Home Blog Page 3148

ಯಾಸ್ ಚಂಡಮಾರುತ – ರಾಜ್ಯದಲ್ಲಿ ಇರಲಿದೆ ಮಳೆರಾಯನ ಅಬ್ಬರ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಯಾಸ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದಿನಿಂದ ಮೇ. 29ರ ವರೆಗೆ ಮಳೆರಾಯನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಈಗ ಯಾಸ್ ಚಂಡಮಾರುತದ ಪರಿಣಾಮ ಬಂಗಾಳ ಕೊಲ್ಲಿಯಲ್ಲಿ ‌ಪ್ರಭಲ ಚಂಡಮಾರುತ ಕಾಣಿಸಿಕೊಂಡಿದೆ.

ಯಾಸ್ ಚಂಡಮಾರುತದಿಂದಾಗಿ ಮೇ. 26ರಂದು ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವ್ಯಾಪಕ ಹಾನಿ ಸಂಭವಿಸುವ ಸಾಧ್ಯತೆ ಇದೆ. ಅಪ್ಪಳಿಸುವ ಸಮಯದಲ್ಲಿ, ಗಾಳಿಯ ವೇಗವು 155 ಕಿ.ಮೀ ನಿಂದ 185 ಕಿ.ಮೀ ವೇಗದಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ರೈತರಿಂದ ಕರಾಳ ದಿನ ಆಚರಣೆ!

ವಿಜಯಸಾಕ್ಷಿ ಸುದ್ದಿ, ಮೈಸೂರು

ರಾಜ್ಯದಲ್ಲಿ ರೈತರ ಹೋರಾಟಕ್ಕೆ ಮತ್ತೆ ಜೀವ ಬಂದಂತಾಗಿದೆ. ಮೇ. 26ರಂದು ರಾಜ್ಯಾದ್ಯಂತ ಕರಾಳ ದಿನಾಚರಣೆಗೆ ಕರೆ ನೀಡಲಾಗಿದೆ. ಈ ಕುರಿತು ಜಿಲ್ಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ರೈತರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಕರಾಳ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ.

ಕರಾಳ ದಿನಾಚರಣೆಯ ಹಿನ್ನೆಲೆಯಲ್ಲಿ ಮೇ. 26ರಂದು ಪ್ರತಿಯೊಬ್ಬರ ರೈತರ ಮನೆಯ ಮೇಲೆ ಕಪ್ಪು ಬಾವುಟ ಹಾರಿಸಬೇಕು. ಅಲ್ಲದೇ, ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ, ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಅಲ್ಲದೇ, ಪ್ರತಿಕೃತಿ ದಹನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು 7 ವರ್ಷಗಳೇ ಕಳೆದಿವೆ. ಆದರೆ, ಇಂತಹ ಕೆಟ್ಟ ಹಾಗೂ ದುಷ್ಟ ಸರ್ಕಾರವನ್ನೇ ಇಲ್ಲಿಯವರೆಗೆ ರೈತ ಸಂಕುಲ ಕಂಡಿಲ್ಲ. ಈ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದು ಅವರು ಕಿಡಿಕಾರಿದ್ದಾರೆ.

ಮುಂದುವರಿದ ಶುಭಸುದ್ದಿ, ಗುಣಮುಖರ ಸಂಖ್ಯೆಯಲ್ಲಿ ಗಣನೀಯ ಏರಿಕೆ, ನಾಲ್ವರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಸೋಂಕು ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗುತ್ತಿದೆ. ನಿನ್ನೆಯಿಂದ ಎರಡು ನೂರರ ಗಡಿ ದಾಟಿದ್ದ ಸೋಂಕಿನ ಸಂಖ್ಯೆ, ಇವತ್ತು ಕೂಡ ಎರಡು ನೂರರ ಗಡಿ ದಾಟಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಹೆಚ್ಚು.

ಇಂದಿನ 259 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 21665 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -93, ಮುಂಡರಗಿ-27, ನರಗುಂದ-31, ರೋಣ-24, ಶಿರಹಟ್ಟಿ-70, ಹೊರಜಿಲ್ಲೆಯ-14 ಸೇರಿದಂತೆ 259 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 222 ಕ್ಕೇರಿದೆ.

ಗದಗ ತಾಲೂಕಿನ ಕಳಸಾಪೂರ ನಿವಾಸಿ
75 ವರ್ಷದ ವ್ಯಕ್ತಿ ಮೇ-14 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 23 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 62 ವರ್ಷದ ವ್ಯಕ್ತಿ ಮೇ -12 ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 24 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಕಳಸಾಪೂರ ನಿವಾಸಿ 68 ವರ್ಷದ ವ್ಯಕ್ತಿ ಮೇ 14 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 24 ರಂದು ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಾಳ ನಿವಾಸಿ 40 ವರ್ಷದ ವ್ಯಕ್ತಿ ಮೇ 16 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 24 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಕೂಡ ದಾಖಲೆಯ 447 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 18388 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 3055 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಚಂದನವನದ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ ಇನ್ನಿಲ್ಲ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಂಗಭೂಮಿ, ಸಿನಿಮಾ ಹಾಗೂ ಧಾರಾವಾಹಿಯ ಹಿರಿಯ ಕಲಾವಿದ ಬಿ.ಎಂ. ಕೃಷ್ಣೇಗೌಡ(80) ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೃಷ್ಣೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ಸೋಂಕಿನಿಂದ ಗುಣಮುಕರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗಿನ ಜಾವ 4.15ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರನ್ನು ಸಾವನ್ನಪ್ಪಿದ್ದಾರೆ. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ತಿಂಗಳು ಕೃಷ್ಣೇಗೌಡರ ಪುತ್ರ ಸತೀಶ್ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.

ಮುಖ್ಯಮಂತ್ರಿ ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿ ಅಭಿನಯಿಸುವ ಮೂಲಕ ಕೃಷ್ಣೇ ಗೌಡ ಅವರು ಖ್ಯಾತಿ ಪಡೆದಿದ್ದರು. ಕನ್ನಡ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರು.
ಹಿರಿಯ ಕಲಾವಿದರನ್ನು ಕಳೆದುಕೊಂಡ ಚಂದನವನ ತಬ್ಬಲಿಯಾದಂತಾಗಿದೆ. ಹೀಗಾಗಿ ಹಲವು ನಟ – ನಟಿಯರು ಇವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ನಟಿಯ ಮನೆಗೆ ನುಗ್ಗಿ ಚಾಕುವಿನಿಂದ ತಂದೆಗೆ ಇರಿದ ದುಷ್ಕರ್ಮಿ!

ವಿಜಯಸಾಕ್ಷಿ ಸುದ್ದಿ, ಪುಣೆ

ಮರಾಠಿ ನಟಿ ಸೋನಾಲಿ ಕುಲಕರ್ಣಿ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿ ಅವರ ತಂದೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಹಾರಾಷ್ಟ್ರದ ಪುಣೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಟಿ ಸೋನಾಲಿ ಕುಲಕರ್ಣಿ ಅವರ ಅಪಾರ್ಟ್ ಮೆಂಟ್ ನಲ್ಲಿ ದರೋಡೆ ಮಾಡಲು ಆ ದುಷ್ಕರ್ಮಿ ಯತ್ನಿಸಿದ್ದಾನೆ. ಅಪಾರ್ಟ್ ಮೆಂಟ್ ನ ಮೇಲ್ಛಾವಣಿ ಮೂಲಕ ಆತ ಮನೆಯೊಳಗೆ ನುಗ್ಗಿದ್ದಾನೆ.
ಇದನ್ನು ಗಮನಿಸಿದ ನಟಿಯ ತಂದೆ ಆ ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ದುಷ್ಕರ್ಮಿ ಚಾಕುವಿನಿದಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ನಟಿಯ ತಂದೆಗೆ ಗಾಯಗಳಾಗಿವೆ. ಮನೆಯವರ ಕೂಗಾಟ ಕಂಡು ಅಕ್ಕಪಕ್ಕದವರು ಓಡಿ ಬಂದು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನನ್ನು 28 ವರ್ಷದ ಅಜಯ್ ಶೆಗ್ಟೆ ಎಂದು ಗುರುತಿಸಲಾಗಿದೆ.
ಆದರೆ, ಈ ವ್ಯಕ್ತಿ ನಾನು ಸೋನಾಲಿ ಅವರ ಅಭಿಮಾನಿ ಎಂದು ಹೇಳಿದ್ದಾನೆ.

ವಿಜಯಸಾಕ್ಷಿ ಇಂಪ್ಯಾಕ್ಟ್; ಬಂಡಿ ಸಿಟ್ಟಿಗೆ ಸಸ್ಪೆಂಡ್ ಆಗಿದ್ದ ಎಎಸ್ಐ ಕರ್ತವ್ಯಕ್ಕೆ ಹಾಜರ್

ವಿಜಯಸಾಕ್ಷಿ ಸುದ್ದಿ, ಗದಗ

ಬಿಜೆಪಿ ಕಾರ್ಯಕರ್ತನ ಬೈಕ್ ತಡೆದಿದ್ದಕ್ಕೆ ಅಮಾನತಾಗಿದ್ದ ಬೆಟಗೇರಿ ಠಾಣೆಯ ಮಹಿಳಾ‌ ಎಎಸ್ಐ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಮೇ 17ರಂದು ಬೆಟಗೇರಿಯ ಟಿಂಗಿನಕಾಯಿ ಬಜಾರ್‌ನಲ್ಲಿ ಲಾಕ್ ಡೌನ್ ಇದ್ದರೂ ಬೈಕ್‌ನಲ್ಲಿ ಬಂದಿದ್ದ ಅಬ್ಬಿಗೇರಿ ಗ್ರಾಮದ ಬಿಜೆಪಿ ಕಾರ್ಯಕರ್ತನನ್ನು ಕರ್ತವ್ಯದಲ್ಲಿ ಇದ್ದ ಮಹಿಳಾ ಎಎಸ್ಐ ಎನ್.ಸಿ. ಮೂಲಿಮನಿ ತಡೆದಿದ್ದರು.

ಬೈಕ್ ತಡೆದಿದ್ದೇ ದೊಡ್ಡ ಅಪರಾಧ ಎಂಬಂತೆ ಬಡಪಾಯಿ ಮಹಿಳಾ ಎಎಸ್ಐ ಮೇ 18ರಂದು ಅಮಾನತಾಗಿದ್ದರು. ತಾನಾಯಿತು, ತಮ್ಮ ಕರ್ತವ್ಯವಾಯಿತು ಎಂದು ಯಾರ ಮುಲಾಜಿಗೂ ಬಗ್ಗದೆ ಇಡೀ ಠಾಣೆಯ ಸಿಬ್ಬಂದಿಗೆ ಅಚ್ಚುಮೆಚ್ಚಿನವರಾಗಿದ್ದ‌ ಮೂಲಿಮನಿ‌ ಅವರನ್ನು ಅಮಾನತು ಮಾಡಿರುವುದರಿಂದ ಅನೇಕ ಪೊಲೀಸರು, ಅಧಿಕಾರಿಗಳಿಗೆ ದಿಗ್ಬ್ರಮೆ ಆಗಿತ್ತು. ಸೀದಾ ಸಾದಾ ನೌಕರಿ ಮಾಡೋರಿಗೆ ಈ ರೀತಿ ಆದ್ರೆ ನಮ್ಮಂಥವರ ಪರಿಸ್ಥಿತಿ ಹೇಗೆ ಎಂದು ಆತಂಕಕ್ಕೆ ಒಳಗಾಗಿದ್ದರು.

ಇದನ್ನೂ ಓದಿ ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್; ಶಾಸಕರೇ ಇದು ಸರೀನಾ?

`ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್, ಶಾಸಕರೇ ಇದು ಸರೀನಾ?’ ಎಂಬ ಶಿರೋನಾಮೆಯಲ್ಲಿ ವಿಜಯಸಾಕ್ಷಿ ವೆಬ್ ಪೋರ್ಟಲ್ ನಲ್ಲಿ ಮೇ-21 ರ ಮುಂಜಾನೆ 9 ಗಂಟಿಗೆ ಸುದ್ದಿ ಬಿತ್ತರಿಸಲಾಗಿತ್ತು. ಇದನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಮೇ 21ರ ಮುಂಜಾನೆ 11 ಗಂಟೆ ಸುಮಾರಿಗೆ ಸಸ್ಪೆಂಡ್ ಆಗಿದ್ದ ಮಹಿಳಾ‌ ಎಎಸ್ಐ ಎನ್ ಸಿ ಮೂಲಿಮನಿ ಅವರಿಂದ ಅಮಾನತು ಆದೇಶ ಹಿಂಪಡೆಯಲು ಮನವಿ ಸ್ವೀಕರಿಸಿದ್ದರು.

ಸೌಮ್ಯ ಸ್ವಭಾವದ ಎಸ್ಪಿ ಯತೀಶ್ ಎನ್. ಅವರು ವಿಚಾರಣೆಯನ್ನು ಬಾಕಿ ಇರಿಸಿ ಅಮಾನತು ಆದೇಶ ರದ್ದು ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೋಮವಾರ ಮೇ 24ರಂದು‌‌ ಆದೇಶ ಹೊರಡಿಸಿದ್ದಾರೆ.

ವಿಜಯಸಾಕ್ಷಿ ಇಂಪ್ಯಾಕ್ಟ್; ಬಂಡಿ ಸಿಟ್ಟಿಗೆ ಸಸ್ಪೆಂಡ್ ಆಗಿದ್ದ ಎಎಸ್ಐ ಕರ್ತವ್ಯಕ್ಕೆ ಹಾಜರ್

ವಿಜಯಸಾಕ್ಷಿ ಸುದ್ದಿ, ಗದಗ

ಬಿಜೆಪಿ ಕಾರ್ಯಕರ್ತನ ಬೈಕ್ ತಡೆದಿದ್ದಕ್ಕೆ ಅಮಾನತಾಗಿದ್ದ ಬೆಟಗೇರಿ ಠಾಣೆಯ ಮಹಿಳಾ‌ ಎಎಸ್ಐ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ.

ಮೇ 17ರಂದು ಬೆಟಗೇರಿಯ ಟಿಂಗಿನಕಾಯಿ ಬಜಾರ್‌ನಲ್ಲಿ ಲಾಕ್ ಡೌನ್ ಇದ್ದರೂ ಬೈಕ್‌ನಲ್ಲಿ ಬಂದಿದ್ದ ಅಬ್ಬಿಗೇರಿ ಗ್ರಾಮದ ಬಿಜೆಪಿ ಕಾರ್ಯಕರ್ತನನ್ನು ಕರ್ತವ್ಯದಲ್ಲಿ ಇದ್ದ ಮಹಿಳಾ ಎಎಸ್ಐ ಎನ್.ಸಿ. ಮೂಲಿಮನಿ ತಡೆದಿದ್ದರು.

ತಡೆದಿದ್ದೇ ದೊಡ್ಡ ಅಪರಾಧ ಎಂಬಂತೆ ಬಡಪಾಯಿ ಮಹಿಳಾ ಎಎಸ್ಐ ಮೇ 18ರಂದು ಅಮಾನತಾಗಿದ್ದರು. ತಾನಾಯಿತು, ತಮ್ಮ ಕರ್ತವ್ಯವಾಯಿತು ಎಂದು ಯಾರ ಮುಲಾಜಿಗೂ ಬಗ್ಗದೆ ಇಡೀ ಠಾಣೆಯ ಸಿಬ್ಬಂದಿಗೆ ಅಚ್ಚುಮೆಚ್ಚಿನವರಾಗಿದ್ದ‌ ಮೂಲಿಮನಿ‌ ಅವರನ್ನು ಅಮಾನತು ಮಾಡಿರುವುದರಿಂದ ಅನೇಕ ಪೊಲೀಸರು, ಅಧಿಕಾರಿಗಳಿಗೆ ದಿಗ್ಬ್ರಮೆ ಆಗಿತ್ತು. ಸೀದಾ ಸಾದಾ ನೌಕರಿ ಮಾಡೋರಿಗೆ ಈ ರೀತಿ ಆದ್ರೆ ನಮ್ಮಂಥವರ ಪರಿಸ್ಥಿತಿ ಹೇಗೆ ಎಂದು ಆತಂಕಕ್ಕೆ ಒಳಗಾಗಿದ್ದರು.

`ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್, ಶಾಸಕರೇ ಇದು ಸರೀನಾ?’ ಎಂಬ ಶಿರೋನಾಮೆಯಲ್ಲಿ ವಿಜಯಸಾಕ್ಷಿ ವೆಬ್ ಪೋರ್ಟಲ್ ನಲ್ಲಿ ಮೇ-21 ರ ಮುಂಜಾನೆ 9 ಗಂಟಿಗೆ ಸುದ್ದಿ ಬಿತ್ತರಿಸಲಾಗಿತ್ತು. ಇದನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಮೇ 21ರ ಮುಂಜಾನೆ 11 ಗಂಟೆ ಸುಮಾರಿಗೆ ಸಸ್ಪೆಂಡ್ ಆಗಿದ್ದ ಮಹಿಳಾ‌ ಎಎಸ್ಐ ಎನ್ ಸಿ ಮೂಲಿಮನಿ ಅವರಿಂದ ಅಮಾನತು ಆದೇಶ ಹಿಂಪಡೆಯಲು ಮನವಿ ಸ್ವೀಕರಿಸಿದ್ದರು.

ಸೌಮ್ಯ ಸ್ವಭಾವದ ಎಸ್ಪಿ ಯತೀಶ್ ಎನ್. ಅವರು ವಿಚಾರಣೆಯನ್ನು ಬಾಕಿ ಇರಿಸಿ ಅಮಾನತು ಆದೇಶ ರದ್ದು ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೋಮವಾರ ಮೇ 24ರಂದು‌‌ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 4 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಅರ್ಜಿಗಳನ್ನು ಮೇ. 25 ರಿಂದ ಜೂನ್ 25ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು.

ಅಭ್ಯರ್ಥಿಗಳು ಪಿಯುಸಿ, 10+2, ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಹಾಗೂ ಬುಡಕಟ್ಟು ಜನಾಂಗ, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ. 400 ಹಾಗೂ ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು ರೂ. 200 ಅರ್ಜಿ ಶುಲ್ಕವನ್ನು ಕಟ್ಟಬೇಕು. ಅರ್ಜಿ ಶುಲ್ಕ ಪಾವತಿಸಲು ಜೂನ್ 28 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಬಹುದು.

ಮೇ 27 ರಿಂದ ಜೂನ್ ಒಂದರವರೆಗೆ ಗದಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಚಿವ ಪಾಟೀಲ್, ಮೇ27 ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಮಂಗಳವಾರ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ಮಾಡಲಾಗುವುದು ಎಂದು ಸಿ ಸಿ ಪಾಟೀಲ್ ಹೇಳಿದರು.

ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವರು, ಜನರು ಸಹಕಾರ ನೀಡಬೇಕು. ಅಂದಾಗ ಮಾತ್ರ ಕೊರೊನಾ ಸೋಂಕು ನಿಯಂತ್ರಣ ಮಾಡಲು ಸಾಧ್ಯ ಎಂದರು.

ಕಠಿಣ ಲಾಕ್ ಡೌನ್ ಸಂದರ್ಭದಲ್ಲಿ
ತರಕಾರಿ, ಹಣ್ಣು, ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು ಎಂದರಲ್ಲದೇ ಎಲ್ಲಾ ಬಗೆಯ ಮಾರುಕಟ್ಟೆಗಳ ಬಂದ್ ಇರಲಿವೆ‌ ಎಂದು ಸ್ಪಷ್ಟ ಪಡಿಸಿದರು.

ತಳ್ಳುಗಾಡಿವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ವ್ಯಾಪಾರ ಮಾಡಬೇಕು, ಜನರೂ ಸಹ ಮಾಸ್ಕ್ ಧರಿಸಿಯೇ ವ್ಯಾಪಾರ ಮಾಡಬೇಕು ಎಂದರು.

ಹಾಲು ಮಾರಾಟ ಪ್ರತಿದಿನ ಬೆಳಿಗ್ಗೆ 8 ಗಂಟೆಯವರೆಗೆ ಅವಕಾಶವಿದ್ದು, ಕಿರಾಣಿ ಸಾಮಾನುಗಳಿಗೆ ಹೋಂ ಡಿಲೆವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದರು.

ರೈತರು ರೈತಾಪಿ ವಸ್ತುಗಳನ್ನು ಖರೀದಿ ಮಾಡಲು ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶವಿದೆ. ನಗರ ಹಾಗೂ ಹಳ್ಳಿಗಳಲ್ಲಿಯೂ ಸಹ ಎಲ್ಲಾ ಬಗೆಯ ಹೋಟೆಲ್ ಗಳೂ ಬಂದ್ ಇರಲಿವೆ.

ಹೊಟೇಲ್, ಇದ್ದರೆ ಗ್ರಾಮಾಂತರ ಪ್ರದೇಶದಲ್ಲಿ ಪಿಡಿಒ ಹಾಗೂ ತಲಾಟೆ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದ ಸಚಿವ ಪಾಟೀಲ್,

ಬಾರ್ ಹಾಗೂ ವೈನ್ ಶಾಪ್ ಗೂ ಸಹ 1 ನೇ ತಾರೀಖಿನವರೆಗೂ ಬಂದ್ ಇರಲಿವೆ ಎಂದರು. ಮಾಂಸದಂಗಡಿಗಳೂ ಕೂಡ ಬಂದ್ ಇರಲಿವೆ ಎಂದು ಸಚಿವ ಸಿ ಸಿ ಪಾಟೀಲ್ ಹೇಳಿದರು.

ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಕದ ಹಾಕಿಕೊಂಡು ಕಚೇರಿಯಲ್ಲಿ ಕೆಲಸ ಮಾಡಲು ಅವಕಾಶ ಇದೆ. ಜನರಿಗೆ ಡಿಪಾಸಿಟ್ ಹಾಗೂ ಹಣ ತೆಗೆಯಲು ಅವಕಾಶವಿಲ್ಲ.

ಲಸಿಕೆಗೆ ಸಂಬಂಧಿಸಿದಂತೆ ಮಾಹಿತಿ ‌ನೀಡಿರುವ ಸಚಿವ ಪಾಟೀಲ್, ಕೋವ್ಯಾಕ್ಸಿನ್ ಎರಡನೇ ಡೋಸ್ ಗೆ ಮಾತ್ರ ಅವಕಾಶವಿದೆ.
ಕೋವಿಶೀಲ್ಡ್ ಗೆ 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್ ಗೆ ಅವಕಾಶವಿದೆ ಎಂದರು.

ಅನಾವಶ್ಯಕವಾಗಿ ವಾಹನಗಳು ಬಂದರೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ.

ಮದುವೆ ಸೇರಿದಂತೆ ಎಲ್ಲಾ ಬಗೆಯ ಶುಭ ಕಾರ್ಯಗಳಿಗೂ ಕಡಿವಾಣ ಹಾಕಲಾಗಿದೆ. ಪೂರ್ವ ನಿಗದಿತ ಮದುವೆಗೆಳಿಗೆ ಷರತ್ತಿಗೊಳಪಟ್ಟು ಅನುಮತಿ ನೀಡಲಾಗುವುದು ಎಂದರು.

ಅಕ್ಕಪಕ್ಕದ ಜಿಲ್ಲೆಗಳಿಂದ ಜನರು ಬರುತ್ತಿರುವ ಹಿನ್ನೆಲೆ ಕೊರೊನಾ ಹೆಚ್ಚಳ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಸದ್ಯಕ್ಕೆ ಜಿಲ್ಲೆಯಲ್ಲಿ ಕೊರೊನಾ ತಹಬದಿಗೆ ಬರುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮದ ಅಂಗವಾಗಿ ಲಾಕ್ ಡೌನ್‌ ಮಾಡಲು ಉದ್ದೇಶಿಸಿಲಾಗಿದೆ ಎಂದರು.

ಸಾಲ ಮಾಡಿ ಜಗಳ ಮಾಡಿದ; ಮಡದಿ ಮಕ್ಕಳನ್ನು ಹೊರಗೆ ಹಾಕಿ ನೇಣಿಗೆ ಶರಣಾದ!

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಸಾಲದ ವಿಚಾರವಾಗಿ ಮಡದಿಯೊಂದಿಗೆ ಜಗಳ ಮಾಡಿದ ಪತಿರಾಯ ತಡರಾತ್ರಿ ನೇಣಿಗೆ ಶರಣಾದ ಘಟನೆ ಬೇಪಾರಿ ಪ್ಲಾಟ್ ನಲ್ಲಿ ನಡೆದಿದೆ.

ಅಮೀರ್ ಮಹಮ್ಮದ್ ಅಲಿ ಮನಿಯಾರ್ (28) ನೇಣಿಗೆ ಶರಣಾದ ವ್ಯಕ್ತಿ.

ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ಕುರಿತು ಜಗಳ ಮಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ.

ಆದ್ರೆ ಇದು ಆತ್ಮಹತ್ಯೆಯೋ ಅಥವಾ ಘಟನೆಗೆ ಬೇರೆ ಏನಾದರೂ ಕಾರಣವಿರಬಹುದೇ ಎಂಬುದನ್ನು ಪೊಲೀಸರ ತನಿಖೆಯಿಂದಲೇ ಹೊರಬೀಳಬೇಕಿದೆ. ಘಟನೆಯ ಸುದ್ದಿ ತಿಳಿದು ಸ ಹಳೆಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!