Home Blog Page 3149

ನೀನು ಕಾಲುಬಿಚ್ಚಿದ ಕತ್ತೆಯಂತೆ: ಪಂಚಮಸಾಲಿ ಶ್ರೀಗಳ ವಿರುದ್ಧ ಮಹಿಳೆ ವಾಗ್ದಾಳಿ

0

ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ದ ವಿಜಯಪುರದ ಪರಿಶ್ರಮ ಮಹಿಳಾ ಸಾಂತ್ವನ ಸಂಸ್ಥೆ ಅಧ್ಯಕ್ಷೆ ವಿದ್ಯಾ ಪಾಟೀಲ್ ಎಂಬುವವರು ನಾಲಿಗೆ ಹರಿ ಬಿಟ್ಟಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ವಿದ್ಯಾ ಪಾಟೀಲ್, ಪಂಚಮಸಾಲಿ ಶ್ರೀಗಳಿಗೆ ಕಾವಿ ಬಿಚ್ಚಿ ಚಪ್ಪಲಿ ಸೇವೆ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಲುಬಿಚ್ಚಿದ ಕತ್ತೆಯೆಂದು ಸ್ವಾಮೀಜಿಗೆ ಜರಿದ ಮಹಿಳೆ, ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ತಾವು ಬಸವಣ್ಣನವರ ಹೆಸರಿನಲ್ಲಿ ಕಾವಿ ಧರಿಸಿದನ್ನು ಮರೆತಿದ್ದಾರೆ. ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದಕ್ಕೆ ನಿಮಗೆ ಯಾವ ಅರ್ಹತೆ ಇಲ್ಲ. ಬಸವಣ್ಣನವರಿಗೆ ಯಾವುದೇ ಜಾತಿ ಇಲ್ಲ, ನಿಮಗೆ ಜಾತಿ ಬಗ್ಗೆ ಸರ್ಕಾರದ ಜೊತೆ ಹೋರಾಟ ಮಾಡಬೇಕಿದ್ದರೆ ಕಾವಿ ಬಿಚ್ಚಿಟ್ಟು ಮಾಡಿ ಎಂದು ಗುಡುಗಿದ್ದಾರೆ.

ಈ ಕುರಿತು ರಾಜ್ಯದ ಇತರೆ ಸ್ವಾಮೀಜಿಗಳ ಜೊತೆಗೆ ಮಾತನಾಡಿದ್ದಾಗಿಯೂ ಹೇಳಿದ್ದಾರೆ. ಇನ್ನು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ಮಾಡುವುದಾದರೆ, ಕೂಡಲ ಸಂಗಮವನ್ನು ಖಾಲಿ ಮಾಡಬೇಕೆಂದು ಒತಾಯಿಸದ ಮಹಿಳೆ, ಬಸವಣ್ಣನ ಐಕ್ಯ ಸ್ಥಳದಲ್ಲಿದ್ದ ನೀವು, ಮಾಡುತ್ತಿರುವುದನ್ನು ಜನರಿಗೆ ತಿಳಿಸಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರ: ಆರ್.ಅಶೋಕ್ ಹೇಳಿದ್ದೇನು..?

0

ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂತರಾಜ ವರದಿ ಹಲವು ಗೊಂದಲಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಏಕಾಏಕಿ ಮಾಡಿದ್ದಾರೆ. ಇದು ‌ಹತ್ತು ವರ್ಷದ ಹಳೆಯ ವರದಿಯಾಗಿದೆ. ಈಗ ಜನಸಂಖ್ಯೆ ಹೆಚ್ಚಾಗಿದೆ, ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಕಾಂತರಾಜು ವರದಿಯಲ್ಲಿ ಸೆಕ್ರೆಟರಿ ಸಹಿ ಹಾಕಬೇಕು. ನಮ್ಮ‌ಅವಧಿಯಲ್ಲಿ ಸಹಿ ಹಾಕಲೇ ಇಲ್ಲ, ಈಗ ಕಾಂತರಾಜು ವರದಿಯ ಮೂಲ ಪ್ರತಿಯೇ ಕಾಣೆಯಾಗಿದೆ.

168 ಕೋಟಿ ಸರ್ಕಾರದ ಹಣ ಖರ್ಚು ಮಾಡಿ ವರದಿ ಕಾಣೆಯಾಗಿದೆ ಅಂದ್ರೆ ಸರ್ಕಾರ ಯಾಕೆ ತನಿಖೆ ಮಾಡುತ್ತಿಲ್ಲ? ಕಾಣೆಯಾಗಿರುವ ಬಗ್ಗೆ ಏನೂ ಮಾತನಾಡುತ್ತಿಲ್ಲ, ಇದನ್ನ ನಾನು‌ ಖಂಡಿಸುತ್ತೇನೆ. ಯಾರು ಖದ್ದಿದ್ದಾರೆ ಎಂಬುದರ ವಿಚಾರವಾಗಿ ತನಿಖೆ ಆಗಲೇಬೇಕು. ಸರಿಯಾದ ಮಾನದಂಡವಾಗಿ ಸಮಿಕ್ಷೆ ಮಾಡಬೇಕು. ಅತೀ ಆತುರ, ಓವರ್ ಆಕ್ಷನ್ ಆಗಿ ಸಿದ್ದರಾಮಯ್ಯ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ ಎಂದರು.

ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಿಎಂ ಸಿದ್ದರಾಮಯ್ಯ

0

ಬಾಗಲಕೋಟೆ,: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಹೇಳಿಕೆ ನೀಡುವಾಗ ಸತ್ಯಾಂಶವನ್ನು ಆಧಾರಿಸಿರಬೇಕು

ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,  ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ ಎಂದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡಬಾರದು. ಸಮಾಜ ಏಕೆ ಒಡೆಯುತ್ತೇವೆ? ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ ಎಂದರು.
ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ

ಅರವಿಂದ್ ಲಿಂಬಾವಳಿಯವರು ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ವಿ.ಸೋಮಣ್ಣ 6ನೇ ತಾರೀಖಿನ ನಂತರ ತಮ್ಮ ಅನಿಸಿಕೆ ತಿಳಿಸುವ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರನವರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಇದು ಏನಾಗುತ್ತದೆ ಎಂದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತುಕೊಳ್ಳುತ್ತದೆಯೋ ಗೊತ್ತಿಲ್ಲ. ಬೆಂಕಿ ಅಂತೂ ಹತ್ತಿಕೊಂಡಿದೆ ಎಂದರು.

ಪಕ್ಷಕ್ಕೆ ಸೇರ್ಪಡೆಯಾಗುವವರು ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕು

ನಾವು ಯಾರನ್ನೂ ಕಾಂಗ್ರೆಸ್ಸಿಗೆ ಕರೆಯೋಲ್ಲ. ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ . ಯಾರು ನಮ್ಮ ನಾಯಕತ್ವವನ್ನು ಒಪ್ಪಿಕೊಂಡು ಅವರಾಗಿಯೇ ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ.

ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತವನ್ನು ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹೊಸಬರ ಸಿನಿಮಾಗೆ ‘ಚಟ್ಟ’ ಟೈಟಲ್ ಫಿಕ್ಸ್.. ನೀವಂದುಕೊಂಡಂತಲ್ಲ ಇದರ ಅರ್ಥ

0

ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ ‘ಚಟ್ಟ’ ಸಿನಿಮಾ.

‘ಚಟ್ಟ’ ಹೀಗೊಂದು ವಿಭಿನ್ನ ಶೀರ್ಷಿಕೆ ಮೂಲಕ ಹೊಸತನದ ಕಥಾಹಂದರವನ್ನು ಚಿತ್ರರಸಿಕರಿಗೆ ಉಣಬಡಿಸಲು ಸಜ್ಜಾಗ್ತಿರುವುದು ನಿರ್ದೇಶಕ ಭಾನು ಪ್ರಕಾಶ್. ಕೋ ಡೈರೆಕ್ಟರ್ ಆಗಿ ಗುರುತಿಸಿಕೊಂಡಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಧುಮುಕಿದ್ದಾರೆ. ‘ಕೇರ್ ಆಫ್ ಫುಟ್ಬಾತ್’ ಸೇರಿದಂತೆ ಒಂದಷ್ಟು ಕನ್ನಡ ಹಾಗೂ ತೆಲುಗು ಇಂಡಸ್ಟ್ರೀಯಲ್ಲಿಯೂ ನಿರ್ದೇಶನದ ಪಟ್ಟುಗಳನ್ನು ಕಲಿತುಕೊಂಡಿರುವ ಭಾನು ಪ್ರಕಾಶ್, ಈ ಭರವಸೆಯೊಂದಿಗೆ ಚಟ್ಟ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೆಟ್ ಹಾಕಿ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಾಡಲಾಗಿದೆ. ಕವಿರತ್ನ ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜೋಸೈಮನ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿ ಭಾನು ಪ್ರಕಾಶ್ ಹೊಸ ಕನಸಿಗೆ ಜೊತೆಯಾದರು. ಈ ವೇಳೆ ನಿರ್ದೇಶಕ ಭಾನು ಪ್ರಕಾಶ್ ಮಾತನಾಡಿ, ಚಟ್ಟ ಎಂದರೆ ನಾವು ಅಂದುಕೊಂಡಂತೆ ಎತ್ತಿಕೊಂಡು ಹೋಗುವುದಲ್ಲ. ಲೋಕದಲ್ಲಿಯೂ ಪುಸ್ತಕ. ಆ ಪುಸ್ತಕದ ಕೊನೆಯ ಪೇಜ್ ಸಿನಿಮಾ. ನನಗೆ ಆಶೀರ್ವಾದ ಮಾಡಲು ಬಂದವರಿಗೆ ಧನ್ಯವಾದ. ಟೆಕ್ನಿಷಿಯಲ್, ಕಲಾವಿದರು ಒಬ್ಬೊಬ್ಬರಿಗೆ ಪರಿಚಯಿಸುತ್ತೀವೆ. ಚಟ್ಟ ಪ್ಯಾನ್ ಇಂಡಿಯಾ ಸಿನಿಮಾ ಎಂದರು.

ಕೆಎಂ ಕ್ರಿಯೇಷನ್ಸ್ ನಿರ್ಮಾಣದ ಚಟ್ಟ ಸಿನಿಮಾವನ್ನು ಕುಮಾರ್ ಎಂ, ಅಣಜಿ ರಮೇಶ್, ಡಿ.ಒಬಲ್ ರೆಡ್ಡಿ, ಕುಮಾರ್ ಎಂ ನಿರ್ಮಾಣ ಮಾಡುತ್ತಿದ್ದಾರೆ. ಕೆ ರಾಮ್ ರಾಮ್ ಮೂರ್ತಿ, ವಾಸುದೇವನ್, ಪ್ರಕಾಶ್ ಗೌಡ ಕೋ ಪ್ರೊಡ್ಯೂಸರ್ ಆಗಿ, ಮುರಳಿ ಕೃಷ್ಣ ಸಿ.ಎಚ್.ಉತನೂರೂಪ್ಪ ಎಕ್ಸಿ ಕ್ಯೂಟಿವ್ ಪ್ರೊಡ್ಯೂಸರ್ ಆಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಿಸ್ಟ್ರೀ ಡ್ರಾಮಾ ಕಥಾಹಂದರ ಹೊಂದಿರುವ ಚಟ್ಟ ಸಿನಿಮಾ ಫೆಬ್ರವರಿಯಿಂದ ಶೂಟಿಂಗ್ ಚಾಲುವಾಗಲಿದೆ. ಅದಕ್ಕೂ ಮುನ್ನ ಚಿತ್ರತಂಡ ತಾರಾಬಗಳ ಹಾಗೂ ತಾಂತ್ರಿಕ ವರ್ಗವನ್ನು ರಿವೀಲ್ ಮಾಡಲಿದೆ.

ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ

0

ಗದಗ: ಲಕ್ಕುಂಡಿ ಗ್ರಾಮದಿಂದ ನಿರಂತರ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಕಲ್ಯಾಣ ಕರ್ನಾಟಕ ಭಾಗದಿಂದ ಬರುವ ಬಸ್‌ಗಳು ಗ್ರಾಮಕ್ಕೆ ಬಾರದಕ್ಕೆ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.

ಲಕ್ಕುಂಡಿ ಗ್ರಾಮಕ್ಕೆ ಬಾರದೆ ಬೈಪಾಸ್ ಮೂಲಕ ಗದಗ, ಹುಬ್ಬಳ್ಳಿಗೆ ತೆರಳುವ ಬಸ್ ಗಳಿಂದಾಗಿ  ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರಿಯದ ಸಮಯಕ್ಕೆ ಬಸ್ ಗಳು ಸಿಗುತ್ತಿಲ್ಲ, ಬೈಪಾಸ್ ನಿಂದ ತೆರಳುವ ಬಸ್ ಗಳಿಗೆ ಲಕ್ಕುಂಡಿ ಬಸ್ ನಿಲ್ದಾಣದವರೆಗೆ ಬರಲು ಸೂಚಿಸಬೇಕು.   ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ  ಬಂದ್ ಮಾಡುತ್ತೇವೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಶಾಕ್ : ತಮಿಳುನಾಡಿಗೆ ಪ್ರತಿದಿನ ನೀರು ಹರಿಸಲು ಸೂಚನೆ

0

ನವದೆಹಲಿದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ. ಡಿಸೆಂಬರ್ ಅಂತ್ಯದವರೆಗೂ ನೀರು ಬಿಡಲು ಹೇಳಿದ್ದು. ಬಾಕಿ ಇರುವ 7.5ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಂತೆ  ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಗುರುವಾರ ಬೆಳಗ್ಗೆ 11.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುವಂತೆ ಕರ್ನಾಟಕಕ್ಕೆ ಶಿಫಾರಸ್ಸು ಮಾಡಲಾಗಿದೆ. ಸಭೆಯಲ್ಲಿ ಹಳೇ ಬಾಕಿ ನೀರು ಬಿಡಲು ತಮಿಳುನಾಡು ಆಗ್ರಹಿಸಿತು. ಹಳೇ ಬಾಕಿ 11 tmc  ನೀರು ಬಿಡಲು ಬಾಕಿ ಇದೆ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.

ಸದ್ಯ ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅದನ್ನು ಶೇಖರಣೆ ಮಾಡುವ ಬಗ್ಗೆ ತಮಿಳುನಾಡು ಸರಕಾರ ಯಾವುದೇ ಚಿಂತನೆ ನಡೆಸುತ್ತಿಲ್ಲ. ತಮಿಳುನಾಡಿನಲ್ಲಿ ಮಳೆ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅನಿಯಂತ್ರಿತ ನೀರು ನದಿ ಪಾತ್ರ ಸೇರುತ್ತಿದೆ.  3000 ಸಾವಿರ ಕ್ಯೂಸೆಕ್ ಅನಿಯಂತ್ರಿತ ನೀರು ಯಾವುದೇ ಅಡೆತಡೆ ಇಲ್ಲದೇ ತಮಿಳುನಾಡು ಸೇರುತ್ತಿದೆ. ತಮಿಳುನಾಡಿನಲ್ಲಿ ಮಳೆ ಹೆಚ್ಚಾದ್ರೆ ಪುನಃ ನೀರು ಕರ್ನಾಟಕ ಪಡೆಯಲು ಸಾಧ್ಯ ಇಲ್ಲ. ಅಲ್ಲದೇ ಮೆಟ್ಟೂರು ಜಲಾಶಯದಿಂದ ತಮಿಳುನಾಡು ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಬಿಡುತ್ತಿದೆ. ಹಾಗಾಗಿ ಕರ್ನಾಟಕ ದಿಂದ ಪುನಃ ನೀರು ಬಿಡಲು ಸಾಧ್ಯ ಇಲ್ಲ ಎಂಬುದು ಕರ್ನಾಟಕದ ವಾದವಾಗಿದೆ.

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದೆ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಸೂಚನೆಯಂತೆ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಮಧ್ಯೆ, ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ, ಕರ್ನಾಟಕದಿಂದ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಲು ರಾಜ್ಯದ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ಮಧ್ಯೆ, ಎಂದಿನಂತೆ ತಮಿಳುನಾಡು, ಬಾಕಿ ನೀರು ಬಿಡುಗಡೆಗೆ ಆದೇಶ ನೀಡುವಂತೆ ಕೋರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜಾತಿ ಜನಗಣತಿ ದೊಡ್ಡ ಹಗರಣ ಎಂದ ಮಾಜಿ ಸಚಿವ ಸುನೀಲ್ ಕುಮಾರ್

0

ಕಾರ್ಕಳ: ಶಾಸಕ ವಿ. ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿ, ಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದ್ದಾರೆ.

162 ಕೋಟಿ ರೂ.ವೆಚ್ಚದಲ್ಲಿ ತಯಾರಿಸಿದ ವರದಿಯ ಉದ್ದೇಶವೇ ಈಡೇರುತ್ತಿಲ್ಲ ಎಂದರೆ ಅರ್ಥವೇನು? ವರದಿ ಬಗ್ಗೆ ಇಷ್ಟೆಲ್ಲಾ ಚರ್ಚೆ ನಡೆಯುತ್ತಿದ್ದರೂ ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜ್ ನಾಪತ್ತೆಯಾಗಿದ್ದಾರೆ.

ವರದಿಗೆ ಏಕೆ ಸಹಿ ಹಾಕಿಲ್ಲ ಎಂಬ ಬಗ್ಗೆ ಸದಸ್ಯ ಕಾರ್ಯದರ್ಶಿ ಮುಗುಮ್ಮಾಗಿದ್ದಾರೆ. ಆಯೋಗದ ವರದಿಗೆ ಅವರು ಅಂದು ಸಹಿ ಹಾಕಿಲ್ಲ ಎಂದರೆ ತಾವು ಈ ವರದಿಯ ಭಾಗವಾಗಲು ತಯಾರಿಲ್ಲ ಎಂದರ್ಥವಲ್ಲವೇ?. ಅಂದರೆ ವರದಿ ತಯಾರಿ ಹಂತದಲ್ಲೇ ಭಾರೀ ಲೋಪ ಹಾಗೂ ಅವ್ಯವಹಾರ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದ್ದಾರೆ.

ಕಾಫಿ ನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

0

ಚಿಕ್ಕಮಗಳೂರು : -ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸದಸ್ಯನೇ ಬಲಿಯಾದ ಘಟನೆ ಜರುಗಿದೆ.

26 ವರ್ಷದ ಕಾರ್ತಿಕ್ ಗೌಡ ಮೃತ ದುರ್ದೈವಿಯಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಎರಡು ತಿಂಗಳಲ್ಲಿ ಮೂರು ಜನ ಕಾಡಾನೆ ದಾಳಿಗೆ ಬಲಿಯಾದಂತಾಗಿದೆ. 20 ದಿನಗಳೊಳಗೆ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.

ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರಕಾರ ರಚಿಸಿದ್ದ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಆನೆ ಓಡಿಸುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. 20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎನ್ನುವವರು, ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎನ್ನುವವರು ಆನೆ ದಾಳಿಗೆ ಬಲಿಯಾಗಿದ್ದರು.

ಮದ್ಯ ಮಾರಾಟದಲ್ಲಿ ಅವ್ಯವಹಾರ – ಹುಬ್ಬಳ್ಳಿಯಲ್ಲಿ ದೂರು ದಾಖಲು

0

ಹುಬ್ಬಳ್ಳಿ: ನಗರದ ಹುಬ್ಬಳ್ಳಿಯಲ್ಲಿ ಗೋಕುಲ ರಸ್ತೆಯ ರವಿನಗರದ ಕರ್ನಾಟಕ ವೈನ್ಸ್‌ ಅಂಗಡಿಯ ವ್ಯವಸ್ಥಾಪಕ, ₹44.18 ಲಕ್ಷ ಮೌಲ್ಯದ ಮದ್ಯ ಮಾರಾಟದಲ್ಲಿ ಅವ್ಯವಹಾರ ನಡೆಸಿದ್ದಾನೆ ಎಂದು ಆರೋಪಿಸಿ ಗೋಕುಲ ರಸ್ತೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೈನ್ಸ್‌ ಅಂಗಡಿ ಮಾಲೀಕ ನೀಲಕಂಠ ಆಕಳವಾಡಿ ಅವರು ಪ್ರಿಯದರ್ಶಿನಿ ಕಾಲೊನಿಯ ಮಂಜುನಾಥ ಪೂಜಾರಿ ವಿರುದ್ಧ ದೂರು ನೀಡಿದ್ದಾರೆ.

ಮಂಜುನಾಥ ಅವರು ವೈನ್ಸ್‌ ಅಂಗಡಿಯಲ್ಲಿ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. 2017ರ ಸೆ. 5ರಿಂದ 2023ರ ಎ. 25ರವರೆಗೆ ನಡೆದ ಅಂಗಡಿಯ ಲೆಕ್ಕಪತ್ರಗಳ ವರದಿ ನೀಡದೆ ಓಡಿಹೋಗಿದ್ದರು. ಲೆಕ್ಕ ಪರಿಶೋಧನೆ ನಡೆಸಿದಾಗ ಮದ್ಯ ಮಾರಾಟದಲ್ಲಿ ಅವ್ಯವಹಾರ ನಡೆದಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಡಿಸೆಂಬರ್ 6ರ ಬಳಿಕ ತನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ: ವಿ.ಸೋಮಣ್ಣ

0

ಮೈಸೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ ವಿಚಾರವಾಗಿ ಪಕ್ಷದ ಮೇಲೆ ಮತ್ತಷ್ಟು ಮುನಿಸುಗೊಂಡ ಮಾಜಿ ಸಚಿವ ವಿ.ಸೋಮಣ್ಣ, ಡಿಸೆಂಬರ್​ 6ರ ಬಳಿಕ ತನ್ನ ಮನಸ್ಸಿ‌ನ ಭಾವನೆ ತಿಳಿಸುವುದಾಗಿ ಹೇಳಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ.

ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ ಎಂದರು.

error: Content is protected !!