Home Blog Page 3163

ಮತ್ತೆ ಕೊರೊನಾ ಹೋರಾಟಕ್ಕೆ ರೂ. 100 ಕೋಟಿ ದೇಣಿಗೆ ನೀಡಿದ ಸುಧಾರ್ಮೂರ್ತಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೋವಿಡ್ ಹೋರಾಟಕ್ಕೆ ದೇಶದ ಮೂಲೆ ಮೂಲೆಯಲ್ಲಿ ದೇಣಿಗೆ ಸಂಗ್ರಹವಾಗುತ್ತಿದೆ. ಸದ್ಯ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಈ ಹೋರಾಟಕ್ಕೆ ರೂ. 100 ಕೋಟಿ ದೇಣಿಗೆ ನೀಡಿದ್ದಾರೆ.

ಜನಕ್ಕೆ ಕಷ್ಟ ಎಂದರೆ ಸಾಕು ಮಿಡಿಯುವ ಸುಧಾಮೂರ್ತಿ ಅವರು ಈ ಬಾರಿಯೂ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಕೋವಿಡ್ ಹೋರಾಟಕ್ಕೆ ಅವರು ರೂ. 100 ಕೋಟಿ ದೇಣಿಗೆ ನೀಡಿದ್ದಾರೆ. ಇಲ್ಲಿಯವರೆಗೂ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ಬರೋಬ್ಬರಿ ರೂ. 200 ಕೋಟಿ ದೇಣಿಗೆ ನೀಡಿದಂತಾಗಿದೆ.

ಇತ್ತೀಚಿಗೆ ಖಾಸಗಿ ಸುದ್ದಿ ಸಂಸ್ಥೆಯಲ್ಲಿ ಸಂದರ್ಶನ ನೀಡಿದ ಸುಧಾಮೂರ್ತಿ, ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆ ಸ್ಥಾಪನೆಗೆ ನೆರವು ನೀಡಿದ್ದೇವೆ. ಸದ್ಯ ಆಸ್ಪತ್ರೆಯು ಪರಿಪೂರ್ಣವಾಗಿ ನಡೆಯುತ್ತಿದೆ. ಕಳೆದ ವರ್ಷ ರೂ. 100 ಕೋಟಿ ನೀಡಲಾಗಿತ್ತು. ಆದರೆ, ಈ ಬಾರಿ ರೂ. 100 ಕೋಟಿಯನ್ನು ಮೂಲಭೂತ ಸೌಕರ್ಯಗಳ ಪೂರೈಕೆಗೆ ಬಳಕೆ ಮಾಡಿಕೊಳ್ಳಲು ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಮಂಗಳೂರು ಹೈದ್ರಾಬಾದ್, ಪುಣೆ ಹಾಗೂ ಡೆಲ್ಲಿಯಲ್ಲಿ ನಿಯಂತ್ರಣಕ್ಕೆ ವೆಂಟಿಲೇಟರ್ ಆಮ್ಲಜನಕ ಹಾಗೂ ಸ್ಯಾನಿಟೈಸರ್ ಗಳು ಸೇರಿದಂತೆ ಇನ್ನಿತರ ಉಪಯುಕ್ತ ಉಪಕರಣಗಳನ್ನು ಪೂರೈಸಲಾಗಿದೆ. ಕೋವಿಡ್ ಮಾತ್ರವಲ್ಲದೆ ಎಷ್ಟೋ ಜನ ಹಸಿವಿನಿಂದ ಕೂಡ ಬಳಲುತ್ತಿದ್ದು, ಆಟೋ ಚಾಲಕರು, ದಿನಗೂಲಿ ಕಟ್ಟಡ ಕಾರ್ಮಿಕರು ಸೇರಿದಂತೆ ಬಡ ಕಾರ್ಮಿಕರಿಗೆ ಆಹಾರ ಕಿಟ್ ಗಳನ್ನು ಪೂರೈಸಿ, ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದ್ದಾರೆ.

ಕುಡಿದ ಅಮಲಿನಲ್ಲಿ ಹೊಡೆದಾಡಿಕೊಂಡರಾ ಡೇವಿಡ್ ವಾರ್ನರ್?

ವಿಜಯಸಾಕ್ಷಿ ಸುದ್ದಿ, ಮಾಲೆ

ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಹಾಗೂ ಆಸ್ಟ್ರೇಲಿಯಾದ ವೀಕ್ಷಕ ವಿವರಣೆಗಾರ ಮೈಕಲ್ ಸ್ಲೇಟರ್ ಅವರು ಕುಡಿದ ಮತ್ತಿನಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈಗಾಗಲೇ ಮಹಾಮಾರಿಯ ಹಾವಳಿಯಿಂದಾಗಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ರದ್ದಾಗಿರುವ ಹಿನ್ನೆಲೆಯಲ್ಲಿ ಬಿಸಿಸಿಐ, ವಿದೇಶಿ ಆಟಗಾರರನ್ನು ಅವರ ದೇಶಕ್ಕೆ ಕಳುಹಿಸುವ ವ್ಯವಸ್ಥೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ಆಸ್ಟ್ರೇಲಿಯಾ ಆಟಗಾರರನ್ನು ಮಾಲ್ಡೀವ್ಸ್ ಗೆ ಕಳುಹಿಸಿ ಅಲ್ಲಿಂದ ಆಸ್ಟ್ರೇಲಿಯಾಗೆ ಕಳುಹಿಸಲಾಗುತ್ತದೆ.

ಸದ್ಯ ಆಸ್ಟ್ರೇಲಿಯಾದ ಆಟಗಾರರು, ಕೋಚ್, ವೀಕ್ಷಕ ವಿವರಣೆಗಾರರು ಮಾಲ್ಡೀವ್ಸ್ ಹೊಟೇಲ್ ನಲ್ಲಿ ತಂಗಿದ್ದಾರೆ. ಈ ಸಂದರ್ಭದಲ್ಲಿ ಬಾರ್ ಒಂದರಲ್ಲಿ ಡೇವಿಡ್ ವಾರ್ನರ್ ಮತ್ತು ಸ್ಲೇಟರ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಆಸ್ಟ್ರೇಲಿಯಾ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಆದರೆ, ಈ ಸುದ್ದಿಯನ್ನು ಸದ್ಯ ಪರಸ್ಪರ ಇಬ್ಬರೂ ಆಟಗಾರರು ಅಲ್ಲಗಳೆದಿದ್ದಾರೆ. ನಮ್ಮ ನಡುವೆ ಈ ರೀತಿ ಗಲಾಟೆ ನಡೆದಿಲ್ಲ. ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಸಾಕ್ಷ್ಯವಿಲ್ಲದೇ ವರದಿ ಮಾಡುವುದು ಸರಿಯಲ್ಲ. ಈ ಸುದ್ದಿ ಹೇಗೆ ಹುಟ್ಟಿಕೊಂಡಿತು ಎನ್ನುವುದು ತಿಳಿದಿಲ್ಲ ಎಂದು ಡೇವಿಡ್ ವಾರ್ನರ್ ತಿಳಿಸಿದ್ದಾರೆ.

ಇಹಲೋಕ ತ್ಯಜಿಸಿದ ಖ್ಯಾತ ಚಲನಚಿತ್ರ ಸಾಹಿತಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಖ್ಯಾತ ಚಲನಚಿತ್ರ ಸಾಹಿತಿ ಶ್ರೀರಂಗ ಅವರು ಇಹಲೋಕ ತ್ಯಜಿಸಿದ್ದಾರೆ. ಶ್ರೀರಂಗ (86 ) ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಲ್ಲಿಯ ನಾಗರಬಾವಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಸುಮಾರು 1000ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ರಚಿಸಿ, ಜನರ ಮನಸ್ಸಿನಲ್ಲಿ ಉಳಿದಿದ್ದರು.

ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮ, ರಂಭೆ ನೀ ವಯ್ಯಾರದ ಗೊಂಬೆ, ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ, ಸುಮ್ ಸುಮ್ನೆ ಓಳು ಬಿಡೋ ಸುಂದರಿ ಸೇರಿದಂತೆ ಸಾಕಷ್ಟು ಜನಪ್ರಿಯ ಹಾಡುಗಳನ್ನು ಅವರು ರಚಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ನಿಟ್ಟಿನಲ್ಲಿ ಅವರು ಇತ್ತೀಚೆಗೆ ಸಿನಿಮಾದ ಕೆಲಸಗಳಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಆರ್ಥಿಕ ಸಂಕಷ್ಟದಿಂದಲೂ ಬಳಲುತ್ತಿದ್ದರು. ಅವರಿಗೆ ಸಹಾಯ ಮಾಡುವಂತೆ ನಟ ಸಂಚಾರಿ ವಿಜಯ್ ಮನವಿ ಮಾಡಿದ್ದರು. ಆದರೆ, ಶ್ರೀರಂಗ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಇಡೀ ಚಿತ್ರರಂಗ ಅವರ ಸಾವಿಗೆ ಕಂಬನಿ ಮಿಡಿಯುತ್ತಿದೆ.

ಆ ಹಾವು ಈ ಹಾವನ್ನು ಹೀಗಾ ನುಂಗೋದು?

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ತಾಲೂಕಿನ ಇಲ್ಲಿನ ಗಾಮನಗಟ್ಟಿ ಗ್ರಾಮದ ಈಶ್ವರೀಯ ವಿಶ್ವವಿದ್ಯಾಲಯದ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಾಗರ ಹಾವನ್ನೇ ನುಂಗಿ, ಮತ್ತೊಂದು ನಾಗರಹಾವನ್ನು ಸ್ನೇಕ್ ಸಂಗಮೇಶ ರಕ್ಷಿಸಿದ್ದಾರೆ.

ಕಟ್ಟಡದಲ್ಲಿ ನಾಗರ ಹಾವೊಂದು ಮತ್ತೊಂದು ನಾಗರಹಾವು ನುಂಗಿ ಒದ್ದಾಡುತ್ತಿತ್ತು. ಇದನ್ನು ಕಂಡ ಸ್ಥಳೀಯರು ಸ್ನೇಕ್ ಸಂಗಮೇಶ್ ಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ನೇಕ್ ಸಂಗಮೇಶ್ ಅವರು ಹಾವನ್ನು ಸೆರೆ ಹಿಡಿದು ನುಂಗಿದ ಹಾವನ್ನು ಹೊರೆ ತೆಗೆದಿದ್ದಾರೆ. ನಂತರ ಹಾವನ್ನು ಸುರಕ್ಷಿತವಾಗಿ ಕಲಘಟಗಿಯ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ.

ಅನಗತ್ಯ ಓಡಾಟ; ಹದಿನಾರುಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ ಪಿಎಸ್ಐ ನವೀನ ಜಕ್ಕಲಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಪಟ್ಟಣದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಹ ಅನಾವಶ್ಯಕವಾಗಿ ಓಡಾಡುತ್ತಿದ್ದ ಹದಿನಾರಕ್ಕೂ ಹೆಚ್ಚು ಬೈಕ್ ಗಳನ್ನು ಪಿಎಸ್ಐ ನವೀನ ಜಕ್ಕಲಿ ನೇತೃತ್ವದಲ್ಲಿ ಸಿಬ್ಬಂದಿ ಸೀಜ್ ಮಾಡಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದಲೇ ರೌಂಡ್ಸ್ ಆರಂಭಿಸಿರುವ ಶಿರಹಟ್ಟಿಯ ಪಿಎಸ್ಐ ನವೀನ್ ಜಕ್ಕಲಿ, ಅನಾವಶ್ಯಕವಾಗಿ ಸಂಚರಿಸುತ್ತಿದ್ದ ಬೈಕ್ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿ, ಹದಿನಾರಕ್ಕೂ ಹೆಚ್ಚು ಬೈಕುಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೈಕ್ ಸವಾರರು ತಮ್ಮ ಬೈಕ್ ಗಳನ್ನು ನೀಡುವಂತೆ ಎಷ್ಟೇ ವಿನಂತಿಸಿಕೊಂಡರೂ ಸಹ ಕ್ಯಾರೆ ಎನ್ನದೆ ಪಿಎಸ್ಐ ಸೀಜ್ ಮಾಡಿದ ವಾಹನಗಳನ್ನು ತಮ್ಮ ಸಿಬ್ಬಂದಿಗಳ ಮೂಲಕ ಪೊಲೀಸ್ ಠಾಣೆಗೆ ಕಳಸಿದರು.

ಪಟ್ಟಣದ ಮಾರುಕಟ್ಟೆಯಲ್ಲಿ ಒಂಬತ್ತು ಗಂಟೆಯ ಸುಮಾರಿಗೆ ಅಗತ್ಯ ವಸ್ತು ಹಾಗೂ ತರಕಾರಿಗಳನ್ನು ಕೊಂಡುಕೊಳ್ಳುವುದಕ್ಕೆ ಜನತೆ ಮುಗಿ ಬೀಳುತ್ತಿದ್ದಂತೆಯೇ ಪಿಎಸ್ಐ ನವೀನ, ಮುಗಿಬಿದ್ದ ಜನರಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮನವಿ ಮಾಡಿಕೊಂಡರು. ಇದನ್ನು ಲೆಕ್ಕಿಸದ ಜನರಿಗೆ ಲಾಠಿ ರುಚಿ ತೋರಿಸಿ ಜನಸಂದಣಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್; ಮನೆ ಬಾಗಿಲಿಗೆ ಬರಲಿದೆ ಇಷ್ಟದ ಬಾಟಲಿಗಳು!

ವಿಜಯಸಾಕ್ಷಿ ಸುದ್ದಿ, ಛತ್ತೀಸಗಢ

ವರದಿ:ಡಾ.ಅಬ್ದುಲ್ ರಜಾಕ್

ಸರಕಾರ ಬಿಗಿಯಾದ ಲಾಕ್ ಡೌನ್ ಜಾರಿ ಮಾಡಿದ್ದರೂ ಕೂಡ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ.

ಹೌದು… ಸರ್ಕಾರಕ್ಕೆ ಭಾರಿ ಆದಾಯ ತಂದುಕೊಡುವ ಮದ್ಯದಂಗಡಿ ಮುಚ್ಚಿದರೆ ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವ ಕಾರಣಕ್ಕೆ ಮನೆಯ ಬಾಗಿಲಿಗೆ ಮದ್ಯವನ್ನು ಪೂರೈಕೆ ಮಾಡಲು ಛತ್ತೀಸಗಢ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಅಬಕಾರಿ ಸಚಿವ ಕವಾಸಿ ಲಖ್ಮಾ ಮಾಹಿತಿ ನೀಡಿದ್ದು, ಛತ್ತೀಸಗಢ ರಾಜ್ಯದಲ್ಲಿ ಮದ್ಯ ಹೋಂ ಡೆಲಿವರಿ ಪ್ರಾರಂಭ ಮಾಡಲಾಗುವುದು. ಲಾಕ್ ಡೌನ್ ನಿಂದ ಸರ್ಕಾರ ನಷ್ಟದಲ್ಲಿದೆ. ಈ ನಷ್ಟವನ್ನು ತುಂಬುವ ಕಾರಣಕ್ಕೆ ಈ ನಿರ್ಧಾರ ಕೈ ಗೊಳ್ಳಲಾಗಿದೆ. ಮದ್ಯ ಮಾರಾಟ ಸ್ಥಗಿತಗೊಂಡರೆ ಸರ್ಕಾರಕ್ಕೆ ಭಾರಿ ನಷ್ಟವಾಗುತ್ತದೆ ಹಾಗಾಗಿ ಈ ನಿರ್ಧಾರ ಎಂದು ತಿಳಿಸಿದ್ದಾರೆ.

ಸೈಕಲ್ ಏರಿ ಜನರಲ್ಲಿ ಜಾಗೃತಿ ಮೂಡಿಸಿದ ಪಿಎಸ್ ಐ

ವಿಜಯಸಾಕ್ಷಿ ಸುದ್ದಿ, ಗದಗ

ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಇಷ್ಟಿದ್ದರೂ ಜನ ಅನಾವಶ್ಯಕವಾಗಿ ಓಡಾಡುವುದನ್ನು ಬಿಡುತ್ತಿಲ್ಲ.
ಹೀಗಾಗಿ ಗಜೇಂದ್ರಗಡ ಪಿಎಸ್ ಐ ಅವರು ಸೈಕಲ್ ಮೇಲೆ ಏರಿ ಜಾಗೃತಿ ಮೂಡಿಸಿದ್ದಾರೆ.

ಪಿಎಸ್ ಐ ಗುರುಶಾಂತ ಅವರು ಗಜೇಂದ್ರಗಡ ಜನರಲ್ಲಿ ಜಾಗೃತಿ ಮೂಡಿಸಿದ ಅಧಿಕಾರಿ. ಸೈಕಲ್ ಏರಿ ಪಟ್ಟಣದ ತುಂಬೆಲ್ಲ ಸುತ್ತಾಡಿ ಜನರಲ್ಲಿ ಕೊರೊನಾ ಜಗೃತಿ ಮೂಡಿಸಿದ್ದಾರೆ. ಪಟ್ಟಣದ ದುರ್ಗಾ ವೃತ್ತ, ಅಬೇಡ್ಕರ್ ವೃತ್ತ, ಜೋಡು ರಸ್ತೆಯ ಹತ್ತಿರ ಸುತ್ತಾಡಿ ಜನರಲ್ಲಿ ಕೊರೊನಾ ಬಗ್ಗೆ ತಿಳುವಳಿಕೆ ಮೂಡಿಸಿದ್ದಾರೆ.

ಬೈಕ್ ಏರಿ ಬಂದವರನ್ನು ತಡೆದು ಈ ಸಂದರ್ಭದಲ್ಲಿ ಪಿಎಸ್ ಐ ಗುರುಶಾಂತ ಬುದ್ಧಿ ಹೇಳಿದ್ದಾರೆ. ಆದರೂ ಅನಗತ್ಯವಾಗಿ ಸುತ್ತಾಡಿದವರ ಚಳಿ ಕೂಡ ಬಿಡಿಸಿದ್ದಾರೆ.

ಹುಷಾರ್… ಹೊರಗೆ ಬರಬೇಡಿ! ಬೈಕ್ ಕೊಡಿ ಎಂದು ಎಷ್ಟೇ ಕೈ ಮುಗಿದರೂ ಕರಗುತ್ತಿಲ್ಲ ಪೊಲೀಸರು!

ವಿಜಯಸಾಕ್ಷಿ ಸುದ್ದಿ, ಗದಗ

ಕೊರೊನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಯಲ್ಲಿಯೂ ಪೊಲೀಸರು ಲಾಠಿ ಬೀಸಿ ದಾರಿ ತಪ್ಪಿದವರನ್ನು ಮನೆಯ ಕಡೆಗೆ ಸಾಗಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಕೂಡ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಪೊಲೀಸರು ಪುಟ್ಟರಾಜ ಸರ್ಕಲ್ ಬಳಿ ಬೈಕ್ ಸೀಜ್ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಯಲ್ ಎನ್ ಫೀಲ್ಡ್ ಏರಿ ಬಂದಿದ್ದ ಯುವಕನಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕೀ ತೆಗೆಯುವಾಗ ಬೈಕ್ ಏಕಾ ಏಕಿ ನುಗ್ಗಿದೆ. ಈ ವೇಳೆ ಬೈಕ್ ಆಯತಪ್ಪಿ ಪಿಎಸ್ ಐ ಕಮಲಾಭಾಯಿ ಅವರಿಗೆ ತಾಗಿದೆ. ಕೂಡಲೇ ಸಹೋದ್ಯೋಗಿಯ ಸಹಾಯದಿಂದ ಪಿಎಸ್ ಐಗೆ ಗಾಯವಾಗಲಿಲ್ಲ.

ಇನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಪುಟ್ಟರಾಜ ಸರ್ಕಲ್, ದತ್ತಾತ್ರೇಯ ಸರ್ಕಲ್, ಮುಳಗುಂದ ನಾಕಾ, ಮಹೇಂದ್ರಕರ ಸರ್ಕಲ್, ಸರಾಫ್ ಬಜಾರ್ ಗೆ ತೆರಳದಂತೆ ಬ್ಯಾರಿಕೇಡ್ ಹಾಕಲಾಗಿದೆ. ಸರ್ಕಾರ ಎಷ್ಟೇ ಕಠಿಣ ನಿಯಮ ಜಾರಿಗೊಳಿಸಿದರೂ ಹಲವರು ಬೈಕ್ ತೆಗೆದುಕೊಂಡೇ ಮಾರುಕಟ್ಟೆಗೆ ಆಗಮಿಸುತ್ತಿದ್ದರು. ಹೀಗಾಗಿ ಪೊಲೀಸರು ಬೈಕ್ ಗಳನ್ನು ಸೀಜ್ ಮಾಡಿದ್ದಾರೆ. ಇದರಿಂದಾಗಿ ಮಾರುಕಟ್ಟೆಗಳು ಕೂಡ ಬಿಕೊ ಎನ್ನುತ್ತಿದ್ದವು.

ಹಲೆವೆಡೆ ಬೈಕ್ ಸವಾರರು ಬೈಕ್ ಗಳನ್ನು ತೆಗೆದುಕೊಂಡು ಹೋಗಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ದೊಡ್ಡವರ ಕೈಯಿಂದ ಹೇಳಿಸಿದರೂ ಪೊಲೀಸರು ಬೈಕ್ ನೀಡುತ್ತಿಲ್ಲ. ಹೀಗಾಗಿ ಹಲವರು ಮೇಡಂ ಬೈಕ್ ಕೊಡಿ ಕೈ ಮುಗಿತೇನಿ ಎಂದು ಪಿಎಸ್ ಐ ಕಮಲಾ ಅವರಲ್ಲಿ ಮನವಿ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಹುಲಕೋಟಿ ಗ್ರಾಮದಿಂದ ತರಕಾರಿ ತರಲು ಬೈಕ್ ಮೇಲೆ ದಂಪತಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪಿಎಸ್ ಐ ಕಮಲಾ ಅವರು ಬೈಕ್ ಸೀಜ್ ಮಾಡಿದರು. ಆಗ ಕೈ ಮುಗಿತೇವಿ ಬೈಕ್ ಕೊಡಿ ಎಂದು ಎಷ್ಟೇ ಅಂಗಲಾಚಿದರೂ ಬೈಕ್ ನೀಡಲಿಲ್ಲ.

ಕೊರೊನಾ ಸಂಕಷ್ಟ; ವೆಂಟಿಲೇಟರ್ ಇಲ್ಲದೆ ನರಳಾಡಿ ಪ್ರಾಣ ಬಿಟ್ಟ ವ್ಯಕ್ತಿ!

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ

ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರಿಗೆ ಸಮಯಕ್ಕೆ ಸರಿಯಾಗಿ ವೆಂಟಿಲೇಟರ್ ಸಿಗದ ಕಾರಣ ಆಸ್ಪತ್ರೆಯ ವಾರ್ಡ್ ನಲ್ಲಿಯೇ ಆ ವ್ಯಕ್ತಿ ಬರೋಬ್ಬರಿ 2 ಗಂಟೆಗಳ ಕಾಲ ಒದ್ದಾಡಿ, ನರಳಾಡಿ ಕೊನೆಯುಸಿರೆಳೆದ ಘಟನೆ ಇಲ್ಲಿಯ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

ಹೀಗೆ ನರಳಾಡಿ ಮೃತಪಟ್ಟ ವ್ಯಕ್ತಿ ಶಿಕಾರಿಪುರ ಮೂಲದವರಾಗಿದ್ದು, 46 ವರ್ಷದ ವ್ಯಕ್ತಿ ಎನ್ನಲಾಗಿದೆ. ಕೊರೊನಾ ಸೋಂಕಿನಿಂದ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಇವರನ್ನು ಆಂಬುಲೆನ್ಸ್ ಮೂಲಕ ಶಿಕಾರಿಪುರದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಷ್ಟರಲ್ಲಿಯೇ ಅವರ ಆಕ್ಸಿಜನ್ ಮಟ್ಟ ಶೇ. 40ಕ್ಕೆ ಕುಸಿದಿತ್ತು. ಆದರೆ, ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಎಲ್ಲ ವೆಂಟಿಲೇಟರ್ ನಲ್ಲಿ ರೋಗಿಗಳು ಇದ್ದರು. ಯಾವ ರೊಗಿಯನ್ನೂ ಇದರಿಂದ ಹೊರತರುವ ಸ್ಥಿತಿಯಲ್ಲಿ ವೈದ್ಯರು ಇರಲಿಲ್ಲ. ಹೀಗಾಗಿ ಜನರಲ್ ವಾರ್ಡ್ ನಲ್ಲಿ ರೋಗಿಗೆ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಈ ರೋಗಿ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ರೋಗಿ ಎಷ್ಟೇ ನರಳಾದಿರೂ ವೈದ್ಯರು, ನರ್ಸ್ ಗಳು ಏನೂ ಮಾಡದ ಸ್ಥಿತಿಯಲ್ಲಿದ್ದರು. ಪರಿಣಾಮ ರೋಗಿ ಒದ್ದಾಡಿ ಸಾವನ್ನಪ್ಪಿದ್ದಾರೆ.

ಗಳಗಳನೇ ಅತ್ತ ಬಿಗ್ ಹೌಸ್ ಸದಸ್ಯರು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಜನಪ್ರಿಯ ಶೋ ಆಗಿರುವ ಬಿಗ್ ಹೌಸ್ ಸದ್ಯ ಬಾಗಿಲು ಮುಚ್ಚಿಕೊಂಡಿದೆ. ಬರೋಬ್ಬರಿ 71 ದಿನಗಳ ಕಾಲ ನಡೆದಿದ್ದ ಶೋ ಕೂಡ ರಾಜ್ಯದ ಲಾಕ್ ಡೌನ್ ನೊಂದಿಗೆ ಲಾಕ್ ಆಗಿದೆ. ಆದರೆ, ಹೊರ ಜಗತ್ತಿನ ಅರಿವಿಲ್ಲದಿದ್ದ ಬಿಗ್ ಬಾಸ್ ಸ್ಪರ್ಧಿಗಳು ವಿಷಯ ತಿಳಿಯುತ್ತಿದ್ದಂತೆ ಶಾಕ್ ಆಗಿದ್ದಾರೆ.

ಹೋಟೆಲ್ ನಲ್ಲಿ ಕ್ವಾರಂಟೈನ್ ಆಗಿ ಬಿಗ್ ಬಾಸ್ ಮನೆ ಸೇರಿದ್ದ ಸ್ಪರ್ಧಿಗಳಿಗೆ ಹೊರ ಜಗತ್ತಿನ ಸಂಪರ್ಕ ಕಡಿತವಾಗಿತ್ತು. ಮೊಬೈಲ್, ಸಾಮಾಜಿಕ ಜಾಲತಾಣದಿಂದ ದೂರ ಇದ್ದ ಇವರಿಗೆ ಹೊರ ಪ್ರಪಂಚದಲ್ಲಿ ಏನು ನಡೆಯುತ್ತದೆ ಎನ್ನುವ ಅರಿವೇ ಇಲ್ಲದಾಗಿತ್ತು. ಇವರ ಜೊತೆ ನೇರವಾಗಿ ಸುದೀಪ್ ಬಿಟ್ಟರೆ ಯಾರ ಸಂಪರ್ಕವೂ ಇರುವುದಿಲ್ಲ.

ಹೀಗೆ ಬಿಗ್ ಹೌಸ್ ನಲ್ಲಿ ಸ್ವಚ್ಛಂದವಾಗಿ ಹಾರಾಟ ನಡೆಸುತ್ತಿದ್ದ ಸ್ಪರ್ಧಿಗಳಿಗೆ 71ನೇ ದಿನ ಶಾಕ್ ಆಗಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ಸುದ್ದಿಯನ್ನು ಆರಂಭದಲ್ಲಿ ಪ್ರಸಾರ ಮಾಡಲಾಯಿತು. ಆ ನಂತರ ಸಿಎಂ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ ತುಣುಕನ್ನು ಪ್ರಸಾರ ಮಾಡಲಾಯಿತು.

ಈ ಘೋಷಣೆಯ ಸುದ್ದಿ ಕೇಳುತ್ತಿದ್ದಂತೆ ಸ್ಪರ್ಧಿಗಳು ಗಾಬರಿಯಾದರು. ಈ ಸಂದರ್ಭದಲ್ಲಿ ಸ್ಪರ್ಧಿಗಳು ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸುತ್ತಾರೆ. ಇನ್ನು ಮೂರು ವಾರಗಳ ಕಾಲ ಮನೆಯಲ್ಲಿರಬಹುದು ಎಂಬ ಅವರ ಕನಸು ಕುಸಿದು ಬೀಳುತ್ತದೆ.
ಲಾಕ್ ಡೌನ್ ಘೋಷಣೆಯಾದ ಕಾರಣ, ಬಿಗ್ ಬಾಸ್ ಚಿತ್ರೀಕರಣಕ್ಕೆ ಅನುಮತಿ ನೀಡಿಲ್ಲ. ಹೀಗಾಗಿ ಬಿಗ್ ಬಾಸ್ 8ನೇ ಅವೃತ್ತಿಯನ್ನು ವಾಹಿನಿ ನಿಲ್ಲಿಸಿದೆ. ಈ ಕುರಿತು ಮೇ. 8ರಂದು ವಾಹಿನಿಯ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದರು. ಇದೀಗ ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ.

error: Content is protected !!