Home Blog Page 3096

ಕೋವಿಡ್ ಸಮಸ್ಯೆಯ ನಂತರ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರೋಗ ರಾಜ್ಯದಲ್ಲಿ ಪತ್ತೆ!

ವಿಜಯಸಾಕ್ಷಿ ಸುದ್ದಿ, ರಾಯಚೂರು

ಕೊರೊನಾ ಸೋಂಕು ತಗುಲಿದ ಮಕ್ಕಳಲ್ಲಿ ಗುಣಮುಖವಾದ ಮೂರ್ನಾಲ್ಕು ವಾರಗಳ ನಂತರ ಕಾಣಿಸಿಕೊಳ್ಳುವ ಹಿಮೋಫ್ಯಾಗೋಸೈಟಿಕ್ ಲಿಂಫೋಹಿಸ್ಟಿಯೋಸಿಸ್(ಎಚ್ಎವಲ್ಎಸಚ್) ಸಮಸ್ಯೆಯ ಮೊದಲ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿದೆ.

ಆದರೆ, ಎಚ್‍ ಎಲ್‍ ಎಚ್ ನಿಂದ ಬಳಲುತ್ತಿದ್ದ 5 ವರ್ಷದ ಮಗುವನ್ನು ವೈದ್ಯರು ಗುಣಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಜಿಲ್ಲಾಡಳಿತ ಆ ಮಗು ಗುಣಮುಖವಾಗಿದೆ ಅಂತ ಮಾಹಿತಿ ನೀಡಿದೆ.

ನಗರದ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹೆಣ್ಣು ಮಗು ಕಳೆದ 9 ದಿನಗಳಿಂದ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದಾಳೆ. ಹಿಮೋಫ್ಯಾಗೋಸೈಟಿಕ್ ಲಿಂಫೋಹಿಸ್ಟಿಯೋಸಿಸ್ ಸಮಸ್ಯೆ ಅತಿ ವಿರಳವಾಗಿ ಕಾಣಿಸಿಕೊಳ್ಳುವ ತೊಂದೆಯಾಗಿದೆ.

ವಿಪರೀತ ಜ್ವರ, ವಾಂತಿ ಬೇಧಿ, ಹೊಟ್ಟೆನೋವು ಇದರ ಪ್ರಮುಖ ಲಕ್ಷಣಗಳು. ಬಿಳಿ ರಕ್ತಕಣ, ಪ್ಲೇಟ್ ಲೆಟ್ ಸಂಖ್ಯೆ ಗಣನೀಯ ಇಳಿಕೆ, ಸಿಆರ್ ಪಿ ಹೆಚ್ಚಳದಿಂದ ಮಕ್ಕಳಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ರಿಮ್ಸ್ ನ ಪಿಐಸಿಯು ನಲ್ಲಿ ಚಿಕಿತ್ಸೆ ಪಡೆದ ಮಗು ಈಗ ಸಂಪೂರ್ಣ ಗುಣಮುಖಳಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಇಂದು ಕೂಡ 11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಇಂದು ಸಿಎಂ ಯಡಿಯೂರಪ್ಪ ಅವರು 11 ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸಿ ಆದೇಶ ಹೊರಡಿಸಿದ್ದಾರೆ. ಆದರೆ, ಈ ದಿನವೂ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 11 ಸಾವಿರಕ್ಕೂ ಅಧಿಕವಿದೆ.
ಇಂದು ರಾಜ್ಯದಲ್ಲಿ 11,042 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಆಸ್ಪತ್ರೆಯಿಂದ 15,721 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು ಮಹಾಮಾರಿಗೆ 194 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 2,10,652 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 27,39,290 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂದು ಬೆಂಗಳೂರಿನಲ್ಲಿ 2,191 ಜನಕ್ಕೆ ಸೋಂಕು ತಗುಲಿದ್ದು, 47 ಜನ ಸಾವನ್ನಪ್ಪಿದ್ದಾರೆ.

ಇಂದು ರಾಜ್ಯದ ಬಾಗಲಕೋಟೆ 72, ಬಳ್ಳಾರಿ 293, ಬೆಳಗಾವಿ 439, ಬೆಂಗಳೂರು ಗ್ರಾಮಾಂತರ 264, ಬೆಂಗಳೂರು ನಗರ 2,191, ಬೀದರ್ 20, ಚಾಮರಾಜನಗರ 274, ಚಿಕ್ಕಬಳ್ಳಾಪುರ 280, ಚಿಕ್ಕಮಗಳೂರು 397, ಚಿತ್ರದುರ್ಗ 349, ದಕ್ಷಿಣ ಕನ್ನಡ 580, ದಾವಣಗೆರೆ 313, ಧಾರವಾಡ 261,

ಗದಗ 90, ಹಾಸನ 776, ಹಾವೇರಿ 67, ಕಲಬುರಗಿ 58, ಕೊಡಗು 279, ಕೋಲಾರ 247, ಕೊಪ್ಪಳ 161, ಮಂಡ್ಯ 448, ಮೈಸೂರು 1,011, ರಾಯಚೂರು 115, ರಾಮನಗರ 59, ಶಿವಮೊಗ್ಗ 521, ತುಮಕೂರು 571, ಉಡುಪಿ 291, ಉತ್ತರ ಕನ್ನಡ 426, ವಿಜಯಪುರ 174 ಮತ್ತು ಯಾದಗಿರಿಯಲ್ಲಿ 15 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಕೊರೊನಾ; ನೂರರ ಗಡಿಯಲ್ಲಿಯೇ ಇರುವ ಸೋಂಕು; ಸುಧಾರಣೆಯತ್ತ ಪಾಸಿಟಿವಿಟಿ ರೇಟ್!

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಗುರುವಾರ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ನೂರರ ಗಡಿಗೆ ಬಂದು ನಿಂತಿದೆ. ನಿನ್ನೆಯಷ್ಟೆ 95 ಜನರಲ್ಲಿ ಕಂಡು ಬಂದಿದ್ದ ಸೋಂಕು ಇವತ್ತು 90ಕ್ಕೆ ಬಂದು ನಿಂತಿದೆ.

ಕಳೆದ ಶುಕ್ರವಾರದಿಂದಲೂ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖದತ್ತ ಸಾಗಿದೆ.

ಇಂದು 90 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಮೂವರು ಮೃತಪಟ್ಟಿದ್ದಾರೆ.

ಇಂದು 90 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25198 ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -41, ಮುಂಡರಗಿ-15, ನರಗುಂದ-03, ರೋಣ-18, ಶಿರಹಟ್ಟಿ-10, ಹೊರಜಿಲ್ಲೆಯ-03 ಸೇರಿದಂತೆ 90 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 282 ಕ್ಕೇರಿದೆ.

ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ನಿವಾಸಿ 62 ವರ್ಷದ ಮಹಿಳೆ ಮೇ 31 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -09 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಬೆಳಧಡಿ ತಾಂಡಾ ನಿವಾಸಿ 65 ವರ್ಷದ ಮಹಿಳೆ ಜೂನ್- 02 ರಂದು ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 08 ರಂದೇ ಮೃತಪಟ್ಟಿದ್ದಾರೆ.

ಶಿರಹಟ್ಟಿ ತಾಲೂಕಿನ ಮಾಗಡಿ‌ ನಿವಾಸಿ 70 ವರ್ಷದ ಮಹಿಳೆ ಜೂನ್ 01 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಅವರು ಜೂನ್ -09 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ.

ಇಂದು 221 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 23860 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1056 ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 105 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

19 ಜಿಲ್ಲೆಗಳನ್ನು ಜೂ. 14ರ ನಂತರ ಅನ್ ಲಾಕ್ ಮಾಡಿ ಸಿಎಂ ಘೋಷಣೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸೋಂಕಿನ ಪ್ರಮಾಣ ಕಡಿಮೆಯಾಗಿರುವ 19 ಜಿಲ್ಲೆಗಳನ್ನು ಅನ್‍ ಲಾಕ್ ಮಾಡಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಅಲ್ಲದೇ, ಅನ್ ಲಾಕ್ ಆಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜೊತೆ ವೀಕೆಂಡ್ ಲಾಕ್‍ ಡೌನ್ ಇರಲಿದೆ. ಆದರೆ, 11 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಇರಲಿದೆ. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರೆಯಲಿದೆ. ಈ 11 ಜಿಲ್ಲೆಗಳಲ್ಲಿ ಎಂದಿನಂತೆ ಲಾಕ್ ಡೌನ್ ನಿಯಮಗಳು ಇರಲಿವೆ.

ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂ. 14 ರ ಬೆಳಿಗ್ಗೆ 6 ಗಂಟೆಯಂದ ಜೂ. 21ರ ವರೆಗೆ ಬೆಳಿಗ್ಗೆ 6 ವರೆಗೆ ನೈಟ್ ಕರ್ಫ್ಯೂ ಸೇರಿದಂತೆ ಹಲವು ಸಡಿಲಿಕೆಗಳು ಇರುತ್ತವೆ. ಎಲ್ಲ ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಗೆ ಅವಕಾಶ ನೀಡಲಾಗಿದೆ.
ಸದ್ಯ ಅಗತ್ಯ ಅಂಗಡಿಗಳು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ತೆರೆಯಬಹುದು. ಎಲ್ಲ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10ರ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ. ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾತ್ರಿ 7 ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಇರಲಿದೆ.

ಅಂಗಡಿ ತೆರೆಯಬೇಕೆ? ಹಾಗಾದರೆ ನೀವು ಲಸಿಕೆ ಹಾಕಿಸಿಕೊಂಡಿರಲೇಬೇಕು!

ವಿಜಯಸಾಕ್ಷಿ ಸುದ್ದಿ, ಬಾಗಲಕೋಟೆ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅವರು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಅವರು ಜಿಲ್ಲೆಯಲ್ಲಿ ನೊ ವ್ಯಾಕ್ಷಿನ್ ನೊ ಶಾಪ್ ಓಪನ್ ಎಂಬ ನಿಯಮ ಜಾರಿಗೊಳಿಸಿದ್ದಾರೆ. ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಅವರು ಈ ನಿಯಮ ಜಾರಿಗೊಳಿಸಿದ್ದಾರೆ.

ಈ ಮೂಲಕ ಅನ್ ಲಾಕ್ ನಂತರವೂ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಯಾಕ್ಷಿನ್ ಹಾಕಿಸಿಕೊಂಡವರಿಗೆ ‌ಮಾತ್ರ ಅಂಗಡಿ ತೆರೆಯಲು ಅವಕಾಶ ನೀಡಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ.

ದಿನಸಿ ಅಂಗಡಿ, ಹೊಟೇಲ್, ಚಹಾದ ಅಂಗಡಿ, ಬಾರ್ ರೆಸ್ಟೊರೆಂಟ್, ಎಲೆಕ್ಟ್ರಿಕ್ ಅಂಗಡಿ, ಸಲೂನ್, ಬಟ್ಟೆ ಅಂಗಡಿ ಸೇರಿದಂತೆ ಎಲ್ಲ ಅಂಗಡಿಗಳ ಮಾಲೀಕರಿಗೆ ಈ ಕುರಿತು ಸೂಚನೆ ನೀಡಲಾಗಿದೆ.
ಅಂಗಡಿ ತೆರೆಯಬೇಕಾದರೆ ಮಾಲೀಕರು, ಅಲ್ಲಿ ಕೆಲಸ ಮಾಡುವ ಕಾರ್ಮಿಕರು ಸೇರಿದಂತೆ ಎಲ್ಲರೂ ವ್ಯಾಕ್ಷಿನ್ ಹಾಕಿಸಿಕೊಂಡಿರಲೇಬೇಕು. ಒಂದು ವೇಳೆ ಲಸಿಕೆ ಪಡೆಯದೆ ಅಂಗಡಿ ತೆರೆದರೆ ಅಂಗಡಿ ಬಂದ್ ಮಾಡಿಸಲಾಗುವುದು. ಕಡ್ಡಾಯವಾಗಿ ಲಸಿಕೆ ಪಡೆದ ಕುರಿತು ದಾಖಲೆ ತೋರಿಸಬೇಕು ಎಂದು ಸೂಟಿಸಿದ್ದಾರೆ.

ಅನ್ ಲಾಕ್ ಗೂ ಮುನ್ನ ಆದ್ಯತೆ ಮೇರೆಗೆ ಇಂತಹ ವರ್ಗದವರಿಗೆ ಲಸಿಕೆ ಪಡೆಯಲು ಅನುಕೂಲ ಕಲ್ಪಿಸುತ್ತೇವೆ. ಜನರೊಂದಿಗೆ ನಿಕಟ ಸಂಪರ್ಕ ಹೊಂದುವ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಹಾಗೂ ಅಲ್ಲಿ ಕೆಲಸ ಮಾಡುವವರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ.

ಕಲ್ಲು ತೂರಾಟ: ಪೇದೆ ಸೇರಿ 15 ಜನರಿಗೆ ಗಾಯ

ವಿಜಯಸಾಕ್ಷಿ ಸುದ್ದಿ, ಗದಗ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹುಟ್ಟಿಕೊಂಡಿರುವ ರಾಜಕೀಯ ವೈಷಮ್ಯದಿಂದಾಗಿ ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟ ನಡೆದು, ತಡೆಯಲು ಬಂದ ಗ್ರಾಮೀಣ ಠಾಣೆ ಪೊಲೀಸರ ಮೇಲೆಯೂ ಹಲ್ಲೆ ನಡೆಸಿದ ಘಟನೆ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ನಡೆದಿದೆ.

ಬಧವಾರ ಸಂಜೆಯಿಂದಲೇ ಸಣ್ಣದಾಗಿ ಹೊತ್ತಿಕೊಂಡಿದ್ದ ಕಲಹ ಗುರುವಾರ ಮುಂಜಾನೆ ಭುಗಿಲೆದ್ದಿದೆ. ಮುಂಜಾನೆ ಗೋವಿಂದಪ್ಪ ಎನ್ನುವ ವ್ಯಕ್ತಿ ಬಹಿರ್ದೆಸೆಗೆ ಹೋದಾಗ ಒಂದು ಸಮುದಾಯದ ಜನ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಅದನ್ನು ಕೇಳಲು ಬಂದ ಮಗನ ಮೇಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಇನ್ನೊಂದು ಸಮುದಾಯದ ಜನ ಒಗ್ಗಟ್ಟಾಗಿ ಕೇರಿಯೊಳಗೆ ಹೋಗಲು ಮುಂದಾಗಿದ್ದಾರೆ. ಆ ಸಮಯದಲ್ಲಿ ಸ್ಥಳದಲ್ಲಿಯೇ ಇದ್ದ ಪೊಲೀಸರು ತಡೆದಿದ್ದಾರೆ. ಆಗ ಎರಡು ಕಡೆಯಿಂದ ಕಲ್ಲು ತೂರಾಟ ನಡೆದಿದೆ. ಪೊಲೀಸ್ ಪೇದೆಯೂ ಸೇರಿ ಎರಡೂ ಕಡೆಯ ಸುಮಾರು ೧೫ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದೊಡನೆ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರವಿಕುಮಾರ್ ಕಪ್ಪತನವರ್, ಸುಬ್ಬಾಪುರಮಠ ಭೇಟಿ ನೀಡಿ ಪರಿಸ್ಥಿತಿ ತಹಬದಿಗೆ ತಂದರು. ಸತೀಶ ದೊಡ್ಡಮನಿ ಹಾಗೂ ಈರಪ್ಪ ಬೇಲೇರಿ ಕಳೆದ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಮತ ಎಣಿಕೆಯ ಸಂದರ್ಭದಲ್ಲಿ ಎರಡು ಮತಗಳ ಅಂತರದಿಂದ ಈರಪ್ಪ ಬೇಲೇರಿ ಗೆದ್ದಿದ್ದರು. ಇದರಿಂದ ಅಸಮಾಧಾನಗೊಂಡ ಪರಾಜಿತ ಅಭ್ಯರ್ಥಿ ಸತೀಶ ಹಗೆ ಸಾಧಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗ್ರಾಮದಲ್ಲೀಗ ಪರಿಸ್ಥಿತಿ ಹತೋಟಿಯಲ್ಲಿದ್ದು, ಬಿಗುವಿನಿಂದ ಕೂಡಿದೆ. ಸ್ಥಳದಲ್ಲಿ ಮುನ್ನೆಚ್ಚರಿಕೆ ಅಂಗವಾಗಿ, ನಾಲ್ವರು ಪಿಎಸ್‌ಐ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಮೂರು ತುಕಡಿಗಳು ಬೀಡು ಬಿಟ್ಟಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ 17 ಜನರನ್ನು ಬಂಧಿಸಲಾಗಿದೆ. ದೂರು ಹಾಗೂ ಪ್ರತಿ ದೂರು ದಾಖಲಿಸಿಕೊಂಡಿರುವ ಗದಗ ಗ್ರಾಮೀಣ ಠಾಣೆ ಪೊಲೀಸರು, ಇನ್ನಷ್ಟು ಜನರ ಬಂಧನಕ್ಕೆ ಜಾಲ ಬೀಸಿದ್ದಾರೆ.

ಬಿಜೆಪಿ ಕಾರ್ಯಕರ್ತರಂತೆ ವರ್ತಿಸುವ ಪಿಎಸ್ಐ; ಬಡವರಿಂದ ಹಫ್ತಾ ವಸೂಲಿ ಆರೋಪ

ವಿಜಯಸಾಕ್ಷಿ ಸುದ್ದಿ, ರೋಣ

ರೋಣ ಪಿಎಸ್‌ಐ ಓರ್ವ ಅಧಿಕಾರಿಯಾಗಿ ಕರ್ತವ್ಯ ನಿಭಾಯಿಸದೆ ಬಿಜೆಪಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವುದು ಖಂಡನೀಯ. ಈ ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಡಿಎಸ್‌ಎಸ್ ಡಾ| ಬಿ.ಆರ್. ಅಂಬೇಡ್ಕರ್ ವಾದ ಸಂಘಟನೆಯ ಸಂಚಾಲಕ ಹನುಮಂತ ಚಲವಾದಿ ಗಂಭೀರ ಆರೋಪ ಮಾಡಿದರು.

ಅವರು ಗುರುವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಿಎಸ್‌ಐ ವಿನೋದ ಪೂಜಾರಿ ಅವರ ಕಾರ್ಯವೈಖರಿ ಖಂಡನೀಯ. ಲಾಕ್‌ಡೌನ್ ಸಮಯದಲ್ಲಿ ಶ್ರೀಮಂತರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಎಲ್ಲ ರೀತಿಯ ಅನುಕೂಲವನ್ನು ಕಲ್ಪಿಸಿದ್ದಾರೆ. ಬಡವರ ಮೇಲೆ ಕೇಸ್ ಜಡಿದು ಅವರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದರು.
ಲಾಕ್‌ಡೌನ್ ಸಮಯದಲ್ಲೂ ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆದರೂ ಅತ್ತ ಕಡೆ ಹೊರಳಿ ನೋಡದ ಪಿಎಸ್‌ಐ ವಿನೋದ ಪೂಜಾರಿ, ಸಣ್ಣ ಹೋಟೆಲ್‌ಗಳ ಮೇಲೆ ದಾಳಿ ಮಾಡಿ ಹಫ್ತಾ ವಸೂಲಿ ಮಾಡಿದ್ದಾರೆ. ಅವರ ಮೇಲೆ ಕೇಸ್ ಕೂಡ ಹಾಕಿದ್ದಾರೆ ಎಂದು ದೂರಿದರು.

ಅಕ್ರಮ ಸಾರಾಯಿ ಮಾರಾಟ ಹಳ್ಳಿಗಳಲ್ಲಿ ಮಾತ್ರವಲ್ಲ, ರೋಣ ಪಟ್ಟಣದಲ್ಲಿ ದಿನದ 24 ಘಂಟೆಯೂ ನಡೆದಿದೆ. ಆದರೂ ಪಿಎಸ್‌ಐ ಹಳ್ಳಿಗಳಲ್ಲಿ ರೇಡ್ ಮಾಡಿದ್ದಾರೆ. ಅವರಿಂದ 10 ಸಾವಿರ ರೂ.ಗಳನ್ನು ಪಡೆದು ಕೇಸ್ ಕೂಡ ಹಾಕಿದ್ದಾರೆ. ಈ ವಿಷಯವಾಗಿ ನಮ್ಮ ಬಳಿ ದಾಖಲೆಗಳಿವೆ ಎಂದರು.

ನ್ಯಾಯಾಲಯಕ್ಕೆ ಹೋಗಲು ಸಿದ್ಧ

ಭೀಮ ಆರ್ಮಿ ಸಂಘಟನೆ ಅಧ್ಯಕ್ಷ ಮುತ್ತು ನಂದಿ ಮಾತನಾಡಿ, ಪಿಎಸ್‌ಐ ವಿನೋದ ಪೂಜಾರಿ ಅವರು ಪಕ್ಕಾ ಬಿಜೆಪಿ ಮುಖಂಡನಾಗಿರುವುದು ಲಾಕ್‌ಡೌನ್ ಸಮಯದಲ್ಲಿ ಎಲ್ಲರಿಗೂ ತಿಳಿದ ವಿಷಯವಾಗಿದೆ. ಬೈಕ್ ಹಿಡಿದಾಗ ಶಾಸಕರಿಂದ ಅಥವಾ ಬಿಜೆಪಿ ಮುಖಂಡರಿಂದ ಕರೆ ಮಾಡಿಸಿದರೆ ಮಾತ್ರ ಬೈಕ್ ಬಿಟ್ಟು ಕಳಿಸುತ್ತಿದ್ದರು. ರೋಣ ಪಿಎಸ್‌ಐ ಆಕ್ರಮ ಮರಳು ಹಾಗೂ ಸಾರಾಯಿ ಮಾರಾಟಗಾರರಿಂದ ಎಷ್ಟು ಹಣ ವಸೂಲಿ ಮಾಡಿದ್ದಾರೆ ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಅನೇಕ ಬಡವರು ನೊಂದಿರುವ ಕಾರಣ ನ್ಯಾಯಾಲಯಕ್ಕೆ ಹೋಗಲೂ ಸಿದ್ಧ ಎಂದರು.

ಸುರೇಶ ಬೇವಿನಕಟ್ಟಿ, ಭೀಮಸಿ ಮಹಾರಾಜನವರ, ರಿಯಾಜ್ ಬೆಳವಣಕಿ, ಚಂದ್ರು ಜಕನೂರ, ಚಂದ್ರು ಹಡಗಲಿ ಉಪಸ್ಥಿತರಿದ್ದರು.

ಪ್ರತಿಭಟನೆ ಮಾಡುತ್ತೇವೆ

ಬೆಳವಣಕಿ, ಮಲ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ಆಗುತ್ತಿದ್ದರೂ ಹಫ್ತಾ ವಸೂಲಿ ಮಾಡಿ ಸುಮ್ಮನಿರುವ ಪಿಎಸ್‌ಐ, ಬಡವರ ಹಾಗೂ ದಲಿತರ ಮೇಲೆ ತನ್ನ ಹಗೆಯನ್ನು ಸಾಧಿಸುತ್ತಿರುವುದು ತರವಲ್ಲ. ಹಿರಿಯ ಅಧಿಕಾರಿಗಳು ಪಿಎಸ್‌ಐ ಮೇಲೆ ಕ್ರಮ ತೆಗೆದುಕೊಳ್ಳದಿದ್ದರೆ ಲಾಕ್‌ಡೌನ್ ಮುಗಿದ ತಕ್ಷಣ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು.

  • ಮುತ್ತು ನಂದಿ, ಅಧ್ಯಕ್ಷರು, ಭೀಮ ಆರ್ಮಿ ಸಂಘಟನೆ

10 ವರ್ಷಗಳ ಕಾಲ ಪ್ರೇಮಿಯನ್ನು ಅಡಗಿಸಿಟ್ಟಿದ್ದ ಭೂಪ!

ವಿಜಯಸಾಕ್ಷಿ ಸುದ್ದಿ, ಪಾಲಕ್ಕಾಡ್

ಪ್ರೀತಿಗೆ ಪೋಷಕರ ವಿರೋಧ ವ್ಯಕ್ತವಾಗಿದ್ದರಿಂದಾಗಿ ಪ್ರೇಮಿಯನ್ನೇ 10 ವರ್ಷಗಳ ಕಾಲ ಬಚ್ಚಿಟ್ಟ ಘಟನೆ ಬೆಳಕಿಗೆ ಬಂದಿದೆ. 34 ವರ್ಷದ ವ್ಯಕ್ತಿಯೊಬ್ಬ ಮನೆಯ ಪಕ್ಕದ ಯುವತಿ 28 ವರ್ಷದ ಸಜಿತಾಳನ್ನು ಪ್ರೀತಿಸುತ್ತಿದ್ದ. ಇದಕ್ಕೆ ಪೋಷಕರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸಜಿತಾ ಮನೆ ಬಿಟ್ಟು ಬಂದಿದ್ದಳು. ಆದರೆ, ಉಳಿದವರಂತೆ ಬೇರೆ ಓಡಿ ಹೋಗದೆ ಈ ವ್ಯಕ್ತಿ, ತನ್ನ ಕೋಣೆಯಲ್ಲಿಯೇ ಅಡಗಿಸಿಟ್ಟಿದ್ದಾನೆ. ಅದು ಒಂದಲ್ಲ ಎರಡಲ್ಲ ಬರೋಬ್ಬರಿ 10 ವರ್ಷಗಳ ಕಾಲ ಅಡಗಿಸಿಟ್ಟಿದ್ದಾನೆ.

ಸಜಿತಾ ನಿತ್ಯ ಕರ್ಮಗಳಿಗಾಗಿ ರಾತ್ರಿಯ ಸಂದರ್ಭದಲ್ಲಿ ಮಾತ್ರ ಹೊರ ಬರುತ್ತಿದ್ದಳು. ಮೂರು ತಿಂಗಳ ಹಿಂದೆ ರಹಮಾನ್ ತನ್ನ ಮನೆಯಿಂದ ನಾಪತ್ತೆಯಾಗಿದ್ದ. ಆನಂತರ ಅವರ ಸಹೋದರರು ಆತನನ್ನು ವಿಚಾರಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಈ ವಿಷಯ ಬೆಳಕಿಗೆ ಬರುವವರೆಗೂ ಮನೆಯಲ್ಲಿಯೇ ಇದ್ದ ಸಜಿತಾಳನ್ನು ಮಗನ ಪಾಲಕರು ಸಹ ಕಂಡು ಹಿಡಿದಿರಲಿಲ್ಲ.
ಪೊಲೀಸರು ಮಧ್ಯಪ್ರವೇಶಿಸಿದ ನಂತರ ರಹಮಾನ್ ನಡೆದ ಘಟನೆ ತಿಳಿಸಿದ್ದಾನೆ.

ಪೊಲೀಸರು ರಹಮಾನ್ ಮತ್ತು ಸಜಿತಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸಜಿತಾ ಅವನೊಂದಿಗೆ ವಾಸಿಸಲು ಬಯಸಿದ್ದರಿಂದ ಅವನ ಜೊತೆ ಹೋಗಲು ಕೋರ್ಟ್ ಅನುಮತಿ ನೀಡಿದೆ.
ಆಯಿಲೂರ್‌ ನ ಕರತ್‌ ಪರಂಬು ಮೊಹಮ್ಮದ್ ಘಾನಿ ಅವರ ಮಗ ರಹಮಾನ್ ಮತ್ತು ನೆರೆಹೊರೆಯಲ್ಲಿ ವಾಸಿಸುತ್ತಿದ್ದ ವೇಲಾಯುಧನ್ ಅವರ ಪುತ್ರಿ ಸಜಿತಾ ಪ್ರೀತಿಸುತ್ತಿದ್ದರು ಎಂದು ನೆಮರಾ ಪೊಲೀಸರು ತಿಳಿಸಿದ್ದಾರೆ.

ಕುಟುಂಬಸ್ಥರ ವಿರೋಧಕ್ಕೆ ಹೆದರಿದ್ದ ಸಜಿತಾ 2010ರ ಫೆ. 2ರಂದು ತನ್ನ ಮನೆ ಬಿಟ್ಟು ಬಂದಿದ್ದಳು. ರಹಮಾನ್ ಕೋಣೆಯೊಳಗೆ ತೆರಳಿ ಆಹಾರ ನೀಡುತ್ತಿದ್ದ. ಪೋಷಕರನ್ನು ಹೊರತುಪಡಿಸಿ ರಹಮಾನ್ ಸಹೋದರಿ ಸಹ ಮನೆಯಲ್ಲಿ ವಾಸಿಸುತ್ತಿದ್ದರು. ಆದರೂ ಯಾರೊಬ್ಬರಿಗೆ ವಿಷಯ ತಿಳಿಯದಂತೆ ಜಾಗೃತಿ ವಹಿಸಿದ್ದ. ಸಜಿತಾ ಪೋಷಕರು 10 ವರ್ಷಗಳ ಹಿಂದೆ ಮಗಳು ಕಾಣೆಯಾಗಿದ್ದಾಳೆ ದೂರು ನೀಡಿದ್ದರು. ಈ ದೂರಿನನ್ವಯ ಆಗ ರಹಮಾನ್ ಸೇರಿದಂತೆ ಅನೇಕರನ್ನು ಪೊಲೀಸರು ಪ್ರಶ್ನಿಸಿದ್ದರು.

2021ರ ಮಾ. 3ರಂದು ರಹಮಾನ್ ಕಾಣೆಯಾಗಿರುವುದಾಗಿ ಪೋಷಕರು ನೆನ್ಮಾರಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರಹಮಾನ್ ನೆನ್ಮರಾ ಪಟ್ಟಣದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿರುವುದನ್ನು ಸಹೋದರ ನೋಡಿದ್ದ. ಇದರಿಂದ ಆತಂಕಗೊಂಡ ರಹಮಾನ್ ಸಮೀಪದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸ್ ಸಿಬ್ಬಂದಿ ಸಹಾಯ ಕೋರಿದ್ದ. ಈ ಸಂದರ್ಭದಲ್ಲಿ ತಾನು ಮತ್ತು ಸಜಿತಾ ಮೂರು ತಿಂಗಳಿನಿಂದ ವಿಥುನಾಶೇರಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಾನೆ.

ಚಿತ್ರಕಲೆ ಮತ್ತು ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ರಹಮಾನ್, ಸಾಂದರ್ಭಿಕವಾಗಿ ಮಾತ್ರ ಕೆಲಸಕ್ಕೆ ಹೋಗುತ್ತಿದ್ದ. ಆದರೆ, ರಹಮಾನ್ ಪೋಷಕರು ಪ್ರತಿದಿನ ಕೆಲಸಕ್ಕೆ ಹೋಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದರು. ಸಜಿತಾ ಪೋಷಕರನ್ನು ಪ್ರಶ್ನಿಸಿದಾಗ ಅವರು ಮಗಳು ಮೃತಪಟ್ಟಿದ್ದಾಗಿ ಭಾವಿಸಿದ್ದರು ಎಂದು ಹೇಳಿದ್ದಾರೆ.

ವಿಜಯೇಂದ್ರ ದೇವಸ್ಥಾನ ಭೇಟಿ ಪ್ರಕರಣ; ವರದಿ ಕೇಳಿದ ಹೈ ಕೋರ್ಟ್‌

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ, ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಆರೋಪದ ಕುರಿತು ಹೈಕೋರ್ಟ್, ರಾಜ್ಯ ಸರ್ಕಾರದಿಂದ ವರದಿ ಕೇಳಿದೆ.

ಈ ಕುರಿತು ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗಿದ್ದರಿಂದಾಗಿ ಸರ್ಕಾರ, ಮೊದಲು ಕರ್ಫ್ಯೂ ಜಾರಿಗೊಳಿಸಿ, ಆ ನಂತರ ಲಾಕ್ ಡೌನ್ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ದೇವಸ್ಥಾನ ತೆರೆಯಲು ಅವಕಾಶ ನೀಡಿರಲಿಲ್ಲ. ಕೇವಲ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿತ್ತು.

ಆದರೆ, ಈ ಸಂದರ್ಭದಲ್ಲಿ ವಿಜಯೇಂದ್ರ ಕಳೆದ ತಿಂಗಳು ತಮ್ಮ ಪತ್ನಿ ಜೊತೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದಿದ್ದಲ್ಲದೆ ಪೂಜೆ ನೆರವೇರಿಸಿದ್ದರು, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದು, ಇದು ಎಷ್ಟು ಸರಿ, ಜನಸಾಮಾನ್ಯರಿಗೊಂದು ನಿಯಮ, ಜನಪ್ರತಿನಿಧಿಗಳಿಗೊಂದು ನಿಯಮವೇ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಸದ್ಯ ಈ ಪ್ರಕರಣ ಕೈಗೆತ್ತಿಕೊಂಡ ಹೈಕೋರ್ಟ್, ಇಂದು ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯದ ಈ ಜಿಲ್ಲೆಗಳಿಗೆ ಇಲ್ಲ ಅನ್ ಲಾಕ್ ಭಾಗ್ಯ! ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಏನಾಯಿತು?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿನ 8 ಜಿಲ್ಲೆಗಳಲ್ಲಿ ಅಂದುಕೊಂಡಂತೆ ಸೋಂಕು ನಿಂತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಹೀಗಾಗಿ ಜೂ. 14ರ ನಂತರವೂ ಈ ಈ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ.

ಸೋಂಕು ಹೆಚ್ಚಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಇತರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿನ ಕೋವಿಡ್ ಪರಿಸ್ಥಿತಿ ಹೇಗಿದೆಯಂಬ ಮಾಹಿತಿ ಪಡೆದರು.

ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಅವರು ಈ 8 ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಎಂಟು ಜಿಲ್ಲೆಗಳಲ್ಲಿ ಸೋಂಕು ಕಡಿಮೆಯಾಗಿದೆಯಾದರೂ, ಪಾಸಿಟಿವಿ ದರ ಇಳಿಕೆಯಾಗಿಲ್ಲ. ಈ ಅಂಶ ಸರ್ಕಾರವನ್ನು ಗಾಢವಾಗಿ ಕಾಡುತ್ತಿದೆ. ಹಾಗಾಗಿ, ಮುಖ್ಯಂತ್ರಿಗಳು ಲಾಕ್ ಡೌನ್ ಹಿಂಪಡೆವ ಕುರಿತು ಆಯಾ ಜಿಲ್ಲಾಧಿಕಾರಿಗಳ ಅಭಿಪ್ರಾಯವನ್ನೇ ಮೊದಲು ಕೇಳಿದರು. ಬಹುತೇಕ ಎಲ್ಲ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಮುಂದುವರಿಸುವ ಇರಾದೆ ವ್ಯಕ್ತಪಡಿಸಿದರು ಎನ್ನಲಾಗಿದೆ.

ಸಭೆಯಲ್ಲಿ ಹಾಜರಿದ್ದ ತಜ್ಞರು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ಸಡಿಲಗೊಳಿಸಿದರೆ, ಸೋಂಕು ಮತ್ತೆ ಏರಿಕೆಯಾಗುವ ಸಂಭವವಿದೆ. ಹಾಗಾಗಿ ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆ ಬರುವವರೆಗೂ ಕಠಿಣ ಲಾಕ್ ಡೌನ್ ಮುಂದುವರಿಸಬೇಕೆಂಬ ಒಮ್ಮತದ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ವರದಿಯಾಗಿದೆ. ಹಾಗಾಗಿ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸುವುದು ಮತ್ತು ಇನ್ನೂ ಅಪಾಯದ ಅಂಚಿನಲ್ಲೇ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುರಿಸುವುದು ಎನ್ನುವುದು ಬಹುತೇಕ ನಿಶ್ಚಯವಾದಂತಾಗಿದೆ. ಈ ಬಗ್ಗೆ ಜೂನ್ 12 ರಂದು ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

error: Content is protected !!