಟ್ ಮೆಂಟ್ ನ ಮೇಲ್ಛಾವಣಿ ಮೂಲಕ ಆತ ಮನೆಯೊಳಗೆ ನುಗ್ಗಿದ್ದಾನೆ.
ಇದನ್ನು ಗಮನಿಸಿದ ನಟಿಯ ತಂದೆ ಆ ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ದುಷ್ಕರ್ಮಿ ಚಾಕುವಿನಿದಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ನಟಿಯ ತಂದೆಗೆ ಗಾಯಗಳಾಗಿವೆ. ಮನೆಯವರ ಕೂಗಾಟ ಕಂಡು ಅಕ್ಕಪಕ್ಕದವರು ಓಡಿ ಬಂದು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನನ್ನು 28 ವರ್ಷದ ಅಜಯ್ ಶೆಗ್ಟೆ ಎಂದು ಗುರುತಿಸಲಾಗಿದೆ.
ಆದರೆ, ಈ ವ್ಯಕ್ತಿ ನಾನು ಸೋನಾಲಿ ಅವರ ಅಭಿಮಾನಿ ಎಂದು ಹೇಳಿದ್ದಾನೆ.

ವಿಜಯಸಾಕ್ಷಿ ಇಂಪ್ಯಾಕ್ಟ್; ಬಂಡಿ ಸಿಟ್ಟಿಗೆ ಸಸ್ಪೆಂಡ್ ಆಗಿದ್ದ ಎಎಸ್ಐ ಕರ್ತವ್ಯಕ್ಕೆ ಹಾಜರ್

ವಿಜಯಸಾಕ್ಷಿ ಸುದ್ದಿ, ಗದಗ

ಬಿಜೆಪಿ ಕಾರ್ಯಕರ್ತನ ಬೈಕ್ ತಡೆದಿದ್ದಕ್ಕೆ ಅಮಾನತಾಗಿದ್ದ ಬೆಟಗೇರಿ ಠಾಣೆಯ ಮಹಿಳಾ‌ ಎಎಸ್ಐ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಮೇ 17ರಂದು ಬೆಟಗೇರಿಯ ಟಿಂಗಿನಕಾಯಿ ಬಜಾರ್‌ನಲ್ಲಿ ಲಾಕ್ ಡೌನ್ ಇದ್ದರೂ ಬೈಕ್‌ನಲ್ಲಿ ಬಂದಿದ್ದ ಅಬ್ಬಿಗೇರಿ ಗ್ರಾಮದ ಬಿಜೆಪಿ ಕಾರ್ಯಕರ್ತನನ್ನು ಕರ್ತವ್ಯದಲ್ಲಿ ಇದ್ದ ಮಹಿಳಾ ಎಎಸ್ಐ ಎನ್.ಸಿ. ಮೂಲಿಮನಿ ತಡೆದಿದ್ದರು.

ಬೈಕ್ ತಡೆದಿದ್ದೇ ದೊಡ್ಡ ಅಪರಾಧ ಎಂಬಂತೆ ಬಡಪಾಯಿ ಮಹಿಳಾ ಎಎಸ್ಐ ಮೇ 18ರಂದು ಅಮಾನತಾಗಿದ್ದರು. ತಾನಾಯಿತು, ತಮ್ಮ ಕರ್ತವ್ಯವಾಯಿತು ಎಂದು ಯಾರ ಮುಲಾಜಿಗೂ ಬಗ್ಗದೆ ಇಡೀ ಠಾಣೆಯ ಸಿಬ್ಬಂದಿಗೆ ಅಚ್ಚುಮೆಚ್ಚಿನವರಾಗಿದ್ದ‌ ಮೂಲಿಮನಿ‌ ಅವರನ್ನು ಅಮಾನತು ಮಾಡಿರುವುದರಿಂದ ಅನೇಕ ಪೊಲೀಸರು, ಅಧಿಕಾರಿಗಳಿಗೆ ದಿಗ್ಬ್ರಮೆ ಆಗಿತ್ತು. ಸೀದಾ ಸಾದಾ ನೌಕರಿ ಮಾಡೋರಿಗೆ ಈ ರೀತಿ ಆದ್ರೆ ನಮ್ಮಂಥವರ ಪರಿಸ್ಥಿತಿ ಹೇಗೆ ಎಂದು ಆತಂಕಕ್ಕೆ ಒಳಗಾಗಿದ್ದರು.

ಇದನ್ನೂ ಓದಿ ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್; ಶಾಸಕರೇ ಇದು ಸರೀನಾ?

`ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್, ಶಾಸಕರೇ ಇದು ಸರೀನಾ?’ ಎಂಬ ಶಿರೋನಾಮೆಯಲ್ಲಿ ವಿಜಯಸಾಕ್ಷಿ ವೆಬ್ ಪೋರ್ಟಲ್ ನಲ್ಲಿ ಮೇ-21 ರ ಮುಂಜಾನೆ 9 ಗಂಟಿಗೆ ಸುದ್ದಿ ಬಿತ್ತರಿಸಲಾಗಿತ್ತು. ಇದನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಮೇ 21ರ ಮುಂಜಾನೆ 11 ಗಂಟೆ ಸುಮಾರಿಗೆ ಸಸ್ಪೆಂಡ್ ಆಗಿದ್ದ ಮಹಿಳಾ‌ ಎಎಸ್ಐ ಎನ್ ಸಿ ಮೂಲಿಮನಿ ಅವರಿಂದ ಅಮಾನತು ಆದೇಶ ಹಿಂಪಡೆಯಲು ಮನವಿ ಸ್ವೀಕರಿಸಿದ್ದರು.

ಸೌಮ್ಯ ಸ್ವಭಾವದ ಎಸ್ಪಿ ಯತೀಶ್ ಎನ್. ಅವರು ವಿಚಾರಣೆಯನ್ನು ಬಾಕಿ ಇರಿಸಿ ಅಮಾನತು ಆದೇಶ ರದ್ದು ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೋಮವಾರ ಮೇ 24ರಂದು‌‌ ಆದೇಶ ಹೊರಡಿಸಿದ್ದಾರೆ.

error: Content is protected !!