Home Blog Page 3146

25 ಲಕ್ಷದ ಚಿನ್ನಾಭರಣ ಎಗರಿಸಿದ ಖತರ್ನಾಕ್ ಖದೀಮ ಅರೆಸ್ಟ್

0

ಬೆಂಗಳೂರು:- ದಂಪತಿಯ ಗಮನ ಬೇರೆಡೆ ಸೆಳೆದು ಚಿನ್ನಾಭರಣವಿದ್ದ ಬ್ಯಾಗ್‌ ಎಗರಿಸಿದ್ದ ಪ್ರಕರಣ ಸಂಬಂಧ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್‌ನ ಸದಸ್ಯನೊಬ್ಬನನ್ನು ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಿರಿ ಕುಮಾರ್‌ ಅಲಿಯಾಸ್‌ ಗಿರಿ(41) ಬಂಧಿತ ಆರೋಪಿ. ಆರೋಪಿಯಿಂದ ₹25 ಲಕ್ಷ ಮೌಲ್ಯದ 449 ಗ್ರಾಂ ಚಿನ್ನ ಮತ್ತು ವಜ್ರಾಭರಣ ಜಪ್ತಿ ಮಾಡಲಾಗಿದೆ.

ಅ.21ರಂದು ಕೆಂಗೇರಿ ಮೈಸೂರು ರಸ್ತೆಯ ಬಿಡಿಎ ಅಪಾರ್ಟ್‌ಮೆಂಟ್‌ ಬಳಿ ರಾಜೇಶ್‌ ಶ್ರೀವಾಸ್ತವ್‌ ಅವರು ತಮ್ಮ ಪತ್ನಿ ಜತೆಗೆ ಕಾರಿನಲ್ಲಿ ಹೋಗುವಾಗ ಕೆಲ ದುಷ್ಕರ್ಮಿಗಳು ಕಾರು ಪಂಕ್ಚರ್‌ ಆಗಿದೆ ಎಂದು ದಂಪತಿಯ ಗಮನ ಬೇರೆಡೆ ಸೆಳೆದು ಕಾರಿನಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರುದಾರ ರಾಜೇಶ್‌ ದಂಪತಿ ಕೆಂಗೇರಿಯ ಮೈಸೂರು ರಸ್ತೆಯ ಬಿಡಿಎ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದಾರೆ. ಕೆಲ ತಿಂಗಳ ಹಿಂದೆ ಚಂದ್ರಾಲೇಔಟ್‌ನ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಲಾಕರ್‌ನಲ್ಲಿ ಸುಮಾರು 500 ಗ್ರಾಂ ಚಿನ್ನಾಭರಣಗಳನ್ನು ಇರಿಸಿದ್ದರು. ಅ.21ರಂದು ರಾಜೇಶ್‌ ದಂಪತಿ ಬ್ಯಾಂಕ್‌ ತೆರಳಿ ಲಾಕರ್‌ನಲ್ಲಿದ್ದ ಚಿನ್ನಾಭರಣ ತೆಗೆದುಕೊಂಡು ಕಾರಿನಲ್ಲಿ ಇರಿಸಿಕೊಂಡು ಮನೆ ಕಡೆಗೆ ಹೊರಟ್ಟಿದ್ದಾರೆ.

ಈ ನಡುವೆ ಬ್ಯಾಂಕ್‌ ಬಳಿ ಕುಳಿತು ರಾಜೇಶ್‌ ದಂಪತಿ ಚಲನವಲನ ಗಮನಿಸಿರುವ ದುಷ್ಕರ್ಮಿಗಳು, ಕಾರಿನ ಹಿಂಬದಿ ಚಕ್ರ ಪಂಕ್ಚರ್‌ ಮಾಡಿದ್ದಾರೆ. ಕಾರು ಪಂಕ್ಚರ್‌ ಆಗಿರುವುದನ್ನು ಗಮನಿಸದ ದಂಪತಿ ಮನೆ ಕಡೆಗೆ ಹೊರಟ್ಟಿದ್ದಾರೆ. ಕೆಂಗೇರಿ ಮೈಸೂರು ರಸ್ತೆಯ ಬಿಡಿಎ ಅಪಾರ್ಟ್‌ಮೆಂಟ್‌ ಬಳಿ ನಿಧಾನಗತಿಯಲ್ಲಿ ಹೋಗುವಾಗ ದ್ವಿಚಕ್ರ ವಾಹನದಲ್ಲಿ ಫಾಲೋ ಮಾಡಿಕೊಂಡು ಬಂದಿರುವ ಇಬ್ಬರು ದುಷ್ಕರ್ಮಿಗಳು, ಕಾರಿನ ಟೈಯರ್‌ ಪಂಕ್ಚರ್‌ ಆಗಿದೆ ಎಂದು ಹೇಳಿದ್ದಾರೆ. ಈ ವೇಳೆ ರಾಜೇಶ್‌ ಕಾರು ಪಕ್ಕಕ್ಕೆ ಹಾಕಿ ನೋಡಿದಾಗ ಟೈಯರ್‌ ಪಂಕ್ಚರ್‌ ಆಗಿರುವುದು ಕಂಡು ಬಂದಿದೆ.

ಈ ವೇಳೆ ಮತ್ತಿಬ್ಬರು ದ್ವಿಚಕ್ರ ವಾಹನದಲ್ಲಿ ಬಂದು ಸಮೀಪದಲ್ಲೇ ಪಂಕ್ಚರ್‌ ಅಂಗಡಿ ಇದೆ ಎಂದು ದಂಪತಿ ಗಮನ ಬೇರೆಡೆ ಸೆಳೆದಿದ್ದಾರೆ. ಈ ವೇಳೆ ಕಾರಿನಿಂದ ದಂಪತಿ ಕೆಳಗೆ ಇಳಿದು ಪಂಕ್ಚರ್‌ ಅಂಗಡಿ ಕಡೆಗೆ ನೋಡುವಾಗ, ಇನ್ನಿಬ್ಬರು ದ್ವಿಚಕ್ರ ವಾಹನದಲ್ಲಿ ಕಾರಿನ ಬಾಗಿಲು ತೆರೆದು ಚಿನ್ನಾಭರಣವಿದ್ದ ಬ್ಯಾಗ್‌ ಎತ್ತಿಕೊಂಡು ಪರಾರಿಯಾಗಿದ್ದಾರೆ. ಅಷ್ಟರಲ್ಲಿ ಉಳಿದ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಪಂಕ್ಚರ್‌ ಅಂಗಡಿ ಬಳಿಗೆ ಕಾರು ತೆಗೆದುಕೊಂಡು ಹೋಗಲು ರಾಜೇಶ್‌ ದಂಪತಿ ಕಾರಿನೊಳಗೆ ಕೂರಲು ನೋಡಿದಾಗ ಆಸನದ ಮೇಲೆ ಇಟ್ಟಿದ್ದ ಚಿನ್ನಾಭರಣವಿದ್ದ ಬ್ಯಾಗ್‌ ನಾಪತ್ತೆ ಆಗಿರುವುದು ಕಂಡು ಬಂದಿದೆ. ಬಳಿಕ ಕೆಂಗೇರಿ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಸಿಗ್ನಲ್​ ಬ್ಯಾಟರಿಗಳ ಕಳ್ಳತನ ಮಾಡುತ್ತಿದ್ದವರು ಅರೆಸ್ಟ್

0

ಬೆಂಗಳೂರು:- ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು  ಹೈಗ್ರೌಂಡ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತರು. ಆರೋಪಿಗಳಿಂದಒಟ್ಟು ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ಆರೇಳು ತಿಂಗಳಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಬರೋಬ್ಬರಿ 120 ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನಗಳು ಪತ್ತೆಯಾಗಿವೆ.ಅದರಂತೆ, ಆರೋಪಿಗಳ ಗುರುತು ಪತ್ತೆಹಚ್ಚಿದ ಹೈಗ್ರೌಂಡ್ಸ್ ಪೊಲೀಸರು, ಆರೋಪಿಗಳಾದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಎಂಬವರನ್ನು ಬಂಧಿಸಿ ಕಳ್ಳತನ ಮಾಡಿದ್ದ 80 ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

T20 Match: ಇಂದು ಭಾರತ-ಆಸಿಸ್ ಎರಡನೇ ಟಿ-20 ಪಂದ್ಯ

0

ಬೆಂಗಳೂರು : ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಟಿ-20 ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದ್ದು, ತಂಡದಲ್ಲಿ (ಪ್ಲೇಯಿಂಗ್ 11) ಹಲವು ಬದಲಾವಣೆ ಮಾಡುವ ಸಾಧ್ಯತೆಯಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಕಾಯ್ದುಕೊಂಡಿದೆ. ಸೂರ್ಯಕುಮಾರ್ ಯಾದವ್ ಪಡೆ ಇದೀಗ, ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ತವಕದಲ್ಲಿದೆ.

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಬೌಲರ್‌ಗಳು ದುಬಾರಿಯಾಗಿದ್ದರು. ಮುಖೇಶ್ ಕುಮಾರ್ ಬಿಟ್ಟು ಉಳಿದ ಯಾವ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ, ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ.

ಭಾರತ ಸಂಭಾವ್ಯ ತಂಡ

ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಅವೇಶ್ ಖಾನ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ಸಂಭಾವ್ಯ ತಂಡ

ಟ್ರಾವಿಸ್ ಹೆಡ್/ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ & ವಿಕೆಟ್ ಕೀಪರ್), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ

ಮೆಣಸಿನಕಾಯಿ ಕಳ್ಳರಿಗೆ ಥಳಿಸಿ ಮೆರವಣಿಗೆ ಮಾಡಿದ ರೈತರು; ವಿಡಿಯೋ ಇದೆ…..

ಗದಗ: ಮೆಣಸಿನಕಾಯಿಗೆ ಬಂಪರ್ ಬೆಲೆ ಬಂದಿದ್ದೆ ತಡ ಕಳ್ಳರ ಕಾಟ ಜೋರಾಗಿದೆ. ಗದಗ ಜಿಲ್ಲೆಯಲ್ಲಿ ಇದೀಗ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆದ ರೈತರ ಸಂಕಷ್ಟ ಹೇಳತೀರದು.

ಇತ್ತೀಚೆಗೆ ಮುಂಡರಗಿ ತಾಲೂಕಿನ ಮೇವುಂಡಿ
ಗ್ರಾಮದಲ್ಲಿ ದೀಪಾವಳಿ ಅಮವಾಸ್ಯೆ ದಿನದಂದು ಈರುಳ್ಳಿ ಕಳ್ಳತನ ಪ್ರಕರಣ ನಡೆದಿತ್ತು. ಇದೀಗ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಮೆಣಸಿನಕಾಯಿ ಕಳ್ಳತನ ಮಾಡಿದ್ದ ಇಬ್ಬರು ಖದೀಮರು ರೈತರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಅದೇ ಗ್ರಾಮದ ಶಿವು ಹಾಗೂ ಮಂಜುನಾಥ್ ಎಂಬುವರು ಮೆಣಸಿನಕಾಯಿ ಕಳ್ಳತನ ಮಾಡುವಾಗ ರೆಡ್‌ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ. ಸಿಕ್ಕಿ ಬಿದ್ದ ಇಬ್ಬರನ್ನು ಗ್ರಾಮದಲ್ಲಿ ಮೆಣಸಿನಕಾಯಿ ಗಂಟನ್ನು ತಲೆ ಮೇಲೆ ಹೊರಸಿ ಊರ ತುಂಬ ಮೆರವಣಿಗೆ ಮಾಡಲಾಗಿದೆ. ಮೆರವಣಿಗೆ, ಥಳಿತದ ವಿಡಿಯೋ ವೈರಲ್ ಆಗಿದೆ.

ನಂತರ ದೇವಸ್ಥಾನವೊಂದರ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಒಬ್ಬನ ಮೇಲೆ ಮತ್ತೊಬ್ಬನನ್ನು ನಿಲ್ಲಿಸಿ ಮುಂದೆ ಈ ರೀತಿ ಕಳ್ಳತನ ಕೃತ್ಯಕ್ಕೆ ಕೈ ಹಾಕದಂತೆ ಪಾಠ ಕಲಿಸಿ ಕೈ ಬಿಟ್ಟಿದ್ದಾರೆ. ಆ ಮೂಲಕ ರೈತರು ಕಳ್ಳ-ಕಾಕರಿಗೆ ಇಂಥದೊಂದು ಸಂದೇಶ ರವಾನಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಡಿಸೆಂಬರ್ 2 ವರೆಗೂ ಮಳೆ ನಿರೀಕ್ಷೆ

0

ಬೆಂಗಳೂರು:- ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಡುಪಿ,ಮಂಗಳೂರು ವಿಮಾನನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆಯಾಗಿದೆ. ದಾವಣಗೆರೆ ಹಾಗೂ ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆಯಾಗಿದೆ, ಇಂದು ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಗಜೇಂದ್ರಗಡ ತಾಲೂಕಿನಲ್ಲಿ ಅಮಾನವೀಯ ಘಟನೆ: ಒಂಬತ್ತು ತಿಂಗಳ ಮೊಮ್ಮಗನನ್ನೇ ಕೊಂದ ಪಾಪಿ ಅಜ್ಜಿ..!?

0

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ಒಂಬತ್ತು ತಿಂಗಳ ಗಂಡು ಮಗುವನ್ನು ಅಜ್ಜಿಯೇ ಕೊಲೆಗೈದು ಹೂತು ಹಾಕಿರುವ ಅಮಾನವೀಯ ಘಟನೆ ಜರುಗಿದೆ.

ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಅದ್ವೀಕ‌ ಎಂಬ ಒಂಬತ್ತು ತಿಂಗಳ ಮಗುವನ್ನು ಸ್ವಂತ ಅಜ್ಜಿ ಸರೋಜಾ ಉಸಿರುಗಟ್ಟಿಸಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.

ಕೊಲೆಗೀಡಾದ ಮಗುವಿನ ತಾಯಿ ನಾಗರತ್ನಳಿಂದ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ರೋಣ ತಾಲೂಕಿನ ಜಕ್ಕಲಿ ಗ್ರಾಮದ ನಾಗರತ್ನ ಹಾಗೂ ಪುರ್ತಗೇರಿ ಗ್ರಾಮದ ಕಳಕೇಶ ಗೂಳಿ ನಡುವೆ 6-11- 2021 ರಲ್ಲಿ ಮದುವೆ ಆಗಿತ್ತು. 25-02-2023 ರಂದು ನಾಗರತ್ನ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಐದು ತಿಂಗಳ ನಂತರ ತವರು ಮನೆಯಿಂದ ಪುರ್ತಗೇರಿಗೆ ಬಂದ ನಂತರ ನಾಗರತ್ನಳಿಗೆ ಅತ್ತೆ ಸರೋಜಾ ಗಂಡು ಮಗುವಾಗಿದ್ದಕ್ಕೆ ಸೇರುತ್ತಿರಲಿಲ್ಲ ಎನ್ನಲಾಗಿದೆ. ನಾಗರತ್ನಳಿಗೆ ಗಂಡು ಮಗುವಾಗಿದ್ದಕ್ಕೆ ಸದ್ಯಕ್ಕೆ ಮಗು ಬೇಡವಾಗಿತ್ತು ಅಂತ ಸಿಟ್ಟಾಗಿ ಮಾತನಾಡುತ್ತಿದ್ದಳು.

ಮೊನ್ನೆ ನವೆಂಬರ್ 22 ರಂದು ನಾಗರತ್ನ ಮನೆಗೆಲಸ ಮಾಡುತ್ತಿದ್ದಾಗ ಅತ್ತೆ ಸರೋಜಾ ಮೊಮ್ಮಗ ಅದ್ವಿಕ್‌ನಿಗೆ ತುಂಬಿನ ಸಮೇತ ಎಲೆ ಹಾಗೂ ಅಡಿಕೆ ಹೋಳು ತಿನಿಸಲು ಮುಂದಾದಾಗ ನಾಗರತ್ನ, ಅದನ್ನೇಕೆ ತಿನಿಸುತ್ತಿದ್ದೀರಿ ಎಂದ ಮಗುವಿನ ಬಾಯಿಂದ ಅದನ್ನು ತೆಗೆದಿದ್ದಾಳೆ.

ನಂತರ ಜಮೀನಿಗೆ ಹೋಗಿ ಹುಲ್ಲು, ಗಡ್ಡೆ ಮೇವು ಕೊರೆದು,‌ ನೀರು ಕುಡಿಸಿ ಬಾ ಎಂದು ಅತ್ತೆ ಸರೋಜಾ ಹೇಳಿ ಕಳಿಹಿಸಿದ್ದು, ನಂತರ ಅದೇ ದಿನ ಸಂಜೆ ನಾಲ್ಕು ಗಂಟೆಗೆ ಅದ್ವಿಕ್ ನಿಗೆ ಏನೂ ತಿನ್ನಿಸಿ ಉಸಿರು ಗಟ್ಟಿಸಿ ಕೊಲೆ ಮಾಡಿ, ತಮ್ಮ ತೋಟದಲ್ಲಿ ಮಣ್ಣು ಮಾಡಿ, ಸಾಕ್ಷಿ, ಪುರಾವೆ ನಾಶ ಮಾಡಿದ್ದಾರೆ ಎಂದು ನಾಗರತ್ನ ಗಜೇಂದ್ರಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಲರ್ಟ್ ಆದ ಪೊಲೀಸರು

ಒಂಬತ್ತು ತಿಂಗಳು ಮಗುವಿನ ಕೊಲೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆಯೇ ರೋಣ ಸಿಪಿಐ ಎಸ್.ಎಸ್ ಬೀಳಗಿ ಹಾಗೂ ಪೊಲೀಸರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ನೇತೃತ್ವದಲ್ಲಿ ಮಗುವಿನ ಶವ ಹೊರತಗೆದು ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ C/no-186/2023 IPC 1860(u/s 498a,201,302 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ- ಎಷ್ಟು ಕೋಣಗಳು ಕಣಕ್ಕೆ!?, ಇಲ್ಲಿದೆ ಮಾಹಿತಿ

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಬಳಕ್ಕೆ ಕ್ಷಣಗಣನೆ ಶುರುವಾಗಿದೆ. ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಿದೆ. ಕೋಣಗಳ ಸ್ಪರ್ಧೆಗೆ ಈಗಾಗಲೇ ನೀರಿನ ಟ್ರ್ಯಾಕ್(ಕರೆ) ನಿರ್ಮಿಸಲಾಗಿದ್ದು, ತ್ರಿವರ್ಣಧ್ವಜದ ಬಣ್ಣಗಳಿಂದ ಅಲಂಕರಿಸಲಾಗಿದೆ. ಕಂಬಳದ ಟ್ರ್ಯಾಕ್ 157 ಮೀಟರ್ ಉದ್ದ ಹಾಗೂ 8 ಮೀಟರ್ ಅಗಲವಿದೆ. ಒಟ್ಟು 200ಕ್ಕೂ ಹೆಚ್ಚು ಕೋಣಗಳು ಕಂಬಳಕ್ಕೆ ಇಳಿಯಲಿವೆ. ಕೋಣಗಳಿಗೆ ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ಕೋಣಗಳ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿದ್ದು, ಇಂದು ಕೋಣಗಳು ರಾಜಧಾನಿಗೆ ಬಂದಿಳಿಯಲಿವೆ.

ಎರಡು ದಿನದ ಕಂಬಳಕ್ಕೆ ಅಂದಾಜು 6 ರಿಂದ 7 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದ್ದು, ಜನರು ಕಂಬಳ ವೀಕ್ಷಿಸಲು ದೊಡ್ಡ ಸ್ಟೇಜ್​​ಗಳನ್ನು ನಿರ್ಮಾಣ ಮಾಡಲಾಗಿದೆ. ವಿಐಪಿ, ವಿವಿಐಪಿ, ಸಾರ್ವಜನಿಕರಿಗೆ ಪ್ರತ್ಯೇಕ ಪಾಸ್​​, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಕಂಬಳಕ್ಕೆ ಬಂದಿರುವ ಕೋಣಗಳ ಬಗ್ಗೆ ಮಾಲೀಕರು ವಿಶೇಷ ಗಮನ ವಹಿಸಿದ್ದಾರೆ.

ಕಂಬಳದ ಕೋಣಗಳಿಗೆ ಕುಡಿಯಲು ನೀರು ಸಹ ಮಂಗಳೂರಿನಿಂದಲೇ ತರಲಾಗಿದೆ. ಕಂಬಳದ ಕೋಣಗಳನ್ನು ಹೆಚ್ಚು ಪ್ರೀತಿಯಿಂದ ಸಾಕುವುದರಿಂದ ಅದಕ್ಕೆ ಹಾಕುವ ಆಹಾರದಿಂದ ಹಿಡಿದು ಕುಡಿಯುವ ನೀರಿನ ತನಕ ಮಾಲೀಕರು ಹೆಚ್ಚು ಜಾಗೃತೆ ವಹಿಸಿದ್ದಾರೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದ್ದಾರೆ. ಕಂಬಳದಲ್ಲಿ ಗೆದ್ದ ಜೋಡಿಗೆ ಮೊದಲ ಬಹುಮಾನವಾಗಿ 16 ಗ್ರಾಂ ಚಿನ್ನದ ಪದಕ ಹಾಗೂ ಒಂದು ಲಕ್ಷ ನಗದು ನೀಡಲಾಗುತ್ತದೆ. ಎರಡನೇ ಸ್ಥಾನಕ್ಕೆ 8 ಗ್ರಾಂ ಚಿನ್ನದ ಪದಕ ಹಾಗೂ 50 ಸಾವಿರ ನಗದು, ಮೂರನೇ ಸ್ಥಾನಕ್ಕೆ 4 ಗ್ರಾಂ ಚಿನ್ನ ಮತ್ತು 25 ಸಾವಿರ ಹಣ ನೀಡಲಾಗುತ್ತಿದೆ ಎಂದು ಗುರುಕಿರಣ್ ಮಾಹಿತಿ ನೀಡಿದರು

ಗ್ರಾಪಂ ಅಧ್ಯಕ್ಷನ ಮಾತಿಗೆ ಸಿಡಿಮಿಡಿಗೊಂಡ ಸಚಿವ ಲಾಡ್

0

ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬರಗಾಲ ಸಂಬಂಧ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಪಿಡಿಓಗಳ ಸಭೆ ಕರೆಯಲಾಗಿತ್ತು.

ಈ ಸಭೆಯಲ್ಲಿ ಬರಗಾಲ ಬಿಟ್ಟು ಬೇರೆ ಬೇರೆ ವಿಷಯಗಳ ಸಂಬಂಧ ಚರ್ಚೆ ನಡೆಯುತ್ತಿದೆ ಎಂದು ನವಲಗುಂದ ತಾಲೂಕಿನ ಗ್ರಾಮ ಪಂಚಾಯ ಅಧ್ಯಕ್ಷರೊಬ್ಬರು, ನೀವು ಬರಗಾಲದ ಸಂಬಂಧ ಚರ್ಚೆ ಮಾಡಿ. ತೀವ್ರ ಬರಗಾಲವಿದೆ ಅದರ ಬಗ್ಗೆ ಚರ್ಚೆ ಮಾಡಿ. ಅದನ್ನು ಬಿಟ್ಟು ಬೇರೆ ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡಿದರೆ ಹೇಗೆ? ಸುಮ್ಮನೆ ನೀವು ಮುಖ ತೋರಿಸಲು, ಬರಬೇಡಿ ಎಂದು ಸಚಿವರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸಾರ್ವಜನಿಕವಾಗಿಯೇ ಹೇಳಿದ.

ಇದರಿಂದಾಗಿ ಕೆಂಡಾಮಂಡಲರಾದ ಸಚಿವ ಲಾಡ್, ನಾವು ಬರಗಾಲದ ಸಲುವಾಗಿಯೇ ಈ ಸಭೆ ಕರೆದಿದ್ದೇವೆ. ಬರಗಾಲದ ವಿಷಯವಾಗಿಯೇ ಚರ್ಚೆ ಮಾಡುತ್ತಿದ್ದೇವೆ. ಏನೇನೋ ಮಾತನಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು.

ನಂತರ ಗ್ರಾಮ ಪಂಚಾಯತಿ ಅಧ್ಯಕ್ಷ ಸಾರ್ವಜನಿಕವಾಗಿಯೇ ಸಚಿವರ ಕ್ಷಮೆ ಕೋರಿದ ಪ್ರಸಂಗವೂ ನಡೆಯಿತು.

ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

0

ಮಂಡ್ಯ: ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ  ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಸೊಸೆ ಸುಶೀಲಾ (42) ನಿನ್ನೆ ಸಂಜೆ ಸಾವನ್ನಪ್ಪಿದ್ದರು. ಸೊಸೆಯ ಸಾವಿನ ಸುದ್ದಿ ಕೇಳಿದ ಅತ್ತೆ ಹುಚ್ಚಮ್ಮ (75) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹುಚ್ಚಮ್ಮನಿಗೆ ಐವರು ಗಂಡುಮಕ್ಕಳಿದ್ದು, ಅದರಲ್ಲಿ 2ನೇ ಮಗನ ಪತ್ನಿಯೇ ಸುಶೀಲಾ. ಸುಶೀಲಾಗೆ ಇಬ್ಬರು ಮಕ್ಕಳು ಕೂಡಾ ಇದ್ದರು. ಅತ್ತೆ-ಸೊಸೆಯ ಸಂಬಂಧ ತಾಯಿ ಮಗಳಂತಿತ್ತು ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಇದೀಗ ಅತ್ತೆ-ಸೊಸೆಯ ಸಾವಿನಿಂದ ಇಡೀ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ

0

ಬೆಂಗಳೂರು ನ 24: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಆದರ ದಾಖಲೆ ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟಿಕಿಚ್ಚಿಗೆ ಕಾರಣವಾಗಿದೆ ಎಂದು ವಿವರಿಸಿದರು. ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಪ್ರಶ್ನಿಸಿದರು.

error: Content is protected !!