Home Blog Page 3142

536ನೇ ಕನಕ ಜಯಂತ್ಯೋತ್ಸವ: ಇಂದು ಕಾಗಿನಲೆ ಗ್ರಾಮಕ್ಕೆ CM ಸಿದ್ದರಾಮಯ್ಯ ಭೇಟಿ

0

ಹಾವೇರಿ:- ಕನಕ ಜಯಂತ್ಯೋತ್ಸವ ಹಿನ್ನೆಲೆ ಇಂದು CM ಸಿದ್ದರಾಮಯ್ಯ ಅವರು ಕಾಗಿನಲೆಗೆ ಭೇಟಿ ಹಿನ್ನೆಲೆ ಶ್ರೀಕ್ಷೇತ್ರ ಕಾಗಿನಲೆ ಗ್ರಾಮದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ನೀಡಲಾಗಿದೆ. CM ಸಿದ್ದರಾಮಯ್ಯ ಅವರು, ಕನಕ ಜಯಂತ್ಯೋತ್ಸದ ಉದ್ಘಾಟನೆ ಮಾಡಲಿದ್ದಾರೆ. ಕನಕದಾಸರ ನೆಲದಲ್ಲಿ ಬೃಹತ್ ಕನಕ ವೇದಿಕೆ ಸಜ್ಜಾಗಿದೆ.

ವೇದಿಕೆ ಮುಂಭಾಗದಲ್ಲಿ ಸಾವಿರಾರೂ ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅದ್ದೂರಿ ಕನಕ ಜಯಂತ್ಯೋತ್ಸಕ್ಕೆ ಲಕ್ಷಾಂತರು ಭಕ್ತರು ಆಗಮಿಸೋ ಸಾಧ್ಯತೆ ಇದ್ದು, ಈ ಹಿನ್ನಲೆ ಅಹಿತಕರ ನಡೆಯದಂತೆ ಖಾಕಿ ಸರ್ಪಗಾವಲು ಮಾಡಲಾಗಿದೆ. ಜಿಲ್ಲಾಡಳಿತದಿಂದ 700 ಅಧೀಕ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿರಿಂದ ಬರ ಪರಿಶೀಲನೆ

0

ಬಳ್ಳಾರಿ:- ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬಳ್ಳಾರಿಯಲ್ಲಿ ಬರ ಪರಿಶೀಲನೆ ಮಾಡಿದ್ದಾರೆ. ಜಿಲ್ಲೆಯ ಸಂಡೂರು ತಾಲ್ಲೂಕಿನ ಕೋಡಾಲು ಹಾಗೂ ರಾಜಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಬರ ಪರಿಶೀಲನೆ ಮಾಡಿದ್ದಾರೆ. ಹತ್ತಿ, ನವಣೆ ಮತ್ತು ಸಜ್ಜೆ ಜಮೀನುಗಳಿಗೆ ಸಚಿವರು ಭೇಟಿ ನೀಡಿದ್ದು, ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ ಹಾನಿ ಪರಿಶೀಲನೆ ಮಾಡಿದ್ದಾರೆ. ಸಂಡೂರು ತಾಲ್ಲೂಕಿನ ಕೋಡಾಲು ಗ್ರಾಮ ವ್ಯಾಪ್ತಿಯ ರೈತ ಮಾರೆಪ್ಪನ ನವಣೆ, ಹತ್ತಿ ಬೆಳೆ ವೀಕ್ಷಣೆ ಮಾಡಿದ್ದಾರೆ.

ಇದೇ ವೇಳೆ ಬೆಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಸಚಿವರು ಮಾಹಿತಿ ಪಡೆದಿದ್ದಾರೆ. ಫೂಟ್ಸ್ ಐಡಿಯಲ್ಲಿ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನನ್ನು ನೋಂದಣಿ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಇದರಿಂದ ಬರ ಪರಿಹಾರ ನೀಡಲು ಅನುಕೂಲವಾಗಲಿದೆ. ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು ಕೇಂದ್ರದ ಕೃಷಿ ಸಚಿವರ ಜೊತೆ ಸಭೆ ನಡೆಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ.

ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ. ಕೇಂದ್ರದಿಂದ ಬರ ಪರಿಹಾರ ಬಂದ ತಕ್ಷಣ, ಸಣ್ಣ ಮತ್ತು ಅತಿ ಸಣ್ಣ ರೈತರ ಭೂಮಿಯನ್ನು ಇಂತಿಷ್ಟು ಹಾನಿ ಎಂದು ಪರಿಗಣನೆ ಮಾಡಲಾಗಿದೆ. ಫ್ರೂಟ್ಸ್ ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ಬರ ಪರಿಹಾರವನ್ನು ನೀಡಲಾಗುವುದು. ಬರ ಅಧ್ಯಯನದ ಸಂದರ್ಭದಲ್ಲಿ ಸಚಿವರಿಗೆ ಸಂಡೂರು ಶಾಸಕ ಈ.ತುಕಾರಾಂ ಸಾಥ್ ನೀಡಿದ್ದಾರೆ.

ಜೈಲಿನಲ್ಲಿದ್ರೂ ರೌಡಿಯ ಬರ್ತಡೆ ಸೆಲೆಬ್ರೆಷನ್..! ಉಮೇಶನ ಸಹಚರರಿಂದ ಫುಲ್ ಹವಾ ಕ್ರಿಯೆಟ್

0

ಬೆಂಗಳೂರು:- ಜೈಲಿನಲ್ಲಿದ್ರೂ ರೌಡಿಯ ಬರ್ತಡೆ ಸೆಲೆಬ್ರೆಷನ್ ಮಾತ್ರ ಜೋರಾಗಿದೆ. U Boss ಅಂತಾ ಕೇಕ್ ಮಾಡಿಸಿ ಉಮೇಶನ ಸಹಚರರಿಂದ ಸಂಭ್ರಮ ಜೋರಾಗಿದೆ.

ಉಗ್ರಂ ಸಿನಿಮಾದ ಡೈಲಾಗ್ , ಸಾಂಗ್ ಹಾಕಿ ಹವಾ ಕ್ರಿಯೆಟ್ ಮಾಡಿದ್ದಾರೆ. ಪೀಣ್ಯದ ಉಮೇಶನ ಏರಿಯಾದಲ್ಲಿ ಅಕ್ಟೋಬರ್ ನಲ್ಲಿ ಬರ್ತಡೆ ಸೆಲೆಬ್ರೆಷನ್ ನಡೆದಿದೆ. ಇದೀಗ ಬೆಳಕಿಗೆ ಬಂದಿದೆ.

ರೌಡಿ ಆನಂದನ ಕೊಲೆ ಕೇಸಲ್ಲಿ ರೌಡಿ ಉಮೇಶ ಜೈಲಿಗೆ ಹೋಗಿದ್ದಾನೆ. ಜೈಲಿನ ಒಳಗೆ ಉಮೇಶ ಬರ್ತಡೆ ಆಚರಿಸಿಕೊಂಡಿದ್ದಾನೆ. ಬ್ಯಾರಕ್ ನಲ್ಲಿ ಬರ್ತಡೆ ಆಚರಿಸಿಕೊಂಡು ಹಾರ ಹಾಕಿಕೊಂಡು ಪೋಸ್ ಕೊಟ್ಟಿದ್ದ ಆಸಾಮಿ, ಸಿಸಿಬಿ ತನಿಖೆಯಲ್ಲಿ ಬದಲಾಗಿದೆ ಜೈಲಿನಲ್ಲಿನ ಬರ್ತಡೆ ವಿಚಾರ.

ಇತ್ತ ಏರಿಯಾದಲ್ಲೂ ರೌಡಿ ಸಹಚರರಿಂದ ಸೆಲೆಬ್ರೆಷನ್ ನಡೆದಿದೆ.ಏರಿಯಾದಲ್ಲಿ ಕೇಕ್ ಕಟ್ ಮಾಡಿಸಿ ಹವಾ ಕ್ರಿಯೆಟ್ ಮಾಡಿದ್ದಾರೆ.

ಆಟ ಆಡುವಾಗ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

0

ವಿಜಯನಗರ: ಆಟ ಆಡುವಾಗ ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ವಿಸ್ಮೀತ( 3) ಮೃತಪಟ್ಟ ಬಾಲಕಿಯಾಗಿದ್ದು,. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದಲ್ಲಿ ದುರ್ಘಟನೆ ನಡೆದಿದೆ.

ನಾಗರಾಜ್ ಮತ್ತು ಕಾವೇರಿ ದಂಪತಿಯ ಮಗಳಾದ ವಿಸ್ಮೀತಾ ಆಟವಾಡುತ್ತಾ ನೀರಿನ ತೊಟ್ಟಿ ಬಳಿ ಬಂದಿದ್ದಾಳೆ. ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಕೂಡ್ಲಿಗಿ ಶಾಸಕ ಎನ್‌.ಟಿ ಶ್ರೀನಿವಾಸ್ ಮೃತ ಬಾಲಕಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ

0

ಕೋಲಾರ: ತಂದೆ-ತಾಯಿಯನ್ನು ನೋಡೋದಕ್ಕೆ ಆಗದಿದ್ದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ವಸತಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಇಲಿ ಪಾಶಾಣ ಹಾಕಿದ್ದಾನೆ. ಈ ನೀರು ಕುಡಿದ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬಂಗಾರಪೇಟೆ ತಾಲ್ಲೂಕು ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಂಬತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ಪೋಷಕರಿಂದ ದೂರವಿದ್ದುದಕ್ಕೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ.

ಆತನ ತಂದೆ ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಮಗ ಚೆನ್ನಾಗಿ ಓದಲಿ ಅನ್ನೋ ಕಾರಣಕ್ಕೆ ವಸತಿ ಶಾಲೆಗೆ ಸೇರಿಸಿದ್ದರು. ಆದ್ರೆ ತಂದೆ-ತಾಯಿಯಿಂದ ದೂರವಿದ್ದುದರಿಂದ ಆತ ಖಿನ್ನತೆಗೆ ಒಳಗಾಗಿದ್ದ. ಶಾಲೆಗೆ ರಜೆ ಸಿಕ್ಕರೆ ಮನೆಗೆ ಹೋಗಬಹುದು ಎಂದು ಲೆಕ್ಕಚಾರ ಹಾಕಿದ್ದ. ಏನು ಮಾಡಿದರೆ ಶಾಲೆಗೆ ರಜೆ ಕೊಡಬಹುದು ಎಂದು ಯೋಚಿಸಿದ ಆತ, ಟ್ಯಾಂಕ್‌ಗೆ ಇಲಿ ಪಾಶಾಣ ಹಾಕಿದ್ದಾನೆ. ವಿದ್ಯಾರ್ಥಿಗಳಿಗೆ ತೊಂದರೆಯಾದರೆ ರಜೆ ಕೊಡುತ್ತಾರೆ. ಆಗ ಕೆಲ ದಿನ ಮನೆಗೆ ಹೋಗಬಹುದು. ತಂದೆ-ತಾಯಿಯನ್ನು ನೋಡಬಹುದು ಅನ್ನೋ ಆಸೆ ಅವನದಾಗಿತ್ತು. ಆದ್ರೆ ಇದರಿಂದಾಗಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

0

ಮಡಿಕೇರಿ:  ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಕೊಡಗಿನ ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಾತನಾಡಿದ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ.

ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ಈ ವಿಷಯದಲ್ಲಿ ನಾನು ಎಲ್ಲವನ್ನು ಟೀಕಿಸುವುದಿಲ್ಲ ಎಂದಿದ್ದಾರೆ.

ಮುಂದಿನ 3 ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಜನತಾ ದರ್ಶನ ಮಾಡಿದಾಗ ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್..!

0

ಬೆಂಗಳೂರು:  ಸಿಬಿಐ ತನಿಖೆಯಿಂದ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿ ನಾಳೆ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಹೀಗಾಗಿ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಯತ್ನಾಳ್ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಆದೇಶ ಪೂರ್ವಾಗ್ರಹ ಪೀಡಿತ ಎಂದು ಅರ್ಜಿಯಲ್ಲಿ ಯತ್ನಾಳ್ ಉಲ್ಲೇಖಿಸಿದ್ದಾರೆ. ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂಪಡೆಯಿತು.

ಕೆಲ ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಿಬಿಐ ತನಿಖೆಗೆ ವಹಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಯಿತು. ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದವು. ಕಳ್ಳರ ಸರ್ಕಾರ ಕಳ್ಳನನ್ನು ರಕ್ಷಿಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು. ಆದರೆ ಕಾಂಗ್ರೆಸ್ ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿತು. ಹಿಂದಿನ ಸರ್ಕಾರದ ಆದೇಶ ಕಾನೂನುಬಾಹಿರವಾದದ್ದು. ಹೀಗಾಗಿ ಆದೇಶ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿತ್ತು.

ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದೇ ನೋವಿನಿಂದ ನರಳಾಡಿದ ವ್ಯಕ್ತಿ

0

ವಿಜಯನಗರ: ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್​ ಬಾರದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ನೋವಿನಿಂದ ನಡು ರಸ್ತೆಯಲ್ಲಿ ನರಳಾಡಿರುವ ಘಟನೆ ಕೂಟ್ಟೂರು ಪಟ್ಟಣದಲ್ಲಿ ನಡೆದಿದೆ. ಮನಕಲುಕುವ ದೃಶ್ಯಕ್ಕೆ ಕೂಟ್ಟೂರು ಪಟ್ಟಣ ಸಾಕ್ಷಿಯಾಗಿದೆ. ಬಸವರಾಜಪ್ಪ ಗಾಯಗೊಂಡ ವ್ಯಕ್ತಿಯಾಗಿದ್ದು, ಬಸವರಾಜಪ್ಪ ಅವರು ಇಂದು ಬೆಳಿಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಕೆಎಸ್​ಆರ್​ಟಿಸಿ ಬಸ್ ಬಸವರಾಜಪ್ಪ ಅವರಿಗೆ​ ಡಿಕ್ಕಿ ಹೊಡೆದಿದೆ.

ಇದರಿಂದ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಿಯರು ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್​ ಸ್ಥಳಕ್ಕೆ ಬರಲಿಲ್ಲ. ಹೀಗಾಗಿ ಗಾಯಗೊಂಡಿದ್ದ ಬಸವರಾಜಪ್ಪ ನಡು ರಸ್ತೆಯಲ್ಲಿ ನೋವಿನಿಂದ ನರಳಾಡಿದ್ದಾರೆ. ಕೊನೆಗೆ ಸ್ಥಳೀಯರು ಬಸ್‌ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಚಾಲಕನ ವಿರುದ್ಧ ಕೂಟ್ಟೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಮ್ಮಗನಿಂದಲೇ ತಾತನ ಬರ್ಬರ ಹತ್ಯೆ!

0

ಕಲಬುರಗಿ: ತಾಯಿಗೆ ಬೈದ ಅನ್ನೋ ಕಾರಣಕ್ಕೆ ಮೊಮ್ಮಗ ತನ್ನ ತಾತನಿಗೆ ಚಾಕುವಿನಿಂದ ಇರಿದು ಕೊಲೆಮಾಡಿದ ಘಟನೆ ಕಲಬುರಗಿಯ ಜವಳಗಾ ಗ್ರಾಮದಲ್ಲಿ ನಡೆದಿದೆ.. ಮೊಮ್ಮಗ ಆಕಾಶ್ ಕೊಲೆಗೈದ ಆರೋಪಿಯಾಗಿದ್ದು 70 ವರ್ಷದ ತಾತ ಸಿದ್ರಾಮಪ್ಪ ಕೊಲೆಗೀಡಾದ ದುರ್ದೈವಿಯಾಗಿದ್ದಾನೆ..

ಸಂಭಂಧಿಕರ ಸಾವಿನ ಅಂತ್ಯಕ್ರಿಯೆ ಮುಗಿಸಿ ವಾಪಾಸ್ ಬರುವಾಗ ಕ್ರೂಸರ್ ವಾಹನದಲ್ಲಿ ಕೂರುವಾಗ ಕಿರಿಕ್ ಶುರುವಾಗಿದೆ..ತಾತನಿಗೆ ಬೈಕ್ ಮೇಲೆ ಕೂರಲು ಹೇಳಿದಾಗ ನನಗೆ ವಯಸ್ಸಾಗಿದೆ ಆಗಲ್ಲ ಅಂದ್ರೂ ಕೂರಲು ಹೇಳ್ತೀಯಾ ಅಂತ ಆಕಾಶನ ತಾಯಿ ಸರೋಜಾಳ ಮೇಲೆ ರೇಗಾಡಿದ್ದಾನೆ. ಅಷ್ಟಕ್ಕೆ ಕೋಪಿಸಿಕೊಂಡ ಆಕಾಶ್ ಕೊಲೆಮಾಡಿದ್ದಾನೆ ಅಂತ ಹೇಳಲಾಗ್ತಿದೆ. ನರೋಣಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ: ಜಗದೀಶ್ ಶೆಟ್ಟರ್

0

ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾತಿ ಗಣತಿ‌ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ.  ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ ರಿಪೇರಿ ಮಾಡಲಾಗದಷ್ಟು ಪರಿಸ್ಥಿತಿ ದುಸ್ಥಿತಿ ತಲುಪಿದೆ. ಯಾರೇ ಅಧ್ಯಕ್ಷರಾದರು ಅದನ್ನು ರಿಪೇರಿ ಮಾಡಲಾಗದು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅರವಿಂದ್ ಲಿಂಬಾವಳಿ, ಸೋಮಣ್ಣ ಸೇರಿದಂತೆ ಹಲವರು ಅಸಮಾಧಾನ ಧ್ವನಿ ಎತ್ತಿದ್ದಾರೆ. ಧ್ವನಿ ಎತ್ತಿದವರ ಮನೆಗೆ ಹೋಗಿ ಬಂದ್ರೆ ಎಲ್ಲಾ‌ ಸರಿ ಆಗಲ್ಲ.  ಬಿಜೆಪಿ ಕಾರ್ಯಕರ್ತರು ನನ್ನ ಬಳಿ ನೋವು ಹೊರ ಹಾಕುತ್ತಿದ್ದಾರೆ.  ನಮ್ಮದು ಲೀಡರ್ ಲೆಸ್ ಪಾರ್ಟಿ ಅಂತ ಅಳಲು ತೋಡಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ  ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಬಿಜೆಪಿ ಈಡಿ ಮತ್ತು ಐಟಿ ಮೂಲಕ ರಾಜಕೀಯ ಮಾಡುತ್ತಿದೆ.  ವಿಪಕ್ಷಗಳು ಇರಲೇ ಬಾರದು ಎನ್ನುವುದು ಬಿಜೆಪಿ ಚಿಂತನೆ.  ಈಗ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ಇದೆ ಎಂದರು.

error: Content is protected !!