Home Blog Page 3039

ಗದಗ ಜಿಲ್ಲೆಗೆ ವಕ್ಕರಿಸಿದ ಕೊರೊನಾ; ಒಂದೇ ದಿನ ದಾಖಲೆಯ 341 ಜನರಿಗೆ ಸೋಂಕು, ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 08 ಶನಿವಾರ ಗದಗ ಜಿಲ್ಲೆಗೆ ವಕ್ರದೃಷ್ಟಿ ಬಿದ್ದಿದೆ. ಇದೇ ಮೊದಲ ಬಾರಿಗೆ ಒಂದೇ ದಿನ 341 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಶನಿವಾರದ ವರದಿಯಂತೆ ಕೋವಿಡ್ ನಿಂದ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ.

ಇಂದಿನ 341 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 14376 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -199, ಮುಂಡರಗಿ-46, ನರಗುಂದ-15, ರೋಣ-28, ಶಿರಹಟ್ಟಿ-32, ಹೊರಜಿಲ್ಲೆಯ-21 ಸೇರಿದಂತೆ 341 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ.

ಗದಗ ನಗರದ 47 ವರ್ಷದ ವ್ಯಕ್ತಿ ಮೇ 03 ರಂದು ಶ್ವಾಸಕೋಶ ತೊಂದರೆಯಿಂದಾಗಿ ಜಿಮ್ಸ್ ಗೆ ದಾಖಲಾಗಿದ್ದರು. ಕೋವಿಡ್ ಕಾರಣದಿಂದ ಮೇ 05 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಇನ್ನೊಬ್ಬರು ಧಾರವಾಡ ಜಿಲ್ಲೆಯ ನಾಯ್ಕನೂರು ನಿವಾಸಿ 80 ವರ್ಷದ ವೃದ್ಧೆ ಮೇ 6 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಕೋವಿಡ್ ಕಾರಣದಿಂದ ಹೃದಯಘಾತವಾಗಿ ಮೇ 7 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.
ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
154 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 180 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12989 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1232 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 189 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರಸ್ತೆಯಲ್ಲಿ ಅನಗತ್ಯವಾಗಿ ವಾಹನ ಓಡಿಸಿದರೆ ಕಠಿಣ ಕ್ರಮ; ಎಸ್ಪಿ ಯತೀಶ್ ಖಡಕ್ ಎಚ್ಚರಿಕೆ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಎರಡನೇ ಅಲೆ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸುವುದು ಕಡ್ಡಾಯ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಮೇ 10ರ ಬೆಳಗ್ಗೆ 6 ರಿಂದ ಮೇ 24ರ ಬೆಳಗಿನ 6ರ ವರೆಗೆ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ಸರಪಳಿ ತುಂಡರಿಸಲು ಸರ್ಕಾರದಿಂದ ಜಾರಿಗೊಳಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ಎಲ್ಲ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಆಯಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ, ಪಿಕ್ಸ್ ಪಾಯಿಂಟ್ ಗಳಲ್ಲಿ ಸೂಕ್ತ ಬಂದೋಬಸ್ತ್ ನಿಯೋಜಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಉಪಯೋಗ ಮಾಡಿಕೊಂಡು ವೈರಸ್ ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕಿದೆ. ತುರ್ತು ಸಂದರ್ಭ ಹೊರತುಪಡಿಸಿ ಸಾರ್ವಜನಿಕರು ವಿನಾಕಾರಣ ವಾಹನಗಳನ್ನು ತೆಗೆದುಕೊಂಡು ರಸ್ತೆ ಸಂಚಾರ ಮಾಡಕೂಡದು. ಅನಗತ್ಯವಾಗಿ ರಸ್ತೆಯಲ್ಲಿ ಓಡಾಡದೇ ಸರ್ಕಾರ ನಿಗದಿಪಡಿಸಿದ ಅವಧಿಯಲ್ಲಿ ಮಾತ್ರ ಪಾದಚಾರಿಯಾಗಿ ಆಗಮಿಸಿ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಹೋಟೆಲ್ ಸಿಬ್ಬಂದಿಯವರೇ ಸಾರ್ವಜನಿಕ ಮನೆಗಳಿಗೆ ಉಪಹಾರ ತಲುಪಿಸಬಹುದಾಗಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆ ಹಾಗೂ ಅಂತರ ಜಿಲ್ಲೆ ವಾಹನ ಸಂಚಾರ ಸಂಪೂರ್ಣ ನಿಷೇಧಿಸಿದ್ದು, ಇಲಾಖೆ ವತಿಯಿಂದ ಯಾವುದೇ ಪಾಸ್‌ಗಳನ್ನು ವಿತರಿಸುತ್ತಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

ಆಸ್ಪತ್ರೆಯಿಂದ ತಪ್ಪಿಸಿಕೊಂಡು ಭತ್ತದ ಗದ್ದೆಯಲ್ಲಿ ಅವಿತುಕೊಂಡಿದ್ದ ಸೋಂಕಿತ

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ : ಇಲ್ಲೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಭತ್ತದ ಗದ್ದೆಯಲ್ಲಿ ಅವಿತು ಕುಳಿತಿದ್ದ ಘಟನೆ ನಡೆದಿದೆ.

ಇಲ್ಲಿಯ ಗಾಂಧಿ ಬಜಾರ್ ನ ನಿವಾಸಿ 48 ವರ್ಷದ ವ್ಯಕ್ತಿಗೆ ಸೋಂಕು ಅಂಟಿಕೊಂಡಿತ್ತು. ಹೀಗಾಗಿ ಆ ವ್ಯಕ್ತಿಯನ್ನು ಕುಟುಂಬಸ್ಥರು ಎನ್.ಎಚ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಪಡೆಯುತ್ತಿದ್ದ ಈ ವ್ಯಕ್ತಿ ಆಸ್ಪತ್ರೆ ಸಿಬ್ಬಂದಿ ಯಾಮಾರಿಸಿ ನಾಪತ್ತೆಯಾಗಿದ್ದಾನೆ. ಆಸ್ಪತ್ರೆಯಿಂದ ತಪ್ಪಿಸಿಕೊಂಡು ಭತ್ತದ ಗದ್ದೆಯಲ್ಲಿ ಅವಿತ ಈ ಸೋಂಕಿತನನ್ನು ಸಾಕಷ್ಟು ಕಷ್ಟ ಪಟ್ಟು ಆಸ್ಪತ್ರೆಯ ಸಿಬ್ಬಂದಿ ಹುಡುಕಿದ್ದಾರೆ.

ಸೋಂಕಿತ ನಾಪತ್ತೆಯಾಗುತ್ತಿದ್ದಂತೆ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು. ಆ ನಂತರ ಹುಡುಕಾಟ ನಡೆಸಿದ್ದಾರೆ. ಆತ ಎಲ್ಲಿಯೂ ಪತ್ತೆಯಾಗದ ಕಾರಣ ಆಸ್ಪತ್ರೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭತ್ತದ ಗದ್ದೆಯ ಕೆಡೆಗೆ ತೆರಳಿದ್ದು ತಿಲಿದಿದೆ. ಹೀಗಾಗಿ ಅತ್ತ ಸಿಬ್ಬಂದಿ ತೆರಳಿ ಹುಡುಕಾಟ ನಡೆಸಿದ್ದಾರೆ. ಪತ್ತೆಯಾದ ಸೋಂಕಿತನನ್ನು ಸಿಬ್ಬಂದಿ ಮತ್ತೆ ಆಸ್ಪತ್ರೆಗೆ ಕರೆ ತಂದಿದ್ದಾರೆ.

ಸುಧಾಕರ್ ವಿರುದ್ಧ ಗುಡುಗಿದ ರೇಣುಕಾಚಾರ್ಯ!

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ನೀವು ಉತ್ತಮ ಕೆಲಸಗಳನ್ನು ಮಾಡಿದ್ದರೆ ನಿಮ್ಮ ಜವಾಬ್ದಾರಿಗಳನ್ನು ಏಕೆ ಬೇರೆಯವರಿಗೆ ಹಂಚಿಕೆ ಮಾಡುತ್ತಿದ್ದಿವಿ ಎಂದು ಶಾಸಕ ರೇಣುಕಾಚಾರ್ಯ ಅವರು ಸಚಿವ ಸುಧಾಕರ್ ವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರುಗಳು ತಾವು ಕೆಲಸ ಮಾಡುತ್ತಿದ್ದೇವೋ ಅಥವಾ ಇಲ್ಲವೋ ಎಂಬುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾರಿಗೆ ಯಾವ ಜವಾಬ್ದಾರಿ ಇದೆ ಎಂದು ನಾವಾಗಲಿ ಅಥವಾ ಸಿಎಂ ಆಗಲಿ ಹೇಳುವುದಲ್ಲ. ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ಪಕ್ಷದ ಸಚಿವರ ವಿರುದ್ಧವೇ ಗುಡುಗಿದ್ದಾರೆ.

ಸಿಎಂ ಅವರು ಹಗಲು – ರಾತ್ರಿ ತಮ್ಮ ಇಳಿಯ ವಯಸ್ಸಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಸಚಿವರು ಸರ್ಕಾರ ಹಾಗೂ ಸಿಎಂ ಅವರಿಗೆ ಗೌರವ ಸಿಗುವಂತಹ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ವ್ಯಕ್ತಿಗೆ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸರಿಗೇ ಅವಾಜ್

ವಿಜಯಸಾಕ್ಷಿ ಸುದ್ದಿ, ಯಾದಗಿರಿ

ರಾಜ್ಯದಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರವು ಮೇ. 10ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಜನ ಮಾತ್ರ ಬೇಕಾಬಿಟ್ಟಿಯಾಗಿ ತಿರುಗಾಡುವುದು ತಪ್ಪುತ್ತಿಲ್ಲ.

ನಗರದಲ್ಲಿ ವ್ಯಕ್ತಿಯೊಬ್ಬ ಬೇಕಾಬಿಟ್ಟಿ ತಿರುಗಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬೈಕ್ ಸೀಜ್ ಮಾಡಿದ್ದಕ್ಕೆ ಶಾಸಕರ ಹೆಸರು ಹೇಳಿ, ಪಿಎಸ್‍ ಐಗೆ ನಡು ರಸ್ತೆಯಲ್ಲಿಯೇ ಅವಾಜ್ ಹಾಕಿದ್ದಾನೆ.

ಈ ಘಟನೆ ಇಲ್ಲಿಯ ಡಿಗ್ರಿ ಕಾಲೇಜು ವೃತ್ತದಲ್ಲಿ ನಡೆದಿದೆ. ಲಾಕ್ ಡೌನ್ ನಿಯಮ ಉಲ್ಲಂಘಸಿ ಸಂಚಾರ ಮಾಡುತ್ತಿದ್ದವರ ಬೈಕ್ ಗಳನ್ನು ಪೊಲೀಸ್ ಸಿಬ್ಬಂದಿ ಸೀಜ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಓರ್ವ ಬೈಕ್ ಸವಾರ, ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ಆದರೆ, ಇಷ್ಟಕ್ಕೆ ಸುಮ್ಮನಾಗದ ಬೈಕ್ ಸವಾರ, ಯಾದಗಿರಿ ಶಾಸಕರ ಹೆಸರು ಹೇಳಿ ಆವಾಜ್ ಹಾಕಿದ್ದಾನೆ. ಶಾಸಕರಿಗೆ ಹೇಳುತ್ತೇನೆ ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಈ ಸಂದರ್ಭದಲ್ಲಿ ಬೈಕ್ ಸವಾರರು ಪರಸ್ಪರ ಬೈದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೊರೊನಾ ನಿಯಂತ್ರಣ ದೊಡ್ಡ ವಿಷಯವಲ್ಲ – ರಮೇಶ್ ಜಾರಕಿಹೊಳಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಸರಿಯಾಗಿ ನಿಯಂತ್ರಣ ಮಾಡದಿರೆ ಕೊರೊನಾ ಮಹಾರೋಗವಲ್ಲ. ಅದನ್ನು ನಿಯಂತ್ರಣಕ್ಕೆ ತರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ.

ಜನರು ಗಂಭೀರ ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಇಲ್ಲದಿದ್ದರೆ ಮನೆಯಲ್ಲಿಯೇ ಐಸೊಲೇಟ್ ಆಗಿ ಇರಬೇಕು. ಯೋಗ, ಪ್ರಾಣಾಯಾಮ, ವ್ಯಾಯಾಮ, ಉತ್ತಮ ಆಹಾರ ಸೇವಿಸಿದರೆ ಸೋಂಕು ನಿಯಂತ್ರಣ ಮಾಡಬಹುದು. ವೈದ್ಯರ ಸಲಹೆ ಪಡೆದರೆ ಕೊರೊನಾ ನಿಯಂತ್ರಣಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಗೋಕಾಕ್ ತಹಸೀಲ್ದಾರ್ ಕಚೇರಿಯಲ್ಲಿ ಕೋವಿಡ್ ನಿರ್ವಹಣಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸಲು ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಸಿಡಿ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಅವರು ಸಭೆಗೆ ಹಾಜರಾಗಿದ್ದಾರೆ.

ಸದ್ಯ ರಾಜ್ಯದಲ್ಲಿ ಮಹಾಮಾರಿಯ ಅಲೆ ಜೋರಾಗಿದೆ. ಹೀಗಾಗಿ ಸಿಎಂ, ಸರ್ಕಾರದೊಂದಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಿ ಕೆಲಸ ಮಾಡಿ ಬೇಗನೆ ಮಹಾಮಾರಿ ತಡೆಗಟ್ಟಬಹುದು ಎಂದು ಹೇಳಿದ್ದಾರೆ.

ವೇಗದ ಬೌಲರ್ ಪ್ರಸಿದ್ಧ್ ಕೃಷ್ಣಗೆ ಬಿಗ್ ಶಾಕ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಭಾರತದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರಿಗೆ ಕೊರೊನಾ ಬೆನ್ನು ಬಿದ್ದಿದೆ.

ಪ್ರಸಿದ್ಧ್ ಕೃಷ್ಣ ಅವರು ಇಂಗ್ಲೆಂಡ್‍ ನಲ್ಲಿ ನಡೆಯುವ ಐಸಿಸಿ ಟೆಸ್ಟ್ ಚಾಂಪಿಯನ್‍ ಶಿಪ್ ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಇತ್ತೀಚೆಗೆ ಕೊರೊನಾದಿಂದ ರದ್ದಾಗಿದ್ದ ಐಪಿಎಲ್‍ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಪ್ರಸಿದ್ಧ್ ಕೃಷ್ಣ ಆಡುತ್ತಿದ್ದರು.

ಪ್ರಸಿದ್ಧ್ ಕೃಷ್ಣ ಅವರು ಐಪಿಎಲ್ ರದ್ದಾದ ಹಿನ್ನೆಲೆಯಲ್ಲಿ ನಗರದಲ್ಲಿನ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಕೊರೊನಾ ಟೆಸ್ಟ್ ಗೆ ಒಳಗಾಗಿದ್ದಾರೆ. ಈ ಮೊದಲು ಕೋಲ್ಕತ್ತಾ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಸೋಂಕು ತಗುಲಿತ್ತು. ಆ ನಂತರ ಬಿಸಿಸಿಐ ಐಪಿಎಲ್‍, ಟೂರ್ನಿಯನ್ನೇ ರದ್ದು ಮಾಡಿತ್ತು. ಹೀಗಾಗಿ ಎಲ್ಲ ಆಟಗಾರರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿದ್ದಾರೆ.

ಪ್ರಸಿದ್ಧ್ ಕೃಷ್ಣ ಅವರು 7 ಪಂದ್ಯಗಳಿಂದ 8 ವಿಕೆಟ್ ಕಬಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಪ್ರಸಿದ್ಧ್ ಕೃಷ್ಣ ಅವರು ಐಪಿಎಲ್ ನಲ್ಲಿ ನೀಡಿದ ಉತ್ತಮ ಪ್ರದರ್ಶನ ಕಂಡು ಬಿಸಿಸಿಐ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಿತ್ತು. ಸದ್ಯ ಕೊರೊನಾ ದೃಢ ಪಟ್ಟಿದೆ. ಜೂ. 18ರಂದು ಇಂಗ್ಲೆಂಡ್ ನಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಆರಂಭವಾಗಲಿದೆ.

ಅಭಿಮಾನಿಗಳಿಗೆ ಸಂದೇಶ ಸಾರಿದ ಕಿಚ್ಚ ಸುದೀಪ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಅನಾರೋಗ್ಯದಿಂದಾಗಿ 3 ವಾರದಿಂದ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಕಿಚ್ಚ ಸುದೀಪ್, ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಜನರ ಪರಿಸ್ಥಿತಿಯಲ್ಲಿ ಅಭಿಮಾನಿಗಳಿಗೆ ಜೀವನದ ಪಾಠ ಮಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರತಿ ದಿನವನ್ನು ನೀವು ಕಾಣುತ್ತಿದ್ದೀರಾ ಎಂದರೇ ಅದು ಆಶೀರ್ವಾದ. ಪ್ರತಿಕ್ಷಣ ನೀವು ಖುಷಿಯಾಗಿರುತ್ತೀರಾ ಎಂದರೆ ಅದು ನಿಮಗೆ ಸಿಕ್ಕ ದೊಡ್ಡ ಉಡುಗೊರೆ ಎನ್ನುವ ಮೂಲಕ ಪ್ರಸ್ತುತ ಸ್ಥಿತಿಯ ಬಗ್ಗೆ ನಟ ಕಿಚ್ಚ ಸುದೀಪ್ ಎರಡೇ ಅಕ್ಷರದಲ್ಲಿ ಬದುಕಿನ ಸತ್ಯ ತಿಳಿಸಿದ್ದಾರೆ.

ಪ್ರಕೃತಿ ಮತ್ತು ಜೀವನವನ್ನು ಯಾರು ಕೂಡ ನಿಯಂತ್ರಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಅಭಿಮಾನಿಗಳಿಗೆ ಜೀವನದ ಪಾಠ ತಿಳಿಸಿದ್ದಾರೆ. ಸದ್ಯದ ಪರಿಸ್ಥಿತಿ ಎಲ್ಲರಲ್ಲಿಯೂ ಆತಂಕ ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದಿನವನ್ನು ಸಂತೋಷದಿಂದ ಕಳೆಯಬೇಕು ಎಂದು ಸೋಷಿಯಲ್ ಮಿಡಿಯಾದಲ್ಲಿ ಕಿಚ್ಚ ಹೇಳಿದ್ದಾರೆ.

ನಟಿ ಕಂಗನಾ ದೇಹದಲ್ಲಿ ಕೊರೊನಾ ಪಾರ್ಟಿ ಮಾಡುತ್ತಿದೆಯಂತೆ!

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಸದಾ ವಿವಾದ್ಮಕ ಟ್ವಿಟ್ ಮಾಡಿ ಸುದ್ದಿಯಲ್ಲಿರುತ್ತಿದ್ದ ಕಂಗನಾ ಅವರ ಟ್ವೀಟರ್ ಖಾತೆಯನ್ನು ಇತ್ತಿಚೇಗಷ್ಟೇ ಅಮಾನತು ಮಾಡಲಾಗಿದೆ. ಇದೀಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.

ಸೆಲೆಬ್ರೆಟಿಸ್‌ ಗಳಿಗೂ ಕೊರೊನಾ ಸೋಂಕು ಬಿಡುತ್ತಿಲ್ಲ. ಇದೀಗ ಕಾಂಟ್ರವರ್ಸಿ ಕ್ವೀನ್ ಕಂಗನಾ ರಾಣಾವತ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ತಮ್ಮ ಇನ್‌ ಸ್ಟಾಗ್ರಾಂನಲ್ಲಿ ಶೇರ್ ಮಾಡಿರುವ ಅವರು, ಕೆಲವು ದಿನಗಳಿಂದ ಸುಸ್ತು ಹಾಗೂ ಕಣ್ಣು ಉರಿ ಕಾಣಿಸಿಕೊಂಡಿತ್ತು.

ಇನ್ನೂ ಇದೇ ಕಾರಣದಿಂದ ಹಿಮಾಚಲ ಪ್ರದೇಶದಲ್ಲಿರುವ ತಮ್ಮ ಮನೆಗೆ ಹೋಗುವುದಕ್ಕಾಗಿ ಕಂಗನಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಸದ್ಯ ಕೋವಿಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಮನೆಯಲ್ಲಿಯೇ ಕ್ವಾರೆಂಟೈನ್ ಆಗಿದ್ದಾರೆ. ಕೊರೋನಾ ವೈರಸ್ ನನ್ನ ದೇಹದಲ್ಲಿ ಪಾರ್ಟಿ ಮಾಡುತ್ತಿದೆ ಎಂದು ನನಗೆ ಗೊತ್ತಾಗಿಲ್ಲ. ಆದರೆ, ಇನ್ನು ಅದನ್ನು ನನ್ನ ದೇಹದಲ್ಲಿ ಇರಲು ಬಿಡುವುದಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

ಕೇವಲ 150 ರೂಪಾಯಿಯಲ್ಲಿ ಮದುವೆ ಮಾಡಿಕೊಂಡ ಜೋಡಿ!

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಸಾಮಾನ್ಯವಾಗಿ ಸ್ಟಾರ್ ನಟರ ಮದುವೆ ಎಂದರೆ ಅಲ್ಲಿ ಆಡಂಬರ ಹಾಗೂ ಅದ್ದೂರಿ ಖಚಿತ ಎಂಬುವುದೇ ಎಲ್ಲರ ಭಾವನೆ. ಆದರೆ, ಇಲ್ಲೊಬ್ಬ ನಟರು ಇದಕ್ಕೆ ಪರ್ಯಾಯವಾಗಿ ಸುದ್ದಿಯಾಗಿದ್ದಾರೆ.

ವಿರಫ್ ಪಟೇಲ್ ತಮ್ಮ ಬಹುಕಾಲದ ಗೆಳತಿ ಸಲೋನಿ ಜೊತೆ ಅತ್ಯಂತ ಸರಳವಾಗಿ ಅದೂ ಕೇವಲ ರೂ. 150 ರ ಖರ್ಚಿನಲ್ಲಿ ಮದುವೆ ಮಾಡಿಕೊಂಡಿದ್ದಾರೆ. ಪಟೇಲ್ ಹಿಂದಿ ಕಿರುತೆರೆಯ ಸ್ಟಾರ್ ನಟ. ಮಾಹಿ ವೆ, ಕಿಸ್ಮತ್ ಹೀಗೆ ಹಲವಾರು ಸ್ಟಾರ್ ಧಾರವಾಹಿಗಳಲ್ಲಿ ಮಿಂಚಿದ್ದಾರೆ.

ಈ ಜೋಡಿ ಬಿಹಾರದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಳ್ಳಲು ತಯಾರಿ ನಡೆಸಿದ್ದರು. ಇದಕ್ಕೆ ಬೇಕಾದ ಸಿದ್ಧತೆಗಳು ಕೂಡ ಭರದಿಂದ ಸಾಗುತ್ತಿತ್ತು. ಆದರೆ, ಕೊರೊನಾ ಪ್ರಕರಣಗಳು ಹೆಚ್ಚಾದ ಕಾರಣ ಇವರಿಬ್ಬರು ಸರಳವಾಗಿ ಮದುವೆ ಮಾಡಿಕೊಳ್ಳಲು ನಿರ್ಧರಿಸಿ ಅದೇ ರೀತಿ ಮಾಡಿಕೊಂಡಿದ್ದಾರೆ.

ಇವರು ಕೇವಲ ರೂ. 150 ರೂಪಾಯಿಗಳಲ್ಲಿ ತಮ್ಮ ಮದುವೆಯನ್ನು ಮಾಡಿಕೊಂಡಿದ್ದಾರೆ. ಮದುವೆ ನೋಂದಣಿ ಮಾಡಲು ನೂರು ರೂಪಾಯಿ ಹಾಗೂ ವಧು-ವರರ ಫೋಟೋಗಳಿಗೆ ರೂ. 50 ಖರ್ಚು ಮಾಡಿದ್ದಾರೆ. ನನಗೂ ಹಾಗೂ ಸಲೋನಿ ಸರಳವಾಗಿ ಮದುವೆಯಾಗಬೇಕು ಎಂದುಕೊಂಡಿದ್ದೆ. ಹಾಗೆಯೇ ನಡೆದಿದೆ. ಈ ಮದುವೆಗಾಗಿ ಕರ್ಚು ಮಾಡಬೇಕೆಂದಿದ್ದ ಹಣವನ್ನೇ ಕೊರೊನಾ ವಿರುದ್ಧದ ಹೋರಾಟಕ್ಕೆ ನೀಡಬೇಕು ಎಂದು ಅಂದುಕೊಂಡಿದ್ದೆವ ಎಂದು ಈ ಜೋಡಿ ಹೇಳಿದೆ.

error: Content is protected !!