Home Blog Page 3129

ಭಾರತಕ್ಕೆ ಮತ್ತೊಂದು ಪದಕ ತಂದ ಪಿ.ವಿ.ಸಿಂಧು

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಎರಡನೇ ಪದಕ ದೊರೆತಿದ್ದು, ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‍ನಲ್ಲಿ ಪಿ.ವಿ. ಸಿಂಧು ಕಂಚಿನ ಪದಕ ಪಡೆದಿದ್ದಾರೆ. ನಿನ್ನೆ ನಡೆದ ಸೆಮಿಫೈನಲ್ ನಲ್ಲಿ ಚೀನಾದ ಇನ್ನೋರ್ವ ಆಟಗಾರ್ತಿ ವಿರುದ್ಧ ಸೋತಿದ್ದ ಸಿಂಧು ಕಂಚಿನ ಪದಕಕ್ಕೆ ಇಂದು ನಡೆದ ಪಂದ್ಯದಲ್ಲಿ ಚೀನಾದ ಜಿ. ಬಿಂಗ್ ಜಿಯಾವೋ ವಿರುದ್ಧ 21-13, 21-15 ನೇರ ಸೆಟ್‍ಗಳಿಂದ ಗೆಲುವು ದಾಖಲಿಸಿದ್ದಾರೆ.

ಒಲಿಂಪಿಕ್ಸ್ ನಲ್ಲಿ ಎರಡನೇ ಬಾರಿ ಪದಕಕ್ಕೆ ಮುತ್ತಿಕ್ಕಿರುವ ಪಿ.ವ್ಹಿ.ಸಿಂಧು ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

ಕೊರೊನಾ; ಜಿಲ್ಲೆಯಲ್ಲಿ ಆಗಸ್ಟ್ 16 ರವರೆಗೆ ನಿಷೇಧಾಜ್ಞೆ

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973, ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಸರ್ಕಾರ ಹೊರಡಿಸಿದ ಜುಲೈ 18 ರ ಆದೇಶಗಳಡಿ ಸಮೀಕ್ಷೆ, ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಮಾರ್ಗಸೂಚಿಗಳ. ಎಲ್ಲ ಹಾಗೂ ಷರತ್ತು ಹಾಗೂ ಸಡಿಲಿಕೆಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಗಸ್ಟ 16 ರ ಬೆಳಗಿನ 6 ಗಂಟೆಯವರೆಗೆ ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮಾರ್ಗಸೂಚಿಗಳನ್ನು ಜ್ಯಾರಿಗೊಳಿಸಿ ಜಿಲ್ಲಾದ್ಯಂತ ಪ್ರತಿಬಂಧಕಾಜ್ಞೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಆರೇಳು ತಿಂಗಳಿಗೆ ಮಾತ್ರ ಸಿಎಂ

ಹೂವಿನ ಹಡಗಲಿಯ ಶ್ರೀ ಕ್ಷೇತ್ರ ಮೈಲಾರದ ಧರ್ಮದರ್ಶಿ ವೆಂಕಪಯ್ಯ ಒಡೆಯರ್ ಭವಿಷ್ಯ

ವಿಜಯಸಾಕ್ಷಿ ಸುದ್ದಿ, ಹೂವಿನ ಹಡಗಲಿ

ಸಿಎಂ ಬೊಮ್ಮಾಯಿ ಆರರಿಂದ ಏಳು ತಿಂಗಳ ಮುಖ್ಯಮಂತ್ರಿ ಮಾತ್ರವಂತೆ. ಬಿಜೆಪಿಯ ಗಡ್ಡದಾರಿ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶ್ರೀ ಕ್ಷೇತ್ರ ಮೈಲಾರದ ಧರ್ಮದರ್ಶಿ ವೆಂಕಪಯ್ಯ ಒಡೆಯರ್ ಭವಿಷ್ಯ ನುಡಿದಿದ್ದಾರೆ.

ಕೆಲವೇ ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ. ಮೂರು ಜನ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಒಡೆಯರ್ ಕಾರ್ಣಿಕ ನುಡಿದಿದ್ದಾರೆ. ಮತ್ತೆ ಕೊರೋನಾ ಹೆಚ್ಚಾಗಲಿದೆ. ಸರ್ಕಾರದ ನಿಯಮಗಳನ್ನ ಪಾಲಿಸಿ ಎಂದು ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ.

ದಿಢೀರ್ ದೆಹಲಿಗೆ ಹಾರಿದ ಸಿಎಂ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಹೈಕಮಾಂಡ್ ಬುಲಾವ್ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ದಿಢೀರ್ ದೆಹಲಿಗೆ ಹಾರಿದ್ದು, ಸಚಿವ ಸಂಪುಟಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.

ಇಂದು ಸಂಜೆ ದೆಹಲಿಗೆ ತೆರಳಿರುವ ಸಿಎಂ ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ದೆಹಲಿಯಿಂದ ವಾಪಸ್ ಆಗಲಿದ್ದಾರೆ. ಮಂಗಳವಾರ ಅಥವಾ ಬುಧವಾರ ನೂತನ ಸಚಿವರ ಪದಗ್ರಹಣ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಡಳಿತ ಬಗ್ಗೆ ಸಿಎಂಗೆ ಸಿದ್ದರಾಮಯ್ಯಹೇಳಿಕೊಡಬೇಕಿಲ್ಲ

ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು

ಬಸವರಾಜ ಬೊಮ್ಮಾಯಿ ಚಾಣಾಕ್ಷ ರಾಜಕಾರಣಿ. ಗೃಹ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಎಲ್ಲವನ್ನೂ ಚೆನ್ನಾಗಿ ನಡೆಸಿಕೊಂಡು ಹೋಗಲಿದ್ದಾರೆ ಎಂದು ಮೈಸೂರ ಸಂಸದ ಪ್ರತಾಪಸಿಂಹ ಹೇಳಿದರು.

ಸಿಎಂ ಬೊಮ್ಮಾಯಿ ಕೇಂದ್ರದ ಬಳಿ ರಾಜ್ಯದ ಪಾಲು ಕೇಳಲಾರರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಸವರಾಜ ಬೊಮ್ಮಾಯಿಯವರು ಮನೆಯಲ್ಲಿದ್ದುಕೊಂಡೇ ಅಧಿಕಾರ ನಡೆಸುವುದನ್ನು ಕಂಡಿದ್ದಾರೆ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅವರಿಗೆ ಎಲ್ಲವೂ ಗೊತ್ತು.
ಹೈವೆ ಕೆಲಸಕ್ಕೆ 95 ಸಾವಿರ ಕೋಟಿ ಹಣ ಕೊಟ್ಟಿರುವುದು ಮೋದಿ ಸರ್ಕಾರ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 8,096 ಕೋಟಿ ಹಣ ಕೊಟ್ಟಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಮೋದಿ ಸರ್ಕಾರ. ರಾಜ್ಯಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ. ಸಿದ್ದರಾಮಯ್ಯ ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.

ಅಣ್ಣಾಮಲೈ ಉಪವಾಸ ಚರ್ಚೆ ಅನಗತ್ಯ

ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಉಪವಾಸ ಮಾಡ್ತಿದ್ದಾರೆ. ಅದರ ಬಗ್ಗೆ ನಮ್ಮಲ್ಲಿ ಹೆಚ್ಚು ಚರ್ಚೆ ಬೇಡ. ನಮ್ಮ ರಾಜಕಾರಣಿಗಳು ಹೇಳಿಕೆ ಕೊಡುವುದನ್ನ ಬಿಟ್ಟು ಡಿಪಿಆರ್ ರೆಡಿ ಮಾಡಲು ಒತ್ತು ನೀಡಬೇಕು ಎಂದು ರಾಜ್ಯ ರಾಜಕಾರಣಿಗಳಿಗೆ ಪ್ರತಾಪ್‌ ಸಿಂಹ ಸಲಹೆ ನೀಡಿದ್ದಾರೆ.

ಮೇಕೆದಾಟು ಯೋಜನೆ‌ ವಿರೋಧಿಸಿ ಅಣ್ಣಾಮಲೈ ಉಪವಾಸ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ಕಿಡಿ‌ ಕಾರಿದ ಅವರು, ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.
ಸಿದ್ದರಾಮಯ್ಯಗೆ ಎಲ್ಲಾ ಗೊತ್ತಿದ್ದೂ ರಾಜಕೀಯಕ್ಕಾಗಿ ಮಾತನಾಡುತ್ತಾರೆ ಎಂದರು.

ಪೊಲೀಸರ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಆಟೋ ಚಾಲಕನ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಆಟೋ ಚಾಲಕನೊಬ್ಬನನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.

ಬೆಟಗೇರಿಯ ಗಣೇಶ್ ನಗರ ನಿವಾಸಿ, ಆಟೋ ಚಾಲಕ ಮಾರುತಿ ಶೇಖಪ್ಪ ಕಾಳೆ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಗಾಂಜಾ ಸಂಗ್ರ ಸಂಗ್ರಹಿಸಿದ್ದ.

ಈ ಕುರಿತು ಖಚಿತ ಮಾಹಿತಿ ಪಡೆದ ಬೆಟಗೇರಿ ಪೊಲೀಸರು ದಾಳಿ ಮಾಡಿ ಆರೋಪಿ ಮಾರುತಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 10 ಸಾವಿರ ರೂ.ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈ ಗೊಂಡಿದ್ದಾರೆ.

ಮೊಬೈಲ್‌ ಮೂಲಕ ಯುವತಿಗೆ ಕಿರುಕುಳ; ಪೋಷಕರಿಗೂ ಬೆದರಿಕೆ ಹಾಕಿದ ಯುವಕ!

ವಿಜಯಸಾಕ್ಷಿ ಸುದ್ದಿ, ನರಗುಂದ

ಯುವತಿಯೊಬ್ಬಳಿಗೆ ಮೊಬೈಲ್ ಮೂಲಕ, ವಾಟ್ಸಾಪ್ ಮೂಲಕ ಕರೆ ಮಾಡಿ, ಲೈಂಗಿಕ ಕಿರುಕುಳ ನೀಡಿದ ಯುವಕನೊಬ್ಬ, ಕೇಳಲು ಹೋದ ಪೋಷಕರಿಗೂ ಬೆದರಿಕೆ ಹಾಕಿದ ಘಟಯ ನಡೆದಿದೆ.

ನರಗುಂದ ತಾಲೂಕಿನ ಹದ್ಲಿ ಗ್ರಾಮದ ಆರೋಪಿ ಶಿವಪ್ಪ ಶೇಖಪ್ಪ ಅಗಸರ ಎಂಬ ಯುವಕನೇ ಯುವತಿಗೆ ಕಿರುಕುಳ ನೀಡಿದಾತ.

ಕಳೆದ ಹಲವು ದಿನಗಳಿಂದ ಈ ರೀತಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲ ಯುವತಿಯ ದೊಡ್ಡಪ್ಪನ ಮನೆಯ ನಂಬರ್ ಗೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಯುವಕನ ವಿರುದ್ಧ ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದರ್-ಬಾಹರ್ ಜೂಜಾಟ; ಆರು ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಆರು ಜನತ ತಂಡವೊಂದು ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರು ದಾಳಿ ಮಾಡಿ ಬಂಧಿಸಿದ ಘಟನೆ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುರಡಿತಾಂಡಾದ ಸೇವಾಲಾಲ ದೇವಸ್ಥಾನದ ಎದುರಿಗೆ ಜೂಜಾಟದಲ್ಲಿ ತೊಡಗಿದ್ದ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪದ ಮುದಕಪ್ಪ ಲಕ್ಷ್ಮಣ್ಣ ನಾಗಾವಿ, ಹನಮಂತ ಪಕ್ಕೀರಪ್ಪ ಹೊಸೂರು, ಮುರಡಿ ತಾಂಡಾದ ಕುಮಾರ್ ಮೇಗಪ್ಪ ಬೂದಿಹಾಳ, ಮಹಾಂತೇಶ್ ರತ್ನಪ್ಪ ರಾಥೋಡ್, ಗುಡ್ಡದಬೂದಿಹಾಳ ಗ್ರಾಮದ ಸಿದ್ದನಗೌಡ ನಿಂಗನಗೌಡ ಪಾಟೀಲ್, ಗೋಣೆಶ್ ಅಲಿಯಾಸ್ ರಮೇಶ್ ಮಲ್ಲಪ್ಪ ತಳವಾರ ಎಂಬುವವರನ್ನು ಬಂಧಿಸಲಾಗಿದೆ.

ಬಂಧಿತರಿಂದ ನಗದು 1950 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹ…..

0

ನೀ ಎಣ್ಣೆಯಾಗು, ನಾ ಹಣತೆಯಾಗುವೆ..
ಯಾರೇ ಬತ್ತಿ ಇಡಲಿ ನಗು-ನಗುತಾ ಬೆಳಗೋಣ
ಈ ನಮ್ಮ ಸ್ನೇಹವ..

ನೀ ಬೇಳೆಯಾಗು, ನಾ ಬೆಲ್ಲವಾಗುವೆ,
ಯಾರೇ ಬೇಯಿಸಿದರೂ, ಬೆಂದು ಹೂರಣವಾಗಿ
ಬಡಿಸೋಣ ಹೋಳಿಗೆಯ ರಸದೌತಣವ..

ನೀ ಕಬ್ಬಾಗು, ನಾ ರಸವಾಗುವೆ..
ಯಾರೇ ಹಿಂಡಿ ನೋಯಿಸಿದರೂ ಅವರ
ಬಾಯಿಗೆ ಸಿಹಿ ನೀಡಿ ಸವಿಸೋಣ ನಮ್ಮ ಸ್ನೇಹವ ..

ನೀ ಸುಮವಾಗು, ನಾ ಘಮವಾಗುವೆ…
ಯಾರೇ ಕಿತ್ತು ಎತ್ತಿಕೊಂಡರೂ ಪಸರಿಸೋಣ
ನಮ್ಮ ಸ್ನೇಹದ ಪರಿಮಳವ.. ಅಲಂಕರಿಸೋಣ ಅವರ ಮನೆ, ಮನವ.. 🌸🌼🌹 ✍️

ಪವಿತ್ರ ಬಡಿಗೇರ್ ಕಡಬಗೆರೆ

ಪೊಲೀಸರ ಕಾರ್ಯಚರಣೆ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಲಕ್ಷ್ಮೇಶ್ವರ ಹಾಗೂ ಮುಳಗುಂದ ಪಟ್ಟಣದಲ್ಲಿ ನಡೆದಿದ್ದ ಎರಡು ಮನೆ ಕಳ್ಳತನ ಪ್ರಕರಣ ಬೇಧಿಸಿರುವ ಲಕ್ಷ್ಮೇಶ್ವರ ಪೊಲೀಸರು, ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ.
2021 ರ ಜನವರಿಯಲ್ಲಿ ಮುಳಗುಂದ ಹಾಗೂ ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೀಗ ಮುರಿದು ಮನೆ ಕಳ್ಳತನ ಮಾಡಿದ್ದ ಲಕ್ಷ್ಮೇಶ್ವರ ಪಟ್ಟಣದ ಸಂತೋಷ ಮನೋಹರ ಗಬ್ಬೂರು ಹಾಗೂ ರಶೀದ್ ಇಸ್ಮಾಯಿಲಸಾಬ್ ಮುಳಗುಂದ ಎಂಬುವರನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ಬಾಭರಣ, ಒಂದು ಮೊಬೈಲ್ ಹಾಗೂ ನಗದು 20 ಸಾವಿರ ಜಪ್ತಿ ಮಾಡಿದ್ದಾರೆ.
ಎಸ್ಪಿ ಯತೀಶ್ ಎನ್, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಮಾರ್ಗದರ್ಶನದಲ್ಲಿ, ಸಿಪಿಐ ವಿಕಾಸ್ ಪಿ ಲಮಾಣಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಡಿ. ಪ್ರಕಾಶ್, ಪಿ ಎಮ್ ಬಡಿಗೇರ, ಎಎಸ್ಐ ಗುರುರಾಜ್ ಬೂದಿಹಾಳ ಸಿಬ್ಬಂದಿಗಳಾದ ಎಮ್ ಬಿ ವಡ್ಡಟ್ಟಿ, ಮಾರುತಿ ಲಮಾಣಿ, ಚಂದ್ರು ಕಾಕನೂರು, ಎಸ್ ಎಸ್ ಯರಗಟ್ಟಿ, ಎನ್ ಡಿ ಹುಬ್ಬಳ್ಳಿ ಪಾಲ್ಗೊಂಡಿದ್ದರು.

error: Content is protected !!