Home Blog Page 3160

ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ: ಎಂಬಿ ಪಾಟೀಲ್

0

ವಿಜಯಪುರ: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ. ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್​ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದ. ಆಗ ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದರು.

ಇನ್ನೂ ಬಿಜೆಪಿ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರು ಹಾಗೂ ಮುಖಂಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ಬಿಜೆಪಿಯಿಂದ ಹಾಗೂ ಜೆಡಿಎಸ್​​ನಿಂದಲೂ ಕಾಂಗ್ರೆಸ್​ಗೆ ಬರುತ್ತಾರೆ.

ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗಿರುತ್ತದೆ ಎಂದರು. ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದಾಗ ಅಂಕಿ ಸಂಖ್ಯೆ ಬಗ್ಗೆ ಮಾಹಿತಿ ನೀಡಿ ಎಂದು ಮಾಧ್ಯಮದವರು ಕೇಳಿದರು. ಇದಕ್ಕೆ ಎಂಬಿ ಪಾಟೀಲರು, ಬಹಳಷ್ಟು ಜನರು ಎಂದು ಹೇಳುತ್ತೇವೆ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.

ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿದ ಲೆಕ್ಚರರ್ ಗಂಡ..!

0

ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು ಕೊಲೆಗೈದ ಘಟನೆ ಇಲ್ಲಿನ ( ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್‍ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಶೃತಿಯ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತ ಪಟ್ಟಿದ್ದರು. ಆಕೆಯ ತಂಗಿ 2018ರಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದಳು. ಇದಾದ ಬಳಿಕ ಆಕೆಯ ಹೆಸರಿಗೆ 10 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಆಸ್ತಿ ಸೇರಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಕಟ್ಟಡಗಳು, ಮನೆ ಹಾಗೂ ಸೈಟ್‍ಗಳು ಶೃತಿಯ ಹೆಸರಲ್ಲಿತ್ತು. ಆ ಆಸ್ತಿಯನ್ನು ಮಾರಿ ಬೇರೆಡೆ ಆಸ್ತಿ ಕೊಳ್ಳಲು ಶೃತಿಗೆ ಆರೋಪಿ ಪತಿ ಒತ್ತಾಯಿಸುತ್ತಿದ್ದ. ಪತಿಯ ಆಸ್ತಿ ಮಾರಾಟ ವಿಚಾರಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಹಲವು ಬಾರಿ ಜಗಳ ಕೂಡ ಆಗಿತ್ತು.

ಇದೇ ಕಾರಣಕ್ಕೆ ಕಳೆದ ಶನಿವಾರ ಆಕೆ ಮಲಗಿದ್ದ ವೇಳೆ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಕೊಲೆಯಾದ ಬಳಿಕ ಪಲ್ಸ್ ರೇಟ್ ಕಮ್ಮಿಯಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ. ಸೋಮಶೇಖರ್ ಭಾವ ಮೃತ ಶೃತಿ ಚಿಕ್ಕಪ್ಪನಿಗೆ ಕರೆ ಮಾಡಿ ಸಹಜ ಸಾವೆಂದು ತಿಳಿಸಿದ್ದ. ಅನುಮಾನಗೊಂಡ ಶೃತಿಯ ಚಿಕ್ಕಪ್ಪ ಕುಮಾರಸ್ವಾಮಿ ಎಂಬವರು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಕೊಲೆಗೈದಿದ್ದು ಬೆಳಕಿಗೆ ಬಂದಿತ್ತು. ವಿಚಾರಣೆ ವೇಳೆ ಆರೋಪಿ ತಾನೇ ಕೊಲೆ ಮಾಡಿರುವುದಾಗಿ  ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಫ್ರೆಂಡ್‌ಷಿಪ್‌ ಬ್ರೇಕಪ್! ಸಂಗೀತಾ ಹಾರ್ಟ್‌ ಬ್ರೋಕಪ್

0

ಬಿಗ್‌ಬಾಸ್‌ ಕನ್ನಡ ಈ ಸೀಸನ್‌ ಆರಂಭದಿಂದಲೂ ಒಂದು ಮನ ಮೂರು ದೇಹ ಅನ್ನುವಂತಿದ್ದವರು ಸಂಗೀತಾ-ಕಾರ್ತಿಕ್ ಮತ್ತು ತನಿಷಾ. ಹಲವು ಸಂಕಷ್ಟದ ಸಂದರ್ಭಗಳಲ್ಲಿಯೂ ಮೂವರೂ ಒಬ್ಬರಿಗೊಬ್ಬರು ಹೆಗಲೆಣೆಯಾಗಿ ನಿಂತುಕೊಂಡಿದ್ದರು.

ಪ್ರತಿಸ್ಪರ್ಧಿಗಳನ್ನು ಒಟ್ಟಾಗಿ ಎದುರಿಸಿದ್ದರು. ಸಂಗೀತಾ ಜೈಲಿಗೆ ಹೋದ ಸಂದರ್ಭದಲ್ಲಂತೂ ಕಾರ್ತಿಕ್, ‘ನಾವು ಮೂರು ಜನರೂ ಈ ಮನೆಗೆ ಬಂದ ದಿನದಿಂದಲೂ ಒಟ್ಟಿಗಿದ್ದೇವೆ. ಮುಂದೆಯೂ ಒಟ್ಟಿಗಿರುತ್ತೇವೆ. ಫ್ರೆಂಡ್‌ಗೆ ತೊಂದರೆಯಾದಾಗ ಅವರನ್ನು ಬೆಂಬಲಿಸುವುದು ನನ್ನ ಕರ್ತವ್ಯ. ಅವರ ಜೊತೆ ನಾನು ನಿಂತೇ ನಿಲ್ಲುತ್ತೇನೆ’ ಎಂದು ಗಟ್ಟಿಯಾಗಿ ಹೇಳಿದ್ದರು.

ಆದರೆ ಈಗ ಈ ಮೂವರ ಫ್ರೆಂಡ್‌ಷಿಪ್‌ ಗಾಳಿಪಟದ ಸೂತ್ರ ಹರಿದಂತಿದೆ. ಇದರ ಸೂಚನೆ JioCinema ಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಸ್ಪಷ್ಟವಾಗಿಯೇ ಜಾಹೀರಾಗಿದೆ. ನಿನ್ನೆಯ ಎಲಿಮಿನೇಷನ್‌ನ ಲೂಡೋ ಟಾಸ್ಕ್‌ನಲ್ಲಿ ಒಂದು ಹಂತದಲ್ಲಿ ಕಾರ್ತಿಕ್ ಮತ್ತು ತನಿಷಾಗೆ ಎದುರಾಳಿ ತಂಡದ ಒಬ್ಬರನ್ನು ಸೇವ್ ಮಾಡುವ ಅವಕಾಶ ಸಿಕ್ಕಿತ್ತು. ಅವರು ವರ್ತೂರು ಸಂತೋಷ್ ಅವರ ಜೊತೆಗೂಡಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಎದುರಾಳಿ ತಂಡದಲ್ಲಿದ್ದ ಸಂಗೀತಾ, ತನ್ನನ್ನೇ ಸೇವ್ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದರು.

ಆದರೆ ಆದದ್ದೇ ಬೇರೆ! ತನಿಷಾ, ‘ನಾವು ಎದುರಾಳಿ ತಂಡದಿಂದ ಸಿರಿ ಅವರನ್ನು ಸೇವ್ ಮಾಡುತ್ತೇವೆ’ ಎಂದು ಘೋಷಿಸಿದರು. ಅದುವರೆಗೆ ನಗುನಗುತ್ತ ಕುಣಿದಾಡುತ್ತಿದ್ದ ಸಂಗೀತಾ ಮುಖದಲ್ಲಿ ಒಮ್ಮೆಲೇ ದುಮ್ಮಾನ ಕಾಣಿಸಿಕೊಂಡಿತ್ತು. ಮೇಲ್ನೋಟಕ್ಕೆ ಆ ಕ್ಷಣದಲ್ಲಿ ಮಗಿದು ಹೋದಂತೆ ಕಂಡರೂ ಸಂಗೀತಾ ಮನಸಲ್ಲಿ ಈ ವಿಷಯ ಬೆಳಯುತ್ತಲೇ ಇದ್ದ ಹಾಗಿದೆ.

ಇಂದಿನ ಪ್ರೋಮೊದಲ್ಲಿ ಸಂಗೀತಾ ಮತ್ತು ತನಿಷಾ ಪರಸ್ಪರ ವಾದ ಮಾಡಿಕೊಳ್ಳುತ್ತಿರುವ, ಕೊನೆಯಲ್ಲಿ ಸಂಗೀತಾ, ‘ಕಿರುಚಬೇಡಿ ತನಿಷಾ’ ಎಂದು ಗಟ್ಟಿಯಾಗಿ ಹೇಳಿದ್ದರ ವಿಷುವಲ್ಸ್ ಇದೆ. ಒಂದು ಕಡೆ ಸಂಗೀತಾ ಕಾರ್ತಿಕ್ ಬಳಿ, ‘ನಿಮ್ಮ ಕೈಯಲ್ಲಿ ನನ್ನನ್ನು ಸೇವ್ ಮಾಡುವ ಚಾನ್ಸ್ ಇತ್ತು’ ಎಂದು ಹೇಳಿದ್ದಾರೆ. ಇನ್ನೊಂದೆಡೆಗೆ ತನಿಷಾ ಬಳಿ, ‘ನೀವು ನನ್ನನ್ನ ಸೇವ್ ಮಾಡ್ಲಿಲ್ಲ’ ಎಂದೂ ಹೇಳಿದ್ದಾರೆ.

ಈ ಚರ್ಚೆಯಲ್ಲಿ ತನಿಷಾ, ‘ವರ್ತೂರು ಅವರು ಸಂಗೀತಾನ ಸೇವ್ ಮಾಡೋದು ಬೇಡ ಅಂತ ಹೇಳಿದ್ರು’ ಎಂದು ಹೇಳಿದ್ದಾರೆ. ಸಂಗೀತಾ ನೇರವಾಗಿ ವರ್ತೂರ್ ಬಳಿ ವಿಚಾರಿಸಿದಾಗ, ‘ಸಂಗೀತಾ ಅನ್ನೋ ಹೆಸರೇ ಬಂದಿರಲಿಲ್ಲ’ ಎಂದಿದ್ದಾರೆ. ಅಲ್ಲಿಗೆ ಸಂಗೀತಾಗೆ ತನಿಷಾ ಸುಳ್ಳು ಹೇಳಿದ್ದಾರೆ ಎಂಬುದು ಗೊತ್ತಾಗಿದೆ.

‘ನಮ್ಮಲ್ಲೊಂದು ಫ್ರೆಂಡ್‌ಷಿಪ್ ಇತ್ತು. ಒಂದು ನಂಬಿಕೆ ಇತ್ತು. ಆ ನಂಬಿಕೆ ಬ್ರೇಕ್ ಆಗಿದೆ’ ಎಂದು ಹೇಳಿ ತನಿಷಾ ಮತ್ತು ಕಾರ್ತಿಕ್ ಜೊತೆಗಿನ ಫ್ರೆಂಡ್‌ಷಿಪ್ ಅನ್ನು ಕೊನೆಗೊಳಿಸಿದ್ದಾರೆ.

ಯಾವಾಗಲೂ ಒಬ್ಬರಿಗೊಬ್ಬರು ಗಟ್ಟಿಯಾಗಿ ನಿಂತಿದ್ದ ಈ ಮೂವರ ಫ್ರೆಂಡ್‌ಷಿಪ್‌ ಅಲ್ಲಿಗೆ ಕೊನೆಗೊಂಡಂತಾಗಿದೆ. ಇದರಿಂದಾಗಿ ಇಡೀ ಮನೆಯ ಸಮತೋಲನವೇ ಹೆಚ್ಚೂಕಮ್ಮಿ ಆಗುವ ಸಾಧ್ಯತೆಯಂತೂ ಇದ್ದೇ ಇದೆ.

ಹಾಗಾದರೆ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಏನಾಗಬಹುದು? ಸ್ನೇಹಿತರನ್ನು ಕಳೆದುಕೊಂಡ ಸಂಗೀತಾ ಪುಟಿದೇಳುತ್ತಾರಾ? ಅಥವಾ ಕುಸಿದು ಹೋಗುತ್ತಾರಾ? ಇಷ್ಟು ದಿನ ಒಟ್ಟಿಗಿದ್ದ ಸ್ನೇಹಿತೆಯನ್ನು ತನಿಷಾ ಮತ್ತು ಕಾರ್ತಿಕ್ ಅಷ್ಟು ಸುಲಭಕ್ಕೆ ಬಿಟ್ಟುಕೊಡುತ್ತಾರಾ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಾದರೆ JioCinemaದಲ್ಲಿ 24ಗಂಟೆ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಕನ್ನಡ ವೀಕ್ಷಿಸಿ.

ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ: ಡಾ ಯತೀಂದ್ರ ವಿಡಿಯೊ ವೈರಲ್

0

ಮೈಸೂರು: ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆಯ ಜೊತೆ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಯತೀಂದ್ರ ಅವರು ವರುಣ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.

ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ. ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ ಅವರಿಗೆ‌ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ.

ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ‌. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ನಿಂತು ಶಾಸಕರಾಗಿ ಆಯ್ಕೆ ಆಗಿದ್ದರು. ಆದರೆ ಈ ಬಾರಿ ಈ ಕ್ಷೇತ್ರವನ್ನು ತಂದೆಗೆ ಬಿಟ್ಟು ಕೊಟ್ಟಿದ್ದರು.

ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

0

ಧಾರವಾಡ: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ. ಯೋಜನೆ ಯಶಸ್ಸಿಗೆ ಹಣಕಾಶಿನ ತೊಂದರೆ ಇಲ್ಲ. ತಾಂತ್ರಿಕ ಸಮಸ್ಯೆ ಇದೆ ಅದನ್ನು ಈಗಾಗಲೇ ಫೈಂಡೌಟ್ ಮಾಡಲಾಗಿದೆ. ಆದಷ್ಟು ಬೇಗ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣವನ್ನು ತೆಗೆದು ಇಟ್ಟಿದೆ. ನಾವು ಯಾವುದೇ ಅಭಿವೃದ್ಧಿ ಕೆಲಸ ತಡೆ ಮಾಡಿಲ್ಲ. ಗೃಹ ಲಕ್ಷ್ಮೀ ಯೋಜನೆಗೆ ಹಣಕಾಸಿನ ತೊಂದರೆ ಇದೆ ಅನ್ನುವುದು ಸುಳ್ಳು.

ಗೃಹ ಲಕ್ಷ್ಮೀಯಲ್ಲಿ ಈಗಾಗಲೇ 1 ಕೋಟಿ 9 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿದೆ. ಇನ್ನೂ 5 ರಿಂದ 6 ಲಕ್ಷ ಜನ ಉಳಿದುಕೊಂಡಿದ್ದಾರೆ. ಅವರದ್ದು ಸಹ ಇನ್ನೂ 15 ದಿನಗಳಲ್ಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗೃಹಲಕ್ಷ್ಮೀ ಒಂದೇ ಅಲ್ಲ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ತೆಗೆದಿಟ್ಟಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಯದ್ವಾ ತದ್ವಾ ಟೆಂಡರ್ ಪ್ರಕ್ರಿಯೆ ನಡೆದಿರುವುದು ಒಂದು ಇಲಾಖೆಗೆ 2 ಸಾವಿರ ಕೋಟಿ ಕೊಡಬೇಕಿತ್ತು. ಸಣ್ಣ ನೀರಾವರಿ ಇಲಾಖೆ ಉದಾಹರಣೆಗೆ ತೆಗೆದುಕೊಂಡರೆ ಈ ಇಲಾಖೆಯಿಂದ 2 ಸಾವಿರ ಕೋಟಿ ಕೆಲಸ ತೆಗೆದುಕೊಳ್ಳಬಹುದು.

2022ರ ಅವಧಿಗೆ 1350 ಕೋಟಿ ಕೆಲಸಕ್ಕೆ ಚಾಲನೆ ಕೊಟ್ಟಿದ್ದಾರೆ. ವರ್ಕ್ ಆರ್ಡರ್ ಆಗಿದೆ. ಟೆಂಡರ್ ಪ್ರಕ್ರಿಯೆ, ಕೆಲಸ ಆಗಿದೆ. ಇಲಾಖೆಯ ಬಿಲ್ ಬಿಡುಗಡೆ ಬಾಕಿಯಿದೆ. 22 ಸಾವಿರ ಕೋಟಿ ಹಿಂದಿನ ಸರ್ಕಾರದ ಬಿಲ್ ಬಾಕಿಯಿದೆ. ಅಭಿವೃದ್ಧಿ ಬಗ್ಗೆ ಕೇಳುವವರು ಮಾಡಿದ್ದು ಏನು..?. ಅವರು‌ ಮಾಡಿರುವ ತಪ್ಪುಗಳನ್ನು ನಾವು ಈಗ ಸರಿ ಪಡಿಸುವ ಕೆಲಸ ಮಾಡುತ್ತಿದ್ದೇವೆ ಎನ್ನುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ‌

ವಧು ವರರಿಂದ ಮದುವೆ ಮಂಟಪದಲ್ಲಿ ಇಂಡೋ – ಕಿವೀಸ್ ಸೆಮಿ ಫೈನಲ್ ವೀಕ್ಷಣೆ‌‌

0

ತುಮಕೂರು:– ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ ತಂಡದ ಸೆಮಿ ಫೈನಲ್ ಪಂದ್ಯವನ್ನು ಮದುವೆ ಮಂಟಪದಲ್ಲಿ ವಧು ವರರು ವೀಕ್ಷಿಸಿದ್ದಾರೆ.

ವಧು ವರರಿಂದ ಮದುವೆ ಮಂಟಪದಲ್ಲಿ ಇಂಡೋ – ಕಿವೀಸ್ ಸೆಮಿ ಫೈನಲ್ ವೀಕ್ಷಣೆ‌‌ ಮಾಡಲಾಗಿದೆ. ಆರತಕ್ಷತೆಗೆ ಬರುವ ಸಂಬಂದಿಕರು, ಸ್ನೇಹಿತರಿಗಾಗಿ ಎಲ್‌ಈ‌ಡಿ ಮೂಲಕ ಪಂದ್ಯವೀಕ್ಷಣೆಗೆ ಅವಕಾಶ ಮಾಡಲಾಗಿತ್ತು.
ಪಾವಗಡದ ಎಸ್ ಎಸ್ ಕೆ ಕಲ್ಯಾಣ ಮಂಟಪದಲ್ಲಿ ಕ್ರಿಕೇಟ್ ಪ್ರೇಮಿಗಳ ಮದುವೆ ನಡೆದಿದೆ.

ತೀವ್ರ ಕುತೂಹಲ ಮೂಡಿಸಿದ್ದ ಪಂದ್ಯಕ್ಕಾಗಿ ಎಲ್‌ಈ‌ಡಿಗಳ ಅಳವಡಿಸಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಸೌಂದರ್ಯ, ಕಾರ್ತಿಕ್ ಮದುವೆಯಲ್ಲಿ ಸೆಮಿ ಫೈನಲ್ ಪಂದ್ಯ ವಿಕ್ಷಣೆ ಮಾಡಲಾಗಿದೆ.

ಆರ್ಕೇಸ್ಟ್ರಾ ಜೊತೆ ಮ್ಯಾಚ್ ನೋಡಲು ಎಲ್‌ಈ‌ಡಿ ವ್ಯವಸ್ಥೆ ಮಾಡಲಾಗಿತ್ತು. ಮದುವೆ ಆರತಕ್ಷತೆಯಲ್ಲಿ ಭರ್ಜರಿ ಊಟದ ಜೊತೆ ಪಂದ್ಯ ವೀಕ್ಷಣೆಯ ಭಾಗ್ಯ ದೊರೆತಿದೆ. ಟೀಂ ಇಂಡಿಯಾ ಗೆಲ್ಲುತ್ತಿದ್ದಂತೆ ಮದುವೆ ಮಂಟಪದಲ್ಲಿ ಸಂಭ್ರಮಾಚರಣೆ ನಡೆದಿದೆ.

ತುಮಕೂರು: ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆ..!

0

ತುಮಕೂರು:-ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆಯಾಗಿದೆ. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.

17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆಯಲಾಗಿತ್ತು. ಗಿಡದಲ್ಲಿ ಗಾಂಜಾ ಸೊಪ್ಪು ಕಿತ್ತುಕೊಂಡು ಹುಡುಗರು ಹೋಗುತ್ತಿದ್ದರು.

ಸ್ಥಳೀಯರ ಮಾಹಿತಿ ಆಧಾರದ ಮೇಲೆ‌ ಸ್ಥಳಕ್ಕೆ ಭೇಟಿ ಕೊಟ್ಟು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ನಿವೇಶನದ ಮಾಲೀಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದು, ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

KEA ಪರೀಕ್ಷೆ ಅಕ್ರಮ ಪ್ರಕರಣ: ನೀರಾವರಿ ಇಲಾಖೆ ಇಂಜಿನಿಯರ್ CID ಬಲೆಗೆ

0

ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ CID ಇದೀಗ ನೀರಾವರಿ ಇಲಾಖೆಯ ಇಂಜಿನಿಯರ್ ರುದ್ರಗೌಡ ಎಂಬಾತನನ್ನ ಖೆಡ್ಡಾಗೆ ಕೆಡವಿದ್ದಾರೆ.

ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಆರೋಪ ಹೊಂದಿರುವ ರುದ್ರಗೌಡ ಮೂಲತ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದವನು.

ಸದ್ಯ ಅಥಣಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತಿದ್ದ ಎನ್ನಲಾಗಿದೆ.. ವಿಶೇಷ ಅಂದ್ರೆ ಬಂಧಿತ ರುದ್ರಗೌಡ ಬಳಿ 17 ಹಾಲ್ ಟಿಕೇಟ್‌ಗಳು ಪತ್ತೆಯಾಗಿದ್ದು ಬೆಳಕಿಗೆ ಬಂದಿದೆ. ಹೀಗಾಗಿ ಹಾಲ್ ಟಿಕೇಟ್ ಹಿಂದಿನ ಕಥೆ ಏನೂಂತ ಬಾಯ್ಬಿಡಿಸಲು ಮುಂದಾಗಿದ್ದಾರೆ…

ಜೆಡಿಎಸ್‌ನ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ ಅಸಮಾಧಾನ

0

ಹಾಸನ: ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ನಮ್ಮಗಳ ಯಾರ ಗಮನಕ್ಕೂ ತಿಳಿಸದೇ ಮಧ್ಯಮದ ಮೂಲಕ ತಿಳಿದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅಸಮಧಾನ ಹೊರಹಾಕಿದ ಪ್ರಸಂಗ ನಡೆಯಿತು.

ನಗರದ ಹಾಸನಾಂಬೆ ದೇವಿ ದರ್ಶನದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಜೆಡಿಎಸ್‌ನ ಮಾಜಿ ಶಾಸಕರುಗಳಾದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಹಿರಂಗವಾಗಿಯೇ ಅಸಮಾಧಾನ, ವಿರೋಧ ವ್ಯಕ್ತಪಡಿಸಿದರು.

ಈ ವಿಚಾರವನ್ನು ನಾನು ಮಾಧ್ಯಮದ ಮೂಲಕ ತಿಳಿದೆ. ಸಲೀಂ ಅಹಮದ್ ಅವರು ಫೋನ್ ಮಾಡಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಇದ್ದು, ಅಧ್ಯಕ್ಷರು ಬರುವುದಕ್ಕೆ ಹೇಳಿದ್ದಾರೆ ಬನ್ನಿ ಅಂದ್ರು. ಆಯ್ತು ಅಂದಿದ್ದು, ನನಗೆ ಬೇರೆ ಕಾರ್ಯಕ್ರಮ ಇತ್ತು ಬಂದಿದ್ದೀನಿ ಎಂದು ಹೇಳಿರುವೆನು.

ಕಾಂಗ್ರೆಸ್ ಪಕ್ಷ ಒಂದು ರೀತಿ ಸಮುದ್ರ. ಸಮುದ್ರಕ್ಕೆ ಗಂಗಾಮಾತೆಯಂತ ಪವಿತ್ರವಾದ ಜಲನೂ ಬರುತ್ತದೆ. ಪಕ್ಕದಲ್ಲಿರುವ ಚರಂಡಿ ನೀರು ಸೇರುತ್ತದೆ. ಸಮುದ್ರದಲ್ಲಿ ವಿಷನೂ ಇದೆ, ಅಮೃತನೂ ಇದೆ.

ವಿಷ ಸಿಗೋರಿಗೆ ವಿಷ ಸಿಗುತ್ತೆ, ಅಮೃತ ಸಿಗೋರಿಗೆ ಅಮೃತ ಸಿಗುತ್ತೆ. ನಮ್ಮ ಜಿಲ್ಲೆಯಲ್ಲಿರುವ ಯಾರ ಜೊತೆ ಸಂಪರ್ಕ ಮಾಡದೆ ಸೇರಿಸಿಕೊಂಡಿರುವುದು ನಮ್ಮೆಲ್ಲರಿಗೂ ಅಸಮಾಧಾನ ಇದೆ ಎಂದು ಬಹಿರಂಗವಾಗಿ ಹೇಳಿದರು.

ನನ್ನ ಜೊತೆನೂ ಚರ್ಚೆ ಮಾಡಿಲ್ಲ, ನಮ್ಮ ಜಿಲ್ಲೆ ಮುಖಂಡರ ಜೊತೆನೂ ಚರ್ಚೆ ಮಾಡಿಲ್ಲ. ಪರಮೇಶ್ವರ್ ಆಗಲಿ, ನನಗಾಲಿ, ನಮ್ಮ ಜಿಲ್ಲೆಯ ಶಾಸಕರಗಳಾಗಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗಾಗಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗಾಗಲಿ ಯಾರೂ ಕೂಡ ಬಂದು ಈ ರೀತಿ ಇದೆ, ಪಕ್ಷಕ್ಕೆ ಸೇರಿಸಿಕೊಳ್ಳಬೇಕಾ, ಬಿಡಬೇಕ ಅಂತ ಕೇಳಲೇ ಇಲ್ಲಾ. ಸೇರಿಸಿಕೊಂಡಿದ್ದರೆ ಸಂತೋಷ, ನಮಗೇನು ಅಸಮಾಧಾನ ಇಲ್ಲ. ನಮ್ಮ ಜಿಲ್ಲೆ ರಾಜಕಾರಣ ಏನೇ ಇದ್ದರೂ ಎಂತಹ ಸಂದರ್ಭ ಬಂದರೂ ನಿಭಾಯಿಸುವ ಶಕ್ತಿಯನ್ನು ನಮ್ಮ ಜಿಲ್ಲೆಯ ಜನ ಕೊಟ್ಟಿದ್ದಾರೆ.

ಪರಮೇಶ್ವರ್‌ಗೂ ಕೊಟ್ಟಿದ್ದಾರೆ. ನಮ್ಮ ಜಿಲ್ಲೆಯ ಜನಪ್ರತಿನಿಧಿಗಳಿಗೂ ಕೊಟ್ಟಿದ್ದಾರೆ. ಎಂತಹ ಸಂದರ್ಭ ಬಂದರೂ ನಿಭಾಯಿಸಿಕೊಳ್ಳುತ್ತೇವೆ. ನಾವೇನೂ ಅಂತ ಅಸಕ್ತರೇನಲ್ಲ. ನಾನು ಎಂಪಿ ಟಿಕೆಟ್ ಕೇಳ್ತಿನಿ, ನಿಲ್ತಿನಿ ಅಂತ ಹೇಳಿದ್ದೇನೆ. ಲೋಕಸಭೆನಲ್ಲಿ ಒಂದು ಅವಕಾಶ ಸಿಕ್ಕರೆ ನಮ್ಮ ಜಿಲ್ಲೆಯಿಂದ ಪ್ರತಿನಿಧಿಸಬೇಕು ಅಂತ ಇದ್ದೇನೆ. ನನ್ನ ಅನಿಸಿಕೆಯನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದೇನೆ. ಹೈಕಮಾಂಡ್‌ನವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವರು ನಿಲ್ಲು ಎಂದರೆ ನಿಲ್ಲುತ್ತೇನೆ. ಮಂತ್ರಿಯಾಗಿರು ಅಂದ್ರೆ ಮಂತ್ರಿಯಾಗಿ ಇರ್ತಿನಿ.

ಮುದ್ದ ಹನುಮೇಗೌಡರು ಪಕ್ಷಕ್ಕೆ ಬರ್ತಾರೆ ಅನ್ನೋದನ್ನ ಖಚಿತವಾಗಿ ಹೇಳಲು ಆಗಲ್ಲ. ಅವರ ಬಹಳಷ್ಟು ಸ್ನೇಹಿತರು ಬರುವ ಇಂಗಿತವನ್ನು ತೋರಿಸಿದ್ದಾರೆ. ಬಂದೋರೆಲ್ಲಾ ಆಕಾಂಕ್ಷಿಗಳಿರುತ್ತಾರೆ ಎಂದು ವ್ಯಂಗ್ಯವಾಗಿ ಮಾತನಾಡಿದರು.

ದೆವ್ವದ ಹೆಸರಲ್ಲಿ ಡೆಡ್ಲಿ ವಿಲ್ಹಿಂಗ್ ಮಾಡುತ್ತಿದ್ದವರ ದೆವ್ವ ಬಿಡಿಸಿದ ಸಂಚಾರಿ ಪೊಲೀಸರು

0

ಬೆಂಗಳೂರು: ದೆವ್ವದ ಹೆಸರಿನಲ್ಲಿ ಡೆಡ್ಲಿ ವೀಲ್ಹಿಂಗ್‌ ಮಾಡುತ್ತಿದ್ದ ಯುವಕರಿಗೆ ಸಂಚಾರಿ ಪೊಲೀಸರು ಚಳಿ ಬಿಡಿಸಿದ್ದಾರೆ.ಮೂವರನ್ನು ಬಂಧಿಸಿದ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಗಾಡಿಯನ್ನು ಜಪ್ತಿ ಮಾಡಿ ಪೋಷಕರಿಗೆ 25 ಸಾವಿರ ರೂ. ದಂಡ  ವಿಧಿಸಿದ್ದಾರೆ. ವೀಲ್ಹಿಂಗ್ ಮಾಡುವಾಗ ದೆವ್ವದ ಮುಖವಾಡ ಧರಿಸುತ್ತಿದ್ದ ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು. ಈಗ ಡೆಡ್ಲಿ ವೀಲ್ಹಿಂಗ್‌ ಮಾಡುತ್ತಿದ್ದ ವೀಲರ್ಸ್‌ಗಳ ವಿರುದ್ಧ 14 ಪ್ರಕರಣ ದಾಖಲಾಗಿದೆ.

ವೀಲಿಂಗ್ ಬೈಕ್ ಸೀಝ್ ಮಾಡಿ ಪೋಷಕರಿಗೆ 25 ಸಾವಿರ ದಂಡ ವಿಧಿಸಿರುವ ಪೊಲೀಸರು ವೀಲಿಂಗ್ ಮಾಡ್ತಿದ್ದ ವೀಲರ್ಸ್ ಗಳ ವಿರುದ್ಧ 14 ಪ್ರಕರಣ ದಾಖಲು ಡೆವಿಲ್ಸ್ ಆನ್ ರೋಡ್ ಎಂದು ತಮ್ಮನ್ನ ತಾವು ಕರೆದುಕೊಂಡು ವೀಲಿಂಗ್ ಮಾಡ್ತಿದ್ದ ಆರೋಪಿಗಳು ಬೈಕ್ ಗಳನ್ನ ವಶಕ್ಕೆ ಪಡೆದು ಅದರ ಬಿಡಿಭಾಗವನ್ನ ತೆಗೆದ ಪೊಲೀಸರು ಆರೋಪಿಗಳ ಪ್ರೊಫೈಲ್ ತೆರೆದು ಅವರ ಚಟುವಟಿಕೆಗಳ ಬಗ್ಗೆ ಗಮನ ಹರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

error: Content is protected !!