Home Blog Page 3087

ರಾಜ್ಯದಲ್ಲಿ ಮುಂಗಾರು ಅಬ್ಬರ – ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಈಗಾಗಲೇ ಮುಂಗಾರು ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅವಾಂತರ ಇದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಜೆ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.9 ಮೀಟರ್ ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಇದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಾಖಲೆ ಬರೆದ ಕಿಂಗ್ ಕೊಹ್ಲಿ!

ವಿಜಯಸಾಕ್ಷಿ ಸುದ್ದಿ, ಸೌಥಾಂಪ್ಟನ್

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದ್ದಾರೆ. ಐಸಿಸಿಯ ಎಲ್ಲ ಟೂರ್ನಿಗಳ ಫೈನಲ್‍ ನಲ್ಲಿ ಆಡಿದ ವಿಶ್ವದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದಾರೆ.

ಕೊಹ್ಲಿ, 2011ರ ಏಕದಿನ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2014ರ ಟಿ20 ವಿಶ್ವಕಪ್ ಫೈನಲ್ ನಲ್ಲಿ ಆಡಿದ್ದರು. ಸದ್ಯ ಚೊಚ್ಚಲ ಟೆಸ್ಟ್ ಚಾಂಪಿಯನ್‍ ಶಿಪ್ ಫೈನಲ್‍ ನಲ್ಲಿಯೂ ಆಡುತ್ತಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವು ಮೊದಲ ದಿನ ಮಳೆಗೆ ಆಹುತಿಯಾದರೆ, ಎರಡನೇ ದಿನ ಮಂದ ಬೆಳಕು ಮತ್ತು ಮಳೆಗೆ ಬಲಿಯಾಯಿತು. ದಿನದಾಟದಲ್ಲಿ ಭಾರತ ತಂಡ 64.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದೆ.

ಮೊದಲ ವಿಕೆಟ್ಗೆ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ 62 ರನ್ ಗಳ ಜೊತೆಯಾಟ ನೀಡಿದರು. ರೋಹಿತ್ ಶರ್ಮಾ 34 ರನ್, ಶುಭಮನ್ ಗಿಲ್ 28 ರನ್ ಗಳಿಸಿ ಔಟ್ ಆದರು. 54 ಎಸೆತ ಎದುರಿಸಿ 2 ಬೌಂಡರಿಗಳಿಂದ 8 ರನ್ ಗಳಿಸಿ ಚೇತೇಶ್ವರ ಪೂಜಾರಾ ಬೌಲ್ಟ್ ಎಸೆತಕ್ಕೆ ಬೌಲ್ಡ್ ಆದರು.

ಮುರಿಯದ ನಾಲ್ಕನೇ ವಿಕೆಟ್ಗೆಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯಾ ರಹಾನೆ 147 ಎಸೆತಗಳಲ್ಲಿ 58 ರನ್ ಗಳ ಜೊತೆಯಾಟದಲ್ಲಿ ಆಡುತ್ತಿದ್ದಾರೆ.
ನ್ಯೂಜಿಲೆಂಡ್ ಪರ ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ನೆಲಿ ವ್ಯಾಗ್ನರ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

ಗದಗ ಜಿಲ್ಲೆಯಲ್ಲಿ ಅನ್ ಲಾಕ್; ನಾಳೆಯಿಂದ ಬಸ್ ಸಂಚಾರ ಆರಂಭ!

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯದಲ್ಲಿ ಕೊರೊನಾ ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಸೋಮವಾರ ಸಂಜೆ 5ರ ವರೆಗೆ ಅನ್ ಲಾಕ್ ಘೋಷಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಸಾರಿಗೆ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದು ಗದಗ ಘಟಕದ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ನಾಳೆಯಿಂದ 150ಕ್ಕೂ ಅಧಿಕ ಬಸ್ ಗಳು ಸಂಚಾರ ನಡೆಸಲಿವೆ. ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ ರಸ್ತೆಗೆ ಇಳಿಸುವ ಬಸ್ ಗಳ ಸಂಖ್ಯೆ ಹೆಚ್ಚಳವಾಗಲಿದೆ. ಜಿಲ್ಲೆಯಲ್ಲಿರುವ 480 ಶೆಡ್ಯೂಲ್ ಗಳಲ್ಲಿ ಶೇ. 30ರಷ್ಟು ಬಸ್ ಸಂಚಾರ ಮಾಡಲಿವೆ ಎಂದು ಹೇಳಿದ್ದಾರೆ.

ನಗರದಿಂದ ಪಟ್ಟಣಗಳಿಗೆ ಮಾತ್ರ ಬಸ್ ಸಂಚಾರ ನಡೆಸಲಿವೆ. ಗ್ರಾಮೀಣ ಭಾಗದ ಬಸ್ ಸಂಚಾರ ಸದ್ಯಕ್ಕೆ ಸ್ಥಗಿತ ಮಾಡಲಾಗಿದೆ. ಪ್ರಯಾಣಿಕರ ಸಂಚಾರದ ಮೇಲೆ ಅಲ್ಲಿಯೂ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ನಾಳೆಯಿಂದ ಬಸ್ ಸಂಚಾರ ಮಾಡುವುದರಿಂದಾಗಿ ಡಿಫೋ ಗಳಲ್ಲಿ ಬಸ್ ಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಸ್ಯಾನಿಟೈಜರ್ ಸಿಂಪಡಣೆ ಮಾಡಲಾಗುತ್ತಿದೆ. ಬಸ್ ನಲ್ಲಿ ಪ್ರಯಾಣಿಕರ ಸಂಚಾರಕ್ಕೆ ದೈಹಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಎರಡನೇ ಡೋಸ್ ಲಸಿಕೆ ಪಡೆದ ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ಮೊದಲ ಆದತ್ಯೆ ನೀಡಲಾಗಿದೆ. ಮೊದಲನೇ ಡೋಸ್ ಲಸಿಕೆ ಪಡೆದ ಸಿಬ್ಬಂದಿಗಳು ಡ್ಯೂಟಿಗೆ ಹಾಜರಾಗಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ‌ಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಗೆ ಮತ್ತೊಮ್ಮೆ ಅವಮಾನ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವಿದೆ. ಆದರೆ, ಇಂತಹ ಸುದೀರ್ಘ ಇತಿಹಾಸ ಹೊಂದಿರುವ ಕನ್ನಡಕ್ಕೆ ಲೋಕಸಭಾ ಸಚಿವಾಲಯದಿಂದ ಅವಮಾನ ಉಂಟಾಗಿದೆ. ಇದರಿಂದಾಗಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಲೋಕಸಭಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವು ‘ಪಾರ್ಲಿಮೆಂಟರಿ ರಿಸರ್ಚ್ ಅಂಡ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ ಸಂಸ್ಥೆಯು ಸಂಸತ್ತಿನ ಸದಸ್ಯರು, ರಾಜ್ಯ, ಕೇಂದ್ರಾಡಳಿತ ಪ್ರದೇಶದ ಶಾಸಕರು, ಅಧಿಕಾರಿಗಳಿಗೆ ಹಲವು ಭಾಷೆಗಳ ಕುರಿತು ಕಲಿಸಲು ಮುಂದಾಗಿದೆ.

ವಿದೇಶದ ಆರು ಭಾಷೆಗಳು ಹಾಗೂ ಭಾರತೀಯ ಆರು ಭಾಷೆಗಳನ್ನು ಕಲಿಸಲು ಮುಂದಾಗಿದೆ. ಇದರಲ್ಲಿ ಕನ್ನಡ ಕಡೆಗಣಿಸಿದ್ದು, ಅವಮಾನ ಮಾಡಿದಂತಾಗಿದೆ.

ಫ್ರೆಂಚ್, ಜರ್ಮನ್, ಜಪಾನೀಸ್, ಪೋರ್ಚುಗೀಸ್, ರಷ್ಯನ್ ಮತ್ತು ಸ್ಪ್ಯಾನಿಷ್‌ ಭಾಷೆಗಳು ಸೇರಿದಂತೆ ಭಾರತೀಯ 6 ಭಾಷೆಗಳಿಗೆ ಇಲ್ಲಿ ಕಲಿಕೆಗೆ ಅವಕಾಶ ನೀಡಲಾಗಿದೆ. ಭಾರತೀಯ ಭಾಷೆಗಳಾದ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು ಹಾಗೂ ತೆಲುಗು ಭಾಷೆಗಳಿಗೆ ಮಾತ್ರ ಮನ್ನಣೆ ನೀಡಲಾಗಿದೆ.

ದಕ್ಷಿಣ ಭಾರತದ ತಮಿಳು ಹಾಗೂ ತೆಲುಗು ಭಾಷೆಗಳಿಗೆ ಮಾತ್ರ ಮಾನ್ಯತೆ ನೀಡಲಾಗಿದೆ. ಇದರಿಂದಾಗಿ ಇತಿಹಾಸ ಹೊಂದಿರುವ ಕನ್ನಡಕ್ಕೆ ಅವಮಾನ ಮಾಡಿದಂತಾಗಿದೆ. ಲೋಕಸಭೆಯಿಂದಲೇ ಈ ಅವಮಾನ ಆಗಿರುವುದರಿಂದಾಗಿ ಅಸಮಾಧಾನ ಉಂಟಾಗುತ್ತಿದೆ. ಈ ನಡೆಯ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಶ್ವದ ಮೂರನೇ ಅತೀ ದೊಡ್ಡ ವಜ್ರ ಪತ್ತೆ!

ವಿಜಯಸಾಕ್ಷಿ ಸುದ್ದಿ, ಬೋಟ್ಸವಾನಾ

ವಿಶ್ವದ ಮೂರನೇ ಅತಿ ದೊಡ್ಡ ವಜ್ರ ಪತ್ತೆಯಾಗಿದೆ ಎಂದು ವಜ್ರ ಸಂಸ್ಥೆ ಡಿ ಬೀರ್ಸ್‌ನ ಡೆಬ್‌ ಸ್ವಾನಾ ಡೈಮಂಡ್ ಕೋ ಘಟಕ ಹೇಳಿದೆ. ಬೋಟ್ಸವಾನಾದಲ್ಲಿ ಜೂ. 1ರಂದು ಜ್ವಾನೆಂಗ್ ಎಂಬಲ್ಲಿ 1098 ಕ್ಯಾರೆಟ್ ತೂಕದ ವಜ್ರದ ಹರಳು ಪತ್ತೆಯಾಗಿದೆ. ಪ್ರಾಥಮಿಕ ವಿಶ್ಲೇಷಣೆಯಲ್ಲಿ, ಈ ಅಮೂಲ್ಯ ಹರಳು ವಿಶ್ವದ ಮೂರನೇ ಅತಿ ದೊಡ್ಡ ವಜ್ರ ಎನ್ನಬಹುದಾಗಿದೆ ಎಂದು ಡೆಬ್ ಸ್ವಾನಾ ವ್ಯವಸ್ಥಾಪಕ ನಿರ್ದೇಶಕ ಲಿನೆಟ್ ಆರ್ಮ್ ಸ್ಟ್ರಾಂಗ್ ಹೇಳಿದ್ದಾರೆ.

ಇದಕ್ಕೂ ಮೊದಲು 1905ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಅತಿ ದೊಡ್ಡ ವಜ್ರದ ಹರಳು ಕುಲಿನನ್ ಪತ್ತೆಯಾಗಿತ್ತು. ಇದು 3106 ಕ್ಯಾರೆಟ್ ನದ್ದಾಗಿತ್ತು. 2015ರಲ್ಲಿ ಆಗ್ನೇಯ ಬೋಟ್ಸುವಾನಾದ ಕರೋವೆಯಲ್ಲಿ 1109 ಕ್ಯಾರೆಟ್‌ ನ ಲೆಸಿಡಿ ಲಾರೋನಾ ಎಂಬ ವಜ್ರದ ಹರಳು ಪತ್ತೆಯಾಗಿತ್ತು. ಈಗ ಮೂರನೇ ಅತೀ ದೊಡ್ಡ ವಜ್ರ ಪತ್ತೆಯಾಗಿದೆ.
ಬಿಕ್ಕಟ್ಟಿನಲ್ಲಿರುವ ದಕ್ಷಿಣಾ ಆಫ್ರಿಕಾಗೆ ಈ ಒಂದು ವಜ್ರದಿಂದ ಆರ್ಥಿಕವಾಗಿ ನೆರವಾಗುವ ನಿರೀಕ್ಷೆ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಜ್ರ ಮಿಲಿಯನ್‌ ಡಾಲರ್‌ ಗಳಷ್ಟು ಹಣ ತಂದು ಕೊಡುವ ಸಾಧ್ಯತೆ ಇದೆ.

ಗದಗ ಸೇರಿದಂತೆ 16 ಜಿಲ್ಲೆಗಳಲ್ಲಿ ಸಂಜೆ 5ರ ವರೆಗೆ ಸಡಿಲಿಕೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಅನ್‍ ಲಾಕ್ ಮಾಡಲಾಗುತ್ತಿದ್ದು, 16 ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆ ಮಾಡಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಸಿಟಿವಿಟಿ ದರ, ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಾಗೂ ಸಂಪುಟ ಸಚಿವರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಂಜೆ 5ರ ವರೆಗೆ ಸಡಿಲಿಕೆ ಮಾಡಲಾಗಿದೆ.

ಈ ಜಿಲ್ಲೆಗಳಲ್ಲಿ ಎಲ್ಲ ಅಂಗಡಿಗಳನ್ನು ಬೆಳಿಗ್ಗೆ 5 ರಿಂದ ಸಂಜೆ 5ರ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಎಸಿ ಹಾಕದೆ ಹೊಟೇಲ್, ಕ್ಲಬ್ಸ್, ರೆಸ್ಟೋರೆಂಟ್‍ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5ರವರೆಗೆ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಬಸ್ ಮತ್ತು ಮೆಟ್ರೋದಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಪ್ರಯಾಣಿಸಬಹುದು. ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೆ ಅನುಮತಿ ನೀಡಲಾಗಿದೆ. ಸರ್ಕಾರಿ, ಖಾಸಗಿ ಕಚೇರಿಗಳಿಗೆ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

ಲಾಡ್ಜ್, ರೆಸಾರ್ಟ್, ಜಿಮ್ ಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
ಇದರೊಂದಿಗೆ ಶೇ. 5ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂ. 11ರಂದು ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಶೇ. 10ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುತ್ತವೆ. ಇದರೊಂದಿಗೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಇರುತ್ತದೆ.

ಪೊಲೀಸರ ಪ್ರತ್ಯೇಕ ದಾಳಿ; ಇಬ್ಬರು ಸಹೋದರರು ಸೇರಿ 12 ಜನ ಜೂಜುಕೋರರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಜೇಂದ್ರಗಡ ಪೊಲೀಸರು ದಾಳಿ ಮಾಡಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 12 ಜನರನ್ನು ಬಂಧಿಸಿ, ಅವರಿಂದ ಸುಮಾರು 10 ಸಾವಿರ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಗಜೇಂದ್ರಗಡದ ಕಾಲಕಾಲೇಶ್ವರ ರಸ್ತೆಯ ಸರಕಾರಿ ನೀರು ಪೂರೈಕೆಯ ಪಂಪ್ ಹೌಸ್ ಬಳಿ ಅಂದರ್-ಬಾಹರ್‌ ಜೂಜಾಟದಲ್ಲಿ ತೊಡಗಿದ್ದ ಗೌಳಿಗಲ್ಲಿಯ ಗಣೇಶ್ ವಿಠ್ಠಲರಾವ್ ಬೊಹಿಟೆ, ಆನಂದ ವಿಠ್ಠಲರಾವ್ ಬೊಹಿಟೆ, ಫಾರೂಕ್ ಇಬ್ರಾಹಿಂಸಾಬ್ ಹುನಗುಂದ, ಬಸವರಾಜ್ ದ್ಯಾಮಣ್ಣ ವದೇಗೋಳ,
ಕುಷ್ಟಗಿಯ ಚನ್ನಪ್ಪ ಅಂದೆನಪ್ಪ ದಂಡಾವತಿ, ತಾಂಡಾದ ಕುಮಾರ್ ಜಂಪಲೆಪ್ಪ ರಾಠೋಡ ಎಂಬುವವರನ್ನು ಬಂಧಿಸಿ ಅವರಿಂದ 5600 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬೇವಿನಕಟ್ಟಿ ಸಮೀಪದ ಸರಕಾರಿ ಹಳ್ಳದಲ್ಲಿ ಜೂಜಾಟದಲ್ಲಿ ತೊಡಗಿದ್ದ ಬೇವಿನಕಟ್ಟಿ ಗ್ರಾಮದ ವೀರಯ್ಯ ಬಸಯ್ಯ ಕಾರಡಗಿ, ನಬಿಸಾಬ್ ಹುಸೇನಸಾಬ್ ನದಾಫ್, ಮುತ್ತಪ್ಪ ಅಡಿವೆಪ್ಪ ಆಡಿನ, ಶ್ರೀಶೈಲಪ್ಪ ಜಗದೀಶ್ ಅವ್ವಣ್ಣವರ್, ಬಸಯ್ಯ ಚನ್ನಯ್ಯ ಕಾರಡಗಿ, ಮುನೇಶ್ ಶಿವಬಸಪ್ಪ ಆಡಿನ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ 4600 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಕೊರೊನಾ; ಜಿಲ್ಲೆಯಲ್ಲಿ ಶನಿವಾರ 28 ಜನರಿಗೆ ಸೋಂಕು, ಒಬ್ಬರ ಸಾವು

0

ವಿಜಯಸಾಕ್ಷಿ ಸುದ್ದಿ, ಗದಗ

ಶನಿವಾರ 28 ಜನರಿಗೆ ಸೋಂಕು ತಗುಲಿದೆ. ಇಂದು ಕೂಡ ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಂದಿದೆ. ಇದರಿಂದಾಗಿ ಇದುವರೆಗೂ ಕೋವಿಡ್ ನಿಂದಾಗಿ 292 ಜನ ಮೃತಪಟ್ಟಂತಾಗಿದೆ.

ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿ 85 ವರ್ಷದ ಮಹಿಳೆ ಜೂನ್ 10 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 19 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದು, ಮೃತರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಪ್ರಕಟಣೆ ನೀಡಿದ್ದಾರೆ.

ಇಂದು 28 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25583 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -15, ಮುಂಡರಗಿ-02, ನರಗುಂದ-02, ರೋಣ-05, ಶಿರಹಟ್ಟಿ-04, ಹೊರಜಿಲ್ಲೆಯ-00 ಸೇರಿದಂತೆ 28 ಪ್ರಕರಣಗಳು ದೃಢಪಟ್ಟಿವೆ.

ಇಂದು 85 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24901 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 390 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 82 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಒಂದು ತಿಂಗಳಿಂದ ಎಟಿಎಂನಲ್ಲಿ ಬರುತ್ತಿವೆ ಹರಿದ ನೋಟುಗಳು!

ವಿಜಯಸಾಕ್ಷಿ ಸುದ್ದಿ, ಗದಗ

ಎಸ್ ಬಿಐ ಬ್ಯಾಂಕಿನ ಎಟಿಎಂನಲ್ಲಿ ಹರಿದ ನೋಟುಗಳು ಬರುತ್ತಿದ್ದು, ಗ್ರಾಮಸ್ಥರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ‌ ಗ್ರಾಮದ ಎಸ್ ಬಿಐ ಬ್ಯಾಂಕ್ ನ ಎಟಿಎಂನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಹರಿದ ನೋಟುಗಳು ಬರುತ್ತಿವೆ.

ಗರಿಷ್ಠ ಮುಖಬೆಲೆಯ ನೋಟುಗಳು ಕೂಡ ಇದೇ ರೀತಿ ಹರಿದಿವೆ. ಇದರಿಂದಾಗಿ ಜನರು ಕಂಗಾಲಾಗಿದ್ದಾರೆ. ಪ್ರತಿ ಬಾರಿ ಹಣ ಡ್ರಾ ಮಾಡುವಾಗ ಒಂದು ಅಥವಾ ಎರಡು ಹರಿದ, ತೇಪೆ ಹಚ್ಚಿದ ನೋಟುಗಳು ಬರುತ್ತಿವೆ. ಇದರಿಂದಾಗಿ ಜನರು ಬೇಸರ ಆಕ್ರೋಶಗೊಂಡಿದ್ದಾರೆ.

ಬ್ಯಾಂಕಿಗೆ ಹೋಗಿ ಕ್ಯೂ ನಿಲ್ಲುವ ಬದಲಾಗಿ ಎಟಿಎಂಗೆ ಹೋಗಿ ಬೇಗನೆ ಹಣ ಪಡೆದರಾಯಿತು ಎಂದು ಜನರು ಎಟಿಎಂಗೆ ಹೋಗಿ ಹಣ ಪಡೆಯುತ್ತಿದ್ದರು. ಆದರೆ, ಅಲ್ಲಿ ಹರಿದ ನೋಟುಗಳು ಬರುತ್ತಿರುವುದರಿಂದ ಪುನಃ ಬ್ಯಾಂಕಿಗೆ ಹೋಗಿ ಕ್ಯೂ‌ ನಿಲ್ಲುವ ಪರಿಸ್ಥಿತಿ ಬಂದೋದಗಿದೆ.

ಈ ಹರಿದ ನೋಟುಗಳ ಬದಲಾವಣೆಗಾಗಿ ಜನರು ಹತ್ತಾರು ಕಿ.ಮೀ ಕೂಡ ಸಂಚರಿಸಬೇಕು. ಹೀಗಾಗಿ ಜನರು ಸಾಕಷ್ಟು ಬಾರಿ ಬ್ಯಾಂಕ್ ನ ಸಿಬ್ಬಂದಿಗೆ ಹೇಳಿದರೂ ಅವರು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಗ್ರಾಮೀಣ ಜನರಿಗಾಗುತ್ತಿರುವ ಈ ಸಮಸ್ಯೆಯನ್ನು ಕೂಡಲೇ ಸಂಬಂಧಿಸಿದವರು ಪರಿಹರಿಸಬೇಕೆಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ರಾಹುಲ್ ಗಾಂಧಿಗೆ ವಿಶೇಷವಾಗಿ ವಿಷ್ ಮಾಡಿದ ರಮ್ಯಾ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ನಟಿ ರಮ್ಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಶೇಷವಾಗಿ ಶುಭಾಶಯ ಕೋರಿದ್ದಾರೆ. ರಾಹುಲ್ ಗಾಂಧಿಯ ಫೋಟೋ ಶೇರ್ ಮಾಡಿಕೊಂಡು, ಅದರ ಜೊತೆ ‘ಜಗತ್ತನ್ನು ಉತ್ತಮವಾಗಿಸುವ ಅದ್ಭುತ ವ್ಯಕ್ತಿಗೆ ಹುಟ್ಟು ಹಬ್ಬದ ಶುಭಾಶಯಗಳು. ನಿಮ್ಮ ರೀತಿ ಬೇರೆ ಯಾರೂ ಇಲ್ಲ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಬಗ್ಗೆ ನಟಿ ರಮ್ಯಾಗೆ ಅಪಾರ ಗೌರವ. ಸಿನಿ ಲೋಕದಿಂದ ದೂರ ಹೋದ ಮೇಲೆ ರಮ್ಯಾ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದರು. ಆ ನಂತರ ಅವರು ರಾಹುಲ್ ಆಪ್ತ ವಲಯದಲ್ಲಿ ಒಬ್ಬರಾಗಿದ್ದರು.

ಇತ್ತೀಚೆಗಷ್ಟೇ ನಟಿ ರಮ್ಯಾ, ‘ನಿಮ್ಮನ್ನು ನಿರಾಸೆಗೊಳಿಸುತ್ತಿರುವುದಕ್ಕೆ ಕ್ಷಮೆ ಇರಲಿ. ನಾನು ಆಸಕ್ತಿ ಕಳೆದುಕೊಂಡಿದ್ದೇನೆ. ಸಿನಿಮಾ ಮತ್ತು ರಾಜಕೀಯದಲ್ಲಿ ನನ್ನ ಕಾಲ ಯಾವಾಗಲೋ ಮುಗಿದು ಹೋದ ಅಧ್ಯಾಯ ಎಂದು ಅಭಿಮಾನಿಗಳಿಗೆ ಹೇಳಿದ್ದರು.

error: Content is protected !!