Home Blog Page 3086

ಧಾರವಾಡ; ಸಂಜೆಯಿಂದ ವಾರಾಂತ್ಯ ಕರ್ಫ್ಯೂ, ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ

0

ವಿಜಯಸಾಕ್ಷಿ ಸುದ್ದಿ, ಧಾರವಾಡ

ಇಂದು ಜೂನ್ 25 ಶುಕ್ರವಾರ ಸಂಜೆ 7 ಗಂಟೆಯಿಂದ ಜೂನ್ 28 ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜೂನ್ 20 ರಂದು ಹೊರಡಿಸಿದ ಆದೇಶದ ಅನುಬಂಧ (2)ರಲ್ಲಿ ತಿಳಿಸಿರುವಂತೆ ನಾಳೆ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸಾಹಾರ, ಪ್ರಾಣಿಗಳಿಗೆ ಆಹಾರ ಮತ್ತಿತರ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ. ಈ ಅವಧಿಯಲ್ಲಿ ಬೀದಿ ಬದಿ ವ್ಯಾಪಾರ ಚಟುವಟಿಕೆಗಳು ನಡೆಯಲಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ.

ಹೋಟೆಲ್‍ಗಳು ಈ ಅವಧಿಯಲ್ಲಿ ಕೇವಲ ಪಾರ್ಸೆಲ್ ಸೇವೆ ನೀಡಬಹುದಾಗಿದೆ. ಹೋಂ ಡೆಲೆವರಿ ವಹಿವಾಟುಗಳಿಗೆ ಅವಕಾಶವಿದೆ. ವ್ಯಾಪಾರಿಗಳು ಕೋವಿಡ್-19 ರ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ತುರ್ತು ಸೇವೆ ನೀಡುವ ಚಟುವಟಿಕೆಗಳು ಹಾಗೂ ಕೈಗಾರಿಕೆ ಸಂಸ್ಥೆಗಳ ಕಾರ್ಯಗಳಿಗೆ ಅವಕಾಶವಿರುತ್ತದೆ. ಟೆಲಿಕಾಂ ಮತ್ತು ಅಂತರ್ಜಾಲ ಸೇವೆ ನೀಡುವ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಮಾತ್ರ ಸಂಚರಿಸಬಹುದು.

ಉಳಿದವರು ಮನೆಯಿಂದ ಕೆಲಸ ನಿರ್ವಹಿಸಬೇಕು. ರೋಗಿಗಳ ಆರೈಕೆದಾರರು, ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಅಗತ್ಯ ದಾಖಲೆಗಳೊಂದಿಗೆ ಉದ್ದೇಶಿತ ಕಾರ್ಯಕ್ಕೆ ತೆರಳಬಹುದು. ಬಸ್, ರೈಲು ಹಾಗೂ ವಿಮಾನಗಳ ಸಂಚಾರ ಇರಲಿದೆ. ಕಡಿಮೆ ಸಂಖ್ಯೆಯಲ್ಲಿ ಬಸ್‍ಗಳು ರಸ್ತೆಗಿಳಿಯಲಿವೆ. ಮಧ್ಯಾಹ್ನ 2 ಗಂಟೆಯ ನಂತರ ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಈಗಾಗಲೇ ಅನುಮತಿ ಪಡೆದಿರುವ ಮದುವೆ ಸಮಾರಂಭಗಳನ್ನು 40 ಕ್ಕಿಂತ ಹೆಚ್ಚು ಜನರು ಸೇರದೆ ಆಯೋಜಿಸಬಹುದು. ಅಂತ್ಯಕ್ರಿಯೆಗಳಲ್ಲಿ ಗರಿಷ್ಠ 5 ಜನ ಮಾತ್ರ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಹಾನಗಲ್ ನಲ್ಲಿ ಈಗನಿಂದಲೇ ಶುರುವಾಗಿದೆ ಟಿಕೆಟ್ ಫೈಟ್!?

ವಿಜಯಸಾಕ್ಷಿ ಸುದ್ದಿ, ಹಾವೇರಿ

ಇತ್ತೀಚೆಗಷ್ಟೇ ಬಿಜೆಪಿಯ ಹಿರಿಯ ಶಾಸಕ ಸಿ.ಎಂ. ಉದಾಸಿ ನಿಧನರಾಗಿದ್ದು, ಅವರ ಸಾವಿನಿಂದಾಗಿ ಹಾನಗಲ್ ವಿಧಾನಸಭಾ ಕ್ಷೇತ್ರ ತೆರವುಗೊಂಡಿದೆ. ಹೀಗಾಗಿ ಟಿಕೆಟ್ ಫೈಟ್ ಈಗನಿಂದಲೇ ಶುರುವಾಗಿದೆ.
ಉಪಚುನಾವಣೆ ಘೋಷಣೆಗೂ ಮುನ್ನವೆ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಹಾವೇರಿ ಜಿಲ್ಲೆಯಲ್ಲಿನ ಹಾನಗಲ್ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ಗುದ್ದಾಟ ಪ್ರಾರಂಭವಾಗಿದೆ.

ಮಾಜಿ ಸಚಿವ ಮನೋಹರ ತಹಶೀಲ್ದಾರ‌ ನೇತೃತ್ವದಲ್ಲಿ ನಿನ್ನೆ ಕೆಲವು ಕಾಂಗ್ರೆಸ್ ಕಾರ್ಯರ್ತರು ಹಾಗೂ ಮುಖಂಡರ ಸಭೆ ನಡೆದಿತ್ತು. ಈ ಸಂದರ್ಭದಲ್ಲಿ ಹಾನಗಲ್ ತಾಲೂಕಿನವರಿಗೆ ಪಕ್ಷದ ಟಿಕೆಟ್ ನೀಡುವಂತೆ ಸಭೆಯಲ್ಲಿ ಒತ್ತಾಯ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಪಕ್ಷದ ಟಿಕೆಟ್‌ ನೀಡದಂತೆ ಪರೋಕ್ಷವಾಗಿ ಸಭೆಯಲ್ಲಿ ಎಚ್ಚರಿಸಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ ತಾಲೂಕಿನ ಯಾರಿಗಾದರೂ ಟಿಕೆಟ್ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ.

ತಾಲೂಕಿನವರನ್ನು ಬಿಟ್ಟು ಪಕ್ಷವು ಬೇರೆಯವರಿಗೆ ಟಿಕೆಟ್‌ ನೀಡಿದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಲಾಯಿತು. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಹೈಕಮಾಂಡ್ ಗೆ ಎಚ್ಚರಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ಮನೋಹರ ತಹಸೀಲ್ದಾರ್ ಗೆ ಪಕ್ಷವು ಟಿಕೆಟ್ ನೀಡಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶ್ರೀನಿವಾಸ್ ಮಾನೆಗೆ ಟಿಕೆಟ್ ನೀಡಲಾಗಿತ್ತು. ಆದರೆ, ಅವರು ಸೋಲು ಕಂಡಿದ್ದರು. ಸೋಲಿನ ನಂತರವೂ ಮಾನೆ, ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ಸಂಘಟನೆಯಲ್ಲಿ ತೊಡಗಿದ್ದರು. ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಮನೋಹರ ತಹಶೀಲ್ದಾರ ಸದ್ಯ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಅಲ್ಲದೇ, ಕಳೆದ ಬಾರಿ ಸೋತಿರುವ ಶ್ರೀನಿವಾಸ್ ಮಾನೆ ಹಾಗೂ ಹಲವು ಮುಖಂಡರು ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ.

ಹಂಪಿ ವೀಕ್ಷಣೆಗೆ ಅವಕಾಶ; ಸ್ಮಾರಕಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು

ವಿಜಯಸಾಕ್ಷಿ ಸುದ್ದಿ, ವಿಜಯನಗರ

ಕೊರೊನಾ ಹಾವಳಿ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಿದೆ. ಹೀಗಾಗಿ ಪ್ರವಾಸಿಗರು ಹಂಪಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿಯೇ ಕಳೆದ ಎರಡು ತಿಂಗಳುಗಳಿಂದ ಹಂಪಿ ದೇವಾಲಯ ಹಾಗೂ ಸುತ್ತಮುತ್ತಲಿನ ಕ್ಷೇತ್ರಗಳ ವೀಕ್ಷಣೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು.

ಸದ್ಯ ತೆರವುಗೊಂಡಿರುವುದರಿಂದಾಗಿ ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ಹಂಪಿ ಕ್ಷೇತ್ರಕ್ಕೆ ಭೇಟಿ ನೀಡಿ ಸ್ಮಾರಕಗಳನ್ನು ವೀಕ್ಷಿಸುತ್ತಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 5ರ ವರೆಗೆ ಸ್ಮಾರಕಗಳ ವೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಜನರು ಬೆಳಿಗ್ಗೆಯೇ ಹಂಪಿಯತ್ತ ದೌಡಾಯಿಸುತ್ತಿದ್ದಾರೆ.

ಹಂಪಿಯಲ್ಲಿನ ವಿಶ್ವಪ್ರಸಿದ್ಧ ಸ್ಮಾರಕಗಳಾದ ವಿಜಯವಿಠ್ಠಲ ದೇವಸ್ಥಾನ, ಆವರಣದಲ್ಲಿನ ಸಪ್ತಸ್ವರ ಮಂಟಪ, ಕಲ್ಲಿನ ರಥ, ರಾಣಿ ಸ್ನಾನಗೃಹ, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪ, ಕಡಲೆ ಕಾಳು ಗಣಪ ಸೇರಿದಂತೆ ಇನ್ನಿತರ ಪ್ರದೇಶಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದ್ದಾರೆ. ಹೀಗಾಗಿ ಸ್ಮಾರಕಗಳ ಪ್ರವೇಶ ದ್ವಾರದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಭದ್ರತಾ ಸಿಬ್ಬಂದಿ ಮಾಸ್ಕ್‌ ಧರಿಸಿದವರಿಗೆ ಮಾತ್ರ ಒಳ ಪ್ರವೇಶಕ್ಕೆ ಅನುಮತಿ ನೀಡುತ್ತಿದ್ದು, ಕೊರೊನಾ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಒಬ್ಬೊಬ್ಬರನ್ನೇ ಒಳಗೆ ಬಿಡುತ್ತಿದ್ದಾರೆ.

ನಾಲ್ಕು ಕಡೆಗಳಲ್ಲಿ ಟಿಕೆಟ್‌ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಬಾರದಂತೆ ಆನ್‌ ಲೈನ್‌ ಟಿಕೆಟ್ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.

ಹಂಪಿ ವೀಕ್ಷಣೆಗೆ ಅವಕಾಶ; ಸ್ಮಾರಕಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು

ವಿಜಯಸಾಕ್ಷಿ ಸುದ್ದಿ, ವಿಜಯನಗರ

ಕೊರೊನಾ ಹಾವಳಿ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಿದೆ. ಹೀಗಾಗಿ ಪ್ರವಾಸಿಗರು ಹಂಪಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿಯೇ ಕಳೆದ ಎರಡು ತಿಂಗಳುಗಳಿಂದ ಹಂಪಿ ದೇವಾಲಯ ಹಾಗೂ ಸುತ್ತಮುತ್ತಲಿನ ಕ್ಷೇತ್ರಗಳ ವೀಕ್ಷಣೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು.

ಸದ್ಯ ತೆರವುಗೊಂಡಿರುವುದರಿಂದಾಗಿ ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ಹಂಪಿ ಕ್ಷೇತ್ರಕ್ಕೆ ಭೇಟಿ ನೀಡಿ ಸ್ಮಾರಕಗಳನ್ನು ವೀಕ್ಷಿಸುತ್ತಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 5ರ ವರೆಗೆ ಸ್ಮಾರಕಗಳ ವೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಜನರು ಬೆಳಿಗ್ಗೆಯೇ ಹಂಪಿಯತ್ತ ದೌಡಾಯಿಸುತ್ತಿದ್ದಾರೆ.

ಹಂಪಿಯಲ್ಲಿನ ವಿಶ್ವಪ್ರಸಿದ್ಧ ಸ್ಮಾರಕಗಳಾದ ವಿಜಯವಿಠ್ಠಲ ದೇವಸ್ಥಾನ, ಆವರಣದಲ್ಲಿನ ಸಪ್ತಸ್ವರ ಮಂಟಪ, ಕಲ್ಲಿನ ರಥ, ರಾಣಿ ಸ್ನಾನಗೃಹ, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪ, ಕಡಲೆ ಕಾಳು ಗಣಪ ಸೇರಿದಂತೆ ಇನ್ನಿತರ ಪ್ರದೇಶಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದ್ದಾರೆ. ಹೀಗಾಗಿ ಸ್ಮಾರಕಗಳ ಪ್ರವೇಶ ದ್ವಾರದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಭದ್ರತಾ ಸಿಬ್ಬಂದಿ ಮಾಸ್ಕ್‌ ಧರಿಸಿದವರಿಗೆ ಮಾತ್ರ ಒಳ ಪ್ರವೇಶಕ್ಕೆ ಅನುಮತಿ ನೀಡುತ್ತಿದ್ದು, ಕೊರೊನಾ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಒಬ್ಬೊಬ್ಬರನ್ನೇ ಒಳಗೆ ಬಿಡುತ್ತಿದ್ದಾರೆ.

ನಾಲ್ಕು ಕಡೆಗಳಲ್ಲಿ ಟಿಕೆಟ್‌ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಬಾರದಂತೆ ಆನ್‌ ಲೈನ್‌ ಟಿಕೆಟ್ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.

ಕೋವಿಡ್ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಅವಾಂತರ ಸೃಷ್ಟಿಸಿದ ವ್ಯಕ್ತಿ!

ವಿಜಯಸಾಕ್ಷಿ ಸುದ್ದಿ, ಕೊಡಗು

ಕೋವಿಡ್ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಸೋಂಕಿತನಿಂದ ಅವಾಂತರ ಸೃಷ್ಟಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ತಾನು ಗುಣಮುಖನಾಗದಿದ್ದರೂ ಮಡಿಕೇರಿ ಕೋವಿಡ್ ಆಸ್ಪತ್ರೆಯ ವೈದ್ಯರು ಆಸ್ಪತ್ರೆಯಿಂದ ಕಳುಹಿಸುತ್ತಿಲ್ಲ ಎಂದು ಬೇಸರಗೊಂಡ ಕೊರೊನಾ ಸೋಂಕಿತ ಅರೆಕಾಡು ಮೂಲದ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ನಿನ್ನೆ ಪರಾರಿಯಾಗಿದ್ದ.

ರೋಗಿ ತಪ್ಪಿಸಿಕೊಂಡಿರುವ ಕುರಿತು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ವೈದ್ಯಾಧಿಕಾರಿಗಳು ದೂರು ನೀಡಿ ಆತನ ಪತ್ತೆಗಾಗಿ ಮನವಿ ಮಾಡಿದ್ದರು. ಆದರೆ, ಇಂದು ಬೆಳಿಗ್ಗೆ ಸಿದ್ದಾಪುರ ಪೊಲೀಸ್ ಠಾಣೆಗೆ ತೆರಳಿದ ಸೋಂಕಿತ ವ್ಯಕ್ತಿ ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ನಿಟ್ಟಿನಲ್ಲಿ ಅಂಬ್ಯುಲೆನ್ಸ್ ತರಿಸಿದ್ದಾರೆ. ಪೊಲೀಸ್ ಠಾಣೆಗೆ ಅ್ಯಂಬುಲೆನ್ಸ್ ಬರುತ್ತಿರುವಂತೆಯೇ ಅಲ್ಲಿಂದಲೂ ಓಟಕಿತ್ತ ಸೋಂಕಿತ ವ್ಯಕ್ತಿ ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸಿದ್ದಾನೆ.

ಈತನ ಹುಡುಕಾಟಕ್ಕಾಗಿ ಸಿದ್ದಾಪುರ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಕೆಲವು ಗಂಟೆಗಳ ಬಳಿಕ ಕೋವಿಡ್ ಸೋಂಕಿತ ತನ್ನ ಪರಿಚಿತರ ಬೈಕ್ ಮೂಲಕ ವಿರಾಜಪೇಟೆ ಬಳಿ ಸಾಗುತ್ತಿರುವ ಮಾಹಿತಿ ದೊರಕಿತು. ಅಲ್ಲಿಗೆ ತೆರಳಿದ ಪೊಲೀಸರು ಈತನನ್ನು ಸುತ್ತುವರಿದು ಕೊನೆಗೂ ಓಡಿಹೋಗದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ. ಸದ್ಯ ಅ್ಯಂಬುಲೆನ್ಸ್ ಮೂಲಕ ಸೋಂಕಿತ ವ್ಯಕ್ತಿಯನ್ನು ಮತ್ತೆ ಕೋವಿಡ್ ಕೇರ್ ಕೇಂದ್ರಕ್ಕೆ ಕರೆತಂದು ದಾಖಲಿಸಲಾಗಿದೆ. ಸೋಂಕಿತ ವ್ಯಕ್ತಿಯು ಆಸ್ಪತ್ರೆಯಿಂದ ಪರಾರಿಯಾಗಿ ಪೊಲೀಸರೂ ಪರದಾಡುವಂತೆ ಮಾಡಿದ್ದ ಪ್ರಕರಣ ಕೊನೆಗೂ ಇತ್ಯರ್ಥವಾಗಿದೆ.

ಇಂದು ಸಂಜೆಯಿಂದ ಗದಗ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ

0

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸೋಂಕು ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳನ್ನು ಸಡಿಲು ಮಾಡಿ ಜೂ.19 ರಂದು ಆದೇಶ ಹೊರಡಿಸಿರುತ್ತದೆ. ಈ ಮಾರ್ಗಸೂಚಿಗಳು ಜೂನ್ 21 ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ವಾರಾಂತ್ಯ ಕರ್ಫ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯರೆಗೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದ್ದು, ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲಾಗಿದೆ. ಅದೇ ರೀತಿ ಆಹಾರ ಪದಾರ್ಥ, ದಿನಸಿ, ತರಕಾರಿ, ಹಣ್ಣು ಮಾಂಸ ಮೀನು, ಹಾಲು ಡೈರಿ ಉತ್ಪನ್ನ, ಅಗತ್ಯ ವಸ್ತು, ಮದ್ಯ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ನಿಗಧಿಯಾದ ಮದುವೆ ಕಾರ್ಯಕ್ರಮಗಳಿಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 5 ಜನ ಪಾಲ್ಗೊಳ್ಳಲು ಅವಕಾಶವಿದೆ.

ಇನ್ನುಳಿದಂತೆ ಸರ್ಕಾರಿ ನೌಕರರು ಅಗತ್ಯ ಸೇವೆಗೆ ನಿಯೋಜಿತರಿಗೆ, ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಿದೆ. ಸಾರ್ವಜನಿಕರು ಅನಾರೋಗ್ಯವಾದಲ್ಲಿ ಆಸ್ಪತ್ರೆಗಳಿಗೆ ತೆರಳಲು, ಹಾಗೂ ಲಸಿಕೆ ಹಾಕಿಸಿಕೊಳ್ಳುವದಕ್ಕಾಗಿ ತೆರಳಲು ಅವಕಾಶ ನೀಡಲಾಗಿದೆ.

ಈ ವೇಳೆ ರೋಗಿಗಳು ಅವರ ಸಹಾಯಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳಿಗೆ ಅವಕಾಶವಿರುತ್ತದೆ, ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬೇಕು. ಒಟ್ಟಾರೆ ರಾತ್ರಿ ಕರ್ಫ್ಯೂ ಹಾಗೂ ವಿಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆ ಹೊರತುಪಡಿಸಿ ಜನರ ಹಾಗೂ ವಾಹನಗಳ ಅನಗತ್ಯ ಓಡಾಟಕ್ಕೆ ನಿರ್ಭಂಧಿಸಲಾಗಿದೆ.

ಅದರಂತೆ ಟೆಲಿಕಾಂ ಇಂಟರ್ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ, ಆದರೆ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು, ವೈದ್ಯಕೀಯ ತುರ್ತು ಸೇವೆಗಳು ಅಗತ್ಯ ಸೇವೆಗಳಾದ ಫಾರ್ಮಸಿಗಳ ಕಾರ್ಯಾಚರಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ, ಎಲ್ಲಾ ತರಹದ ಸರಕುಗಳು ಮತ್ತು ಸರಕು ಸಾಗಾಟವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ, ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗಳಿಗೆ ಸರಕಾರದ ಮಾರ್ಗಸೂಚಿ ಅನ್ವಯ ಅವಕಾಶ ಇರುತ್ತದೆ. ರೈಲು ವಿಮಾನ ಸೇವೆ ಎಂದಿನಂತೆ ಅವಕಾಶವಿದ್ದು ಟಿಕೆಟ್ ಅನ್ನು ಪಾಸ್ ರೀತಿಯಲ್ಲಿ ಬಳಸಲು ಸೂಚಿಸಲಾಗಿದೆ.

ಸಾರ್ವಜನಿಕರು ವಿನಾಕಾರಣ ಮನೆಯಿಂದ ಹೊರಬರದೇ ಮನೆಯಲ್ಲೇ ಇರುವ ಮೂಲಕ ಸೋಂಕು ನಿಯಂತ್ರಣದಲ್ಲಿ ಸಹಕರಿಸಬೇಕು. ಅಗತ್ಯ ಸಂದರ್ಭದಲ್ಲಿ ಮನೆಯಿಂದ ಹೊರಬಂದಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಬಾಹುಬಲಿಯಾದ ಸಿಪಿಐ ಸಾಹೇಬ್ರು!; ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳಪೊಲೀಸರು ಅಂದ್ರೆ ತೊಂದರೆಗೊಳಗಾದ ನಾಗರಿಕರಿಗೆ ರಕ್ಷಣೆ‌ ಕೊಡೋರು ಅನ್ನೋದು ಎಲ್ರಗೂ ಗೊತ್ತು. ಪೊಲೀಸ್ ಅಧಿಕಾರಿಗಳು ಸಾಮಾನ್ಯವಾಗಿ ಜೀಪಿನಲ್ಲಿ ಓಡಾಡ್ತಾರೆ. ದಾರಿ ಮಧ್ಯೆ ರಸ್ತೆ ನಡುವೆ ಜೀಪ್ ನಿಂತ್ಕೊಂಡ್ ಬಿಟ್ರೆ..?ಆಗ ಏನ್ ಮಾಡೋದು..? ಇಂಥದ್ದೊಂದು ಸಮಸ್ಯೆ ಗುರುವಾರ ಯಲಬುರ್ಗಾದ ಸಾರ್ವಜನಿಕರ ಆಸ್ಪತ್ರೆ ಬಳಿ ನಡೆದಿದೆ. ಯಲಬುರ್ಗಾ ಸಿಪಿಐ ಸಾಹೇಬ್ರು ಕರ್ತವ್ಯದ ಮೇಲೆ ಆಸ್ಪತ್ರೆಯ ಶವಾಗಾರದ ಬಳಿ ಬಂದಿದ್ದಾರೆ. ಕೆಲಸ ಮುಗಿಸಿಕೊಂಡು ಜೀಪ್‌‌ನಲ್ಲಿ ಹೊರಡುವ ವೇಳೆ ವಾಹನ ಕೈ ಕೊಟ್ಟಿದೆ. ವಾಹನ ಚಾಲಕ ಮೆಕಾನಿಕ್ ಕರೆದುಕೊಂಡು ಬರಲು ಹೋಗಿದ್ದಾನೆ. ರಸ್ತೆ ನಡುವೆ ಇದ್ದ ಜೀಪ್‌ನ್ನು ಪಕ್ಕಕ್ಕೆ ನಿಲ್ಲಿಸಬೇಕೆಂದರೆ ವಾಹನ ತಳ್ಳಲು ಸುತ್ತ ಮುತ್ತ ಯಾರೂ ಇರಲಿಲ್ಲ. ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಆಗದಿರಲೆಂದು ಸಿಪಿಐ ನಾಗರೆಡ್ಡಿ ಅವರೊಬ್ಬರೇ ಬಾಹುಬಲಿ ಸಿನಿಮಾದಲ್ಲಿ ಆನೆ ರಥ ಎಳೆದಂತೆ ತಮ್ಮ ವಾಹನದ ಮುಂಭಾಗವನ್ನು ಹಿಡಿದೆಳೆದು ಪಕ್ಕಕ್ಕೆ ನಿಲ್ಲಿಸಿದ್ದಾರೆ. ಪೊಲೀಸರು ಅಂದ್ರೆ ಸುಮ್ನೆನಾ..? ಹೀಗೆ ವಾಹನ ತಳ್ಳುತ್ತಿರುವುದನ್ನ ಮೊಬೈಲ್ ವಿಡಿಯೋ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಬೆಂಕಿ ಅವಘಡ – 18 ವಿದ್ಯಾರ್ಥಿಗಳು ಸಾವು, 16 ಜನರಿಗೆ ಗಂಭೀರ ಗಾಯ!

ವಿಜಯಸಾಕ್ಷಿ ಸುದ್ದಿ, ಬೀಜಿಂಗ್

ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 18 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 16 ಜನ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಗಿನವರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿ ಶಾಮಕದ ಳದ ಸಿಬ್ಬಂದಿ ಭೇಟಿ ನೀಡಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ 34 ವಿದ್ಯಾರ್ಥಿಗಳು ಇದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎತ್ತುಗಳಂತೆ ನೊಗಕ್ಕೆ ಹೆಗಲು‌ ಕೊಟ್ಟ ಸಹೋದರರು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಬೆಳೆ ನಡುವಿನ ಕಳೆ ತೆಗೆಯಲು ಬಳಕೆ‌ ಮಾಡುವ ಎಡೆಕುಂಟೆಗೆ (ನೊಗ) ವಿದ್ಯಾರ್ಥಿ ಸಹೋದರರಿಬ್ಬರು ಎತ್ತುಗಳಂತೆ ಹೆಗಲು ಕೊಟ್ಟು ಹೊಲದ ಕಳೆ ಕೀಳುತ್ತಿರುವ ಕಮಾಲ್ ಕೊಪ್ಪಳ ತಾಲೂಕಿನ ಭೀಮನೂರು ಗ್ರಾಮದಲ್ಲಿ ನಡೆದಿದೆ.

ಕೇವಲ 2 ಗಂಟೆಯಲ್ಲಿ ಒಟ್ಟೂ 1.5 ಎಕರೆ ಹೊಲದಲ್ಲಿ ಎಡೆ ಹೊಡೆದ ಸಹೋದರರಾದ ಬಸವರಾಜ ಮತ್ತು ಮಂಜುನಾಥ, ಕಳೆ ಕೀಳಲು ಹೆಗಲು ಕೊಟ್ಟದ್ದು
ಮೆಕ್ಕೆಜೋಳ ಬೆಳೆ‌ ಚಿಕ್ಕದಿದ್ದು ಎತ್ತನಿಂದ ಉಳುಮೆ ಮಾಡಿದ್ರೆ ಮಣ್ಣಲ್ಲಿ ಸಸಿ ಮುಚ್ಚುವ‌ ಆತಂಕದ ಕಾರಣಕ್ಕಷ್ಟೇ.

ಬಸವರಾಜ ಮತ್ತು ಮಂಜುನಾಥ ಸಹೋದರರ ತಂದೆ ಫಕೀರಪ್ಪ ಬೀಡನಾಳರ ಕೃಷಿ ಕಾಯಕಕ್ಕೆ ಈ ಸಹೋದರರು ಹಾಗೂ
ಅತ್ತಿಗೆ ಲಕ್ಷ್ಮೀಯವರೂ ಸಾತ್ ನೀಡಿದ್ದಾರೆ.

ಕಾರವಾರ ಜಿಲ್ಲೆಯ 166 ಹಳ್ಳಿಗಳು ಪ್ರವಾಹ ಭೀತಿಯಲ್ಲಿ!

ವಿಜಯಸಾಕ್ಷಿ ಸುದ್ದಿ, ಕಾರವಾರ

ಮಳೆಯಿಂದಾಗಿ ಕರಾವಳಿ ಪ್ರದೇಶ ತತ್ತರಿಸಿ ಹೋಗಿದೆ. ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಚೇತರಿಸಿಕೊಳ್ಳುವ ಮೊದಲೇ ಇಲ್ಲಿಯ ಜನರು ಪ್ರವಾಹಕ್ಕೆ ತುತ್ತಾಗುವ ಭೀತಿಯಲ್ಲಿ ಇದ್ದಾರೆ. ಹೀಗಾಗಿ ಜಿಲ್ಲೆಯ 166 ಗ್ರಾಮಗಳಲ್ಲಿ ಪ್ರವಾಹ ಸಂಭವಿಸಬಹುದು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಆರ್ಭಟ ಹೆಚ್ಚಾಗಿದ್ದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, 234  ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 16,826 ಜನರಿಗೆ ಆಶ್ರಯ ಕಲ್ಪಿಸಬಹುದಾಗಿದೆ.

ಕಾಳಿ, ಶರಾವತಿ ನದಿ ತೀರ ಪ್ರದೇಶದ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಜನರನ್ನು ತೀರ ಪ್ರದೇಶದಿಂದ ಬೇರೆಡೆ ಸ್ಥಳಾಂತರಿಸಲು ಸಹ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮಲೆನಾಡು ಭಾಗದಲ್ಲಿ ಸಹ ಅಲ್ಲಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಹೆಚ್ಚು ಮಳೆ ಸುರಿದಿದ್ದರಿಂದ ಜಿಲ್ಲೆಯ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

error: Content is protected !!