Home Blog Page 3136

ಇದು ಸೆಮಿಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು: ಎಂ.ಪಿ ರೇಣುಕಾಚಾರ್ಯ

0

ದಾವಣಗೆರೆ: ದೇಶದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ‌.ಪಿ‌.ರೇಣುಕಾಚಾರ್ಯ ಸಂಭ್ರಮಾಚರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು. ಮುಂದಿನ ಲೋಕಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿಯಾಗಿದ್ದು, ಇದು ಸೆಮಿ ಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು.

ಕರ್ನಾಟಕದಲ್ಲಿ ಕೊಟ್ಟ ಭರವಸೆಗಳು ಎಲ್ಲಾ ಪೇಲೂರ್ ಆಗಿದೆ‌. ಭರವಸೆಗಳಿಂದ ಜನರ ಮತಗಳನ್ನು ಪಡೆಯಲು ಸಾಧ್ಯವಿಲ್ಲಾ. ದೇಶಕ್ಕೆ ಬಲಿಷ್ಟ ನಾಯಕ ಬೇಕು, ಅದು ನರೇಂದ್ರ ಮೋದಿಜಿ . ಮುಂದೆ ದೇಶದಲ್ಲಿ 350 ಕ್ಕೂ ಹೆಚ್ಚು ಲೋಕಸಬಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಜಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಕೆ.ಎಸ್.ಈಶ್ವರಪ್ಪ

0

ಶಿವಮೊಗ್ಗ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವಿನತ್ತ ಸಾಗಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನತೆ ಮತ್ತೆ ಪ್ರದಾನಿಯಾಗಬೇಕು ಎಂದು ಬಯಸಿದ್ದು, ಮೂರು ರಾಜ್ಯಗಳಲ್ಲಿ ಗೆಲುವಿನ ಗಿಫ್ಟ್ ನೀಡಿದ್ದಾರೆ. ಇದು ದೇಶದ ಎಲ್ಲಾ ಕಾರ್ಯಕರ್ತರಿಗೆ ಸಂತಸ ತಂದಿದೆ. ಇಂತಹ ಸಂತಸ ಪದೇ ಪದೇ ಬರಲಿ ಮಧ್ಯ ಪ್ರದೇಶ ರಾಜಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವಿತ್ತು. ಆದರೆ ಛತ್ತಿಸ್ ಘಡ ಗೆಲ್ಲುತ್ತೇವೆ ಎಂಬ ನಂಬಿಕೆ ಇರಲಿಲ್ಲ. ಕಾಂಗ್ರೇಸ್ ನವರು ಐದು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದರು.

ಕೇವಲ ಒಂಜು ರಾಜ್ಯದಲ್ಲಿ ಅವರು ಗೆದ್ದಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಜನರಿಗಿದ್ದ ಬೇಸರ, ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತದೆಗೆ ಹೇಗೆ ಮೋಸ ಮಾಡಿದರೋ..ಹಾಗೆಯೇ ಮುಸ್ಲಿಂ ಮತಗಳನ್ನು ಕ್ರೂಡಿಕರಿಸಿ ಗೆಲುವು ಸಾಧಿಸಿದ್ದಾರೆ. ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೇಸ್ ಮೋಸ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅವರು ತೆಲಂಗಾಣವನ್ನು ಕೂಡ ಗೆಲ್ಲಲು ಸಾಧ್ಯವಿಲ್ಲ. ಇಂದಿನ ಫಲಿತಾಂಶ ಮುಂದಿನ ಚುನಾವಣೆಗಳಲ್ಲಿ ಬರಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

Madhya Pradesh: ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಏರಿದ ಬಿಜೆಪಿ..!

0

ಭೋಪಾಲ್‌: ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಹೌದು. ಮಧ್ಯಪ್ರದೇಶದಲ್ಲಿ ಮಹಿಳೆಯರು ಕೈ ಹಿಡಿದ ಪರಿಣಾಮ ಮತ್ತೆ ಅಧಿಕಾರಕ್ಕೆ ಏರಿದೆ.  ಕರ್ನಾಟಕದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಆರಂಭಿಸಿದ ಬೆನ್ನಲ್ಲೇ ಸಿಎಂ ಶಿವರಾಜ್‌ ಸಿಂಹ್‌ ಚೌಹಾಣ್‌ ಲಾಡ್ಲಿ ಬೆಹನಾ ಹೆಸರಿನ ಯೋಜನೆ ಆರಂಭಿಸಿತ್ತು.

ಕಾಂಗ್ರೆಸ್‌ ಇದು ಚುನಾವಣೆ ಗಿಮಿಕ್‌ ಎಂದು ಬಣ್ಣಿಸಿದರೆ ಮಧ್ಯಪ್ರದೇಶ ಸರ್ಕಾರ ಘೋಷಣೆ ಮಾತ್ರ ಮಾಡದೇ ಚಾಲನೆ ನೀಡಿತ್ತು. ಬಡ ಮಹಿಳೆಯರಿಗೆ ಪ್ರತಿ ತಿಂಗಳು 1,250 ರೂ. ನೀಡಿದ್ದರೆ ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್‌ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು.

ಕರ್ನಾಟಕ ಚುನಾವಣೆಯಲ್ಲೂ ಮಹಿಳೆಯರು ಪ್ರಧಾನ ಪಾತ್ರ ವಹಿಸಿದ್ದರು. ಇದನ್ನು ಮೊದಲೇ ಗಮನಿಸಿದ್ದ ಮಧ್ಯಪ್ರದೇಶ ಸರ್ಕಾರ ಮಹಿಳಾ ಪರವಾದ ಯೋಜನೆಗಳು ಪ್ರಕಟಿಸಿದ ಪರಿಣಾಮ ಈ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಮಧ್ಯಾಹ್ನ 12 ಗಂಟೆಯ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 157, ಕಾಂಗ್ರೆಸ್‌ 70, ಇತರರು 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಫಲಿತಾಂಶದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಠುಸ್ ಪಟಾಕಿ ಆಗಿದೆ: ಆರ್. ಅಶೋಕ್

0

ಬೆಂಗಳೂರು: 4 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಠುಸ್‌ ಪಟಾಕಿ ಆಗಿದೆ, ಯಾವುದೇ ಪರಿಣಾಮ ಬೀರಿಲ್ಲ. ಅಲ್ಲಿ ಮೋದಿ ಅವರ ಪ್ರಭಾವ ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್‌. ಅಶೋಕ್‌  ಹೇಳಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ಅಶೋಕ್‌, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿ ಸ್ವೀಪ್ ಆಗಲಿದೆ.

ತೆಲಂಗಾಣದಲ್ಲೂ ಬಿಜೆಪಿಗೆ 11 ಸ್ಥಾನ ಈಗ ಬಂದಿದೆ. ಎಲ್ಲ ಕಡೆ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುತ್ತಿದೆ. ಮೋದಿಯವರ ಪ್ರಭಾವ ಎಲ್ಲ ಕಡೆ ಕಾಣ್ತಿದೆ. ಛತ್ತಿಸ್‌ಗಢದಲ್ಲೂ ಬಿಜೆಪಿ ಗೆಲ್ಲುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ರೆಸಾರ್ಟ್‌ ರಾಜಕಾರಣ ಮಾಡಲು ಹೊರಟಿದೆ. ದೊಡ್ಡ ಶೋ ಕೊಡಲು ಡಿಕೆಶಿ ತೆಲಂಗಾಣಕ್ಕೆ ಹೋಗಿದ್ದಾರೆ. ಜನರ ಕಷ್ಟ ಮರೆತು ತೆಲಂಗಾಣ ಶಾಸಕರಿಗಾಗಿ ಡಿಕೆಶಿ ಹೋಗಿದ್ದಾರೆ, ಇದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರೆ.

ಜೆಡಿಎಸ್ ನಿಯೋಗದಿಂದ ರಾಜ್ಯಪಾಲರ ಭೇಟಿ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರಿಂದ ರಾಜ್ಯಪಾಲರನ್ನೂ ಭೇಟಿ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿಯಾಗಿ ಪಕ್ಷದ ವತಿಯಿಂದ ರಾದ್ಯಾಧ್ಯಂತ ಕೈಗೊಳ್ಳಲಾಗಿದ್ದ ಬರ ಅಧ್ಯಾಯನ ವರದಿ ಹಾಗೂ ಬರ ಪರಿಹಾರ ಕುರಿತಂತೆ ಜೆಡಿಎಸ್ ನಿಯೋಗ ಮನವಿ ಪತ್ರ ಸಲ್ಲಿಸಿದರು.

ಕುಮಾರಸ್ವಾಮಿಗೆ ಶಾಸಕರಾದ ಜಿ.ಟಿ.ದೇವೇಗೌಡ,ಹನೂರ್ ಮಂಜುನಾಥ್, ಶರವಣ ಸೇರಿದಂತೆ ಇತರ ಶಾಸಕರು ಸಾಥ್ ನೀಡಿದರು. ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಕುಮಾರಸ್ವಾಮಿ ಅವರು ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೊತ್ ಅವರಿಗೆ ಸಲ್ಲಿಸಿದರು.ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.

ಸದ್ದಿಲ್ಲದೆ ಮುಕ್ತಾಯವಾಗಿದೆ “ಕಾಂಗರೂ” ಚಿತ್ರದ ಚಿತ್ರೀಕರಣ: ಇದು ಆದಿತ್ಯ ಅಭಿನಯದ ಚಿತ್ರ

0

“ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯ ಮಾತಿನ ಜೋಡಣೆ(ಡಬ್ಬಿಂಗ್) ನಡೆಯುತ್ತಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿರುವ ಕಥೆವಿದು. ಇನ್ನು “ಕಾಂಗರೂ” ಶೀರ್ಷಿಕೆ ಕುರಿತು ಹೇಳುವುದಾದರೆ, “ಕಾಂಗರೂ” ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಬಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟು ಕಾಪಾಡುತ್ತದೆ, ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಕಥೆಯಾಗಿರುತ್ತದೆ ಎಂದು ನಿರ್ದೇಶಕರು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ, ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

ಜಾತ್ರೆಯಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದ ಮಹಿಳೆ: ಗಂಭೀರ ಗಾಯ

0

ಕಲಬುರ್ಗಿ:- ಚಿತ್ತಾಪುರ ತಾಲೂಕಿನ ಹಲಕರ್ಟಿಯ ವೀರಭದ್ರೇಶ್ವರ ಜಾತ್ರೆಯಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮಹಿಳೆಯೊಬ್ರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.  ಚಿತ್ತಾಪುರ ತಾಲೂಕಿನ ಹಲಕರ್ಟಿಯ ವೀರಭದ್ರೇಶ್ವರ ಜಾತ್ರೆಯಲ್ಲಿ ಘಟನೆ ನಡೆದಿದ್ದು ಗಾಯಗೊಂಡ ಮಹಿಳೆ ಸೊಲ್ಲಾಪುರ ಮೂಲದವರು ಎನ್ನಲಾಗಿದೆ.

ಮಹಿಳೆ ಕೆಂಡದಲ್ಲಿ ಬೀಳುವ ದೃಶ್ಯ ಜಾತ್ರೆಗೆ ಬಂದಿದ್ದ ಭಕ್ತರೊಬ್ಬರ ಮೊಬೈಲಲ್ಲಿ ಸೆರೆಯಾಗಿದೆ. ಸರತಿ ಸಾಲಲ್ಲಿ ಬಂದು ಕೆಂಡ ಹಾಯುವಾಗ ಎಡವಿ ಬಿದ್ದ ಹಿನ್ನಲೆ ಮುಖ ಹಾಗು ಕುತ್ತಿಗೆಗೆ ಸುಟ್ಟ ಗಾಯಗಳಾಗಿವೆ..ಪ್ರತಿವರ್ಷ ಅನೇಕ ಭಕ್ತರು ಹರಕೆ ಹೊತ್ತು ಕೆಂಡ ಹಾಯುವುದು ಜಾತ್ರೆಯ ಸಂಪ್ರದಾಯ.

ನಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ: ಪ್ರಿಯಾಂಕ್ ಖರ್ಗೆ

0

ಕಲಬುರಗಿ:ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಫಲಿತಾಂಶ ದಿಕ್ಸೂಚಿ ಅಂತಾ ಹೇಳಕ್ಕಾಗಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪ್ರಿಯಾಂಕ್,

ನಮಗೆ ಯಾವ ರೀತಿಯಲ್ಲೂ ಆಪರೇಷನ್ ಕಮಲ ಭಯ ನಮಗಿಲ್ಲ, ಆದ್ರೆ ನಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ. ಬಿಜೆಪಿ ಅವರು ತೋಳ್ಬಲ, ಹಣ ಬಲ, ಸಿಬಿಐ, ಇಡಿ ಬಳಕೆ ಮಾಡ್ತಾರೆ, ಹೀಗಾಗಿ ನಮ್ಮ ಶಾಸಕರನ್ನ ನಾವು ಸೇಫ್ ಆಗಿ ಇಟ್ಟುಕೊಳ್ಳಬೇಕಿದೆ ಅಷ್ಟೆ.ನಾನಂತೂ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುವವರಿದ್ದೇವೆ ಅಂದ್ರು.

Bengaluru: ಪಬ್’ನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

0

ಬೆಂಗಳೂರು: ಪಾಕಿಸ್ತಾನದ ಪರವಾಗಿ ಜೈಕಾರ ಹಾಕಿದ ಇಬ್ಬರು ಕಿಡಿಗೇಡಿಗಳನ್ನ ಜೆಪಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂದು ಗುರುತಿಸಲಾಗಿದೆ. ನಗರದ ಪಬ್ ಒಂದರಲ್ಲಿ ಜನರು ಇಂಡಿಯಾ ಆಸ್ಟ್ರೇಲಿಯಾ ಮ್ಯಾಚ್ ನೋಡುತ್ತಿದ್ದ ವೇಳೆ ಭಾರತ ಗೆದ್ದ ಖುಷಿಯಲ್ಲಿ ಭಾರತ್ ಮಾತಾಕೀ ಜೈ ಎಂದು ಸಂಭ್ರಮಿಸಿದ್ದಾರೆ. ಇದೇ ವೇಳೆ ಅದೇ ಪಬ್‍ನಲ್ಲಿ ಕುಡಿಯುತ್ತ ಕುಳಿತಿದ್ದ ಆರೋಪಿಗಳು ಸೇರಿದಂತೆ ಮತ್ತಿಬ್ಬರು ಪಾಕ್ ಪರ ಘೋಷಣೆ ಕೂಗಿದ್ದಾರೆ.

ಪಾಕ್ ಪರ ಘೋಷಣೆ ಕೂಗುತ್ತಿದ್ದಂತೆ ಇವರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ. ಕೂಡಲೇ ಪಬ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದರು. ಕಿಡಿಗೇಡಿಗಳ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ.

Mandya: ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್..!

0

ಮಂಡ್ಯ :- ಜಿಲ್ಲೆಯ ರೈತರು ತೀವ್ರ ಬರಗಾಲದ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲೇ ರೈತರಿಂದ ಖರೀದಿಸುವ ಹಾಲಿನ ದರವನ್ನು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ( ಮನ್ ಮುಲ್ )ಏಕಾಏಕಿ 1.50 ಪೈಸೆಯನ್ನು ಕಡಿತಗೊಳಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಡಿ.1 ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್‌ಗೆ ಸರಿ ಸುಮಾರು 1.50 ಪೈಸೆಗಳನ್ನು ಕಡಿತಗೊಳಿಸಿದೆ. ಈ ಕುರಿತು ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಪ್ರಕಟಣೆ ನೀಡಿದ್ದು, ಒಕ್ಕೂಟದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ದರ ಪರಿಷ್ಕರಣೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಹಾಲಿನ ಗುಣಮಟ್ಟ ಶೇ.4.0 ಜಿಡ್ಡು ಮತ್ತು ಶೇ.8.5 ಜಿಡ್ಡೇತರ ಘನಾಂಶದ ಹೊಂದಿರುವ ಸಂಘದಿಂದ ಖರೀದಿಸುವ ಪ್ರತಿ ಲೀ. ಹಾಲಿಗೆ ₹ 34.40 ಬದಲು ₹ 32.90 ಹಾಗೂ ಉತ್ಪಾದಕರಿಗೆ ನೀಡುತ್ತಿದ್ದ ₹ 33.50ರ ಬದಲು ₹ 32 ನೀಡಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದಿದ್ದಾರೆ.

error: Content is protected !!