Home Blog Page 3139

ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಟಾಟಾ ಏಸ್ ವಾಹನ ಹಾಗೂ ಗೂಡ್ಸ್ ವಾಹನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ವಿಜಯಪುರ ತಾಲೂಕಿನ ಅರಕೇರಿ ಬಳಿ ನಡೆದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಗ್ರಾಮದ ನಿವಾಸಿಗಳಾದ ಶ್ರೀಶೈಲ ಮೇತ್ರಿ, ಬುದ್ದಯ್ಯ ಹಿರೇಮಠ, ಪ್ರತೀಕ‌(ಪಿಂಟೂ) ಹಿರೇಮಠ ಮೃತ ದುರ್ದೈವಿಗಳು. ಸಿದ್ದಯ್ಯ ಹಿರೇಮಠ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು. ಪಿಎಸ್ಐ ಜಿ. ಎಸ್ ಉಪ್ಪಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

ವೀರೇಂದ್ರ ಪಾಟೀಲರ ಕಾಲದ ಗತವೈಭವ ಮರಳಿಸಲು ಪ್ರಯತ್ನ; ಪಾಟೀಲ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಬಗ್ಗೆ ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತೇವೆ. ವಿರೇಂದ್ರ ಪಾಟೀಲ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ 186 ಸ್ಥಾನ ಪಡೆದುಕೊಂಡಿತ್ತು. ಆಗಿನ ಗತವೈಭವ ಮರಳಿಸಲು ಪ್ರಯತ್ನಿಸುತ್ತೇವೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ಹೇಳಿದರು.

ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
2023ರ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಟಾರ್ಗೆಟ್ ಇಟ್ಟುಕೊಂಡಿದ್ದೇವೆ ಎಂದರು.

ಯಡಿಯೂರಪ್ಪ ನಂತರ ಲಿಂಗಾಯತರ ಪ್ರಮುಖ ನಾಯಕ ಎಂ.ಬಿ.ಪಾಟೀಲ್ ರೆಂಬ ಸುದ್ದಿಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ನನಗೆ ನಾನೇ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಾ..? ಜನ ಸರ್ಟಿಫಿಕೇಟ್ ಕೊಡಬೇಕಾಗುತ್ತೆ. ನಮಗೆ ನಾವೇ ಸ್ವಯಂ ಘೋಷಿತ ನಾನೇ ನಾಯಕ, ನೀನೇ ನಾಯಕ, ನಾನೇ ಸಿಎಂ, ನೀನೇ ಸಿಎಂ ಎಂದು ಆಗುವುದಿಲ್ಲ. ಜನ ಏನು ಬಯಸುತ್ತಾರೆ ಅದು ಆಗುತ್ತದೆ. ಜನ ಹೇಳಿದ್ರೆ ಮಾತ್ರ ನಾಯಕರಾಗಲು ಸಾಧ್ಯವಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತರಲ್ಲಿ ಯಡಿಯೂರಪ್ಪ ಅತ್ಯಂತ ಎತ್ತರದ ನಾಯಕರು. ಕಾಂಗ್ರೆಸ್‍ನಲ್ಲಿ ಪ್ರಕಾಶ ಹುಕ್ಕೇರಿ, ಎ.ಬಿ.ಪಾಟೀಲ್ ಅವರು ನಮಗಿಂತ ಬಹಳ ಹಿರಿಯ ನಾಯಕರಿದ್ದಾರೆ ಎಂದು ಹೇಳಿದರು. ಮುಂಬರುವ ಸಿಎಂ ವಿಚಾರಕ್ಕೆ ಪ್ರತಿಕ್ರಯಿಸಿದ ಎಂ.ಬಿ.ಪಾಟೀಲ್, ಯಾರು ಸ್ವಯಂ ಘೋಷಿತ ಸಿಎಂ ಆಗಲು ಸಾಧ್ಯವಿಲ್ಲ. ನಮ್ಮ ಪಕ್ಷದಲ್ಲಿ ಸಿಎಂ ಆಗಲು ಮೊದಲು ಜನಾದೇಶ ಬರಬೇಕು. ಕನಿಷ್ಠ ಪಕ್ಷ 125 ಸ್ಥಾನ ಗೆಲ್ಲಬೇಕು. ನಮ್ಮ ಟಾರ್ಗೆಟ್ 150 ಇದೆ. 125 ಗೆದ್ದು ಬಹುಮತ ಪಡೆಯಬೇಕು. ಆಮೇಲೆ ವೀಕ್ಷಕರು ಬರುತ್ತಾರೆ, ಶಾಸಕರ ಅಭಿಪ್ರಾಯ ಪಡೆದುಕೊಂಡು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.

ಮಾಗಡಿ ಜಿ. ಪಂ. ಕ್ಷೇತ್ರದಿಂದ ಪುತ್ರ ಕಣಕ್ಕೆ; ಗೆಲ್ಲಿಸಲು ಶಾಸಕ ರಾಮಣ್ಣ ಲಮಾಣಿ ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಮುಂಬರುವ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಶಿರಹಟ್ಟಿ ತಾಲೂಕಿನ ಮಾಗಡಿ ಕ್ಷೇತ್ರದಿಂದ ಪುತ್ರ ಮಹೇಶ್ ಲಮಾಣಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿ ಮಹೇಶ್ ನಿಗೆ ಆಶೀರ್ವದಿಸಬೇಕೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು ಶುಕ್ರವಾರ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಪೂಜೆ ನೆರವೇರಿಸಿ ಗ್ರಾಮಪಂಚಾಯಿತಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಾನು ಕೂಡ ಮಾಗಡಿ ಜಿಲ್ಲಾ ಪಂಚಾಯತಿ ಕ್ಷೇತ್ರದಿಂದ ಆಯ್ಕೆಯಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರ ಫಲವಾಗಿ ಎಲ್ಲ ಮುಖಂಡರು ನನ್ನನ್ನು ಒಮ್ಮತದಿಂದ ಶಾಸಕನಾಗಿ ಸತತವಾಗಿ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಆದ್ದರಿಂದ ಈ ಬಾರಿ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪುತ್ರ ಮಹೇಶ್ ಲಮಾಣಿ ಅವರನ್ನು ಸಹ ಜಿಲ್ಲಾ ಪಂಚಾಯತಿ ಸದಸ್ಯನಾಗಿ ಆಯ್ಕೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಹ ಆಯ್ಕೆ ಮಾಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಮಾಗಡಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಹಳೇ ಮೊಬೈಲ್ ಬ್ಯಾಟರಿ ಸ್ಫೋಟ: ಬಾಲಕನ ಬೆರಳು ಕಟ್

 ವಿಜಯಸಾಕ್ಷಿ ಸುದ್ದಿ, ಹಾವೇರಿ

ಆಟವಾಡುತ್ತಿದ್ದಾಗ ಮೊಬೈಲ್ ನ ಹಳೇ ಬ್ಯಾಟರಿ ಸ್ಫೋಟಗೊಂಡು 10 ವರ್ಷದ ಬಾಲಕನ ಬೆರಳುಗಳು ಛಿದ್ರಗೊಂಡಿದ್ದು, ಮುಖಕ್ಕೆ ಗಂಭೀರವಾಗಿ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ.

ಮನೆ ಪಕ್ಕದಲ್ಲಿ ಎಸೆದಿದ್ದ ಹಾಳಾಗಿದ್ದ ಮೊಬೈಲ್ ಬ್ಯಾಟರಿ ತೆಗೆದುಕೊಂಡು ಬಾಲಕ ಆಟವಾಡುತ್ತಿದ್ದ ವೇಳೆ ಸ್ಫೋಟಗೊಂಡಿದೆ.
ಬಾಲಕ ಕಾರ್ತಿಕ್ ನ ಮೂರು ಬೆರಳು ತುಂಡಾಗಿದ್ದು, ಮುಖಕ್ಕೆ ಗಾಯಗಳಾಗಿದೆ. ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೀವ್ರ ಕುತೂಹಲ ಕೆರಳಿಸಿದ ಸಿಎಂ ದೆಹಲಿ ಭೇಟಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಿಎಂ ಬಿ.ಎಸ್. ಯಡಿಯೂರಪ್ಪ ದಿಢೀರ್ ದೆಹಲಿಗೆ ಹೊರಡಲು ಮುಂದಾಗಿದ್ದಾರೆ. ಕಳೆದ ಒಂದು ವರ್ಷದಿಂದ ಮುಖ ಮಾಡದಿದ್ದ ಬಿಎಸ್ ವೈ ಏಕಾಏಕಿ ಇಂದು ದೆಹಲಿಗೆ ಹೊರಟು ನಿಂತಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿಗೆ ಪ್ರಯಾಣಿಸಲಿರುವ ಬಿಎಸ್ ವೈ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಕುರಿತಾಗಿ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಲು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ ಎಂದು ಅವರ ಆಪ್ತರು ಹೇಳುತ್ತಿದ್ದಾರೆ. ಇದೆ ವೇಳೆ ರೆಬೆಲ್ ಶಾಸಕರ ವಿರುದ್ದ ಕ್ರಮಕ್ಕೆ ಸಿಎಂ ಒತ್ತಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗಲೇ ಯಡಿಯೂರಪ್ಪ ದೆಹಲಿಗೆ ತೆರಳುತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕೆಲವರ ಪ್ರಕಾರ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರ ಸಲಹೆ ಪಡೆಯಲಿದ್ದು, ಜತೆಗೆ ತಮ್ಮ ಸರ್ಕಾರದ ವಿರುದ್ದ ಹೇಳಿಕೆ ನೀಡುತ್ತಿರುವ ರೆಬೆಲ್ ಶಾಸಕರ ವಿರುದ್ದ ಶಿಸ್ತು ಕ್ರಮಕ್ಕೆ ಆಗ್ರಹಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ‌. ಆದರೆ, ವಿರೋಧಿ ಪಾಳೆಯದ ಪ್ರಕಾರ ಮುಖ್ಯಮಂತ್ರಿಯ ದೆಹಲಿ ಭೇಟಿ ನಿರ್ಣಾಯಕವಾಗಿದೆ.

ರಾಜ್ಯದಲ್ಲಿ ಕೊರೊನಾ ಸಂಕಟ ದೂರಾಗಿದ್ದು, ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಪಷ್ಟ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದೆಡೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಸಿಎಂ ಬಿಎಸ್ ವೈ ಆಪ್ತ ಶಾಸಕರ ನಿಯೋಗವನ್ನು ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದು, ಸರ್ಕಾರ ವಿರೋಧಿ ಹೇಳಿಕೆ ನೀಡುತ್ತಿರುವ ಸಿ.ಪಿ.ಯೋಗೀಶ್ವರ್, ಯತ್ನಾಳ ಹಾಗೂ ವಿಶ್ವನಾಥ ಅವರ ವಿರುದ್ದ ಕ್ರಮಕ್ಕೆ ಒತ್ತಾಯಿಸಲಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದು, ಅವರು ವಾಪಸ್ ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

1.5 ಲಕ್ಷ ಲಂಚ ಕೇಳಿದ ಕಮಿಷನರ್ ರಮೇಶ್ ಜಾಧವ್ ಅಂದರ್ ಯಾವಾಗ?; ಕುತೂಹಲ ‌ಮೂಡಿಸಿದ ತನಿಖೆ!

ವಿಜಯಸಾಕ್ಷಿ ಸುದ್ದಿ, ಗದಗ

ಕಳೆದ 36 ಗಂಟೆಗಳ ಕಾಲ ತೀವ್ರ ವಿಚಾರಣೆಗೊಳಪಟ್ಟ ನಗರಸಭೆ ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಅವರನ್ನು ಎಸಿಬಿ ಪೊಲೀಸರು ಇನ್ನೂ ಬಂಧಿಸಿಲ್ಲ.

ಇದು ಗದಗ ಬೆಟಗೇರಿ ಅವಳಿ ನಗರದ ಜನತೆಯ ಊಹಾಪೋಹಗಳಿಗೆ ಕಾರಣವಾಗಿದೆ. ಹತ್ತು ಸಾವಿರ ಲಂಚ ಪಡೆದ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅನಿಲಕುಮಾರ್ ಮುದ್ದಾ ಅವರನ್ನು ಗುರುವಾರ ರಾತ್ರಿ ಬಂಧನ ಮಾಡುವ ಮೂಲಕ ಪ್ರಕರಣದ ಎರಡನೇ ಆರೋಪಿಯನ್ನು ಬಂಧಿಸಿದಂತಾಗಿದೆ. ಆದರೆ ದೊಡ್ಡ ಮೊತ್ತ ಕೇಳಿದ, ಅದೂ ಸಾಕ್ಷಿ, ಆದಾರ ಇದ್ದಾಗಲೂ ಆಯುಕ್ತರ ಬಂಧನ ವಿಳಂಬವಾಗಲು, ವಿಚಾರಣೆಯ ನೆಪದಲ್ಲಿ ಕಾಲಹರಣ ಮಾಡುವ ತನಿಖೆಯ ಕಾರ್ಯವೈಖರಿಗೆ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಬರೊಬ್ಬರಿ 1.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಅವರನ್ನು ಇದುವರೆಗೂ ಬಂಧಿಸದ ಕಾರಣ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ.

ನಗರಸಭೆ ಆಯುಕ್ತರು ವಿಜಯಪುರದಿಂದ ವರ್ಗಾವಣೆ ಆಗಿ ಬಂದಿದ್ದೆ ದೊಡ್ಡ ವಿವಾದ ಆಗಿತ್ತು. ಆಯುಕ್ತರ ಹುದ್ದೆಗೆ ಅರ್ಹತೆ ಇರದಿದ್ದರೂ ರಾಜಕಾರಣಿಯೊಬ್ಬರ ಸ್ವಹಿತಾಸಕ್ತಿಯಿಂದ ಕುರ್ಚಿಗೆ ಬಂದು ಕುಳಿತಿದ್ದು ಗದಗನ ಜನತೆ ಮರೆತಿಲ್ಲ. ಹೀಗಾಗಿಯೇ ಈ ಪ್ರಕರಣದಲ್ಲೂ ರಾಜಕಾರಣಿಗಳು ಒತ್ತಡ ಹಾಕಿ ಬಂಧಿಸದಂತೆ ನೋಡಿಕೊಳ್ಳುವ ಹಾಗೂ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಳ್ಳದಂತೆ ಏನಾದರೂ ಯತ್ನ ನಡೆಯುತ್ತಿದೆಯಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇದೆ.

ಇದನ್ನೂ ಓದಿ ನಗರಸಭೆ ಕಚೇರಿ ಮೇಲೆ ಎಸಿಬಿ ದಾಳಿ; ಕಮಿಷನ್ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎಇಇ ಬಂಧನ

ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿ ಗದಗನಲ್ಲೂ ಛಾಪು ಮೂಡಿಸಿದ್ದ ನ್ಯಾಮಗೌಡ ಸಾಹೇಬರು ಈಗ ಎಸಿಬಿಯ ಎಸ್ಪಿಯಾಗಿದ್ದಾರೆ. ಅವರು ಈ ಪ್ರಕರಣದಲ್ಲಿ ಯಾವುದೇ ಒತ್ತಡ ಬಂದರೂ ಮಣಿಯಲ್ಲ ಅನ್ನೋ ಮಾತು ಕೇಳಿ ಬರುತ್ತಿದೆ.

ಈ ಕುರಿತು ಎಸಿಬಿ ಎಸ್ಪಿ ನ್ಯಾಮಗೌಡ ಅವರು ವಿಜಯಸಾಕ್ಷಿಗೆ ಪ್ರತಿಕ್ರಿಯೆ ನೀಡಿದ್ದು, ಗದಗ ನಗರಸಭೆ ಆಯುಕ್ತರ ಪ್ರಕರಣದಲ್ಲಿ ಯಾವುದೇ ಒತ್ತಡ ಇಲ್ಲ. ಎಲ್ಲವೂ ಕಾನೂನಿನ ಪ್ರಕಾರ ತನಿಖೆ ನಡೆಸಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ ಲಂಚ ಸ್ವೀಕಾರ ಪ್ರಕರಣ, ಅನಿಲ್ ಮುದ್ದಾ ಅಂದರ್; ಎಸಿಬಿಯಿಂದ ಮುಂದುವರೆದ ರಮೇಶ್ ಜಾಧವ್ ವಿಚಾರಣೆ

ಪ್ರಕರಣ ಹಿನ್ನೆಲೆ

ಹಳೆಯ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹೊಸ ಘಟಕಕ್ಕೆ ಮಣ್ಣು ಸಾಗಾಟ ಮಾಡಿದ ಬಿಲ್ ಪಾಸು ಮಾಡಲು ನಗರಸಭೆ ಎಇಇ ವರ್ಧಮಾನ್ ಹುದ್ದಾರ್, ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಕಾರ್ಯ ಪಾಲಕ ಇಂಜಿನಿಯರ್ ಅನಿಲಕುಮಾರ್ ಮುದ್ದಾ ಲಂಚದ ಬೇಡಿಕೆ ಇಟ್ಟಿದ್ದರು.

ಅನಿಲಕುಮಾರ್ ಮುದ್ದಾ ಅವರಿಗೆ ಜುಲೈ 05 ರಂದು 10 ಸಾವಿರ ಹಣ ಪಡೆದಿದ್ದರು. ನಗರಸಭೆ ಆಯುಕ್ತ ರಮೇಶ್ ಜಾಧವ್ ಕೂಡ 1.5 ಲಕ್ಷಕ್ಕೆ‌ ಬೇಡಿಕೆ ಇಟ್ಟಿದ್ದರು. ಹಾಗೆಯೇ ನಗರಸಭೆಯ ಎಇಇ ವರ್ಧಮಾನ್ ಹುದ್ದಾರ್ 40 ಸಾವಿರ ಹಣ ಕೇಳಿದ್ದರು ಎಂದು ಹೇಳಲಾಗುತ್ತದೆ. ಇದರಿಂದ ನೊಂದ ಗುತ್ತಿಗೆದಾರ ಅಬ್ದುಲ್ ಸಲಾಮ್ ಮನಿಯಾರ್ ಎಸಿಬಿ‌ಗೆ ದೂರು ನೀಡಿದ್ದರು.

ಆ ಪ್ರಕಾರ ಬುಧವಾರ ಸಂಜೆ 25 ಸಾವಿರ ಹಣ ಪಡೆಯುತ್ತಿದ್ದಾಗ ಎಇಇ ಹುದ್ದಾರ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿಲಾಗಿತ್ತು.

ಹುದ್ದಾರ್ ಅವರ ಬಂಧನದ ನಂತರ ನಗರಸಭೆ ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಅನಿಲಕುಮಾರ್ ಮುದ್ದಾ ಅವರನ್ನು ಎಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಗುರುವಾರ ರಾತ್ರಿ ಅನಿಲಕುಮಾರ್ ಮುದ್ದಾ ಅವರನ್ನು ಬಂಧಿಸಲಾಗಿದೆ.

ಬಾವಿಗೆ ಬಿದ್ದ ಮಗು ರಕ್ಷಿಸಲು ಹೋದ 30 ಜನರಿಗೆ ಕಾದಿತ್ತು ಆಪತ್ತು

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಆಟವಾಡುತ್ತ ಬಾವಿಗೆ ಬಿದ್ದಿದ್ದ ಮಗುವನ್ನು ರಕ್ಷಣೆ ಮಾಡಲು ಹೋಗಿದ್ದ 30ಕ್ಕೂ ಹೆಚ್ಚು ಜನರು ಮಣ್ಣು ಕುಸಿದು ಬಾವಿಗೆ ಬಿದ್ದ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿದೆ. 8 ವರ್ಷದ ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಳು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚಣೆ ಕೈಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನೋಡಲು ನೂರಾರು ಮಂದಿ ನೆರೆದಿದ್ದಾರೆ. ಈ ವೇಳೆ ಭಾರಿ ಮಳೆಯಿಂದಾಗಿ ಬಾವಿ ಪಕ್ಕದಲ್ಲಿದ್ದ ಮಣ್ಣು ಹಾಗೂ ತಡೆಗೋಡೆ ಕುಸಿದು 30ಕ್ಕೂ ಹೆಚ್ಚು ಜನರು ಬಾವಿಯಲ್ಲಿ ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 23 ಜನರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿ ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. 50 ಅಡಿ ಬಾವಿಯಾಗಿದ್ದು, ಮಳೆಯಿಂದಾಗಿ ಸುಮಾರು 20 ಅಡಿವರೆಗೆ ನೀರು ತುಂಬಿಕೊಂಡಿದೆ ಎನ್ನಲಾಗಿದೆ.

ಲಂಚ ಸ್ವೀಕಾರ ಪ್ರಕರಣ, ಅನಿಲ್ ಮುದ್ದಾ ಅಂದರ್; ಎಸಿಬಿಯಿಂದ ಮುಂದುವರೆದ ರಮೇಶ್ ಜಾಧವ್ ವಿಚಾರಣೆ

ವಿಜಯಸಾಕ್ಷಿ ಸುದ್ದಿ, ಗದಗ

ಬಿಲ್ ಹಣ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಕಳೆದ 24 ಗಂಟೆಗಳ ಕಾಲ ತೀವ್ರ ವಿಚಾರಣೆಗೊಳಪಟ್ಟ ನಗರಾಭಿವೃದ್ಧಿ ಕೋಶದ ಕಾರ್ಯ ಪಾಲಕ ಇಂಜಿನಿಯರ್ ಅವರನ್ನು ಕೊನೆಗೂ ಎಸಿಬಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಹಳೆಯ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹೊಸ ಘಟಕಕ್ಕೆ ಮಣ್ಣು ಸಾಗಾಟ ಮಾಡಿದ ಬಿಲ್ ಪಾಸ್ ಮಾಡಲು ನಗರಸಭೆ ಎಇಇ ವರ್ಧಮಾನ್ ಹುದ್ದಾರ್, ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಕಾರ್ಯ ಪಾಲಕ ಇಂಜಿನಿಯರ್ ಅನಿಲಕುಮಾರ್ ಮುದ್ದಾ ಲಂಚದ ಬೇಡಿಕೆ ಇಟ್ಟಿದ್ದರು.

ಅನಿಲಕುಮಾರ್ ಮುದ್ದಾ ಜುಲೈ 5ರಂದು 5,000 ರೂ. ಹಣ ಪಡೆದಿದ್ದರು. ನಗರಸಭೆ ಆಯುಕ್ತ ರಮೇಶ್ ಜಾಧವ್ ಕೂಡ 1.50 ಲಕ್ಷಕ್ಕೆ‌ ಬೇಡಿಕೆ ಇಟ್ಟಿದ್ದರು. ಹಾಗೆಯೇ ನಗರಸಭೆಯ ಎಇಇ ವರ್ಧಮಾನ್ ಹುದ್ದಾರ್ 40 ಸಾವಿರ ಹಣ ಕೇಳಿದ್ದರು ಎಂದು ಹೇಳಲಾಗುತ್ತದೆ. ಇದರಿಂದ ನೊಂದ ಗುತ್ತಿಗೆದಾರ ಅಬ್ದುಲ್ ಸಲಾಮ್ ಮನಿಯಾರ್ ಎಸಿಬಿ‌ಗೆ ದೂರು ನೀಡಿದ್ದರು. ಆ ಪ್ರಕಾರ ಬುಧವಾರ ಸಂಜೆ 25 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಎಇಇ ಹುದ್ದಾರ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.

ಇದನ್ನೂ ಓದಿ ಲಂಚ ಕೇಳಿದ ಕಮಿಷನರ್, ನಗರಾಭಿವೃದ್ಧಿ ಕೋಶದ ಎಂಜಿನಿಯರ್ ಬಂಧನ ಯಾವಾಗ?

ಹುದ್ದಾರ್ ಅವರ ಬಂಧನದ ಅನಂತರ ನಗರಸಭೆ ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಅನಿಲಕುಮಾರ್ ಮುದ್ದಾ ಅವರನ್ನು ಎಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಮಧ್ಯರಾತ್ರಿ ಮನೆಗೆ ಕಳಿಸಿದ್ದ ಅಧಿಕಾರಿಗಳು ಮತ್ತೆ ಗುರುವಾರ ಮುಂಜಾನೆಯಿಂದ ಧ್ವನಿ ಪರೀಕ್ಷೆ ಸೇರಿದಂತೆ ಅನೇಕ ಸಾಕ್ಷಿಗಳನ್ನು ಎಸಿಬಿ ಅಧಿಕಾರಿಗಳು ತನಿಖೆ ನಡೆಸಿದರು.

ರಾಜಕೀಯ ಒತ್ತಡ?:

ಬುಧವಾರ ರಾತ್ರಿ, ಗುರುವಾರ ಇಡೀ ದಿನ ಆಯುಕ್ತ ರಮೇಶ್ ಜಾಧವ್ ಹಾಗೂ ಅನಿಲಕುಮಾರ್ ಮುದ್ದಾ ಅವರನ್ನು ನಡೆಸುತ್ತಿರುವ ವಿಚಾರಣೆಯ ವೇಗ ಹಾಗೂ ರೀತಿಯ ಕುರಿತು ಗದಗ -ಬೆಟಗೇರಿ ಅವಳಿ ನಗರದಲ್ಲಿ ಊಹಾಪೋಹಗಳು ಎದ್ದಿದ್ದವು. ರಾಜಕೀಯ ಒತ್ತಡದ ಮಾತು ಕೇಳಿ ಬಂದಿತ್ತು.

ಈ ಕುರಿತು ವಿಜಯಸಾಕ್ಷಿ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರನ್ನು ಸಂಪರ್ಕಿಸಿದಾಗ, ಅಂತಹ ಯಾವುದೇ ಒತ್ತಡ ಬಂದಿಲ್ಲ. ಯಾವ ಒತ್ತಡಕ್ಕೂ ಮಣಿಯಲ್ಲ ಅಂತ ಸ್ಪಷ್ಟಪಡಿಸಿದರು. ತನಿಖೆ ನಡೆಯುತ್ತಿದೆ. ಸಾಕ್ಷಿ ಮತ್ತು ಧ್ವನಿ ಮುದ್ರಿಕೆ ಪರಿಶೀಲನೆ ನಡೆಯುತ್ತಿದೆ. ಸರಿಯಾದ ದಾಖಲೆ ಸಿಕ್ಕರೆ ಆಯುಕ್ತರನ್ನೂ ಬಂಧಿಸಲಾಗುವುದು ಎಂದು ಹೇಳಿದ್ದರು. ಎಸ್ಪಿ ಎಸ್ಪಿ ನ್ಯಾಮಗೌಡ ಅವರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಲಂಚ ಸ್ವೀಕಾರ ಪ್ರಕರಣ, ಅನಿಲ್ ಮುದ್ದಾ ಅಂದರ್; ಎಸಿಬಿಯಿಂದ ಮುಂದುವರೆದ ರಮೇಶ್ ಜಾಧವ್ ವಿಚಾರಣೆ

ವಿಜಯಸಾಕ್ಷಿ ಸುದ್ದಿ, ಗದಗ

ಬಿಲ್ ಹಣ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಕಳೆದ 24 ಗಂಟೆಗಳ ಕಾಲ ತೀವ್ರ ವಿಚಾರಣೆಗೊಳಪಟ್ಟ ನಗರಾಭಿವೃದ್ಧಿ ಕೋಶದ ಕಾರ್ಯ ಪಾಲಕ ಇಂಜಿನಿಯರ್ ಅವರನ್ನು ಕೊನೆಗೂ ಎಸಿಬಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಈ ಕುರಿತು ಎಸಿಬಿ ಎಸ್ಪಿ ನ್ಯಾಮಗೌಡ ವಿಜಯಸಾಕ್ಷಿಗೆ ಮಾಹಿತಿ ನೀಡಿದ್ದಾರೆ.

ಹಳೆಯ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹೊಸ ಘಟಕಕ್ಕೆ ಮಣ್ಣು ಸಾಗಾಟ ಮಾಡಿದ ಬಿಲ್ ಪಾಸ್ ಮಾಡಲು ನಗರಸಭೆ ಎಇಇ ವರ್ಧಮಾನ್ ಹುದ್ದಾರ್, ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಕಾರ್ಯ ಪಾಲಕ ಇಂಜಿನಿಯರ್ ಅನಿಲಕುಮಾರ್ ಮುದ್ದಾ ಲಂಚದ ಬೇಡಿಕೆ ಇಟ್ಟಿದ್ದರು.

ಅನಿಲಕುಮಾರ್ ಮುದ್ದಾ ಜುಲೈ 5ರಂದು 5,000 ರೂ. ಹಣ ಪಡೆದಿದ್ದರು. ನಗರಸಭೆ ಆಯುಕ್ತ ರಮೇಶ್ ಜಾಧವ್ ಕೂಡ 1.50 ಲಕ್ಷಕ್ಕೆ‌ ಬೇಡಿಕೆ ಇಟ್ಟಿದ್ದರು. ಹಾಗೆಯೇ ನಗರಸಭೆಯ ಎಇಇ ವರ್ಧಮಾನ್ ಹುದ್ದಾರ್ 40 ಸಾವಿರ ಹಣ ಕೇಳಿದ್ದರು ಎಂದು ಹೇಳಲಾಗುತ್ತದೆ. ಇದರಿಂದ ನೊಂದ ಗುತ್ತಿಗೆದಾರ ಅಬ್ದುಲ್ ಸಲಾಮ್ ಮನಿಯಾರ್ ಎಸಿಬಿ‌ಗೆ ದೂರು ನೀಡಿದ್ದರು.
ಆ ಪ್ರಕಾರ ಬುಧವಾರ ಸಂಜೆ 25 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಎಇಇ ಹುದ್ದಾರ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.

ಹುದ್ದಾರ್ ಅವರ ಬಂಧನದ ಅನಂತರ ನಗರಸಭೆ ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಅನಿಲಕುಮಾರ್ ಮುದ್ದಾ ಅವರನ್ನು ಎಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಮಧ್ಯರಾತ್ರಿ ಮನೆಗೆ ಕಳಿಸಿದ್ದ ಅಧಿಕಾರಿಗಳು ಮತ್ತೆ ಗುರುವಾರ ಮುಂಜಾನೆಯಿಂದ ಧ್ವನಿ ಪರೀಕ್ಷೆ ಸೇರಿದಂತೆ ಅನೇಕ ಸಾಕ್ಷಿಗಳನ್ನು ಎಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದರು.

ರಾಜಕೀಯ ಒತ್ತಡ?


ಬುಧವಾರ ರಾತ್ರಿ, ಗುರುವಾರ ಇಡೀ ದಿನ ಆಯುಕ್ತ ರಮೇಶ್ ಜಾಧವ್ ಹಾಗೂ ಅನಿಲಕುಮಾರ್ ಮುದ್ದಾ ಅವರನ್ನು ನಡೆಸುತ್ತಿರುವ ವಿಚಾರಣೆಯ ವೇಗ ಹಾಗೂ ರೀತಿಯ ಕುರಿತು ಗದಗ -ಬೆಟಗೇರಿ ಅವಳಿ ನಗರದಲ್ಲಿ ಊಹಾಪೋಹಗಳು ಎದ್ದಿದ್ದವು. ರಾಜಕೀಯ ಒತ್ತಡದ ಮಾತು ಕೇಳಿ ಬಂದಿತ್ತು. ಇ ಕುರಿತು ವಿಜಯಸಾಕ್ಷಿ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರನ್ನು ಸಂಪರ್ಕಿಸಿದಾಗ, ಅಂತಹ ಯಾವುದೇ ಒತ್ತಡ ಬಂದಿಲ್ಲ. ಯಾವ ಒತ್ತಡಕ್ಕೂ ಮಣಿಯಲ್ಲ ಅಂತ ಸ್ಪಷ್ಟಪಡಿಸಿದರು. ತನಿಖೆ ನಡೆಯುತ್ತಿದೆ. ಸಾಕ್ಷಿ ಮತ್ತು ಧ್ವನಿ ಮುದ್ರಿಕೆ ಪರಿಶೀಲನೆ ನಡೆಯುತ್ತಿದೆ. ಸರಿಯಾದ ದಾಖಲೆ ಸಿಕ್ಕರೆ ಆಯುಕ್ತರನ್ನೂ ಬಂಧಿಸಲಾಗುವುದು ಎಂದು ಹೇಳಿದ್ದರು. ಎಸ್ಪಿ ಎಸ್ಪಿ ನ್ಯಾಮಗೌಡ ಅವರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜು.18ರವರೆಗೆ ಭಾರಿ ಮಳೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜುಲೈ 18ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 14 ಹಾಗೂ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 15, 16, 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ನದಿ ಪಾತ್ರದ ಜನತೆಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗುತ್ತಿದೆ.

error: Content is protected !!