Home Blog Page 3081

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಶಿಕ್ಷೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಶ್ಯಾಮ ಕನ್ನಾಳ ಎಂಬ ವ್ಯಕ್ತಿಯ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಸಂಗನಾಳ ಗ್ರಾಮದ ಶ್ಯಾಮ ಕನ್ನಾಳ ಎಂಬ ಆರೋಪಿತನು ಅಪ್ರಾಪ್ತ ವಯಸ್ಸಿನ ಬಾಲಕಿ ತಮ್ಮೂರಿನ ಹೊರವಲಯದಲ್ಲಿ ಬಹಿರ್ದೆಸೆಗೆ ಹೋದಾಗ ಅವಳಿಗೆ ಪುಸಲಾಯಿಸಿ ಅಪಹರಣ ಮಾಡಿಕೊಂಡು ಹೋಗಿ ಸಂಗನಾಳ ಶಾಲೆಯ ಹತ್ತಿರ ಆಕೆಗೆ ಅತ್ಯಾಚಾರ ಮಾಡಿರುವ ಆರೋಪವು ತನಿಖೆಯಲ್ಲಿ ಸಾಬೀತಾಗಿದ್ದರಿಂದ ಕುಷ್ಟಗಿಯ ಸಿಪಿಐ ಗಿರೀಶ ರೋಡ್ಕರರವರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 07 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 35 ಸಾವಿರಗಳ ದಂಡ ವಿಧಿಸಿ, ದಂಡದ ಮೊತ್ತದಲ್ಲಿ ರೂ. 20 ಸಾವಿರಗಳನ್ನು ಬಾಧಿತಳಿಗೆ ನೀಡುವಂತೆ ನ್ಯಾಯಾಧೀಶರು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮಲಪ್ರಭಾ ನದಿಯ ತೀರದಲ್ಲಿ ಮೊಸಳೆ ಪ್ರತ್ಯಕ್ಷ: ಗ್ರಾಮಸ್ಥರ ಆತಂಕ

0

ವಿಜಯಸಾಕ್ಷಿ ಸುದ್ದಿ,ಗದಗ

ಪ್ರವಾಹದ ಅಲೆಗೆ ತತ್ತರಿಸಿ ಹೋಗಿದ್ದ ಜಿಲ್ಲೆಯ ಮಲಪ್ರಭಾ ನದಿ ತೀರದ ಜನರಿಗೀಗ ಮತ್ತೊಂದು ಆತಂಕ ಸೃಷ್ಟಿಯಾಗಿದೆ.

ನೆರೆ ಬಂದು ಹೋಗಿ ತಿಂಗಳುಗಳೇ ಕಳೆದಿದ್ದು, ರೋಣ ತಾಲ್ಲೂಕಿನ ಮೆಣಸಗಿ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದ ಜನರು ಭಯಭೀತರಾಗಿದ್ದಾರೆ.

ಆತಂಕಗೊಂಡಿರುವ ಗ್ರಾಮಸ್ಥರು ರೋಣ ಅರಣ್ಯ ವಲಯ ಅಧಿಕಾರಿಗಳಿಗೆ‌ ಮಾಹಿತಿ ನೀಡಿದ್ದು, ಮೊಸಳೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಅಲ್ಲದೇ, ನದಿ ತೀರದತ್ತ ಯಾರೂ ಹೋಗದಂತೆ ಎಚ್ಚರಿಕೆ ಡಂಗುರ ಸಾರಿದ್ದಾರೆ.

ಈ ಹಿಂದೆಯೂ ಇದೇ ಭಾಗದ ಹೊಳೆಆಲೂರು ಗ್ರಾಮದ ಪಕ್ಕ ಮೊಸಳೆ ಪ್ರತ್ಯಕ್ಷವಾಗಿತ್ತು. ಮೂರು ದಿನಗಳ ನಂತರ ಮೊಸಳೆ ನಿಗೂಢವಾಗಿ ಸಾವನ್ನಪ್ಪಿತ್ತು.

ಸಲಿಂಗಕಾಮಕ್ಕಾಗಿ ಬಾಲಕನ ಕಿಡ್ನಾಪ್ ಮಾಡಿದ್ದ ವ್ಯಕ್ತಿಗೆ 10 ವರ್ಷ ಜೈಲು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಸಲಿಂಗಕಾಮಕ್ಕಾಗಿ ಕೊಪ್ಪಳದ ಗವಿಮಠ ಹಾಸ್ಟೇಲ್‌ನಿಂದ ಬಾಲಕನನ್ನು ಅಪಹರಿಸಿದ್ದ ಅಪರಾಧಿಗೆ 10 ವರ್ಷ ಜೈಲು ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

2018ರಲ್ಲಿ ಮೂವರು ವಿದ್ಯಾರ್ಥಿಗಳಿಗೆ ಮೊಬೈಲ್ ತೋರಿಸುವ ಆಮಿಷವೊಡ್ಡಿ ಗದಗ, ಕಲಬುರ್ಗಿ, ತಿರುಪತಿ, ರಾಯಚೂರು, ಬೆಂಗಳೂರು ಸೇರಿದಂತೆ ನಾನಾ ಊರುಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ತಿರುಗಾಡಿದ್ದ ಅಪರಾಧಿ ಶರಣಪ್ಪ ಕೆಂಬಾವಿ, ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದ. ಬೆಂಗಳೂರಿನಲ್ಲಿ ಇದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ನೀಡಲಾಗಿತ್ತು.

ಇದುವರೆಗೂ ಪ್ರಕರಣದ ವಿಚಾರಣೆಯನ್ನು ಕೂಲಂಕಷವಾಗಿ ಆಲಿಸಿದ ಕೊಪ್ಪಳದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಂ.ಜಲವಾದಿಯವರು ಆರೋಪ ಸಾಬೀತಾಗಿದ್ದನ್ನು ತಿಳಿಸಿ ಪ್ರಕರಣದ ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಿ 10 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ ಸೇರಿ ಮೂವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ನಗರದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿತರು ಪರಾರಿಯಾಗಿರುವ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ, ಚಾಲಕ ಸಿದ್ದಲಿಂಗಯ್ಯ ಮರಿಯಮ್ಮನವರ, ಪ್ರಮೋದ್ ಮಾನೇದ ಬಂಧಿತ ಆರೋಪಿಗಳಾಗಿದ್ದಾರೆ. ವಾಹನ ಮಾಲೀಕ ನಾಗರಾಜ್ ಹಾಗೂ ಗೋದಾಮಿನ ಮಾಲೀಕ ನಾಗರಾಜ್ ಮುರಗಿ ಪರಾರಿಯಾಗಿದ್ದಾರೆ.

ಆರೋಪಿತರು ಜಿಲ್ಲಾಡಳಿತ ಭವನದ ಎದುರಿಗಿರುವ ಕನ್ನಡ ಸಾಹಿತ್ಯ ಭವನದ ಹತ್ತಿರದ ಗೋದಾಮೊಂದರಿಂದ ಅಕ್ರಮ ಅಕ್ಕಿ ಸಾಗಿಸುತ್ತಿದ್ದರು. ಈ ವೇಳೆ ಪೊಲೀಸ್ ಇಲಾಖೆಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಸಂಖ್ಯೆ 112 ಕ್ಕೆ ಕರೆ ಬಂದಿದ್ದು, ಖಚಿತ ಮಾಹಿತಿ ಆಧಾರಿಸಿ ಎಆರ್‌ಎಸ್‌ಐ ಬಿ.ವಿ. ಮಲ್ಲನಗೌಡರ ನೇತೃತ್ವದಲ್ಲಿ ಸಿಎಚ್‌ಸಿ ಎಸ್.ಎ. ಬಸಾಪೂರ್ ಅವರು ದಾಳಿ ನಡೆಸಿದ್ದಾರೆ.

ಆರೋಪಿಗಳು ಅಕ್ರಮವಾಗಿ ಅಕ್ಕಿ ತುಂಬಿದ್ದ ವಾಹನವನ್ನು ಬೆನ್ನಟ್ಟಿದ ಪೊಲೀಸರು ಮೂವರು ಆರೋಪಿತರನ್ನು ಬಂಧಿಸಿ, 50 ಕೆ.ಜಿ. ತೂಕದ 80 ಚೀಲಗಳನ್ನು ವಶಪಡಿಸಿಕೊಂಡು ಗದಗ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಹೆಚ್ಚಿನ ತನಿಖೆ ಕೈಗೊಂಡ ಗ್ರಾಮೀಣ ಸಿಪಿಐ ರವಿ ಕಪ್ಪತ್ತನವರ, ಸಾಹಿತ್ಯ ಭವನದ ಹತ್ತಿರವಿರುವ ಗೋದಾಮಿನ ಮೇಲೆ ದಾಳಿ ನಡೆಸಿ, ಅಲ್ಲಿ ಸಂಗ್ರಹಿಸಿಟ್ಟಿದ್ದ 2,79,000 ರೂ. ಮೌಲ್ಯದ 126 ಕ್ವಿಂಟಾಲ್ ಅಕ್ಕಿ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದ್ದು, ಆರೋಪಿಗಳು ಎಲ್ಲಿಗೆ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.

ಶೂನ್ಯಕ್ಕೆ ಬಂದಿಳಿದ ಕೊರೊನಾ! ಜಿಲ್ಲೆಯಲ್ಲಿವೆ ಇನ್ನೂ 53 ಸಕ್ರೀಯ ಪ್ರಕರಣಗಳು

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ:

2020ರ ಮೇ ತಿಂಗಳಲ್ಲಿ ಜಿಲ್ಲೆಗೆ ಕಾಲಿಟ್ಟ ಕೊರೊನಾ ಪ್ರಕರಣಗಳು, ಜೂನ್‌ನಿಂದ ನಿರಂತರವಾಗಿ ಹೆಚ್ಚಳವಾಗುತ್ತಲೇ ಬಂದವು. ಡಿಸೆಂಬರ್‌ನಿಂದ ಇಳಿಮುಖವಾದ ಕೊರೊನಾ ಪತ್ತೆ ಪ್ರಕರಣಗಳು 2021ರ ಜನೇವರಿ 7ರಂದು ಶೂನ್ಯಕ್ಕೆ ಬಂದು ನಿಂತಿದೆ‌.

ಜಿಲ್ಲೆಯಲ್ಲಿ ಇನ್ನೂ 53 ಸಕ್ರೀಯ ಪ್ರಕರಣಗಳಿದ್ದು, ಜನರು ಕೊಂಚ ನೆಮ್ಮದಿ ಪಡುವಂತಾಗಿದೆ.

ಧಾರವಾಡ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆ: ಶ್ರೀಗಂಧ ಕಳ್ಳರ ಬಂಧನ

0

ವಿಜಯಸಾಕ್ಷಿ ಸುದ್ದಿ ಧಾರವಾಡ: ಜಿಲ್ಲಾ ಅರಣ್ಯ ಇಲಾಖೆ ಸಿಬ್ಬಂದಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಸಾಗಿಸುತ್ತಿದ್ದ ಐವರನ್ನು ಬಂಧಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಕಾರವಾರ, ಧಾರವಾಡ ಜಿಲ್ಲೆಗಳಲ್ಲಿನ ಗಂಧದ ತುಂಡುಗಳನ್ನು ಕಳ್ಳರು ಗೂಡ್ಸ್ ವಾಹನದಲ್ಲಿ ಸಾಗಾಣೆ ಮಾಡುತ್ತಿದ್ದರು.

ಬಂಧಿತ ಐವರೂ ಬೆಳಗಾವಿ ಮೂಲದವರಾಗಿದ್ದಾರೆ. ಬಂಧಿತರಿಂದ 400 ಕೆಜಿ ಶ್ರೀಗಂಧದ ವಶ
ಒಂದು ಗೂಡ್ಸ್ ವಾಹನ ಮತ್ತು ಶಿಫ್ಟ್ ಕಾರು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡಿರುವ ವಸ್ತುಗಳ ಮೌಲ್ಯ ಒಟ್ಟು 70 ಲಕ್ಷವಾಗಿದೆ.

ಅಂದರ್-ಬಾಹರ್- ಜೂಜಾಟ: ಚಾಲಕ ಸೇರಿ ಐವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಚಾಲಕ‌ ಸೇರಿದಂತೆ ಐದು ಜನ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರು ದಾಳಿ ಬಂಧಿಸಿ ಅವರಿಂದ 2500 ಕ್ಕೂ ಹೆಚ್ಚು ಹಣ ವಶಪಡಿಸಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆದಿದೆ.

ಖಚಿತ ಮಾಹಿತಿ ಪಡೆದ ಪಿಎಸ್ಐ ಗುರುಶಾಂತ ದಾಸ್ಯಾಳ ಹಾಗೂ ಸಿಬ್ಬಂದಿ ಇಲ್ಲಿನ ಗೌಡಗೇರಿ ರಸ್ತೆಯಲ್ಲಿ ಇರುವ ಪುರಸಭೆಯ ಕಸ ವಿಲೇವಾರಿ ಸ್ಥಳದ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಚಾಲಕ ಪ್ರಭು ಯಲ್ಲಪ್ಪ ಕಲಾಲ್, ಕಳಕಪ್ಪ ಮಹಾಂತಪ್ಪ ಮಂಗಳೂರು, ಈರಪ್ಪ ರಾಮಣ್ಣ ಭಜಂತ್ರಿ, ರಾಮಪ್ಪ ದುರಗಪ್ಪ ಶಿಗ್ಗಾಂವಿ, ಬಸೆಟ್ಟೆಪ್ಪ ಮಹಾಬಲೇಶ್ವರ ಸಂಗಮದ ಎಂಬುವರನ್ನು ಬಂಧಿಸಿದ್ದಾರೆ.

ಸೈಬರ್ ಪೊಲೀಸರ ದಾಳಿ: ಮಟಕಾ ಬುಕ್ಕಿ, ರೀಯಲ್ ಎಸ್ಟೇಟ್ ಉದ್ಯಮಿ ನಾಕೋಡ್ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ನಗರದ ಕೆ ಎಚ್ ಪಾಟೀಲ್ ಸರ್ಕಲ್ ಬಳಿಯ ವೀರೇಶ್ವರ ಲೈಬ್ರರಿ ಹಿಂದೆ ಬಾಂಬೆ ಮಟಕಾ ಓ ಸಿ ನಂಬರ್ ಬರೆಯುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬನನ್ನು ಸೈಬರ್ ಕ್ರೈಮ್ ನ ಇನ್ಸ್ಪೆಕ್ಟರ್ ಟಿ ಮಹಾಂತೇಶ್ ನೇತೃತ್ವದಲ್ಲಿ ದಾಳಿ ಮಾಡಿ ಬಂಧಿಸಿಲಾಗಿದೆ.

ಬಂಧಿತ ಗಂಗಾಪೂರಪೇಟಿಯ ಸಂತೋಷ ರಘುನಾಥಸಾ ನಾಕೋಡ್ ಎನ್ನಲಾಗಿದೆ. ಬಂಧಿತನಿಂದ 7555 ರೂ.ನಗದು ಹಾಗೂ ಮಟಕಾ ಸಾಮಾಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗ ಜಿಲ್ಲೆಯ 8895 ಕೊರೊನಾ ಲಸಿಕೆ ವಿತರಿಸಲು ಜಿಲ್ಲಾಡಳಿತ ಸಿದ್ಧತೆ

0

ವಿಜಯಸಾಕ್ಷಿ ಸುದ್ದಿ, ಗದಗ

‘ಕೊರೊನಾ ಲಸಿಕೆ ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡುತ್ತಿದ್ದಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲೂ ಕೋವಿಡ್ ಲಸಿಕೆ ವಿತರಿಸಲು ಜಿಲ್ಲಾಡಳಿತ ಭರ್ಜರಿ ಸಿದ್ಧತೆ ನಡೆಸಿದೆ.

ಈ ಬಗ್ಗೆ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿರುವ ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಕೋವಿಡ್ ಲಸಿಕೆ ವಿತರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿರುವ ಅವರು, ‘ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ಗುರುತಿಸಲಾಗಿರುವ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಲಸಿಕೆ ತೆಗೆದುಕೊಳ್ಳುವವರು ಸೋಂಕು ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿಯನುಸಾರ ಲಸಿಕೆ ಪಡೆಯಲು ಸೂಚಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿ ನಿಗಾವಹಿಸಬೇಕು ಎಂದು ತಿಳಿಸಿದರು.

ಕೊರೊನಾ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ತಪಾಸಣೆ ಹಾಗೂ ಪರೀಕ್ಷೆ ನಡೆಸುವುದು ನಿರಂತರವಾಗಿರಬೇಕು. ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಸೂಚಿಸಬೇಕು. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿ.ಪಂ. ಸಿಇಒ ಡಾ.ಆನಂದ ಕೆ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಯನ್ನು ನಿರಂತರ ಹಾಗೂ ಸರಿಯಾಗಿ ನಡೆಸಬೇಕು. ಸೋಂಕು ಲಕ್ಷಣವಿರುವವರನ್ನು, ವೃದ್ಧರು ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಬಸರಿಗಿಡದ, ಜಿಲ್ಲಾ ಸಮೀಕ್ಷಾಣಾಧಿಕಾರಿ ಡಾ.ಜಗದೀಶ್ ನುಚ್ಚಿನ್, ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಬೂಸರಡ್ಡಿ ಸೇರಿದಂತೆ ಮತ್ತಿತರರು ಇದ್ದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ಸಿಬ್ಬಂದಿಗಳು, ಸೇರಿದಂತೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಎಂ.ಸುಂದರೇಶ್‌ಬಾಬು, ಜಿಲ್ಲಾಧಿಕಾರಿ

8895 ಜನರಿಗೆ ಕೊರೊನಾ ಲಸಿಕೆ

ಜಿಲ್ಲೆಯಲ್ಲಿ ಪ್ರಥಮ ಹಂತದ ಕೋವಿಡ್ ಲಸಿಕೆ ನೀಡಲು ೪೮ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಕೇಂದ್ರಗಳಲ್ಲ್ಲೂ ಪ್ರತಿ ದಿನಕ್ಕೆ ನೂರು ಜನರಿಗೆ ಲಸಿಕೆ ಹಾಕಬಹುದು. ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಒಟ್ಟು 8895 ಜನ ಕೊರೊನಾ ವಾರಿಯರ‍್ಸ್‌ಗಳನ್ನು ಗುರುತಿಸಲಾಗಿದ್ದು, ಅಷ್ಟೂ ಜನರಿಗೆ ಮೂರು ದಿನಗಳಲ್ಲಿ ಲಸಿಕೆ ವಿತರಿಸಬಹುದು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಬಿ.ಎಂ.ಗೊಜನೂರ ಮಾಹಿತಿ ನೀಡಿದರು.

ಇಂಜನೀಯರ್ ಜೊತೆ ಅನೈತಿಕ ಸಂಬಂಧ ಆರೋಪ: ಮಹಿಳೆಯರ ಮಧ್ಯೆ ಮಾರಾಮಾರಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಪರನಾರಿ ಜೊತೆ ನನ್ನ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಸಣ್ಣನೀರಾವರಿ ಇಲಾಖೆಯ ಅಧಿಕಾರಿಯ ಪತ್ನಿ ರಂಪಾಟ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ನಗರದ ಕುಷ್ಟಗಿ ಸರ್ಕಲ್ ಬಳಿಯ ಸಣ್ಣನೀರಾವರಿ ಇಲಾಖೆಯ ಅಧಿಕಾರಿ ವಿನೋದ್ ಕುಮಾರ್ ಗುಪ್ತಾ ಪರ ಸ್ತ್ರೀಯೊಂದಿಗೆ ಮನೆಯಲ್ಲಿದ್ದಾಗ ಗುಪ್ತಾಳ ಪತ್ನಿ ಹಾಗೂ ಮಕ್ಕಳು ದಾಳಿ ಮಾಡಿದ್ದಾರೆ. ಇದೇ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ವಿನೋದ್ ಕುಮಾರ್ ಗುಪ್ತಾ ಹಾಗೂ ಪರನಾರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಗುಪ್ತಾಳ ಪತ್ನಿ ಹಾಗೂ ಅನೈತಿಕ ಸಂಬಂಧ ಹೊಂದಿದ ಮಹಿಳೆ ಮನೆಯೊಳಗೆ ಕೈ ಕೈ ಮಿಲಾಯಿಸಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ವಿಷಯ ತಿಳಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ಇದೀಗ ಕೊಪ್ಪಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

error: Content is protected !!