Home Blog Page 3143

ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ; ಡಿಸಿಎಂ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು.

ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್‌ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಅವರು ಹೇಳಿದರು.

‘ಬಿಯಾಂಡ್‌ ಬೆಂಗಳೂರುʼ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹಿನ್ನಡೆ ಆಗಿಲ್ಲ

ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶ್‌ನ್ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು.

ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ; ಡಿಸಿಎಂ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು.

ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್‌ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಅವರು ಹೇಳಿದರು.

‘ಬಿಯಾಂಡ್‌ ಬೆಂಗಳೂರುʼ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹಿನ್ನಡೆ ಆಗಿಲ್ಲ

ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶ್‌ನ್ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು.

ಹಿಂದೂ ದೇವರ ಅವಹೇಳನ ಆರೋಪ; ನಕಲಿ ಬಾಬಾನಿಗೆ ಹಿಗ್ಗಾಮುಗ್ಗಾ ಥಳಿತ

ವಿಜಯಸಾಕ್ಷಿ ಸುದ್ದಿ, ಗದಗ

ಹಿಂದೂ ದೇವರಿಗೆ ಬೈದ ಅಂತ ನಕಲಿ ಬಾಬಾ ಒಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗದಗನಲ್ಲಿ ನಡೆದಿದೆ. ಗದಗದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಡೋಂಗಿ ಬಾಬಾ ಆಸೀಫ್ ಜಾಗಿರದಾರ ಎಂಬಾತನಿಗೆ ಜನ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಡೋಂಗಿ ಬಾಬಾ ಮೂಲತಃ ಬಾಗಲಕೋಟ ಜಿಲ್ಲೆಯವನಾಗಿದ್ದು, ನಗರದ ಗಂಗಿಮಡಿಯಲ್ಲಿನ ತನ್ನ ಹೆಂಡತಿ ತವರುಮನೆಯಲ್ಲಿಯೇ ತಂಗಿದ್ದ.

ಹಲವು ವರ್ಷಗಳಿಂದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿತನದ ಪವಾಡಗಳನ್ನ ಮಾಡಿ ಜನರಿಗೆ ನಂಬಿಸಿದ್ದ. ಕುದಿಯೋ ಎಣ್ಣೆ ಹಾಗೂ ಸುಡು ಸುಡು ತುಪ್ಪದಲ್ಲಿ ಕೈ ಹಾಕುತ್ತಿದ್ದ ಡೋಂಗಿ ಬಾಬಾ, ಏಕಾಏಕಿ ಮೈಮೇಲೆ ದೇವರ ಬಂದಂತೆ ನಟಿಸಿ ಜನರನ್ನ ನಂಬಿಸುತ್ತಿದ್ದ ಎನ್ನಲಾಗಿದೆ.

ಬಾಬಾ ಆಸೀಪ್ ಜಾಗಿರದಾರ, ನಿಂಬೆಹಣ್ಣು, ಬೂದಿ ಕೊಟ್ಟು ಜನರಿಗೆ ಮೋಸ ಮಾಡುತ್ತಿದ್ದ ಅಂತ ಜನರು ಆರೋಪಿಸಿದ್ದಾರೆ. ಹೀಗಾಗಿ ಈ ಡೋಂಗಿ ಬಾಬಾ ನಂಬಿ ಮೋಸ ಹೋದ ಜನ್ರರು ರೊಚ್ಚಿಗೆದ್ದಿದ್ದರು. ಜನ್ರ ಮೈಂಡ್ ವಾಶ್ ಮಾಡಿ ಸಾವಿರಾರು ರೂ. ಹಣ ಲೂಟಿ ಮಾಡುತ್ತಿದ್ದನಂತೆ. ಡೋಂಗಿ ಬಾಬಾನ ಅಸಲಿ ಮುಖವಾಡ ಗೊತ್ತಾಗುತ್ತಿದ್ದಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಾನು ಮಾಡಿದ್ದು ಮೋಸ.. ತಪ್ಪಾಗಿದೆ ಕ್ಷಮಿಸಿ ಅಂತಾ ಬೇಡಿಕೊಂಡ್ರೂ ಧರ್ಮದೇಟು ಕೊಟ್ಟ ಜನರು ಗದಗ ಗ್ರಾಮೀಣ ಠಾಣೆಯ ಪೊಲೀಸರಿಗೆ ಆತನನ್ನ ಒಪ್ಪಿಸಿದ್ದಾರೆ.

ರೋಣದಲ್ಲಿ ಅಮಾನವೀಯ ಘಟನೆ; ಮೇಲ್ಜಾತಿ ವ್ಯಕ್ತಿಯನ್ನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಅರೆಬತ್ತಲೆ ಶಿಕ್ಷೆ!

ವಿಜಯಸಾಕ್ಷಿ ಸುದ್ದಿ, ಗದಗ

ಹಾವಿನ‌ ದ್ವೇಷ 12 ವರ್ಷ…. ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಮನುಷ್ಯ ಅನ್ನೋ‌ ವಿಷ ಜಂತುವಿನ ದ್ವೇಷ ನೂರು ವರ್ಷ ಇರುತ್ತೆ. ಅದು ಯಾವಾಗಲಾದರೂ ಬುಗಿಲೆಳಬಹುದು. ಹೌದು ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ನಡೆದ ಅಮಾನವೀಯ ಘಟನೆ ಇದಕ್ಕೆ ಸಾಕ್ಷಿ ಎಂಬಂತಾಗಿದೆ.

28 ವರ್ಷಗಳ ಹಿಂದೆ ಮೇಲ್ಜಾತಿಯ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದ ತಪ್ಪಿಗೆ ದಲಿತ ಮಹಿಳೆಯನ್ನು, ಪತಿಯ ಸಂಬಂಧಿಕರು, ಕ್ಷುಲ್ಲಕ ನೆಪದಲ್ಲಿ ಅರೆಬತ್ತಲೆಂತಹ ಶಿಕ್ಷೆ ನೀಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.

ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆ ಹಾಗೂ ಅದೇ ಗ್ರಾಮದ ಈರನಗೌಡ ಕುಲಕರ್ಣಿ ಎಂಬುವವರು ಪ್ರೀತಿಸಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಈ ಮದುವೆಗೆ ಕುಲಕರ್ಣಿ ಕುಟುಂಬದ ಸಂಬಂಧಿಕರಿಂದ ವಿರೋಧ ಇತ್ತು. ಅಂದಿನಿಂದ ಇಂದಿನವರೆಗೆ ದ್ವೇಷ ಸಾಧಿಸಲಾಗುತ್ತಿತ್ತು.

ಮೊನ್ನೆ ಜುಲೈ 8 ರ ಗುರುವಾರದಂದು ಸಂಜೆ ಈರನಗೌಡ ಹಾಗೂ ಪತ್ನಿ ವಾಸವಿರುವ ಮನೆಯ ಮುಂದೆ ಆಗಮಿಸಿದ
ಬಸನಗೌಡ ಕುಲಕರ್ಣಿ ಎಂಬ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ ಎಂಬ ಆರೋಪದ ಹಿನ್ನೆಲೆಯಲ್ಲಿ ಹೊತ್ತಿದ ಜಗಳ ಈಗ ಪೊಲೀಸ್ ಠಾಣೆಯ ಮೆಟ್ಟಲು ಏರಿದೆ.

ಬಸನಗೌಡ ಕುಲಕರ್ಣಿ, ಮಲ್ಲನಗೌಡ ಕುಲಕರ್ಣಿ ಹಾಗೂ ಕುಮಾರ್ ಗೌಡ ಕುಲಕರ್ಣಿ ಮತ್ತು ಸಂಬಂಧಿಕರು ಸೇರಿ ಈರನಗೌಡ ಕುಲಕರ್ಣಿ ಹಾಗೂ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಈರನಗೌಡನ ಪತ್ನಿಯನ್ನು ಅರೆಬತ್ತಲೆ ಮಾಡಿ ಅಮಾನವೀಯವಾಗಿ ನಡೆದುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಡಲಿ ಕಾವಿನಿಂದ ಹಲ್ಲೆ ಮಾಡಿದ್ದಾರೆ.

ಇದನ್ನು ಬಿಡಿಸಲು ಬಂದ ಪತಿ ಈರನಗೌಡ, ಮಗ ಹನಮಂತಗೌಡನ ಮೇಲೂ ಬಸನಗೌಡ ಕುಲಕರ್ಣಿ ಹಾಗೂ ಸಂಬಂಧಿಕರು ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರೋಣ ತಾಲೂಕಿನಲ್ಲಿ ಅಮಾನವೀಯ ಘಟನೆ; ಮೇಲ್ಜಾತಿಯ ವ್ಯಕ್ತಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ಅರೆಬತ್ತಲೆ ಶಿಕ್ಷೆ!

ಕೆಎಸ್ ಆರ್ ಟಿಸಿ ನಿವೃತ್ತ ನೌಕರ ಸೇರಿ ಮೂವರು ಮಟಕಾ ಬುಕ್ಕಿಗಳ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಜನರಿಂದ ಹಣ ಪಡೆದು ಓಸಿ ನಂಬರ್ ಬರೆದುಕೊಡುತ್ತಿದ್ದ ಸಾರಿಗೆ ಸಂಸ್ಥೆಯ ನಿವೃತ್ತ ನೌಕರ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ಅವರಿಂದ ನಗದು 1850 ರೂ.ಗಳನ್ನು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.

ಮುಂಡರಗಿಯ ಜಾಗೃತ ಸರ್ಕಲ್ ಬಳಿ ಓಪನ್ -ಕ್ಲೋಸ್ ಹೆಸರಿನಲ್ಲಿ ಜನರಿಂದ ಹಣ ಪಡೆದು ಚೀಟಿ ಬರೆದುಕೊಡುತ್ತಿದ್ದ ರವಿ ಫಕ್ಕೀರಪ್ಪ ಹೂಗಾರ, ನಾಗಪ್ಪ ತಿಪ್ಪಣ್ಣ ಕಲ್ಲಳ್ಳಿ ಹಾಗೂ ಯಚ್ಚರಪ್ಪ ಶಂಕರಪ್ಪ ಬಡಿಗೇರ ಎಂಬುವವರನ್ನು ಮುಂಡರಗಿ ಠಾಣೆಯ ಪಿಎಸ್ಐ ನೂರಜಾನ್ ಸಬರ್‌ ಹಾಗೂ ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದಾರೆ.

ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಪ್ಪತ್ತಗುಡ್ಡದಲ್ಲಿ ಎಸ್ಪಿ ಎನ್ ಯತೀಶ್, ಪೊಲೀಸ್ ಅಧಿಕಾರಿಗಳ ಟ್ರಕಿಂಗ್

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ರವಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳ ತಂಡ ಶಿರಹಟ್ಟಿ ತಾಲೂಕಿನ ಕಡಕೋಳ ವ್ಯಾಪ್ತಿಯಲ್ಲಿ ಬರುವ ದೈವಿ ವನದಲ್ಲಿ ಟ್ರಕಿಂಗ್ ನಡೆಸಿದರು.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ನಿತ್ಯವೂ ಅನೇಕ ಕೆಲಸಗಳ ಮಧ್ಯೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಇವರಲ್ಲಿ ಮಾನಸಿಕ ಹಾಗೂ ದೈಹಿಕವಾಗಿ ಸ್ಥೈರ್ಯ ತುಂಬುವುದಕ್ಕೆ ಟ್ರಕಿಂಗ್ ಆಯೋಜಿಸಲಾಗಿತ್ತು ಎಂದರು.

ಕಪ್ಪತ್ತಗುಡ್ಡ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಲಿ

ಕಪ್ಪತ್ತಗುಡ್ಡ ಅಪಾರ ಸಸ್ಯಸಂಪತ್ತು, ಪ್ರಾಣಿ ಸಂಕುಲಗಳ ತಾಣವಾಗಿದ್ದು, ಜೊತೆಗೆ ದೇಶದಲ್ಲಿಯೇ ಕೆಲವೇ ಕೆಲವು ಸ್ಥಳಗಳಲ್ಲಿ ಇತ್ತೀಚೆಗೆ ಸ್ವಚ್ಛ ಗಾಳಿ ಇರುವ ಬಗ್ಗೆ ಅಧ್ಯಯನ ನಡೆಸಿದ್ದು ಅದರಲ್ಲಿ ಕಪ್ಪತ್ತಗುಡ್ಡ ಪ್ರದೇಶವೂ ಸಹ ಸೇರಿದ್ದು ಹೆಮ್ಮೆಯ ವಿಷಯವಾಗಿದೆ. ಆದ್ದರಿಂದ ಇಂತಹ ಹಲವು ವಿಶೇಷತೆಗಳನ್ನು ಒಳಗೊಂಡಂತಹ ಕಪ್ಪತ್ತಗುಡ್ಡ ಪ್ರದೇಶವನ್ನು ಸಂರಕ್ಷಿಸುವುದು ಸಾರ್ವಜನಿಕರು ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಬೇಕೆಂದು ಎಸ್ಪಿ ಯತಿಶ್ ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಕಾಣಿಯಾಗಿದ್ದ ಮಹಿಳೆ ಶವವಾಗಿ ಪತ್ತೆ

ವಿಜಯಸಾಕ್ಷಿ ಸುದ್ದಿ, ಗದಗ

ಕಳೆದ ಎರಡು ದಿನಗಳ ಹಿಂದೆ ಕಾಣಿಯಾಗಿದ್ದ ಮಹಿಳೆ ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಹುಡ್ಕೋ ಕಾಲೂನಿಯ ಅನಸೂಯಾ ಚಿಕ್ಕನಗೌಡ್ರ ಎಂಬ ವೃದ್ಧೆಯ ಕಾಣಿಯಾಗಿ ಇಂದು ಶವವಾಗಿ ಪತ್ತೆಯಾದವರು.

ಸಾವಿನ‌ ಹಾಟ್ ಸ್ಪಾಟ್ ಆಗಿರುವ ಭೀಷ್ಮಕೆರೆ ಪಕ್ಕದಲ್ಲಿ ಇರುವ ಸಿಂಹದಕೆರೆಯಲ್ಲಿ ಇಂದು ಬೆಳಗಿನ ಜಾವ ಮಹಿಳೆಯೊಬ್ಬರ ಶವ ತೇಲಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಶಹರ ಠಾಣೆಯ ಪೊಲೀಸರು ಮಹಿಳೆಯ ಶವ ಪರಿಶೀಲಿಸಿದಾಗ ಹೆಸರು, ವಿಳಾಸ ಪತ್ತೆಯಾಗಿದೆ.

ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ ಜಿಪಂ ಸಿಇಓ ಸ್ಥಾನಕ್ಕೆ ಫೌಜಿಯಾ ತರನ್ನುಮ್

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ತೋಟಗಾರಿಕೆ ಇಲಾಖೆಯಲ್ಲಿ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ  2015 ಬ್ಯಾಚಿನ ಐಎಎಸ್ ಅಧಿಕಾರಿಯಾದ ಫೌಜಿಯಾ ತರನ್ನುಮ್ ಅವರನ್ನು ಕೊಪ್ಪಳ ಜಿಲ್ಲಾಪಂಚಾಯತಿಯ ಸಿಇಓ ಸ್ಥಾನಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ರಘುನಂದನ್ ಮೂರ್ತಿಯವರ ವರ್ಗಾವಣೆಯ ನಂತರ ತೆರವಾಗಿದ್ದ ಸಿಇಓ ಸ್ಥಾನಕ್ಕೆ ಫೌಜಿಯಾ ತರನ್ನುಮ್ ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಿಡಿಲು ಬಡಿದು ಯುವಕ ಹಾಗೂ ಎರಡು ಎತ್ತು ಸಾವು!

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಮಂಗಳವಾರ ಸಂಜೆ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ಯಲಬುರ್ಗಾ ತಾಲೂಕಿನ ಗಾಣಧಾಳ ಪಂಚಾಯಿತಿ ವ್ಯಾಪ್ತಿಯ ಹಿರೇವಡ್ರಕಲ್ ಗ್ರಾಮದ ಹೊರವಲಯದಲ್ಲಿ ಸಿಡಿಲು‌ ಬಡಿದು ಓರ್ವ ಯುವಕ‌‌ ಸಾವನ್ನಪ್ಪಿದ್ದು, ಹಾಗೂ ಎರಡು ಎತ್ತುಗಳು ಸಹ ಅಸು ನೀಗಿವೆ.

ಮೃತ ಯುವಕನನ್ನು ದ್ಯಾಮಣ್ಣ ಪುರದ (17) ಎಂದು ಗುರುತಿಸಲಾಗಿದೆ. ಮಳೆ ಬಂದ ವೇಳೆ ಹೊಲದಲ್ಲಿ ತಾಯಿಯೊಂದಿಗೆ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಸಿಡಿಲಿನ ಶಾಖದಿಂದ ಯುವಕನ ತಾಯಿ ಗಾಯಗೊಂಡಿದ್ದಾರೆ.

error: Content is protected !!