Home Blog Page 3134

ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರದ ಆರೋಪ: FIR ದಾಖಲು

0

ಬೆಂಗಳೂರು: ಸಿಲಿಕಾನ್ ಸಿಟಿ  ಬೆಂಗಳೂರಿನಲ್ಲಿ ನಿವೃತ್ತ IAS ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. 28 ವರ್ಷದ ಮೆರಿನಾ ವಿಲ್ಸನ್ ಎನ್ನುವ ಮಹಿಳೆ ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ.

ಪಾನೀಯದಲ್ಲಿ ಮತ್ತುಬರಿಸುವ ಪದಾರ್ಥ ಹಾಕಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು, ರಾಮಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

“ಹುಡುಗರು” ಚಿತ್ರದ ನಂತರ ಮತ್ತೆ ಈ ಚಿತ್ರದಲ್ಲಿ ಯೋಗಿ – ಶ್ರೀನಗರ ಕಿಟ್ಟಿ

0

ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ “ರೋಜಿ” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. “ಲಿಯೋ” ಖ್ಯಾತಿಯ ಸ್ಯಾಂಡಿ ಮಾಸ್ಟರ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಟ ಶ್ರೀನಗರ ಕಿಟ್ಟಿ “ರೋಜಿ” ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಗರ ಕಿಟ್ಟಿ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಚಿತ್ರತಂಡ ಬಿಡುಗಡೆ ಮಾಡಿದೆ.

ಶಾಂತಿನಗರದ ಮೈದಾನದಲ್ಲಿ ಶ್ರೀನಗರ ಕಿಟ್ಟಿ ಅವರ ಮೂವತ್ತು ಅಡಿ ಪೋಸ್ಟರ್ ಬಿಡುಗಡೆ ಮಾಡಿ, ಕಿಟ್ಟಿ ಅವರನ್ನು ಚಿತ್ರಕ್ಕೆ ವಿಶೇಷವಾಗಿ ಬರಮಾಡಿಕೊಳ್ಳಲಾಯಿತು. ಪೋಸ್ಟರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಈ ಪಾತ್ರದ ಕುರಿತು ನಿರ್ದೇಶಕ ಶೂನ್ಯ ಅವರು ಹೇಳಿದಾಗ ಚೆನ್ನಾಗಿದೆ ಅನಿಸಿತು.

ಈಗ ಪೋಸ್ಟರ್ ನೋಡಿ ಇನ್ನು ಹೆಚ್ಚು ಖುಷಿಯಾಗಿದೆ. “ಕ್ರಿಸ್ಟೋಫರ್” ನನ್ನ ಪಾತ್ರದ ಹೆಸರು ಎಂದರು ಶ್ರೀನಗರ ಕಿಟ್ಟಿ.ನಮ್ಮ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ನಟಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದು ಆರಂಭಿಸಿದ ನಟ ಯೋಗಿ, ನಾವಿಬ್ಬರು “ಹುಡುಗರು” ಚಿತ್ರದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇವೆ ಎಂದರು. ನಿರ್ದೇಶಕ ಶೂನ್ಯ, ನಿರ್ಮಾಪಕ ಡಿ.ವೈ ರಾಜೇಶ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಚಿತ್ರದ ಕುರಿತು ಮಾತನಾಡಿದರು.

ಶೂಟಿಂಗ್ ಅಖಾಡದಲ್ಲಿ ‘ಅಧಿಪತ್ರ’: ಖಾಕಿ‌ ಖದರ್ ನಲ್ಲಿ ರೂಪೇಶ್ ಶೆಟ್ಟಿ

0

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಸ್ತಿದೆ. ಈಗಾಗಲೇ 10 ದಿನ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ನಾಯಕ ರೂಪೇಶ್ ಖಾಕಿ ಖದರ್ ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ,

ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ. ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ,

ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ, ಅಧಿಪತ್ರ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

ಬೈಕ್ ಬಿಡಿ ಬೈಸಿಕಲ್ ಹತ್ತಿ; ಡಿಸಿ, ಎಸ್ಪಿ ಸೈಕಲ್ ಸವಾರಿ

0

ಬೀದರ್: ಬೈಕ್ ಬಿಟ್ಟು ಸೈಕಲ್ ಬಳಸಿ ಎಂದು ಜನರಲ್ಲಿ ಜಾಗೃತಿ ಮೂಡಿಸಲು ಸ್ವತಃ ಅಧಿಕಾರಿಗಳೆ ರಸ್ತೆಗೆ ಇಳಿದಿದ್ದಾರೆ.

ಡಿಸಿ ಗೋವಿಂದರಡ್ಡಿ, ಎಸ್ಪಿ ಚನ್ನಬಸವಣ್ಣ ಲಂಗೋಟೆ ತಮ್ಮ ಸರಕಾರಿ ವಾಹನ ಬಿಟ್ಟು ಸೈಕಲ್ ಏರಿ ನಗರದ ತುಂಬೆಲ್ಲಾ ಸವಾರಿ ಮಾಡಿದರು. ಸರಕಾರಿ ವಾಹನ ಬಿಟ್ಟು ಸೈಕಲ್ ಏರಿದ ಅಧಿಕಾರಿಗಳ ಈ ನಡೆ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಕೋಟೆ ಬಳಿ ಇರುವ ಅಧಿಕಾರಿಗಳ ಮನೆಯಿಂದಲೇ
ಈ ಸೈಕಲ್ ಸವಾರಿ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ರಸ್ತೆ ಸುರಕ್ಷತಾ ಅಭಿಯಾನದ ಹಿನ್ನೆಲೆಯಲ್ಲಿ ಅಪ್ರಾಪ್ತರು, ಬೈಕ್ ಬಳಸುವ ಬದಲು ಸೈಕಲ್ ಬಳಸುವಂತೆ ಪ್ರೇರಣೆ ನೀಡಲಾಯಿತು.

ವಾರದಲ್ಲಿ ಒಂದು ದಿನ ಸೈಕಲ್‌ನಲ್ಲಿ ತಮ್ಮ ಕಚೇರಿಗೆ ತೆರಳಲು ಡಿಸಿ ಗೋವಿಂದರಡ್ಡಿ, ಎಸ್ಪಿ ಚನ್ನಬಸವಣ್ಣ ಲಂಗೋಟೆ ನಿರ್ಧಾರ ಮಾಡಿದ್ದಾರೆ. ಈ ನಿರ್ಧಾರ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರೇ ಮುಂದಿನ ನಾಲ್ಕೂವರೆ ವರ್ಷ ಸಿಎಂ ಆಗಿ ಮುಂದುವರಿಯಲಿ: ಕೆ ಎಸ್ ಈಶ್ವರಪ್ಪ

0

ಶಿವಮೊಗ್ಗ: ಹಿರಿಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ್ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತದ ಜನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿರುವ ಕೆಲಸಗಳನ್ನು ಮೆಚ್ಚಿ ಅವರ ಮೇಲೆ ವಿಶ್ವಾಸವಿರಿಸಿರುವುದರ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂದೇಶವೊಂದನ್ನು ನೀಡಿದ ಅವರು,

ಮುಂದಿನ ನಾಲ್ಕೂವರೆ ವರ್ಷಗಳ ಅವಧಿವರೆಗೆ ಅವರೇ ಸಿಎಂ ಆಗಿ ಮುಂದುವರಿಯಲಿ, ಅವರ ಕುರ್ಚಿ ಕಸಿಯುವ ಪ್ರಯತ್ನ ಬಿಜೆಪಿ ಖಂಡಿತ ಮಾಡಲ್ಲ, ಆದರೆ ಪ್ರತಿ ವಿಧಾನ ಮಂಡಲ ಆಧಿವೇಶನ ಆರಂಭವಾದಾಗ ದೇವರಾಜ ಅರಸು ಹೆಸರನ್ನು ನೆನೆಯುವ ಅವರು ಆ ಮಹಾನುಭಾವ ದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗಾಗಿ ಮಾಡಿದ ಕೆಲಸಗಳನ್ನು ಜ್ಞಾಪಕ ಮಾಡಿಕೊಳ್ಳಲಿ ಎಂದು ಹೇಳಿದರು. ರಾಜ್ಯದೆಲ್ಲೆಡೆ ಈ ವರ್ಗಗಳ ಜನರಿಗೆ ವಸತಿ ಯೋಜನೆ ಸ್ಥಗಿತಗೊಂಡಿದೆ, ಸಿದ್ದರಾಮಯ್ಯ ಯೋಜನೆ ಪುನಾರಾರಂಭಿಸಲಿ ಎಂದು ಈಶ್ವರಪ್ಪ ಹೇಳಿದರು.

ಬ್ರೇಕಿಂಗ್: ಲಾರಿ, ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

0

ತುಮಕೂರು:- ಜಿಲ್ಲೆಯ ಮಧುಗಿರಿ ತಾಲೂಕಿನ‌ ಜಡಗೊಂಡನಹಳ್ಳಿ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.

ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಶ್ರೀ ರಂಗಪ್ಪ (30)ಮೃತ ದುರ್ದೈವಿ.

ಆಂಧ್ರದ ರಾಡಪಲ್ಲಿ ಗ್ರಾಮದ ನಿವಾಸಿಯಾದ ಇವರು, ಮಧುಗಿರಿ ಕಡೆಯಿಂದ ಪಾವಗಡ ಹೋಗುತ್ತಿದ್ದರು. ಪಾವಗಡ ಕಡೆಯಿಂದ ಮಧುಗಿರಿ ಕಡೆ ಬರುತ್ತಿದ್ದ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಬಿಜಿಎಸ್ ಗ್ಲೆನಿಗಲ್ಸ್ ಆಸ್ಪತ್ರೆ ಯಶಸ್ವಿ ಶಸ್ತ್ರಚಿಕಿತ್ಸೆ: 800 ಮೂತ್ರಪಿಂಡ ಕಸಿಶಸ್ತ್ರ ಚಿಕಿತ್ಸೆ

0

ಹುಬ್ಬಳ್ಳಿ : 800 ಮೂತ್ರಪಿಂಡ ಕಸಿಶಸ್ತ್ರ ಚಿಕಿತ್ಸೆಯನ್ನು ಬಿಜಿಎಸ್ ಗ್ಲೆನಿಗಲ್ಸ್ ಆಸ್ಪತ್ರೆಯು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ವೈದ್ಯಕೀಯ ಶ್ರೇಷ್ಠತೆಗೆ ಮತ್ತು ಚಿನ್ನದಮಾನದಂಡಕ್ಕೆ ಪಾತ್ರವಾಗಿದೆ.

ಈ ಕುರಿತು ಸೋಮವಾರ ನಗರದಲ್ಲಿ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯರು ಮೂತ್ರಪಿಂಡ ತಜ್ಞ ಡಾ.ಅನಿಲ್ ಕುಮಾರ್ ಬಿ.ಟಿ., ಮೂತ್ರಶಾಸ್ತ್ರ ಜ್ಞ ಡಾ.ನರೇಂದ್ರಎಸ್. ಅವರ ದೂರದೃಷ್ಟಿಯ ನಾಯಕತ್ವದಡಿ ಅತ್ಯಾಧುನಿಕ ಚಿಕಿತ್ಸೆ ಜೊತೆಗೆ ಮೂತ್ರಪಿಂಡ ಕಸಿಕ್ಷೇತ್ರದಲ್ಲಿ ಜಗತ್ತಿನಾದ್ಯಂತ ಲಭ್ಯವಿರುವ ಸುಧಾರಿತಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ದೊಡ್ಡಜಿಗಿತ ಸಾಧಿಸಿದೆ ಎಂದರು.

ಕಸಿಶಾಸ್ತ್ರ ಮತ್ತು ಮೂತ್ರಪಿಂಡ ತಜ್ಞ ಅನಿಲ್ ಕುಮಾರ್ ಬಿ ಟಿ, ಮಾತನಾಡಿ, ರೋಗಿ ಕೇಂದ್ರಿತ ಆರೈಕೆ ಪ್ರಮುಖವಾಗಿದ್ದು,ವೈಯಕ್ತಿಕ ಚಿಕಿತ್ಸೆಯಿಂದ ಹಿಡಿದು ಶಸ್ತ್ರಚಿಕಿತ್ಸೆ ನಂತರದವರೆಗೆ ನಮ್ಮರೋಗಿಗಳ ಯೋಗ ಕ್ಷೇಮಕ್ಕೆ ಒತ್ತು ನೀಡಲಾಗಿದೆ.ಇದು ಕೇವಲ ಕಸಿಯಲ್ಲ.

ಬದಲಿಗೆ ಬದುಕಿನಲ್ಲಿ ಸಹಾನುಭೂತಿ ಮತ್ತು ಪರಿವರ್ತನೆಗೆ ಕಾರಣವಾಗಿದೆ ಎಂದರು. ಮೂತ್ರಶಾಸ್ತ್ರಜ್ಞ ಡಾ.ನರೇಂದ್ರ ಎಸ್. ಮಾತನಾಡಿ,” ಶಸ್ತ್ರಚಿಕಿತ್ಸಾ ಪರಿಣತಿ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಪರಿಪೂರ್ಣಸಾಮರಸ್ಯದಿಂದ ಈ ಯಶಸ್ಸು ಸಾಧಿಸಲು ಸಾಧ್ಯವಾಗಿದೆ.

ನಾವು ಅತ್ಯಾಧುನಿಕ ಅಂದರೆ ಅಸಾಧಾರಣ ಪ್ರಕ್ರಿಯೆಯನ್ನು ಅನುಸರಿಸುತ್ತಿದ್ದೇವೆ. ನಾವು ವೈದ್ಯಕೀಯ ನಾವೀನ್ಯತೆಯಲ್ಲಿ ಮಂಚೂಣಿಯಲ್ಲಿದ್ದು, ನಮ್ಮ ರೋಗಿಗಳು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದರು.

ಗ್ಯಾರಂಟಿ ವಿಫಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

0

ಬೆಳಗಾವಿ:  ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಮೀರ್‌ ಅಹ್ಮದ್‌ ಅವರನ್ನು ಸಮರ್ಥನೆ ಮಾಡಿಕೊಂಡರು.  ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್‌ ಅಹ್ಮದ್‌ ಖಾನ್‌ ʻಮುಸ್ಲಿಂʼ ಸ್ಪೀಕರ್‌ಗೆ ಕೈಮುಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಮಾತನಾಡಿದ ಸಿಎಂ, ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಎಂದರು.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ನಾವು ತೆಲಂಗಾಣ ಗೆದ್ದಿದ್ದೇವೆ, ಉಳಿದ 3 ಸೋತಿದ್ದೇವೆ. ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪೇ ಅಂತಿಮ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ತೇವೆ ಎಂದರಲ್ಲದೇ ಗ್ಯಾರಂಟಿ ವಿಫಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.

ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು: ಸಚಿವ ಎಚ್.ಕೆ.ಪಾಟೀಲ್

0

ಗದಗ: ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಗದಗ ಜಿಲ್ಲಾಡಳಿತ,

ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತೆಲಂಗಾಣದಲ್ಲಿ ಏರ್’ಫೋರ್ಸ್ ತರಬೇತಿ ವಿಮಾನ ಪತನ: ಇಬ್ಬರ ದುರ್ಮರಣ

0

ಹೈದರಾಬಾದ್‌: ತರಬೇತಿ ವಿಮಾನವೊಂದು ತೆಲಂಗಾಣದ ಮೇದಕ್‌ ಜಿಲ್ಲೆಯ ತೂಪ್ರಾನ್‌ನ ರಾವೆಲ್ಲಿ ಗ್ರಾಮದಲ್ಲಿ ಪತನಗೊಂಡ ಪರಿಣಾಮ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌’ಗಳು ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ ವಾಡಿಕೆಯ ತರಬೇತಿಗಾಗಿ Pilatus PC 7 Mk-II ವಿಮಾನ ಟೇಕಾಫ್ ಆಗಿತ್ತು. ಈ ವೇಳೆ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ತರಬೇತುದಾರ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಸದ್ಯ ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.

ಪಿಲಾಟಸ್ PC 7 Mk-II ವಿಮಾನವು ಒಂದೇ ಎಂಜಿನ್‌ ಒಳಗೊಂಡ ತರಬೇತಿ ವಿಮಾನವಾಗಿದೆ. IAF ಪೈಲಟ್‌ಗಳ ತರಬೇತಿಗಾಗಿ ಇದನ್ನು ಬಳಸಲಾಗುತ್ತದೆ. ಸ್ವಿಟ್ಜರ್‌ಲೆಂಡಿನ ಪಿಲಾಟಸ್ ಸಂಸ್ಥೆಯು ಇದನ್ನು ವಿನ್ಯಾಸಗೊಳಿಸಿ, ತಯಾರಿಸಲಿದೆ. ಈ ವಿಮಾನವನ್ನು ಏರೋಬ್ಯಾಟಿಕ್ಸ್, ಯುದ್ಧತಂತ್ರ ಮತ್ತು ರಾತ್ರಿ ಹಾರಾಟ ಸೇರಿದಂತೆ ಎಲ್ಲಾ ಮೂಲಭೂತ ತರಬೇತಿ ಕಾರ್ಯಗಳಿಗೆ ಬಳಸಲಾಗುತ್ತದೆ. ಸರಿಸುಮಾರು 1,330 ಕೆ.ಜಿ ತೂಕ ಹೊಂದಿರುತ್ತದೆ ಎಂದು ಅಂದಾಜಿಸಲಾಗಿದೆ.

error: Content is protected !!