Home Blog Page 3150

ಅತೃಪ್ತರ ಮನವೊಲಿಕೆಗೆ ವಿಜಯೇಂದ್ರ ಕಸರತ್ತು: ಬಿಜೆಪಿ ರಾಜ್ಯಾಧ್ಯಕ್ಷರಿಂದ ರಮೇಶ್ ಜಾರಕಿಹೊಳಿ ಭೇಟಿ

0

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ ಇಂದು ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು.

ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.

ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು.

ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ. ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡ್ತೇನೆ ಅಂತ ಹೇಳಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರು.

ರೋಡ್ ರೇಜ್ ಕೇಸ್, ಗಾಡಿ ಟಚ್ ಆಗಿದಕ್ಕೆ ಕಾರು ಗ್ಲಾಸ್ ಹೊಡೆದ ವಾಹನ ಸವಾರ

0

ಬೆಂಗಳೂರು:- ಗಾಡಿ ಟಚ್ ಆಗಿದಕ್ಕೆ ವಾಹನ ಸವಾರ ಹುಚ್ಚನಂತಾಡಿದ್ದಾನೆ. ಕಾರಿನ ಗ್ಲಾಸ್ ಒಡೆದು ದುರ್ವರ್ತನೆ ತೋರಿದ್ದಾನೆ. ಗಾಡಿ ಟಚ್ ಆಗಿದಕ್ಕೆ ಕಿರಿಕ್ ನಡೆದಿದೆ. ಮಹಾರಾಷ್ಟ್ರ ರಿಜಿಸ್ಟ್ರೇಷನ್ ಕಾರಿನ ಮೇಲೆ ದಾಳಿ ನಡೆದಿದೆ. ಈ ಸಂಬಂಧ x ನಲ್ಲಿ ಗೌಡ ಗ್ರೂಪ್ ಎಂಬ ಪೇಜ್ ಪೋಸ್ಟ್ ಮಾಡಿದೆ. ನಿಖರ ಸ್ಥಳದ ಬಗ್ಗೆ ಪೊಲೀಸರು ಮಾಹಿತಿ ಕೇಳಿದ್ದಾರೆ.

ಸಂಪ್ ಕ್ಲೀನಿಂಗ್ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

0

ಆನೇಕಲ್:- ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಸಂಪ್ ಕ್ಲೀನಿಂಗ್ ಮಾಡುವ ವೇಳೆ ಇಬ್ಬರು ಕಾರ್ಮಿಕರು ದಾರುಣ ಸಾವನ್ನಪ್ಪಿದ ಘಟನೆ ಜರುಗಿದೆ.

ನಿನ್ನೆ ಸಂಜೆ ವಾಟರ್ ಟ್ಯಾಂಕ್ ಕ್ಲೀನ್ ಮಾಡಲು ಮುಂದಾಗಿದ್ದ ವೇಳೆ ಅವಘಡ ಸಂಭವಿಸಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಿರುಪಾಳ್ಯದ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ಸಂಭವಿಸಿದೆ.

ಶ್ರೀನಿವಾಸ್ ರೆಡ್ಡಿ ಎಂಬುವವರಿಗೆ ಸೇರಿದ ಕಂಪನಿ ಇದಾಗಿದ್ದು, ಆಸಿಡ್ ಹಾಕಿ ವಾಟರ್ ಟ್ಯಾಂಕ್ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ದಾರುಣ ಸಾವನ್ನಪ್ಪಿದ್ದಾರೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತರು.

ಮೃತರಿಬ್ಬರು ಸಹೋದರರು, ಒಟ್ಟಿಗೆ ಕೆಲಸ ಮಾಡುತ್ತಿದ್ರು. ಕಾರ್ಮಿಕರನ್ನ ಉಳಿಸಲು ಜಗದೀಶ್ ಹಾಗೂ ಮಾಲೀಕ ಶ್ರೀನಿವಾಸ್ ರೆಡ್ಡಿ ಹರಸಾಹಸ ಪಟ್ಟಿದ್ದಾರೆ.

ಅಸ್ವಸ್ತರನ್ನ ಕೂಡಲೇ ಅಲ್ಲಿನ ಕಾರ್ಮಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಪ್ರಯೋಜನವಾಗಿಲ್ಲ.  ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ: ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

0

ಬೆಳಗಾವಿ: ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಆಗಿರುವ ಬಿ.ವೈ ವಿಜಯೇಂದ್ರ ವಿಚಾರವಾಗಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿ.ವೈ ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಅಚ್ಛರಿ ಹೇಳಿಕೆ ನೀಡಿದ್ದಾರೆ.

ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು ಎಂದು ಲಿಂಬಾವಳಿ ಹೈಕಮಾಂಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ. ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸ್ತಿರಬಹುದು ಇವರು. ಅದಕ್ಕಾಗಿ ವಿಜಯೇಂದ್ರ ಹಾಗೂ ಆರ್. ಅಶೋಕ ನೇಮಕ ಮಾಡಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ

ಜಮೀರ್‌ʼಗೆ ಬಿಗ್ ಶಾಕ್ : ತೆಲಂಗಾಣದಲ್ಲಿ ತಂಗಿದ್ದ ಹೋಟೆಲ್ ಮೇಲೆ ಪೊಲೀಸ್ ದಾಳಿ

0

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan )ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು (Hyderabad Police) ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ (Park Hyatt Hotel) ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ.

ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ. ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು.

https://www.facebook.com/watch/?v=908121857548666&t=0

ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ (BJP) ಮತ್ತು ರಾಜ್ಯದ ಬಿಆರ್‌ಎಸ್‌ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ.

ವಿದ್ಯುತ್ ಹರಿದು 20 ಕುರಿಗಳು ದಾರುಣ ಸಾವು

0

ಚಿಕ್ಕಬಳ್ಳಾಪುರ: ವಿದ್ಯುತ್ ಹರಿದು ಕೊಟ್ಟಿಗೆಯಲ್ಲಿದ್ದ 20 ಕುರಿಗಳು ದಾರುಣವಾಗಿ ಸಾವನ್ನಪ್ಪರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ನಲ್ಲಮದ್ದಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೆಂಕಟರಾಮಪ್ಪ ಎನ್ನುವವರಿಗೆ ಸೆರಿದ ಕುರಿಗಳು ಸಾವನಪ್ಪಿದ್ದು, ಕುರಿಗಳನ್ನ ಕಟ್ಟಿಹಾಕಲು ಮೆಟಲ್ ವೈರ್ ಮೆಶ್ ನಿಂದ ಸುತ್ತಿದ ಕುರಿ ಕೊಟ್ಟಿಗೆಯನ್ನ ನಿರ್ಮಿಸಲಾಗಿತ್ತು.

ಆದರೆ ಕೊಟ್ಟಿಗೆ ಮೇಲೆ ಮನೆಗೆ ಸಂಪರ್ಕಿಸಲು ಹಾದು ಹೋಗಿದ್ದ ವಿದ್ಯುತ್ ವೈರ್ ಮೇಲೆ ಕೋತಿಗಳು ಓಡಾಡುವಾಗ ವೈರ್ ತುಂಡಾಗಿ ಕೊಟ್ಟಿಗೆಯ ಮೆಟಲ್ ಮೆಶ್ ಮೇಲೆ ಬಿದ್ದಿದೆ, ಮೆಟಲ್ ವೈರ್ ಗೆ ವಿದ್ಯುತ್ ಪ್ರವಹಿಸಿ ಕೊಟ್ಟಿಗೆಯಲ್ಲಿ 35 ಕುರಿಗಳ ಪೈಕಿ 20 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

ಘಟನೆಯಿಂದ ಒಂದೂವರೆ ಲಕ್ಷ ರೂಪಾಯಿಗಳಷ್ಟು ಕುರಿಗಳು ಸಾವನ್ನಪ್ಪಿರೋದ್ರಿಂದ ಕುರಿಗಳ ಮಾಲಿಕ ವೆಂಕಟರಾಮಪ್ಪ ಕಂಗಾಲಾಗಿದ್ದಾನೆ.

ಸ್ಥಳಕ್ಕೆ ಪೆರೇಸಂದ್ರ ಠಾಣೆ ಪಿಎಸ್.ಐ ಜಗದೀಶ್ ರೆಡ್ಡಿ ಹಾಗೂ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕುರಿಗಳ ಸಾವಿನಿಂದ ನಷ್ಟಕ್ಕೊಳಗಾದ ರೈತನಿಗೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಜಿಪಿಎಸ್ ಮಾಡಿಸಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತಿ ಸದಸ್ಯ ಲೋಕಾಯುಕ್ತರ ಬಲೆಗೆ

ಹಾವೇರಿ: ಮಳೆಯಿಂದ ಬಿದ್ದ ಮನೆಗೆ ಸರಕಾರದ ಪರಿಹಾರ ಪಡೆಯಲು ಜಿಪಿಎಸ್ ಮಾಡಿಸಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಾರಡಗಿ ಗ್ರಾಮ ಪಂಚಾಯತಿ ಸದಸ್ಯ ಜಾಫರ್‌ಸಾಬ್ ಖಾದರಸಾಬ್ ಸಂಶಿ ಎಂಬುವರೇ ಲೋಕಾಯುಕ್ತರ ಬಲೆಗೆ ಬಿದ್ದವರು.

ದಾದಾಪೀರ್ ಎಂಬುವರ ಮನೆಗೆ ಜಿಪಿಎಸ್ ಮಾಡಿಸಬೇಕಾದರೆ ಲಂಚಕ್ಕೆ ಬೇಡಿಕೆ ಇಡಲಾಗಿತ್ತು.

ಬುಧವಾರ ರಾತ್ರಿ ದಾದಾಪೀರ್ ಅವರಿಂದ 20ಸಾವಿರ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತರ ದಾಳಿ ಮಾಡಿ ಬಲೆಗೆ ಬೀಳಿಸಿದ್ದಾರೆ.

‘ಡಂಕಿ’ ಸಿನಿಮಾದ ಮೊದಲ ಹಾಡು ಬಂತು..ತಾಪ್ಸಿ ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್

0

ಡಂಕಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು.. ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಜೋಡಿಯ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಟೀಸರ್‌ಗೆ ಭರ್ಜರಿ ಪ್ರತಿಕ್ರಿಯೆ ಬಂದಿದೆ. ಇನ್ನೇನೂ ಡಂಕಿ ರಿಲೀಸ್ ಗೆ ದಿನಗಣೆಯಷ್ಟೇ ಬಾಕಿ ಉಳಿದಿದ್ದು, ಚಿತ್ರತಂಡ ಪ್ರಮೋಷನ್ ಅಖಾಡಕ್ಕೆ ಧುಮುಕಿದೆ.

ಡಂಕಿ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಟೀ ಸೀರಿಸ್ ಯೂಟ್ಯೂಬ್ ನಲ್ಲಿ ಹಾರ್ಡಿ ಹಾಗೂ ಮನುವಿನ ಪ್ರೇಮಗೀತೆ ಅನಾವರಣಗೊಂಡಿದೆ. ಲುಪ್ ಪುಟ್ ಗಯಾ ಎಂಬ ಸಾಹಿತ್ಯದ ಹಾಡಿಗೆ ಶಾರುಖ್ ಖಾನ್ ತಾಪ್ಸಿ ಹೆಜ್ಜೆ ಹಾಕಿದ್ದಾರೆ. ಮೆಲೋಡಿ ಮ್ಯೂಸಿಕ್ ಮಾಂತ್ರಿಕ ಪ್ರೀತಮ್ ಸಂಗೀತ, ಸ್ವಾನಂದ್ ಕಿರ್ಕಿರೆ ಮತ್ತು ಐಪಿ ಸಿಂಗ್ ಬರೆದ ಸಾಹಿತ್ಯದ ರೋಮ್ಯಾಂಟಿಕ್ ಸಿಂಗಿಂಗ್ ಅರಿಜಿತ್ ಸಿಂಗ್ ಅವರ ಭಾವಪೂರ್ಣ ಗಾಯನ ಕೇಳುಗರನ್ನು ಮೋಡಿ ಮಾಡ್ತಿದೆ. ಗಣೇಶ್ ಆಚಾರ್ಯ ಲುಪ್ ಪುಟ್ ಗಯಾ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.


ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಕೋಲಾರ: ಅನುಮಾನಾಸ್ಪದವಾಗಿ ಗೃಹಿಣಿ ಸಾವು

0

ಕೋಲಾರ: ಕೋಲಾರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಇಲ್ಲಿಯ ಮಿಲ್ಲತ್ ನಗರದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ ಎಂಬ ಅನುಮಾನ ಮೃತ ಮಹಿಳೆಯ ಕುಟುಂಬದಿಂದ ವ್ಯಕ್ತವಾಗಿದೆ.ಮೃತ ಮಹಿಳೆ ಮಾಹೇನೂರ್ (22) ಎಂದು ಗುರುತಿಸಲಾಗಿದೆ.ಪತಿ ಸಯ್ಯದ್ ಶುಹೇಬ್ ಕೊಲೆ ಮಾಡಿ ಗ್ಯಾಸ್ ಗೀಸರ್ ಲೀಕ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹಣ, ಜಾಗ ಹಾಗೂ ಬುಲೆಟ್ ಬೈಕ್‍ಗಾಗಿ ಪತ್ನಿಯ ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈತ ಹೆಚ್ಚು ಪೀಡಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ದೇವೆ. ಹೀಗಾಗಿ ಗಲಾಟೆ ನಡೆಸಿ ಮಹಿಳೆಯ ಹತ್ಯೆ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ. ಈ ಕುರಿತು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ವಿಜಯಪುರ: ಶಾಲೆ ಕಟ್ಟಡದಿಂದ ಬಿದ್ದು ಬಾಲಕ ಸಾವು

0

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್‌. ಎಂ ಶಾಹಾ ಶಾಲೆಯ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ ಮೃತಪಟ್ಟಿದ್ದಾನೆ. ಯುಕೆಜಿ ತರಗತಿಯಲ್ಲಿ ಓದುತ್ತಿದ್ದ ಶಿವರಾಜ್ ರೋಡಗಿ ಇಂದು ಬೆಳಗ್ಗೆ ಶಾಲೆಯ ಮೊದಲ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೆಳಗೆ ಬಿದ್ದಿದ್ದರಿಂದ ಶಿವರಾಜ್ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಮ್ಮ ಮಗ ಶಾಲೆಯ ಕಟ್ಟಡದಿಂದ ಕೆಳಗೆ ಬಿದ್ದಿದ್ದಾನೆ ಎಂದು ಪೋಷಕರಿಗೆ ಮಾಹಿತಿ ನೀಡಿದ ಶಾಲೆಯವರು ಆತನನ್ನು ಆಸ್ಪತ್ರೆಗೆ ಕರೆ ತಂದಿದ್ದಾರೆ. ಇನ್ನು ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದರಿಂದ ಬಾಲಕನ ಮೃತದೇಹವನ್ನು ಆಸ್ಪತ್ರೆಗೆ ತಂದು ಶಾಲಾ ಆಡಳಿತ ಮಂಡಳಿ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇಂಡಿ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

 

error: Content is protected !!