Home Blog Page 3101

ಶಾಸಕ ಯತ್ನಾಳ ಗಡಿಪಾರು ಮಾಡಲು ಒತ್ತಾಯಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಕನ್ನಡ ಪರ ಸಂಘಟನೆಗಳ ಹೋರಾಟಗಾರರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜಾಪುರ ಶಾಸಕ ಬಸನಗೌಡ್ ಪಾಟೀಲ ಯತ್ನಾಳ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಬುಗಿಲೆದ್ದಿದೆ.

ಗದಗನಲ್ಲೂ ಕರವೇ ಕಾರ್ಯಕರ್ತರು ಗಡಿಪಾರು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ನೂರಾರು ಕಾರ್ಯಕರ್ತರು, ಯತ್ನಾಳ ಅವರ ಪ್ರತಿಕೃತಿ ದಹನಕ್ಕೆ ಮುಂದಾದರು. ಈ ವೇಳೆ ತಡೆಯಲು ಬಂದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಪ್ರತಿಕೃತಿ ದಹನಕ್ಕೆ ಅವಕಾಶ ನೀಡದ ಪೊಲೀಸರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಎಚ್ ಎಸ್ ಸೋಂಪೂರ, ಜಿಲ್ಲಾಧ್ಯಕ್ಷ ಹನಮಂತ ಅಬ್ಬಿಗೇರಿ, ಯುವಘಟಕದ ಜಿಲ್ಲಾಧ್ಯಕ್ಷ ನಿಂಗನಗೌಡ ಪಾಟೀಲ, ಶರಣು ಗೋಡಿ, ಬಸವರಾಜ್ ಸೇರಿದಂತೆ ಕಾರ್ಯಕರ್ತರು ಇದ್ದರು.

ಚಲಿಸುವ ಲಾರಿಯಡಿ ಬಿದ್ದು ಯುವಕ ಆತ್ಮಹತ್ಯೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಭಾರಿ ಗಾತ್ರದ ಚಲಿಸುವ ಲಾರಿಯಡಿ ಜಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಗದಗನ ಮುಳಗುಂದನಾಕಾದಲ್ಲಿ ರಾತ್ರಿ‌ ನಡೆದಿದೆ.

ಮಧ್ಯರಾತ್ರಿ ನಡೆದ ಈ ದುರ್ಘಟನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ವಿಳಾಸ ಪೊಲೀಸರಿಗೆ ಇನ್ನೂ ತಿಳಿದು ಬಂದಿಲ್ಲ.

ಸ್ಥಳೀಯರು ಹಾಗೂ ಪೊಲೀಸರು ಹೇಳುವ ಪ್ರಕಾರ ಈ ಯುವಕ ಕೆಇಬಿ‌ ಕಚೇರಿಯ ರಸ್ತೆಯಿಂದ ಆಗಮಿಸಿ ನಾಕಾದಲ್ಲಿ ಡಿವೈಡರ್ ಮೇಲೆ ನಿಂತು ಲಾರಿ ಬಂದಿದ್ದು ನೋಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸುದ್ದಿ ತಿಳಿದ ಟ್ರಾಫಿಕ್ ಪಿಎಸ್ಐ ಕಮಲಾ‌ ದೊಡ್ಡಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಾರಿಗಾಗಿ ಶೋಧ ನಡೆಸಿದ್ದಾರೆ.

ಕೊವಿಡ್-19: ಶುಕ್ರವಾರದ ಗದಗ ಜಿಲ್ಲೆಯ ಸ್ಥಿತಿಗತಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ನವೆಂಬರ್ 20 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 115598 ಜನ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 119325 ಮಾದರಿಗಳಲ್ಲಿ 108347 ಮಾದರಿಗಳು (ನೆಗೆಟಿವ್) ನಕಾರಾತ್ಮಕವಾಗಿವೆ. 330 ಮಾದರಿಗಳ ವರದಿ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಇಂದಿನ 11 ಪ್ರಕರಣಗಳು ಸೇರಿದಂತೆ ಒಟ್ಟು 10648 ಕೊವಿಡ್-19 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಕೊವಿಡ್ ಸೋಂಕಿಗೆ 141 ಜನ ಮೃತಪಟ್ಟಿದ್ದು, ಇಂದಿನ ಆರು ಜನ ಸೇರಿದಂತೆ ಒಟ್ಟು 10443 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 64 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; ಮೂವರು ಸ್ಥಳದಲ್ಲೇ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.

ನಿಟ್ಟಾಲಿ ಕಡೆಯಿಂದ ಬಂದ ಬೈಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ನೂತನವಾಗಿ ನಿರ್ಮಿಸಿರುವ ರಸ್ತೆಗೆ ವೇಗ ನಿಯಂತ್ರಣಗಳನ್ನು ಅಳವಡಿಸದಿರುವುದೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶ್ರೀಧರ್ ತಿಳಿಸಿದ್ದಾರೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; ಮೂವರು ಸ್ಥಳದಲ್ಲೇ ಸಾವು

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.
ನಿಟ್ಟಾಲಿ ಕಡೆಯಿಂದ ಬಂದ ಬೈಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ನೂತನವಾಗಿ ನಿರ್ಮಿಸಿರುವ ರಸ್ತೆಗೆ ವೇಗ ನಿಯಂತ್ರಣಗಳನ್ನು ಅಳವಡಿಸದಿರುವುದೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶ್ರೀಧರ್ ತಿಳಿಸಿದ್ದಾರೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಜಿತ್ ಪವಾರ್ ಗೆ ತಲೆನೇ ಇಲ್ಲಾ: ಸಚಿವ ಪ್ರಭು ಚವ್ಹಾಣ ಆಕ್ರೋಶ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬೆಳಗಾವಿ ನಮಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಗದಗನ ಪಶು ವೈದ್ಯಕೀಯ ವಿಶ್ವವಿದ್ಯಾಲಯ ದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾತನಾಡಿದ ಸಚಿವ ಪ್ರಭು ಚವ್ಹಾಣ, ಅಜಿತ್ ಪವಾರ್ ಗೆ ತಲೆನೇ ಇಲ್ಲಾ, ಆತ ಡಬಲ್ ಗೇಮ್ ವ್ಯಕ್ತಿ ಅಂತ ಕಿಡಿ ಕಾರಿದರು. ಗಡಿ ವಿಷಯದಲ್ಲಿ ರಾಜ್ಯದ ಒಂದಿಂಚು ಜಾಗೆಯನ್ನು ಬಿಟ್ಟು ಕೊಡಲ್ಲಾ ಎಂದರು.

ಕರ್ನಾಟಕದ ಜಾಗೆ ನಮ್ಮದು ಅನ್ನುವುದು ದಡ್ಡತನ ಪರಮಾವಧಿ‌. ಅಜಿತ್ ಪವಾರ್ ಡಬಲ್ ಸ್ಟ್ಯಾಂಡರ್ಡ್‌ ವ್ಯಕ್ತಿ, ಅವರಿಗೆ ತಲೆ ಇಲ್ಲಾ ರಾತ್ರೋರಾತ್ರಿ ನಾಯಕನಾದವನು. ಅಂತವನ ಮಾತಿಗೆ ಕಿಮ್ಮತ್ತು ಕೊಡುವುದು ಅಗತ್ಯವಿಲ್ಲಾ ಅಂತಾ ವಾಗ್ದಾಳಿ ನಡೆಸಿದರು.

ಗಡಿ ಬಗ್ಗೆ ಸಾಂಗ್ಲಿ, ಸೊಲ್ಲಾಪುರಗೆ ಬಂದು ಮಾತನಾಡುತ್ತೇನೆ ಎಂದು ಉದ್ದಟತನ ತೋರಿದ ಅಜಿತ ಪವಾರ್ ಗೆ ಧೈರ್ಯವಿದ್ದರೆ ಕರ್ನಾಟಕ ಕ್ಕೆ ಬಂದು ಮಾತನಾಡಲಿ ಎಂದು ಸವಾಲು ಹಾಕಿದರು.

ಅಜಿತ ಪವಾರನದು ಬರಿ ಬೆಂಕಿ ಹಚ್ಚುವ ಕೆಲಸ. ಅದೇ ಅವರ ಉದ್ಯೋಗ, ಮಹಾರಾಷ್ಟ್ರದಲ್ಲೂ ಬರಿ ಬೆಂಕಿ ಹಚ್ಚುವ ಕೆಲಸ ಮಾಡ್ತಾನೆ ಬಂದಿದ್ದಾರೆ. ಮಹಾರಾಷ್ಟ್ರ ಜನರೇ ಕಿಮ್ಮತ್ತು ಕೊಡಲ್ಲಾ, ಇನ್ನು ಕರ್ನಾಟಕ ಜನ ಕಿಮ್ಮತ್ತು ಕೊಡೊದೆ ಇರೋದು ಯಾವ ಲೆಕ್ಕ ಅಂತ ಸಚಿವ ಪ್ರಭು ವ್ಯಂಗ್ಯ ವಾಡಿದರು.

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ.
ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.

ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.
ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ‌ಗದಗ: ಗೆಳೆಯರೊಂದಿಗೆ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಲ್ಲಿ ಮುಳಗಿದ ದುರ್ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯ ತೀರ್ಥ ಹೊಂಡದಲ್ಲಿ ಈಜಲು ಹೋಗಿದ್ದ ಬ್ಯಾಡಗಿಯ ಹರ್ಷವರ್ಧನ ಅರಕೇರಿ (15) ಎಂಬಾತನೇ ನೀರಲ್ಲಿ ಮುಳಗಿದಾತ.

ದೀಪಾವಳಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಹರ್ಷವರ್ಧನ ಇಂದು ಪಕ್ಕದ ಮನೆಯ ಗೆಳೆಯರೊಂದಿಗೆ ಹೊಂಡಕ್ಕೆ ಈಜಲು ಹೋಗಿದ್ದ.

ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರೊಂದಿಗೆ ಹರ್ಷವರ್ಧನಗಾಗಿ ಶೋಧ ಕಾರ್ಯ ನಡೆಸಿದ್ದು, ಕುಟುಂಬದವರ ಆಕ್ರಂದನ ಹೇಳತೀರಾದಾಗಿದೆ. ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

error: Content is protected !!