Home Blog Page 3132

Shivarajkumar: ಶಿವಣ್ಣರನ್ನ ಭೇಟಿ ಮಾಡಿದ ನ್ಯಾಚುರಲ್ ಸ್ಟಾರ್

0

ಬೆಂಗಳೂರಿನಲ್ಲಿ ಬಂದಿರೋ ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ, ನಟ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಶಿವಣ್ಣ ಹಾಗೂ ನಾನಿ ಇಬ್ಬರೂ ಕೆಲ ಹೊತ್ತು ಪರಸ್ಪರ ಮಾತಾಡಿಕೊಂಡಿದ್ದಾರೆ. ಇತ್ತೀಚೆಗೆ ‘ಹಾಯ್ ನಾನ್ನ’ ಸಿನಿಮಾದ ಎರಡನೇ ಹಾಡನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ ಶುಭ ಹಾರೈಸಿದ್ದರು.

ಈಗ ಇದೇ ‘ಹಾಯ್ ನಾನ್ನ’ ಸಿನಿಮಾ ಡಿಸೆಂಬರ್ 7ರಂದು ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಬೆಂಗಳೂರಿಗೆ ಪ್ರಚಾರ ಮಾಡುವುದಕ್ಕೆ ಬಂದಿದ್ದಾರೆ. ಇದೇ ವೇಳೆ ಬೆಂಗಳೂರಿನ ನಾಗಾವರದಲ್ಲಿರುವ ಶಿವಣ್ಣನ ಮನೆಗೆ ಭೇಟಿ ಕೊಟ್ಟು ಕೆಲ ಕಾಲ ಸಮಯ ಕಳೆದಿದ್ದಾರೆ. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಜೊತೆಗಿದ್ದರು.

ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಹೊಸ ಸಿನಿಮಾ ‘ಹಾಯ್ ನಾನ್ನ’ ಸಂಚಲನ ಸೃಷ್ಟಿಸುತ್ತಿದೆ. ‘ದಸರಾ’ ಅನ್ನೋ ಪಕ್ಕಾ ಮಾಸ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಟ ದಿಢೀರನೇ ಕೌಟುಂಬಿಕ ಭಾವನಾತ್ಮಕ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ತುಣುಕುಗಳು ಸಿನಿಪ್ರಿಯರಿಗೆ ಕಿಕ್ ಕೊಟ್ಟಿವೆ.

ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ..!

0

ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿನಿ ಮೇಘಶ್ರೀ ಹೋಮ್ಸಿಕ್​​ಗೆಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು.

ಇಂದು ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ: ಇಂದು CM ರಿಂದ ಚೆಕ್ ಹಸ್ತಾಂತರ

0

ಬೆಂಗಳೂರು:- ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿತ್ತು. ಹೀಗಾಗಿ ಇಂದು ಅವರ ಕುಟುಂಬಕ್ಕೆ ಪರಿಹಾರದ ಚೆಕ್​ ಹಸ್ತಾಂತರಿಸಲಾಗುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಪ್ರಾಂಜಲ್‌ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅದಕ್ಕೆ ನಮನ ಸಲ್ಲಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆ ಮಾಡಿದ್ದರು.

ಸದ್ಯ ಆದೇಶ ಹೊರಡಿಸಲಾಗಿದ್ದು, ಇಂದು ಪರಿಹಾರದ ಚೆಕ್​ ಹಸ್ತಾಂತರಿಸಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್​ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ನಾಯಿ ಬೊಗಳುವ ವಿಚಾರಕ್ಕೆ ಜಗಳ: ಪಕ್ಕದ ಮನೆಯವರ ಮೇಲೆ ಆಸಿಡ್​ ಎರಚಿದ ದಂಪತಿ ಎಸ್ಕೇಪ್

0

ಶಿವಮೊಗ್ಗ:- ನಾಯಿ ಬೊಗಳುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಪಕ್ಕದ ಮನೆ ವ್ಯಕ್ತಿ ಮೇಲೆ ದಂಪತಿ ಆಸಿಡ್​ ಎರಚಿರುವಂತಹ ಘಟನೆ ಜಿಲ್ಲೆ ಎನ್.ಆರ್​.ಪುರ ತಾಲೂಕಿನ ಹಾಳ್​ ಕರಗುಂದ ಗ್ರಾಮದಲ್ಲಿ ಜರುಗಿದೆ.

ಜೇಮ್ಸ್​, ಮರಿಯಮ್ಮರಿಂದ ಸುಂದರ್ ರಾಜ್ ಮೇಲೆ ಆಸಿಡ್​​ ದಾಳಿ ಮಾಡಿದ್ದು, ಸುಂದರ್​ರಾಜ್ ಕಣ್ಣು, ಮುಖಕ್ಕೆ ಗಾಯಗಳಾಗಿವೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಸಾಕು ನಾಯಿ ಬೊಗಳಿದ್ದಕ್ಕೆ ಗಾಯಾಳು ಸುಂದರ್​ ರಾಜ್ ಬೈಯ್ದಿದ್ದ. ನಾಯಿ ಹೆಸರಿನಲ್ಲಿ ಜೇಮ್ಸ್​, ಮರಿಯಮ್ಮಗೆ ಬೈಯ್ಯುತ್ತಿದ್ದ ಎಂದು ಆರೋಪ ಮಾಡಲಾಗಿದೆ. ಸಿಟ್ಟಿಗೆದ್ದು ಸುಂದರಾಜ್​ ಮೇಲೆ ದಂಪತಿ ಆಸಿಡ್​ ದಾಳಿ ಮಾಡಿದ್ದಾರೆ. ಸದ್ಯ ದಂಪತಿ ವಿರುದ್ಧ ಎನ್​.ಆರ್​.ಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವತಿ ಮೇಲೆ ಅತ್ಯಾಚಾರ ಆರೋಪ; ಸುಳ್ಳು ಎಂದ ನಿವೃತ್ತ IAS ಅಧಿಕಾರಿ

0

ಬೆಂಗಳೂರು:- ತನ್ನ ಮೇಲೆ ಆತ್ಯಾಚಾರವೆಸಗಿರುವುದಾಗಿ ಆರೋಪಿಸಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ 28 ವರ್ಷದ ಸಂತ್ರೆಸೆ ದೂರು ನೀಡಿದ್ದಳು, ಇದೀಗ ಪ್ರತಿದೂರು ದಾಖಲಾಗಿದೆ.

ಬ್ಲ್ಯಾಕ್ ಮೇಲ್ ಮಾಡಿ ತಮ್ಮ ಮೇಲೆ ಆತ್ಯಾಚಾರವೆಸಗಿರುವುದಾಗಿ ಸುಳ್ಳು ಆರೋಪ ಹೊರಿಸಿ 70 ಲಕ್ಷ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಪ್ರತಿದೂರು ನೀಡಿದ್ದಾರೆ. ಪ್ರತ್ಯೇಕ ಎರಡು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪ ಸುಳ್ಳಾಗಿದೆ. ಪತ್ನಿಗೆ ಕೇರ್ ಟೇಕರ್ ಆಗಿ ಕೆಲಸಕ್ಕೆ ನಿಯೋಜನೆ ಮಾಡಿದ್ದು ನಿಜ. ಕೆಲಸಕ್ಕೆ ಸೇರಿಕೊಂಡ ಬಳಿಕ ಅರಂಭದ ದಿನಗಳಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಳು.

ಹೆಂಡತಿಯನ್ನು ಕೊನೆವರೆಗೂ ನೋಡಿಕೊಳ್ಳುವುದಾಗಿ ಹೇಳಿ ಮನೆಯ ಎಲ್ಲಾ ವಿಚಾರಗಳನ್ನ ತಿಳಿದುಕೊಂಡಿದ್ದಳು. ಬಳಿಕ ದೈಹಿಕ ಸಂಪರ್ಕ ಇಟ್ಟುಕೊಂಡು ಸಂಬಂಧ ಹೊಂದಿದ್ದೆವು. ಈ ಸಂದರ್ಭದಲ್ಲಿ ಹಂತ-ಹಂತವಾಗಿ 20 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದಳು.

ಅನಂತರ ಮತ್ತೆ ಹಣಕ್ಕೆ ಪೀಡಿಸಿದ್ದಳು. ವಾಟ್ಸಾಪ್​ನಲ್ಲಿ ಗರ್ಭಿಣಿಯಾಗಿರುವ ನಕಲಿ ಲ್ಯಾಬ್ ರಿಪೋರ್ಟ್ ಕಳುಹಿಸಿ 10 ಕೋಟಿ ಹಣ ನೀಡದಿದ್ದರೆ ಮಾಧ್ಯಮಗಳಲ್ಲಿ ಮಾನಹಾನಿ ಮಾಡುವುದಾಗಿ ಬೆದರಿಸಿ ತನ್ನಿಂದ 70 ಲಕ್ಷ ಹಣ ಬಲವಂತವಾಗಿ ಪಡೆದುಕೊಂಡಿದ್ದಾಳೆ ಎಂದು ದೂರು ನೀಡಲಾಗಿದೆ.

ಹೆಸ್ಕಾಂ ನಿವೃತ್ತ ಕಿರಿಯ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

0

ಹಾವೇರಿ: ರಾಣೇಬೆನ್ನೂರಿನ ಈಶ್ವರ ನಗರದ ಹೆಸ್ಕಾಂ ನಿವೃತ್ತ ಕಿರಿಯ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಇಂದು ನಶುಕಿನ 6ಗಂಟೆಯಿಂದ ಲೋಕಾ ಅಧಿಕಾರಿಗಳ ಪರಿಶೀಲನೆ ನಡೆಸುತ್ತಿದ್ದು, ಧಾರವಾಡ ಹೆಸ್ಕಾಂನಲ್ಲಿ ಕಿರಿಯ ಇಂಜಿನಿಯರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಮಳೇಮಠ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿರುವ ಧಾರವಾಡ ಲೋಕಾಯುಕ್ತ ಎಸ್ ಪಿ ಸತೀಶ ಚೀಟಗುಬ್ಬಿ, ಡಿವೈಎಸ್ ಪಿ ವೆಂಕನಗೌಡ ಪಾಟೀಲ, ಸಿಪಿಐ ಸಂತೋಷ ಸೇರಿದಂತೆ ಒಟ್ಟು 12ಜನರ ಅಧಿಕಾರಿಗಳ ತಂಡದಿಂದ  ಕಳೆದ ನಾಲ್ಕು ತಿಂಗಳ ಹಿಂದೆ ಸೇವೆಯಿಂದ ನಿವೃತ್ತಿ ಹೊಂದಿದ್ದ ಬಸವರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

ಬಿಜೆಪಿ ಮುಖಂಡನಿಗೆ ಚಾಕು ಇರಿತ ಪ್ರಕರಣ: ಡಾ.ಪರಮೇಶ್ವರ್ ಹೇಳಿದ್ದೇನು..?

0

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಆಪ್ತ, ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನುಕ್ರಮ ಕೈಗೊಳ್ಳುತ್ತಾರೆ. ಏನೇ ಇದ್ದರೂ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

ಬೆಳಗಾವಿ ಖಾಸಗಿ ಹೊಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್ ಹಿನ್ನೆಲೆ ಏನು, ಚಾಕು ಇರಿತ ಯಾಕಾಗಿದೆ ಅನ್ನುವುದು ತನಿಖೆ ಮೂಲಕ ಗೊತ್ತಾಗಬೇಕಿದೆ. ಈ ಕೇಸ್‌ನಲ್ಲಿ ಬೇರೆ ಯಾರು ಇನ್ವಾಲ್ವ್ ಆಗಿದ್ದಾರೆ ನೋಡಬೇಕು ಎಂದರು.

ಕೇಸ್ ವೇರಿಫಾಯ್ ಮಾಡೊಣ. ಈಗಾಗಲೇ ಪೊಲೀಸರು ವೇರಿಫಾಯ್ ಮಾಡುತ್ತಿದ್ದಾರೆ. ಸಂಪೂರ್ಣ ಮಾಹಿತಿ ಬಂದ ಮೇಲೆ ಮಾಧ್ಯಮಕ್ಕೆ ರಿಯಾಕ್ಷನ್ ಕೊಡ್ತಿನಿ ಎಂದು ಹೇಳಿದರು.

ಇನ್ನೂ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂಬ ವಿಜಯೇಂದ್ರ ಹೇಳಿಕೆಗೆ ಜಿ.ಪರಮೇಶ್ವರ್ ತಿರುಗೇಟು ನೀಡಿದರು. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಇವರು ಯಾರ ಮೇಲೆ ನಂಬಿಕೆ ಇಡುತ್ತಾರೆ. ಅವರಿಗೆ ಬೇಕಾದಾಗ ನಂಬಿಕೆ ಇರುತ್ತೆ, ಬೇಡವಾದಾಗ ನಂಬಿಕೆ ಇರಲ್ಲ, ಎಲ್ಲರಿಗೂ ನ್ಯಾಯವನ್ನ ಒದಗಿಸುವ ಕಾರ್ಯ ಮಾಡುತ್ತಿದೆ. ಅವರ ಮೇಲೆ ನಂಬಿಕೆ ಇಡಬೇಕಾಗುತ್ತದೆ ಎಂದು ಹೇಳಿದರು.

ವಂಚನೆ ಕೇಸ್: ಚೈತ್ರಾಗೆ ಜಾಮೀನು ಮಂಜೂರು

0

ಬೆಂಗಳೂರು:- ಉದ್ಯಮಿಗೆ ಕೋಟಿ ಕೋಟಿ ಹಣ ಪಡೆದು ವಂಚನೆ ಎಸಗಿದ ಕೇಸ್ ಗೆ ಸಂಬಂಧಿಸಿದಂತೆ ಚೈತ್ರಾಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಮ್ಯಾಜಿಸ್ಟ್ರೇಟ್​ ಕೋರ್ಟ್​ ಜಾಮೀನು ನೀಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು.

ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿಯು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ.

ಪಿಎಸ್ ​ಐ ನೇಮಕಾತಿ ಮರು ಪರೀಕ್ಷೆ ಮುಂದೂಡಿಕೆ

0

ಬೆಂಗಳೂರು:- ಪಿಎಸ್​ಐ ನೇಮಕಾತಿ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್, PSI ಪರೀಕ್ಷೆ ಸಮಯಾವಕಾಶ ಬೇಕು ಎಂದು ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಹಾಗಾಗಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಸದನದಲ್ಲಿ ಯತ್ನಾಳ್ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ.

ಅನೇಕ ಶಾಸಕರುಗಳು ಪಕ್ಷಾತೀತವಾಗಿ ಬೇಡಿಕೆಯನ್ನ ಇಟ್ಟಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಒಂದು ತಿಂಗಳ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.ದಿನಾಂಕವನ್ನ ಶೀಘ್ರದಲ್ಲೇ ಪ್ರಕಟಿಸಲಾಗುವುದು. KEA ಕ್ಯಾಲೆಂಡರ್ ನೋಡಿಕೊಂಡು ದಿನಾಂಕ ಪ್ರಕಟ ಮಾಡುತ್ತೇವೆ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ತಯಾರಿ ಮಾಡಿಕೊಂಡು ಬರೆಯಿರಿ ಎಂದು ಹೇಳಿದ್ದಾರೆ.

ಎರಡು ಬೈಕ್ ಗಳ ನಡುವೆ ಅಪಘಾತ: ಓರ್ವ ಸವಾರ ಸಾವು

0

ತುಮಕೂರು:-ಜಿಲ್ಲೆ ಕುಣಿಗಲ್ ತಾಲೂಕಿನ ನಡೆ ಮಾವಿನಪುರ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.

ಮಹಮದ್ ಪೀರ್ 45 ಮೃತ ದುರ್ದೈವಿ ಎನ್ನಲಾಗಿದೆ. ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

error: Content is protected !!