Home Blog Page 3166

ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ

0

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿರುವ ಆಘಾತಕಾರಿ ಘಟನೆ ಉಡುಪಿಯ ಸಂತೆಕಟ್ಟೆ ನೇಜಾರು ಸಮೀಪ ನಡೆದಿದೆ.

ತಾಯಿ ಹಾಗೂ ಮೂವರು ಮಕ್ಕಳನ್ನು ದುಷ್ಕರ್ಮಿ ಕೊಲೆಗೈದಿದ್ದಾನೆ. ಮೃತರನ್ನು ತಾಯಿ ಹಸೀನಾ (46), ಮಕ್ಕಳಾದ ಅಫ್ನಾನ್ (23), ಅಯ್ನಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಹರಿತವಾದ ಆಯುಧಗಳಿಂದ ಇರಿದು ನಾಲ್ವರನ್ನು ಕೊಲೆ ಮಾಡಿದ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್‌ಗೆ ಇರಿದಿದ್ದಾನೆ. ಈ ವೇಳೆ ಹೊರಗಡೆ ಆಟವಾಡುತ್ತಿದ್ದ ಆಸಿಂ ಸದ್ದು ಕೇಳಿ ಮನೆ ಒಳಗಡೆ ಬಂದಿದ್ದಾನೆ. ನಂತರ ಕಿರಿಯ ಮಗನನ್ನೂ ಕೊಂದಿದ್ದಾನೆ. ಇದಾದ ಬಳಿಕ ಗಲಾಟೆ ಕೇಳಿ ಪಕ್ಕದ ಮನೆಯ ಯುವತಿ ತನ್ನ ಮನೆಯಿಂದ ಹೊರ ಬಂದಿದ್ದಾಳೆ.

ದುಷ್ಕರ್ಮಿ ಆಕೆಯನ್ನೂ ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಹಸೀನಾ ಅತ್ತೆಗೂ ತೀವ್ರವಾದ ಗಾಯಗಳಾಗಿವೆ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ.

ಭಾನುವಾರ ಬೆಳಗ್ಗೆ ಸುಮಾರು 9 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್..!

0

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಅಸಮಾಧಾನ, ಕಾಂಗ್ರೆಸ್ ಟೀಕೆಗಳ ನಡುವೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ  ಪದಗ್ರಹಣ ಸಮಾವೇಶ ನಡೆಯಲಿದೆ. ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ. ಈ ವಿಚಾರವನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.

ಹಾಸನಾಂಬೆ ದೇವಾಲಯದ 9 ದಿನಗಳ ದರ್ಶನದಲ್ಲಿ 4 ಕೋಟಿಗೂ ಅಧಿಕ ಆದಾಯ ಸಂಗ್ರಹ

0

ಹಾಸನ: ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬೆಯ ಜಾತ್ರಾ ಮಹೋತ್ಸವ ಇತಿಹಾಸದಲ್ಲೇ ದಾಖಲೆ ಬರೆದಿದ್ದು, ದಾಖಲೆಯ ಆದಾಯ ಗಳಿಸಿದೆ. 9 ದಿನಗಳ ದರ್ಶನದಲ್ಲಿ ಒಟ್ಟು 4,56,22,580 ರೂ. ಸಂಗ್ರಹವಾಗಿದೆ. ವಿಶೇಷ ದರ್ಶನದ ಪಾಸ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ನ.3ರಿಂದ ಪ್ರಾರಂಭವಾಗಿ ನ.11ರ ಮಧ್ಯಾಹ್ನ 2ಗಂಟೆಯವರೆಗೆ ಒಟ್ಟು 4,56,22,580 ರೂ. ಆದಾಯ ಬಂದಿದೆ.

ಸಾವಿರ ರೂ. ಟಿಕೆಟ್ ಮಾರಾಟದಿಂದ 2,30,91,000 ರೂ. ಸಂಗ್ರಹವಾಗಿದ್ದು, 300 ರೂ. ಟಿಕೆಟ್ ಮಾರಾಟದಿಂದ 1,79,65,500 ರೂ. ಸಂಗ್ರಹವಾಗಿದೆ. ಲಡ್ಡು ಪ್ರಸಾದ ಮಾರಾಟದಿಂದ ಕೂಡ 45,66,080 ಹಣ ಸಂಗ್ರಹವಾಗಿದ್ದು, ಒಟ್ಟು 4,56,22,580 ರೂ. ಆದಾಯವನ್ನು ಹಾಸನಾಂಬ ದೇವಾಲಯ ಗಳಿಸಿದೆ. ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲೇ ಅತಿ ಹೆಚ್ಚಿನ ಆದಾಯ ಗಳಿಸಿದ್ದು, ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ಆದಾಯ ಗಳಿಸಿದೆ.

ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರುರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡೋದಾಗಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ.

ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ. ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದರು.

ಪೊಲೀಸರ ಮಿಂಚಿನ ಕಾರ್ಯಾಚರಣೆ: ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅಂದರ್

0

ಚಿತ್ರದುರ್ಗ :- ಚಿತ್ರಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ.

ಕೊಳಾಳ್ ಬಳಿ ಇಕೋ ಕಾರಿನಲ್ಲಿದ್ದ 6 ಮಂದಿ ಅರೆಸ್ಟ್ ಮಾಡಲಾಗಿದೆ. 91 KG ಶ್ರೀಗಂಧ, 15.5 KG ರಕ್ತಚಂದನ, 25.4KG ಆನೆದಂತ, 34 .1 KG ಪೆಂಗೋಲಿನ್ ಚಿಪ್ಪು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ 1ಲಕ್ಷ ಹಣ, 2 ಕಾರ್, 9 ಮೊಬೈಲ್ ಸೇರಿ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ.

A-1ಚಂದ್ರಶೇಖರ್ , A2- ಖಲೀಲ್,A-3 ಪ್ರಶಾಂತ್, A-4 ರಂಗಸ್ವಾಮಿ, A-5 ಪುನೀತ್ ನಾಯ್ಕ್, A-6 ರಾಮಾನಾಯ್ಕ್ ಬಂಧಿತರು. ಚಿತ್ರಹಳ್ಳಿ, ಶ್ರೀರಾಂಪುರ, ಐಮಂಗಲ ಸೇರಿ ವಿವಿಧ ಠಾಣೆಯಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿದ್ದರು.

ಈ ಸಂಬಂಧ ಖಚಿತ ಮಾಹಿತಿ ಪಡೆದು ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಹಿರಿಯೂರು ನಗರದ ಬಬ್ಬೂರು ಬಾಡಿಗೆ ಮನೆಯಲ್ಲಿ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸಿಪಿಐ ಚಿಕ್ಕಣ್ಣನವರ್ ನೇತೃತ್ವದಲ್ಲಿ ಗ್ಯಾಂಗ್ ಅರೆಸ್ಟ್ ಮಾಡಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್

0

ಎಡಗೈ ಬಳಸುವವರ ಕಥೆಯಾಧಾರಿತ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿರುವುದು ಗೊತ್ತಿರುವ ವಿಚಾರ. ಯುವ ನಿರ್ದೇಶಕ ಸಮರ್ಥ್‌ ಕಡಕೋಳ್‌ ಸಾರಥ್ಯದಲ್ಲಿ ಮೂಡಿಬಂದಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಹೊಸ ಪೋಸ್ಟರ್ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಟೇಬಲ್ ಹಿಂಬದಿಯಲ್ಲಿ ಬಚ್ಚಿಟ್ಟುಕೊಂಡು ಕುಳಿತಿರುವ ನಾಯಕ ಹಾಗೂ ನಾಯಕಿ..ಅವರ ಬೆನ್ನಿಂದೆ ವ್ಯಕ್ತಿಯೋರ್ವ ನಿಂತಿದ್ದಾರೆ. ಅವರು ಯಾರು ಅನ್ನೋದನ್ನು ರಿವೀಲ್ ಮಾಡದೇ ಚಿತ್ರತಂಡ ಕುತೂಹಲ ಕಾಯ್ದುಕೊಂಡಿದೆ.

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಮತ್ತು ಗುರುದತ್ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಒಂದಷ್ಟು ಪೋಸ್ಟರ್, ಝಲಕ್ ಮೂಲಕ ಗಮನಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಜೋರು; ಗಗನಕ್ಕೆ ಏರಿದ ಹೂವು, ಹಣ್ಣು ಬೆಲೆ

0

ಬೆಂಗಳೂರು: ದೀಪಾವಳಿಗೆ ಹಿನ್ನೆಲೆಯಲ್ಲಿ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನ‌ಕೊಳ್ಳಲು ಜನರು ಮುಗಿಬಿದ್ದಾರೆ. ಹೀಗಾಗಿ ಕೆ ಆರ್ ಮಾರುಕಟ್ಟೆ ಸುತ್ತ – ಮುತ್ತ ಫುಲ್ ಟ್ರಾಫಿಕ್ ಜಾಮ್​ ಆಗಿದೆ. ಇನ್ನು ಹಬ್ಬದ ಸಲುವಾಗಿ ಹಣ್ಣು, ಹೂವುಗಳ ಬೆಲೆ ಏರಿಕೆಯಾಗಿದೆ. ಮಾರು ಹೂವಿನ ಬೆಲೆ 50 ರೂ.  ಆಗಿದೆ. ಇಂದು ನರಕ ಚತುರ್ದಶಿ, ಧನಲಕ್ಷ್ಮಿ ಪೂಜೆ , ಕೇದರೇಶ್ವರ ವೃತಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಗ್ರಾಹಕರು ಹೂ, ಹಣ್ಣುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ಮೈಸೂರಿನಲ್ಲಿ ಟಂ ಟಂ ವಾಹನ ಪಲ್ಟಿ: ಓರ್ವ ಯುವಕ ಸಾವು, ಹಲವರಿಗೆ ಗಾಯ

0

ಮೈಸೂರು: ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ಟಂಟಂ ವಾಹನ (ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20) ಮೃತಪಟ್ಟಿದ್ದಾನೆ. ಮೈಸೂರಿನ ಟಿ ನರಸೀಪುರ ಮುಖ್ಯರಸ್ತೆಯ ಮೆಗಳಾಪುರ ಬಳಿ ಘಟನೆ ನಡೆದಿದೆ.

ದರ್ಶನ್ ಸೇರಿದಂತೆ ಕೆಲ ಯುವಕರು ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿದೆ.  ಘಟನೆಯಲ್ಲಿ ದರ್ಶನ್ ಸಾವನ್ನಪ್ಪಿದ್ದು, ಸುಮಾರು 10 ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್

0

ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ.

ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ.

ಸಾಮರಸ್ಯದ ಗುರುಬಸವ ಸ್ವಾಮೀಜಿ ಲಿಂಗ್ಯೆಕ್ಯ

0

ನರಗುಂದ; ತಾಲೂಕಿನ ಶಿರೋಳ ಗ್ರಾಮದ ಶ್ರೀ ತೋಂಟದಾರ್ಯ ಮಠದ ಗುರುಬಸವ ಸ್ವಾಮೀಜಿ ರವಿವಾರ ಲಿಂಗ್ಯೆಕ್ಯರಾಗಿದ್ದಾರೆ.

ಬಹುದಿನಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ರವಿವಾರ ಬೆಳಗಿನ ಜಾವ ಲಿಂಗ್ಯೆಕ್ಯರಾಗಿದ್ದಾರೆ.

ಇನ್ನೂ ಶ್ರೀಗಳ ಅಗಲಿಕೆಯಿಂದ ಶಿರೋಳ ಗ್ರಾಮದಲ್ಲಿ ಮೌನ‌ ಆವರಿಸಿದ್ದು, ಶ್ರೀಗಳ ಪಾರ್ಥಿವ ಶರೀರ ಸಂಜೆ ಶಿರೋಳ ಗ್ರಾಮಕ್ಕೆ ಬರಲಿದ್ದು, ಶ್ರೀಮಠದಲ್ಲಿ ಭಕ್ತರು ಕಣ್ಣೀರಿಡುತ್ತಿದ್ದಾರೆ.

ಗಡಿ ಭಾಗದಲ್ಲಿ ಗುಡಿಕಟ್ಟಿ ತಾಯಿ ಕನ್ನಡಮ್ಮನ ಸೇವೆ ಮಾಡಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಪಡೆದಿದ್ದ ಗುರುಬಸವ ಶ್ರೀಗಳು, ಜಗದ್ಗುರು ಡಾ.ತೋಂಟದಾರ್ಯ ಸಿದ್ದಲಿಂಗ ಶ್ರೀಗಳ ಆಪ್ತ ಶಿಷ್ಯರಾಗಿದ್ದರು.

ಶಿರೋಳ ಭಾಗದಲ್ಲಿ ರೊಟ್ಟಿ ಜಾತ್ರೆಯ ಮೂಲಕ ಜನರಲ್ಲಿ ಸಾಮರಸ್ಯದ ಬೀಜ ಬಿತ್ತಿದ್ದ ಗುರುಬಸವ ಸ್ವಾಮಿಗಳು, ಶ್ರೀ ಸಾಮಾನ್ಯರ ಶ್ರೀಗಳಾಗಿದ್ದರು.

error: Content is protected !!