Home Blog Page 3072

ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಕೈಗೊಂಬೆ: ಅಬ್ದುಲ್‌ ಹಮೀದ್

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರಿಂದ ಧರಣಿ

ವಿಜಯಸಾಕ್ಷಿ ಸುದ್ದಿ, ಕಲಬುರಗಿ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ಮತ್ತು ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ನಗರದ ಜಗತ್ ವೃತ್ತದಲ್ಲಿ ಧರಣಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಬಿಜೆಪಿಗೆ ರೈತರು, ಕಾರ್ಮಿಕರು ಹಾಗೂ ಬಡ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸರ್ಕಾರಗಳು ಬ್ರಿಟಿಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ ಎಂದು ಕಿಡಿ ಕಾರಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ಫಾರಂ ಮಾತನಾಡಿ,
ಕೇಂದ್ರ ಸರ್ಕಾರ ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಾಗಿದೆ. ಪ್ರಧಾನಿ ಮೋದಿಯವರ ಕೃಷಿ ವಿರೋಧಿ ನಡೆಯಿಂದ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬರಲಿದೆ ಎಂದು ಹರಿ ಹಾಯ್ದರು.

ಈ ಸಂದರ್ಭದಲ್ಲಿ , ಅಜೀಜ್ ಜಾಗಿರದಾರ್, ಸಲೀಂ ಅಹಮದ್ ಚಿತಾಪುರ, ಸಿದ್ದಣ್ಣ ಜಿ.ಚಕ್ರ, ಮೋಬಿನ್ ಅಹ್ಮದ್, ಅಜೀಜ್ ಪಟೇಲ್ ಯಾಳವಾರ್, ಮುನೀರ್ ಹಾಸ್ಮಿ, ಸಲೀಂ ಸದರಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

ಅಲೆಗಳಿಗೆ ಕೊಚ್ಚಿಹೋಗಿ ಮೂವರು ನೀರುಪಾಲು, ಇಬ್ಬರ ರಕ್ಷಣೆ

0

ವಿಜಯಸಾಕ್ಷಿ ಸುದ್ದಿ, ಕಾರವಾರ: ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿ ಇಬ್ಬರನ್ನು ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ.

ಇಲ್ಲಿನ ಮುಖ್ಯ ಕಡಲತೀರದಲ್ಲಿ ಈಜಲು ತೆರಳಿದ್ದ 21 ವರ್ಷದ ಸುಮಾ, 20 ವರ್ಷದ ತಿಪ್ಪೇಶ ನಾಯಕ್ ಮತ್ತು 35 ವರ್ಷದ ರವಿ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ರಕ್ಷಣೆ ಮಾಡಿದ್ದು ಅಸ್ವಸ್ತಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಬೆಂಗಳೂರಿನ ಹೆಬ್ಬಗೋಡಿಯವರಾಗಿದ್ದು ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದವರಾಗಿದ್ದಾರೆ. ಸ್ನೇಹಿತರೊಂದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದು ಈ ವೇಳೆ ಸಮುದ್ರದಲ್ಲಿ ಈಜುತ್ತಿದ್ದಾಗ ಒಮ್ಮೆಲೇ ಬಂದ ಅಲೆಗೆ ಈ ಐವರೂ ಕೊಚ್ಚಿಹೋಗಿದ್ದರು.

ತಕ್ಷಣ ಅಲ್ಲಿಯೇ ಇದ್ದ ಬೋಟಿಂಗ್ ಚಟುವಟಿಕೆ ನಡೆಸುವ ಸಿಬ್ಬಂದಿ ರಕ್ಷಣೆಗೆ ಧಾವಿಸಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಮತ್ತೆ ಮೂವರನ್ನ ದಡಕ್ಕೆ ತಂದರಾದರೂ ಅಷ್ಟರಲ್ಲಾಗಲೇ, ಅವರು ಪ್ರಾಣಬಿಟ್ಟಿದ್ದರು. ಮೂವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯಲ್ಲಿ ನಿಂತ ಯುವಕರ ಮೇಲೆ ಗುಂಪೊಂದರಿಂದ ಹಲ್ಲೆ: ಮೊಬೈಲ್, ಹಣ ಕಿತ್ತು ಪರಾರಿ

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ರಸ್ತೆಯಲ್ಲಿ ನಿಂತಿದ್ದ ಯುವಕರ ಮೇಲೆ ಗುಂಪೊಂದು ದಾಳಿ ನಡೆಸಿ, ಅವರ ಬಳಿಯಿದ್ದ ಮೊಬೈಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಇಲ್ಲಿನ ಬಾಪು ನಗರದಲ್ಲಿ ನಡೆದಿದೆ.

ಗುಂಪಾಗಿ ಬಂದ ದುಷ್ಕರ್ಮಿಗಳು ಯುವಕರನ್ನು ಬೆದರಿಸಿ ಅವರ ಮೇಲೆ ಹಲ್ಲೆ ಮಾಡಿ ಮೊಬೈಲ್, ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮಹ್ಮದ್ ಜಾಕೀರ್, ಮಜರ್ ಹಾಗೂ ಸತ್ತಾರ್ ಎನ್ನುವವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡಿರುವ ಮೂವರೂ, ತಮ್ಮ ಬೈಕ್ ನಲ್ಲಿ ಪೆಟ್ರೋಲ್ ಮುಗಿದಿದ್ದರಿಂದ ಗೆಳೆಯರಿಗೆ ತರಲು ಹೇಳಿದ್ದು, ಗೆಳಯರ ಬರುವಿಕೆಗಾಗಿ ಕಾಯುತ್ತಿದ್ದ ವೇಳೆ ಹಲ್ಲೆ ನಡೆಸಲಾಗಿದೆ.

ಏಕಾಏಕಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮೊಬೈಲ್, ಹಣ ಕೊಡುವಂತೆ ಒತ್ತಾಯ ಮಾಡಿದ್ದಾರೆ‌. ತಮ್ಮ ಬಳಿ ಏನೂ ಇಲ್ಲ ಎಂದಾಗ ಹಲ್ಲೆ ಮಾಡಿ ಜೇಬಿನಲ್ಲಿದ್ದದ್ದನ್ನು ಕಿತ್ತುಕೊಂಡು ಪರಾರಿಯಾಗಿದ್ದಾಗಿ ಗಾಯಾಳುಗಳು ಹೇಳಿದ್ದಾರೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ ಪಲ್ಟಿಯಾಗಿ ಸ್ಥಳದಲ್ಲೇ‌ ಓರ್ವ ಸಾವು

0

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಕಾರು ಪಲ್ಟಿಯಾಗಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲ ಮೃತಪಟ್ಟ ವ್ಯಕ್ತಿಯನ್ನು ವಿಶ್ವನಾಥ ರಾಠೋಡ್(38) ಎಂದು ಗುರುತಿಸಲಾಗಿದೆ. ವಿಶ್ವನಾಥ ಮಾಶಾಳ ತಾಂಡಾ ನಿವಾಸಿಯಾಗಿದ್ದು,
ಘಟನೆಯಲ್ಲಿ ವಿಶ್ವನಾಥ ಪತ್ನಿಗೆ ಕೈ ಮುರಿತವಾಗಿದೆ.

ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಸೀದಿಗಳಲ್ಲಿ ನಮಾಜ್, ಚರ್ಚಗಳಲ್ಲಿ ಪ್ರಾರ್ಥನೆ; ದೇವಸ್ಥಾನಗಳಿಗೆ ಏಕೆ ತೊಂದರೆ: ಮುತಾಲಿಕ್ ಕಿಡಿ

ವಿಜಯಸಾಕ್ಷಿ ಸುದ್ದಿ, ರಾಯಭಾಗ

ದೇವಸ್ಥಾನದಲ್ಲಿನ ನಿರ್ಬಂಧ ಮರಳಿ ತೆಗೆದುಕೊಳ್ಳಿ, ಇಲ್ಲವಾದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಮುತಾಲಿಕ್ ಮಾತನಾಡಿ, ಮಸೀದಿ, ಚರ್ಚ್‌ಗಳಿಗಿಲ್ಲದ ನಿರ್ಬಂಧ ದೇವಸ್ಥಾನಗಳಿಗೇಕೆ ಎಂದು ಪ್ರಶ್ನಿಸಿದರು.

ಚಿಂಚಲಿಯ ಪ್ರಸಿದ್ಧ ಮಾಯಕ್ಕದೇವಿ ದೇವಸ್ಥಾನದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯದಿಂದ ಬರುವ ಭಕ್ತರಿಗೆ ಅವಕಾಶ ನೀಡಬೇಕು. ತಕ್ಷಣ ದೇವಸ್ಥಾನದ ಮೇಲಿನ ನಿರ್ಬಂಧ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಮಸೀದಿಗಳಲ್ಲಿ ನಮಾಜ್, ಚರ್ಚಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ.
ಆದರೆ, ದೇವಸ್ಥಾನಗಳಿಗೆ ಏಕೆ ತೊಂದರೆ ನೀಡುತ್ತಿದ್ದೀರಿ. ಬಾರ್, ಹೋಟೆಲ್, ಸಂತೆಗಳೆಲ್ಲವೂ ಓಪನ್ ಇವೆ. ಎಲ್ಲವನ್ನೂ ಬಂದ್‌ಗೊಳಿಸಿ ಲಾಕ್‌ಡೌನ್ ಮಾಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಖಾತೆ ಬದಲಾವಣೆ ಅಸಮಾಧಾನವಿಲ್ಲ: ಸಚಿವ ಸಿಸಿ ಪಾಟೀಲ್ ಸ್ಪಷ್ಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಖಾತೆ ಹಂಚಿಕೆ ಮತ್ತು ಬದಲಾವಣೆ ಮುಖ್ಯಮಂತ್ರಿಗಳ ಪರಾಮಾಧಿಕಾರ. ನನಗೆ ಯಾವುದೇ ಖಾತೆ ಕೊಟ್ಟರೂ, ಅದಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ಈ ಕುರಿತು ವಿಜಯಸಾಕ್ಷಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮೊದಲಿದ್ದ ಗಣಿ ಮತ್ತು ಭೂ ವಿಜ್ಞಾನ ಖಾತೆಯಲ್ಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು, ಸದ್ಯ ಇದರ ಬದಲು ಯಾವುದೇ ಖಾತೆಯಾದರೂ ಸರಿ ಅದೇ ರೀತಿ ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ. ಖಾತೆ ಬದಲಾವಣೆ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದರು.

ಖಾತೆ ಬದಲಾವಣೆ ಬಗ್ಗೆ ಅಸಮಾಧಾನವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ‘ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಏನೇ ಹಂಚಿಕೊಳ್ಳುವುದಿದ್ದರೂ ಪಕ್ಷದೊಳಗೆ ಚರ್ಚೆ ಮಾಡುತ್ತೇನೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಸದ್ಯ ಸಿ.ಸಿ ಪಾಟೀಲ್ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಖಾತೆಯ ಬದಲು ಸಣ್ಣ ಕೈಗಾರಿಕೆ ಮತ್ತು ವಾರ್ತಾ ಇಲಾಖೆ ಖಾತೆಗಳನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜಕಾಲುವೆ ಅಗಲಕ್ಕೆ ನಗರಸಭೆ ಕತ್ತರಿ?

0

*ಅಮೃತಸಿಟಿ ಯೋಜನೆಯಡಿ 1.5 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ
*ಜನರ ಕಣ್ಣಿಗೆ ಮಣ್ಣೆರಚಲು ಸಜ್ಜಾದ ಅಧಿಕಾರಿಗಳು
*ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಿ: ಸ್ಥಳೀಯರು

ದುರಗಪ್ಪ ಹೊಸಮನಿ
ವಿಜಯಸಾಕ್ಷಿ ವಿಶೇಷ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಮೃತಸಿಟಿ ಯೋಜನೆಯಡಿ ಹಲವಾರು ಕಾಮಗಾರಿಗಳನ್ನು ಕೈಗೊಂಡು ವರ್ಷಗಳೇ ಉರುಳಿದರೂ, ಬಹುತೇಕ ಕಡೆ ಕಾಮಗಾರಿ ಆಮೆ ವೇಗದಲ್ಲಿ ಸಾಗುತ್ತಿದೆ. ಕ್ರಿಯಾ ಯೋಜನೆಯಲ್ಲಿದ್ದಂತೆ ಕಾಮಗಾರಿ ನಡೆಯದೆ ಅಕ್ರಮಕ್ಕೆ ನಗರಸಭೆ ಅಧಿಕಾರಿಗಳು ಆಸ್ಪದ ನೀಡುತ್ತಿದ್ದಾರೆ ಎಂದು ಅವಳಿ ನಗರದ ಜನತೆ ಆರೋಪಿಸುತ್ತಿದ್ದಾರೆ.

ನಗರದ ಹಾತಲಗೇರಿ ನಾಕಾದಲ್ಲಿ ಬರುವ ರಾಜ ಕಾಲುವೆಗೆ ಸುಮಾರು 3-4 ಕಿ.ಮೀ. ವ್ಯಾಪ್ತಿಯ ಪ್ರದೇಶದಿಂದ ನೀರು ಹರಿದು ಬರುತ್ತಿದೆ. ಹಾಗಾಗಿ ಕೊಳಚೆ ನೀರು ಹೊರ ಹಾಕಲು ರಾಜಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ, ರಾಜಕಾಲುವೆಯ ಮೂರು ಪಟ್ಟು ಜಾಗವನ್ನು ಮುಚ್ಚಿ ನಾಲ್ಕನೇ ಭಾಗದಷ್ಟು ಮಾತ್ರ ಕಾಲುವೆ ಕೆಲಸ ಮಾಡಲಾಗುತ್ತಿದೆ. ಬಹುತೇಕ ನಗರಸಭೆ ಜಾಗೆ ಒತ್ತುವರಿಯಾಗಿದ್ದು, ಮತ್ತಷ್ಟು ಜಾಗೆ ಒತ್ತುವರಿಗೆ ನಗರಸಭೆ ಅವಕಾಶ ಕಲ್ಪಿಸಿಕೊಟ್ಟಿದೆ.

10 ಅಡಿ ಕಾಲುವೆ: ಹಾತಲಗೇರಿ ನಾಕಾದಲ್ಲಿರುವ ರಾಘವೇಂದ್ರ ಸ್ವಾಮಿ ದೇವಸ್ಥಾನದಿಂದ ಕಣಗಿನಹಾಳ ರಸ್ತೆಯವರೆಗೆ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಒಟ್ಟು 831 ಮೀ. ಉದ್ಧದ ರಾಜಕಾಲುವೆ ದುರಸ್ತಿಗೊಳಿಸಲಾಗುತ್ತಿದೆ. ಆದರೆ, ಒಟ್ಟು 40 ಅಡಿ ಅಗಲದ ರಾಜಕಾಲುವೆಯಲ್ಲಿ ಕೇವಲ 10 ಅಡಿ ಕಾಲುವೆಯನ್ನು ಮಾತ್ರ ನಿರ್ಮಿಸಲಾಗುತ್ತಿದೆ. ಇನ್ನುಳಿದ 30 ಅಡಿ ಜಾಗವನ್ನು ಖಾಲಿ ಬಿಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೇವಲ 831 ಅಡಿ ಉದ್ದ ಮತ್ತು 10 ಅಡಿ ಅಗಲದ ಕಾಲುವೆ ಕಾಮಗಾರಿಯಲ್ಲಿ ದುಡ್ಡು ಲಪಟಾಯಿಸುವ ಹುನ್ನಾರ ಅಡಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಲವು ಸಮಸ್ಯೆ: ನಗರದ ರಾಜೀವ್ ಗಾಂಧಿ, ಹುಡ್ಕೋ ಕಾಲನಿ, ಸಾಯಿಬಾಬಾ ದೇವಸ್ಥಾನದಿಂದ ನೀರು ಹರಿದು ಬರುತ್ತಿದೆ. ಮಳೆಗಾಲದಲ್ಲಿ ಇಡೀ ರಾಜಕಾಲುವೆ ಭರ್ತಿಯಾಗಿ ಹರಿಯುವುದರಿಂದ ಪಕ್ಕದ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗುತ್ತಿವೆ. ಕಾಲುವೆ ತುಂಬಿ ರಸ್ತೆ ಮೇಲೆಲ್ಲ ನೀರು ಹರಿಯುವುದರಿಂದ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದೆ. ಇದರಿಂದ ಕಳೆದ ವರ್ಷ ಓರ್ವ ವ್ಯಕ್ತಿ ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಲ್ಲದೆ, ವಾಹನಗಳು ನೀರಿನ ರಭಸಕ್ಕೆ ಹರಿದು ಹೋಗಿದ್ದವು. ಹೀಗೆ ಪ್ರತಿವರ್ಷ ಒಂದಿಲ್ಲೊಂದು ಸಮಸ್ಯೆ ಉದ್ಭವಿಸುತ್ತಿದೆ. ಹಾಗಾಗಿ ಇಂತಹ ದುರಂತಗಳನ್ನು ತಪ್ಪಿಸಲು ಅಮೃತಸಿಟಿ ಯೋಜನೆಯಡಿ ರಾಜಕಾಲುವೆ ನಿರ್ಮಿಸಲಾಗುತ್ತಿದ್ದು, ಈ ಯೋಜನೆ ಕೇವಲ ನೆಪ ಮಾತ್ರಕ್ಕೆ ಎನ್ನುವಂತಾಗಿದೆ.

ಅಧಿಕಾರಿಗಳ ಸಮರ್ಥನೆ: ಮುಳ್ಳು ಕಂಟಿಗಳು ತುಂಬಿ ಪ್ರವಾಹ ಬರುತ್ತಿದ್ದು, ನೀರು ಸರಾಗವಾಗಿ ಹೋಗುವುದಕ್ಕೆ 10 ಅಡಿ ಅಗಲದ ಕಾಲುವೆ ಸಾಕಾಗುತ್ತದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮುಂದೆ ಸಂಭವಿಸಬಹುದಾದ ದುರಂತಗಳಿಗೆ ಮುಂಚಿತವಾಗಿಯೇ ದೀರ್ಘಕಾಲದ ಪರಿಹಾರ ಕಂಡುಕೊಂಡರೆ ಸದ್ಯದ ರಾಜಕಾಲುವೆ ಮಾಡುತ್ತಿರುವುದು ಸಾರ್ಥಕವಾಗುತ್ತದೆ. ಇಲ್ಲದಿದ್ದರೆ ಕೋಟಿಗಟ್ಟಲೆ ಹಣ ವ್ಯಯಿಸಿ ಜನರ ಕಣ್ಣಿಗೆ ಮಣ್ಣೆರೆಚಿದಂತಾಗುತ್ತದೆ ಎಂದು ನಗರದ ಜನರು ದೂರುತ್ತಿದ್ದಾರೆ.

ಭೂಗಳ್ಳರಿಗೆ ಅನುಕೂಲ?: ರಾಜಕಾಲುವೆ ಸಂಕುಚಿತಗೊಳಿಸಿರುವುದರಿಂದ ಸರ್ಕಾರಿ ಜಾಗೆ ಒತ್ತುವರಿ ಮಾಡಿಕೊಳ್ಳುವ ಭೂಗಳ್ಳರಿಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಂತಾಗಿದ್ದು, ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಸಂಶಯ ವ್ಯಕ್ತವಾಗುತ್ತಿದೆ. ಹೈಕೋರ್ಟ್ ನಿಯಮ ಮೀರಿ ರಾಜಕಾಲುವೆ ದುರಸ್ತಿಗೆ ಗುತ್ತಿಗೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಮೊದಲಿನಷ್ಟೇ ಅಗಲ ಇರಲಿ
ಮಳೆಗಾಲದಲ್ಲಿ ರಾಜಕಾಲುವೆಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಮೊದಲಿನ ಅಳತೆಯಂತೆ ಕಾಲುವೆ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು. ಎಸ್.ಎಂ. ಅಂಗಡಿ, ಸ್ಥಳೀಯರು

40 ಅಡಿ ಕಾಲುವೆ ಇಲ್ಲ
ಚರಂಡಿ ಇಲ್ಲದಿದ್ದ ಕಾರಣ ನೀರು ಸರಾಗವಾಗಿ ಹರಿಯಲಾಗದೆ ಒಂದೆಡೆ ನಿಲ್ಲುತ್ತಿತ್ತು. ಇದರಿಂದ ನೀರು ಅಗಲವಾಗುತ್ತಿತ್ತು. ಇಲ್ಲಿ 40 ಅಡಿ ಅಗಲದ ರಾಜ ಕಾಲುವೆ ಇಲ್ಲ. ಅಲ್ಲದೆ, ಇದು ಸರ್ಕಾರದಿಂದ ಅನುಮೋದಿತಗೊಂಡಿದೆ. ಸದ್ಯ ನಿರ್ಮಾಣವಾಗುತ್ತಿರುವ ಕಾಲುವೆಯಲ್ಲಿ ಮೊದಲಿಗಿಂತ ಒಂದೂವರೆ ಪಟ್ಟು ಹೆಚ್ಚು ನೀರು ಹೋಗುತ್ತದೆ. ಒಂದು ವೇಳೆ ರಾಜಕಾಲುವೆ ಅತಿಕ್ರಮಣವಾಗಿದ್ದರೆ ತೆರವುಗೊಳಿಸುತ್ತೇವೆ. ರಮೇಶ್ ಜಾಧವ, ಪೌರಾಯುಕ್ತರು, ಗದಗ-ಬೆಟಗೇರಿ ನಗರಸಭೆ

ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಯುವಕನ ಅಪಹರಣ?

0

ವಿಜಯಸಾಕ್ಷಿ ಸುದ್ದಿ, ಬೀದರ್: ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ಹುಲ್ಯಾಳ ತಾಂಡದ ಯುವಕ ಅಪಹರಣಕ್ಕೊಳಗಾಗಿರುವ ಘಟನೆ ನಡೆದಿದೆ.

ಹುಲ್ಯಾಳ ತಾಂಡಾದ 21 ವರ್ಷದ ಅಜಯ್ ರಾಠೋಡ್ ಡಿ.14 ರಂದು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ. ಜನವರಿ 16 ರಂದು ಅಜಯ್ನನ್ನು ಅಪಹರಿಸಿದ ದುಷ್ಕರ್ಮಿಗಳು, ಹುಲ್ಯಾಳ ತಾಂಡದಲ್ಲಿರುವ ಆತನ ಸಂಬಂಧಿಕರಿಗೆ ಫೋನ್ ಮಾಡಿ 1 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ ಮಾಡಿದ್ದಾರೆ.

ಯುವಕನ ಸಂಬಂಧಿಕರು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ಅವರ ಗಮನಕ್ಕೆ ತಂದಿದ್ದಾರೆ. ದುಷ್ಕರ್ಮಿಗಳು ಆ ಬಳಿಕ ಅಜಯ್​ನನ್ನು ಕಿರ್ಗಿಸ್ತಾನ್​ಗೆ ಕರೆದುಕೊಂಡು ಹೋಗಿ 1 ಕೋಟಿ ನೀಡದಿದ್ದಲ್ಲಿ ಅಫ್ಘಾನಿನಿಸ್ತಾನ ಗಡಿಯಲ್ಲಿ ಕೊಂದು ಬಿಸಾಕುವ ಬೆದರಿಕೆ ಕರೆ ಮಾಡುವುದರ ಜೊತೆಗೆ ಆತನ ಕೈ-ಕಾಲುಗಳನ್ನು ಕಟ್ಟಿ ಹಾಕಿರುವ ಫೋಟೋ ರವಾನಿಸಿದ್ದಾರೆ.

ಎರಡು ಬಾರಿ ವಿಡಿಯೋ ಕಾಲ್ ಮೂಲಕ ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಕೂಡಲೇ ಹಣ ನೀಡುವಂತೆ ಒತ್ತಾಯ ಮಾಡಿದ್ದಾರೆ. ಆದರೆ ಈ ಘಟನೆ ಕುರಿತು ಸ್ಪಷ್ಟನೆ ನೀಡಿರುವ ಬೀದರ್ ಎಸ್ಪಿ ನಾಗೇಶ್, ಕಿಡ್ನಾಪ್ ಆಗಿರುವ ಕುರಿತು ಸ್ಪಷ್ಟ ಮಾಹಿತಿಯಿಲ್ಲ.‌ ಆ ಹುಡುಗನೇ ಕುಟುಂಬಸ್ಥರನ್ನು ಸಂಪರ್ಕಿಸಿದ್ದು, ಕಿರ್ಗಿಸ್ಥಾನಕ್ಕೆ ಹೋಗಿರುವುದಾಗಿ ತಿಳಿಸಿದ್ದಾನೆ. ನಾವು ಇಂಡಿಯನ್ ಅಂಬಾಸಿ ಅಧಿಕಾರಿಗಳಿಗೆ ಸಂಪರ್ಕಿಸಿದ್ದು, ಅವರು ಈಗ ಆ ಹುಡುಗನನ್ನು ಮರಳಿ ತವರಿಗೆ ಕಳಿಸುತ್ತಿದ್ದಾರೆ. ಕಿಡ್ನ್ಯಾಪ್ ಕುರಿತು, ಅಲ್ಲಿಯ ಅಧಿಕಾರಿಗಳಿಗೂ ಸಹ ಹುಡುಗ ಸರಿಯಾದ ಮಾಹಿತಿ ನೀಡಿಲ್ಲ ಎಂದಿದ್ದಾರೆ. ಆತ ಮರಳಿ ಬಂದ ನಂತರ ಹೆಚ್ಚಿನ ಮಾಹಿತಿಗೆ ಆತನನ್ನೇ ಸಂಪರ್ಕಿಸಬೇಕಾಗುತ್ತದೆ ಎಂದರು.

ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ದಬ್ಬಾಳಿಕೆ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಇಲ್ಲಿನ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಶಾಸಕಿ ಸೌಮ್ಯಾರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದ ವೇಳೆ ಶಾಸಕಿ ಕಾರ್ಯನಿರತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ.

ಅಲ್ಲದೇ, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಪೊಲೀಸರ ಮೇಲೆ ದೌವಲತ್ತು ಪ್ರದರ್ಶಿಸಿರುವ ಶಾಸಕಿ ಅಲ್ಲೇ ಇದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ದೂರು ನೀಡಿದ್ದಾರೆ.

ಕಳೆದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕಿ ಸೌಮ್ಯಾರೆಡ್ಡಿಯವರ ತಂದೆಯಾಗಿರುವ ರಾಮಲಿಂಗಾರೆಡ್ಡಿಯವರು ಗೃಹ ಸಚಿವರಾಗಿದ್ದರು.

ಹಾಗಾಗಿ, ಅಂತಹ ಹಿರಿಯ ರಾಜಕಾರಣಿ ಹಾಗೂ ಮಾಜಿ ಗೃಹ ಮಂತ್ರಿಯ ಪುತ್ರಿ ಸೌಮ್ಯಾರೆಡ್ಡಿ ಅವರ ಸಭ್ಯತೆ‌ ಇದೆನಾ? ಎಂಬ ಪ್ರಶ್ನೆ ಎದ್ದಿದೆ. ಸದ್ಯ ಶಾಸಕರ ಈ ವರ್ತನೆಗೆ ವ್ಯಾಪಕ ಖಂಡ‌ನೆ ವ್ಯಕ್ತವಾಗುತ್ತಿದೆ.

ಪಾದಯಾತ್ರೆಗೆ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಬದಲಾಗುತ್ತೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಕಲ್ಯಾಣ ಕರ್ನಾಟಕ ದಾಟುವುದರೊಳಗೆ ಸರಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ದಾವಣಗೆರೆಯಲ್ಲಿ ನಮ್ಮ ಘೋಷಣಾ ವಾಕ್ಯ ಬದಲಾಗುತ್ತೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಕೊಪ್ಪಳದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿಯ ಪಾದಯಾತ್ರೆ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 1994 ರಿಂದಲೂ ಪಂಚಮಸಾಲಿ ಸಮುದಾಯ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಶುರು ಮಾಡಿದ್ವಿ. ಲಿಂಗಾಯತರಲ್ಲೇ ಹಿಂದುಳಿದ ಪಂಚಮಸಾಲಿ ಸಮುದಾಯಕ್ಕೆ ಸಂವಿಧಾನಿಕ ಹಕ್ಕು ಬೇಕಿದೆ. ಕುರುಬ ಮತ್ತು ವಾಲ್ಮೀಕಿ ಸಮುದಾಯದ ಸದ್ಯ ಮೀಸಲಾತಿಗೆ ದೊಡ್ಡ ಹೋರಾಟ ಆರಂಭಿಸಿವೆ.

ಇದೇ ವೇಳೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಹೋರಾಟ ಆರಂಭಿಸಿದ್ದು ಸಮಯೋಚಿತ. ಇದುವರೆಗೆ ಪಂಚಮಸಾಲಿ ಸಮುದಾಯ ನಾಡಿಗಾಗಿ, ರೈತರಿಗಾಗಿ, ಜನತೆಗಾಗಿ ಹೋರಾಟ ಮಾಡಿದೆ ಇದೇ ಮೊದಲ ಬಾರಿಗೆ ತಮ್ಮ ಸಮುದಾಯಕ್ಕಾಗಿ ಹೋರಾಟ ಮಾಡ್ತಿದೆ. ಸಿಎಂ ಯಡಿಯೂರಪ್ಪ ನಿಜವಾಗಿಯೂ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದರೆ ಮೀಸಲಾತಿ ನೀಡಬೇಕು .ಕರ್ನಾಟಕದ 3 ಪ್ರಭಲ ಸಮುದಾಯಕ್ಕೆ ಮೀಸಲಾತಿ ನೀಡಬೇಕಿದೆ.

ದಾವಣಗೆರೆ ತಲುಪುವ ಒಳಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಹೋರಾಟದ ತೀವ್ರತೆ ಬದಲಾಗಲಿದೆ. ನಮ್ಮ ಘೋಷ ವಾಕ್ಯಗಳೂ ಬದಲಾಗಲಿವೆ ಎಂದು ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು. ಪಕ್ಷಾತೀತವಾಗಿ ಎಲ್ಲ ನಾಯಕರು ಜನಪ್ರತಿನಿಧಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಅಮರೇಗೌಡ ಪಾಟೀಲ್ ಬಯ್ಯಾಪೂರ, ದೊಡ್ಡನಗೌಡ ಪಾಟೀಲ್, ಬಸವರಾಜ ರಾಯರೆಡ್ಡಿ ಸೇರಿದಂತೆ ಎಲ್ಲರೂ ಬೆಂಬಲ ನೀಡಿದ್ಧಾರೆ. ಸಚಿವರಾದ ಸಿ.ಸಿ.ಪಾಟೀಲ್ ಮತ್ತು ಸಂಸದ ಕರಡಿ ಸಂಗಣ್ಣ ನಮ್ಮ ಪರವಾಗಿ ಸರಕಾರದ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

ಕೊಪ್ಪಳದಲ್ಲಿ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ರ‌್ಯಾಲಿ

ನಾವು ಯಾವುದೇ ಕಾರಣಕ್ಕೂ ನಮ್ಮ ಸಮುದಾಯದ ಜನಪ್ರತಿನಿಧಿಗಳನ್ನು ರಾಜೀನಾಮೆ ನೀಡಿ ಹೋರಾಟ ಮಾಡಿ ಎಂದು ಹೇಳುವುದಿಲ್ಲ. ಸರಕಾರದೊಳಗೆ ಇದ್ದೇ ಹೋರಾಟ ಮಾಡಿ ಎನ್ನುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಶಿವರಾಮೆಗೌಡ, ವಿಜಯ ಕಾಶಪ್ಪನವರ್, ಜಿಲ್ಲಾಧ್ಯಕ್ಷ ಬಸವರಾಜ್ ಭೂತೆ, ವೀಣಾ ಕಾಶಪ್ಪನವರ, ಕಿಶೋರಿ ಬೂದನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

2ಎ ಮೀಸಲಾತಿ ಬೇಡಿಕೆ ಈಡೇರದಿದ್ದರೆ ಕ್ರಾಂತಿಯ ಹೋರಾಟ- ವಿಜಯ ಕಾಶಪ್ಪನವರ್ ಎಚ್ಚರಿಕೆ
ಕೊಪ್ಪಳ : ಪಂಚಮಸಾಲಿ ಮೀಸಲಾತಿ ಹೋರಾಟ ಕಳೆದ 26 ವರ್ಷಗಳಿಂದ ನಡೆದಿದೆ. ಈಗಾಗಲೇ ಮೂರು ಹಂತದ ಹೋರಾಟವಾಗಿದೆ. ಇದು ನಾಲ್ಕನೇ ಹಂತದ ಕೊನೆಯ ಹೋರಾಟ ಪಾದಯಾತ್ರೆ . ಇದು ಅಂತಿಮ ಹೋರಾಟ ಮಾಡು ಇಲ್ಲವೆ ಮಡಿ ಎನ್ನುವಂತಹ ಹೋರಾಟ. ಜೀವವಾದರೂ ಕಳೆದುಕೊಳ್ಳುತ್ತೇವೆ ಆದರೆ ಮೀಸಲಾತಿಯನ್ನು ಬಿಡುವುದಿಲ್ಲ ಎಂದು ಮಾಜಿ ಶಾಸಕ , ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದರು.
ಇಂದು ಕೊಪ್ಪಳದಲ್ಲಿ ನಡೆದ ಪಾದಯಾತ್ರೆ ಪೂರ್ವದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಹೋರಾಟ ಯಾವುದೇ ಹಂತಕ್ಕೆ ಹೋಗಲಿ. ಶಾಂತಿಯುವಾಗಿ ಹೋರಾಟ ನಡೆಯುತ್ತಿದೆ. ಮುಂದೆ ಕ್ರಾಂತಿಯಾಗುತ್ತೆ ಬೆಂಗಳೂರು ಮುಟ್ಟುವುದರಲ್ಲಿ ಘೋಷಣೆ ಮಾಡದೇ ಹೋದರೆ ಕ್ರಾಂತಿಯ ರೂಪ ಪಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು. ನಾವು ಕೇಳುತ್ತಿರುವುದು ಶೈಕ್ಷಣಿಕ ಹಾಗೂ ಉದ್ಯೋಗ ಮೀಸಲಾತಿಯನ್ನು ರಾಜಕೀಯ ಮೀಸಲಾತಿಯನ್ನು ಕೇಳುತ್ತಿಲ್ಲ. ಗೋವಿಂದ ಕಾರಜೋಳ ತಮ್ಮ ಸಮುದಾಯಕ್ಕೆ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ನಾವು ಅವರ ಬಗ್ಗೆ ಮಾತನಾಡುವುದಿಲ್ಲ . ನಮಗೆ ಮೀಸಲಾತಿ ಬೇಕಾಗಿದೆ ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ಕಾರಜೋಳ ಗೆಲುವಿನಲ್ಲೂ ಪಂಚಮಸಾಲಿ ಸಮಾಜದ ಬಹುಪಾಲಿದೆ. ಯಡಿಯೂರಪ್ಪ ಸರಕಾರ ರಚನೆಯಲ್ಲಿ 15ಜನ ಪಂಚಮಸಾಲಿ ಸಮಾಜದ ಶಾಸಕರು ಮತ್ತು ಪಂಚಮಸಾಲಿ ಸಮಾಜದಿಂದ ಎಂದು ಹೇಳಿದರು.

error: Content is protected !!