ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಗೆ 9 ದಿನಗಳ ಕಾಲ CID ವಶಕ್ಕೆ ನೀಡಿ ಎರಡನೇ JMFC ನ್ಯಾಯಾಲಯ ಆದೇಶ ನೀಡಿದೆ..ನಾಲ್ಕು ದಿನಗಳ ಜ್ಯೂಡಿಷಿಯಲ್ ಕಸ್ಟಡಿ ಅಂತ್ಯ ಹಿನ್ನಲೆ CID ಇವತ್ತು ಕೋರ್ಟಿಗೆ ಮನವಿ ಸಲ್ಲಿಸಿತ್ತು. ಮನವಿ ಪುರಸ್ಕರಿಸಿದ ನ್ಯಾಯಾಲಯ 9 ದಿನಗಳ ಕಾಲ CID ವಶಕ್ಕೆ ನೀಡಿದೆ.. ಹೀಗಾಗಿ RD ವಶಕ್ಕೆ ಪಡೆದ ಪೋಲೀಸರು CID ಕಚೇರಿಗೆ ಕರೆತಂದು ವಿಚಾರಣೆ ಶುರು ಮಾಡಿದ್ರು..
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ…!
ರಾಯಚೂರು: ಸಾಲಬಾಧೆ ತಾಳದೆ ತಾಲೂಕಿನ ಗೋನಾಳ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೈತ ಬಸವರಾಜ (55) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ ಆಗಿದ್ದು, ಐದು ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದ ರೈತ, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಸಾಲ ಬಾಧೆ ತಾಳಲಾರದೆ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ನಿಂದ ಶಕುನಿ ಯುದ್ಧ: ಕಾಂಗ್ರೆಸ್ ಮೇಲೆ ಜೆಡಿಎಸ್ ಟೀಕಾಪ್ರಹಾರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಟೀಕೆಗಳನ್ನು ಮಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಪಕ್ಷ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ( x )ಎಕ್ಸ್ ನಲ್ಲಿ ಕಿಡಿ ಕಾರಿರುವ ಜೆಡಿಎಸ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಕೊಳಕು ಮಂಡಲ ಕಾಂಗ್ರೆಸ್ ಪಕ್ಷಕ್ಕೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್ʼಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಅವರ ಭಾನುವಾರದ ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.
ಶಿಖಂಡಿ ಸ್ಥಿತಿಯಲ್ಲಿ ಕಾಂಗ್ರೆಸ್
ಈಗ ಮಾರಿ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಕಾಂಗ್ರೆಸ್. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ದರಬೇಸಿ ಕಾಂಗ್ರೆಸ್ಸಿಗೆ ದಾರಿ ಕಾಣುತ್ತಿಲ್ಲ ಎಂದಿರುವ ಜೆಡಿಎಸ್; ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ‘ಶಿಖಂಡಿ’ಸ್ಥಿತಿಗೆ ಬಂದಿದೆ. ಪಾಪ.. ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ ಎಂದು ಪ್ರಹಾರ ನಡೆಸಿದೆ.
ಪುಡಿರೌಡಿ ಕಿಡಿಗೇಡಿಕುಮಾರ
ಕುಮಾರಸ್ವಾಮಿ ಅವರು ಸ್ಪಷ್ಟನೆ ಕೊಟ್ಟ ಮೇಲೂ ಕಾಂಗ್ರೆಸ್ ವಿಕೃತಿ ಮಿತಿಮೀರಿದೆ. ಬೆಸ್ಕಾಂ ವಿದ್ಯುತ್ ವೇಗದಲ್ಲಿ ಎಫ್ ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರು ತಿಹಾರ್ ಜೈಲಿಗೆ ಹೋಗುವ ತಪ್ಪೇನೂ ಮಾಡಿಲ್ಲ. ಈಡಿ, ಸಿಬಿಐ, ಐಟಿ ಅವರ ಬೆನ್ಹತ್ತಿಲ್ಲ. ಪುಡಿರೌಡಿ ‘ಕಿಡಿಗೇಡಿಕುಮಾರ’ನ ಕೈಚಳಕಕ್ಕೆ ಹೆದರುವ ಪ್ರಶ್ನೆಯೂ ಇಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದೆ ಜೆಡಿಎಸ್.
ರಾಜ್ಯವನ್ನೇ ಗುಡಿಸಿ ಗಂಡಾಂತರಿಸಿ ತಿಪ್ಪೆ ಸಾರಿಸಿದೆ ಲಜ್ಜೆಗೇಡಿ ಕಾಂಗ್ರೆಸ್. YstTax, SstTax, ಕಾಸಿಗಾಗಿ ಪೋಸ್ಟಿಂಗ್, ಸಿಎಂ ಕಚೇರಿಲಿ ಸುಲಿಗೆ, ಗುತ್ತಿಗೆದಾರರಿಂದ ಪರ್ಸಂಟೇಜ್, ಸ್ಟಾನ್ಲಿ ಸೋಫಾ-ಮಂಚ, ಹ್ಯುಬ್ಲೆಟ್ ವಾಚು.. ಒಂದಾ ಎರಡಾ? ಐಷಾರಾಮಯ್ಯನ ಮುಖ ಉಳಿಸಲು ಕರೆಂಟ್ ವೈರ್ ಹಿಡಿದು ಕೆಟ್ಟಿದೆ ಗುಜರಿ ಶಾಪ್ ಕಾಂಗ್ರೆಸ್! ಎಂದು ಜೆಡಿಎಸ್ ತಿರುಗೇಟು ಕೊಟ್ಟಿದೆ.
ಇನೊಬ್ಬರು ಹೇಳಿದ್ದನ್ನು ತಿರುಚಿ ವಕ್ರೀಕರಿಸುವ ‘ವಿಕೃತಿ ವಿಕಾರಪೀಡಿತʼ ಕಾಂಗ್ರೆಸ್ಸಿಗೆ, ಮಾಜಿ ಸಿಎಂ ಸ್ಪಷ್ಟನೆಗಿಂತ ನೀತಿಗೆಟ್ಟ ರಾಜಕಾರಣದಲ್ಲೇ ಹೆಚ್ಚು ನಂಬಿಕೆ. ಅದೇ ಅದರ ಧರ್ಮ. ಕಂಡ ಕಂಡವರ ಭೂಮಿಗೆ ಬೇಲಿ ಹಾಕುವ ‘ಕಿಡಿಗೇಡಿಕುಮಾರ’ನ ಪರ ಬ್ಯಾಟಿಂಗ್ ಬೀಸಿದ್ದು ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕನ್ನಡಿಗರಿಗಾಗಿ ಕಿಸಿದಿದ್ದೇನೂ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದೆ ಜೆಡಿಎಸ್.
ಕಾಂಗ್ರೆಸ್‌ನಿಂದ ಶಕುನಿ ಯುದ್ಧ
ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್ ವೈರ್ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು ‘ಶಕುನಿ ಯುದ್ಧ’ ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ ಎಂದು ಜೆಡಿಎಸ್ ಸವಾಲು ಹಾಕಿದೆ.
ಕಂಬದ ಕರೆಂಟಿನ ಬಗ್ಗೆ ಕಾಂಗ್ರೆಸ್ ಈ ಪರಿ ಕೈಕೈ ಹಿಚುಕಿಕೊಳ್ಳುತ್ತಿರುವುದನ್ನು ನೋಡಿದರೆ ವೈರಿನಲ್ಲಿಯೂ ನರಿ ರಾಜಕೀಯ ದಿಟವೆನಿಸುತ್ತದೆ. ಕುಮಾರಸ್ವಾಮಿ ಅವರ ಒಂದೇ ಒಂದು ಕ್ಷಿಪಣಿ ಸಾಕು, ಕಾಂಗ್ರೆಸ್ ’ರಕ್ಕಸ ರಿಪಬ್ಲಿಕ್’ ಉಡೀಸ್ ಆಗಲಿಕ್ಕೆ. ಶಿಖಂಡಿ ಅಂತ್ಯಕಾಲ ಆರಂಭವಾಗಿದೆ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.
ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ: ಮೂವರ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮುನ್ಸಿಪಾಲ್ ಕಾಲೇಜಿನ ಮುಂಭಾಗ ನಡೆದಿದೆ. ನಗರದ ಫರ್ಜಾನಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.
ಮನೆ ಮಾಲೀಕರಾದ ಫರ್ಜಾನಾ ಕೆಲಸಕ್ಕೆ ತೆರಳಿದ್ದ ವೇಳೆ ಅವರ ಮಗ ರಫೀಕ್ (4) ಹಾಗೂ ಮಗಳು ಹರ್ಷಿಯಾ ಭಾನು (16) ಮನೆಯಲ್ಲಿದ್ದರು. ಈ ವೇಳೆ ಮನೆಯಿಂದ ಗ್ಯಾಸ್ ವಾಸನೆ ಬರುತ್ತಿದೆ ಎಂದು ಪಕ್ಕದ ಮನೆಯ ಹೇಮಾವತಿ (18) ಎಂಬಾಕೆ ಬಂದಿದ್ದಾಳೆ. ಈ ವೇಳೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಮೂವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರಿಗೂ 35 ರಿಂದ 40% ಸುಟ್ಟ ಗಾಯಗಳಾಗಿದ್ದು ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಕೊನೆಗೂ ವಿಚಾರಣೆಗೆ ಹಾಜರಾದ ನಟ ದರ್ಶನ್..!
ಬೆಂಗಳೂರು: ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಟ ದರ್ಶನ್ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ದರ್ಶನ್ ಮೂರು ದಿನದ ಒಳಗೆ ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಬರಬೇಕೆಂದು ಪೊಲೀಸರು ನೋಟಿಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೊನೆಗೂ ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಶಿವಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಏನಿದು ಪ್ರಕರಣ?
ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.
ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದ ಕೃಷ್ಣ ಬೈರೇಗೌಡ
ರಾಮನಗರ: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಕನಕಪುರ ತಾಲ್ಲೂಕು ಹುಕುಂದ ಗ್ರಾಮದಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮರು ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದರು. ಸಂಸದ ಡಿಕೆ ಸುರೇಶ್ ಶಾಸಕ ಎಸ್ ರವಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು
ರಾಯಚೂರು ಜಿಲ್ಲೆಯಲ್ಲಿ ಬರಗಾಲ ಬೆಳೆ ಸಮೀಕ್ಷೆ ನಡೆಸುತ್ತಿರುವ ಸಚಿವರು
ರಾಯಚೂರು: ರಾಯಚೂರು ತಾಲೂಕಿನ ಗೋನಾಳ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ರೈತರ ಹೊಲಗಳಿಗೆ ಭೇಟಿ ನೀಡಿ ಬರಗಾಲ ಬೆಳೆ ಸಮೀಕ್ಷೆ ನಡೆಸಿದರು. ರಾಯಚೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಬೆಳೆ ನಾಶದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ರೈತರ ಹೊಲದಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ಇನ್ನೂ ಹತ್ತಿ, ತೊಗೆರಿ ಮತ್ತು ಜೋಳ ಬೆಳೆ ವೀಕ್ಷಣೆ ಮಾಡಿದ ಸಚಿವರು..
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಪಟ್ಟಾಭಿಷೇಕ ಹಿನ್ನೆಲೆ ಅದರ ಬಗ್ಗೆ ಪ್ರತಿಕ್ತಿಯೇ ನೀಡಿದರು. ಅದನ್ನ ತಗೊಂಡು ಏನ್ ಮಾಡೋದು, ಯಾವ ವಿಜೇಂದ್ರ ನನಗೆ ಗೊತ್ತಿಲ್ಲ. ನಾನು ಬರ ವೀಕ್ಷಣೆ ಮಾಡೋದಿಕ್ಕೆ ಬಂದಿದ್ದೇನೆ. ಆದ್ದರಿಂದ ಯಾವ ವಿಜೇಂದ್ರ ನನಗೆ ಗೊತ್ತಿಲ್ಲ, ಮುಂದೆ ನೋಡೋಣ ಅದು ಎಲೆಕ್ಷನ್ ಬಂದಾಗ ಮಾತಾಡೋಣ ಎಂದು ರಾಯಚೂರಿನಲ್ಲಿ ಸಚಿವ ಶರಣಪ್ರಕಾರ ಪಾಟೀಲ್ ಹೇಳಿದರು.
ಬಸ್ ನಿಲುಗಡೆ ಮಾಡದ ಹಿನ್ನೆಲೆ: ವಿದ್ಯಾರ್ಥಿಗಳ ಪ್ರತಿಭಟನೆ
ಗದಗ: ಬಸ್ ಕೊರತೆ ಹಾಗೂ ಬಸ್ ನಿಲುಗಡೆ ಮಾಡದ ಹಿನ್ನೆಲೆಯಲ್ಲಿ ಗದಗ ಹೊರವಲಯದ ಮಲ್ಲಸಮುದ್ರ ಕ್ರಾಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮಲ್ಲಸಮುದ್ರ ಗ್ರಾಮಕ್ಕೆ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಬಿಡಬೇಕು, ಬಸ್ ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಏಕಾಏಕಿ ಪ್ರತಿಭಟನೆ ಮಾಡಿದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಯಿತು. ಅಷ್ಟೇ ಅಲ್ಲದೆ ಪ್ರಯಾಣಿಕರು ಹಾಗೂ ಜಿಮ್ಸ್ ಆಸ್ಪತ್ರೆಗೆ ತೆರಳುವ ರೋಗಿಗಳು ಪರದಾಡಿದರು.
ಪ್ರತಿಭಟನೆಯಲ್ಲಿ ಜಿಮ್ಸ್ ವೈದ್ಯರು ಸಿಲುಕಿದರು. ಸ್ಥಳಕ್ಕೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದು ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದರು.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ನಾಲ್ವರು ಪ್ರಯಾಣಿಕರಿಗೆ ಗಾಯ
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಪಲ್ಟಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿಯ (Byadagi) ಮೊಟೇಬೆನ್ನೂರಿನ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ಹೊರಟಿತ್ತು. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಹೈವೇ ಸಿಬ್ಬಂದಿ ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಕ್ರೇನ್ ಮೂಲಕ ಬಸ್‍ನ್ನು ರಸ್ತೆಯ ಪಕ್ಕಕ್ಕೆ ಸ್ಥಳಾಂತರಿಸಲಾಯಿತು. ಬ್ಯಾಡಗಿ ಪೊಲೀಸ್ (Police) ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ (Accident) ನಡೆದಿದೆ.
KEA ಪರೀಕ್ಷೆ ಅಕ್ರಮ: RD ವಶಕ್ಕೆ ಪಡೆಯಲು ಕೋರ್ಟಿಗೆ ಇಂದು CID ಮನವಿ ಸಾಧ್ಯತೆ
ಕಲಬುರಗಿ:- KEA ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ಕಿಂಗ್ ಪಿನ್ RD ಪಾಟೀಲ್ ನಾಲ್ಕುದಿನಗಳ ಜ್ಯೂಡಿಷಿಯಲ್ ಕಸ್ಟಡಿ ಇಂದಿಗೆ ಅಂತ್ಯ.ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲು ಕೋರ್ಟಿಗೆ ಇವತ್ತು CID ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಈಗಾಗಲೇ ಪರೀಕ್ಷಾ ಅಕ್ರಮ ಪ್ರಕರಣದ ದಾಖಲೆ ಪತ್ರಗಳನ್ನ ಠಾಣೆಯಿಂದ ತರಿಸಿಕೊಂಡಿರುವ CID ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದೆ…

