Home Blog Page 3155

ಇನ್ನೂ ಎರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವು

0

ವಿಜಯನಗರ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ  ಜಿಲ್ಲೆಯ ಹೊಸಪೇಟೆ  ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ರೈ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಯುವತಿ ಕೆಳ ಜಾತಿಯವಳು ಎಂಬ ಕಾರಣಕ್ಕೆ ಕೆಲವು ಷರತ್ತುಗಳ ಮೇಲೆ ಯುವಕನ ಕಡೆಯವರು ಮದುವೆಗೆ ಒಪ್ಪಿದ್ದರು. ಇದೇ ಕಾರಣಕ್ಕೆ ಯುವತಿಯ ಕೊಲೆಗೆ ಪ್ರಚೋದನೆ ನೀಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಪೊಲೀಸರ ತನಿಖೆ ವೇಳೆ ಬಯಲಾಯ್ತು ಸ್ಪೋಟಕ ವಿಚಾರ

0

ಬೆಂಗಳೂರು:- ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.

ಆರೋಪಿ ಕಿರಣ್ ಕೊಲೆ ಮಾಡಿದ್ದು 5 ಲಕ್ಷ ಹಣಕ್ಕಾಗಿ. ಪೊಲೀಸರ ವಿಚಾರಣೆಯಲ್ಲಿ ಸುಳ್ಳು ಹೇಳಿಕೆ ನೀಡಿದ್ದ. ಕಿರಣ್ ಸ್ನೇಹಿತ ಶಿವು ಎಂಬಾತನಿಂದ ಅಸಲಿ ಕಹಾನಿ ಬಯಲಾಗಿದೆ. ಮೊದಲಿಗೆ ಕೋಪಕ್ಕೆ ಕೊಲೆ ಮಾಡಿದ್ದಾಗಿ ಆರೋಪಿ ಕಿರಣ್ ಹೇಳಿಕೆ ನೀಡಿದ್ದರು.

ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡು ಕೊಲೆ ಮಾಡಿದ್ದಾಗಿ ಹೇಳಿದ್ದ. ಕ್ಷಮೆ ಕೇಳಿ ಮತ್ತೆ ಕೆಲಸಕ್ಕ ಸೇರಿಸಿಕೊಳ್ಳಲು ಕೇಳಲು ಹೋಗಿದ್ದೆ. ಆದ್ರೆ ಇದಕ್ಕೆ ಒಪ್ಪದಿದ್ದಾಗ ಕೊಲೆ ಮಾಡಿದ್ದಾಗಿ ಆರೋಪಿ ಕಿರಣ್ ಹೇಳಿದ್ದ. ನಂತರ ಅಲ್ಲಿಯೇ ಇದ್ದ ಹದಿನೈದು ಸಾವಿರದೊಂದಿಗೆ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಾಗಿ ಹೇಳಿಕೆ ನೀಡಿದ್ದ. ಇದೀಗ ಕೊಲೆಯ ಹಿಂದಿನ ಅಸಲಿ ಕಹಾನಿಯನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.

ತಲಘಟ್ಟಪುರ ಇನ್ಸ್‌ಪೆಕ್ಟರ್ ಜಗದೀಶ್ ನೇತ್ರತ್ವದಲ್ಲಿ ತನಿಖೆ ನಡೆದಿದೆ. ಕೊಲೆ ಬಳಿಕ ಮನೆಯಲ್ಲಿ ಇದ್ದ ಹಣ ಮತ್ತು ಚಿನ್ನ ದೋಚಿ ಆರೋಪಿ ಎಸ್ಕೇಪ್ ಆಗಿದ್ದ. ಜೊತೆಗೆ ಪ್ರತಿಮಾ ಕೈಯಲ್ಲಿದ್ದ ಎರಡು ಚಿನ್ನದ ಬಳೆ ಒಂದು ಚಿನ್ಬದ ಬ್ರೇಸ್ಲೆಟ್ ದೋಚಿದ್ದ. ಮೂರೆವರೆ ಇಂದ ನಾಲ್ಕು ಲಕ್ಷ ಮೌಲ್ಯದ ಚಿನ್ನ ದೋಚಿದ್ದ.. ಹಣ ಮನೆಯಲ್ಲಿದ್ದ ವಿಚಾರ ಕಿರಣ್ ಗೆ ಮುಂಚಿತವಾಗಿಯೆ ಗೊತ್ತಿತ್ತು. ಹಣವನ್ನು ಕೋಣನ ಕುಂಟೆ ಬಳಿಯ ಗೆಳಯ ಶಿವು ನಿವಾಸದಲ್ಲಿ ಇಟ್ಟಿದ್ದ ಕಿರಣ್ ನನಗೆ ಯಾರೊ ಕೊಡಬೇಕಿತ್ತು ನಿಮ್ಮ ಮನೆಯಲ್ಲಿ ಇರ್ಲಿ. ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿ ಬಂದ ಮೇಲೆ ತೆಗೆದುಕೊಂಡು ಹೋಗ್ತಿನಿ ಎಂದಿದ್ದ.

ಕಿರಣ್ ಬಂಧನದ ನಂತರ ಪೊಲೀಸರ ಬಳಿ ಹಣದ ಸಮೇತ ಬಂದಿದ್ದ ಶಿವು, ಆದ್ರೆ ಹಣ ಎಲ್ಲಿಂದ ಬಂತು ಎಂಬುದು ಶಿವುಗೆ ಗೊತ್ತಿರಲಿಲ್ಲ. ಹೀಗಾಗಿ ವಿಚಾರಣೆ ವೇಳೆ ಐದು ಲಕ್ಷ ಹಣದ ವಿಚಾರವನ್ನು ಆರೋಪಿ ಬಾಯ್ಬಿಟ್ಟಿದ್ದಾನೆ. ಹಣಕ್ಕಾಗಿ ಪ್ಲಾನ್ ಮಾಡಿಯೇ ಮನೆಗೆ ನುಗ್ಗಿ ಕೊಲೆ ಮಾಡಿರುವುದು ತನಿಖೆ ವೇಳೆ ಬಯಲಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಹಂತದಲ್ಲಿ ಸುಳ್ಳು ಸುಳ್ಳು ಹೇಳಿಕೆ ನೀಡಿದ್ದ ಆರೋಪಿ, ಕೊಲೆ ಮಾಡಲಿಕ್ಕೆ ಆಯುಧ ತಂದಿರಲಿಲ್ಲಾ ಬದಲಾಗಿ ಕೊಲೆ ಮಾಡುವ ಪ್ಲಾನ್ ಮಾಡಿಕೊಂಡಿದ್ದ ಕಿರಣ್ ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ.

ಹಣ ತಂದು ಕೊಟ್ಟಿದ್ದ ಕಾರಣಕ್ಕ ಕಿರಣ್ ಸ್ನೇಹಿತ ಶಿವುನನ್ನ ಸಾಕ್ಷಿಯಾಗಿ ಪರಿಗಣಿಸಿರುವ ಪೊಲೀಸರು, ಸದ್ಯ ಆರೋಪಿ ಕಡೆಯಿಂದ ಐದು ಲಕ್ಷ ನಗದು ಮತ್ತು ಚಿನ್ನ ವಶಕ್ಕೆ ಪಡೆದಿದ್ದಾರೆ.

 

ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದವರು ಅಂದರ್

0

ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿ ಸಾಮಾಜಿಕ‌ ಜಾಲತಾಣಗಳಲ್ಲಿ ಪೋಸ್ಟ್​​ ಹಾಕಿದ್ದ ​ಇಬ್ಬರು ಯುವಕರನ್ನು ಪೊಲೀಸರು ಕೋಲಾರ ತಾಲೂಕಿನ ನರಸಾಪುರದಲ್ಲಿ ಬಂಧಿಸಿದ್ದಾರೆ.

ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣ‌ದಡಿಯಲ್ಲಿ ನರಸಾಪುರದ ವೇಣು ಮತ್ತು ಪವನ್ ಕುಮಾರ್​ ಅನ್ನು ಬಂಧಿಸಲಾಗಿದೆ. ಇತ್ತೀಚಿಗೆ ಯುವಕರು ಅಪರಾಧ ಪ್ರಕರಣಗಳಲ್ಲಿ ಹಚ್ಚಾಗಿ ಕಾಣಿಸಿಕೊಂಡಿದ್ದರು.

ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದೆ.

ಫೈನಲ್ ಹಣಾಹಣಿಗೆ ಸಿದ್ದವಾದ ಭಾರತ ತಂಡ!

0

ಅಹ್ಮದಾಬಾದ್:  ಇಂದು ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು 2 ಗಂಟೆಗೆ ಎರಡು ಬಲಿಷ್ಠ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿವೆ. ಇನ್ನೂ‌ ಇವತ್ತಿನ ಈ ಪಂದ್ಯವನ್ನು ಭಾರತ ತಂಡ ಗೆಲ್ಲಲೆ ಬೇಕು ಅಂತಾ ಅಭಿಮಾನಿಗಳು ವಿಶೇಷ ಪೂಜೆ ಪುನಸ್ಕಾರ ಹಾಗೂ‌ ಹೋಮ ಹವನಗಳನ್ನ ಮಾಡುತ್ತಿದ್ದಾರೆ.

ಇನ್ನೂ ಇವತ್ತಿನ ಈ ಪಂದ್ಯದಲಗಲಿ ಎರಡು ಟೀಂ ನ ಆಟಗಾರರ ಪಟ್ಟಿಯನ್ನ ನೋಡೊದಾದ್ರೆ , ಭಾರತ ತಂಡದಲ್ಲಿ ರೋಹಿತ್ ಶರ್ಮಾ ನಾಯಕ , ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ವಿಕೆಟ್ ಕೀಪರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸೀದ್ ಕೃಷ್ಣ ಇರಲಿದ್ದಾರೆ .

ಇನ್ನೂ ಟೀಂ ಆಸ್ಟ್ರೇಲಿಯಾ ನೋಡೊದಾದ್ರೆ , ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಶಾನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್

ಹಾಗೇನೆ ಮೋದಿ ಸ್ಟೇಡಿಯಂ ನಲ್ಲಿ‌ ಸುಮಾರು ಒಂದು ಲಕ್ಷ ಮೂವತ್ತು ಸಾವಿರ ಜನರು ನೇರವಾಗಿ ವೀಕ್ಷಿಸಿದರೆ ಕೋಟ್ಯಂತರ ಜನರು ಟಿವಿ ಹಾಗೂ ಒಟಿಟಿ ವೇದಿಕೆಗಳ ಮೂಲಕ ವಿಶ್ವಾದ್ಯಂತ ವೀಕ್ಷಿಸಲಿದ್ದಾರೆ.

ಶೂಟಿಂಗ್ ಮುಗಿಸಿದ ‘ಝೀಬ್ರಾ’…ಶೀಘ್ರದಲ್ಲೇ ತೆರೆಗೆ ಬರಲಿದೆ ಡಾಲಿ-ಸತ್ಯದೇವ್ ಕಾಂಬೋದ ಚಿತ್ರ

0

ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.

ಝೀಬ್ರಾ ಎಂಬ ಮಾಸ್ ಎಂಟರ್‌ಟೇನರ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇಬ್ಬರದ್ದೂ 26ನೇ ಸಿನಿಮಾ ಎಂಬುದು ವಿಶೇಷ.

ಝೀಬ್ರಾ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್‌, ಸತ್ಯರಾಜ್‌, ಸುನೀಲ್‌ ವರ್ಮ, ಜೆನಿಫರ್‌ , ಸುರೇಶ್‌ಚಂದ್ರ ಮೆನನ್‌, ಕಲ್ಯಾಣಿ ನಟರಾಜ್‌ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಪ್ಯಾನ್ ಇಂಡಿಯಾ ‘ZEBRA’ ಚಿತ್ರಕ್ಕೆ ಕೆಜಿಎಫ್​ ಚಿತ್ರ ಖ್ಯಾತಿಯ ರವಿ ಬಸ್ರೂರು ಸಂಗೀತ ಕೊಟ್ಟಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ.

ನಾಚಿಕೆ ಮಾನ ಮರ್ಯಾದೆ ಇದ್ದರೆ ಜಮೀರ್ ರಾಜೀನಾಮೆ ಕೊಟ್ಟು ಹೋಗಲಿ: ಪ್ರಮೋದ್ ಮುತಾಲಿಕ್

0

ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು,

ಜಮೀರ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಬೇಕು. ಜಮೀರ್ ಅಹ್ಮದ್ ಅವರ ಹೇಳಿಕೆ ನಾನು ವಿರೋಧಿಸುತ್ತೇನೆ. ಸಭಾಧ್ಯಕ್ಷ ಸ್ಥಾನ ಅತ್ಯಂತ ಪವಿತ್ರವಾದದ್ದು. ಆ ಸ್ಥಾನದಲ್ಲಿ ಕೂತವರು ವ್ಯಕ್ತಿಯಲ್ಲ, ಅದೊಂದು ಶಕ್ತಿ. ಜಾತಿ, ಪಕ್ಷ, ಧರ್ಮ, ಭಾಷೆ ಬೇಧವಿಲ್ಲದೇ ಕುಳಿತಿರುವ ವ್ಯಕ್ತಿಯನ್ನು ಮುಸ್ಲಿಂ ಎಂದು ಗುರುತಿಸಿದ್ದು ಸಂವಿಧಾನ ವಿರೋಧಿ ಎಂದು ಹರಿಹಾಯ್ದರು.

ಜಮೀರ್ ಹೇಳಿಕೆ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗೆ ಹಾಕಬೇಕು. ಮತಾಂಧತೆಯ ಪ್ರವೃತ್ತಿ ಅತಿಯಾಗಿ ಜಮೀರ್ ಅಹ್ಮದ್‌ಗೆ ಮುಸ್ಲಿಂ ಭೂತ ಹಿಡಿದಿದೆ. ಈ ಭೂತ ಸರಿಯಲ್ಲ. ಭಾರತದಲ್ಲಿ ಈ ರೀತಿ ಹೇಳುವುದು ಸರಿಯಲ್ಲ. ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಹೇಳಲಿ. ಸಂವಿಧಾನಬದ್ಧ ಸಭಾಧ್ಯಕ್ಷ ಪವಿತ್ರ ಸ್ಥಾನಕ್ಕೆ ಅಪಚಾರ ಮಾಡಿದ್ದಾರೆ. ನಾಚಿಕೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಹೋಗಲಿ. ಬಿಜೆಪಿ ಅವರು ಸ್ವಲ್ಪ ಬಾಯಿ ತೆಗೆದು ವ್ಯಕ್ತಿ ವಿರುದ್ಧ ಹೋರಾಟ ನಡೆಸಲಿ. ಜಮೀರ್ ಅಹ್ಮದ್ ಅವರ ಶಾಸಕ ಸ್ಥಾನ ರದ್ದಾಗುವವರೆಗೂ ಬಿಜೆಪಿ ಅವರು ಹೋರಾಟ ಮಾಡಲಿ ಎಂದು ಒತ್ತಾಯಿಸಿದರು.

ನಾಳೆ ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯಾವಳಿ ಹಿನ್ನೆಲೆ: ಕ್ರೀಡಾಭಿಮಾನಿಗಳಿಂದ ವಿಶೇಷ ಪೂಜೆ

0

ಹಾವೇರಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ನಡೆಯಲಿರೋ ವಲ್ಡ್ ಕಪ್ ಪಂದ್ಯಾವಳಿಗೆ ಹಾವೇರಿಯಲ್ಲಿ ಕ್ರೀಡಾಭಿಮಾನಿಗಳು ತೇರು ಬೀದಿ ಆಂಜನೇಯ ಸ್ವಾಮೀಗೆ ಪೂಜೆ ಸಲ್ಲಿಸಿದರು. ನಗರದ ಆಂಜನೇಯ ಸ್ವಾಮೀಗೆ ಪೂಜೆ ಸಲ್ಲಿಸಿ, ಭಾರತ ಗೆಲ್ಲುವಂತೆ ಪ್ರಾರ್ಥನೆ ಸಲ್ಲಿಸಿದರು. ಭಾರತ ಪರ ಘೋಷಣೆ ಕೂಗಿ,

ಜೈಕಾರ ಹಾಕಿದ್ದಾರೆ. ಜೊತೆಗೆ ವಿರಾಟ್ ಕೋಹ್ಲಿಯ ಅಭಿಮಾನಿ ಪ್ರವೀಣ ಬೆನ್ನಿನ ಹಿಂಭಾಗದಲ್ಲಿ ಹಚ್ಚೆ ಹಾಕಿಕೊಂಡಿದ್ದಾರೆ. ಈ ಭಾರಿ ನಮ್ಮ ಭಾರತ ತಂಡ ವಲ್ಡ್ ಕಪ್ ಗೆದ್ದೆ ಗೆಲ್ಲುತ್ತೆ, ಎಲ್ಲಾ ವಿಭಾಗದಲ್ಲಿ ಉತ್ತಮವಾದ ಪ್ರದರ್ಶನವನ್ನ ಭಾರತ ನೀಡುತ್ತಿದೆ. ಟೀಂ ಇಂಡೀಯಾ ಈ ಭಾರಿ ವಲ್ಡ್ ಕಪ್ ಗೆಲ್ಲುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿ.ಕೆ. ಶಿವಕುಮಾರ್

0

ಬೆಂಗಳೂರು: “ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಕ್ಸ್ ಖಾತೆ ಮೂಲಕ ಯತೀಂದ್ರ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವೇಕಾನಂದ ಎಂಬುವವರು ಪೊಲೀಸ್ ಅಧಿಕಾರಿ ಎಂದು ಹೇಳಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

“ಕುಮಾರಣ್ಣ ಹಾಗೂ ವಿಜಯೇಂದ್ರ ಅವರು ಈಗ ಪಾರ್ಟ್ನರ್ ಗಳು. ಅವರ ಮಧ್ಯೆಯೇ ಗೊಂದಲ ಇರುವಾಗ ನಾನು ಹೇಗೆ ಪ್ರತಿಕ್ರಿಯೆ ನೀಡಲಿ. ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಆ ಸ್ಥಾನಗಳಿಗೆ ತಕ್ಕಂತೆ ಗೌರವ ಉಳಿಸಿಕೊಳ್ಳಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ಅವರ ತಂದೆಯವರು ಅನೇಕ ಬಾರಿ ಈ ಬಗ್ಗೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಕೇಳಿದೆ. ದೇವೇಗೌಡರು, ಯಡಿಯೂರಪ್ಪ, ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಸದಾನಂದಗೌಡರು, ಬಸವರಾಜ ಬೊಮ್ಮಾಯಿ ಅವರು ಕೂಡ ಮಾಜಿ ಮುಖ್ಯಮಂತ್ರಿಗಳು. ಅವರುಗಳು ಇವರಂತೆ ಸುಮ್ಮ ಸುಮ್ಮನೆ ಮಾತನಾಡುತ್ತಾರಾ?

ದೇವರು, ಜನ ಕೊಟ್ಟ ಅವಕಾಶ, ಬೆಂಬಲಿಗರ ಸಹಾಯ, ತಂದೆ ತಾಯಿ ಆಶೀರ್ವಾದ, ತಮ್ಮದೇ ಆದ ಹೋರಾಟದಿಂದ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದವರು. ಆ ಸ್ಥಾನಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಬೆಳಗ್ಗೆಯಿಂದ ಸಂಜೆವರೆಗೂ ಮನಸ್ಸಿಗೆ ಬಂದಂತೆ ಈ ರೀತಿ ಮಾತನಾಡಿದರೆ ಪ್ರಯೋಜನವಿಲ್ಲ. ಮಾಜಿ ಮುಖ್ಯಮಂತ್ರಿ ಮಾತು, ವರ್ತನೆ ಎಂದರೆ ನಾವು ಹೆದರಿ ಗಡ, ಗಡ ನಡಗುವಂತೆ ಇರಬೇಕು.

ನಮ್ಮ ಮಾಜಿ ಶಾಸಕ ಯತೀಂದ್ರ ಅವರು ತಮ್ಮ ತಂದೆಗಾಗಿ ಸ್ಥಾನ ತ್ಯಾಗ ಮಾಡಿದವರು. ನಾವು ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಅವರನ್ನು ಎಂಎಲ್ ಸಿ ಮಾಡುತ್ತೇವೆ ಎಂದರೂ ಅದನ್ನು ಬೇಡ ಎಂದವರು. ಆತ ತಂದೆಯ ಕ್ಷೇತ್ರದಲ್ಲಿ ಕೆಡಿಪಿ ಸದಸ್ಯನಾಗಿ ಕೆಲಸದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರಿಗೆ ನೂರಾರು ಕೆಲಸಗಳಿರುತ್ತವೆ. ನಮ್ಮ ಕ್ಷೇತ್ರದಲ್ಲೂ ಅಧಿಕಾರಿಗಳ ವರ್ಗಾವಣೆ ಅರ್ಜಿ ಇಟ್ಟುಕೊಂಡು ಅನೇಕರು ಬರುತ್ತಾರೆ. ಹಾಗೆಂದು ಯತೀಂದ್ರ ಅವರು ವರ್ಗಾವಣೆ ಮಾಡಿದ್ದಾರೆ ಎಂದು ಅರ್ಥವಲ್ಲ. ಅವರು ಶಾಸಕರಲ್ಲದಿದ್ದರೂ ಕ್ಷೇತ್ರದ ಜನರ ಕೆಲಸ ಮಾಡುತ್ತಿದ್ದಾರೆ. ಅದನ್ನು ನೋಡಿ ಖುಷಿಪಡಬೇಕು. ಈ ರೀತಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ”.

ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ವಿಚಾರ ಪ್ರಸ್ತಾಪ ಮಾಡಲೇಬೇಕು. ಈ ವಿಚಾರದ ಜತೆಗೆ ಅವರು ಇದುವರೆಗೂ ಜನತೆಗೆ ಕೊಟ್ಟ ಮಾತನ್ನು ಬಿಚ್ಚಿಟ್ಟು ಚರ್ಚೆ ಮಾಡಲಿ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ವಿಚಾರ ಪ್ರಸ್ತಾಪಿಸುವ ಹಕ್ಕಿದೆ. ಅದನ್ನು ನಾನೇಕೆ ಕಿತ್ತುಕೊಳ್ಳಲಿ, ಬೇಡ ಎನ್ನಲಿ” ಎಂದು ತಿಳಿಸಿದರು. ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ನಿಂದ ಉಚ್ಛಾಟಿಸಿರುವ ಬಗ್ಗೆ ಕೇಳಿದಾಗ, “ಇದು ಅವರ ಪಕ್ಷದ ವಿಚಾರ. ನಾನು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ” ಎಂದರು.

ನಾನು ಕಾಂಗ್ರೆಸ್ʼಗೆ ಹೋಗುವ ಪರಿಸ್ಥಿತಿ ಇಲ್ಲ: ಜಿ.ಟಿ.ದೇವೇಗೌಡ

0

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್​, ಜಿ.ಟಿ.ದೇವೇಗೌಡ ಭೇಟಿ ವಿಚಾರ ಸಂಬಂಧ ಸದಾಶಿವನಗರದಲ್ಲಿ ಅವರೇ ಬಂದು ನನ್ನನ್ನು ಭೇಟಿ ಮಾಡಿದ್ರು. ಭೇಟಿ ವೇಳೆ ಎಸ್​.ಟಿ.ಸೋಮಶೇಖರ್​ ಸೇರಿ ಹಲವರು ಇದ್ದರು ಎಂದು ಬೆಂಗಳೂರಿನಲ್ಲಿ ಟಿವಿ9ಗೆ JDS ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಈ ಹಿಂದೆ ಪಕ್ಷಕ್ಕೆ ಕರೆದರೂ ಯಾಕೆ ಬರಲಿಲ್ಲ ಎಂದು ಹೇಳಿದ್ರು. ಅದೃಷ್ಟ ಇರುವವರಿಗೆ ಅಧಿಕಾರ ಸಿಗುತ್ತೆ, ಇಲ್ಲಂದ್ರೆ ಸಿಗಲ್ಲ ಅಂದೆ. ನಾನು ಕಾಂಗ್ರೆಸ್​​ಗೆ ಹೋಗುವ ಪರಿಸ್ಥಿತಿ ಇಲ್ಲ. ನಾನು ಕಾಂಗ್ರೆಸ್​ಗೆ ಬರಲ್ಲ ಅಂತಾ ಡಿ.ಕೆ.ಶಿವಕುಮಾರ್​ಗೆ ಹೇಳಿದ್ದೇನೆ. ಜೆಡಿಎಸ್​ನ 19 ಶಾಸಕರೂ ಒಟ್ಟಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ ಎಂದರು.

ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು: ನಳಿನ್ ಕುಮಾರ್ ಕಟೀಲ್

0

ಮಂಗಳೂರು:- ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ನಳಿನ್‌ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿವಾದಿತ ಹೇಳಿಕೆ ನೀಡಿಡುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು. ಜಮೀರ್ ಅವರು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆ.

ಸ್ಪೀಕರ್ ಸ್ಥಾನ ಜಾತಿ, ಧರ್ಮದ ಹೊರತಾಗಿ ಇರುವ ಹುದ್ದೆಯಾಗಿದೆ. ಆ ಸ್ಥಾನವನ್ನು ಅವರು ಮತೀಯ ದೃಷ್ಟಿಯಿಂದ ನೋಡಿದ್ದಾರೆ. ಸ್ಥಾನದ ಗೌರವ ಕಡಿಮೆಯಾಗುವಂತೆ ಮಾತನಾಡಿದ್ದಾರೆ ಎಂದರು.

ಈ ಹೇಳಿಕೆಯು ಅವರ ಮಾನಸಿಕತೆಯನ್ನು ತೋರಿಸುತ್ತದೆ. ಮತಿಭ್ರಾಂತಿಯಿಂದ ಜಮೀರ್ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರಿಂದ ರಾಜೀನಾಮೆ ಪಡೆಯಲಿ’ ಎಂದರು.

error: Content is protected !!