Home Blog Page 3135

ಅಭಿವೃದ್ಧಿಯ ಗ್ಯಾರಂಟಿ ಕೇವಲ ಪ್ರಧಾನಿ ಮೋದಿ ಮಾತ್ರ ನೀಡಬಲ್ಲರು: ಬಿವೈ ವಿಜಯೇಂದ್ರ

0

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಮಾನ ನಿಲ್ದಾಣದ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಅಧಿವೇಶನದಲ್ಲಿ ಬಿಜೆಪಿ ಒಂದು ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುವ ಜೊತೆಗೆ ಜನ ಅದರಲ್ಲೂ ವಿಶೇಷವಾಗಿ ಬಡಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉತ್ತರ ಪಡೆಯುವುದಾಗಿ ಹೇಳಿದರು.

ಪಂಚ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಗಳ ಬಗ್ಗೆ ಮಾತಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೊಳ್ಳು ಗ್ಯಾರಂಟಿಗಳನ್ನು ನೀಡಿ ಗೆದ್ದ ಹಾಗೆಯೇ ಅದರ ನೇತೃತ್ವ ಇಂಡಿಯ ಮೈತ್ರಿಕೂಟ ದೇಶದ ಬೇರೆ ಭಾಗಗಳಲ್ಲೂ ಗ್ಯಾರಂಟಿಗಳ ಮಂತ್ರ ಪಠಿಸಿತು. ಆದರೆ, ಜನ ಅವಟ ಟೊಳ್ಳು ಗ್ಯಾರಂಟಿಗಳನ್ನು ನಂಬಲು ತಯಾರಿಲ್ಲ, ಅವರಿಗೆ ಬೇಕಿರುವುದು ದೇಶದ ರಕ್ಷಣೆ ಮತ್ತು ಅಭಿವೃದ್ಧಿಯ ಗ್ಯಾರಂಟಿ ಮತ್ತು ಅದನ್ನು ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತ್ರ ನೀಡಬಲ್ಲರು ಎಂದು ವಿಜಯೇಂದ್ರ ಹೇಳಿದರು.

ಆಸ್ತಿ ವಿಚಾರಕ್ಕೆ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ..!

0

ಧಾರವಾಡ: ಡಿ.3 ಕಳೆದ ದಿನ ತಡ ರಾತ್ರಿ ಧಾರವಾಡದ ಕೊಪ್ಪದ ಕೇರಿ ಶಿವಾಲಯ ಬಳಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯ ವಿಡಿಯೋ ವೈರಲ್ ಆಗಿದೆ.

ನಿನ್ನೆ ರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಓರ್ವ ವ್ಯಕ್ತಿ ಮಚ್ಚಿನಿಂದ ವ್ಯಕ್ತಿಯ ಮೇಲೆ ದಾಳಿ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸಹೋದರನಿಂದಲೇ ಹತ್ತೆಯಾಗಿರುವ ಶಂಕೆಯಾಗಿದೆ.

ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆಯಾಗಿದೆ.ಈ ಗಾಗಲೇ ಹತ್ಯೆಯ ವಿಡಿಯೋ ಇಟ್ಟುಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ನ್ಯಾಯ ಕೊಡುವವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಯತ್ನಾಳ್ ಹೊಸ ಬಾಂಬ್

0

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿಲ್ಲ. ದಕ್ಷಿಣ ಕರ್ನಾಟಕದವರ ಗುಲಾಮರು ನಾವಲ್ಲ ಎಂದು ಬಿಜೆಪಿ‌ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ನರೇಂದ್ರ ‌ಮೋದಿ ನಾಯಕತ್ವ ಇಡೀ ದೇಶದ ಜನರು ಒಪ್ಪಿಕೊಂಡಿದ್ದಾರೆ.  ನರೇಂದ್ರ ‌ಮೋದಿ ದೇಶಕ್ಕೆ ಗ್ಯಾರಂಟಿ ಇರುವುದಿಂದ ಗೆಲುವುವಾಗಿದೆ. ಹೊಂದಾಣಿಕೆ ‌ಇಲ್ಲದ ರಾಜಕಾರಣ, ‌ಹಿಂದುತ್ವ ಅಭಿವೃದ್ಧಿ ಕಾರಣವಾಗಿದೆ ಎಂದರು.

ಕುಟುಂಬ ರಾಜಕಾರಣ ಕಿತ್ತು ಹಾಕಬೇಕು. ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತದೆ. ವಂಶವಾದವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ. ಇನ್ನು ಮೇಲೆ ಬದಲಾವಣೆ ಆಗುತ್ತದೆ.

ಲೋಕಸಭೆ ಚುನಾವಣೆ ಬಳಿಕ ಬದಲಾವಣೆ!

ಇನ್ನು ಇದೇ ಸಂದರ್ಭದಲ್ಲಿ ‌ಲೋಕಸಭೆ ಚುನಾವಣೆ ಬಳಿಕ ಬದಲಾವಣೆ ಆಗಲಿದೆ ಎಂದು ಯತ್ನಾಳ್ ಭವಿಷ್ಯ ‌ನುಡಿದಿದ್ದಾರೆ. ಪ್ರಾಮಾಣಿಕರು ಹಾಗೂ ಹಿಂದೂ ವಿಚಾರಧಾರೆ ಹೊಂದಿರುವವರು‌ ಆಡಳಿತ ನಡೆಸಬೇಕು ಎಂದರು.

ಇಂದಿನಿಂದ 16 ನೇ ಅಧಿವೇಶನದ ಚಳಿಗಾಲದ ಮೊದಲ ಅಧಿವೇಶನ ಆರಂಭ…!

0

ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ 16 ನೇ ವಿಧಾನಸಭೆಯ ಮೊದಲ ಚಳಿಗಾಲದ ಅಧಿವೇಶನ ಆರಂಭವಾಗ್ತಿದೆ. ಸುವರ್ಣ ಸೌಧ ಮದುವಣಗಿತ್ತಿಯಂತೆ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು ರಾಜಕೀಯ ನಾಯಕರ ವಾಗ್ಯುದ್ಧಕ್ಕೆ ವೇದಿಕೆ ಸಿದ್ದಗೊಂಡಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಜಂಟಿ ಯಾಗಿ ಹೋರಾಡಲು ಸಿದ್ದಗೊಂಡಿದ್ರೆ,

ಬಿಜೆಪಿ- ಜೆಡಿಎಸ್ ನಾಯಕರು ತಮ್ಮ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರಗಳನ್ನೇ ಇಟ್ಟುಕೊಂಡಿವೆ. ವಿಪಕ್ಷಗಳ ಬಾಣಗಳನ್ನ ಕಟ್ಟಿಹಾಕಲು ಸರ್ಕಾರವು ತನ್ನದೇ ಪ್ಲಾನ್ ಗಳನ್ನ ರೂಪಿಸಿಕೊಂಡಿದೆ. ಅಧಿವೇಶನ ಇಂದಿನಿಂದ ಕಾವೇರ್ತಿದ್ದು ಎಲ್ಲರ ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗಿದೆ, 16ನೇ ವಿಧಾನಸಭೆಯ ಚಳಿಗಾಲದ ಮೊದಲ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಆರಂಭವಾಗ್ತಿದೆ. ಬೆಳಗಾವಿಯ ಸುವರ್ಣ ಸೌಧ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು ಸ್ವಾಗತದ ಬೋರ್ಡ್ ಗಳು ಎಲ್ಲೆಡೆ ರಾರಾಜಿಸ್ತಿವೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಟೈಟ್ ಪೋಲಿಸ್ ಸರ್ಪಗಾವಲು ಹಾಕಲಾಗಿದ್ದು ಹೆಜ್ಜೆ ಹೆಜ್ಜೆಗೂ ಚೆಕ್ ಪೋಸ್ಟ್ ಗಳನ್ನ ನಿರ್ಮಿಸಲಾಗಿದೆ. ಮೊದಲ ಭಾರಿಗೆ ಸುರ್ಣ ಸೌಧಕದಕ್ಕೆ ಶಾಶ್ವತ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ರಾಜಕೀಯದ ಬಿಸಿ ಬಿಸಿ ಚರ್ಚೆಗಳಿಗೆ ಸುವರ್ಣ ಸೌಧ ಸಿದ್ದಗೊಂಡಿದೆ.

ಸುಂದರವಾಗಿ ಕಾಣಬೇಕೇ? ನಿಮ್ಮ ಮುಖದ ಸೌಂದರ್ಯಕ್ಕೆ ಮೊಸರೆ ಮದ್ದು..!

0

ಮೊಸರು ತ್ವಚೆಗೆ ಒಳ್ಳೆಯ ಔಷಧಿಯಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಮೊಸರು ಇರುತ್ತದೆ. ಮೊಸರಿಯಲ್ಲಿರುವ ಅಂಶದಿಂದ ನಮ್ಮ ಆರೋಗ್ಯ ಮತ್ತು ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಸಿಡ್ ತ್ವಚೆಯ ಕೋಶಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರೊಟೀನ್, ವಿಟಮಿನ್ ಮತ್ತು ಮಿನರಲ್‍ಗಳು ನಿಮ್ಮ ತ್ವಚೆಯನ್ನು ತಾಜಾ ಆಗಿರಿಸುವ ಅಂಶ ಅದರಲ್ಲಿದೆ.

ಸುಂದರ ಮೊಗಕ್ಕೆ ಮೊಸರೆ ಮದ್ದು:
* ಎರಡು ಚಮಚ ಮೊಸರಿಗೆ ಚಿಟಿಕೆ ಸಕ್ಕರೆ ಹಾಕಿ ಮಿಕ್ಸ್ ಮಾಡಿ. ಬಳಿಕ ಅದನ್ನ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ನಂತರ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಿರಿ. ಈ ರೀತಿ ವಾರಕ್ಕೆ 2-3 ಬಾರಿ ಮಾಡಿದರೆ ಮುಖದಲ್ಲಿನ ಧೂಳು ಮತ್ತು ಕೊಳೆ ನಿವಾರಣೆಯಾಗುತ್ತದೆ.

* ಒಂದು ಚಮಚ ಮೊಸರನ್ನು ಮುಖಕ್ಕೆ ಹಚ್ಚಿ, ಮಸಾಜ್ ಮಾಡಿಕೊಳ್ಳಿ ಬಳಿಕ ಅರ್ಧ ಗಂಟೆ ನಂತರ ಮುಖವನ್ನು ತೊಳೆದರೆ ಕಪ್ಪುಕಲೆ ಮಾಯವಾಗಿ ಮುಖ ಸುಂದರವಾಗಿ ಕಾಣುತ್ತದೆ.

* ಎರಡು ಚಮಚ ಮೊಸರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ, ಮುಖಕ್ಕೆ ಹಚ್ಚಿ. ಬಳಿಕ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಇದರಿಂದ ಒಣಚರ್ಮ ನಿವಾರಣೆಯಾಗುತ್ತದೆ.

* ಮೊಸರು ಅರ್ಧ ಕಪ್, 3 ಚಮಚ ತುರಿದ ಸೌತೆಕಾಯಿಯನ್ನು ಡಾರ್ಕ್ ಸರ್ಕಲ್ ಹಾಗೂ ಟ್ಯಾನ್ ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. 15 ನಿಮಿಷದ ನಂತರ ತಣ್ಣಗಿರುವ ನೀರಿನಿಂದ ತೊಳೆಯಬೇಕು. ಈ ರೀತಿ ವಾರಕ್ಕೆ 2 ಬಾರಿ ಮಾಡುವುದರಿಂದ ಟ್ಯಾನ್ ಮತ್ತು ಚರ್ಮದ ಕಪ್ಪು ಕಡಿಮೆಯಾಗುತ್ತದೆ.

* ಒಂದು ಚಮಚ ಕಡಲೆ ಹಿಟ್ಟಿಗೆ 2 ಚಮಚ ಮೊಸರನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಬೇಕು. ಬಳಿಕ ಮುಖಕ್ಕೆ ಹಚ್ಚಿಕೊಂಡು 15 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಬೇಕು. ಇದು ಜಿಡ್ಡಿನ ಮತ್ತ ಸೂಕ್ಷ್ಮ ತ್ವಚೆಗೆ ಸೂಕ್ತವಾಗಿದೆ. ಜೊತೆಗೆ ತಾಜಾ ಕಾಂತಿಯನ್ನು ನೀಡುತ್ತದೆ.

* ಮೊಸರು ಕೂದಲಿನ ನೈಸರ್ಗಿಕ ಪೋಷಣೆ ನೀಡುತ್ತದೆ. ಆದ್ದರಿಂದ ಮೊಸರನ್ನು ಕೂದಲಿನ ಬುಡಕ್ಕೆ ಮಸಾಜ್ ಮಾಡುವುದರಿಂದ ಕೂದಲಿನ ಹೊಳಪು ಹೆಚ್ಚುತ್ತದೆ.

* 2 ಚಮಚ ಮೊಸರಿಗೆ 1 ಚಮಚ ಅರಶಿಣವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ, ಬಳಿಕ ನಿಮ್ಮ ಮುಖವನ್ನು ಸ್ವಚ್ಛವಾಗಿ ತೊಳೆದುಕೊಂಡು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

* ಮೆಹಂದಿ ಪುಡಿಗೆ ಮೊಸರು ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ಬೇಯಿಸಿದ ಆಲೂಗಡ್ಡೆ, 2 ಚಮಚ ಮೊಸರು ಮತ್ತು ಸ್ವಲ್ಪ ಜೇನು ತುಪ್ಪ ಸೇರಿಸಿ ಮಿಕ್ಸ್ ಮಾಡಿ, ನಿಮ್ಮ ಮುಖವನ್ನು ತೊಳೆದುಕೊಂಡ ನಂತರ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ನಂತರ 20 ನಿಮಿಷಗಳ ತರುವಾಯ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

* ನಿಂಬೆ ಸಿಪ್ಪೆ, ಕಿತ್ತಳೆ ಸಿಪ್ಪೆ ಒಣಗಿಸಿ, ಪುಡಿಮಾಡಿ ಮೊಸರಿನಲ್ಲಿ ಕಲಸಿ, ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಮುಖ ತೊಳೆಯಿರಿ. ಇದರಿಂದ ಮುಖದ ಮೇಲಿನ ಕಲೆ ಕಡಿಮೆಯಾಗುತ್ತದೆ.

ಧರಿಸಿರುವ ಟೀಶರ್ಟ್ ಅನ್ನೇ ತೆಗೆದು ಅಭಿಮಾನಿಯ ಬೈಕ್ ಒರೆಸಿದ ಧೋನಿ..!

0

ಕ್ರಿಕೇಟಿಗ ಮಹೇಂದ್ರ ಸಿಂಗ್ ಧೋನಿ ಪ್ರಪಂಚದಾದ್ಯಂತ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಆಗಸ್ಟ್ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌’ಗೆ ವಿದಾಯ ಹೇಳಿದ್ದರೂ, ಇಂದಿಗೂ ಐಪಿಎಲ್ ಪಂದ್ಯ ಆಡಲೆಂದು ಕ್ರೀಡಾಂಗಣಕ್ಕೆ ಬಂದರೆ ಫ್ಯಾನ್ಸ್ ಹುಚ್ಚೆದ್ದು ಕುಣಿಯುತ್ತಾರೆ.

ಧೋನಿಗೆ ಸಂಬಂಧಿಸಿದ ವೀಡಿಯೊಗಳು ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ. ಇಂತಹದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಅದರಲ್ಲಿ ಅಭಿಮಾನಿಯೊಬ್ಬರ ಬೈಕ್ ಅನ್ನು ಟೀ ಶರ್ಟ್ ನಿಂದ ಕ್ಲೀನ್ ಮಾಡುವುದನ್ನು ಕಾಣಬಹುದು.

ವೈರಲ್​ ಆಗಿರುವ ಈ ವೀಡಿಯೋದಲ್ಲಿ ಅಭಿಮಾನಿಯೊಬ್ಬ ತಮ್ಮ ಬೈಕ್​ ಮೇಲೆ ಆಟೋಗ್ರಾಫ್ ಹಾಕುವಂತೆ ಕೇಳುತ್ತಿರುವುದು ಕಂಡು ಬಂದಿದೆ. ಅಭಿಮಾನಿ ಕೋರಿಕೆಗೆ ಓಕೆ ಎಂದ ಧೋನಿ ಬೈಕ್​ ನೋಡಿ ಖುಷಿಪಟ್ಟು ಸಹಿ ಮಾಡುವ ಮೊದಲು ಸೂಪರ್ ಬೈಕ್ ಅನ್ನು ತಮ್ಮ ಟೀ ಶರ್ಟ್‌’ನಿಂದಲೇ ಕ್ಲೀನ್ ಮಾಡಿ ಬಳಿಕ ಸಹಿ ಮಾಡಿದ್ದಾರೆ.

ಬಿಜೆಪಿ, ಮೋದಿಜೀ ಪರ ಸುನಾಮಿ ರೀತಿ ಅಲೆ: ವಿಜಯೇಂದ್ರ

0

ಬೆಂಗಳೂರು: ಇಡೀ ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು ಈ ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದು ತಿಳಿಸಿದರು.

ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿ ಫೈನಲ್ ಎಂದು ವಿಶ್ಲೇಷಿಸಲಾಗುತ್ತಿತ್ತು. ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು. 5 ರಾಜ್ಯಗಳ ವಿಜಯ, ವಿಜಯ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಷಯದಲ್ಲಿ ಯಾವುದೇ ಅನುಮಾನ ಉಳಿದಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಗೆದ್ದರೂ ಬಿಜೆಪಿಗೆ ಅಲ್ಲಿನ ಜನತೆ ನೀಡಿರುವ ಬೆಂಬಲ ಎದ್ದು ಕಾಣಿಸಿದೆ: ಪ್ರಧಾನಿ ಮೋದಿ

0

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಚುನಾವಣೆಯಲ್ಲಿ ಸೋಲಿನ ಬಳಿಕವೂ ಎಕ್ಸ್‌ನಲ್ಲಿ ಬರೆದು ಧನ್ಯವಾದ ತಿಳಿಸಿದ್ದಾರೆ. ಹೌದು ತೆಲಂಗಾಣದೊಂದಿಗಿನ ನಮ್ಮ ಬಾಂಧವ್ಯ ಮುರಿಯಲಾಗದು. ಕಳೆದ ಕೆಲವು ವರ್ಷಗಳಿಂದ ಈ ಬೆಂಬಲವು ಹೆಚ್ಚುತ್ತಿದೆ. ನಾವು ತೆಲಂಗಾಣ ಜನರಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಚುನಾವಣೆಯಲ್ಲಿ ಸೋಲಿನ ಬಳಿಕವೂ ಎಕ್ಸ್‌ನಲ್ಲಿ ಬರೆದು ಧನ್ಯವಾದ ತಿಳಿಸಿದ್ದಾರೆ.

ಈ ಬಾರಿ ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೂ ಬಿಜೆಪಿಗೆ ಅಲ್ಲಿನ ಜನತೆ ನೀಡಿರುವ ಬೆಂಬಲ ಎದ್ದು ಕಾಣಿಸಿದೆ. ಈ ಹಿನ್ನೆಲೆ ಎಕ್ಸ್‌ನಲ್ಲಿ ಬರೆದಿರುವ ನರೇಂದ್ರ ಮೋದಿ ಪಂಚರಾಜ್ಯ ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರು ಸೇರಿದಂತೆ ತೆಲಂಗಾಣದಲ್ಲಿ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ: ಶಾಸಕ ಮುನಿರತ್ನ

0

ಬೆಂಗಳೂರು: ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ ಬಿಜೆಪಿ ಗೆಲ್ಲುತ್ತದೆ.

ಇಲ್ಲಿನ ಗ್ಯಾರಂಟಿ ತೆಲಂಗಾಣದಲ್ಲಿ ವರ್ಕ್ ಆಗಿದೆ. ನಮ್ಮ ನಿರೀಕ್ಷೆ ತೆಲಂಗಾಣದಲ್ಲಿ ಹುಸಿಯಾಯ್ತು. ಆದರೆ ಉಳಿದ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಇಂದು ಬಿಜೆಪಿಗೆ ಒಳ್ಳೆಯ ದಿನ ಎಂದರು. 

 

ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಧು ಸಾವು..!

0

ಮಹದೇವಪುರ: ಪ್ರೀತಿಸಿ ಎರಡು ತಿಂಗಳ ಹಿಂದೆಷ್ಟೆ ಮದುವೆಯಾಗಿದ್ದರು. ಮದುವೆಯಾಗಿ ಎರಡು ತಿಂಗಳೇ ವರನ ಕಡೆಯವರು ವಧುವಿಗೆ ವರದಕ್ಷಿಣೆ ಕಿರುಕುಳ ನೀಡಿದ್ದು, ಅನುಮಾನಾಸ್ಪದವಾಗಿ ಯುವತಿಯ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ವಿಭಾಗದ ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುದ್ದಾಗಿ ಕಾಣುತ್ತಿರುವ ಜೋಡಿಯ ಹೆಸರು ಪ್ರವೀಣ್ ಮತ್ತು ಅನುಷಾ. ಇವರಿಬ್ಬರೂ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನವರು. ಎರಡು ತಿಂಗಳ ಹಿಂದೆ ಕುಟುಂಬದವರ ವಿರೋಧ ನಡುವೆಯೂ ಯುವತಿ ಪಕ್ಕದ ಊರಿನ ಪ್ರವೀಣ್ ನನ್ನು ಮದುವೆಯಾಗಿ ಮಹದೇವಪುರದ ಸಿಂಗಯ್ಯನಪಾಳ್ಯಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಕೆಲ ದಿನಗಳ ನಂತರ ಯುವತಿಯ ಪೋಷಕರು ನವ ದಂಪತಿಯನ್ನು ಕರೆಸಿ ಬುದ್ದಿವಾದ ಹೇಳಿ ಸುಖ ಸಂಸಾರದಿಂದ ಬಾಳುವಂತೆ ಆಶೀರ್ವದಿಸಿದ್ದರು.

ಆದ್ರೆ ಹುಡುಗನ ಕುಟುಂಬದವರು ಯುವತಿಗೆ ಆಸ್ತಿ ಮತ್ತು ವರದಕ್ಷಿಣೆ ಕಿರುಕುಳ ನೀಡಿ, ಹತ್ಯೆ ಮಾಡಿದ್ದಾರೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನೂ ಯುವತಿ ಸಾವಿಗೆ ಅತ್ತೆ ನಾಗಮ್ಮ, ಸೋದರ ಮಾವ ರಾಜೇಶ್ ಹಾಗೂ ದೊಡ್ಡಪ್ಪ ತಿಮ್ಮೆಗೌಡನ ಮಗ ಮಹೇಶ್ ಕಾರಣವೆಂದು ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ.

error: Content is protected !!