Home Blog Page 3167

ಕೋವಿಡ್ ವರದಿ ಇಲ್ಲದ್ದಕ್ಕೆ ದಾಖಲಿಸಿಕೊಳ್ಳಲು ಒಪ್ಪದ ಆಸ್ಪತ್ರೆ – ನಿಂತಲ್ಲಿಯೇ ಹೆರಿಗೆಯಾಗಿ ಮಗು ಸಾವು

ವಿಜಯಸಾಕ್ಷಿ ಸುದ್ದಿ, ಮಂಡ್ಯ

ಕೊರೊನಾ ವರದಿ ಇಲ್ಲವೆಂಬ ಕಾರಣಕ್ಕೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆ ಸಿಬ್ಬಂದಿ ದಾಖಲು ಮಾಡಿಕೊಂಡಿರಲಿಲ್ಲ. ಹೀಗಾಗಿ ಆಸ್ಪತ್ರೆಯ ಮುಂಭಾಗದಲ್ಲಿ ನಿಂತಲ್ಲಿಯೇ ಹೆರಿಗೆಯಾಗಿದ್ದು, ಪರಿಣಾಮ ನವಜಾತ ಶಿಶು ಕೆಳಗೆ ಬಿದ್ದು ಸಾವನ್ನಪ್ಪಿರುವ ಮನ ಕಲಕುವ ಘಟನೆ ನಡೆದಿದೆ.

ಈ ಘಟನೆ ಇಲ್ಲಿಯ ಮಿಮ್ಸ್ ನ ಹೆರಿಗೆ ವಾರ್ಡ್ ಮುಂಭಾಗದಲ್ಲಿ ನಡೆದಿದೆ. ನಗರದ ಗುತ್ತಲು ಬಡಾವಣೆಯ ನಿವಾಸಿ ಇಸ್ಮಾಯಿಲ್ ಎಂಬುವವರ ಪತ್ನಿ ಸೋನು ಅವರು 7 ತಿಂಗಳ ಗರ್ಭಿಣಿ ಆಗಿದ್ದರು. ಆದರೆ, ನಿನ್ನೆ ರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಪರೀಕ್ಷೆ ಮಾಡಿದಾಗ ಮಗುವಿನ ಎದೆಯ ಬಡಿತ ಕೇಳುತ್ತಿಲ್ಲ. ನಾಳೆ ಬಂದು ಆಸ್ಪತ್ರೆಗೆ ದಾಖಲಾಗಿ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿಯೇ ಇಸ್ಮಾಯಿಲ್ ನಿನ್ನೆ ರಾತ್ರಿ ಪತ್ನಿಯ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಆದರೆ, ಇಂದು ಬೆಳಿಗ್ಗೆ ನೋವು ಹೆಚ್ಚಾದ ಕಾರಣ, ಪತ್ನಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದರು. ಆದರೆ, ಈ ಸಂದರ್ಭದಲ್ಲಿ ಕೋವಿಡ್ ಟೆಸ್ಟ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ, ದಾಖಲು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆಯ ಪರಿಸ್ಥಿತಿ ಕಂಡು ಕುಟುಂಬಸ್ಥರು ಹಾಗೂ ಅಲ್ಲಿದ್ದ ಸಾರ್ವಜನಿಕರು ದಾಖಲು ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಆದರೂ ಆಸ್ಪತ್ರೆ ಸಿಬ್ಬಂದಿ ದಾಖಲು ಮಾಡಿಕೊಂಡಿಲ್ಲ. ಆದರೆ, ಸೋನು ನಿಂತಿದ್ದ ಸಂದರ್ಭದಲ್ಲಿಯೇ ಹೆರಿಗೆ ಆಗಿದೆ. ಆಗ ಮಗು ಕೆಳಕ್ಕೆ ಬಿದ್ದು ಸಾವನ್ನಪ್ಪಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆ ನಡೆದ ನಂತರ ಆಸ್ಪತ್ರೆಯ ಸಿಬ್ಬಂದಿ ಸೋನು ಅವರನ್ನು ದಾಖಲು ಮಾಡಿಕೊಳ್ಳಲಾಯಿತು. ಇತ್ತ ಆಸ್ಪತ್ರೆ ಸಿಬ್ಬಂದಿ ಪೋಷಕರ ಮೇಲೆ ತಪ್ಪು ಹೇರುತ್ತಿದ್ದಾರೆ.

ಕೆಂಪು ರಕ್ತ ಚಂದ್ರ ಗ್ರಹಣ! ಏನಿದು? ಇದು ಹೇಗೆ ಸಂಭವಿಸುತ್ತದೆ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ವರ್ಷದ ಮೊದಲ ಚಂದ್ರ ಗ್ರಹಣ ಇಂದು ಸಂಭವಿಸಲಿದೆ. ಈ ಬಾರಿ ಸೂಪರ್ ಮೂನ್ ಗ್ರಹಣವಾಗಿರುವುದರಿಂದಾಗಿ ಇದು ವಿಶೇಷವಾಗಿತ್ತು. ಹೀಗಾಗಿ ಈ ಕೆಂಪು ರಕ್ತ ಚಂದ್ರನನ್ನು ಎಲ್ಲರೂ ಕಣ್ಣು ತುಂಬಿಕೊಳ್ಳಬಹುದು. ಚಂದ್ರನು ಭೂಮಿಗೆ ಅತ್ಯಂತ ಹತ್ತಿರವಾಗುವುದನ್ನು ಸೂಪರ್ ಮೂನ್ ಎಂದು ಕರೆಯುತ್ತಾರೆ.

ಭೂಮಿಯ ಸುತ್ತ ಚಂದ್ರನ ಕಕ್ಷೆಯು ಸಂಪೂರ್ಣವಾಗಿ ವೃತ್ತಾಕಾರವಾಗಿಲ್ಲ. ಪೆರಿಗೀ ಎಂದು ಕರೆಯಲ್ಪಡುವ ಕಕ್ಷೆಯ ಹತ್ತಿರದ ಬಿಂದುವು ಕಕ್ಷೆಯ ದೂರದ ಬಿಂದುವಿಗಿಂತ ಭೂಮಿಗೆ ಸರಿಸುಮಾರು 28,000 ಮೈಲಿ ದೂರದಲ್ಲಿದೆ. ಹೀಗೆ ಪೆರಿಗಿಯ ಬಳಿ ಸಂಭವಿಸುವ ಹುಣ್ಣಿಮೆಯನ್ನು ಸೂಪರ್‌ ಮೂನ್ ಎಂದು ಕರೆಯಲಾಗುತ್ತದೆ.
ಹೀಗಾಗಿ ಚಂದ್ರ ಸ್ವಲ್ಪ ದೊಡ್ಡದಾಗಿ ಕಾಣುತ್ತದೆ. ಅಲ್ಲದೇ, ಪ್ರಕಾಶಮಾನವಾಗಿ ಕಾಣುತ್ತದೆ.

ಭೂಮಿಯ ನೆರಳು ಚಂದ್ರನ ಎಲ್ಲಾ ಅಥವಾ ಭಾಗವನ್ನು ಆವರಿಸಿದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ಆದರೆ ಪ್ರತಿ ಚಂದ್ರನ ಕಕ್ಷೆಯಲ್ಲಿ ಎರಡು ಬಾರಿ, ಚಂದ್ರನು ಭೂಮಿ ಮತ್ತು ಸೂರ್ಯನಂತೆಯೇ ಒಂದೇ ಸಮತಲದಲ್ಲಿರುತ್ತಾನೆ. ಇದು ಹುಣ್ಣಿಮೆಗೆ ಅನುಗುಣವಾದರೆ, ಸೂರ್ಯ, ಭೂಮಿ ಮತ್ತು ಚಂದ್ರರು ಸರಳ ರೇಖೆಯನ್ನು ರೂಪಿಸುತ್ತಾರೆ. ಚಂದ್ರನು ಭೂಮಿಯ ನೆರಳಿನ ಮೂಲಕ ಹಾದು ಹೋಗುತ್ತಾನೆ. ಇದು ಒಟ್ಟು ಚಂದ್ರಗ್ರಹಣಕ್ಕೆ ಕಾರಣವಾಗುತ್ತದೆ.

ಈ ಚಂದ್ರ ಗ್ರಹಣ ಫೆಸಿಫಿಕ್ ಸಮುದ್ರದ ಮಧ್ಯಭಾಗ, ಆಸ್ಟ್ರೇಲಿಯಾ, ಏಷ್ಯಾದ ಪೂರ್ವ ತೀರ ಮತ್ತು ಅಮೆರಿಕಾದ ಪಶ್ಚಿಮ ತೀರದಲ್ಲಿ ಕಾಣಿಸುತ್ತದೆ. ಚಂದ್ರನು ಭೂಮಿಯ ನೆರಳಿನಿಂದ ಸಂಪೂರ್ಣವಾಗಿ ಆವರಿಸಿದಾಗ ಅದು ಕಪ್ಪಾಗುತ್ತದೆ. ಆದರೆ ಸಂಪೂರ್ಣವಾಗಿ ಕಪ್ಪು ಬಣ್ಣಕ್ಕೆ ಹೋಗುವುದಿಲ್ಲ. ಬದಲಾಗಿ, ಇದು ಕೆಂಪು ಬಣ್ಣದಲ್ಲಿ ಕಾಣಿಸುತ್ತಿದೆ. ಅದಕ್ಕಾಗಿಯೇ ಒಟ್ಟು ಚಂದ್ರ ಗ್ರಹಣಗಳನ್ನು ಕೆಲವೊಮ್ಮೆ ಕೆಂಪು ಅಥವಾ ರಕ್ತ ಚಂದ್ರ ಎಂದು ಕರೆಯಲಾಗುತ್ತದೆ.

ಪಿಯುಸಿ ಪರೀಕ್ಷೆಗಳು ಯಾವಾಗ ನಡೆಯಲಿವೆ ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಜುಲೈ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸದ್ಯದಲ್ಲಿಯೇ ದಿನಾಂಕ ನಿಗದಿ ಮಾಡಲಾಗುವುದು ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್. ಸ್ನೇಹಲ್ ಅವರು ತಿಳಿಸಿದ್ದಾರೆ.

ಮೇ. 23ರಂದು ಹಲವು ರಾಜ್ಯಗಳ ಶಿಕ್ಷಣ ಸಚಿವರು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸಭೆ ನಡೆಸಿದ್ದಾರೆ. ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವಂತೆ ಸಿಬಿಎಸ್ ಸಿ ಸಲಹೆ ನೀಡಿದೆ. ಆದರೆ, ಪರೀಕ್ಷೆಗಳ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಬೇಕಾದರೆ 75 ದಿನಗಳ ಅಗತ್ಯವಿದೆ.

ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಪೂರ್ಣಗೊಂಡಿದೆ. ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ. ಕೇಂದ್ರದ ಸಲಹೆ, ಸಭೆ ನಂತರ ಪರೀಕ್ಷಾ ಪದ್ಧತಿ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸಲಹೆ ಹಾಗೂ ಸಭೆ ಬಳಿಕ ಪರೀಕ್ಷಾ ಪದ್ದತಿ ಹಾಗೂ ಪಠ್ಯ ಕಡಿತದ ಕುರಿತು ಚಿಂತನೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಅಲ್ಲದೇ, ಪಠ್ಯವನ್ನು ಕೂಡ ರೂಪಿಸಲಾಗಿದೆ. ಪ್ರಶ್ನೆ ಪತ್ರಿಕೆ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಸಿಬಿಎಸ್‌ ಇ 12ನೇ ತರಗತಿಗಳ ಪರೀಕ್ಷೆಯ ನಂತರವೇ ವೃತ್ತಿಪರ ಕೋರ್ಸ್‌ ಗಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿಯ ಸತ್ಯಾಸತ್ಯತೆ ಏನು?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಹಾಮಾರಿಯ ಅಬ್ಬರದ ನಡುವೆಯೂ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ಹೈಕಮಾಂಡ್, ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಪ್ರಯತ್ನಿಸುತ್ತಿದೆಯೇ? ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯದ ಬಿಜೆಪಿಯಲ್ಲಿನ ಬದಲಾವಣೆಗಳು ಕೂಡ ಇದಕ್ಕೆ ಪುಷ್ಟಿ ನೀಡುತ್ತಿವೆ.

ಬಿಜೆಪಿಯ ಶಾಸಕರ ಸಭೆ ನಡೆಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪಕ್ಷದ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ಈ ಕುರಿತು ನಿನ್ನೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿಯೂ ಸಿಎಂ ಸುಳಿವು ಕೊಟ್ಟಿದಾರೆ. ಜೂನ್ ಮೊದಲ ವಾರದಲ್ಲಿ ಶಾಸಕರ ಸಭೆ ನಡೆಸಬೇಕೆಂದು ಹೈಕಮಾಂಡ್ ಆದೇಶ ನೀಡಿದೆ ಎನ್ನಲಾಗಿದೆ. ಹೀಗಾಗಿ ಜೂ. 7ರಂದು ರಂದು ಪಕ್ಷದ ಶಾಸಕರ ಸಭೆ ನಡೆಸು ಸಿಎಂ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕೂಡ ತಿಳಿದು ಬಂದಿದೆ. ಆದರೆ, ಈ ಸಭೆಯಲ್ಲಿ ನಾಯಕರ ಬದಲಾವಣೆ ಕುರಿತು ಚರ್ಚೆ ನಡೆಯುತ್ತದೆಯೇ ಎಂಬ ಪ್ರಶ್ನೆ ಸದ್ಯ ಮೂಡಿದೆ.

ಇನ್ನೊಂದೆಡೆ ಶಾಸಕರ ಸಭೆಯ ದಿನದಂದೇ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯಲಿದೆ ಎಂದು ಯಡಿಯೂರಪ್ಪ ವಿರೋಧಿ ಬಣ ಹೇಳುತ್ತಿದೆ. ಆದರೆ, ಸಿಎಂ ಮಾತ್ರ ಕೊರೊನಾ ನಿರ್ವಹಣೆ ಕುರಿತು ಮಾತ್ರ ಚರ್ಚೆ ನಡೆಯುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಅಂದರೆ, ಶನಿವಾರ ಸಿಎಂ ಯಡಿಯೂರಪ್ಪ ಅವರ ಮನೆಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆರೆಸ್ಸೆಸ್ ನಾಯಕರು ಭಾಗಿಯಾಗಿದ್ದರು. ಆರೆಸ್ಸೆಸ್ ಮುಖಂಡ ಮುಕುಂದ್ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಕುರಿತೇ ಚರ್ಚೆ ನಡೆದಿದೆ ಎನ್ನಲಾಗುತ್ತಿದ್ದು, ಅವರ ಭೇಟಿಯ ನಂತರ, ಶಾಸಕರ ಸಭೆ ಕರೆಯಲು ಸಿಎಂಗೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.

ಇಂದು ವರ್ಷದ ಮೊದಲ ಚಂದ್ರ ಗ್ರಹಣ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಇಂದು ವೈಶಾಖ ಹುಣ್ಣಿಮೆಯಾಗಿದ್ದು, ಸೂಪರ್ ಮೂನ್ ಮತ್ತು ಚಂದ್ರಗ್ರಹಣ ಸಂಭವಿಸಲಿದೆ. ಭೂಮಿಯ ಸುತ್ತ ಚಂದ್ರ ದೀರ್ಘ ವೃತ್ತಾಕಾರದಲ್ಲಿ ಚಲಿಸುತ್ತಾನೆ. ಆ ಕಾರಣದಿಂದಾಗಿ ಭೂಮಿಗೆ ಅತಿ ಸಮೀಪದಲ್ಲಿ ಇಂದು ಚಂದ್ರ ಬರುತ್ತಾನೆ.

ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದರಿಂದ ಆ ಸಂದರ್ಭದಲ್ಲಿ ಕತ್ತಲು ಆವರಿಸುವ ಬದಲಿಗೆ ಚಂದ್ರನ ಬಣ್ಣ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇದು ವರ್ಷದ ಮೊದಲ ಚಂದ್ರಗ್ರಹಣವಾಗಿದೆ.

ಇಂದು ಮಧ್ಯಾಹ್ನ ಆರಂಭಗೊಂಡು, ಸಂಜೆಯವರೆಗೂ ಈ ಗ್ರಹಣ ಇರಲಿದೆ. ಭಾರತದ ಈಶಾನ್ಯ ಭಾಗ, ಪಶ್ಚಿಮ ಬಂಗಾಳದ ಕೆಲ ಭಾಗ, ಒಡಿಶಾ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಈ ಚಂದ್ರಗ್ರಹಣ ಭಾಗಶಃ ಗೋಚರವಾಗಲಿದೆ.

ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆ ಮಧ್ಯೆ ಈ ಗ್ರಹಣ ನಡೆಯಲಿದೆ.
ದಕ್ಷಿಣ ಅಮೆರಿಕ, ಉತ್ತರ ಅಮೆರಿಕ, ಏಷ್ಯಾ, ಆಸ್ಟ್ರೇಲಿಯಾ, ಅಂಟಾರ್ಟಿಕಾ, ಪೆಸಿಫಿಕ್ ಮಹಾಸಾಗರ ಮತ್ತು ಹಿಂದೂ ಮಹಾಸಾಗರದಲ್ಲಿ ಈ ಚಂದ್ರಗ್ರಹಣ ಸಂಪೂರ್ಣವಾಗಿ ಗೋಚರವಾಗಲಿದೆ. ಈ ಚಂದ್ರ ಗ್ರಹಣದಿಂದ ಯಾರಿಗೂ ಅಪಾಯ ಇರುವುದಿಲ್ಲ.

ಮಹಿಳೆಯ ಅತ್ಯಾಚಾರಗೈದು ಕಂಬಕ್ಕೆ ನೇತು ಹಾಕಿದ ಪಾಪಿಗಳು!

ವಿಜಯಸಾಕ್ಷಿ ಸುದ್ದಿ, ಪಾಟ್ನಾ

ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರಗೈದ ಪಾಪಿಗಳು, ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಬಿಹಾರದ ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆ ಬೆಳಿಗ್ಗೆ ಶೌಚಕ್ಕೆಂದು ಮನೆಯಿಂದ ಹೊರಗಡೆ ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವಳಿಗೆ ಕಿರುಕುಳ ನೀಡಿದ್ದಲ್ಲದೇ ಅತ್ಯಾಚಾವೆಸಗಿದ್ದಾರೆ. ಆಗ ಮಹಿಳೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದಿದ್ದರಿಂದ ಆಕೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಈ ಅಮಾನವೀಯ ಘಟನೆ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಸ್ಥರು ತಕ್ಷಣವೇ ಸದರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಿದ್ದಾರೆ.

ಈ ಘಟನೆಯಿಂದ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡಿದ್ದಾರೆ. ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯ ಮನೆಯಲ್ಲಿ ವಿವಾಹ ಸಮಾರಂಭವಿದ್ದುದ್ದರಿಂದ ಎಲ್ಲರೂ ಆ ಕಾರ್ಯಕ್ರಮದ ಕೆಲಸದಲ್ಲಿ ಮಗ್ನರಾಗಿದ್ದರು.

ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು. ಅದೇ ಕಾರ್ಮಿಕರು ಆಕೆಯನ್ನ ಅತ್ಯಾಚಾರವೆಸಗಿ, ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವಿಜಯೇಂದ್ರ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜಾ ವಿಧಿ- ವಿಧಾನ ನೆರವೇರಿಸಿದ್ದ ಸಿಎಂ ಯಡಿಯೂರಪ್ಪ ಅವರು ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿವರಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಲೆಟ್ಜ್‌ ಕಿಟ್‌ ಫೌಂಡೇಷನ್‌ ಸಲ್ಲಿಸಿರುವ ಪಿಐಎಲ್‌, ಸಿ.ಜೆ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು. ಮೂಲ ಅರ್ಜಿಗೆ ಮೆಮೋ ಸಲ್ಲಿಸಿರುವ ವಕೀಲ ಜಿ.ಆರ್‌. ಮೋಹನ್‌, ಮೇ 18ರಂದು ವಿಜಯೇಂದ್ರ ಕುಟುಂಬ ಸಮೇತರಾಗಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ನಡೆಸಿದ ವಿಚಾರ ಕೋರ್ಟ್ ಗಮನಕ್ಕೆ ಬಂದಿತು.

ಮೆಮೋ ಪರಿಶೀಲಿಸಿದ ನ್ಯಾಯಪೀಠ, ಒಬ್ಬ ವ್ಯಕ್ತಿಯ ಅನುಕೂಲಕ್ಕಾಗಿ ದೇವಾಲಯ ತೆರೆದು ಪೂಜೆ ನೆರವೇರಿಸಲಾಗಿದ್ದು, ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಮಾಡಿದಂತಾಗಿದೆ. ಆದ್ದರಿಂದ ಈ ವಿಚಾರದಲ್ಲಿ ಕೈಗೊಂಡ ಕ್ರಮಗಳ ಕುರಿತು ಜೂ. 3ರೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕೇವಲ ಅರ್ಚಕರು ಮಾತ್ರ ದೇವಾಲಕ್ಕೆ ತೆರಳಿ ಪೂಜೆ ಸಲ್ಲಿಸಲು ಅವಕಾಶವಿದೆ. ಆದರೆ, ಸಿಎಂ ಅವರ ಪುತ್ರ ವಿಜಯೇಂದ್ರ ದಂಪತಿ ಹೇಗೆ ದೇವಾಸ್ಥಾನದಲ್ಲಿ ಪೂಜೆ ಸಲ್ಲಿ ಸಿದರು? ಎಂದು ನ್ಯಾಯವಾದಿ ಪ್ರಶ್ನಿಸಿದ್ದಾರೆ.

ನೀರಿನಲ್ಲಿಯೂ ಕಂಡು ಬಂದ ಸೋಂಕು!

ವಿಜಯಸಾಕ್ಷಿ ಸುದ್ದಿ, ಲಕ್ನೋ

ದೇಶದಲ್ಲಿ ಮತ್ತೊಂದು ಆತಂಕ ಶುರುವಾಗಿದೆ ಉತ್ತರ ಪ್ರದೇಶದಲ್ಲಿ ನೀರಿನಲ್ಲಿ ಕೊರೊನಾ ಸೋಂಕ ಪತ್ತೆಯಾಗಿದ್ದು, ಆತಂಕ ಮನೆ ಮಾಡುತ್ತಿದೆ. ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಶವಗಳು ತೇಲಿ ಬಂದ ಹಿನ್ನೆಲೆಯಲ್ಲಿ ನೀರನ್ನು ಪರೀಕ್ಷೆಗೆ ಒಳಪಡಿಸಬೇಕೆಂಬ ಕೂಗು ಕೇಳಿ ಬಂದಿತ್ತ. ಐಸಿಎಂಆರ್ ಮತ್ತು ಡಬ್ಲ್ಯೂ ಎಚ್ ಓ ಕೆಲವು ಪ್ರದೇಶದ ನೀರನ್ನು ಮಾದರಿಯಾಗಿ ತೆಗೆದುಕೊಂಡು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಕೊಳಚೆ ನೀರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿತ್ತು. ಮೊದಲ ಹಂತದಲ್ಲಿ ಲಕ್ನೋ ನಗರದ ಮೂರು ಪ್ರದೇಶಗಳ ಕೊಳಚೆ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಒಂದು ಸ್ಥಳದ ನೀರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ ಎಂದು ಪಿಜಿಐ ಮೈಕ್ರೋಬಯೋಲಾಜಿ ವಿಭಾಗದ ಅಧ್ಯಕ್ಷ ಉಜ್ಜವಲಾ ಘೋಷಾಲ್ ಖಚಿತ ಪಡಿಸಿದ್ದಾರೆ.

ಲಕ್ನೋ ನಗರದ ಖಾದ್ರಾ, ಮೀನುಗಾರರ ಬಡವಾಣೆ, ಗಡಿಯಾರ ಗೋಪುರ ಬಡಾವಣೆಯಲ್ಲಿಯ ಕೊಳಚೆ ನೀರು ಸಂಗ್ರಹಿಸಲಾಗಿತ್ತು. ಪರೀಕ್ಷೆಯಲ್ಲಿ ಒಂದು ಮಾದರಿ ನೀರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ ಎಂದು ಘೋಷಾಲ್ ತಿಳಿಸಿದ್ದಾರೆ.

ಜನರ ಮಲದಿಂದಾಗಿ ನೀರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿರುವ ಸಾಧ್ಯತೆಗಳಿವೆ. ಹೋಮ್ ಐಸೋಲೇಟ್ ನಲ್ಲಿರುವ ಸೋಂಕಿತರು ಬಳಿಸಿರುವ ಶೌಚಾಲಯದಿಂದ ವೈರಸ್ ಚರಂಡಿ ಸೇರ್ಪಡೆಯಾಗುತ್ತಿದೆ. ಈ ಕುರಿತು ಹಲವು ದೇಶಗಳಲ್ಲಿ ಸಂಶೋಧನೆ ಸಹ ನಡೆಸಲಾಗುತ್ತಿದೆ. ಮಲ ಸೋಂಕಿನಿಂದಲೇ ಅರ್ಧದಷ್ಟು ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದು ವೈದ್ಯರು ಹೇಳುತ್ತಿದ್ದಾರೆ.

ಮಾದರಿಯಾಗಿರಬೇಕಿದ್ದ ಶಿಕ್ಷಕ ಹಾಗೂ ಆತನ ಪತ್ನಿಯಿಂದ ಇಂತಹ ಕೃತ್ಯವೇ?

ವಿಜಯಸಾಕ್ಷಿ ಸುದ್ದಿ, ಬೀದರ್

ಸಮಾಜ ತಿದ್ದಿ, ತೀಡಿ ಮಾದರಿಯಾಗಬೇಕಿದ್ದ ಶಿಕ್ಷಕರೇ ಇಲ್ಲಿ ಆರೋಪಿಯಾಗಿದ್ದಾರೆ. ವೃದ್ಧೆಯ ಮೇಲೆ ಹಲ್ಲೆ ನಡೆಸಿ ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸ ಮಾಡಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಅವರ ಪತ್ನಿ ವೃದ್ಧೆಯ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಜಿಲ್ಲೆ ಔರಾದ್ ತಾಲೂಕಿನ ಗಡಿಕೂಸನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ದೈಹಿಕ ಶಿಕ್ಷಕ ದಿಗಂಬರ್ ಹಾಗೂ ಆತನ ಪತ್ನಿ ಗ್ರಾಪಂ ಸದಸ್ಯೆ ಶಾರದ ಎಂಬುವವರು ಸೇರಿಕೊಂಡು ವೃದ್ದೆಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕ್ಷುಲಕ್ಕ ಕಾರಣಕ್ಕೆ ಮನೆಯ ಪಕ್ಕದ ವಯೋವೃದ್ದೆ ಸಿದ್ದಮ್ಮ ಎಂಬುವವರು ಮೇಲೆ ಈ ಶಿಕ್ಷಕ ಹಾಗೂ ಪತ್ನಿ ದರ್ಪೆ ಮೆರೆದಿದ್ದಾರೆ. ಘಟನೆಯಲ್ಲಿ ಹಲ್ಲೆಗೆ ಒಳಗಾದ ವಯೋವೃದ್ಧೆ ಸಿದ್ದಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೇ, ಆರೋಪಿಗಳ ವಿರುದ್ಧ ಸೆಕ್ಷನ್ 341, 323, 504 ಹಾಗೂ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ಹಾಗೂ ಗ್ರಾಪಂ ಸದಸ್ಯೆಯ ಈ ವರ್ತನೆಗೆ ಗ್ರಾಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಹಳ್ಳಿಗರು ಮೈ ಮರೆತರೆ ಸೀಲ್ ಡೌನ್ ಗ್ಯಾರಂಟಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾ ಸೋಂಕು ಹೆಚ್ಚಾಗಿರುವ ಗ್ರಾಮಾಂತರ ಪ್ರದೇಶದಲ್ಲಿ ಮೈಕ್ರೋ ಕಂಟೇನ್ಮೆಂಟ್ ವಲಯ ನಿರ್ಮಾಣ ಮಾಡುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೈಕ್ರೋ ಕಂಟೇನ್ಮೆಂಟ್ ವಲಯ ಸ್ಥಾಪಿಸುವ ಜವಾಬ್ದಾರಿಯನ್ನು ಪಿಡಿಓ, ತಾಲೂಕು ಆರೋಗ್ಯ ಅಧಿಕಾರಿ ಮತ್ತು ಪೊಲೀಸರಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೋಂಕಿತರು ಯಾವ ಗ್ರಾಮದಲ್ಲಿ ಹೆಚ್ಚಿದ್ದಾರೋ ಆ ಗ್ರಾಮಗಳಲ್ಲಿ ಮೈಕ್ರೋ ಕಂಟೇನ್ಮೆಂಟ್ ಜೋನ್ ಗಳನ್ನು ನಿರ್ಮಿಸಲಾಗುವುದು. ಈ ಜೋನ್ಗಲಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವಂತೆ ವೈದ್ಯರಿಗೆ ಆದೇಶ ನೀಡಲಾಗಿದೆ. ಸೋಂಕಿತರಿಗೆ ವಿಟಮಿನ್-ಸಿ, ಜಿಂಕ್ ಸೇರಿದಂತೆ ಕೋವಿಡ್ ಗೆ ನೀಡಲಾಗುವ ಎಲ್ಲಾ ಔಷದೋಪಚಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್ ಹೆಚ್ಚಾಗಿ ಕಾಣಿಸಿಕೊಂಡಿರುವ ರಾಜ್ಯದ ಆಯ್ದ ಕೆಲ ಗ್ರಾಮಪಂಚಾಯಿತಿಗಳ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುದುವಾರ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

error: Content is protected !!