ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕೃಷಿ ಹೊಂಡದಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಶುಕ್ರವಾರ ಅಪರಾಹ್ನ ಸಂಭವಿಸಿದೆ.
ಮೃತ ಬಾಲಕಿಯರನ್ನು
ಕವಿತಾ(10), ಸಂಜನಾ(9) ಎಂದು ಗುರುತಿಸಲಾಗಿದೆ.
ಹುಲಿಹೈದರ ಗ್ರಾಮ ವ್ಯಾಪ್ತಿಯ ವಿಶ್ವನಾಥ ರೆಡ್ಡಿ ಅವರ ಹೊಲದಲ್ಲಿ ಘಟನೆ ನಡೆದಿದ್ದು,
ವಿಶ್ವನಾಥ ರೆಡ್ಡಿ ಅವರ ಹೊಲದಲ್ಲಿ ಕೂಲಿ ಕೆಲಸಕ್ಕೆ ಮೃತ ಬಾಲಕಿಯರ ಪಾಲಕರು ಬಂದಿದ್ದರು ಎನ್ನಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ
ಮುಗಿಲು ಮುಟ್ಟಿತ್ತು.
ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು
ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಕೃಷಿ ಹೊಂಡದಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಶುಕ್ರವಾರ ಅಪರಾಹ್ನ ಸಂಭವಿಸಿದೆ.
ಮೃತ ಬಾಲಕಿಯರನ್ನು
ಕವಿತಾ(10), ಸಂಜನಾ(9) ಎಂದು ಗುರುತಿಸಲಾಗಿದೆ.
ಹುಲಿಹೈದರ ಗ್ರಾಮ ವ್ಯಾಪ್ತಿಯ ವಿಶ್ವನಾಥ ರೆಡ್ಡಿ ಅವರ ಹೊಲದಲ್ಲಿ ಘಟನೆ ನಡೆದಿದ್ದು,
ವಿಶ್ವನಾಥ ರೆಡ್ಡಿ ಅವರ ಹೊಲದಲ್ಲಿ ಕೂಲಿ ಕೆಲಸಕ್ಕೆ ಮೃತ ಬಾಲಕಿಯರ ಪಾಲಕರು ಬಂದಿದ್ದರು ಎನ್ನಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ
ಮುಗಿಲು ಮುಟ್ಟಿತ್ತು.
ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಗುವಿನ ಗಂಟಲಲ್ಲಿ ಸಿಲುಕಿದ ಮೆಂತಾಲ್ ಬಾಕ್ಸ್!!

–ಯಶಸ್ವಿಯಾಗಿ ಹೊರತೆಗೆದ ವೈದ್ಯರು
–ಜಿಲ್ಲಾಸ್ಪತ್ರೆ ವೈದ್ಯರಿಗೆ ಕೃತಜ್ಞತೆ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದ ರೈತ ನಿಂಗಪ್ಪ ಗಾಣದಾಳ ಅವರ ಎಂಟು ತಿಂಗಳ ಕೂಸು ಮಹಾಂತೇಶ ಮನೆಯಲ್ಲಿ ಆಟವಾಡುವಾಗ ನೆಲದಲ್ಲಿ ಬಿದ್ದಿದ್ದ ಮೆಂತಾಲ್ ಬಾಕ್ಸ್ ಬಾಯಲ್ಲಿ ಇಟ್ಟುಕೊಂಡು ನುಂಗಲು ಯತ್ನಿಸಿದೆ. ಮೆಂತಾಲ್ ಡಬ್ಬಿ ಪುಣ್ಯಕ್ಕೆ ಹೊಟ್ಟೆ ಸೇರದೆ ಗಂಟಲಲ್ಲಿ ಸಿಲುಕಿದೆ.
ಮಗು ಡಬ್ಬಿ ಬಾಯಲ್ಲಿಟ್ಟುಕೊಳ್ಳುವುದನ್ನು ನೋಡಿದ ಮಗುವಿನ ಅಣ್ಣ, ತನ್ನ ತಾಯಿಗೆ ವಿಷಯ ತಿಳಿಸಿದ್ದಾನೆ. ಮನೆಗೆಲಸ ಬಿಟ್ಟು ಬಂದ ತಾಯಿ ಗಂಟಲಿನಿಂದ ಡಬ್ಬಿ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಆಗಲಿಲ್ಲ. ಕೊನೆಗೆ ಮಗುವಿನ ರೋಧನ ಕಂಡು ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಜಿಲ್ಲಾಸ್ಪತ್ರೆಯ ಗಂಟಲು ತಜ್ಞ ಡಾ.ಮಲ್ಲಿಕಾರ್ಜುನ ಸ್ಕ್ಯಾನ್ ಮಾಡಿ ಗಂಟಲಲ್ಲಿ ಪುಟ್ಟ ಡಬ್ಬಿ ಇರುವುದನ್ನು ಖಚಿತ ಪಡಿಸಿಕೊಂಡು ಲಘು ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಮೆಂತಾಲ್ ಡಬ್ಬಿಯನ್ನು ಮಗುವಿನ ಗಂಟಲಿನಿಂದ ಹೊರ ತೆಗೆದಿದ್ದಾರೆ. ಅಂದ ಹಾಗೆ ಈ ಘಟನೆ ನಡೆದಿದ್ದು ಜುಲೈ 1ರಂದು.
“ಸ್ವಲ್ಪ ತಡವಾಗಿದ್ದರೆ ಮಗುವಿನ ಪ್ರಾಣಕ್ಕೆ ಅಪಾಯ ಇತ್ತು. ಮಗುವಿಗೆ ಜೊಲ್ಲು ನುಂಗಲು ಆಗದ ಸ್ಥಿತಿ ಎದುರಿಸುತ್ತಿತ್ತು. ಧ್ವನಿಯೂ ಬರುತ್ತಿರಲಿಲ್ಲ. ಒಟ್ಟಾರೆ ತನ್ನ ನೋವನ್ನ ಹೇಳಿಕೊಳ್ಳಲಾಗದ ಸ್ಥಿತಿಯಲ್ಲಿ ಮಗು ಇತ್ತು. ಆಸ್ಪತ್ರೆಗೆ ಬಂದು ವಿಷಯ ತಿಳಿಸಿದ ಹದಿನೈದು ನಿಮಿಷದಲ್ಲಿ ಮಗುವಿನ ಗಂಟಲಲ್ಲಿದ್ದ ಪ್ಲಾಸ್ಟಿಕ್ ಡಬ್ಬಿಯನ್ನು ಹೊರತೆಗೆದಿದ್ದೇವೆ. ಪೋಷಕರು ಗಾಬರಿಯಲ್ಲಿ ಗದಗ, ಹುಬ್ಬಳ್ಳಿಗೆ ಹೋಗಲು ಯತ್ನಿಸಿದ್ದರೆ ಸಮಯ ಮೀರಿ ಹೋಗುತ್ತಿತ್ತು. ಜೊತೆಗೂ ಕೊಪ್ಪಳ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜಿನಲ್ಲೂ ಉತ್ತಮ ಚಿಕಿತ್ಸೆ ಸಿಗುತ್ತದೆ ಎಂಬುದಕ್ಕೆ ಈ ಪ್ರಕರಣ ನಿದರ್ಶನವಾಯಿತು.”
-ಡಾ.ಮಲ್ಲಿಕಾರ್ಜುನ, ಕಿವಿ, ಮೂಗು ಹಾಗೂ ಗಂಟಲು ತಜ್ಞ, ಜಿಲ್ಲಾಸ್ಪತ್ರೆ, ಕೊಪ್ಪಳ.

ಹೊಲದಾಗ ಕೆಲಸ ಮಾಡಾಕತ್ತಿದ್ದೆ. ನಮ್ಮ ಹುಡುಗ ಬಂದು ವಿಷಯ ತಿಳಿದ ಕೂಡಲೇ ಗಾಬರಿಯಾಗಿ ಓಡಿ ಬಂದೆ. ತಡ ಮಾಡದನ ಜಿಲ್ಲಾಸ್ಪತ್ರೆಗೆ ಕರಕೊಂಡು ಬಂದೆ. ಇಲ್ಲಿನ ಡಾಕ್ಟರು ನಮ್ಮ ಮಗುವಿನ ಜೀವ ಉಳಿಸಿದ್ರು. ಅವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದ್ರು ಕಡಮಿನ.
-ನಿಂಗಪ್ಪ ಗಾಣದಾಳ, ರೈತ, ಹುಣಸಿಹಾಳ.
ಕೊರೊನಾ; ಜಿಲ್ಲೆಯ ಜನರಿಗೆ ಶುಭ ಸುದ್ದಿ ನೀಡಿದ ಶುಕ್ರವಾರ, ಒಂದಂಕಿಗೆ ಇಳಿದ ಸೋಂಕು!
ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯ ಜನರಿಗೆ ಶುಕ್ರವಾರ ಶುಭ ಸುದ್ದಿ ನೀಡಿದೆ. ಇದುವರೆಗೂ ಎರಡಂಕಿಗೆ ಸೀಮಿತವಾಗಿದ್ದ ಸೋಂಕು ಇಂದು ಒಂದಂಕಿಗೆ ಬಂತು ನಿಂತಿದೆ. ಇಂದು 09 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಶುಕ್ರವಾರವೂ ಸಾವಿನ ಸಂಖ್ಯೆ ಒಂದಕ್ಕೆ ಸೀಮಿತವಾಗಿದೆ.
ಇಂದು 09 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25838 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -04, ಮುಂಡರಗಿ-02, ನರಗುಂದ-00, ರೋಣ-03, ಶಿರಹಟ್ಟಿ-00, ಹೊರಜಿಲ್ಲೆಯ-00, ಸೇರಿದಂತೆ 09 ಪ್ರಕರಣಗಳು ದೃಢಪಟ್ಟಿವೆ.
ಶುಕ್ರವಾರ ಕೋವಿಡ್ ನಿಂದ ಒಬ್ಬರು ಮೃತಪಟ್ಟ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಹೊರಡಿಸಿದ ವರದಿಯಲ್ಲಿ ಮಾಹಿತಿ ಇದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ 307 ಜನರು ಮೃತಪಟ್ಟಂತಾಗಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿ 60 ವರ್ಷದ ಮಹಿಳೆ ಜೂನ್ 26 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಜುಲೈ 1 ರಂದು ಮೃತಪಟ್ಟಿದ್ದಾರೆ.
ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನೆರವೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು 24 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 25336 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 195 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕೋವಿಡ್-19 ಸೋಂಕು ನಿಯಂತ್ರಣ; ಸೋಮವಾರದವರೆಗೂ ವೀಕೆಂಡ್ ಕರ್ಫ್ಯೂ
ವಿಜಯಸಾಕ್ಷಿ ಸುದ್ದಿ, ಗದಗ
ಕೋವಿಡ್-19 ಸೋಂಕು ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳನ್ನು ಸಡಿಲಗೊಳಿಸಿದ ಆದೇಶ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ವಾರಾಂತ್ಯ ಕರ್ಪ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯರೆಗೆ ಜಾರಿಯಿಲ್ಲಿರಲಿದೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದ್ದು, ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಗಿನ ಅಗತ್ಯ ಆರ್ಥಿಕ ಚಟುವಟಿಕೆ ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಆಹಾರ ಪದಾರ್ಥ, ದಿನಸಿ, ತರಕಾರಿ, ಹಣ್ಣು ಮಾಂಸ ಮೀನು, ಹಾಲು ಡೈರಿ ಉತ್ಪನ್ನ, ಅಗತ್ಯ ವಸ್ತು, ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ನಿಗಧಿಯಾದ ಮದುವೆ ಕಾರ್ಯಕ್ರಮಗಳಿಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 5 ಜನ ಪಾಲ್ಗೊಳ್ಳಲು ಅವಕಾಶ.
ಹೋಟೆಲ್, ರೆಸ್ಟೋರೆಂಟ್, ಬಾರಗಳಲ್ಲಿ ಪಾರ್ಸಲ್ ನೀಡಲು ಅನುಮತಿಸಿದೆ. ಕೃಷಿ ಚುಟುವಟಿಕೆ ಕೈಗೊಳ್ಳಲು ಬೀಜ ಗೊಬ್ಬರದ ಅಂಗಡಿ, ರಾಸಾಯನಿಕ ಅಂಗಡಿ ತೆರೆಯಬಹುದು. ಇವುಗಳಿಗೂ ಸಹ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಅವಕಾಶವಿದೆ. ಜೊತೆಗೆ ಸಾರ್ವಜನಿಕ ಸಾರಿಗೆಗೆ ಅವಕಾಶವಿದೆ.
ಇನ್ನುಳಿದಂತೆ ಸರ್ಕಾರಿ ನೌಕರರು ಅಗತ್ಯ ಸೇವೆಗೆ ನಿಯೋಜಿತರಿಗೆ, ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಿದೆ. ಸಾರ್ವಜನಿಕರು ಅನಾರೋಗ್ಯವಾದಲ್ಲಿ ಆಸ್ಪತ್ರೆಗಳಿಗೆ ತೆರಳಲು, ಹಾಗೂ ಲಸಿಕೆ ಹಾಕಿಸಿಕೊಳ್ಳು ತೆರಳಲು ಅವಕಾಶ ನೀಡಲಾಗಿದೆ.
ಈ ವೇಳೆ ರೋಗಿಗಳು ಅವರ ಸಹಾಯಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳಿಗೆ ಅವಕಾಶವಿರುತ್ತದೆ, ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬೇಕು. ಒಟ್ಟಾರೆ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆ ಹೊರತುಪಡಿಸಿ ವಾಹನಗಳ ಅನಗತ್ಯ ಓಡಾಟಕ್ಕೆ ನಿರ್ಭಂಧಿಸಲಾಗಿದೆ.
ಅದರಂತೆ ಟೆಲಿಕಾಂ ಇಂಟರ್ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ, ಆದರೆ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು, ವೈದ್ಯಕೀಯ ತುರ್ತು ಸೇವೆಗಳು ಅಗತ್ಯ ಸೇವೆಗಳಾದ ಫಾರ್ಮಸಿಗಳ ಕಾರ್ಯಾಚರಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ, ಎಲ್ಲಾ ತರಹದ ಸರಕುಗಳು ಮತ್ತು ಸರಕು ಸಾಗಾಟವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ, ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗಳಿಗೆ ಸರಕಾರದ ಮಾರ್ಗಸೂಚಿ ಅನ್ವಯ ಅವಕಾಶ ಇರುತ್ತದೆ. ರೈಲು ವಿಮಾನ ಸೇವೆ ಎಂದಿನಂತೆ ಅವಕಾಶವಿದ್ದು ಟಿಕೆಟ್ ಅನ್ನು ಪಾಸ್ ರೀತಿಯಲ್ಲಿ ಬಳಸಲು ಸೂಚಿಸಲಾಗಿದೆ.
ಸಾರ್ವಜನಿಕರು ವಿನಾಕಾರಣ ಮನೆಯಿಂದ ಹೊರಬರದೇ ಮನೆಯಲ್ಲೇ ಇರುವ ಮೂಲಕ ಸೋಂಕು ನಿಯಂತ್ರಣದಲ್ಲಿ ಸಹಕರಿಸಬೇಕು. ಅಗತ್ಯ ಸಂದರ್ಭದಲ್ಲಿ ಮನೆಯಿಂದ ಹೊರಬಂದಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.
ವಿಕೇಂಡ್ ಕರ್ಫ್ಯೂ; ಪ್ರಯಾಣಿಕರಿದ್ದರೆ ಮಾತ್ರ ಬಸ್ ಸಂಚಾರ
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ ವರೆಗೆ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಶನಿವಾರ ಹಾಗೂ ರವಿವಾರದಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಹೊಸೂರು, ಗೋಕುಲ ರಸ್ತೆ ಬಸ್ ನಿಲ್ದಾಣ, ಕಲಘಟಗಿ,ತಡಸ, ಕುಂದಗೋಳ, ನವಲಗುಂದ, ಅಣ್ಣಿಗೇರಿ ಬಸ್ ನಿಲ್ದಾಣಗಳಿಂದ ಬಸ್ಸುಗಳ ಸಂಚಾರ ಎಂದಿನಂತೆ ಇರುತ್ತದೆ.
ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳು ಕಾರ್ಯಾಚರಣೆ ಮಾಡಲಾಗುತ್ತದೆ. ಮುಂಗಡ ಬುಕ್ಕಿಂಗ್ ಪ್ರಯಾಣಿಕರ ಸಂಖ್ಯೆ ಆಧರಿಸಿ ದೂರ ಮಾರ್ಗದ ರಾತ್ರಿ ಸಾರಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಸೋಮವಾರ ಬೆಳಿಗ್ಗೆ 6 ರಿಂದ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸಲಿವೆ ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ
ತಿಳಿಸಿದ್ದಾರೆ.
ಕಳೆದ ವಾರದ ಅವಧಿಯಲ್ಲಿ ದಿನ
ನಿತ್ಯ 240ರಿಂದ 250ಬಸ್ ಗಳು ಸಂಚರಿಸಿದ್ದವು. ಆದರೆ ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಜನರ ಓಡಾಟ ಬಹಳಷ್ಟು ಕ್ಷೀಣಿಸಿತ್ತು. ಹೀಗಾಗಿ ಕೇವಲ 55 ಬಸ್ಸುಗಳು ಮಾತ್ರ ಸಂಚರಿಸಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಇರುವಂತ ಮಾರ್ಗಗಳಲ್ಲಿ ಬಸ್ ಗಳನ್ನು ಕಾರ್ಯಾಚರಣೆ ಮಾಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇಂಜಿನಿಯರಿಂಗ್ ಕಾಲೇಜ್ ಗೆ ಗುಡ್ ಬೈ; ಸಾವಯವ ತರಕಾರಿ ಬೆಳೆದು ಗ್ರಾಹಕರ ಬಾಗಿಲಿಗೆ ತಲುಪಿಸುತ್ತಿರುವ ದಂಪತಿ
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಸಾವಯವ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ತಮ್ಮ ಪತ್ನಿಯ ಉತ್ಸಾಹದಿಂದ ಪ್ರೇರೆಪಣೆ ಪಡೆದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು, ತಮ್ಮ ಹುದ್ದೆಯನ್ನು ತ್ಯಜಿಸಿ ಶುದ್ಧ ಮತ್ತು ಗುಣಮಟ್ಟದ ತರಕಾರಿಗಳನ್ನು ಸಾವಯವ ಪದ್ಧತಿಯಲ್ಲಿ ಬೆಳೆದು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ
ಈ ಹಿಂದೆ ಹುಬ್ಬಳ್ಳಿಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಗದುಗಿನ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪ್ರಕಾಶ ಹುಬ್ಬಳ್ಳಿ ಅವರು, ತಮ್ಮ ಪತ್ನಿ ಕುಸುಮಾ ಹುಬ್ಬಳ್ಳಿ ಅವರು ಸಾವಯವ ಕೃಷಿಯಲ್ಲಿ ಹೊಂದಿದ ಆಸಕ್ತಿಯಿಂದ ಪ್ರಭಾವಿತರಾಗಿ, ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಹುದ್ದೆ ಬಿಟ್ಟು ದಂಪತಿಗಳಿಬ್ಬರೂ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಒಟ್ಟು 4 ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುವ ಮೂಲಕ ಸಾವಯವ ಬೇಸಾಯ ಪ್ರಾರಂಭಿಸಿದರು.
ಈಗ ತಮ್ಮ ಉತ್ಪನ್ನಗಳಿಗೆ ಹುಬ್ಬಳ್ಳಿ ನಗರದ ನಿವಾಸಿಗಳಿಂದ ಆನ್‌ಲೈನ್ ಮತ್ತು ವಾಟ್ಸ್ ಅಪ್ ಮೂಲಕ ಆರ್ಡರ್ ಪಡೆದುಕೊಂಡು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡುವ ಮೂಲಕ ಮಾರುಕಟ್ಟೆ ಕಂಡುಕೊಂಡಿದ್ದಾರೆ. ಪ್ರಸ್ತುತ ಒಟ್ಟು 55 ವಿವಿಧ ರೀತಿಯ ತರಕಾರಿ ಬೆಳೆ ಬೆಳೆಯುತ್ತಿರುವ ಇವರು,ಅದರಲ್ಲಿ 40 ಬಗೆಯ ದೇಶಿ ತರಕಾರಿ ಹಾಗೂ 15 ಬಗೆಯ ವಿದೇಶಿ ( Exotic ) ತರಕಾರಿಗಳನ್ನು ಜಮೀನಿನಲ್ಲಿ ನಾಟಿ ಮಾಡುವುದರಿಂದ ಹಿಡಿದು ಕಟಾವು ಮಾಡುವವರೆಗೆ ಬೆಳೆಯ ಪೋಷಣೆ ಮತ್ತು ಸಂರಕ್ಷಣೆಯನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ನಿರ್ವಹಿಸುತ್ತಿದ್ದಾರೆ.

ಎರೆಹುಳು ಗೊಬ್ಬರ , ಬೇವಿನ ಹಿಂಡಿ,ಬೇವಿನ ಎಣ್ಣೆ, ಬೇವಿನ ಅಸ್ತ್ರ, ಅಗ್ನಿ ಅಸ್ತ್ರ, ಹುಳಿ ಮಜ್ಜಿಗೆ, ಕೀಟಗಳ ನಿರ್ವಹಣೆಗೆ ಸ್ಟಿಕಿ ಟ್ರ್ಯಾಪ್, ಲೈಟ್ ಟ್ರಾಪ್, ಚೆಂಡೂ ಹೂವು ಬೆಳೆದು ಹುಬ್ಬಳ್ಳಿ ನಗರದ ಗ್ರಾಹಕರ ಮನೆ ಬಾಗಿಲಿಗೆ ಗುಣಮಟ್ಟದ ತರಕಾರಿಗಳನ್ನು ತಮ್ಮ “ನೇಚರ್ ಫಸ್ಟ್ ಫಾರ್ಮ್” ಮೂಲಕ ಸರಬರಾಜು ಮಾಡುತ್ತಿದ್ದಾರೆ. ತೋಟಗಾರಿಕೆ ಉಪನಿರ್ದೇಶಕ ಕಾಶೀನಾಥ ಭದ್ರುನವರ , ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಹಾಂತೇಶ ಪಟ್ಟಣಶೆಟ್ಟಿ , ಸಹಾಯಕ ತೋಟಗಾರಿಕೆ ಅಧಿಕಾರಿ ಕೆ.ವಿ ಅಂಗಡಿ ಅವರ ಮಾರ್ಗದರ್ಶನದಲ್ಲಿ , ತೋಟಗಾರಿಕೆ ಇಲಾಖೆ ಯೋಜನೆಗಳಾದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊದಿಕೆ ಮತ್ತು ಐಐಹೆಚ್‌ಆರ್ ತರಕಾರಿ ಸ್ಪೆಷಲ್ ಸೌಲಭ್ಯಗಳನ್ನು ಪಡೆದಿದ್ದಾರೆ.

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಈ ಮಾಹಿತಿ ಯುಗದ ಸಾಧನಗಳನ್ನು ಬಳಸಿಕೊಂಡು, ನೈಸರ್ಗಿಕ ಸಾವಯವ ವಿಧಾನಗಳಲ್ಲಿ ಬೆಳೆದ ತರಕಾರಿಗಳನ್ನು ಗ್ರಾಹಕರ ಮನೆಬಾಗಿಲಿಗೆ ತಲುಪಿಸುತ್ತಿರುವ, ವರ್ಷವಿಡೀ ಆದಾಯ ಪಡೆಯುತ್ತಿರುವ ದಂಪತಿಗಳ ಕಾರ್ಯ ಇತರರಿಗೆ ಮಾದರಿಯಾಗಿದೆ.
ಕೊಪ್ಪಳ ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿ ಪ್ರಕಟ


ವಿಜಯಸಾಕ್ಷಿ ಸುದ್ದಿ ಕೊಪ್ಪಳ:
ರಾಜ್ಯ ಚುನಾವಣಾ ಆಯೋಗವು ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸ್ಥಾನ ಹಾಗೂ ಮೀಸಲಾತಿ ಪಟ್ಟಿಯನ್ನು ಜುಲೈ 1ರಂದು ಪ್ರಕಟಿಸಿ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 8ರೊಳಗಾಗಿ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆ ಸಮೇತ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಹೆಚ್ಚಿನ ವಿವರಗಳಿಗೆ ಚುನಾವಣಾ ಆಯೋಗ ಪ್ರಕಟಿಸಿದ ಕೋಷ್ಟಕ ಇಲ್ಲಿದೆ..
ನಟ ಚೇತನ್ ಫೌಂಡೇಷನ್‌ನಿಂದ ಕಲಾವಿದರಿಗೆ ಹಾಗೂ ಬಡವರಿಗೆ ಆಹಾರದ ಕಿಟ್ ವಿತರಣೆ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕೋವಿಡ್ 19 ಎರಡನೇ ಅಲೆಯಿಂದ ಸಂಕಷ್ಟದಲ್ಲಿರುವ ಕೊಪ್ಪಳ ಜಿಲ್ಲೆಯ ಕಲಾವಿದರಿಗೆ ಹಾಗೂ ಕಡು ಬಡವರಿಗೆ ಚೇತನ್ ಫೌಂಡೇಶನ್ (ರಿ) ಬೆಂಗಳೂರು ಇವರ ವತಿಯಿಂದ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ 50 ಕುಟುಂಬಗಳಿಗೆ ಆಹಾರ ಕಿಟ್‍ಗಳ ವಿತರಣೆ ಮಾಡಲಾಯಿತು.
ಚೇತನ್ ರವರು ನಟರಷ್ಟೇ ಅಲ್ಲದೆ ಸಾಮಾಜಿಕ ಹೋರಾಟಗಾರರು,ಬಡವರಿಗೆ,ದೀನ ದಲಿತರಿಗೆ, ನೊಂದ ಜನರಿಗೆ, ನಿರ್ಗತಿಕರಿಗೆ ಸಹಾಯಮಾಡುತ್ತ ತಮ್ಮ ನಿಜವಾದ ವ್ಯಕ್ತಿತ್ವವನ್ನು ಮೆರೆದಿದ್ದಾರೆ.
ಕೊಪ್ಪಳ ಜಿಲ್ಲೆಗೆ ಅಷ್ಟೇ ಅಲ್ಲದೆ ಇಡೀ ಕರ್ನಾಟಕದಾದ್ಯಂತ ಉಚಿತ ಊಟ ಮಾಸ್ಕ್ ಸ್ಯಾನಿಟೈಸರ್ ಆಹಾರ ಕಿಟ್ ನೀಡುವುದರ ಮೂಲಕ ಬಡವರ ಹಸಿವನ್ನ ನೀಗಿಸಿದ್ದಾರೆ.
ಅದೆಷ್ಟೋ ಸಿನಿಮಾ ಸ್ಟಾರ್ ನಟರೆಲ್ಲ ಕೋಟಿಗಟ್ಟಲೆ ಸಂಪಾದಿಸಿದರೂ ಕೂಡ ಇಂತಹ ಒಳ್ಳೆಯ ಕೆಲಸಮಾಡಲು ಮುಂದೆ ಬರುವುದಿಲ್ಲ ಇಂಥವರ ಮಧ್ಯೆ ಸಾಮಾಜಿಕ ಕಳಕಳಿ ಇರುವವರು ನಮಗೆ ಕಾಣಸಿಗುವುದು ಬೆರಳೆಣಿಕೆಯಷ್ಟು ಮಾತ್ರ.
ಚೇತನ್ ರವರಿಗೆ ಅವರ ಒಳ್ಳೆಯ ವ್ಯಕ್ತಿತ್ವಕ್ಕೆ ಸಾಮಾಜಿಕ ಕಾರ್ಯಕ್ಕೆ ಚೇತನ್ ಫೌಂಡೇಶನ್‍ಗೆ ಕೊಪ್ಪಳ ಜಿಲ್ಲೆಯ ಪರವಾಗಿ, ಎಲ್ಲಾ ಕಲಾವಿದರ ಪರವಾಗಿ, ಬಡವರ ಪರವಾಗಿ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತಾ, ಇಂತಹ ಒಳ್ಳೆಯ ಕೆಲಸ ಮಾಡಲು ಆ ದೇವರು ಇನ್ನಷ್ಟು ಶಕ್ತಿ ಕೊಡಲೆಂದು ಆ ದೇವರಲ್ಲಿ ಬೇಡಿಕೊಳ್ಳುತ್ತೇವೆ ಎಂದು ಗ್ರಾಮದ ಫಲಾನುಭವಿಗಳು ಹಾರೈಸಿದ್ದಾರೆ.
ಕೊರೊನಾ; ಸೋಂಕು ಮತ್ತಷ್ಟು ಇಳಿಮುಖ, ಇಬ್ಬರ ಸಾವು
ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಇಂದು 15 ಜನರಿಗೆ ಸೋಂಕು ಕಾಣಿಸಿಕೊಂಡಿದೆ.ಗುರುವಾರವೂ ಸಾವಿನ ಸರಣಿ ಮುಂದುವರೆದಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು 15 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25829ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -09, ಮುಂಡರಗಿ-01, ನರಗುಂದ-00, ರೋಣ-03, ಶಿರಹಟ್ಟಿ-01, ಹೊರಜಿಲ್ಲೆಯ-01, ಸೇರಿದಂತೆ 15 ಪ್ರಕರಣಗಳು ದೃಢಪಟ್ಟಿವೆ.
ಗುರುವಾರವೂ ಕೋವಿಡ್ ನಿಂದ ಇಬ್ಬರು ಮೃತಪಟ್ಟ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಹೊರಡಿಸಿದ ವರದಿಯಲ್ಲಿ ಮಾಹಿತಿ ಇದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ 306 ಜನರು ಮೃತಪಟ್ಟಂತಾಗಿದೆ.
ಜಿಲ್ಲೆಯ ರೋಣ ತಾಲೂಕಿನ ಸರ್ಜಾಪೂರ ನಿವಾಸಿ 60 ವರ್ಷದ ವ್ಯಕ್ತಿ ಮೇ-30 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಜೂನ್ 27 ರಂದು ಮೃತಪಟ್ಟಿದ್ದಾರೆ.
ಗದಗ ನಗರದ ನಿವಾಸಿ 65 ವರ್ಷದ ಮಹಿಳೆ ಮೇ-01 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 29 ರಂದು ಮೃತಪಟ್ಟಿದ್ದಾರೆ.
ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನೆರವೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು 25 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 25312 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 211 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

