Home Blog Page 3154

ಆರ್​ ಅಶೋಕ್​ ಕಲಬುರಗಿ ಜಿಲ್ಲಾ ಪ್ರವಾಸ, ಬರ ವೀಕ್ಷಣೆ

0

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕನಾದ ನಂತ್ರ ಫುಲ್ ಆಕ್ಟೀವ್ ಆಗಿರುವ ಸಾಮ್ರಾಟ್ ಆರ್ ಅಶೋಕ್ ಇಂದಿನಿಂದ ಬರ ಅಧ್ಯಯನ ಶುರು ಮಾಡಿದ್ದಾರೆ.

ಅದ್ರಲ್ಲೂ ಕಲಬುರಗಿಯಿಂದಲೇ ಬರ ಅಧ್ಯಯನ ಆರಂಭ ಮಾಡುವ ಮೂಲಕ ಸರ್ಕಾರದ ಕಣ್ಣು ತೆರೆಸಲು ಮುಂದಾಗಿದ್ದಾರೆ. ಗ್ರಾಮೀಣ ಮತಕ್ಷೇತ್ರದ ಮೊಕಿನ್ ತಾಂಡಾದ ರೈತರ ಹೊಲಗಳಿಗೆ ಭೇಟಿ ಕೊಟ್ರು.

ಇದೇವೇಳೆ ರೈತರಿಂದ ಮಾಹಿತಿ ಪಡೆದು ಹಾನಿಯಾದ ವಿವರ ಪಡೆದು ನಂತ್ರ ಅಳಂದ ತಾಲೂಕಿನ ಕಡಗಂಚಿಯ ಗ್ರಾಮದ ರೈತರೊಡನೆ ಚರ್ಚಿಸಿದ್ರು.

ಬೆಳ್ಳಂ ಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್, ಮನೆ, ಕಚೇರಿ ಮೇಲೆ ದಾಳಿ

0

ಬೆಂಗಳೂರು:- ನಗರದಲ್ಲಿ ಉದ್ಯಮಿಗಳಿಗೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.ಬೆಳ್ಳಂಬೆಳಗ್ಗೆ ಮಾಗಡಿರಸ್ತೆ, ಆಡುಗೋಡಿ ಸೇರಿದಂತೆ ವಿವಿಧೆಡೆ ಉದ್ಯಮಿಗಳ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ. ತೆರಿಗೆ ವಂಚನೆ ಆರೋಪ ಹಿನ್ನೆಲೆ ಐಟಿ ದಾಳಿ ನಡೆದಿದೆ.

ಮಾಗಡಿರಸ್ತೆ ಬಳಿ ಇರುವ ETA ಗಾರ್ಡನ್ ಅಪಾರ್ಟ್ಮೆಂಟ್ ನಲ್ಲಿ ಇರುವ ಪುನೀತ್ ಬೋರಾ ಮನೆ ಮೇಲೆ ದಾಳಿ ನಡೆದಿದ್ದು ಎರಡು ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಜಗಳ ತಡೆಯಲು ಬಂದ ಪೊಲೀಸರ ವಾಹನವನ್ನೇ ಕದ್ದ ಕಿಲಾಡಿ..!

0

ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿ‌ನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ.

ತಡರಾತ್ರಿ ಗ್ರಾಮದ ಸಿಎಸ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಹೋದರಿಬ್ಬರ ನಡುವೆ ಗಲಾಟೆ ಆಗ್ತಿತ್ತು. ಈ ವೇಳೆ ಆರೋಪಿ ಸಹೋದರ 112 ಗೆ ಕರೆ ಮಾಡಿದ್ದರಿಂದ ಗ್ರಾಮಕ್ಕೆ ವಾಹನ ಬಂದಿತ್ತು.

ಈ ವೇಳೆ ಆರೋಪಿ ಹಿಂದೆ ಇದ್ದ 112 ಕಾರಿನ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ಇದನ್ನ ಗಮನಿಸಲು 112 ಚಾಲಕ ಹಿಂದೆ ಬಂದಿದ್ದಾನೆ.

ಈ ವೇಳೆ ಮುಂದೆ ಹೋಗಿ ಕಾರು ತೆಗೆದುಕೊಂಡು ಆರೋಪಿ ಎಸ್ಕೇಪ್‌ ಆಗಿದ್ದಾನೆ. ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿ ಆರೋಪಿಯನ್ನೂ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಪತ್ತೆಯಾಗಿದ್ದು, ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತ್ತಿರುವುದಾಗಿ ಬಿಂಬಿಸಿ 2 ವರ್ಷದಿಂದ ತಲೆಮರೆಸಿಕೊಂಡು ತಿರುಗುತ್ತಿದ್ದ ರೌಡಿ ಅರೆಸ್ಟ್

0

ಬೆಂಗಳೂರು:- ಸತ್ತು ಹೋಗಿದ್ದಾನೆಂದು ಬಿಂಬಿಸಿಕೊಂಡು ಕೊಲೆ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ತಿರುಗುತ್ತಿದ್ದ ಆರೋಪಿಯನ್ನು ಸಿಸಿಬಿ ಬಂಧಿಸಿದ್ದಾರೆ.ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ. ಕಾಡುಬಿಸನಹಳ್ಳಿ ಸೋಮನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಲ್ಲಿಕಾರ್ಜುನ.ಬಳಿಕ ರಾಜಾನುಕುಂಟೆಯಲ್ಲಿ ಒಂದು ಕೊಲೆ ಕೇಸ್ ನಲ್ಲಿ ಅರೋಪಿಯಾಗಿದ್ದ. ಪೊಲೀಸರಿಗೆ ಸಿಗದೆ ಎರಡು ವರ್ಷಗಳಿಂದ ತಲೆತಪ್ಪಿಸಿಕೊಂಡು ತಿರುಗಾಡುತ್ತಿದ್ದ ಖತರ್ನಾಕ ಆಸಾಮಿ.

ಪೊಲೀಸರು ಮನೆಯವರನ್ನು ವಿಚಾರಿಸಿದಾಗ ಮಗ ಸತ್ತು ಹೋಗಿದ್ದಾನೆ ಎಂದು ನಂಬಿಸಿದ್ದ ಕುಟುಂಬದವರು. ಆದರೆ ಸಿಸಿಬಿಗೆ ಅವನು ಸತ್ತಿರುವ ವಿಚಾರದ ಬಗ್ಗೆ ಡೌಟು ಬಂದಿತ್ತು. ಹೀಗಾಗಿ ಈ ಪ್ರಕರಣದಲ್ಲಿ ಸತ್ತಿದ್ದಾನೆಂದು ಹೇಳಲಾದ ಆರೋಪಿ ಮಲ್ಲಿಕಾರ್ಜುನ ಪತ್ತೆಗೆ ವಿಚಾರಣೆಗೆ ಮುಂದಾಗಿತ್ತು.

ಗೆಳೆಯರು, ಕುಟುಂಬಸ್ಥರು ಯಾರನ್ನೇ ಕೇಳಿದರೂ ಸತ್ತಿದ್ದಾನೆಂದು ಮಾಹಿತಿ ನೀಡುತ್ತಿದ್ದರು. ಸಿಸಿಬಿ ಅಷ್ಟಕ್ಕೆ ಸುಮ್ಮನಾಗಲಿಲ್ಲ. ಆರೋಪಿ ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕತೊಡಗಿತು. ಕೊನೆಗೆ ಆರೋಪಿ ಮಲ್ಲಿ ಸತ್ತಿಲ್ಲ. ಅರೆಸ್ಟ್‌ನಿಂದ ಬಚಾವ್ ಆಗಲು ಸತ್ತಿದ್ದಾನೆ ಬಿಂಬಿಸಿ ತಲೆಮರೆಸಿಕೊಂಡು ಊರೂರು ಓಡಾಡುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿ ಕೊನೆಗೂ  ಬಂಧಿಸಿದ್ದಾರೆ

ಡಂಕಿ ಸಿನಿಮಾದ ಮೊದಲ ಹಾಡು ಎಂಟ್ರಿಗೆ ಡೇಟ್ ಫಿಕ್ಸ್

0

ಶಾರುಖ್‌ ಖಾನ್‌ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಡಂಕಿ ಸಿನಿಮಾದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ.

ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಅಡಿವಿ ಶೇಷ್‌ಗೆ ಸಿಕ್ಕಳು ಜೋಡಿ…’ಗೂಢಚಾರಿ-2’ ಸಿನಿಮಾಗೆ ಬನಿತಾ ಸಂಧು ನಾಯಕಿ

0

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.

ಗೂಢಚಾರಿ-2 ಸಿನಿಮಾಗೆ ನಾಯಕಿ ಸಿಕ್ಕಿದ್ದಾರೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಶೇಶ್ ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾಳೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡುತ್ತಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ ಎಂದಿದ್ದಾರೆ.

ಅಡಿವಿ ಶೇಷ್ ಮಾತನಾಡಿ, ಗೂಢಚಾರಿ ಪ್ರಪಂಚಕ್ಕೆ ಬಬಿತಾ ಅವರಿಗೆ ಸ್ವಾಗತ..ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ‘ಗೂಢಚಾರಿ 2’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು,

ಕಾರ್ತೀಕೇಯ 2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನನ್ನನ್ನ ತೆಗೆದಿದ್ದು ತಪ್ಪು, ನ್ಯಾಯಾಲಯಕ್ಕೆ ಹೋಗುತ್ತೇನೆ: ಸಿ.ಎಂ. ಇಬ್ರಾಹಿಂ

0

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಲೆ ಹಾಕ್ಕೊಂಡಿದ್ದಾರೆ. ‘ಸ್ವಾಮಿಯೇ ಅಮಿತ್ ಶಾ ಅಪ್ಪ’ ಅಂತ ಹೇಳ್ತಾರೆ. ಸಿ.ಟಿ. ರವಿನೂ ಫ್ರೀ ಇದ್ದಾನೆ, ಕರ್ಕೊಂಡ್ ಹೋಗಿ ಎಂದು ಜೆಡಿಎಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಕುಟುಕಿದರು. ಬೆಂಗಳೂರಿನಲ್ಲಿ ಸಭೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ನನ್ನನ್ನ ತೆಗೆದಿದ್ದು ತಪ್ಪು,

ನ್ಯಾಯಾಲಯಕ್ಕೆ ಹೋಗುತ್ತೇನೆ. ಯಾರನ್ನು ಕೇಳದೆಯೇ ಅಮಿತ್ ಶಾ ಬಳಿ ‌ಹೋಗಿದ್ದಕ್ಕೆ ಕುಮಾರಸ್ವಾಮಿ ಅವರನ್ನ ತೆಗೆಯಬೇಕಿತ್ತು. ಒಬ್ಬ ಮಗನಿಗೆ ಎಷ್ಟು ಜನರನ್ನ ಬಲಿ ಕೊಡಬೇಕು? ದಸರಾ ಆದ್ಮೇಲೆ ಕರಿತೀನಿ ಅಂದ್ರು ಕರೆದ್ರಾ? ವಿಜಯೇಂದ್ರ, ಆರ್. ಅಶೋಕ್ ಮುಂದೆ ಕುಮಾರಸ್ವಾಮಿ ಕೈ ಕಟ್ಟಿ ನಿಲ್ಲಬೇಕಾ? ಬಿಜೆಪಿಗರಿಗೆ ಬೇಕಿಲ್ಲ, ಇವರೇ ಮೈ ಮೇಲೆ ಬಿದ್ದು ಹೋಗ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Bengaluru: ಪ್ರಿಯಕರನ ಮನೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ..!

0

ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.

ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್‍ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.

ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ: ಡಾ.ಜಿ.ಪರಮೇಶ್ವರ್

0

ಬೆಳಗಾವಿ: ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿರುವ ಹಿನ್ನೆಲೆ ಪೊಲೀಸರು ಹೇಗೆ ತಯಾರಿ ಮಾಡಿಕೊಂಡಿದ್ದಾರೆಂದು ಮಾಹಿತಿ ಪಡೆದಿದ್ದೇನೆ ಎಂದು ಬೆಳಗಾವಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. 3,500 ಪೊಲೀಸ್ ಸಿಬ್ಬಂದಿ ಸುವರ್ಣಸೌಧ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಿಬ್ಬಂದಿಗೆ ಎಲ್ಲ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಊಟ, ವಸತಿ ವ್ಯವಸ್ಥಿತವಾಗಿ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ. ಭದ್ರತೆ, ಆಂತರಿಕ ವಿಚಾರ ಸೇರಿದಂತೆ ಬಿಗಿ ಭದ್ರತೆ ಮಾಡಿಕೊಳ್ಳುತ್ತೇವೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಅವಕಾಶ ಸಿಕ್ಕಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ 100% ಜೆಡಿಎಸ್ ಗೆಲ್ಲುತ್ತದೆ: ಆನಂದ್ ಆಸ್ನೋಟಿಕರ್

0

ಕಾರವಾರ: ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಆನಂದ್ ಆಸ್ನೋಟಿಕರ್, ಕುಮಾರಸ್ವಾಮಿ ಬಿಜೆಪಿ ಜತೆ ಕೈಜೋಡಿಸಿದ್ದು ನನ್ನ ಕ್ಷೇತ್ರದ ಜನರಿಗೆ ಸಂತೋಷವಾಗಿದೆ. ಕುಮಾರಸ್ವಾಮಿಯವರನ್ನು ಭೇಟಿಯಾಗಿ ಪಕ್ಷದಲ್ಲಿದ್ದುಕೊಂಡೇ ಜೆಡಿಎಸ್ ಬಲಪಡಿಸುವುದಾಗಿ‌ ತಿಳಿಸಿದ್ದೇನೆ. ಸರಕಾರ ಬಂದು 6 ತಿಂಗಳಾಗಿದ್ದು, ಗ್ಯಾರಂಟಿಗಳ ಮೂಲಕ ಸರಕಾರ ಜನರ ಬೆಂಬಲ ಪಡೆದಿತ್ತು.

ಈ ಸರಕಾರ ಮಾಡುವ ಲೋಪ, ದೋಷಗಳು, ಸಮಸ್ಯೆಗಳು ಮುಂತಾದ ವಿಷಯಗಳ ಬಗ್ಗೆ ಕುಮಾರಣ್ಣ ಮಾತನಾಡುತ್ತಲೇ ಬಂದಿದ್ದಾರೆ. ನಾನು ಲೋಕಸಭೆ ಚುನಾವಣೆಯ ಆಕಾಂಕ್ಷಿ ಎಂದು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಮೋದಿಯವರ ಅಭಿಮಾನಿ ಎಂದು ಅಂದಿನಿಂದ ಹೇಳಿದ್ದು, ಅವರ ವಿರುದ್ಧ ಯಾವ ವಿಷಯಾನೂ ಮಾತನಾಡಿಲ್ಲ.

ನಮ್ಮ ರಾಷ್ಟ್ರ ಉಳಿಬೇಕಾದರೆ, ಅಭಿವೃದ್ಧಿಗೆ ಪ್ರಧಾನಿ ಮೋದಿಯವರ ಅವಶ್ಯಕತೆಯಿದೆ. ಈ ಹಿಂದೆ ನನಗೆ ಕ್ಷೇತ್ರದ ಬಗ್ಗೆ ಅಷ್ಟೊಂದು ಮಾಹಿತಿಯಿರಲಿಲ್ಲ. ಆದರೆ, ಮುಂದಕ್ಕೆ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ಸಿಕ್ಕಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ 100% ಜೆಡಿಎಸ್ ಗೆಲ್ಲುತ್ತದೆ ಎಂದರು.

error: Content is protected !!