Home Blog Page 3148

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ಬೆಂಗಳೂರಿಗೆ

0

ಬೆಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ  ಇಂದು (ನ.24) ಬೆಂಗಳೂರಿಗೆ ಆಗಮಿಸಲಿದೆ. ಹೆಚ್​ಎಎಲ್ ಏರ್​ಪೋರ್ಟ್​ಗೆ ಬರಲಿರುವ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಸರ್ಕಾರ ವತಿಯಿಂದ ಗೌರವ ಸಲ್ಲಿಸಲಾಗುತ್ತದೆ. ನಂತರ ಬನ್ನೇರುಘಟ್ಟ ಸಮೀಪ ನಂದನವನ ಲೇಔಟ್​ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ.

ಇಲ್ಲಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸುತ್ತಾರೆ. ಪ್ರಾಂಜಲ್ ಅವರ ತಂದೆ ವೆಂಕಟೇಶ್ ಎಂಆರ್​ಪಿಎಲ್​​ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ. ಎಂಆರ್​ಪಿಎಲ್ ಅಧಿಕಾರಿ ಸುದರ್ಶನ್ ಸೇರಿದಂತೆ 10 ಜನ ಸಿಬ್ಬಂದಿ ಪ್ರಾಂಜಲ್​​ ಅವರ ಮನೆಯಲ್ಲಿ ಮೊಕ್ಕಾಂ ಹೋಡಿದ್ದಾರೆ.  ಸಿಬ್ಬಂದಿ ಮನೆಯ ಬಳಿ ಅಂತಿಮ ದರ್ಶನಕ್ಕೆ ಎಲ್ಲಾ ಸಿದ್ಧತೆ ಮಾಡುತ್ತಿದ್ದಾರೆ. ಸೋಮಸಂದ್ರಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುಣ್ಯಸ್ಮರಣೆ

0

ಖ್ಯಾತ ನಟ‌‌ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುಣ್ಯಸ್ಮರಣೆ. ಕಲಾಸೇವೆಯ ಜೊತೆ ಜೊತೆಗೆ ರಾಜಕೀಯದಲ್ಲೂ ತಮ್ಮನ್ನ ತಾವು ತೊಡಗಿಸಿಕೊಂಡಿದ್ದ ಅಂಬಿ ಅವರು ಕನ್ನಡಿಗರ ಹೃದಯದಲ್ಲಿ ಸದಾ ಅಜರಾಮರವಾಗಿದ್ದಾರೆ.

ಅಂಬಿ ನಮ್ಮನ್ನ ಅಗಲಿ ಭರ್ತಿ ಐದು ವರ್ಷವಾಗಿದೆ ಇವತ್ತು ಪುತ್ರ ನಟನೆಯ ಸಿನಿಮಾ ಬ್ಯಾಡ್ ಮ್ಯಾನರ್ಸ್ ಕೂಡ ರಿಲೀಸ್ ಆಗುತ್ತಿದೆ ಮಂಡ್ಯದ ಗಂಡು ಇದ್ದಷ್ಟು ದಿನ ಎಲ್ಲರನ್ನು ರಂಜಿಸಿಯೇ ಹೋಗಿದ್ದು ಎಲ್ಲರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ

ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ಜೈಲಿಗೆ ಹೋಗುತ್ತಾರೆ: ಈಶ್ವರಪ್ಪ

0

ಶಿವಮೊಗ್ಗಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ಜೈಲಿಗೆ ಹೋಗುತ್ತಾರೆ.

ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಮಾಜಿ ಸಚಿವ ಕೆಎಸ್ಈಶ್ವರಪ್ಪ ಹೇಳಿದರು.

ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ

0

ಬಾಗಲಕೋಟೆ: ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬಾಗಲಕೋಟೆಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಕಸುಬಾದ ಕಲ್ಲು ಹೊಡೆಯುವ ಮೂಲಕ ಭೋವಿ ಸಮುದಾಯದ ಕುಲಗುರು ಶರಣಬಸವ ಅಪ್ಪಂಗಳ್ ಅವರ ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಭೋವಿ ಅಭಿವೃದ್ಧಿ ನಿಗಮ ಮಾಡುವ ಭರವಸೆ ನಾನು ನೀಡಿದ್ದೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಅಭಿವೃದ್ಧಿ ನಿಗಮ ಮಾಡಿದೆ. ಈಗಲೂ ನಿಮ್ಮ ಬೇಡಿಕೆ ಈಡೇರಿಸಲು ನಾನು ಸಿದ್ದ ಎಂದು ಭರವಸೆ ನೀಡಿದರು.

ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು. ನಾನು  ಸಮುದಾದಾಯಕ್ಕೆ ಆರ್ಥಿಕ ಶಕ್ತಿ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮಗಿರಲಿ. ನಾನು ಸಿದ್ದರಾಮೇಶ್ವರರ ವಚನಗಳಲ್ಲಿ, ಆಶಯಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದರು.

ಬಸವಣ್ಣನವರಿಗಿಂತ ಮೊದಲು ಧರ್ಮ ಬೋಧನೆ ಜನರ ಭಾಷೆಯಲ್ಲಿ ಆಗುತ್ತಿರಲಿಲ್ಲ. ಶರಣರು ಬಂದ ಬಳಿಕ ಜನರ ಭಾಷೆಯಲ್ಲಿ ಧಾರ್ಮಿಕ ಬೋಧನೆ ಶುರುವಾಯಿತು. ಜನರಿಗಾಗಿ ಧರ್ಮ ಇರುವುದು. ಧರ್ಮಕ್ಕಾಗಿ ನಾವು ಇರುವುದಲ್ಲ ಎಂದು ಸ್ಪಷ್ಟಪಡಿಸಿ ಮೌಡ್ಯ ಕಂದಾಚಾರಗಳ, ಜಾತಿಯನ್ನು ಬಿಡಬೇಕು ಎನ್ನುವುದು ಶರಣರ , ವಚನಕಾರರ ಆಶಯವಾಗಿತ್ತು. ಇದನ್ನು ಆಚರಿಸುವವರೇ ನಿಜ ಶರಣರು ಎಂದರು.

ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿಗಳ ಸಂಸ್ಮರಣೋತ್ಸವದ ಅಂಗವಾಗಿ ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭೋವಿ ಜನಸಮುದಾಯದ ಸಮಾವೇಶದಲ್ಲಿ ಸಾಂಕೇತಿಕವಾಗಿ ಸುತ್ತಿಗೆ ಹಿಡಿದು ಕಲ್ಲು ಒಡೆಯುವ ಮೂಲಕ ಉದ್ಘಾಟಿಸಿದರು.

ಭೋವಿ ಗುರುಪೀಠದ ಶ್ರೀ ನಿರಂಜನ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿಕ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಸೇರಿದಂತೆ ಮುಂತಾದ ಸಮುದಾಯಗಳಿಗೆ ನೀಡಿರುವ ಅಪಾರ ಕೊಡಿಗೆಗಳನ್ನು ಪಟ್ಟಿ ಮಾಡಿ ಇಡಿ ಸಮುದಾಯದ ಪರವಾಗಿ ಧನ್ಯವಾದ ಅರ್ಪಿಸಿದರು.

ಶಾಸಕರಾದ ಮಾನಪ್ಪ ವಜ್ಜಲ್ ಸೇರಿದಂತೆ ಹಲವಾರು ಶಾಸಕರು, ಮಾಜಿ ಶಾಸಕರುಗಳು ಮತ್ತು ಭೋವಿ , ಕೊರಮ, ಕೊರಚ ಸಮುದಾಯಗಳ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗುರು ಕುಟೀರಕ್ಕೆ ಭೇಟಿ ನೀಡಿದಾಗ ಶ್ರೀಗಳೇ ತಮ್ಮ ಕೈಯಾರೆ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದರು. ಅಲ್ಲೇ ಪ್ರಸಾದ ಸೇವಿಸುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದ್ದಾಗಿ ಶ್ರೀಗಳು ಬೃಹತ್ ಸಭೆಗೆ ತಿಳಿಸಿದರು.

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕುಬ್ಜ ಯುವತಿ

0

ಧಾರವಾಡ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕುಬ್ಜ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಸಿಬಿ ನಗರದಲ್ಲಿರುವ ಲಿಂಗಾಯತ ಭವನದ ಹಿಂಭಾಗದಲ್ಲಿ ನಡೆದಿದೆ. ದೀಪಾ ಪಾಟೀಲ (27) ಎಂಬ ಕುಬ್ಜ ಯುವತಿಯೇ ಆತ್ಮಹತ್ಯೆ ಮಾಡಿಕೊಂಡವಳು.

ಸಂಜೆ ಮನೆಯಿಂದ ಹೊರ ಹೋಗಿದ್ದ ದೀಪಾ, ಲಿಂಗಾಯತ ಭವನದ ಹಿಂಭಾಗದಲ್ಲಿರುವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುಟುಂಬದವರು ಆಕೆಗಾಗಿ ಹುಡುಕಾಟ ಸಹ ನಡೆಸಿದ್ದರು. ಆದರೆ, ಲಿಂಗಾಯತ ಭವನದ ಬಳಿ ಇರುವ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಹೊಸಬರ ‘ಒನ್ ಅಂಡ್ ಆಫ್’ ಸಿನಿಮಾದ ಫಸ್ಟ್ ಲುಕ್ ಅನಾವರಣ… ಇದು ಸುಲಕ್ಷ್ಮೀ ಫಿಲಂಸ್ ನ ಚೊಚ್ಚಲ ಪ್ರಯತ್ನ

0

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ವಿಭಿನ್ನ ಬಗೆಯ ಕಥಾಹಂದರದ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾವೇ ಒನ್ ಅಂಡ್ ಆಫ್. ರಂಗ್ಬಿರಂಗಿ, ಡೆವಿಡ್, ದಿ ವೆಕೆಂಟ್ ಹೌಸ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಶ್ರೇಯಸ್ ಚಿಂಗಾ ಒನ್ ಅಂಡ್ ಆಫ್ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಶ್ರೇಯಸ್ ಅಭಿನಯಿಸ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋಸ್ ನಲ್ಲಿ ಸುಲಕ್ಷ್ಮೀ ಫಿಲಂಸ್ ನಿರ್ಮಾಣ ಸಂಸ್ಥೆ ಲೋಗೋ ಹಾಗೂ ಒನ್ ಅಂಡ್ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಲಾಯಿತು. ಈ ವೇಳೆ ಇಡೀ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಟ ಕಂ ನಿರ್ದೇಶಕ ಶ್ರೇಯಸ್ ಚಿಂಗಾ ಮಾತನಾಡಿ, ಕಂಪ್ಲೀಟ್ ಕಾಮಿಡಿ ಸಿನಿಮಾ. ಇವತ್ತಿನಿಂದ ಶೂಟಿಂಗ್ ಶುರುವಾಗಿದೆ. ಐಟಿ ಕಂಪನಿ ಅಂದ್ಮೇಲೆ ಸಾಕಷ್ಟು ಜನ ಹುಡುಗಿಯರು ಇರುತ್ತಾರೆ. ಮಾನ್ವಿತಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಬೆಂಗಳೂರು, ಗೋವಾ ಭಾಗದಲ್ಲಿ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ಮಣಿಕಾಂತ್ ಕದ್ರಿ ಸರ್ ಸಂಗೀತ ಸಿನಿಮಾಕ್ಕಿದೆ ಎಂದರು.

ಮಾನ್ವಿತಾ ಹರೀಶ್ ಮಾತನಾಡಿ, ಈ ಸಿನಿಮಾ ಮಾಡಲು ತುಂಬಾ ಕಾರಣಗಳಿವೆ. ಶ್ರೇಯಸ್ ಹೇಳಿದ ಕಥೆ ಇಷ್ಟವಾಯ್ತು. ಶ್ರೇಯಸ್ ಒಳ್ಳೆ ನಟ. ಒಳ್ಳೆ ಬರಹಗಾರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವ ಅನುಭವ. ನನ್ನ ಪಾತ್ರದ ಹೆಸರು ನಿಧಿ. ನಿಧಿ ಟ್ರಬಲ್ ಮೇಕರ್. ಒಂದೊಳ್ಳೆ ಪಾತ್ರ ಎಂದು ತಿಳಿಸಿದರು.

ನಿರ್ಮಾಪಕ ಚರಣ್ ಸುಬ್ಬಯ್ಯ, ಸುಲಕ್ಷ್ಮೀ ಫಿಲ್ಮಂಸ್ ಅಂತಾ ಯಾಕೆ ಇಟ್ಟಿದೆ ಅಂದರೆ ಸು-ಸುಬ್ಬಯ್ಯ ನಮ್ಮ ತಾತ, ಲಕ್ಷ್ಮೀ-ಅಜ್ಜಿ ನಮ್ಮ ಮನೆ ಹೆಸರು ಸುಲಕ್ಷ್ಮೀ. ಹೀಗಾಗಿ ನಮ್ಮ ಪ್ರೊಡಕ್ಷನ್ ಹೌಸ್ ಗೆ ಈ ಹೆಸರಿಟ್ಟಿದ್ದೇವೆ. ನಾನು ನಿರ್ಮಾಪಕನಾಗಿ ಆಗಿದ್ದೇನೆ ಅನ್ನುವುದಕ್ಕೆ ಹೆಮ್ಮೆಯಾಗುತ್ತಿದೆ. ನಾನು ಒಬ್ಬ ಚಿತ್ರನಟ. ರಂಗ್ಬಿರಂಗಿ ನಟಿಸಿದ್ದೇನೆ. ಅಂದೇ ನಾನು ಹೇಳಿದ್ದೇ ನಾನು ನಿರ್ಮಾಪಕನಾಗುತ್ತೇನೆ ಎಂದಿದ್ದೆ ಎಂದರು.

ಶ್ರೇಯಸ್ ಚಿಂಗಾ ನಾಯಕನಾಗಿ ನಟಿಸ್ತಿದ್ದು, ಮಾನ್ವಿತಾ ಹರೀಶ್ ಕಾಮತ್ ಮುಖ್ಯಭೂಮಿಕೆಯಲ್ಲಿ, ಸಾಧು ಕೋಕಿಲಾ, ಅನಿನಾಶ್ ಯೆಳಂದೂರ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಅನಂತು, ಸುಂದರಶ್ರೀ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ತಾರಾಬಳಗದಲ್ಲಿದ್ದಾರೆ. ವಿಶೇಷ ಅಂದರೆ ಸಿನಿಮಾದಲ್ಲಿ ಹೀರೋಗೆ ಕನ್ನಡ ಎಂಬ ಹೆಸರಿಡಲಾಗಿದೆ. ದೇವೇಂದ್ರ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ಒನ್ ಅಂಡ್ ಆಫ್ ಸಿನಿಮಾಕ್ಕಿದೆ. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರದ ಹೊಂದಿರುವ ಒನ್ ಅಂಡ್ ಆಫ್ ಸಿನಿಮಾವನ್ನು ಸುಲಕ್ಷ್ಮೀ ಫಿಲಂಸ್ ನಡಿ ಚರಣ್ ಸುಬ್ಬಯ್ಯ ನಿರ್ಮಾಣ ಮಾಡುತ್ತಿದ್ದಾರೆ.

ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ: ಜಿ. ಪರಮೇಶ್ವರ್

0

ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ಕಾಣೆ ಆಗಿದೆ ಅನ್ನೋದೆಲ್ಲ ಸುಳ್ಳು ವಿರೋಧ ಪಕ್ಷವರು ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ ಅದು ಸರಿಯಲ್ಲ ಎಂದು ಹೇಳಿದ್ದರು.

ಜಾತಿಗಣತಿ ವರದಿ ಗೊಂದಲವಾಗಿರೋ ವಿಚಾರವಾಗಿ ಜಿ. ಪರಮೇಶ್ವರ್ ಮಾತನಾಡಿದ ಅವರು, ಆ ವರದಿಯನ್ನ ನಾವಿನ್ನು ಹೊರಗೆ ತಂದೆ ಇಲ್ಲ. ಆಯೋಗದವರು ವರದಿಯನ್ನ ಸರ್ಕಾರಕ್ಕೆ ಕೊಟ್ಟ ನಂತರ ಸರ್ಕಾರ ಅದನ್ನ ತೀರ್ಮಾನ ಮಾಡುತ್ತದೆ ಎಂದರು.

ಮೂಲ ಪ್ರತಿ ಕಾಣೆ ಆಗಿದೆ ಅನ್ನೋದೆಲ್ಲ ಸುಳ್ಳು. ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ. ವರದಿನೇ ಆಚೆ ಬಂದಿಲ್ಲ, ವರದಿ ಆಚೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ. ವಿರೋಧ ಪಕ್ಷವರು ಕೂಡ ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ವರದಿ ಬಂದ ಮೇಲೆ ತಾನೇ ಅದೆಲ್ಲ ಮಾತನಾಡೋದು ಎಂದರು.

ಜನಸಂಖ್ಯೆ ಆಧಾರದ ಮೇಲೆ ಎಲ್ಲರಿಗೂ ಅವಕಾಶ ಸಿಗುವಂತಾಗಬೇಕು: ಕೆ.ಎಚ್.ಮುನಿಯಪ್ಪ

0

ಕೋಲಾರ: ಜಾತಿಗಣತಿ ಸಲ್ಲಿಕೆ ವಿಚಾರವಾಗಿ ಇವತ್ತು ಸಂಜೆ ಕ್ಯಾಬಿನೇಟ್ ಮೀಟಿಂಗ್ ಇದ್ದು ಇದರ ಕುರಿತು ಚರ್ಚೆ ಮಾಡುತ್ತೇವೆ ಎಂದು ಕೋಲಾರದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿಕೆ ನೀಡಿದ್ರು.

ಇಂದು ಪುಟ್ಟಪರ್ತಿ ಸಾಯಿಬಾಬ ಹುಟ್ಟುಹಬ್ಬ ಹಿನ್ನಲೆ ಕೋಲಾರದ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಾತಿ ಗಣತಿ ವಿಚಾರವಾಗಿ ಈಗ ನಾನೂ ಯಾವುದನ್ನೂ ಹೇಳುವುದಕ್ಕೆ ತಯಾರಿಲ್ಲ  ಎಂದರು.

ಅಲ್ಲದೆ ವರದಿಯನ್ನ ಜಾರಿ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಆದರೆ ಯಾವುದೇ ವರ್ಗಕ್ಕೆ ಅನ್ಯಾಯ ಆಗಬಾರದು, ಜನಸಂಖ್ಯೆ ಆಧಾರದ ಮೇಲೆ ಎಲ್ಲರಿಗೂ ಅವಕಾಶ ಸಿಗುವಂತಾಗಬೇಕು ಎಂದರು. ಹೀಗಾಗಿ ಈ ಕುರಿತು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ

ಇವತ್ತಿನ ಕ್ಯಾಬಿನೇಟ್ ಮೀಟಿಂಗ್ ಒಳಗಡೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ರು. ಇನ್ನೂ ಕಾಂಗ್ರೆಸ್ ಪಕ್ಷ ಯಾವುದೇ ವರ್ಗಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತದೆ ಎಂದರು. ಇನ್ನೂ ರಾಹುಲ್ ಗಾಂಧಿ ಅವರ ಮೂಲ ಉದ್ದೇಶ ಎಲ್ಲಾ ಸಮುದಾಯದವರಿಗೆ ಸಮಾನ ಅವಕಾಶ ಕಲ್ಪಿಸುವುದು. ಹೀಗಾಗಿ ಈ ವಿಚಾರ ಇನ್ನೂ  ಕ್ಯಾಬಿನೇಟ್ ಮುಂದೆ ಬಂದಿಲ್ಲ ಎಂದರು.

ಅಲ್ಲದೆ ಮೂಲ ಪ್ರತಿ ಮಿಸ್ಸಿಂಗ್ ಆಗಿದೆ ಎಂಬ ಜಯಪ್ರಕಾಶ್ ಹೇಳಿಕೆಗೆ ಕ್ಯಾಬಿನೇಟ್ ನಲ್ಲಿ ಕುಳಿತು ತೀರ್ಮಾನ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಇನ್ನೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ‌ ಬಿಟ್ಟಿರುವುದು. ಸಧ್ಯ ಪಂಚ ರಾಜ್ಯಗಳ ಚುನಾವಣೆ ಮುಗಿಸಿ ನಂತರ ಯೋಚನೆ ಮಾಡಲಾಗುವುದು ಎಂದರು. ಇನ್ನೂ ತೆಲಾಂಗಣ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ ಎಂದು ಹೇಳಿದ್ರು.

ಸ್ವಾರ್ಥ ರಾಜಕೀಯ ಕಾರಣದಿಂದ ದೊಡ್ಡಬಳ್ಳಾಪುರ ಕ್ಷೇತ್ರ ಹಿಂದುಳಿದಿದೆ: ಹರೀಶ್ ಗೌಡ

0

ದೊಡ್ಡಬಳ್ಳಾಪುರ : ಚುನಾವಣೆ ಸಂದರ್ಭದಲ್ಲಿ ಜನರಿಗೆ ಶಾಸಕರು ಸೀರೆ ಹಂಚಿ, ತೀರ್ಥ ಕ್ಷೇತಗಳಿಗೆ ಪ್ರವಾಸ ಭಾಗ್ಯ ಕೊಟ್ಟು, ಷಷ್ಠಿ ಪೂರ್ತಿ ಕಾರ್ಯಕ್ರಮ ಮಾಡಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಮೇಲೆ ತಾಲೂಕಿನ ಅಭಿವೃದ್ಧಿಯನ್ನು ಮರೆತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್, ಹಾಲಿ ಹಾಗು ಮಾಜಿ ಶಾಸಕರ ವಿರುದ್ಧ ಗುಡುಗಿದರು.

ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹರೀಶ್ ಗೌಡ, ಕ್ಷೇತ್ರದಲ್ಲಿ ಅಭಿವೃದ್ಧಿ ಅನ್ನುವುದು ಕಣ್ಮರೆಯಾಗಿದೆ. ರಾಜಕೀಯ ಕಾರಣಕ್ಕಾಗಿ ಮಾಜಿ‌ ಶಾಸಕರು ಅಭಿವೃದ್ಧಿ ಕೆಲಸಗಳನ್ನು ಮಾಡಲು ಬಿಡುವುದಿಲ್ಲ. ಸ್ವಾರ್ಥ ರಾಜಕೀಯ ಕಾರಣದಿಂದ ದೊಡ್ಡಬಳ್ಳಾಪುರ ಕ್ಷೇತ್ರ ಹಿಂದುಳಿದಿದೆ, ದೊಡ್ಡಬಳ್ಳಾಪುರ ನಗರಸಭೆಯಾಗಿ 15 ವರ್ಷಗಳೇ ಆದ್ರೂ ನಗರದಲ್ಲಿನ ಸಮಸ್ಯೆಗಳು ಇನ್ನೂ ಜೀವಂತವಾಗಿವೆ, ನಗರದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪ್ರದೇಶ ಅಭಿವೃದ್ಧಿಯಿಂದ ವಂಚಿತವಾಗಿದೆ.

ಮಾಜಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನ ಮಾಡುವುದು ಇಲ್ಲ, ಹಾಲಿ ಶಾಸಕರನ್ನ ಮಾಡುವುದಕ್ಕೂ ಬಿಡುವುದಿಲ್ಲ, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆಗಿನ ಶಾಸಕರು ಕೆಲಸ ಮಾಡದಂತೆ ಮಾಡಿದ್ರು, ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಮಾಜಿ ಶಾಸಕರು ಹಾಲಿ ಶಾಸಕರು ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದರು.

ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದವರು ಯಾರು?: ಕೃಷಿ ಸಚಿವರ ವಿರುದ್ಧ ಸುರೇಶ್ ಗೌಡ ವಾಗ್ದಾಳಿ

0

ಮಂಡ್ಯ:  ಬಿಜೆಪಿಯವರು ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ, ಮಾಲೆನೂ ಎಂದಿದ್ದ ಸಚಿವ ಚಲುವರಾಯಸ್ವಾಮಿಗೆ  ಜೆಡಿಎಸ್ ನಾಯಕರು ಟಾಂಗ್ ನೀಡಿದ್ದಾರೆ.

ಚಲುವರಾಯಸ್ವಾಮಿಗೆ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮದೇ ಶೈಲಿನಲ್ಲಿ ವಾಗ್ದಾಳಿ ನಡೆಸಿದ್ದರು. ಇಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ಗೌಡ  ವಾಗ್ದಾಳಿ ನಡೆಸಿದ್ದಾರೆ.

ಚಲುವರಾಯಸ್ವಾಮಿ ಮೊದಲೇ ಚಡ್ಡಿ‌ ಹಾಕಲ್ಲ. ಇವರಿಗೆ ಯಾರು ಹೇಳಬೇಕು ಚಡ್ಡಿ ಹಾಕು ಅಂತ ಎಂದು ತಿರುಗೇಟು ನೀಡಿದ್ದಾರೆ.  ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಹೇಳಬೇಕಾ? ಇವರಿಗೆ ಯಾಕೆ ನಮ್ಮ ವಿಷಯ. ಇವರದ್ದು ಎಷ್ಟಿದೆ ಅಷ್ಟು ನೋಡಿಕೊಳ್ಳಬೇಕು.

ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದವರು ಯಾರು? ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು. ಅದಕ್ಕೆ ಆತ ಚಡ್ಡಿ ವಿಚಾರ ಹೇಳ್ತಾ ಇದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

error: Content is protected !!