Home Blog Page 3151

ಚರಂಡಿಯಲ್ಲಿ ಬಿದ್ದ ನಾಯಿ: ಆರೋಗ್ಯಧಿಕಾರಿಗಳ ನೇತೃತ್ವದಲ್ಲಿ ರಕ್ಷಣೆ

0

ಹುಬ್ಬಳ್ಳಿ; ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು. ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ಎನ್ನಲಾಗಿದ್ದು, ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ ಪರದಾಡಿದ್ದು, ಚರಂಡಿಯಿಂದ ಮೇಲೆ ಬಾರದೇ ಗಾಬರಿಗೊಂಡಿತ್ತು.

ಪಾದಾಚಾರಿಗಳು‌ ನಾಯಿಯ ಸ್ಥಿತಿ ನೋಡಿ ಅಯ್ಯೋ ಪಾಪಾ ನಾಯಿ ಚರಂಡಿಯಲ್ಲಿ ಬಿದ್ದಿದೆ ಎಂದು ಗುಣುಗುತ್ತಾ ಹೋದರೇ‌ ವಿನಃ ನಾಯಿಯ ರಕ್ಷಣೆಯ ಗೋಜಿಗೆ ಹೋಗಲಿಲ್ಲ. ಆದರೇ ಅದೇ ದಾರಿಯಲ್ಲಿ ಹೊರಟಿದ್ದ ಪತ್ರಕರ್ತರು ನಾಯಿಯ ಅವಾಂತರವನ್ನು ನೋಡಿ ರಕ್ಷಣೆಗೆ ಮುಂದಾದರು. ಆದರೇ ನಾಯಿಯನ್ನು ರಕ್ಷಣೆ ಮಾಡುವಲ್ಲಿ ಅವ್ಯವಸ್ಥೆ ಉಂಟಾಯಿತು. ಅದೇ ರಸ್ತೆಯಲ್ಲಿ ಹೊರಟಿದ್ದ ಹು-ಧಾ ಪಾಲಿಕೆ ಮೇಯರ್ ವೀಣಾ ಚೇತನ್ ಬರದ್ವಾಡ ಅವರ ಕಾರ್ ನ್ನು ತಡೆದ ಪತ್ರಕರ್ತರು ನಾಯಿಯ ಪರದಾಟವನ್ನು ತಿಳಿಸಿದಾಗ, ಮೇಯರ್ ಪಾಲಿಕೆ ಸಿಬ್ಬಂದಿಗಳಿಗೆ ತಿಳಿಸಿದರು.

ಮತ್ತೇ ಪಾಲಿಕೆ ಅಧಿಕಾರಿಗಳಿಗೆ ಕರೆ ಮಾಡಿ ನಾಯಿಯು ಚರಂಡಿಯಲ್ಲಿ ಬಿದ್ದಿದ್ದು ಅದರ ರಕ್ಷಣೆ ಮಾಡಬೇಕಿದೆ ಎಂದು ಮನವಿ ಮಾಡಿದಾಗ ಸ್ಥಳಕ್ಕೆ ಆಗಮಸಿದ ಹು-ಧಾ ಪಾಲಿಕೆ ಆರೋಗ್ಯಧಿಕಾರಿಗಳಾದ ಡಾ. ಶ್ರೀಧರ ದಂಡೆಪ್ಪನವರ ಅವರು ಪಾಲಿಕೆ ಸಿಬ್ಬಂದಿಗೆ ಸೂಚಿಸಿದ ಬಳಿಕ ಪತ್ರಕರ್ತರಾದ ಶೇಖರ್ ಪಿ, ನಾರಾಯಣಗೌಡ ಪಾಟೀಲ್, ರೋಹನ್ ಹುಣಸವಾಡಕರ್, ಮಾಂತೇಶ್ ಕಂಬಳಿ, ಭರತ್ ಮಂಗಳಗಟ್ಟಿ ಸೇರಿದಂತೆ ಇನ್ನಿತರ ಪತ್ರಕರ್ತರ ಸಹಾಯದ ನೆರವಿನಿಂದ ನಾಯಿಯ ರಕ್ಷಣೆ ಮಾಡಲಾಯಿತು.

ಮೇಲುಕೋಟೆಯಲ್ಲಿ ಹೆಜ್ಜೇನು ದಾಳಿ..! 17 ಮಂದಿ ತೀವ್ರ ಅಸ್ವಸ್ಥ

0

ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ.

ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ.  ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧ ಇಲ್ಲ: ಬಿ.ವೈ.ವಿಜಯೇಂದ್ರ

0

ಮಂಗಳೂರು: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧ ಇಲ್ಲ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳಬಾರದು. ಕಾಂಗ್ರೆಸ್ ಸರ್ಕಾರದ ರೀತಿಯ ನಡೆ ಬಿಜೆಪಿ ಖಂಡಿತ ಒಪ್ಪಲ್ಲ. ಜಾತಿಗಣತಿ ಬಗ್ಗೆ ಬಿಜೆಪಿಯ ನಿಲುವು ಸ್ಪಷ್ಟವಿದೆ.

ಸಿದ್ದರಾಮಯ್ಯ ಹಿಂದೆ ಸಿಎಂ ಆಗಿದ್ದಾಗ ಪ್ರಕ್ರಿಯೆ ಮುಗಿದಿತ್ತು. ಆದರೆ ಸ್ಪಷ್ಟ ನಿಲುವನ್ನು ತೆಗೆದುಕೊಳ್ಳಲು ಯಾಕೆ ಸಾಧ್ಯ ಆಗಿಲ್ಲ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಸ್ತಾಪ ಮಾಡ್ತಿದ್ದಾರೆ. ತಯಾರಾಗಿರುವ ಕಾಂತರಾಜು ವರದಿ ಬಗ್ಗೆ ಮಾಹಿತಿ ತೆಗೆದುಕೊಂಡಿಲ್ಲ. ಒಳಜಾತಿ ಪಕ್ಕಕ್ಕಿಟ್ಟು ಅವರಿಗೆ ಅನುಕೂಲ ಆಗುವ ವರದಿ ನೀಡಿದ್ದಾರೆ. ಸದ್ಯ ರೀತಿಯ ಚರ್ಚೆ ನಡೆಯುತ್ತಿದೆ ಎಂದರು.

ನಾಲ್ವರ ಬರ್ಬರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ 14 ದಿನ ನ್ಯಾಯಾಂಗ ಬಂಧನ

0

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ವಿಚಾರಣೆ ಬಹುತೇಕ ಮುಕ್ತಾಯಗೊಂಡಂತಿದೆ. ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿಯ ಸಂತೆಕಟ್ಟೆ ನೇಜಾರು ನೂರ್ ಮೊಹಮ್ಮದ್ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸರ ತನಿಖೆ ನಡೆಯುತ್ತಿದೆ. ಈ ನಡುವೆ ಆರೋಪಿ ಪ್ರವೀಣ್ ಚೌಗುಲೆ ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದು, ಇಂದು ಕೋರ್ಟಿಗೆ ಆರೋಪಿಯನ್ನು ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪಾ ಮುಂದೆ ಮಲ್ಪೆ ಪೊಲೀಸರು ಹಾಜರುಗೊಳಿಸಿದರು. ಆರೋಪಿಗೆ ಡಿಸೆಂಬರ್ 5 ರ ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಹಿರಿಯಡ್ಕ ಸಬ್ ಜೈಲ್ ಗೆ ರವಾನೆ ಮಾಡಲಾಗಿದೆ.

ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಯನ್ನೇ ಮದುವೆಯಾದ ಆರೋಪಿ ಕೇಸ್ ರದ್ದು

0

ಬೆಂಗಳೂರು:- ಹೈಕೋರ್ಟ್ ಪೀಠವು ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಯನ್ನೇ ಮದುವೆಯಾದ ಆರೋಪಿಯ ಕೇಸ್ ಅನ್ನು ರದ್ದು ಮಾಡಿದೆ. ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ಈ ಆದೇಶ ಮಾಡಿದೆ.

ಅತ್ಯಾಚಾರ ಘಟನೆ ನಡೆದಾಗ ಸಂತ್ರಸ್ತೆಯು ಅಪ್ರಾಪ್ತೆಯಾಗಿದ್ದರು. ಸಂತ್ರಸ್ತೆ ಲೈಂಗಿಕ ಸಂಭೋಗಕ್ಕೆ ಗುರಿಯಾಗಿದ್ದಾಳೆ ಎಂಬುದಾಗಿ ವೈದ್ಯಕೀಯ ದಾಖಲೆಗಳು ಬಹಿರಂಗಪಡಿಸುತ್ತವೆ. ಇದೀಗ ವಿಚಾರಣೆಗೆ ಹಾಜರಾಗಿರುವ ಸಂತ್ರಸ್ತೆ, ಆರೋಪಿಯನ್ನು ಮದುವೆಯಾಗುವುದಾಗಿ ದೃಢೀಕರಿಸಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ ಆರೋಪಿ ಸಹ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

ಅಲ್ಲದೆ, ವಿಚಾರಣಾ ನ್ಯಾಯಾಲಯದ ವಿಚಾರಣೆ ವೇಳೆ ಪ್ರಕರಣದ ಸಾಕ್ಷಿಯಾಗಿರುವ ಸಂತ್ರಸ್ತೆ ಪ್ರತಿಕೂಲ ಸಾಕ್ಷ್ಯ ನುಡಿದಿದ್ದಾರೆ. ಪ್ರಾಸಿಕ್ಯೂಷನ್‌ನ್ನು ಬೆಂಬಲಿಸುವ ಯಾವೊಂದು ಸಾಕ್ಷ್ಯವನ್ನೂ ಪಾಟಿ ಸವಾಲಿನಲ್ಲಿ ಸಂತ್ರಸ್ತೆ ದಾಖಲಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆರೋಪಿ ವಿರುದ್ಧದ ಕ್ರಿಮಿನಲ್‌ ವಿಚಾರಣಾ ಪ್ರಕ್ರಿಯೆ ಮುಂದುವರಿದರೆ, ಆತ ಸೆರೆಮನೆ ವಾಸದಲ್ಲಿ ಮುಂದುವರಿಯಲಿದ್ದು, ಹೆಚ್ಚಿನ ಸಂಕಟ ಅನುಭವಿಸುತ್ತಾನೆ. ಜೊತೆಗೆ, ಸಂತ್ರಸ್ತೆಗೆ ನ್ಯಾಯ ಸಿಗುವುದಕ್ಕಿಂತ ಹೆಚ್ಚಿನ ದುಃಖ ಒದಗುತ್ತದೆ. ನ್ಯಾಯದಾನದೊಂದಿಗೆ ಪ್ರಕರಣ ಅಂತ್ಯವಾಗುವುದಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್‌, ಆರೋಪಿ ಮೇಲಿನ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ರದ್ದುಪಡಿಸಿದೆ.

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ..!

0

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ. ಕಮಲೇಶ್ (36) ಮೃತ ದುರ್ದೈವಿಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಮೂಲದ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು.

ಕಳೆದ 17ರಂದು ಸ್ನಾನ ಮಾಡುವ ಸಂದರ್ಭದಲ್ಲಿ ಕಳೆದು ಹೋಗಿದೆ. ಈ ವಿಚಾರ ಮನೆಯವರಿಗೆ ಹೇಳಲು ಹೆದರಿ, ವಿಷ ಸೇವನೆ ಮಾಡಿದ್ದಾನೆ. ತಕ್ಷಣ ಮನೆಯವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಪ್ರಕರಣ ದಾಖಲು ಮಾಡಲಾಗಿದೆ.

ಹಿರಿಯ ನಟಿ ಲೀಲಾವತಿ ತೋಟದ ಗೇಟ್​ ಬಳಿ ಚಿರತೆ ಪ್ರತ್ಯಕ್ಷ

0

ನೆಲಮಂಗಲ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಇರುವ ಹಿರಿಯ ನಟಿ ಲೀಲಾವತಿ ತೋಟದ ಗೇಟ್​ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ. ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಚೋಡಸಂದ್ರ, ಹಂದಿಗುಟ್ಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನಮ್ಮ ಸಮಾಜದ ನಿರ್ಣಯ ಬೇರೆ ರಾಜಕೀಯ ಬೇರೆ: ಡಿಕೆ ಶಿವಕುಮಾರ್

0

ಬೆಂಗಳೂರು: ಸಹಿ ಯಾಕೆ ಮಾಡಬಾರದು? ಮಾಡಿದರೆ ತಪ್ಪೇನು? ಅದು ನಮ್ಮ ಸಮಾಜದ ನಿರ್ಣಯ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕಾಂತರಾಜು ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸರ್ಕಾರ ಸ್ವೀಕಾರ ಮಾಡದಂತೆ ಸಹಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಕೆಶಿ ಪ್ರತಿಕ್ರಿಯಿಸಿ ಸಹಿ ಹಾಕಿದ್ದನ್ನು ಒಪ್ಪಿಕೊಂಡರು.

ನಮ್ಮ ಸಮಾಜದ ನಿರ್ಣಯ ಬೇರೆ ರಾಜಕೀಯ ಬೇರೆ. ನಾನು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಿದ್ದೇವೆ. ಸಮಾಜದ ಮುಖಂಡರು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ ಎಂದರು.

ಕಾಂತರಾಜು ವರದಿ ತಿರಸ್ಕರಿಸುವಂತೆ ಒಕ್ಕಲಿಗರ ಸಂಘದ ಆಗ್ರಹ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಡಿಸಿಎಂ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಬಹುತೇಕ ಒಕ್ಕಲಿಗ ನಾಯಕರು, ಇತರೇ ಪಕ್ಷಗಳ ಪ್ರಮುಖರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ನವೆಂಬರ್ 24ಕ್ಕೆ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಲು ನಿರ್ಧರಿಸಿರುವ ಈ ಹೊತ್ತಲೇ ನಿರೀಕ್ಷೆಯಂತೆ ಸರ್ಕಾರದ ಒಳಗೆ-ಹೊರಗಿನಿಂದ ಜಾತಿಗಣತಿ ವರದಿ ಕಿಚ್ಚು ಹಬ್ಬತೊಡಗಿದೆ.

ಆಪರೇಷನ್ ಕಮಲ ಬಗ್ಗೆ ವಿಪಕ್ಷ ನಾಯಕ ಅಶೋಕ್ ಶಾಕಿಂಗ್​ ಹೇಳಿಕೆ

0

ಬೆಂಗಳೂರು:- ವಿಪಕ್ಷ ನಾಯಕ ಅಶೋಕ್ ಅವರು, ಆಪರೇಷನ್ ಕಮಲ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ನಾವು ಬೇಡ ಅಂದರೂ ಕಾಂಗ್ರೆಸ್ಸಿಗರೇ ಬಹಳಷ್ಟು ಅಸ್ತ್ರ ಕೊಟ್ಟಿದ್ದಾರೆ. ಆಪರೇಷನ್​ ಕಮಲದ ಅವಶ್ಯಕತೆ ನಮಗಿಲ್ಲ, ಅವರೇ ಕುಸಿದು ಬಿಳುತ್ತಿದ್ದಾರೆ ಎಂದರು.

ಇನ್ನೂ ಸುವರ್ಣಸೌಧದ ಸಾರ್ವಕರ್ ಫೋಟೋ ತೆಗೆಯುತ್ತೇವೆ ಎಂದಿದ್ದಾರೆ. ಇದು ಸಾರ್ವಕರ್​ಗೆ ಮಾಡುತ್ತಿರುವ ಅಪಮಾನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೊಲೆ, ಸುಲಿಗೆ ಜಾಸ್ತಿಯಾಗಿದೆ. ರಾಜ್ಯದಲ್ಲಿ ಟಿಪ್ಪು ಸಂಸ್ಕೃತಿ ಇದೆ ಎಂದು ಕಿಡಿಕಾರಿದರು.

ಗೆಸ್ಟ್ ಹೌಸ್ ಗೇಟ್ ಬಿದ್ದು ಮೂರು ವರ್ಷದ ಮಗು ಸಾವು..!

0

ಉಡುಪಿ: ಗೆಸ್ಟ್ ಹೌಸ್ ನ ಗೇಟ್ ಒಂದು ಪುಟ್ಟ ಮಗುವಿನ ಮೇಲೆ ಬಿದ್ದ ಪರಿಣಾಮ ಮಗು ಸಾವನಪ್ಪಿದ ಘಟನೆ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತ ಮಗುವನ್ನು ಸ್ಥಳೀಯ ನಿವಾಸಿ ಸುಧೀರ್‌ ಮೊಗವೀರ ಅವರ ಏಕೈಕ ಪುತ್ರ ಮೂರು ವರ್ಷದ ಸುಶಾಂತ್‌ (3) ಎಂದು ಗುರುತಿಸಲಾಗಿದೆ.

ಮನೆಯ ಸಮೀಪದಲ್ಲಿರುವ ಗೆಸ್ಟ್‌ಹೌಸ್‌ನ ಗೇಟ್‌ನಲ್ಲಿ ಈ ಮಗು ಪ್ರತಿದಿನ ಆಟವಾಡುತ್ತಿದ್ದು ಅದರಂತೆ ಮಂಗಳವಾರ ಆಡುತ್ತಿದ್ದಾಗ ಗೇಟ್‌ ಕಳಚಿ ಮೈ ಮೇಲೆ ಬಿದ್ದಿದೆ.

ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದೆ. ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

error: Content is protected !!