Home Blog Page 3044

ಕೊರೋನಾ; ಸೋಮವಾರ 191 ಜನರಿಗೆ ಸೋಂಕು, ಒಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 03 ಸೋಮವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ತನ್ನ ‌ಅಟ್ಟಹಾಸ ಮೆರೆದಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಸಾವಿಗಿಡಾಗಿದ್ದು, ದೃಢಪಟ್ಟಿದೆ.

ಮೃತಪಟ್ಟವರು ಬಳ್ಳಾರಿ ಜಿಲ್ಲೆಯ ಹಂಪಸಾಗರದ 51 ವರ್ಷದ ಪುರುಷ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ನ್ಯುಮೋನಿಯಾ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಏಪ್ರಿಲ್ 30 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಗದಗ ಜಿಲ್ಲೆಯಲ್ಲಿ ಸೋಂಕು ದಿನದಿನಕ್ಕೆ ಹೆಚ್ಚಾಗುತ್ತಿದ್ದು, ಅದರಲ್ಲೂ ಗದಗ‌ ನಗರ ಹಾಗೂ ತಾಲೂಕಿನಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬರುತ್ತಿದ್ದಾರೆ. ಎರಡನೇ ಅಲೆ ಸದ್ದಿಲ್ಲದೇ ಪ್ರಸರಿಸುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಇಂದಿನ 191 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13216 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -145 , ಮುಂಡರಗಿ-12, ನರಗುಂದ-10, ರೋಣ-09, ಶಿರಹಟ್ಟಿ-07 ಹೊರಜಿಲ್ಲೆಯ-08 ಸೇರಿದಂತೆ 191 ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಸಾವಿನ ಒಂದು ಪ್ರಕರಣದಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
142 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 145 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12238 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 836 ಪ್ರಕರಣಗಳು ಸಕ್ರಿಯವಾಗಿದ್ದು, 540 ಜನರು ಮನೆಯಲ್ಲಿ, 296 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 187 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 347478 ಮಾದರಿಗಳಲ್ಲಿ 334076 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕೋವಿಡ್ ನಿರ್ವಹಣೆಯಲ್ಲಿ ವಿಶ್ವಕ್ಕೆ ಮಾದರಿಯಾಗಿದ್ದ ಶೈಲಜಾ ಟೀಚರ್ ರಿಂದ ಮತ್ತೊಂದು ದಾಖಲೆ

ವಿಜಯಸಾಕ್ಷಿ ಸುದ್ದಿ, ತಿರುವನಂತಪುರಂ

ಕೋವಿಡ್ ನಿರ್ವಹಣೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಕೇರಳ ಸಚಿವೆ ಶೈಲಜಾ ಅವರು ಈಗ ಮತ್ತೊಂದು ದಾಖಲೆ ಬರೆದಿದ್ದಾರೆ.
ಕೇರಳ ರಾಜ್ಯವು ಈ ಹಿಂದೆ ಕೋವಿಡ್ ನಿಯಂತ್ರಣ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಉತ್ತಮವಾಗಿ ನಿರ್ವಹಣೆ ಮಾಡಿ, ಜನರ ಪ್ರಾಣ ಉಳಿಸಿದ್ದ ಅಲ್ಲಿನ ಆರೋಗ್ಯ ಸಚಿವೆ ಕೆ.ಶೈಲಜಾ ಅವರನ್ನು ಸಾಕಷ್ಟು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಕೂಡ ಹುಡುಕಿಕೊಂಡು ಬಂದಿದ್ದವು. ಅಲ್ಲದೇ, ಅವರ ಕಾರ್ಯ ವೈಖರಿ ಎಲ್ಲೆಡೆ ಪ್ರಶಂಸನೀಯವಾಗಿತ್ತು.
ಸದ್ಯ ಈ ವಿಧಾನಸಭಾ ಚುನಾವಣೆಯಲ್ಲಿಯೂ ಅತಿ ಹೆಚ್ಚಿನ ಮತಗಳ ಅಂತರದಿಂದ ಶೈಲಜಾ ಅವರು ಗೆದ್ದು ಬೀಗಿದ್ದಾರೆ.

ಕಣ್ಣೂರು ಜಿಲ್ಲೆಯ ಮಟ್ಟನ್ನೂರು ಕ್ಷೇತ್ರದಲ್ಲಿ ಶೈಲಜಾ ಟೀಚರ್ ಎಂದೇ ಖ್ಯಾತರಾಗಿರುವ ಕೆ. ಕೆ. ಶೈಲಜಾ 60,963 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದಾರೆ.
ಕೇರಳದ 140 ವಿಧಾನಸಭಾ ಕ್ಷೇತ್ರಗಳಲ್ಲಿಯೇ ಇಷ್ಟೊಂದು ಅಂತರದಲ್ಲಿ ಯಾವೊಬ್ಬ ಅಭ್ಯರ್ಥಿಯೂ ಗೆಲುವು ಸಾಧಿಸಿಲ್ಲ. 64 ವರ್ಷದ ಶೈಲಜಾ ಅವರು ಕೇರಳ ವಿಧಾನಸಭೆ ಚುನಾವಣೆಯಲ್ಲಿ ಎಲ್‌ ಡಿಎಫ್‌ ನ ಸ್ಟಾರ್ ಕ್ಯಾಂಪೇನರ್ ಆಗಿದ್ದರು.

23 ವರ್ಷಗಳ ಕಾಲ ಶಾಲಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ ಅವರು, 2004ರಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು.
ಶೈಲಜಾ ಅವರು ಸಿಪಿಐ(ಎಂ)ನ ಯುವ ಘಟಕವಾದ ಡಿವೈಎಫ್‌ ಐನ ನಿವೃತ್ತ ಸದಸ್ಯರಾಗಿದ್ದಾರೆ. 2016ರಲ್ಲಿ ಮೊದಲ ಬಾರಿಗೆ ಚುನಾವಣೆ ಗೆದ್ದ ಅವರು ಸಚಿವರಾಗಿದ್ದರು.

18 ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

2 ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಳ್ಳುವುದರ ಮೂಲಕ ಬಿಜೆಪಿ ತನ್ನ ಆಡಳಿತದಲ್ಲಿರುವ ರಾಜ್ಯಗಳ ಸಂಖ್ಯೆಗಳನ್ನು ಹೆಚ್ಚಿಸಿದೆ. ಈ ಮೂಲಕ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಬಿಜೆಪಿ ಸ್ವಂತ ಬಲ ಮತ್ತು ಮಿತ್ರ ಪಕ್ಷಗಳ ಜೊತೆ ಸೇರಿ ಒಟ್ಟು 17 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಆದರೆ, ಈ ಚುನಾವಣೆಯಲ್ಲಿ ಆಸ್ಸಾಂ ಉಳಿಸಿಕೊಳ್ಳುವುದರೊಂದಿಗೆ ಪುದುಚೇರಿಯನ್ನೂ ಕಮಲ ಪಡೆ ಗೆದ್ದು ಬೀಗಿದೆ. ಆದರೆ, ಪಂಚ ರಾಜ್ಯಗಳ ಪೈಕಿ ಬಿಜೆಪಿಯು ಪಶ್ಚಿಮ ಬಂಗಾಳದ ಮೇಲೆ ಹೆಚ್ಚಿನ ಕಣ್ಣು ನೆಟ್ಟಿತ್ತು. ಆದರೆ, ಮಮತಾ ಬ್ಯಾನರ್ಜಿ ಅವರ ಹೋರಾಟಕ್ಕೆ ಇದಕ್ಕೆ ಆಸ್ಪದ ನೀಡಲಿಲ್ಲ. ಆದರೆ, ಬಿಜೆಪಿ ಅಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ತಮಿಳುನಾಡಿನಲ್ಲಿ ಕೂಡ ಬಿಜೆಪಿಯ ನಿರೀಕ್ಷೆ ಸುಳ್ಳಾಗಿದೆ. ಎಐಎಡಿಎಂಕೆ ಜೊತೆ ಈ ಬಾರಿ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಆದರೆ, ಎಐಎಡಿಎಂಕೆ ಪಕ್ಷವು ಡಿಎಂಕೆ ವಿರುದ್ಧ ಸೋಲು ಕಂಡಿದೆ. ಹೀಗಾಗಿ ಒಂದು ಸ್ಥಾನ ಹೆಚ್ಚಿಸಿಕೊಂಡಿರುವ ಬಿಜೆಪಿ 18 ರಾಜ್ಯಗಳಲ್ಲಿ ತನ್ನ ದರ್ಬಾರ್ ನಡೆಸುತ್ತಿದೆ.

ಬಿಜೆಪಿಯು ಸದ್ಯ ಅಸ್ಸಾಂ, ಅರುಣಾಚಲ ಪ್ರದೇಶ, ಬಿಹಾರ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಪುದುಚೇರಿ, ಕರ್ನಾಟಕ, ಮಧ್ಯಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ, ಉತ್ತರ ಪ್ರದೇಶ, ಮಣಿಪುರ, ಮೇಘಾಲಯ ರಾಜ್ಯಗಳಲ್ಲಿ ದರ್ಬಾರ್ ನಡೆಸುತ್ತಿದೆ.

ಅಣ್ಣಮಲೈ, ನಟ ಕಮಲ್ ಹಾಸನ್ ರಾಜಕೀಯ ಜೀವನ ಏನಾಯಿತು?

ವಿಜಯಸಾಕ್ಷಿ ಸುದ್ದಿ, ಚೆನ್ನೈ

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ತಮಿಳುನಾಡು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.
ತಮಿಳುನಾಡಿನ ಅರವಕುರುಚ್ಚಿಯಿಂದ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ, ಅವರು ನಿರಾಸೆ ಅನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಡಿಎಂಕೆಯ ಎಲಾ ಇಳಂಗೊ ಅವರು ಜಯಗಳಿಸಿದ್ದಾರೆ. ಎಲಾ ಇಳಂಗೊ ಅವರು 34,832 ಮತಗಳನ್ನು ಪಡೆದಿದ್ದರೆ, ಅಣ್ಣಾಮಲೈ 29,596 ಮತ ಗಳಿಸಿ ಸೋಲು ಒಪ್ಪಿಕೊಂಡಿದ್ದಾರೆ.

ಅಲ್ಲದೇ, ತಮಿಳುನಾಡು ರಾಜಕಾರಣದಲ್ಲಿಯೇ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ಅವರು ಕೂಡ ಕೂದಲೆಳೆ ಅಂತರದಲ್ಲಿ ಸೋತು ಸುಣ್ಣವಾಗಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಟ ಕಮಲ್ ಹಾಸನ್ ಸ್ಪರ್ಧಿಸಿದ್ದರು. ಬಿಜೆಪಿಯ ಅಭ್ಯರ್ಥಿ ವನತಿ ಶ್ರೀನಿವಾಸನ್ ವಿರುದ್ಧ ಕೇವಲ 1,500ಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಆರಂಭದಲ್ಲಿ 2000 ಮತಗಳ ಅಂತರದ ಮುನ್ನಡೆ ಸಾಧಿಸಿದ್ದ ಕಮಲ್ ಹಾಸನ್, ಆನಂತರ ಸೋಲು ಕಂಡಿದ್ದಾರೆ.

ಬಿಜೆಪಿಯಲ್ಲಿ ಸಾಬೀತಾಯಿತು ಮತ್ತೊಬ್ಬ ಮಾಸ್ಟರ್ ಮೈಂಡ್ ಸಾಮರ್ಥ್ಯ…..ಬಸವಕಲ್ಯಾಣದ ಗೆಲುವಲ್ಲಿ ಸೋಮಣ್ಣ ಪ್ಲಾನ್ ಸಕ್ಸಸ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ರಾಜ್ಯ ರಾಜಕೀಯದ ಇತಿಹಾಸದಲ್ಲಿ ಈವರೆಗೂ ಸಾಕಷ್ಟು ಚುನಾವಣೆಗಳು – ಉಪ ಚುನಾವಣೆಗಳು ನಡೆದಿವೆ. ಘಟಾನುಘಟಿ ನಾಯಕರು ಈ ಚುನಾವಣೆಗಳ ಜವಾಬ್ದಾರಿಗಳನ್ನು ಹೊತ್ತು ಸೋಲು ಮತ್ತು ಗೆಲುವು ಎರಡನ್ನೂ ಅನುಭವಿಸಿದ್ದಾರೆ. ಆದ್ರೆ ರಾಜ್ಯದ ಆ ಒಬ್ಬ ಜನ ನಾಯಕ ಮಾತ್ರ ಸೋಲಿಗಿಂತಲೂ ಹೆಚ್ಚು ಗೆಲುವುಗಳನ್ನೇ ಕಂಡಿದ್ದಾರೆ. ಆ ನಾಯಕ ಬೇರ್ಯಾರು ಅಲ್ಲ ರಾಜ್ಯದ ವಸತಿ ಸಚಿವ ವಿ.ಸೋಮಣ್ಣ.

ವಿ.ಸೋಮಣ್ಣ ರಾಜ್ಯ ಕಂಡ ಸರಳ ರಾಜಕಾರಣಿಗಳಲ್ಲಿ ಒಬ್ಬರು. ಅನವಶ್ಯಕ ಅಬ್ಬರವಿಲ್ಲದೇ ಕಾಯಕವೇ ಕೈಲಾಸವೆಂಬಂತೆ ತಮಗೆ ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಮುಗಿಸುವ ಜನನಾಯಕರು. ಅದರಲ್ಲೂ ಚುನಾವಣೆ – ಉಪಚುನಾವಣಗಳ ವಿಷಯಕ್ಕೆ ಬಂದರೆ ವಿ.ಸೋಮಣ್ಣ ಅವರ ತಂತ್ರಗಾರಿಕೆಯೇ ಬೇರೆ. ಅವರು ಎಲೆಕ್ಷನ್ ಜವಾಬ್ದಾರಿ ವಹಿಸಿಕೊಂಡರು ಅಂದ್ರೆ ಅಲ್ಲಿ ಪಕ್ಷಕ್ಕೆ ಗೆಲುವು ಕಟ್ಟಿಟ್ಟಬುತ್ತಿ.

ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಚಾಣಕ್ಯನಂತೆ ಎದುರಾಳಿಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು.

ವಿ ಸೋಮಣ್ಣ ಜವಾಬ್ದಾರಿ ವಹಿಸಿಕೊಂಡಿದ್ದ ಬಸವಕಲ್ಯಾಣದಲ್ಲಿ ಬಿಜೆಪಿ ಜಯ ಸಾಧಿಸಿದೆ. ಇದು ಮಾತ್ರವಲ್ಲದೇ ಸೋಮಣ್ಣ ಹಿಂದೆ ಹಲವು ಚುನಾವಣೆಗಳ ಜವಾಬ್ದಾರಿ ವಹಿಸಿಕೊಂಡಿದ್ದರು. ಅಲ್ಲೂ ಕೂಡ ಯಶ ಕಂಡಿದ್ದರು. ರಾಜ್ಯ ಬಿಜೆಪಿಯ ಶಿಸ್ತಿನ ಸಿಪಾಯಿ ವಿ.ಸೋಮಣ್ಣ ಈ ರೀತಿ ಚುನಾವಣಾ ಉಸ್ತುವಾರಿ ವಹಿಸಿಕೊಂಡು ಪಕ್ಷಕ್ಕೆ ಗೆಲುವು ತಂದುಕೊಟ್ಟಿರುವುದು ಮೊದಲೇನಲ್ಲ.

ತುಮಕೂರು ಲೋಕಸಭಾ ಎಲೆಕ್ಷನ್ 2019-

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ವಿರುದ್ಧ ಜಿ.ಎಸ್. ಬಸವರಾಜ್ ಗೆಲುವು ಸಾಧಿಸಿದ್ದರು. ಆಗ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದು ವಿ. ಸೋಮಣ್ಣ ಅವರು.

  • ಚಿಂಚೋಳಿ ಬೈ ಎಲೆಕ್ಷನ್ –2019 -ಅವಿನಾಶ್ ಜಾಧವ್ ಗೆದ್ದಾಗಲೂ ಉಸ್ತುವಾರಿ ವಹಿಸಿಕೊಂಡಿದ್ದು ಸಚಿವ ವಿ. ಸೋಮಣ್ಣನವರು.
  • ದೇವದುರ್ಗ ಬೈ ಎಲೆಕ್ಷನ್ – 2016 – ಶಿವನಗೌಡ ನಾಯಕ ಜಯ ಗಳಿಸಿದ್ದರು. ಆಗಲೂ ಉಪ ಚುನಾವಣೆಯ ಜವಾಬ್ದಾರಿ ವಹಿಸಿಕೊಂಡಿದ್ದು ವಿ. ಸೋಮಣ್ಣನವರು.
  • ಚನ್ನಪಟ್ಟಣ ಬೈ ಎಲೆಕ್ಷನ್ – 2011- ಸಿ.ಪಿ. ಯೋಗಿಶ್ವರ್ ಗೆಲುವು ಸಾಧಿಸಿದ್ದರು. ಆಗಲೂ ವಿ. ಸೋಮಣ್ಣನವರು ಉಪ ಚುನಾವಣೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು.
  • ಕಡೂರು ಬೈ ಎಲೆಕ್ಷನ್ – 2010 – ಡಾ. ವೈ.ಸಿ. ವಿಶ್ವನಾಥ್ ಗೆಲುವು ಸಾಧಿಸಿದ್ದರು. ಉಪ ಚುನಾವಣೆಯ ಪೂರ್ತಿ ಜವಾಬ್ದಾರಿ ವಹಿಸಿಕೊಂಡಿದ್ದು ವಿ. ಸೋಮಣ್ಣನವರು.
  • ಕೊಪ್ಪಳ ಬೈ ಎಲೆಕ್ಷನ್ – 2011 – ಕೆ.ಎಸ್. ಅಮರಪ್ಪ ಅವರಿಗೆ ಜಯ. ಉಸ್ತುವಾರಿ ವಹಿಸಿಕೊಂಡಿದ್ದು ಚಾಣಕ್ಷ ನಾಯಕ ವಿ. ಸೋಮಣ್ಣನವರು.
  • ಬೆಂಗಳೂರು ದಕ್ಷಿಣ ಲೋಕಸಭಾ – 2009, 2014, 2018- 2009, 2014ರಲ್ಲಿ ಅನಂತ್ ಕುಮಾರ್ ಮತ್ತು 2018ರಲ್ಲಿ ತೇಜಸ್ವಿ ಸೂರ್ಯ ಅವರ ಗೆಲುವಿನಲ್ಲೂ ವಿ. ಸೋಮಣ್ಣನವರು ಪ್ರಮುಖ ಪಾತ್ರ ವಹಿಸಿದ್ದರು. ಈ ಎಲ್ಲಾ ಚುನಾವಣೆಗಳಲ್ಲೂ ವಿ. ಸೋಮಣ್ಣನವರು ಮುಂಚೂಣಿಯಲ್ಲಿದ್ದರು.

-ತುಮಕೂರು ಲೋಕಸಭಾ ಎಲೆಕ್ಷನ್ – 2009ರಲ್ಲೂ ವಿ. ಸೋಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು.

  • 2015ರ ಬಿಬಿಎಂಪಿ ಚುನಾವಣೆಯಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದ 11 ಸ್ಥಾನಗಳನ್ನು ಗೆಲ್ಲುವಲ್ಲಿ ವಿ. ಸೋಮಣ್ಣನವರ ಪಾತ್ರ ಮಹತ್ವದ್ದಾಗಿತ್ತು.
    2010 ಬಿಬಿಎಂಪಿ ಚುನಾವಣೆಯಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 16 ಸ್ಥಾನಗಳನ್ನು ಗೆದ್ದಿದ್ದು ಕೂಡ ವಿ. ಸೋಮಣ್ಣನನವರ ವರ್ಚಸ್ಸಿನಿಂದಲೇ.

  • 2019 ಬಿಬಿಎಂಪಿ ಕಾವೇರಿಪುರ ಬೈ ಎಲೆಕ್ಷನ್ ನಲ್ಲಿ ಪಲ್ಲವಿ ಚಿನ್ನಪ್ಪ ಅವರ ಗೆಲುವಿನಲ್ಲೂ ವಿ. ಸೋಮಣ್ಣನವರು ಪ್ರಮುಖ ಪಾತ್ರ ವಹಿಸಿದ್ದರು.
    ಒಟ್ಟಿನಲ್ಲಿ ವಿ. ಸೋಮಣ್ಣನವರು ತಮಗೆ ಸಿಕ್ಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ರಾಜಕೀಯ ನೈಪುಣ್ಯತೆ ಅವರಲ್ಲಿದೆ. ಹೀಗಾಗಿ ಚುನಾವಣಾ ಉಸ್ತುವಾರಿ ಅಖಾಡದಲ್ಲಿ ಸೋಮಣ್ಣನವರು ಸೋಲಿಲ್ಲದ ಸರದಾರನೇ ಸರಿ. ಪಕ್ಷ ತನ್ನ ಮೇಲೆ ವಿಶ್ವಾಸವಿಟ್ಟಾಗ ಅದನ್ನು ಸಮರ್ಪಕವಾಗಿ ನಿಭಾಯಿಸುವ ಚಾಕಚಕ್ಯತೆ ಕೂಡ ಅವರಲ್ಲಿದೆ.
  • ತಳಮಟ್ಟದ ಕಾರ್ಯಕರ್ತರ ಬೆಂಬಲ, ನಂಬಿಕೆ ಮತ್ತು ಸ್ಥಳೀಯ ನಾಯಕರ ವಿಶ್ವಾಸ ಗಳಿಸಿಕೊಂಡು ಹೋಗುವ ಜನ ನಾಯಕ ವಿ. ಸೋಮಣ್ಣ. ಒಟ್ಟಿನಲ್ಲಿ ವಿ. ಸೋಮಣ್ಣನವರು ತಮಗೆ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿಯೇ ನಿಭಾಯಿಸಿಕೊಂಡು ಸೈ ಎನಿಸಿಕೊಂಡಿದ್ದಾರೆ.

ಕೊರೋನಾ; ಭಾನುವಾರ ಜಿಲ್ಲೆಯಲ್ಲಿ 176 ಜನರಿಗೆ ಸೋಂಕು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 02 ಭಾನುವಾರ ಜಿಲ್ಲೆಯಲ್ಲಿ ಆರನೇ ದಿನ ಕೊರೋನಾ ಸೋಂಕು ಸ್ಫೋಟವಾಗಿದೆ. ಇಂದು 176 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.

ಇಂದಿನ 176 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13025 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -112, ಮುಂಡರಗಿ-23, ನರಗುಂದ-07, ರೋಣ-19, ಶಿರಹಟ್ಟಿ-11, ಹೊರಜಿಲ್ಲೆಯ-04 ಸೇರಿದಂತೆ 176 ಪ್ರಕರಣಗಳು ದೃಢಪಟ್ಟಿವೆ.

ಇದುವರೆಗೂ ಜಿಲ್ಲೆಯಲ್ಲಿ
141 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 135 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12093 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 791 ಪ್ರಕರಣಗಳು ಸಕ್ರಿಯವಾಗಿದ್ದು, 660 ಜನರು ಮನೆಯಲ್ಲಿ, 130 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 347 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 346458 ಮಾದರಿಗಳಲ್ಲಿ 333086 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಟಿಎಂಸಿ ನಾಯಕಿ ದೀದಿಗೆ ಹೆಣ್ಣು ಹುಲಿ ಎಂದ ಶಿವಸೇನೆ

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳುತ್ತಿದೆ. ಈ ಐದು ರಾಜ್ಯಗಳ ಪೈಕಿ ಬಹುತೇಕರ ಕಣ್ಣು ಪಶ್ಚಿಮ ಬಂಗಾಳದ ಮೇಲಿತ್ತು. ಏಕೆಂದರೆ, ಅಲ್ಲಿ ದೀದಿ ಹಾಗೂ ಪ್ರಧಾನಿ ಮೋದಿ ನಡುವಿನ ಯುದ್ಧ ಎಂಬಂತೆ ಚುನಾವಣೆ ಭಾಸವಾಗಿತ್ತು. ಸದ್ಯ ಅಲ್ಲಿ ದೀದಿ ಗೆದ್ದು ಬೀಗಿದ್ದಾರೆ.

ಹೀಗಾಗಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಸಿಎಂ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳು ಹರಿದು ಬರುತ್ತಿವೆ.

ಇತ್ತೀಚಿನ ಮಾಹಿತಿಯಂತೆ 206 ಕ್ಷೇತ್ರಗಳಲ್ಲಿ ಟಿಎಂಸಿ, 83 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಮೂಲಕ ಟಿಎಂಸಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಅಭಿನಂದಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಶಿವಸೇನಾ ಮುಖಂಡ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಬಂಗಾಳದ ಹೆಣ್ಣು ಹುಲಿಗೆ ಅಭಿನಂದನೆಗಳು, ಓ ದೀದಿ..ದೀ..ಓ ದೀದಿ ಎಂದು ಹೊಗಳಿರುವ ಸಂಜಯ್ ರಾವತ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಟ್ವೀಟ್ ಮಾಡಿದ್ದಾರೆ.

ಜೈಲಿನೊಳಗೂ ಲಗ್ಗೆಯಿಟ್ಟ ಮಹಾಮಾರಿ

ವಿಜಯಸಾಕ್ಷಿ ಸುದ್ದಿ, ಚಿಕ್ಕಬಳ್ಳಾಪುರ

ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ 55ಕ್ಕೂ ಹೆಚ್ಚು ಕೈದಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಸಿದೆ. ಇಬ್ಬರು ಪೊಲೀಸರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಒಂದು ವಾರದ ಹಿಂದೆ 7 ಜನ ಕೈದಿಗಳಲ್ಲಿ ಲಕ್ಷಣಗಳು ಕಂಡು ಬಂದಿದ್ದವು. ಅವರನ್ನು ಪರೀಕ್ಷೆಗೆ ಒಳಪಡಿಸಾದಗ ಎಲ್ಲರಲ್ಲಿಯೂ ಸೋಂಕು ಇರುವುದು ಖಚಿತವಾಗಿತ್ತು. ಇದರಿಂದಾಗಿ ಕಾರಾಗೃಹದಲ್ಲಿನ ಎಲ್ಲರಿಗೂ ಟೆಸ್ಟ್ ಮಾಡಿಸಿದಾಗ 55 ಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಗೊತ್ತಾಗಿದೆ.

ಸೋಂಕಿತರನ್ನು ಹೊರ ವಲಯದ ಕಂದವಾರ ಗ್ರಾಮದ ಎಎನ್‍ ಎಂ ತರಬೇತಿ ಕೇಂದ್ರದ ಸಿಸಿ ಸೆಂಟರ್ ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಲ್ಲಿ ಕೈದಿಗಳಿಗಷ್ಟೇ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಈಗಾಗಲೇ ಜಿಲ್ಲೆಯ ಬಾಗೇಪಲ್ಲಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಶ್ರೀನಿವಾಸ್ ಹಾಗೂ ಮಂಚೇನಹಳ್ಳಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಲೋಕೇಶ್ ಮಹಾಮಾರಿಗೆ ಬಲಿಯಾಗಿದ್ದಾರೆ. ಜಿಲ್ಲೆಯಾದ್ಯಾಂತ 25ಕ್ಕೂ ಹೆಚ್ಚು ಪೊಲೀಸರು ಸೋಂಕಿಗೆ ಒಳಗಾಗಿದ್ದಾರೆ. ಬಹುತೇಕರು ಹೊಂ ಐಸೋಲೇಷನ್ ನಲ್ಲಿದ್ದು, ಇಬ್ಬರನ್ನೂ ಮಾತ್ರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಸ್ಕಿಯಲ್ಲಿ 25 ಸಾವಿರಕ್ಕೂ ಅಧಿಕ ಅಂತರದಿಂದ ಜಯ ಗಳಿಸಿದ ಕಾಂಗ್ರೆಸ್

ವಿಜಯಸಾಕ್ಷಿ ಸುದ್ದಿ, ಮಸ್ಕಿ

ಮಸ್ಕಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಭರ್ಜರಿ ಜಯ ದಾಖಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರ ವಿರುದ್ಧ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಸಾಧಿಸಿಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಸದ್ಯ ಅವರ ಗೆಲುವನ್ನು ಅಧಿಕೃತವಾಗಿ ಘೋಷಿಸುವುದೊಂದೆ ಬಾಕಿ ಉಳಿದಿದೆ.

ಚುನಾವಣಾ ಮತ ಎಣಿಕೆ ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್, ತಮ್ಮ ಪಕ್ಷದ ಹಲವು ನಾಯಕರ ವಿರುದ್ಧ ಕಿಡಿ ಕಾರಿದರು. ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ ಎಂದು ಆರೋಪಿಸಿದ್ದರು.

2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು 60,387 ಮತಗಳನ್ನು ಪಡೆದಿದ್ದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ 60,174 ಮತಗಳನ್ನು ಗಳಿಸಿ ಸೋಲು ಕಂಡಿದ್ದರು. ಕೇವಲ 213 ಮತಗಳ ಅಂತರದಿಂದ ಪ್ರತಾಪ್ ಗೌಡ ಪಾಟೀಲ್ ಗೆದ್ದಿದ್ದರು. ಆದರೆ, ಆಪರೇಷನ್ ಕಮಲದಲ್ಲಿ ಪ್ರತಾಪ್ ಗೌಡ ಅವರು, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ಕಾಂಗ್ರೆಸ್ ಸೇರಿದ್ದರು. ಸದ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ತುರವಿಹಾಳ್ ಭರ್ಜರಿಯಾಗಿ ಜಯ ದಾಖಲಿಸಿದ್ದಾರೆ. ಉಪ ಚುನಾವಣೆಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ.

ಬಂಗಾಳದಲ್ಲಿ ಬಿಜೆಪಿಗೆ ಭಾರೀ ಮುಖಭಂಗ; ಮುನ್ನಡೆ ಕಾಯ್ದುಕೊಂಡ ಮಮತಾ

ವಿಜಯಸಾಕ್ಷಿ ಸುದ್ದಿ, ಕೊಲ್ಕತ್ತಾ

ಪಂಚ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆ ಪೈಕಿ ಪಶ್ಚಿಮ ಬಂಗಾಳ ದೇಶದ ಜನರನ್ನು ತನ್ನತ್ತ ಸೆಳೆದಿದೆ. ಇಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ಯುದ್ಧದ ರೀತಿಯಲ್ಲಿಯೇ ಚುನಾವಣೆ ನಡೆದಿತ್ತು. ಈ ಯುದ್ಧದಲ್ಲಿ ಟಿಎಂಸಿ ಗೆಲುವಿನ ನಗೆ ಬೀರುವ ಸಾಧ್ಯತೆ ದಟ್ಟವಾಗಿದೆ.

ಮಮತಾ ಬ್ಯಾನರ್ಜಿಯನ್ನು ಅಧಿಕಾರದಿಂದ ಇಳಿಸಿಯೇ ಸಿದ್ಧವೆಂದು ಬಿಜೆಪಿ ಪಟಾಲಂ ಅಮಿತ್ ಶಾ, ಮೋದಿ, ಜೆಪಿ ನಡ್ಡಾ ಮೂವರು ತಿಂಗಳುಗಳ ಕಾಲ ಅಖಾಡದಲ್ಲಿಯೇ ಬೀಡು ಬಿಟ್ಟಿದ್ದರು. ಆದರೆ, ಇಲ್ಲಿಯವರೆಗಿನ ಫಲಿತಾಂಶ ಗಮನಿಸಿದರೆ ಬಿಜೆಪಿಯ ಲೆಕ್ಕಾಚಾರ ತಲೆಕೆಳಾಗಾಗುತ್ತಿವೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ನೇತೃತ್ವದ ಟಿಎಂಸಿ ಪಕ್ಷವು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ದಾಟಿ ಭಾರಿ ಮುನ್ನಡೆ ಸಾಧಿಸಿದೆ. ಸದ್ಯ ಟಿಎಂಸಿ 203ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಬಿಜೆಪಿ 86 ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಮಮತಾ ಬ್ಯಾನರ್ಜಿ ಸ್ಪರ್ಧೆ ಮಾಡಿರುವ ನಂದಿಗ್ರಾಮದಲ್ಲಿ ಸದ್ಯ ಟಿಎಂಸಿ ಮುನ್ನಡೆ ಸಾಧಿಸಿದೆ. ಸತತ ಹಿನ್ನಡೆ ಅನುಭವಿಸುತ್ತಿದ್ದ ಮಮತಾ ಸೋಲಬಹುದು ಎಂದೇ ಎಲ್ಲರೂ ಅಂದಾಜಿಸಿದ್ದರು. ಆದರೆ, ಸದ್ಯ ಮಮತಾ ಬ್ಯಾನರ್ಜಿ 1,500 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

error: Content is protected !!