Home Blog Page 3159

ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ: ಕುಮಾರಸ್ವಾಮಿ ಪ್ರಶ್ನೆ

0

ಬೆಂಗಳೂರು: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ಶಾಸಕ ಡಾ.ಯತೀಂದ್ರಗೆ ಫೋನ್ ಕರೆ ಮಾಡಿದ್ದು ಯಾರು? ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ? ವಿವೇಕಾನಂದ ಯಾರು?, ನಾಲ್ಕೈದು ಲಿಸ್ಟ್​ ಕೊಟ್ಟಿದ್ದು ಏನು? ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಫೋನ್ ಮಾಡಿ ಕೇಳಿದ್ಯಾರು? ಅದು ಸಿಎಂ ಪರಿಹಾರ ನಿಧಿಯ ಹೆಸರುಗಳು? ಒಬ್ಬ ಮುಖ್ಯಮಂತ್ರಿ ಫೋನ್ ಮಾಡಿ ಲಿಸ್ಟ್ ಬಗ್ಗೆ ಮಾತಾಡುತ್ತಾರೆ.

ಯಾರು ಮಹದೇವ?, ಯಾರು ಲೇಬರ್​ ಇನ್ಸ್​​ಪೆಕ್ಟರ್​ ಅವನು?  ಆರ್​.ಮಹದೇವ್​ ಅವರದ್ದು ವಿಶೇಷ ಕರ್ತವ್ಯ ಏನು? ಸಾರ್ವಜನಿಕವಾಗಿ ಈ ರೀತಿಯಾದರೆ 4 ಗೋಡೆ ಮಧ್ಯೆ ಇನ್ನೇನು ಆಗುತ್ತಿದೆ? ಸಿಎಂ ಕೆಲಸ ಅಂದರೆ ಮಗನಿಗೆ ಫೋನ್​ ಮಾಡಿ ಕೇಳಬಹುದಾ? ಸಾರ್ವಜನಿಕರ ಹಣ ಲೂಟಿ ಮಾಡಿ ಎಂದು ಅಧಿಕಾರ ಕೊಟ್ಟಿದ್ದಾರಾ? ಫೋನ್ ಮಾಡಿ ಹೇಳಿದ್ದಾರಲ್ಲ ಅದರ ದಾಖಲೆ ಬಿಡುಗಡೆ ಮಾಡಿ. ಯಾವ ಶಾಲೆಗಳ ಸಿಎಸ್​​ಆರ್​ ಫಂಡ್​ ಅಂತಾ ಬಿಡುಗಡೆ ಮಾಡಲಿ ಎಂದು ಕುಮಾರಸ್ವಾಮಿ  ಸವಾಲು ಹಾಕಿದರು.

ದಾಂಪತ್ಯ ಬದುಕಿಗೆ ಕಾಲಿಟ್ಟ ವಾಸುಕಿ ವೈಭವ್ – ಬೃಂದಾ ವಿಕ್ರಮ್

0

ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವಾಸುಕಿ ಮದುವೆ ಆಗುತ್ತಿರುವ ಬೃಂದಾ (Brunda) ಯಾರು ಎನ್ನುವ ವಿಚಾರವನ್ನು ಈವರೆಗೂ ವಾಸುಕಿ ಯಾರ ಜೊತೆಯೂ ಹಂಚಿಕೊಂಡಿರಲಿಲ್ಲ. ಬೃಂದಾ ಕೂಡ ರಂಗಭೂಮಿ ಕಲಾವಿದರು. ಸಾಕಷ್ಟು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸ್ವತಃ ವಾಸುಕಿ ಜೊತೆಯೇ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ.

ಹಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಸುತ್ತಿದ್ದ ಎನ್ನುತ್ತವೆ ಮೂಲಗಳು. ವಾಸುಕಿ ಅವರ ಮದುವೆ ತೀರಾ ಸರಳವಾಗಿ ಇಂದು ನಡೆದಿದೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ತೀರಾ ಖಾಸಗಿ ಆಗಿರಲಿ ಎಂದು ಅವರು ಮಾಧ್ಯಮಗಳಿಗೂ ಮದುವೆ ವಿಚಾರವನ್ನು ತಿಳಿಸಿರಲಿಲ್ಲ. ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ (Actress) ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು.

ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ  (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವುದು ತಾಜಾ ಸಮಾಚಾರ.

ಗೊಂಬೆ ಮಾಸ್ಕ್ ಧರಿಸಿ ಪುಂಡಾಟ ಕೇಸ್: 6 ಮಂದಿ ಅರೆಸ್ಟ್

0

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಪುಂಡಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.

ರಾಜಗೋಪಾಲನಗರ ಪೊಲೀಸರಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಏರಿಯಾದಲ್ಲಿ ಹವಾ ಮೈಂಟೇನ್ ಮಾಡಲು ಈ ಯುವಕರ ಗುಂಪು ಕೃತ್ಯ ಎಸಗಿದ್ದಾರೆ. ಆರೋಪಿಗಳು, ಕಂಠ ಪೂರ್ತಿ ಕುಡಿದು ರಾಡ್ ಮತ್ತು ಲಾಂಗ್ ನಿಂದ ಕಾರು ಗ್ಲಾಸ್ ಹೊಡೆದಿದ್ದರು.

ಬೈಕ್ ಗಳಲ್ಲಿ ಬಂದು ತೂರಾಡಿಕೊಂಡು ಮನಬಂದಂತೆ ವರ್ತನೆ ಮಾಡಿ ಎಸ್ಕೇಪ್ ಆಗಿದ್ದರು. ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ಮಾಡಿದರು. ಪಕ್ಕದ ಏರಿಗಳಿಂದ ಬಂದು ಕೃತ್ಯ ಎಸಗಿ ಬೇರೆಡೆ ಪ್ರತ್ಯೇಕವಾಗಿದ್ದುಕೊಂಡು ತಲೆಮರೆಸಿಕೊಂಡಿದ್ರು.

ಇದೀಗ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂದಾಯ ಇಲಾಖೆ ಅಧಿಕಾರಿ ಮೇಲೆ ಪೊಲೀಸಪ್ಪನ ದರ್ಪ..?

0

ಧಾರವಾಡ: ಕಂದಾಯ ಇಲಾಖೆ ಅಧಿಕಾರಿಯೊಬ್ಬರ ಮೇಲೆ ಪೊಲೀಸಪ್ಪನೊಬ್ಬ ಹಲ್ಲೆ ಮಾಡಿರುವ ಘಟನೆ ಅಣ್ಣಿಗೇರಿಯಲ್ಲಿ ನಡೆದಿದೆ ಎನ್ನಲಾಗಿದೆ.

ಕಂದಾಯ ಇಲಾಖೆ ಅಧಿಕಾರಿ ರಿಷಿ ಸಾರಂಗ ಎಂಬುವವರು ಪೊಲೀಸಪ್ಪನ ಬೈಕ್ ಮೇಲೆ ನೀರಿನ ಬಾಟಲ್ ಇಟ್ಟಿದ್ದರು. ಇದಕ್ಕೆ ಕೋಪಗೊಂಡ ಪೊಲೀಸ್ ನನ್ನ ಬೈಕ್ ಮೇಲೆ ಬಾಟಲ್ ಇಟ್ಟಿದ್ದು ಯಾಕೆ ಎಂದು ರಿಷಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ.

ಅಣ್ಣಿಗೇರಿ ಪೊಲೀಸ್ ಠಾಣೆಯ ಪೇದೆ ಮಂಜು ನಾಗಾವಿ ಎಂಬುವವರೇ ರಿಷಿ ಅವರ ಮೇಲೆ ಹಲ್ಲೆ ನಡೆಸಿದವರು ಎನ್ನಲಾಗಿದೆ. ಈ ಸಂಬಂಧ ರಿಷಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರೂ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತದೆ.

ಒಟಿಟಿ ಎಂಟ್ರಿಗೆ ರೆಡಿ ಶಿವಣ್ಣನ ‘ಘೋಸ್ಟ್’…ಯಾವಾಗ…ಎಲ್ಲಿ…? ಇಲ್ಲಿದೆ‌ ನೋಡಿ ಮಾಹಿತಿ

0

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ ಘೋಸ್ಟ್ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ.

ನ.17ರಿಂದ ಜೀ5ನಲ್ಲಿ ಘೋಸ್ಟ್ ಸ್ಟ್ರೀಮಿಂಗ್

ಶಿವರಾಜ್‌ಕುಮಾರ್ ‘ಘೋಸ್ಟ್’ ಸಿನಿಮಾ ಓಟಿಟಿಗೆ ಲಗ್ಗೆ ಇಡುವುದಕ್ಕೆ ರೆಡಿಯಾಗಿದೆ. ಜೀ5ನಲ್ಲಿ ನವೆಂಬರ್ 17ರಿಂದ ಪ್ರಸಾರ ಆಗಲಿದೆ. ಈ ಸಂಬಂಧ ಸ್ಪೆಷಲ್ ಪ್ರೋವೋ ಬಿಡುಗಡೆ ಮಾಡಲಾಗಿದೆ. ಇಲಿಯೊಂದು ಬಾಯಲ್ಲಿ ಚೀಟಿ ಹಿಡಿದು ಬಂದಿದೆ. ಅದನ್ನು ಅದು ಶಿವಣ್ಣನ ಕೈಗೆ ಇಟ್ಟಿದೆ. ಆ ಚೀಟಿಯ ಹಿಂಭಾಗದಲ್ಲಿ ಬೆಂಕಿ ಹಿಡಿದು ಶಿವರಾಜ್ ಕುಮಾರ್ ಅವರು ನೋಡಿದಾಗ ಅದರಲ್ಲಿ ಒಂದು ಮೆಸೇಜ್ ಕಂಡಿದೆ.

ಅದನ್ನು ನೋಡಿ ಫ್ಯಾನ್ಸ್ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಷ್ಟಕ್ಕೂ ಆ ಮೆಸೇಜ್ ಏನೆಂದರೆ, ಘೋಸ್ಟ್ ಚಿತ್ರವು ಜೀ-5ನಲ್ಲಿ ನವೆಂಬರ್ 17ರಿಂದ ನೋಡಬಹುದು ಎಂಬ ಮೆಸೇಜ್ ಅದು. ನನ್ನ ಗ್ಯಾಂಗ್ ಅಲ್ಲಿ ಇರೋ Informer ಒಬ್ಬ್ರು ನಿಮಗೆ ಒಂದು Messages ಕೊಟ್ಟಿದ್ದಾರೆ ಏನು ಅಂತ ಗೊತ್ತಾಯ್ತು ಅಲ್ವಾ ಎನ್ನುವ ಶೀರ್ಷಿಕೆ ಕೊಟ್ಟಿದ್ದು, ಇದು ಸಕತ್ ವೈರಲ್ ಆಗಿದೆ.

ಸಂದೇಶನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ಘೋಸ್ಟ್’ ಸಿನಿಮಾ ನಿರ್ಮಾಣಗೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಿದೆ. ಅನುಪಮ್ ಕೇರ್, ಜಯರಾಂ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಇನ್ನು ಚಿತ್ರದಲ್ಲಿ ನಾಯಕಿ ಇಲ್ಲ. ಅಂದಹಾಗೆ ಶ್ರೀನಿ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಯಾಂಗ್ ಸ್ಟರ್ ಆಗಿ ಅಬ್ಬರಿಸಿರುವ ಶಿವಣ್ಣನ ಘೋಸ್ಟ್ ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಜೀ5 ಒಟಿಟಿಯಲ್ಲಿ‌ ನೋಡಬಹುದು.

ಯತೀಂದ್ರ ಒಬ್ಬರು ಮಾಜಿ ಎಂಎಲ್ಎ, ಖಾಲಿ ಮನುಷ್ಯ ಅಲ್ಲ: ಚಲುವರಾಯಸ್ವಾಮಿ

0

ಮಂಡ್ಯ: ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಯತೀಂದ್ರ ಪರ ಬ್ಯಾಟ್ ಬೀಸಿದ್ದಾರೆ. ಡಾ.ಯತೀಂದ್ರ ಒಬ್ಬ ಮಾಜಿ ಎಂಎಲ್‌ಎ, ಖಾಲಿ ಮನುಷ್ಯ ಅಲ್ಲ. ಸಿದ್ದರಾಮಯ್ಯ ವರುಣದಲ್ಲಿ ಸ್ಪರ್ಧಿಸಿದ್ದರಿಂದ ಅವರು ನಿಲ್ಲಲು ಆಗಿಲ್ಲ. ಮೈಸೂರು ಜಿಲ್ಲೆ, ಪಕ್ಷದಲ್ಲಿ ಡಾ.ಯತೀಂದ್ರ ಪ್ರಮುಖ ನಾಯಕ.

ಮಾಜಿ ಶಾಸಕರು ಕೆಲಸ ಮಾಡುವುದನ್ನು ತಪ್ಪು ಅನ್ನೋಕೆ ಆಗುತ್ತಾ? ವಿಡಿಯೋದಲ್ಲಿ ಯಾವ ವಿಚಾರದ ಬಗ್ಗೆ ಅವರು ಹೇಳಿದರೋ ಗೊತ್ತಿಲ್ಲ. ಯಾರು ಆ ವಿಡಿಯೋ ಕಟ್ ಆ್ಯಂಡ್ ಪೇಸ್ಟ್ ಮಾಡಿದರೋ ಗೊತ್ತಿಲ್ಲ. ಸೋಶಿಯಲ್ ಮಿಡಿಯಾದಲ್ಲಿ ಕಟ್ ಆ್ಯಂಡ್​ ಪೇಸ್ಟ್​ ಮಾಡುತ್ತಾರೆ. ಮಾತಾಡಿದ ರೀತಿ ಬೇರೆ ಇರುತ್ತೆ, ತೋರಿಸುವುದೇ ಬೇರೆ ಇರುತ್ತದೆ. ಯತೀಂದ್ರ ಸಾರ್ವಜನಿಕ ಸೇವೆಯಲ್ಲಿ‌ ಇರೋದು ಅಪರಾಧವಲ್ಲ. ವರುಣ ಅಲ್ಲ ಇಡೀ ರಾಜ್ಯದಲ್ಲಿ ಕೆಲಸ ಮಾಡಲಿ ಬಿಡಿ, ತಪ್ಪೇನಿದೆ? ಕಾಂಗ್ರೆಸ್ ಮುಖಂಡರು ಕೆಲ ಸಮಸ್ಯೆ ಗಮನಕ್ಕೆ ತಂದರೆ ತಪ್ಪೇನು? ಎಂದು ಕೇಳಿದರು.

ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರ: ಆರ್. ಅಶೋಕ್

0

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಆರ್. ಅಶೋಕ್, ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ. ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ.

ಈಗ ಬಂದಿರುವ ವೀಡಿಯೋ 10ನೇಯದ್ದೋ 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್​​ಪರ್ಟ್​. ವೀಡಿಯೋ ಬಗ್ಗೆ ತನಿಖೆಯಾಗಬೇಕು, ಸಿಎಂ ರಾಜೀನಾಮೆ ಕೊಡಬೇಕು. ಏನು ಆದೇಶ ಮಾಡುತ್ತಾರೋ ಅದನ್ನು 100% ಫಾಲೋ ಮಾಡಲ್ಲ. ವರ್ಗಾವಣೆ ಮಾಡಬಾರದು ಅಂತಾ ಆದೇಶ ಮಾಡುತ್ತಾರೆ, ಆದರೆ ಸಾವಿರಾರು ವರ್ಗಾವಣೆ ಮಾಡಿದ್ದಾರೆ. ದಿನನಿತ್ಯ ಇದೇ ದಂಧೆ ಆಗಿಬಿಟ್ಟಿದೆ ಎಂದರು.

KEA ಪರೀಕ್ಷಾ ಅಕ್ರಮಕ್ಕೆ ಸಹಕಾರ ನೀಡಿದ ಇಬ್ಬರು ಉಪನ್ಯಾಸಕರು CID ಬಲೆಗೆ

0

ಕಲಬುರಗಿ:- KEA ಪರೀಕ್ಷಾ ಅಕ್ರಮಕ್ಕೆ ಸಹಕರಿಸಿದ ಆರೋಪದಡಿಯಲ್ಲಿ ಇಬ್ಬರು ಉಪನ್ಯಾಸಕರನ್ನ CID ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಫಜಲಪುರ ತಾಲೂಕಿನ ಬಸಣ್ಣ ಪೂಜಾರಿ & ಚಂದ್ರಕಾಂತ ಬಂಧಿತರು..ರಾಯಲ್ ಪಬ್ಲಿಕ್ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ಅಧೀಕ್ಷಕ ಇನ್ನೊಬ್ಬ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್ ಆಗಿದ್ರು.. ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳು ಇದೀಗ ಲಾಕ್ ಆಗಿದ್ದಾರೆ. ಹೀಗಾಗಿ CID ಬೀಸಿದ ಬಲೆಗೆ ಈವರೆಗೆ ಒಟ್ಟು 7 ಜನ ಅಂದರ್ ಆದಂತಾಗಿದೆ..

ಯತೀಂದ್ರ ಅವರು ವರ್ಗಾವಣೆ ವಿಚಾರವಾಗಿ ಮಾತಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

0

ಬೆಂಗಳೂರು: ಯತೀಂದ್ರ ಅವರು ವರ್ಗಾವಣೆ ವಿಚಾರವಾಗಿ ಮಾತಾಡಿಲ್ಲ. ಸಿಎಸ್‍ಆರ್ ಫಂಡ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್) ಬಗ್ಗೆ ಮಾತಾಡಿರುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರ ಯತೀಂದ್ರ ಅವರ ವೈರಲ್ ಆದ ವೀಡಿಯೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ನಾನು ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೇನೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ. ಪತ್ರಕರ್ತರ ಪ್ರಶ್ನೆಗೆ, ಐದು ಹೆಸರು ಎಂದರೆ ವರ್ಗ ಏನಯ್ಯ? ಅದು ಸಿಎಸ್‍ಆರ್ ಲಿಸ್ಟ್. ಶಾಲೆ ಕಟ್ಟಡಗಳನ್ನು ಸಿಎಸ್‍ಆರ್ ಫಂಡ್‍ನಿಂದ ರಿಪೇರಿ ಮಾಡಿಸಲಾಲಾಗುತ್ತಿದೆ. ಈ ಬಗ್ಗೆ ಯತೀಂದ್ರ ಅವರು ಹೇಳಿದ್ದಾರೆ. ಕುಮಾರಸ್ವಾಮಿ ರಾಜಕೀಯವಾಗಿ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಪೋಕ್ಸೋ ಕೇಸ್: 14 ತಿಂಗಳಿನಿಂದ ಜೈಲಿನಲ್ಲಿದ್ದ ಮುರುಘಾಶ್ರೀ ಬಿಡುಗಡೆ

0

ಚಿತ್ರದುರ್ಗ: ಕಳೆದ 14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ.8 ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರಲಿಲ್ಲ. ಜಾಮೀನು ಆದೇಶ ನೀಡುವ ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ಬಿಡುಗಡೆಯಾದ ಬಳಿಕ  ದಾವಣಗೆರೆ ಕಡೆ ಹೊರಟಿದ್ದಾರೆ.

ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

error: Content is protected !!