Home Blog Page 3165

ಭಾರೀ ಗಾತ್ರದ ವಾಹನ ಸಂಚಾರ: ರಸ್ತೆ ಸಂಪೂರ್ಣ ಕುಸಿತ

0

ದಾವಣಗೆರೆ: ಭಾರೀ ಗಾತ್ರದ ವಾಹನ ಸಂಚಾರದಿಂದ ರಸ್ತೆ ಕುಸಿತವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದುರೆ – ದೊಡ್ಡಘಟ್ಟ ರಸ್ತೆಯಲ್ಲಿ ನಡೆದಿದೆ. ಭಾರೀ ಗಾತ್ರದ ವಾಹನಗಳಿಂದ ರಸ್ತೆ ಸಂಪೂರ್ಣ ಕುಸಿತವಾಗಿದ್ದು, ಇದೀಗ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ರೈತರು ಭತ್ತ ಸಾಗಾಣಿಕೆಗೂ ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಕಳಪೆ ಕಾಮಗಾರಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ರಸ್ತೆ ದುರಸ್ತಿ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ?: ಡಿಕೆ ಶಿವಕುಮಾರ್

0

ಬೆಂಗಳೂರು: ಬಡವರು, ಹೆಣ್ಣುಮಕ್ಕಳ ನೋವು ಕುಮಾರಸ್ವಾಮಿಗೆ ಗೊತ್ತಿಲ್ಲ. ಅವರು ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ. ದಸರಾಗೆ ಬಂದಿದ್ದ ಜನರು ನೋಡಿದ್ರೆ ಗೊತ್ತಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ಡಿಸಿಎಂ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು.

ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ..?. ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ?. ಅವರೇನು ಫಲಾನುಭವಿನಾ..?. ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ. ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು. ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ. ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ. 5% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡ್ತಿದ್ದಾರೆ; ಪ್ರಹ್ಲಾದ್​ ಜೋಶಿ

0

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ, ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಇದ್ದಾರೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಅಧೋಗತಿಗೆ ತಲುಪಿದೆ. ಬಿಜೆಪಿಯವರು ಸರ್ಕಾರವನ್ನು ಬೀಳಿಸುತ್ತಾರೆಂದು ಹೇಳುತ್ತಿದ್ದೀರಿ, ಆದರೆ, ಅಂತಹ ಯಾವುದೇ ಕಾರ್ಯಕ್ಕೆ ಬಿಜೆಪಿ ಕೈ ಹಾಕುವುದಿಲ್ಲ ಎಂದು ಹೇಳಿದರು.

ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

0

ಮೈಸೂರು: ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ. ಲಿಂಗಾಯತರು ಬಿಜೆಪಿ ಬಿಟ್ಟಿದ್ದಾರೆ ಅಂತ ಅಮಿತ್ ಶಾ ಮೋದಿ ಮಾಡಿರುವ ನಾಟಕ. ನಾಟಕದ ಸ್ಕ್ರೀಪ್ಟ್ ರಚನೆ ಮಾಡಿ ಅಧ್ಯಕ್ಷ ಸ್ಥಾನಕೊಟ್ಟಿದ್ದಾರೆ‌.

ಜೂನ್ ನಂತರ ಬಿಜೆಪಿ ಅಧ್ಯಕ್ಷರಾಗಲು ಬಿಡಲ್ಲ. ಬಿವೈ ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ. ಲಿಂಗಾಯತ ಸಮುದಾಯವನ್ನು ಸಮಾಧಾನ ಮಾಡಲು ಆಡಿರುವ ನಾಟಕ. ನಾಟಕವನ್ನ ನಂಬಿ ಲಿಂಗಾಯತರು ಯಾಮಾರಬೇಡಿ ಎಂದು ಕೆ.ಪಿ.ಸಿ.ಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.

 

ಅಕಾಲಿಕ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ಸಂಪೂರ್ಣ ನಾಶ

0

ಯಾದಗಿರಿ: ಅಕಾಲಿಕ ಮಳೆಗೆ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಕಳೆದ 4 ದಿನಗಳಿಂದ ಸುರಿದ ಮಳೆಗೆ ‌ನೂರಾರು ಎಕರೆ ಭತ್ತ ನೆಲಸಮವಾಗಿದೆ.

ಬರಗಾಲದ ಮಧ್ಯೆಯೂ ರೈತರು ನದಿ ನೀರು ಬಳಸಿ ಭತ್ತ ಬೆಳೆದಿದ್ದರು. ನಾಲ್ಕೈದು ದಿನಗಳ ಬಳಿಕ  ಭತ್ತ ಕಟಾವು ಮಾಡುತ್ತಿದ್ದರು. ಇದೀಗ ಬೆಳೆ ನಾಶವಾಗಿದ್ದು, ಇದೀಗ ರೈತರ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

0

ಬೆಂಗಳೂರು:  ಕುಡಿದ ಮತ್ತಿನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ.

ಗೆಳೆಯನಿಗೆ ಚಾಕು ಇರಿದು ನಾಟಕವಾಡಿದ್ದ ವ್ಯಕ್ತಿ ಬಂಧನವಾಗಿದ್ದು, ಮಾದೇಶ್ ಬಂಧಿತ ಆರೋಪಿಯಾಗಿದ್ದಾನೆ. ಸ್ನೇಹಿತ ರಾಜಕುಮಾರ್ ಗೆ ಚಾಕು ಇರಿದಿದ್ದ ಆರೋಪಿಯಾಗಿದ್ದು, ಇದೇ ತಿಂಗಳ 5ರಂದು ಕೆಂಗೇರಿಯಲ್ಲಿ ಕೊಲೆಯಾಗಿದ್ದು, ವೃತ್ತಿಯಲ್ಲಿ ಇಬ್ಬರು ಕ್ಯಾಬ್ ಚಾಲಕರಾಗಿದ್ದರು.

ಎಣ್ಣೆ ಹೊಡೆಯಲೆಂದು ಮೀಟ್ ಆಗಿದ್ದ ಇಬ್ಬರು ಅಂಗಡಿಯಲ್ಲಿ ಎಣ್ಣೆ ಖರೀದಿಸಿ ನಿರ್ಜನ ಪ್ರದೇಶಕ್ಕೆ ತೆರಳಿ ಮದ್ಯ ಸೇವನೆ ಮಾಡಿದ್ದರು.

ಈ ವೇಳೆ ಶುರುವಾದ ಜಗಳದಲ್ಲಿ ಮಾತಿಗೆ ಮಾತು ಬೆಳೆದಿತ್ತು. ಮಾದೇಶನ ಕುಟುಂಬ ಹಾಗೂ ಮಕ್ಕಳ ಬಗ್ಗೆ ನಿಂದಿಸಿದ್ದ ರಾಜಕುಮಾರ್, ಈ ವೇಳೆ ಮಾದೇಶ್ ತನ್ನ ಕಾರ್‌ನಲ್ಲಿದ್ದ  ಚಾಕುವಿನಿಂದ ಎದೆ ಭಾಗಕ್ಕೆ ಇರಿದಿದ್ದ.

ಚಾಕುವಿನಿಂದ ಚುಚ್ಚಿ ತಾನೇ ಆಸ್ಪತ್ರೆಗೆ ಕರೆದೊಯ್ದ ಮಾದೇಶ್, ಈ ವೇಳೆ ಸಂಬಂಧಿಕರಿಗೆ ಯಾರೋ ಅಪರಿಚಿತರು ಕೃತ್ಯ ಎಸಗಿದ್ದಾಗಿ ಹೇಳಿದ್ದ. ಆಸ್ಪತ್ರೆ ಬಳಿ ಆತನ ಸಾವಿನ ಸುದ್ದಿ ಏಳುತಿದ್ದಂತೆ ಪರಾರಿಯಾಗಿದ್ದ ಮಾದೇಶ.

ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕೆಂಗೇರಿ ಪೊಲೀಸರು ತನಿಖೆ ವೇಳೆ ಅಸಲಿ ಸಂಗತಿ ಬಯಲಾಗಿತ್ತು.  ನಾಪತ್ತೆಯಾಗಿದ್ದ ಮಾದೇಶನ ಬಂಧಿಸಿರುವ ಕೆಂಗೇರಿ ಪೊಲೀಸರು, ಪ್ರಕರಣ ದಾಖಲು ಮಾಡಿಕೊಂಡಿದ್ದು,  ತನಿಖೆ ಚುರುಕುಗೊಂಡಿದೆ.

ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು: ಬಿ.ವೈ ವಿಜಯೇಂದ್ರ

0

ತುಮಕೂರು: ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎನ್ನುವ ಕುರಿತಾಗಿ ಭಾರೀ ಚರ್ಚೆಗಳು ನಡೆದಿವೆ. ಅಂತಿಮವಾಗಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ.

ನಮ್ಮ ಪಕ್ಷ ರಾಷ್ಟ್ರೀಯ ನಾಯಕರಿಗೆ ಕೊಡುವ ಗೌರವವನ್ನು ಬೂತ್ ಕಾರ್ಯಕರ್ತನಿಗೂ ಕೊಡುತ್ತದೆ. ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದಿದ್ದಾರೆ. ಇಡೀ ಜಗತ್ತೇ ನರೇಂದ್ರ ಮೋದಿ ಅವರನ್ನು ಮೆಚ್ಚಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಎಲ್ಲಾ ಹಿರಿಯರ ವಿಶ್ವಾಸದೊಂದಿಗೆ ಪಕ್ಷ ಮುನ್ನಡೆಸಬೇಕು. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡ ಬೇಕಿದೆ. ಅತ್ಯಲ್ಪ ಕಾಲದಲ್ಲೇ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದಾಗಿದೆ ಎಂದಿದ್ದಾರೆ.

ಬರದ ನೈಜ ಸ್ಥಿತಿಯನ್ನ ಅರಿಯಲು ಬಿಜೆಪಿ ರಾಜ್ಯ ಪ್ರವಾಸಕೈಗೊಂಡಿದೆ: ಆರಗ ಜ್ಞಾನೇಂದ್ರ

0

ಚಿಕ್ಕಮಗಳೂರು: ಹಿಂದೆ ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಡಬ್ಬ ಹಿಡಿದು ರಸ್ತೆಗಿಳಿದು ಸಾರ್ವಜನಿಕರಿಂದ ಹಣ ಸಂಗ್ರಹಿಸಿದ್ದರು. ಅಂತಹಾ ಕಾಳಜಿ, ಬದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರುತ್ತಿಲ್ಲ. ಭಾಷಣಮಾಡುವುದು, ಕುಣಿಯುವುದರಲ್ಲಿಯೇ ಕಾಲವನ್ನ ದೂಡುತ್ತಿದ್ದಾರೆಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನ ಸಮರ್ಪಕವಾಗಿ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ 30% ಕ್ಕಿಂತ ಕಡಿಮೆ ಮಳೆಯಾಗಿರುವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಘೋಷಿಸಲಾಗಿದೆ.

ಬರ ರಾಜ್ಯವನ್ನು ವ್ಯಾಪಕವಾಗಿ ಕಾಡುತ್ತಿದೆ. ಬೆಳೆ ನಷ್ಟವಾಗಿದೆ. ಮೇವಿನ ಅಭಾವ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಇದಕ್ಕೂ ಸರ್ಕಾರಕ್ಕೂ ಸಂಬಂಧಿವಿಲ್ಲವೆಂಬಂತೆ ಮುಖ್ಯಮಂತ್ರಿಗಳು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಬರದ ನೈಜ ಸ್ಥಿತಿಯನ್ನ ಅರಿಯಲು ಬಿಜೆಪಿ (BJP) ರಾಜ್ಯ ಪ್ರವಾಸಕೈಗೊಂಡಿದೆ. ಬರದ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದರು. 

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಪೋಟೊಗೆ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್..!

0

ಬೆಳಗಾವಿ: ಪ್ರೀತಿಸಲು ಒಪ್ಪದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಆರೋಪಿಯನ್ನು ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ ಖಾನಾಪುರದ ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ.

ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ ಎಡಿಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ.  ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್‍ಮೇಲ್ ಮಾಡಿದ್ದಾನೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ.

ಆರೋಪಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್‍ನಲ್ಲಿ ಫೋಟೋ ಎಡಿಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಮೊಳೆ: ಧಾರ್ಮಿಕ ದತ್ತಿ ಇಲಾಖೆ ವಿರುದ್ಧ ಪುರಾತತ್ವ ಇಲಾಖೆ ಆಕ್ಷೇಪ

0

ಬಳ್ಳಾರಿ: ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಡ್ರಿಲ್ ಹೊಡೆದು ಮೊಳೆ ಹೊಡೆದ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆ ವಿರುದ್ಧ ಪುರಾತತ್ವ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಯುನೆಸ್ಕೋ ವಿಶ್ವ ಪರಂಪರೆಯ ಐತಿಹಾಸಿಕ ತಾಣ, 7ನೇ ಶತಮಾನದ ಶಿವನ ದೇವಾಲಯವಾಗಿರುವ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ವಿರೂಪಾಕ್ಷ ದೇವಾಲಯದ ಕಂಬಕ್ಕೆ ಧಾರ್ಮಿಕ ದತ್ತಿ ಇಲಾಖೆ ಮೊಳೆ ಹೊಡೆದಿದೆ. ಸಂಬಂಧ ಪುರಾತತ್ವ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು ಸ್ಮಾರಕಗಳಿಗೆ ಧಕ್ಕೆ ಆಗಿದೆ ಎಂದು ನೋಟಿಸ್ ಜಾರಿ ಮಾಡಿದೆ.

ವಿರೂಪಾಕ್ಷೇಶ್ವರ ದೇಗುಲದ ಉತ್ತರ ದಿಕ್ಕಿನಲ್ಲಿ ಗೇಟ್ ಕೂರಿಸಲು ಧಾರ್ಮಿಕ ದತ್ತಿ ಇಲಾಖೆ ಮೊಳೆ ಹೊಡೆದಿದೆ. ದೇಗುಲಕ್ಕೆ ಭಕ್ತರು ದಕ್ಷಿಣ ಧ್ರುವದಿಂದ ಬಂದು ದರ್ಶನದ ಬಳಿಕ ಉತ್ತರ ಧ್ರುವದಿಂದ ಹೊರ ಹೋಗುತ್ತಾರೆ. ಭಕ್ತರು ಸರತಿ ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಲು ಮೊಳೆ ಹೊಡೆಯಲಾಗಿದೆ. ಆದರೆ ಮೊಳೆ ಹೊಡೆಯುವ ವೇಳೆ ಪುರಾತತ್ವ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಅನುಮತಿ ಪಡೆಯದೇ ಮೊಳೆ ಹೊಡೆದಿದ್ದಕ್ಕೆ ಪುರಾತತ್ವ ಇಲಾಖೆ ಗರಂ ಆಗಿದೆ. ಸ್ಮಾರಕಗಳಿಗೆ ಧಕ್ಕೆ ಆಗಿದೆ ಎಂದು ನೋಟಿಸ್ ನೀಡಿದೆ.

error: Content is protected !!