ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗಿರುವುದು ಖುಷಿ ತಂದಿದೆ. ಕೊನೆಗೂ ಸುಳ್ಯ ಜನತೆಯ ಬೇಡಿಕೆ ಈಡೇರಿದೆ. ಮಂಗಳೂರಿನ ಹೊಸ ಸಚಿವರಿಗೆ ನಾವು ಸದಾ ಬೆಂಬಲ ಕೊಡುತ್ತೇವೆ. ಆದರೆ, ದಕ್ಷಿಣ ಕನ್ನಡದ ಹಿರಿಯ ಉಸ್ತುವಾರಿ ಸಚಿವರ ಬದಲಾವಣೆ ಎಷ್ಟು ಸರಿ.? ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನಿಸಿದರು.
ಮಂಗಳೂರಿನಲ್ಲಿ ಈ ಕುರಿತು ಮಾತನಾಡಿರುವ ಅವರು, ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ನೀಡಲಾಗಿದೆಯಾ? ಎಂಬ ಬಗ್ಗೆ ಜನರು ಈ ಎಲ್ಲಾ ವಿಚಾರ ಅರ್ಥ ಮಾಡಿಕೊಳ್ಳಬೇಕಾಗಿದೆ. ಆಡಳಿತದಲ್ಲಿರೋ ಸರ್ಕಾರದ ಸದಸ್ಯರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ದೂಷಿಸಿದರೆ ದೇಶದ್ರೋಹಿ ಎಂದಾದರೆ, ಸಿಎಂರನ್ನು ದೂಷಿಸಿದರೆ ದೇಶದ್ರೋಹಿ ಆಗಲ್ವಾ.?. ಇದಕ್ಕೆಲ್ಲಾ ಪಕ್ಷದ ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಬೇಕು. ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಯವರೇ ಮುನಿರತ್ನಗೆ ಸಚಿವ ಸ್ಥಾನ ಕೊಡದಿರುವುದ್ದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.
ಯಡಿಯೂರಪ್ಪ ಮೇಲೆ ಅಪಾರ ನಂಬಿಕೆ ಇತ್ತು. ಅವರಿಗೆ ಸನ್ (ಮಗ ವಿಜಯೇಂದ್ರ ) ಸ್ಟ್ರೋಕ್ ಆಗಿದೆ. ಕಾಂಗ್ರೆಸ್, ಜನತಾ ಪರಿವಾರವೂ ಸನ್ ಸ್ಟ್ರೋಕ್ ನಲ್ಲಿ ಮುಗಿದಿತ್ತು, ಬಿಜೆಪಿಯೂ ಹಾಗೆ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಯಡಿಯೂರಪ್ಪ ವಿರುದ್ಧ ಹರಿಹಾಯ್ದರು.
ರಾಯಚೂರಿನಲ್ಲಿ ಮಾತನಾಡಿದ ಅವರು, ಯಾರ ಭಿಕ್ಷೆ, ತ್ಯಾಗದಿಂದ ನೀವು ಸಿಎಂ ಆಗಿದ್ದಿರಿ ಎಂಬುವುದನ್ನ ಮರೆತಿದ್ದಿರಿ. ಸಂಪುಟ ರಚನೆಯಲ್ಲಿ ಹೈಕಮಾಂಡ್ ಒತ್ತಡವಿಲ್ಲ. ಹಣದ ಒತ್ತಡದಿಂದ ಮಂತ್ರಿ ಮಂಡಲ ರಚನೆಯಾಗಿದೆ. ಮಾತು ತಪ್ಪಿದ ಬಿಎಸ್ ವೈ, ನಾಲಿಗೆ ಇಲ್ಲದ ಯಡಿಯೂರಪ್ಪ ಅವರಿಂದ ದಲಿತ ನಾಗೇಶ್ ಹಿಂದುಳಿದ ವರ್ಗದ ಮುನಿರತ್ನಗೆ ಅನ್ಯಾಯವಾಗಿದೆ ಎಂದು ಯಡಿಯೂರಪ್ಪ ವಿರುದ್ಧ ಕಿಡಿಕಾರಿದರು.
ದಲ್ಲಾಳಿ, ಜೈಲು ಸೇರುವಂತಹ ಭ್ರಷ್ಟ ಸಿ.ಪಿ.ಯೋಗಿಶ್ವರ್ ಗೆ ಸಚಿವ ಸ್ಥಾನ ನೀಡಿದ್ದಾರೆ. ಯೋಗಿಶ್ ಮೇಲೆ 9731 ಜನರಿಗೆ ಮನೆ ನೀಡುವುದಾಗಿ ವಂಚನೆ ಮಾಡಿದ್ದಾನೆ. ಇವನ ವಿರುದ್ಧ ವಂಚನೆಗೊಳಗಾದವರು ಗ್ರಾಹಕರ ವೇದಿಕೆ ದೂರು ನೀಡಿದ್ದಾರೆ. ಅಲ್ಲದೇ, ಗ್ರಾಹಕ ವೇದಿಕೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಗಂಭೀರ ವಂಚನೆ ಪ್ರಕರಣದಲ್ಲಿ ಯೋಗೇಶ್ವರ್ ಜಾಮೀನು ಮೇಲೆ ಹೊರಗಿದ್ದಾರೆ. ಬೇಲ್ ವೆಕೆಂಟ್ ಆದ್ರೆ ಯೋಗಿಶ್ವರ್ ಜೈಲಿಗೆ ಹೋಗುತ್ತಾನೆ. ಹಾಗಾಗಿ ಸೈನಿಕ ಎಂದಿದ್ದೆ ತಪ್ಪಾಗಿದೆ, ಸೈನಿಕರಿಗೆ ಅವಮಾನ ಮಾಡಿದಂತಾಗಿದೆ ಎಂದು ಸಿಪಿ ಯೋಗಿಶ್ವರ್ ವಿರುದ್ಧ ಕೆಂಡಾಮಂಡಲವಾದರು.
ವಂಶ, ಕುಟುಂಬ ರಾಜಕಾರಣ ಗೆದ್ದಲಿದ್ದಂತೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಯಡಿಯೂರಪ್ಪ ಕುಟುಂಬ ರಾಜಕಾರಣ ಬಗ್ಗೆ ಹೈಕಮಾಂಡ್ ಗಮನಿಸಬೇಕು ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಗದಗ-ಬೆಟಗೇರಿ ಅವಳಿ ನಗರದ ಹೃದಯ ಭಾಗವಾಗಿರುವ ಪಾಲಾ ಬಾದಾಮಿ ರಸ್ತೆಯ ಪಕ್ಕದ ರಿಜಿಸ್ಟರ್ ಸರ್ವೆ ನಂ. 6706/75ಎ ದಿಂದ 22/2ಎ1 ನೇದ್ದರಲ್ಲಿ ಸರ್ಕಾರದ ನಿಯಮಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡದೆ ದಲಿಚಂದ ಮೇಘರಾಜ ಕೋಠಾರಿ ಸಹಿತ 31 ಮಾಲೀಕರು ಅಕ್ರಮ ವಾಣಿಜ್ಯ ಕಟ್ಟಡ ಕಟ್ಟುತ್ತಿದ್ದಾರೆ. ಕಾಮಗಾರಿಯೂ ಮುಕ್ತಾಯದ ಹಂತದಲ್ಲಿದೆ.
ನಗರಸಭೆಯ ಅಂದಿನ ಪೌರಾಯಕ್ತರು 16 ಅಕ್ಟೋಬರ್ 2015ರಲ್ಲಿ ಕಟ್ಟಡ ನಿರ್ಮಿಸುವುದಕ್ಕೆ ಪರವಾನಿಗಿ ನೀಡಿದ್ದಾರೆ. ಆದರೆ, ಐದು ವರ್ಷಗಳ ಅನಂತರ ಅಂದರೆ, 2020ರ ಸಪ್ಟೆಂಬರ್ 8 ಹಾಗೂ ಡಿಸೆಂಬರ್ 12ರಂದು ಎರಡು ನೋಟಿಸ್ ಜಾರಿ ಮಾಡಿದ್ದರು. ಈ ವೇಳೆ ಛಾಯಾಚಿತ್ರ ಸಮೇತ ಲಿಖಿತ ಉತ್ತರ ನೀಡಬೇಕು ಎಂದು ಮಾಲೀಕರಿಗೆ ಸೂಚಿಸಿದ್ದರು. ತಪ್ಪಿದರೆ ಸೂಕ್ತ ಕಾನೂನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ, ಮೂರು ತಿಂಗಳು ಕಳೆದರೂ ಮಾಲೀಕರು ನಗರಸಭೆ ನೋಟಿಸ್‌ಗೆ ಉತ್ತರಿಸಿಲ್ಲ. ಅಲ್ಲಿ ಐತಿಹಾಸಿಕ ಬಾವಿಗಳು ಇದ್ದವೆಂದು ನಗರದ ಜನರೇ ಹೇಳುತ್ತಿದ್ದಾರೆ. ಆದರೂ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ.
ನಗರಸಭೆ ಪೌರಾಯುಕ್ತ ರಮೇಶ್ ಪಾಂಡುರಂಗ ಜಾಧವ್, ಕಟ್ಟಡ ಮಾಲೀಕರಿಗೆ ಎರಡು ನೋಟಿಸ್ ನೀಡಿದ್ದೇವೆ. ನಗರ ಸ್ಥಳೀಯ ಸಂಸ್ಥೆಗಳ ನಿಯಮ 187 ಪ್ರಕಾರ ಇನ್ನೊಮ್ಮೆ ನೋಟಿಸ್ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಅದರಲ್ಲಿ ಯಾವುದೇ ಮುಲಾಜಿಲ್ಲ. ಇದರ ಬಗ್ಗೆ ಸಾಕಷ್ಟು ಪ್ರಚಾರವೂ ಆಗಿದೆ. ಜನರಲ್ಲೂ ಕುತೂಹಲ ಹೆಚ್ಚಿದೆ. ಹಾಗಾಗಿ ಹೇಳುವುದಕ್ಕಿಂತ ಕೆಲಸ ಮಾಡುವುದೇ ನಮ್ಮ ವಿಚಾರವೆಂದು ವಿಜಯಸಾಕ್ಷಿ ಪತ್ರಿಕೆಗೆ ಒಂದು ವಾರದ ಹಿಂದೆಯೇ ಪ್ರತಿಕ್ರಿಯಿಸಿದ್ದರು.
ನೋಟಿಸ್‌ಗಿಲ್ಲ ಉತ್ತರ?:
ನಗರದ ರೋಟರಿ ವೃತ್ತದಲ್ಲಿ ಎರಡು ವರ್ಗಗಳಲ್ಲಿ ನಿರ್ಮಿಸುತ್ತಿರುವ ಅಕ್ರಮ ವಾಣಿಜ್ಯ ಕಟ್ಟಡ ಮಾಲೀಕರಿಗೆ ಎರಡು ನೋಟಿಸ್ ನೀಡಿದ್ದು, ಇನ್ನೊಂದು ನೋಟಿಸ್ ಅಷ್ಟೇ ಬಾಕಿ ಉಳಿದಿದೆ ಎನ್ನುವ ಅಧಿಕಾರಿಗಳು, ಈ ಹಿಂದೆ ಕೊಟ್ಟಿರುವ ಎರಡು ನೋಟಿಸ್ ಗಳಿಗೆ ಉತ್ತರ ಬಂದಿದೆಯೇ? ಬಂದಿದ್ದರೆ ಬಹಿರಂಗ ಪಡಿಸಬಹುದಲ್ಲವೇ? ಇನ್ನೂ ಉತ್ತರ ಬಂದಿಲ್ಲವೆಂದಾದರೆ ಉಳಿದಿರುವ ಇನ್ನೊಂದು ನೋಟಿಸ್ ಜಾರಿ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬಹುದಲ್ಲವೇ? ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದೀರಿ, ಕ್ರಮ ತೆಗೆದುಕೊಂಡಿರಾ ಅಥವಾ ಅವಘಡ ಸಂಭವಿಸಿ ಪ್ರಾಣ ಹಾನಿ ಆಗುವವರೆಗೆ ಕಾದು ಕುಳಿತಿದ್ದೀರಾ? ಎಂದು ಜಿಲ್ಲೆಯ ಜನರು ಪ್ರಶ್ನಿಸುತ್ತಿದ್ದು, ನಗರಸಭೆಯ ಪೌರಾಯುಕ್ತರು ಉತ್ತರಿಸಬೇಕಿದೆ.
ಅಧಿಕಾರಿಗಳಿಗೆ ಪ್ರಭಾವಿಗಳ ಒತ್ತಡ?:
ವಾಣಿಜ್ಯ ಕಟ್ಟಡ ನಿರ್ಮಾಣ ಮತ್ತು ಅನುಮತಿಯಲ್ಲಿ ಅಧಿಕಾರಿಗಳು, ಕೆಲ ಪ್ರಭಾವಿ ಜನಪ್ರತಿನಿಧಿಗಳು ಮಾಲೀಕರ ಅಕ್ರಮದಲ್ಲಿ ಭಾಗಿಯಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಲಂಚಗುಳಿ ಅಧಿಕಾರಿಗಳು ಮಾಲೀಕ ದಲಿಚಂದ ಹಾಗೂ ಉಳಿದ 31 ಜನರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು, ನಗರದ ಜನತಾ ಬಜಾರ್ ಹಾಗೂ ಸ್ಟೇಷನ್ ರಸ್ತೆ ಮಧ್ಯೆ ಬರುವ ನಂಬರ್ ಬಟ್ಟೆ ಅಂಗಡಿಗಳನ್ನು ಸ್ಥಳಾಂತರಿಸುವುದಕ್ಕಾಗಿಯೇ ಈ ಕಟ್ಟಡವನ್ನು ಕಟ್ಟಲಾಗುತ್ತಿದೆ ಎಂದು ಅಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ತಿಳಿಸಿದರು.
ಮುಂದುವರೆದ ಕಾಮಗಾರಿ
ನಗರಸಭೆ ಅಧಿಕಾರಿಗಳು ನೋಟಿಸ್ ನೀಡಿದರೂ, ಉತ್ತರಿಸದ ಮಾಲೀಕರು ಕಟ್ಟಡ ಕಾಮಗಾರಿಯನ್ನು ಮಾತ್ರ ಯಾರ ಭಯವೂ ಇಲ್ಲದೆ ಮುಂದುವರೆಸಿದ್ದಾರೆ. ಕಟ್ಟಡ ಹೊರಗಿನ ಕೆಲಸ ಬಹುತೇಕ ಮುಗಿದಿದ್ದು, ಒಳಗಡೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪಾಲಾ ಬದಾಮಿ ಮುಖ್ಯರಸ್ತೆಯಲ್ಲಿರುವ ಕಟ್ಟಡದ ಪಕ್ಕದಲ್ಲೇ ಇವರದೇ ಎನ್ನಲಾಗುತ್ತಿರುವ ಇನ್ನೊಂದು ಬೃಹತ್ ಕಟ್ಟಡ ತಲೆ ಎತ್ತುತ್ತಿದೆ. ಇದೂ ನಿರ್ಮಾಣದ ಹಂತದಲ್ಲಿದೆ. ದಿನನಿತ್ಯ ನಗರಸಭೆ ಅಧಿಕಾರಿಗಳು ಕಟ್ಟಡ ಮುಂದೆಯೇ ಹಾದು ಹೋದರೂ ಅಕ್ರಮ ಕಟ್ಟಡ ಕುರಿತು ತುಟಿ ಬಿಚ್ಚಿ ಮಾತನಾಡುತ್ತಿಲ್ಲ ಎಂಬ ಮಾತುಗಳು ನಗರದಲ್ಲಿ ಹರಿದಾಡುತ್ತಿವೆ.
ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು: ರಾಜಕೀಯ ಎದುರಾಳಿಗಳು, ಒಂದೇ ಸಮುದಾಯದವರಾದ ಈಶ್ವರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ವಾಗ್ದಾಳಿ ನಡೆಯುವುದು ಸಾಮಾನ್ಯ.
ಚಿಕ್ಕಮಗಳೂರಿನಲ್ಲಿ ನಡೆದ ಜನಸೇವಕ್ ಸಮಾವೇಶದಲ್ಲಿಯೂ ಸಹ ಈಶ್ವರಪ್ಪ ಸಿದ್ದರಾಮಯ್ಯ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.
ಸಿದ್ದರಾಮಯ್ಯ ಏನಾದರೂ ತಿಂದು ಸಾಯಲಿ, ನಮಗೂ ಅದಕ್ಕೂ ಸಂಬಂಧವಿಲ್ಲ. ಗೋಮಾಂಸ ತಿಂತೀನಿ, ನಾಟಿ ಕೋಳಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳ್ತಾರೆ. ಅವರು ಏನಾದ್ರು ತಿಂದು ಸಾಯಲಿ ಎಂದು ಇಲ್ಲಿ ನಡೆದ, ಜನಸೇವಕ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು.
ಚಮಚಾಗಿರಿ ಮಾಡೋರಿಗೆ ಕಿಮ್ಮತ್ತು ನೀಡೋದು ಕಾಂಗ್ರೆಸ್. ಹೊಗಳುಭಟ್ಟರನ್ನ, ಬಾಲಬಡುಕರನ್ನು ಅಟ್ಟಕೇರಿಸುವ ಚಾಳಿ ಕಾಂಗ್ರೆಸ್‌ನಲ್ಲಿದೆ. ಇದು ಕಾಂಗ್ರೆಸ್‌ನಲ್ಲಿರುವ ಶಿಸ್ತು. ಬಿಜೆಪಿಯಲ್ಲಿ ಇದು ನಡೆಯೋದಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗುಡುಗಿದರು.
ಕೊಪ್ಪಳದ ಶಿವಶಾಂತ ಮಂಗಲಭವನದ ಆವರಣದಲ್ಲಿ ಬುಧವಾರ ನಡೆದ ಬಿಜೆಪಿಯ ಜನಸೇವಕ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಜಗಳ ಆರಂಭವಾಗಿದೆ. ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರು ಮಾತನಾಡುತ್ತಿರುವ ವೇಳೆ ಸಿದ್ದರಾಮಯ್ಯ ಗಡದ್ದಾಗಿ ನಿದ್ದೆ ಮಾಡ್ತಾರೆ. ಇದು ಕಾಂಗ್ರೆಸ್‌ನಲ್ಲಿರುವ ಶಿಸ್ತು. ಕಾರ್ಯಕರ್ತರಿಗೆ ಕಿಮ್ಮತ್ತು ಕೊಡದ ಕಾಂಗ್ರೆಸ್ ಅಧೋಗತಿಯಲ್ಲಿದೆ. ಬಿಜೆಪಿ ಆಕಾಶದೆತ್ತರಕ್ಕೆ ಬೆಳೆಯುತ್ತಾ ಹೊರಟಿದ್ದರೆ, ಕಾಂಗ್ರೆಸ್ ಪಾತಾಳದತ್ತ ಕುಸಿಯುತ್ತಿದೆ. ಅದಕ್ಕೆ ಮಾಲೀಕಯ್ಯ ಗುತ್ತೆದಾರ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ ಎಂದರು.
ಗೋಮಾತೆಗೆ ಅವಮಾನಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು. ಪಶು ಸಂಗೋಪನಾ ಸಚಿವ ಪ್ರಭು ಚಹ್ವಾಣ ಅವರು ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿ ದೊಡ್ಡ ಕೆಲಸ ಮಾಡಿದ್ದಾರೆ. ಗೋಹತ್ಯೆ ಮಾಡಿದರೆ 3 ಲಕ್ಷ ರೂಪಾಯಿ ದಂಡ, 3 ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಗೋಮಾಂಸ ತಿನ್ನುತ್ತೇನೆ ಎನ್ನುವ ಹಿಂದೂಗಳ ಭಾವನೆಗೆ ಧಕ್ಕೆ ತರುವಂಥವರನ್ನು ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಮಾತನಾಡಿ, ಕಾಂಗ್ರೆಸ್‌ನವರು ಎಂದಿಗೂ ಭಾರತ್ ಮಾತಾ ಕೀ ಜೈ ಎನ್ನುವುದನ್ನು ಕಲಿಸಲೇ ಇಲ್ಲ. ಅಲ್ಲೇನಿದ್ದರೂ ಇಂದಿರಾ ಗಾಂಧಿ ಕೀ ಜೈ, ಈಗ ಪ್ರಿಯಾಂಕಾ ಗಾಂಧಿ ಕೀ ಜೈ ಎನ್ನುವ ಹೊಗಳುಭಟ್ಟರ ದಂಡಿದೆ. ಕಾಂಗ್ರೆಸ್ ಬಕೆಟ್ ಹಿಡಿಯೋರಿಗೆ, ಡೋರ್ ತೆಗೆಯೋರಿಗೆ ಮಣೆ ಹಾಕ್ತಾರೆ ಎಂದು ಕಿಡಿ ಕಾರಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾತನಾಡಿ, ಬಿಜೆಪಿ ಪಾರ್ಟಿ ವಿತ್ ಡಿಫರೆನ್ಸ್ ಅನ್ನೋದಕ್ಕೆ ಇಲ್ಲಿನ ಕಾರ್ಯಕ್ರಮ ಸಾಕ್ಷಿ. ಬೆಂಗಳೂರಿನಲ್ಲಿ ನೂತನ ಸಚಿವರ ಪ್ರಮಾಣ ವಚನ ನಡೆದಿದೆ. ಇಲ್ಲಿ ಸಮಾವೇಶ ನಡೆದಿದೆ. 11ನೇ ತಾರೀಖಿನಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನಸೇವಕದ ಸಮಾವೇಶ ಆರಂಭವಾಗಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ಇದು ಬಿಜೆಪಿ ನಡೆದು ಬಂದಿರುವ ಹಾದಿ. 45 ಸಾವಿರಕ್ಕಿಂತ ಹೆಚ್ಚು ಜನ ಬಿಜೆಪಿ ಬೆಂಬಲಿತರು ಗ್ರಾಪಂ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಪ್ರಧಾನಿಯಂತೆ ಮುಂದಿನ 6 ವರ್ಷಗಳ ಕಾಲ ಕಪ್ಪುಚುಕ್ಕೆ ಇಲ್ಲದಂತೆ ಗ್ರಾಪಂ ನೂತನ ಸದಸ್ಯರು ಕೆಲಸ ಮಾಡಬೇಕಿದೆ. ಮುಂದಿನ ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿಸಲು ಶಪಥ ಮಾಡಬೇಕು ಎಂದರು.
ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಸ್ಥಾನಮಾನ ಇದೆ. ಸಾಮಾನ್ಯ ಕಾರ್ಯಕರ್ತನೂ ದುಡಿಯುವ ಪಕ್ಷ ಎಂದರೆ ಬಿಜೆಪಿ. ಗ್ರಾಪಂನ ಬಿಜೆಪಿ ಬೆಂಬಲಿತ ನೂತನ ಸದಸ್ಯರು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಕೆಲಸ ಮಾಡಿ, ಪಕ್ಷ ಬೆಳೆಸಿ ಎಂದು ಅವರು ಕರೆ ನೀಡಿದರು.
ಪಶು ಸಂಗೋಪನಾ ಸಚಿವ ಪ್ರಭು ಚಹ್ವಾಣ್ ಮಾತನಾಡಿ, ಗೋಹತ್ಯೆ ನಿಷೇಧ ಮಾಡಿದ್ರೆ ಕಾಂಗ್ರೆಸ್‌ನವರಿಗೆ ಸಹಿಸಲು ಆಗುತ್ತೆ. ಬಿಜೆಪಿಯವರಿಗೆ ಗೋವು ತಾಯಿ ಸಮಾನ. ಕಾಂಗ್ರೆಸ್‌ನವರಿಗೆ ಗೋವಿನ ಹಾಲು, ಮೊಸರು ಬೇಡ ಅನಿಸುತ್ತೆ. ಅದಕ್ಕೆ ಗೋವಧೆಗೆ ಪ್ರಚೋದನೆ ನೀಡ್ತಾರೆ. ಗೋಮಾತೆಯ ರಕ್ಷಣೆ ಆಗಬೇಕು. ಗೋಮಾತೆಯನ್ನು ನಾವೆಲ್ಲ ರಕ್ಷಿಸಬೇಕು. ಎಲ್ಲ ಜಿಲ್ಲೆಗಳಲ್ಲಿ ಕಸಾಯಿಖಾನೆ ಬಂದ್ ಆಗ್ತವೆ. ಗೋವಧೆ ಮಾಡಿದ್ರೆ ಸುಮ್ಮನಿರಲ್ಲ ಎಂದ ಅವರು, ದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬ ನಾಗರಿಕನ ಕೊಡುಗೆ ಇರಬೇಕೆಂಬ ಕಾರಣಕ್ಕಾಗಿ ಜನವರಿ 15ರಿಂದ ಹಣಸಂಗ್ರಹ ಅಭಿಯಾನ ಶುರುವಾಗುತ್ತೆ. ಸಾರ್ವಜನಿಕರು ಸಹಾಯ ಮಾಡಿ ಸಹಕರಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಮಹಿಳೆಯರು ಸರಕಾರದ ಯೋಜನೆಗಳನ್ನು ಅರಿತುಕೊಳ್ಳಬೇಕು. ಆಡಳಿತ, ಅಧಿಕಾರದಲ್ಲಿ ಗಂಡಂದಿರ ಸಹಾಯ, ಸಹಕಾರ ಪಡೆಯಬೇಕೇ ಹೊರತು ಅವರನ್ನೇ ಅಧಿಕಾರ ನಡೆಸುವಂತೆ ಮಾಡಬಾರದು ಎಂದರು.
ಸಂಸದ ಕರಡಿ ಸಂಗಣ್ಣ, ಶಾಸಕರಾದ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ ಮತ್ತಿತರರು ಮಾತನಾಡಿದರು. ಸಮಾರಂಭದಲ್ಲಿ ಗ್ರಾಮ ಪಂಚಾಯತಿ ಬಿಜೆಪಿ ಬೆಂಬಲಿತ ನೂತನ ಸದಸ್ಯರಿಗೆ ಗಣ್ಯರಿಂದ ಪುಷ್ಪಮಳೆ ಸುರಿಸುವ ಮೂಲಕ ಅಭಿನಂದಿಸಲಾಯಿತು.
ಈ ವೇಳೆ ಶಾಸಕರಾದ ಬಸವರಾಜ ದಢೇಸೂಗೂರು, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಗಿರಿಗೌಡ, ಅಮರೇಶ ಕರಡಿ, ಎಂ.ಬಿ.ಪಾಟೀಲ, ಮಹಾಂತೇಶ ಮಾಲೀಪಾಟೀಲ್, ಸಿಂಗನಾಳ ವಿರೂಪಾಕ್ಷಪ್ಪ ಮತ್ತಿತರರು ಇದ್ದರು.
ಬಿಜೆಪಿಯ ಜನಸೇವಕ್ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡುತ್ತಾ, ಗ್ರಾಪಂಗೆ ಸದಸ್ಯರಾಗಿ ಆಯ್ಕೆಯಾದ ಮಹಿಳೆಯರು ಕೈ ಎತ್ತಿ ಎಂದು ಮನವಿ ಮಾಡಿಕೊಂಡಾಗ ಬೆರಳೆಣಿಕೆಯಷ್ಟು ಕೈಗಳು ಮಾತ್ರ ಕಂಡವು. ಇಷ್ಟೇ ಜನನಾ ಎಂದು ಅಚ್ಚರಿಯಿಂದ ಸಚಿವೆ ಜೊಲ್ಲೆ ಕೇಳಿದಾಗ, ಗ್ರಾಪಂ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇರೋದ್ರಿಂದ ಎಲ್ರೂ ಟೂರ್‌ಗೆ ಹೋಗ್ಯಾರ್ರಿ ಮೇಡಂ ಎಂಬ ಕೂಗು ಮಹಿಳಾ ಗ್ಯಾಲರಿಯಿಂದ ಕೇಳಿ ಬಂತು.
ಶ್ವಾನಕಾಟ!
ವೇದಿಕೆ ಮೇಲೆ ಬಿಜೆಪಿ ನಾಯಕರು ಭಾಷಣದಲ್ಲಿ ಮುಳುಗಿದ್ದರೆ ಪೊಲೀಸರ, ಕಾರ್ಯಕರ್ತರ ಕಣ್ತಪ್ಪಿಸಿ ವೇದಿಕೆ ಮುಂಭಾಗದಲ್ಲೇ ಶ್ವಾನ ತಿನಿಸೊಂದನ್ನು ತಂದು ತಿನ್ನತೊಡಗಿತ್ತು. ಕಾರ್ಯಕರ್ತರು ಶ್ವಾನ ಓಡಿಸಲು ಪ್ರಯತ್ನಿಸಿದರೂ ಅದು ಅವರ ವಿರುದ್ಧವೇ ಗುರುಗುಟ್ಟಿತು. ಕೊನೆಗೆ ಹಿರಿಯ ಕಾರ್ಯಕರ್ತರ ಛಡಿ ಏಟಿಗೆ ಶ್ವಾನ ಬಾಲ ಮುದುರಿಸಿಕೊಂಡು ಓಡಿತು.
ರಾಜ್ಯದ ಕಾರ್ಮಿಕರಿಗೆ ನೀಡುವ ಸರ್ಕಾರದ ಸವಲತ್ತುಗಳನ್ನು ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೂ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳವು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳ ರಾಜ್ಯಾದ್ಯಂತ ಪಿಂಜಾರ,ನದಾಫ್, ಮನ್ಸೂರಿ, ದೂದೆಕುಲಾ ಜನಾಂಗವು ಪೂರ್ವಜರ ಕಾಲದಿಂದಲೂ ಹಾಸಿಗೆ ಹೊಲೆಯುವ ಕೆಲಸ ಮಾಡುತ್ತಿವೆ. ಸಮುದಾಯದ ಮೂಲ ವೃತ್ತಿವೂ ಇದೆ ಆಗಿದ್ದು,
ಕೂಲಿ ಕಾರ್ಮಿಕರಿಗೆ ಸಿಗುವ ಸೌಲಭ್ಯ ಹಾಗೂ ಯೋಜನೆಗಳಿಂದ ಈ ಸಮುದಾಯ ವಂಚಿತವಾಗುತ್ತಿದೆ.
ಕಂಪ್ಯೂಟರ್ ತಂತ್ರಜ್ಞಾನಕ್ಕೂ ಮುನ್ನ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಲ್ಲಿ ಪರಿಹಾರ, ಸವಲತ್ತು ನೀಡುತ್ತಿದ್ದರು. ಆದರೆ, ಇವತ್ತಿನ ಕಂಪ್ಯೂಟರ್ ತಂತ್ರಜ್ಞಾನದ ಆನ್‌ಲೈನ್ ಅರ್ಜಿಯಲ್ಲಿ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೆ ಯಾವುದೇ ಸವಲತ್ತುಗಳ ಕುರಿತು ಮಾಹಿತಿ ಇಲ್ಲ. ಹಾಗಾಗಿ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರ ಕುಟುಂಬದ ಮಕ್ಕಳ ಶಿಕ್ಷಣ, ಪರಿಹಾರ ನೀಡಬೇಕು. ಅಲ್ಲದೇ, ಆನ್‌ಲೈನ್ ಅರ್ಜಿಯ ವೇಳೆ ಈ ಸಮುದಾಯ ಅರ್ಜಿ ತೆಗೆದುಕೊಂಡು ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ರಾಜ್ಯಾಧ್ಯಕ್ಷ ಡಾ.ಅಬ್ದುಲ್ ರಜಾಕ್ ನದಾಫ್, ಗ್ರಾಮೀಣ ಟಿವಿ ಮುಖ್ಯಸ್ಥ ದಾದಾಫೀರ ಕುನ್ನೂರ, ಸಲ್ಮಾ ಬೇಗಂ ಪಿಂಜಾರ, ಹುಸೇನ್ ಪಿಂಜಾರ್, ಜಾವಿದ್ ಗುತ್ತಲ ಸೇರಿದಂತೆ ಸಮಾಜದ ಅನೇಕ ಮುಖಂಡರು ಇದ್ದರು.
–ಬಸವರಾಜ ಕರುಗಲ್ ಕಾಂಗ್ರೆಸ್-ಜೆಡಿಎಸ್‌ನಲ್ಲಿ ಶಾಸಕರಿದ್ದ ಅತೃಪ್ತರು ಬಿಜೆಪಿ ಸಖ್ಯ ಬೆಳೆಸಿ ಕಮಲ ಸರಕಾರ ಅಸ್ತಿತ್ವಕ್ಕೆ ತರಲು ಕೊಡುಗೆ ನೀಡಿದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಾಗಿನಿಂದಲೂ ಅನರ್ಹತೆಯ ಭೀತಿಯಿಂದ ಅರ್ಹತೆ ಗಳಿಸಿದ ಶಾಸಕರ ಋಣಸಂದಾಯದ ಕೆಲಸ ಇನ್ನೂ ನಡೆಯುತ್ತಲೇ ಇದೆ. ಪರಿಣಾಮ ಮೂಲ ಬಿಜೆಪಿಗರು ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಂಕಟ ಪಡುವಂತಾಗಿದೆ.
ಎರಡನೇ ಬಾರಿಯ ಸಚಿವ ಸಂಪುಟ ವಿಸ್ತರಣೆ ಕಾಲಕ್ಕೂ ವಲಸಿಗರಿಗೆ ಮಣೆ ಹಾಕಿದ್ದು ಮೂಲ ಬಿಜೆಪಿಯ ಶಾಸಕರಲ್ಲಿ ಬೇಗುದಿ ಹೆಚ್ಚಿಸಿದೆ. ಅದರಲ್ಲೂ ಕೊಪ್ಪಳ ಜಿಲ್ಲೆಯ ಐವರು ಶಾಸಕರಲ್ಲಿ ಮೂವರು ಬಿಜೆಪಿಯಿಂದಲೇ ಚುನಾಯಿತರಾದವರು. ಮೊದಲನೇ ಬಾರಿ ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಜಿಲ್ಲಾವಾರು ಪ್ರಾತಿನಿಧ್ಯದಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮತ್ತು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಹೆಸರು ಕೇಳಿ ಬಂದಿತ್ತು.
ಹಾಲಪ್ಪ ಆಚಾರ್ ಮಂತ್ರಿಯಾಗೇಬಿಟ್ಟರು ಎನ್ನುವಷ್ಟರಮಟ್ಟಿಗೆ ಬಿಂಬಿಸಲಾಯಿತು. ಆ ಸಂದರ್ಭದಲ್ಲಿ ಹಾಲಪ್ಪ ಆಚಾರ್ ದಿಢೀರನೆ ದೆಹಲಿಗೆ ಭೇಟಿ ನೀಡಿದ್ದು ಜಿಲ್ಲೆಗೆ ಸಚಿವ ಸ್ಥಾನ ದಕ್ಕುವ ಆಕಾಂಕ್ಷೆ ಗರಿ ಗೆದರಿತ್ತು. ಸಚಿವ ಸಂಪುಡ ವಿಸ್ತರಣೆಗೊಂಡಾಗ ಜಿಲ್ಲೆಗೆ ಭಾರೀ ನಿರಾಸೆ ಉಂಟಾಯಿತು.
ಇಡೀ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಚಿವ ಸ್ಥಾನ ದಕ್ಕಿದ್ದು ಔರಾದ್ ಕ್ಷೇತ್ರದ ಪ್ರಭು ಚಹ್ವಾಣ್ ಮತ್ತು ವಿಜಯನಗರ ಕ್ಷೇತ್ರದ ಆನಂದ್ ಸಿಂಗ್ ಅವರಿಗೆ ಮಾತ್ರ. ಅದೂ ಚಹ್ವಾಣ್‌ಗೆ ಪಶು ಸಂಗೋಪನೆ ಖಾತೆ ಸಿಂಗ್‌ಗೆ ಅರಣ್ಯ ಖಾತೆ! ಈ ಬಾರಿ ಪ್ರಭು ಚಹ್ವಾಣ್ ಬದಲಾಗಿ ಕಲ್ಯಾಣ ಕರ್ನಾಟಕದ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇತ್ತು. ಸರಕಾರ ಬಯಸಿದರೆ ರಾಜೀನಾಮೆ ನೀಡುವುದಾಗಿ ಆನಂದ್ ಸಿಂಗ್ ಸಹ ಹೇಳಿದ್ದರು. ಈ ನಿಟ್ಟಿನಲ್ಲಿ ಹಾಲಪ್ಪ ಆಚಾರ್ ಹೆಸರು ಬಲವಾಗಿ ಕೇಳಿ ಬಂದಿತ್ತು.
ಸಿಎಂಗೆ ಮನವಿ ಸಲ್ಲಿಸಿದ್ದೇವೆ “ಸಚಿವ ಸಂಪುಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಕೊಪ್ಪಳ ಜಿಲ್ಲೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇವೆ. ಇರುವ ಮೂವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸರಿ, ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವು. ಬೇರೆ ಪಕ್ಷದಿಂದ ಬಂದು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತರುವಲ್ಲಿ ಶ್ರಮಿಸಿದವರನ್ನೂ ಈ ಸಂದರ್ಭದಲ್ಲಿ ಕಡೆಗಣಿಸಲಾಗದು. ಆ ನಿಟ್ಟಿನಲ್ಲಿ ನ್ಯಾಯ ಸಲ್ಲಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದರೇನಂತೆ ಶಾಸಕರಾಗಿಯೇ ಅಭಿವೃದ್ಧಿ ಕೆಲಸ ಮಾಡುವ ಶಿಸ್ತಿನ ಸಿಪಾಯಿಗಳು ಬಿಜೆಪಿ ಶಾಸಕರು.”
ಸ್ವತಃ ಹಾಲಪ್ಪ ಆಚಾರ್ ಅವರಿಗೆ ಈ ಬೆಳವಣಿಗೆ ಅಚ್ಚರಿ ಉಂಟು ಮಾಡಿತ್ತು. ಸಚಿವ ಸ್ಥಾನದ ಆಕಾಂಕ್ಷಿ ನಾನೊಬ್ಬನೇ ಅಲ್ಲ, ಬಿಜೆಪಿಯಿಂದ ಆಯ್ಕೆಯಾದ ಎಲ್ಲ ಶಾಸಕರು ಆಕಾಂಕ್ಷಿಗಳೇ ನನಗೆ ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ಕೆಲಸ ಮಾಡುವುದಾಗಿ ಹಾಲಪ್ಪ ಆಚಾರ್ ಹೇಳಿದ್ದರು. ಮಂಗಳವಾರ ರಾತ್ರಿವರೆಗೂ ಸಿಎಂ ಫೋನ್‌ಗಾಗಿ ಕಾದರೂ ಕರೆ ಬರಲಿಲ್ಲವಾದ್ದರಿಂದ ಎರಡನೇ ಬಾರಿ ಆಚಾರ್ ನಿರಾಸೆ ಅನುಭವಿಸಬೇಕಾಯ್ತು.
ಸಿಎಂಗೆ ಮನವಿ ಸಲ್ಲಿಸಿದ್ದೇವೆ “ಸಚಿವ ಸಂಪುಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಕೊಪ್ಪಳ ಜಿಲ್ಲೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇವೆ. ಇರುವ ಮೂವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸರಿ, ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವು. ಬೇರೆ ಪಕ್ಷದಿಂದ ಬಂದು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತರುವಲ್ಲಿ ಶ್ರಮಿಸಿದವರನ್ನೂ ಈ ಸಂದರ್ಭದಲ್ಲಿ ಕಡೆಗಣಿಸಲಾಗದು. ಆ ನಿಟ್ಟಿನಲ್ಲಿ ನ್ಯಾಯ ಸಲ್ಲಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದರೇನಂತೆ ಶಾಸಕರಾಗಿಯೇ ಅಭಿವೃದ್ಧಿ ಕೆಲಸ ಮಾಡುವ ಶಿಸ್ತಿನ ಸಿಪಾಯಿಗಳು ಬಿಜೆಪಿ ಶಾಸಕರು.”
ದೊಡ್ಡನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ.
ಅಸಮಾಧಾನ ಆಗಿರೋದು ನಿಜ, ಪಕ್ಷಕ್ಕಿಂತ ದೊಡ್ಡದಿಲ್ಲ ಎರಡನೇ ಬಾರಿ ಸಂಪುಟ ವಿಸ್ತರಣೆ ಕಾಲಕ್ಕೆ ಕೊಪ್ಪಳ ಜಿಲ್ಲೆಗೆ ಪ್ರಾತಿನಿಧ್ಯ ಸಿಗುವ ವಿಶ್ವಾಸ ಇತ್ತು. ಹಿರಿತನದ ಆಧಾರದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ಇತ್ತು. ಆದರೆ ಈ ಬಾರಿಯೂ ಕೊಪ್ಪಳ ಜಿಲ್ಲೆಗೆ ಅನ್ಯಾಯವಾಗಿದೆ. ಅಸಮಾಧಾನ ಆಗಿರೋದು ನಿಜ, ಹಾಗೆಂದ ಮಾತ್ರಕ್ಕೆ ಪಕ್ಷಕ್ಕಿಂತ ದೊಡ್ಡದು ಬೇರೆನಿಲ್ಲ. ಇನ್ನೊಮ್ಮೆ ಸಿಎಂ ಅವರನ್ನು ಭೇಟಿ ಮಾಡ್ತಿವಿ.
ವಿಜಯಸಾಕ್ಷಿ ಸುದ್ದಿ, ಗದಗ: ಬೈಕ್ ಸ್ಕಿಡ್ ಆದ ಪರಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಆತನ ಮಡದಿ ಗಾಯಗೊಂಡ ಘಟನೆ, ತಾಲೂಕಿನ ಜಲಾಶಂಕರ ಬಳಿ ನಡೆದಿದೆ.
ಕಣವಿ ಹುಸೂರು ಗ್ರಾಮದ ಬಸವರಾಜ್ ಅರಗಂಜಿ(45) ಮೃತ ದುರ್ದೈವಿಯಾಗಿದ್ದು, ಆತನ ಪತ್ನಿ ಶಿವಲೀಲಾಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲೂಕಿನ ಅಡವಿ ಸೋಮಾಪುರಕ್ಕೆ ಕೆಲಸದ ನಿಮಿತ್ತ ಹೋಗಿ ವಾಪಸ್ ಬರುವಾಗ ಜಲಾಶಂಕರ ಬಳಿಯ ನಾಗಾವಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಬೈಕ್ ನಿಯಂತ್ರಣಕ್ಕೆ ಬಾರದೇ ರಸ್ತೆಯ ಎದುರಿನ ತಗ್ಗು ಪ್ರದೇಶಕ್ಕೆ ಬಿದ್ದ ಪರಿಣಾಮ, ಬಸವರಾಜ್ ನ ತಲೆಗೆ ಬಲವಾದ ಪೆಟ್ಟುಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಹೇಳುವ ಮಾಜಿ ಸಚಿವ ಶಿವರಾಜ ತಂಗಡಗಿ ಈ ಹಿಂದೆ ಬಿಜೆಪಿಯಲ್ಲಿದ್ದರು. ಅಧಿಕಾರ ಅನುಭವಿಸಿದಾಗ ಅವರೇ ಸುಳ್ಳು ಹೇಳುವುದನ್ನು ಕಲಿಸಿಕೊಟ್ಟು ಹೋಗಿದ್ದೇನೆ ಎಂಬ ಭ್ರಮೆಯಲ್ಲಿರಬೇಕು ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ತಿರುಗೇಟು ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಶಿವರಾಜ ತಂಗಡಗಿ ಯಾವುದರ ಬಗ್ಗೆ ಮಾತನಾಡುತ್ತಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇರುವುದಿಲ್ಲ. ಅವರೊಬ್ಬ ಮಾಜಿ ಸಚಿವರಾಗಿ ಸ್ಪಷ್ಟತೆ ಪಡೆದುಕೊಂಡು ಮಾತನಾಡಬೇಕು ಎಂದರು.
ಇನ್ನು ನಾಯಕತ್ವ ಬದಲಾವಣೆ ಇಲ್ಲ ಎಂದು ಈಗಾಗಲೇ ನಮ್ಮ ಪಕ್ಷದ ರಾಜ್ಯದ ಉಸ್ತುವಾರಿಗಳು, ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ. ಆದರೆ ನಮ್ಮ ಪಕ್ಷದಲ್ಲಿ ಆಗುವ ಬದಲಾವಣೆಗಳು ಸಿದ್ದರಾಮಯ್ಯ ಅವರಿಗೆ ಹೇಗೆ ಗೊತ್ತಾಗುತ್ತವೆ. ಎಲ್ಲರಿಗೂ ಎಲ್ಲ ಕಡೆ ಸ್ನೇಹಿತರು ಇರುತ್ತಾರೆ. ಸಿದ್ದರಾಮಯ್ಯ ಅವರೇನು ಜ್ಯೋತಿಷ್ಯ ಹೇಳುತ್ತಾರಾ ಎಂದರು.
ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕುರಿತು ನಮ್ಮ ರಾಜ್ಯ, ಕೇಂದ್ರದ ನಾಯಕರು ನೋಡಿಕೊಳ್ಳುತ್ತಾರೆ. ಆದರೆ ಈಗಾಗಲೇ ಬ್ರೇಕ್ ಹಾಕಲಾಗಿದೆ. ಹಾಗೆಲ್ಲಾ ಮಾತನಾಡದಂತೆ ಸೂಚನೆ ನೀಡಿದ್ದಾರೆ ಎಂದರು.
ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಪ್ಪಳ ಜಿಲ್ಲೆಗೆ ಆದ್ಯತೆ ನೀಡಿ ಎಂದು ನಾವು ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರಿಗೆ, ಸಿಎಂ ಅವರಿಗೆ ಒತ್ತಾಯ ಮಾಡಿದ್ದೇವೆ. ಜಿಲ್ಲೆಯಲ್ಲಿರುವ ಮೂವರು ಶಾಸಕರಲ್ಲಿ ಯಾರೊಬ್ಬರಿಗಾದರೂ ಸಚಿವ ಸ್ಥಾನ ನೀಡಲಿ. ನಮ್ಮ ಜಿಲ್ಲೆಗೆ ಆದ್ಯತೆ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ದೊಡ್ಡನಗೌಡ ಪಾಟೀಲ್ ಹೇಳಿದರು.
ವಿಜಯಸಾಕ್ಷಿ ಸುದ್ದಿ, ಗದಗ: ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರ ಜಿಲ್ಲಾ ಮನೆಗಳ್ಳರ ಹಾಗೂ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ಹುಬ್ಬಳ್ಳಿಯ ತಾರಿಹಾಳದ ರಾಮನಗರ ನಿವಾಸಿ ಕಾಸೀಂ ಗಾಳೆಪ್ಪ ಹುಬ್ಬಳ್ಳಿ ಹಾಗೂ ಗದಗ ನಗರದ ಸುನೀಲ್ ಸಂಜೀವಪ್ಪ ಮುಳಗುಂದ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ನವಂಬರ್ ತಿಂಗಳ 25 ರಂದು ನಗರದ ಗಣೇಶ್ ಕಾಲೋನಿಯ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರ ಮನೆಯ ಬೀಗ ಮುರಿದು 2,37,000 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದರು.
ಡಿಸೆಂಬರ್ 17 ರಂದು ಶಿವಾನಂದ ನಗರದಲ್ಲಿ ಮಹಿಳೆಯ ಕೊರಳಲ್ಲಿದ್ದ 1,35,000 ಮೌಲ್ಯದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದರು. ಇನ್ನು ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ದೇವಸ್ಥಾನವೊಂದರ ಹುಂಡಿ ಮತ್ತು ರಾಮದುರ್ಗದಲ್ಲಿ ಮನೆ ಕಳ್ಳತನವನ್ನೂ ಮಾಡಿದ್ದರು.
ಬಂಧಿತ ಆರೋಪಿತರಿಂದ ಒಟ್ಟು 5,00,000 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ಕಳಸಾಪುರ ರಸ್ತೆಯ ಬಾಪೂಜಿ ನಗರದ ಸಮೀಪ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇವರನ್ನು ಬಂಧಿಸಲಾಗಿದೆ.
ಗದಗ ಎಸ್ಪಿ ಯತೀಶ್ ಎನ್ ಹಾಗೂ ಡಿವೈಎಸ್ಪಿ ಕೆ ಪ್ರಹ್ಲಾದ್ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆ ಸಿಪಿಐ ಪಿ ವಿ ಸಾಲಿಮಠ, ಪಿಎಸ್ಐ ಶ್ರೀಮತಿ ಜಿ ಟಿ ಜಕ್ಕಲಿ, ಎಆರ್ ಎಸ್ಐ ಜಿ ಎಂ ಬೂದಿಹಾಳ, ಸಿಬ್ಬಂದಿಗಳಾದ ಬಿ ಜಿ ಹೊರಕೇರಿ, ವಿ ಎಸ್ ಶೆಟ್ಟಣ್ಣವರ್, ಎಸ್ ಎ ಗುಡ್ಡಿಮಠ, ಎಂ ಎ ಸದರನ್ನವರ್, ಪಿ ಆರ್ ಕುಲಕರ್ಣಿ, ಹನುಮಂತ ಯಡಿಯಾಪುರ್, ಪ್ರವೀಣ್ ಕಲ್ಲೂರ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.