Home Blog Page 3148

ಚಿರತೆಗಳ ಕಳೇಬರ ಪತ್ತೆ; ವಿಷ ಹಾಕಿ ಕೊಂದಿರುವ ಶಂಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು

ಜಿಲ್ಲೆಯ ಬಳವಾಡಿಯ ಬಯಲು ಪ್ರದೇಶದಲ್ಲಿ ಮೂರು ಚಿರತೆಗಳ ಕಳೇಬರಗಳು ಪತ್ತೆಯಾಗಿವೆ.
ಈ ಚಿರತೆಗಳಿಗೆ ಯಾರೋ ವಿಷ ಪ್ರಾಶನ ಮಾಡಿರಬಹುದು ಎಂದು ಶಂಕಿಸಲಾಗಿದೆ.

ತಾಯಿ ಚಿರತೆ ಹಾಗೂ ಎರಡು ಚಿರತೆ ಮರಿಗಳು ಸಾವನ್ನಪ್ಪಿವೆ. ಎರಡು ದಿನಗಳ ಹಿಂದೆಯಷ್ಟೇ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಬಳಿಯ ಸಿಸಿಟಿವಿಯಲ್ಲಿ ಈ ಚಿರತೆಗಳು ಸೆರೆಯಾಗಿದ್ದವು.
ಆ ನಂತರ ಅವರು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಯಾರೋ ದುಷ್ಕರ್ಮಿಗಳು ಚಿರತೆಗಳಿಗೆ ತಿನ್ನುವ ತಿನ್ನುವ ಆಹಾರದಲ್ಲಿ ವಿಷ ಹಾಕಿರಬೇಕು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ತಾಯಿ ಚಿರತೆ ಹಾಗೂ ಚಿರತೆ ಮರಿಗಳು ಒಟ್ಟೊಟ್ಟಿಗೆ ಓಡಾಡುತ್ತಿದ್ದರಿಂದಾಗಿ ಬೆಮೆಲ್ ಫ್ಯಾಕ್ಟರಿ ಹಾಗೂ ಬೆಳವಾಡಿ ಸುತ್ತಮುತ್ತಲಿನ ಜನ ಭಯದ ವಾತಾವರಣದಲ್ಲಿದ್ದರು. ಭಯದ ಕಾರಣಕ್ಕೆ ವಿಷ ಹಾಕಿ ಕೊಂದಿದ್ದಾರೆಂದು ಅರಣ್ಯ ಇಲಾಖೆಯ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಶವಗಳ ಮರಣೋತ್ತರ ಪರೀಕ್ಷೆಗೆ ಅರಣ್ಯ ಸಿಬ್ಬಂದಿ ತಯಾರಿ ನಡೆಸುತ್ತಿದ್ದಾರೆ.

ಮಕ್ಕಳಿಗೆ ಸೋಂಕು ಹರಡುವ ಭೀತಿ; ಆತ್ಮಹತ್ಯೆ ಮಾಡಿಕೊಂಡ ತಂದೆ -ತಾಯಿ!

ವಿಜಯಸಾಕ್ಷಿ ಸುದ್ದಿ, ವಿಜಯವಾಡ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ದಂಪತಿ, ತಮ್ಮ ಮಕ್ಕಳಿಗೆ ಸೋಂಕು ತಗಲಬಹುದು ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಪೆಡಾನಾದಲ್ಲಿ ನಡೆದಿದೆ.

ಪೆಡಾನಾ ಪೊಲೀಸರು ಹೇಳುವಂತೆ, ಜಕ್ಕುಲಾ ಲೀಲಾ ಪ್ರಸಾದ್ (40) ಮತ್ತು ಭಾರತಿ (37) ದಂಪತಿ ಕಳೆದ 10 ದಿನಗಳಿಂದ ಕೊರೊನಾ ಲಕ್ಷಣದಿಂದ ಬಳಲುತ್ತಿದ್ದರು. ಅವರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.

ಈ ದಂಪತಿಗೆ ಒಂಭತ್ತು ಹಾಗೂ ಐದು ವರ್ಷ ವರ್ಷದ ಹೆಣ್ಣುಮಕ್ಕಳಿದ್ದು, ಅವರಿಗೆ ಸೋಂಕು ಹರಡಬಹುದೆಂಬ ಭಯದಿಂದ, ದಂಪತಿಗಳು ಖಿನ್ನತೆಗೆ ಜಾರಿದ್ದರು. ಕಾರಣ, ಕುಟುಂಬದ ಯಾವುದೇ ಸದಸ್ಯರು ಅವರ ರಕ್ಷಣೆಗೆ ಬಂದಿರಲಿಲ್ಲ. ಹೀಗಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಸಿಆರ್ ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸರ ಥಳಿತಕ್ಕೆ ಬಾಲಕ ಬಲಿ!

ವಿಜಯಸಾಕ್ಷಿ ಸುದ್ದಿ, ಲಖನೌ

ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಪೊಲೀಸರು ಬಾಲಕನನ್ನು ಥಳಿಸಿದ ನಂತರ ಆತ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಟ್ಪುರಿ ಜಿಲ್ಲೆಯಲ್ಲಿ ನಡೆದಿದೆ.
ಬಾಲಕನ ಕುಟುಂಬ ಸದಸ್ಯರು ಪೊಲೀಸರ ಥಳಿತದಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಹೋಮ್ ಗಾರ್ಡ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಬಾಲಕ ಮನೆಯ ಹೊರಭಾಗದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದಾಗ ಆತನನ್ನು ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ಈ ಕುರಿತು ಹೇಳಿಕೆಯನ್ನು ಪಡೆದಿದ್ದು, ಆರೋಪ ಎದುರಿಸುತ್ತಿರುವ ಸಿಬ್ಬಂದಿಗಳ ವಿರುದ್ಧ ಎಫ್ ಐಆರ್ ನ್ನು ದಾಖಲಿಸಲಾಗುತ್ತದೆ ಹಾಗೂ ತನಿಖೆ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ನೀಡಿದ್ದಾರೆ.

ಕೊರೋನಾ ಕರ್ಫ್ಯೂ ಉಲ್ಲಂಘನೆ ಮಾಡಿದ್ದಾನೆಂದು ಪೊಲೀಸ್ ಸಿಬ್ಬಂದಿಗಳು 17 ವರ್ಷದ ಬಾಲಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಕುಟುಬಸ್ಥರು ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.
ಥಳಿತದಿಂದ ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿಯೇ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯಕೀಯ ಸಿಬ್ಬಂದಿ ಹೇಳಿದ್ದರು ಎಂದು ಕುಟುಂಬಸ್ಥರು ಹೇಲಿದ್ದಾರೆ.

ಆಕ್ರೋಶಗೊಂಡ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಬಾಲಕನ ಕುಟುಂಬ ಸದಸ್ಯರಿಗೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಇರಲಿದೆ ಮಳೆರಾಯನ ಆರ್ಭಟ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಹಲವು ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ. 22 ರಂದು ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಅಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಎರಡು ದಿನಗಳವರೆಗೆ ಮಳೆ ಅಥವಾ ಗುಡುಗು ಸಹಿತ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 24 ಗಂಟೆಗಳ ಅವಧಿಯಲ್ಲಿ ಮಳೆ 64.5 ಮಿಮೀ ಮತ್ತು 115.5 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೋಟಿ ಕೋಟಿ ಬಾಚುತ್ತಿದ್ದ ಸಲ್ಮಾನ್ ಖಾನ್, ರಾಧೆ ಚಿತ್ರದಿಂದ ಮೊದಲು ಗಳಿಸಿದ್ದು ಎಷ್ಟು ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಸುಲ್ತಾನ್ ಎಂದು ಸಲ್ಮಾನ್ ಖಾನ್ ಹೆಸರು ಮಾಡಿದ್ದರು. ಅವರ ಬಹುತೇಕ ಚಿತ್ರಗಳು ಬಿಡುಗಡೆಯಾದ ಮೊದಲ ದಿನವೇ ಕೋಟಿ ಕೋಟಿ ಹಣ ದೋಚಿ, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದವು. ಆದರೆ, ಅವರ ಚಿತ್ರ ಕೂಡ ಈಗ ಕೆಟ್ಟ ದಾಖಲೆ ಬರೆದಿದೆ.

ಇತ್ತೀಚೆಗಷ್ಟೇ ತೆರೆಕಂಡಿದ್ದ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿಯೇ ದೇಶದಲ್ಲಿ ಲಾಕ್ ಡೌನ್ ಜಾರಿಯಾಗಿದೆ. ಹೀಗಾಗಿ ಹೆಚ್ಚು ಕಲೆಕ್ಷನ್ ಮಾಡಲು ಸಾಧ್ಯವಾಗಿರಲಿಲ್ಲ. ಇಡೀ ದೇಶದಲ್ಲಿಯೇ ಈ ಚಿತ್ರ ಕೇವಲ ಮೂರು ಚಿತ್ರ ಮಂದಿರಗಳಲ್ಲಿ ಮಾತ್ರ ತೆರೆ ಕಂಡಿದೆ.

ಹೀಗಾಗಿ ಈ ಚಿತ್ರ ತಂಡ ಓಟಿಟಿ ಮೊರೆ ಹೋಯಿತು. ಆದರ ನಡುವೆಯೂ ತ್ರಿಪುರದ ಮೂರು ಥಿಯೇಟರ್ಗಳಲ್ಲಿ ರಾಧೆ ಬಿಡುಗಡೆ ಆಯಿತು. ಮೊದಲ ದಿನ ಮೂರು ಚಿತ್ರಮಂದಿರಗಳಿಂದ ಒಟ್ಟು 11 ಶೋಗಳು ನಡೆದಿದ್ದವು. ಈ ಎಲ್ಲ ಪ್ರದರ್ಶನಗಳಿಂದ ಒಟ್ಟು ರೂ. 10,432 ಮಾತ್ರ ಕಲೆಕ್ಷನ್ ಆಗಿದೆ. ಹೀಗಾಗಿ ಬಾಕ್ಸ್ ಆಫೀಸ್ ಸುಲ್ತಾನ್ ಕೋಟಿ ಎತ್ತುವ ಕೈಯಲ್ಲಿ ಪುಡಿಗಾಸು ಹಿಡಿಯುವಂತೆ ಈ ಕೊರೊನಾ ಮಾಡಿತಲ್ಲ ಎಂದು ಚಿತ್ರ ತಂಡದ ಸದಸ್ಯರು ಮಾತನಾಡುತ್ತಿದ್ದಾರೆ.

ಈ ಮೂರು ಚಿತ್ರ ಮಂದಿರಗಳಲ್ಲಿ ರಾಧೆ ಪ್ರದರ್ಶನ ಕಂಡಿದ್ದು ಕೇವಲ ನಾಲ್ಕು ದಿನ ಮಾತ್ರ. ಅಲ್ಲಿ ಕೂಡ ಸಂಪೂರ್ಣ ಲಾಕ್ ಡೌನ್ ಆದ ಮೇಲೆ ರಾಧೆಗೆ ಸಂಪೂರ್ಣ ಬಾಗಿಲು ಹಾಕಲಾಯಿತು. ಅಂದರೆ, ಚಿತ್ರ ಥಿಯೇಟರ್ ನಲ್ಲಿ ಪ್ರದರ್ಶನ ಕಂಡ ನಂತರ ಒಟ್ಟು ಇಲ್ಲಿಯವರೆಗೆ ರೂ. 63 ಸಾವಿರ ಗಳಿಸಿದ ಎಂದು ಮೂಲಗಳು ತಿಳಿಸಿವೆ.
ನಂತರ ಈ ಚಿತ್ರ ಓಟಿಟಿಯಲ್ಲಿ ಭರ್ಜರಿ ಹಣ ಬಾಚಿಕೊಂಡಿದೆ.

ಮೇ .13ರಂದು ಈ ಚಿತ್ರ ಜೀ ಪ್ಲೆಕ್ಸ್ನಲ್ಲಿ ‘ರಾಧೆ ರಿಲೀಸ್ ಆಗಿತ್ತು. ಅಂದು ಒಂದೇ ದಿನಕ್ಕೆ ಈ ಚಿತ್ರ ರೂ. 42 ಲಕ್ಷ ಗಳಿಸಿದೆ. ಡಿಜಿಟಲ್ ಮಾಧ್ಯಮದಲ್ಲಿ ಈ ಚಿತ್ರ ಒಂದೇ ದಿನ 42 ಲಕ್ಷ ವೀಕ್ಷಣೆ ಕಂಡಿದೆ. ಒಂದು ಬಾರಿ ಸಿನಿಮಾ ವೀಕ್ಷಣೆ ಮಾಡಬೇಕೆಂದರೆ ರೂ. 249 ಸಂದಾಯ ಮಾಡಬೇಕು. ಹೀಗಾಗಿ ಈ ಸಿನಿಮಾ ಮೊದಲ ದಿನ ಗಳಿಸಿದ್ದು ರೂ. 108 ಕೋಟಿ ಎಂದು ವರದಿಯಾಗಿದೆ.

ಮೋಜು –ಮಸ್ತಿಗೆ ಹೊರಟಿದ್ದ ಅಧಿಕಾರಿಗಳನ್ನು ಪ್ರಶ್ನಿಸಿದ್ದವರ ಮೇಲೆಯೇ ಕೇಸ್ ದಾಖಲು!

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ಪಾರ್ಟಿಗಾಗಿ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ತೆಡೆದಿದ್ದ ಗ್ರಾಮಸ್ಥರು ಹಾಗೂ ಗ್ರಾಪಂ ಸದಸ್ಯರ ಮೇಲೆಯೇ ಕೇಸ್ ದಾಖಲಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿಯೇ ನಾಲ್ವರ ಮೇಲೆ ಎಫ್ ಐಆರ್ ದಾಖಲಾಗಿದೆ.

ಭದ್ರಾ ಅಭಯಾರಣ್ಯದ ಮುತ್ತೋಡಿ ವಲಯದಲ್ಲಿರುವ ಸೀಗೇಕಾನ್ ಅರಣ್ಯ ಪ್ರವಾಸಿ ಮಂದಿರದಲ್ಲಿ ಬುಧವಾರ ರಾತ್ರಿ ಹೊತ್ತು ಅರಣ್ಯಾಧಿಕಾರಿಗಳು ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ನಂತರ ಗುರುವಾರ ಇವರು ತಾಲೂಕು ಸಂತವೇರಿಯ ಬೇಟೆ ನಿಗ್ರಹ ದಳದ ಬಳಿ ಪಾರ್ಟಿಗೆ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಗ್ರಾಮಸ್ಥರು ಅಡ್ಡಗಟ್ಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ರಾಜ್ಯ ಅರಣ್ಯ ಪಡೆ ಮುಖ್ಯಸ್ಥ ಸಂಜಯ್ ಮೋಹನ್ ಮತ್ತು ಅವರ ಸಿಬ್ಬಂದಿ 10ಕ್ಕೂ ಹೆಚ್ಚು ಕಾರುಗಳಲ್ಲಿ ತೆರಳುತ್ತಿದ್ದರು. ಇವುಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.
ಅಲ್ಲದೇ, ಪಾರ್ಟಿಗಾಗಿಯೇ ಈ ಸಿಬ್ಬಂದಿ 10ಕ್ಕೂ ಹೆಚ್ಚು ನಾಟಿ ಕೋಳಿಗಳನ್ನು ಖರೀದಿಸಿದ್ದರು ಎನ್ನಲಾಗಿದೆ. ಇವರೆಲ್ಲ ಪಾರ್ಟಿಗಾಗಿ ಸಂತವೇರಿ ಸಮೀಪದ ಗೇಮ್ ಫಾರೆಸ್ಟ್ ನತ್ತ ಹೊರಟಿದ್ದರು. ಗ್ರಾಪಂ ಸದಸ್ಯರು ಸೇರಿದಂತೆ ಗ್ರಾಮಸ್ಥರು ತಡೆದು ಪ್ರಶ್ನಿಸಿದ್ದಾರೆ. ಆಗ ಅಧಿಕಾರಿಗಳು ಮರಳಿ ಹೋಗಿದ್ದರು ಎನ್ನಲಾಗಿದೆ.

ಆದರೆ, ಸದ್ಯ ಅಧಿಕಾರಿಗಳನ್ನು ತಡೆದ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರ ಮೇಲೆಯೇ ದೂರು ದಾಖಲಾಗಿದೆ. ಇದಕ್ಕ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಏರ್ ಇಂಡಿಯಾ ಮೇಲೆ ದೊಡ್ಡ ಸೈಬರ್ ದಾಳಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಏರ್ ಇಂಡಿಯಾ ಮೇಲೆ ದೊಡ್ಡ ಮಟ್ಟದ ಸೈಬರ್ ದಾಳಿ ನಡೆದಿದೆ. ಈ ಮೂಲಕ ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳು ಕಳ್ಳತನವಾಗಿವೆ.
ಫೆಬ್ರವರಿ ತಿಂಗಳಲ್ಲಿ ಡೇಟಾ ಪ್ರಾಸೆಸರ್ ಮೇಲೆ ದೊಡ್ಡ ಮಟ್ಟದ ಸೈಬರ್ ದಾಳಿ ನಡೆದಿದೆ. ಸುಮಾರು ಹತ್ತು ವರ್ಷಗಳ ಅವಧಿಯಲ್ಲಿನ ಡೇಟಾ ಕಳ್ಳತನ ಮಾಡಲಾಗಿದೆ. ಏರ್ ಇಂಡಿಯಾ ಗ್ರಾಹಕರ ಕ್ರೆಡಿಟ್ ಕಾರ್ಡ್, ಪಾಸ್‌ಪೋರ್ಟ್, ಫೋನ್ ನಂಬರ್ ಸೇರಿದಂತೆ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಿವೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಈ ಸಂಗತಿ ವಿಶ್ವಾದ್ಯಂತ 4,500,000 ದತ್ತಾಂಶದ ಮೇಲೆ ಪರಿಣಾಮ ಬೀರಿದೆ. ಹೆಸರು, ಹುಟ್ಟಿದ ದಿನಾಂಕ, ಸಂಪರ್ಕ ಮಾಹಿತಿ, ಪಾಸ್‌ ಪೋರ್ಟ್, ಟಿಕೆಟ್, ಕ್ರೆಡಿಟ್ ಕಾರ್ಡ್, ಸ್ಟಾರ್ ಅಲಯನ್ಸ್‌ ಹಾಗೂ ಏರ್ ಇಂಡಿಯಾ ಪ್ರಯಾಣಿಕರ ಮಾಹಿತಿಗಳನ್ನು ಇದು ಒಳಗೊಂಡಿರುತ್ತದೆ. ಹೀಗಾಗಿ ಪ್ರಯಾಣಿಕರು ತಮ್ಮ ವೈಯಕ್ತಿಕ ಮಾಹಿತಿ ಸುರಕ್ಷತೆಗಾಗಿ ಸಾಧ್ಯವಾದಾಗಲೆಲ್ಲಾ ಪಾಸ್‌ವರ್ಡ್‌ ಬದಲಾಯಿಸುವಂತೆ ತಿಳಿಸುತ್ತಿರುತ್ತೇವೆ ಎಂದು ಸಂಸ್ಥೆ ಹೇಳಿದೆ.

ಕ್ರೆಡಿಟ್ ಕಾರ್ಡ್ ಹೊಂದಿರುವ ಸಿವಿವಿ/ಸಿವಿಸಿ ಡೇಟಾ ಸಂಗ್ರಹಿಸಲಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ದಾಳಿಗೆ ಒಳಗಾದ ಪ್ರಯಾಣಿಕರಿಗೆ ಸಹಾಯ ಮಾಡಲು ಸಂಸ್ಥೆ ಕಾಲ್ ಸೆಂಟರ್ ಸ್ಥಾಪಿಸಿದೆ. ಈ ಕುರಿತು ತನಿಖೆಗೆ ಮುಂದಾಗಿದೆ.

ನಟಿ ಕಂಗನಾ ಗನ್ ಮ್ಯಾನ್ ವಿರುದ್ಧ ಅತ್ಯಾಚಾರದ ಆರೋಪ?

ವಿಜಯಸಾಕ್ಷಿ ಸುದ್ದಿ, ಮುಂಬಯಿ

ನಟಿ ಕಂಗನಾ ರಣಾವತ್ ಅವರ ಗನ್ ಮ್ಯಾನ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ನಗರದ ಮೇಕಪ್ ಕಲಾವಿದೆಯೊಬ್ಬರು ಕುಮಾರ್ ಹೆಗ್ಡೆ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಕುರಿತು ದೂರು ಕೂಡ ದಾಖಲಿಸಿದ್ದಾರೆ.

ಡಿಎನ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ ಐಆರ್ ದಾಖಲಾಗಿದೆ. ಆದರೆ, ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ, ನನ್ನಿಂದಲೇ ರೂ. 50 ಸಾವಿರ ಹಣ ಪಡೆದಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

8 ವರ್ಷಗಳ ಹಿಂದೆ ಕುಮಾರ್ ಸಂತ್ರಸ್ತೆಯ ಜೊತೆ ಸಂಪರ್ಕಕ್ಕೆ ಬಂದಿದ್ದು, ಕಳೆದ ವರ್ಷ ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ಇದಾದ ನಂತರ ಸಂತ್ರಸ್ತೆಯ ಪ್ಲ್ಯಾಟ್ ಗೆ ಬಂದು ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಏ.27ಕ್ಕೆ ನಾನು ಆತನಿಗೆ ಹಣ ನೀಡಿದ್ದೆ. ಆ ನಂತರ ಅವನು ಕರ್ನಾಟಕ ರಾಜ್ಯಕ್ಕೆ ಓಡಿ ಹೋಗಿದ್ದಾನೆ. ಈ ಸಂದರ್ಭದಲ್ಲಿ ನಾನು ಆತನ ತಾಯಿಗೆ ಕರೆ ಮಾಡಿದಾಗ ಆತ ಬೇರೆ ಯುವತಿಯೊಂದಿಗೆ ಮದುವೆಯಾಗುತ್ತಿರುವ ವಿಚಾರ ತಿಳಿಯಿತು. ಆತನ ತಾಯಿ ಕೂಡ ನನ್ನ ಮಗನಿಂದ ನೀನು ದೂರ ಇರು ಎಂದು ಹೇಳಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ನಟಿ ಕಂಗನಾ, ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ. ಕುಮಾರ್ ತನ್ನ ಕುಟುಂಬದ ಸದಸ್ಯ ಎಂದು ಈ ಹಿಂದೆ ಹೇಳಿದ್ದರು.

ಮಮತಾ ಬ್ಯಾನರ್ಜಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶಾಸಕ!

ವಿಜಯಸಾಕ್ಷಿ ಸುದ್ದಿ, ಕೊಲ್ಕತ್ತಾ

ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯ ಸಾಧಿಸಿದ್ದ ಟಿಎಂಸಿಯ ಹಿರಿಯ ನಾಯಕ ಹಾಗೂ ಕೃಷಿ ಸಚಿವ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಲು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಹಾದಿ ಸುಗಮವಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು ನಂದಿ ಗ್ರಾಮದ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಅವರು ಸೋಲು ಕಂಡಿದ್ದರು. ಸಿಎಂ ಆಗಿರುವ ಅವರು, 6 ತಿಂಗಳೊಳಗೆ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲಬೇಕಾಗಿದೆ. ಹೀಗಾಗಿ ಅವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಸಚಿವ ಪಾರ್ಥ ಚಟರ್ಜಿ ಹಾಗೂ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ವಿಧಾನಸಭಾಧ್ಯಕ್ಷ ಬಿಮ್ ಬಂಡೋಪಾಧ್ಯಾಯ ಅವರಿಗೆ ಚಟ್ಟೋಪಾಧ್ಯಾಯ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿ ಮಾತನಾಡಿದ ಅವರು, ನಾನು ಪಕ್ಷದ ನಿರ್ಧಾರಕ್ಕೆ ವಿಧೇಯನಾಗಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ನಾನು ರಾಜೀನಾಮೆ ಸಲ್ಲಿಸಿದ್ದೇನೆ. ಹೀಗಾಗಿ ಭವಾನಿಪುರ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಕೊರೊನಾದಿಂದ ಟಿಎಂಸಿ ಮುಖಂಡ ಕಜಾಲ್ ಸಿನ್ಹಾ ಅವರು ನಿಧನರಾದ ಹಿನ್ನೆಲೆಯಲ್ಲಿ ನಡೆಯಲಿರುವ ಖಾರ್ದಾ ಕ್ಷೇತ್ರದ ಮರು ಚುನಾವಣೆಯಲ್ಲಿ ಶೋಭಾನ್ ದೇವ್ ಚಟ್ಟೋಪಾದ್ಯಾಯ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅಲ್ಲದೇ, ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗುವ ಸಾಧ್ಯತೆ ಇದೆ ಎಂದು ಹಲವರು ಹೇಳುತ್ತಿದ್ದಾರೆ.

ಯಾದಗಿರಿಯಲ್ಲಿ ಓಪನ್ ಆದ ಲಾಕ್ ಡೌನ್! ಎಲ್ಲೆಂದರಲ್ಲಿ ಜನ- ಜಂಗುಳಿ!

ವಿಜಯಸಾಕ್ಷಿ ಸುದ್ದಿ, ಯಾದಗಿರಿ

ಜಿಲ್ಲೆಯಲ್ಲಿ ಮೂರು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿತ್ತು. ಆದರೆ, ಇಂದು ಮತ್ತೆ ಬೆಳಿಗ್ಗೆ ಓಪನ್ ಆಗಿದೆ. ಹೀಗಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿ ಬಿದ್ದಿರುವ ದೃಶ್ಯ ಸಾಮಾನ್ಯವಾಗಿದೆ.
ಹೊಲ್ ಸೇಲ್ ಮಾರುಕಟ್ಟೆಯಲ್ಲಿ ಜನ ಜಂಗುಳಿ ತುಂಬಿ ತುಳುಕುತ್ತಿದೆ.

ಪೊಲೀಸರಿಗೂ ಡೋಂಟ್ ಕೇರ್ ಎನ್ನುತ್ತಿರುವ ಜನರು, ಸಾಮಾಜಿಕ ಅಂತರ ಮರೆತು ವ್ಯಾಪಾರ – ವಹಿವಾಟು ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ಮೂರು ದಿನಗಳಿಂದ ಸಂಪೂರ್ಣ ಲಾಕ್‍ ಡೌನ್ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದಿನಿಂದ ಬೆಳಿಗ್ಗೆ 6 ರಿಂದ 10ರ ವರೆಗೆ ತರಕಾರಿ ಮತ್ತು ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತ ನೀಡಿತ್ತು. ಆದರೆ, ಈ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜನರಿಗೆ ತಿಳಿಸಲಾಗಿದೆ. ಆದರೆ, ಜನರು ಮಾತ್ರ ತಮ್ಮ ಹಳೆಯ ಚಾಳಿ ಮುಂದುವರೆಸಿದ್ದಾರೆ.

ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ ಮಾರುಕಟ್ಟೆಯಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಜನ ಮಾತ್ರ ತಲೆ ಕೆಡಿಸಿಕೊಳ್ಳದೆ ಗುಂಪು, ಗುಂಪಾಗಿ ವ್ಯಾಪಾರ – ವಹಿವಾಟು ನಡೆಸಿದ್ದಾರೆ.

error: Content is protected !!