Home Blog Page 3167

ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಬಿವೈ ವಿಜಯೇಂದ್ರ ಭೇಟಿ

0

ತುಮಕೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರಇಂದು (ನ.12) ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 9.30ಕ್ಕೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಸಿದ್ಧಗಂಗಾ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ನಂತರ ಮನೆದೇವರು ಎಡೆಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

ಯರಗೋಳ್ ಅಣೆಕಟ್ಟು ಉದ್ಘಾಟನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

0

ಬಂಗಾರಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಉದ್ಘಾಟನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2197.72 ಕೋಟಿ ರೂ.ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ವೇಳೆ ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಾಸಕರು ಹಾಗೂ ಕೋಲಾರಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕರಾದ ಕೆ.ವೈ.ನಂಜೇಗೌಡ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸಂಸದ ಉಪಸ್ಥಿತರಿದ್ದರು.

ಸರ್ಕಾರ ಮತ್ತು ಜಿಲ್ಲಾಡಳಿತ ನಿಮ್ಮ ಜತೆಗಿದೆ: ರೈತರಿಗೆ ಧೈರ್ಯ ತುಂಬಿದ ಬಿ ನಾಗೇಂದ್ರ

0

ಬಳ್ಳಾರಿ: ಜಿಲ್ಲೆಯ 5 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಅವಲೋಕಿಸಿ, ಇದೇ ತಿಂಗಳ ನ.15 ರೊಳಗಾಗಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಚಿವ ಬಿ ನಾಗೇಂದ್ರ ತಿಳಿಸಿದ್ದಾರೆ.

ಈ ಬಾರಿಯ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಯಾರೂ ಆತಂಕ ಪಡಬಾರದು. ಸರ್ಕಾರ ಮತ್ತು ಜಿಲ್ಲಾಡಳಿತ ನಿಮ್ಮ ಜತೆಗಿದೆ ಎಂದು ಸಚಿವ ಬಿ ನಾಗೇಂದ್ರ ಅವರು ರೈತರಿಗೆ ಧೈರ್ಯ ತುಂಬಿದರು.

ಇಂದು ಜಿಲ್ಲೆಯ ಸಿರುಗುಪ್ಪ-ಕುರುಗೋಡು ತಾಲೂಕುಗಳ ವ್ಯಾಪ್ತಿಯ ವಿವಿಧ ಗ್ರಾಮಗಳಾದ ರಾರಾವಿ, ಅಗಸನೂರು, ಬೊಮ್ಮಲಾಪುರ, ಕೊತ್ತಲಚಿಂತೆ, ಮಿಟ್ಟೆ ಸುಗೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಬರ ಪರಿಸ್ಥಿತಿ ವೀಕ್ಷಣೆ ಮಾಡಿ, ರೈತರಿಗೆ ಸಾಂತ್ವನ ಹೇಳಿದರು. ರಾರಾವಿ ಗ್ರಾಮದ ರೈತ ಮಂಜಪ್ಪನ ಹತ್ತಿ ಹೊಲ, ಕೊರವರ ಮಾರೆಪ್ಪನ ಮೆಣಸಿನಕಾಯಿ ಹೊಲಕ್ಕೆ ಭೇಟಿ ನೀಡಿ, ಬೆಳೆ ಪರೀಕ್ಷಿಸಿದರು.

ಅದೇ ರೀತಿಯಾಗಿ ಅಗಸನೂರು ಗ್ರಾಮದ ರೈತ ಹುಸೇನಪ್ಪನ ಮೆಣಸಿನಕಾಯಿ ಬೆಳೆ, ಮಿಟ್ಟೆ ಸುಗೂರಿನ ಹನುಮಂತ, ಬೊಮ್ಮಲಾಪುರ ಗ್ರಾಮದ ಮಣಿಯಪ್ಪ ರೈತರ ಮೆಣಸಿನಕಾಯಿ ಬೆಳೆಗಳ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರು ಯಾರೂ ಧೃತಿಗೆಡಬಾರದು, ಸಮೀಕ್ಷೆ ಅನುಸಾರ ಬರ ಪರಿಹಾರ ಒದಗಿಸಲು ರಾಜ್ಯ ಸರ್ಕಾರವು ರೈತರ ಬೆನ್ನೆಲುಬಾಗಿ ನಿಂತಿದೆ. ಯಾರೂ ಆತಂಕ ಪಡಬಾರದು ಎಂದು ಸಚಿವ ಬಿ.ನಾಗೇಂದ್ರ ಅವರು ರೈತರಿಗೆ ಮನವರಿಕೆ ಮಾಡಿದರು.

ನಮ್ಮ ಸಿದ್ಧಾಂತವೇ ಬೇರೆ, ಬಿಜೆಪಿಯವರ ಸಿದ್ಧಾಂತವೇ ಬೇರೆ: ಸಚಿವ ಡಿ.ಸುಧಾಕರ್

0

ಚಿತ್ರದುರ್ಗ: ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ  ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಹಾಕಿದಂತೆ. ಹೀಗಾಗಿ ಆ ವಿಚಾರಕ್ಕೆ ನೋ ರಿಯಾಕ್ಷನ್ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಒನಕೆ ಓಬವ್ವ ಜಯಂತಿಯ ಮೆರವಣಿಗೆ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕವಾಗಿರುವುದಕ್ಕೆ ಕೆಲ ಹಿರಿಯ ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ.

ಅವರ ಪಕ್ಷದಲ್ಲಿನ ಅಸಮಾಧಾನ ಅವರ ಆಂತರಿಕ ವಿಚಾರವಾಗಿದೆ. ಹೀಗಾಗಿ ನಾವು ಆ ವಿಚಾರಕ್ಕೆ ಮೂಗು ತೂರಿಸಲ್ಲ ಎಂದರು.

ನಮ್ಮ ಸಿದ್ಧಾಂತವೇ ಬೇರೆ, ಬಿಜೆಪಿಯವರ ಸಿದ್ಧಾಂತವೇ ಬೇರೆಯಾಗಿದ್ದು, ಅವರು ಸಮಾಜ ಒಡೆಯುವ ನೀತಿ ಹೊಂದಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಅವರ ನೇತೃತ್ವದ ಬಿಜೆಪಿ ಅಧಿಕಾರ ಪಡೆಯಲ್ಲ ಎಂದು ಭವಿಷ್ಯ ನುಡಿದರು.

ಹಾಗೆಯೇ ಬಿಜೆಪಿಗೆ ಈವರೆಗೆ ರಾಜ್ಯಾಧ್ಯಕ್ಷರಿಲ್ಲ ಎಂದು ಹೇಳುತ್ತಿದ್ದರು. ಈಗ ನೇಮಕವಾಗಿದೆ. ನಾವು ಎಲ್ಲೂ ಬಿಜೆಪಿಗೆ ಗೇಲಿಮಾಡಿಲ್ಲ. ಆದರೆ ಇಲ್ಲಿಯವರೆಗೂ ವಿರೋಧ ಪಕ್ಷದ ನಾಯಕರೇ ಬಿಜೆಪಿಗೆ ಇಲ್ವಲ್ಲಾ ಎಂದು ವ್ಯಂಗ್ಯವಾಡಿದರು.

ವಿಜಯೇಂದ್ರ ಆಯ್ಕೆಗೆ ತಕ್ಕಂತೆ ನಾವು ರಣ ನೀತಿ ರೂಪಿಸುತ್ತೇವೆ: ಡಾ.ಜಿ ಪರಮೇಶ್ವರ್

0

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ತಕ್ಕಂತೆ ನಾವು ರಣ ನೀತಿ ರೂಪಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷದ ಲೆಕ್ಕಾಚಾರದಲ್ಲಿ ರಾಜ್ಯಾಧ್ಯಕ್ಷರನ್ನು ಮಾಡಿದ್ದಾರೆ. ನಾನು ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ವಿಪಕ್ಷವಾಗಿ ಒಂದಷ್ಟು ಧನಾತ್ಮಕ ವಿಚಾರ ಇಟ್ಟುಕೊಂಡು ನಮಗೆ ಸಲಹೆ ಸೂಚನೆ ಕೊಡಲಿ. ನಾವು ತಪ್ಪು ಮಾಡಿದರೆ ಎತ್ತಿ ಹಿಡಿಯಲಿ ಎಂದಿದ್ದಾರೆ.

ಬೇರೆ ಬೇರೆ ಕ್ಷುಲ್ಲಕ ಕಾರಣಕ್ಕೆ ಮಾತಾಡುವುದು ನಿಂತು ಒಳ್ಳೆಯ ರಾಜಕಾರಣದ ವ್ಯವಸ್ಥೆ ಮಾಡಿಕೊಂಡರೆ ರಾಜ್ಯದಲ್ಲಿ ಒಳ್ಳೆಯದಾಗುತ್ತದೆ. ನಾನು ಅದನ್ನು ನಿರೀಕ್ಷೆ ಮಾಡುತ್ತೇನೆ.

ಮುಂದಿನ ಬೆಳವಣಿಗೆ ಹೇಗೆ ಎಂದು ನೋಡೋಣ ಎಂದಿದ್ದಾರೆ. ಬೇರೆ ಬೇರೆ ಕ್ಷುಲ್ಲಕ ಕಾರಣಕ್ಕೆ ಮಾತಾಡುವುದು ನಿಂತು ಒಳ್ಳೆಯ ರಾಜಕಾರಣದ ವ್ಯವಸ್ಥೆ ಮಾಡಿಕೊಂಡರೆ ರಾಜ್ಯದಲ್ಲಿ ಒಳ್ಳೆಯದಾಗುತ್ತದೆ. ನಾನು ಅದನ್ನು ನಿರೀಕ್ಷೆ ಮಾಡುತ್ತೇನೆ. ಮುಂದಿನ ಬೆಳವಣಿಗೆ ಹೇಗೆ ಎಂದು ನೋಡೋಣ ಎಂದಿದ್ದಾರೆ.

 

ಬಿ.ವೈ. ವಿಜಯೇಂದ್ರ ಆಯ್ಕೆ ಮಾಡಿರುವುದು ಕುಟುಂಬ ರಾಜಕಾರಣ ಅಲ್ವಾ: ಪ್ರಿಯಾಂಕ್ ಖರ್ಗೆ ಪ್ರಶ್ನೆ

0

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಮಾಡಿರುವುದು ಕುಟುಂಬ ರಾಜಕಾರಣ ಅಲ್ವಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಇದು ಬಿ.ಎಲ್.ಸಂತೋಷ್‌ ಅವರಿಗೆ ಸ್ಪಷ್ಟ ಸಂದೇಶ. ಸಂತೋಷ್‌ ಅವರೆ ನಿಮ್ಮ ತಂತ್ರಗಾರಿಕೆಯಿಂದ ನಮಗೆ ಸಂತೋಷ ಆಗಿಲ್ಲ. ಯಡಿಯೂರಪ್ಪ ಅವರಿಗೆ ಪ್ರಮುಖ ಸ್ಥಾನ ಕೊಡ್ತಾ ಇದ್ದೇವೆ. ನೀವು ಏನಿದ್ದರು ಕೇಶವ ಕೃಪದಲ್ಲಿ ಇರಿ ಎಂಬ ಸಂದೇಶ ಎಂದು ಕುಟುಕಿದ್ದಾರೆ.

ವೈಯಕ್ತಿಕವಾಗಿ ನಾನು ಟೀಕೆ ಮಾಡಲ್ಲ. ವಿಜಯೇಂದ್ರ ನನಗಿಂತ ನಾಲ್ಕೈದು ವರ್ಷ ದೊಡ್ಡವರು. ಅವರಿಗೆ ಒಳ್ಳಯದಾಗಲಿ. ಬಿಜೆಪಿ ಇಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಅದಕ್ಕೆ ಜೀವ ತುಂಬುವ ಶಕ್ತಿ ಅವರಿಗೆ ಕೊಡಲಿ.

ಆದರೆ ಸರ್ಜಿಕಲ್ ಸ್ಟ್ರೈಕ್ ಯಾಕೆಂದರೆ, ಸೋಮಣ್ಣ, ಸಿ.ಟಿ.ರವಿ ಟ್ರೈ ಮಾಡ್ತಾ ಇದ್ದರು. ಯಡಿಯೂರಪ್ಪ ರಾಜೀನಾಮೆಗೆ ಅವರ ಸುಪುತ್ರರು ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದ್ದಾರೆ ಎಂದು ಯತ್ನಾಳ್‌ ಹೇಳಿದ್ದರು ಎಂದು ತಿರುಗೇಟು ನೀಡಿದ್ದಾರೆ.

ವಂಚನೆ ಪ್ರಕರಣ: ಜೈಲಿನಿಂದ ಬಿಡುಗಡೆಯಾದ ಅಭಿನವ ಹಾಲಶ್ರೀ!

0

ಬೆಂಗಳೂರು: ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಾಮೀಜಿಗೆ ರಾಜ್ಯ ಹೈಕೋರ್ಟ್‌ ನವೆಂಬರ್‌ 8ರಂದು ಜಾಮೀನು ನೀಡಿತ್ತು. ಇದಾದ ಬಳಿಕ ಶೂರಿಟಿ, ಇಬ್ಬರು ವ್ಯಕ್ತಿಗಳ ಬಾಂಡ್‌ ಸೇರಿದಂತೆ ಹಲವು ಷರತ್ತುಗಳನ್ನು ಪೂರೈಸಿದ ಬಳಿಕ ಶನಿವಾರ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ: ಸತೀಶ್ ಜಾರಕಿಹೊಳಿ

0

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ.

ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಭೇಟಿಯಾದ ಉದ್ದೇಶ ಬೇರೆ. ಅಡ್ಜಸ್ಟ್​ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತಾವೆಂದು ಕಾದುನೋಡೋಣ ಎಂದರು.

ಬಿಎಸ್ʼವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು: ಜಿ.ಟಿ.ದೇವೇಗೌಡ

0

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಬಿಎಸ್ʼ​ವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ವೀರಶೈವ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗಿದ್ದಾರೆ.

BSY, HDK ಒಟ್ಟಾಗಿ ಹೋದ ಕಾರಣಕ್ಕಾಗಿಯೇ ಅಧಿಕಾರ ಸಿಕ್ಕಿದ್ದು. ಇಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು.

ಈಗ ಅದೇ ರೀತಿ BSY ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಾಗಿದೆ. ಮತ್ತೊಂದು ಕಡೆ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ.

ಬಿ.ವೈ.ವಿಜಯೇಂದ್ರ ಯುವ ನಾಯಕ, ಸಮುದಾಯದ ಬೆಂಬಲ ಇದೆ. ಯಡಿಯೂರಪ್ಪ ಸಿಎಂ ಆಗಲು ವಿಜಯೇಂದ್ರ ಚಾಣಾಕ್ಷತನವೂ ಇದೆ. BSY ಮೂಲೆ ಗುಂಪು ಅನ್ನೋ ಕಾರಣಕ್ಕೆ ಬಿಜೆಪಿಗೆ ಹಿನ್ನಡೆಯಾಗಿತ್ತು. ಆದ್ದರಿಂದ ಬಿ.ವೈ.ವಿಜಯೇಂದ್ರ ಆಯ್ಕೆ ಸೂಕ್ತವಾಗಿದೆ ಎಂದರು.

ಸಿನಿಮಾ ಲೋಕಕ್ಕೆ ಕಾಲಿಟ್ಟ ಸಕ್ಕತ್ ಸ್ಟುಡಿಯೋ

0

ಕನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸಕ್ಕತ್ ಸ್ಟುಡಿಯೋ ಟ್ರೆಂಡ್ಸೆಟ್ಟರ್ ಆಗಿರುವುದು ಸುಳ್ಳಲ್ಲಾ.. ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ “ಲೂಸ್ ಕನೆಕ್ಷನ್” ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಇದೇ ಸಂಸ್ಥೆ. ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ ಮತ್ತು ಶ್ವೇತಾ ಆರ್ ಪ್ರಸಾದ್ ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು.

ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ “ಹನಿಮೂನ್”, ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ “ಬೈ ಮಿಸ್ಟೇಕ್” ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ “ಹೇಟ್ ಯು ರೋಮಿಯೋ” ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ ( Voot), ಆಹಾ (Aha ), ಮುಂತಾದ ಒಟಿಟಿ ಪ್ಲಾಟ್‌ಫಾರಂ ಗಳಲ್ಲಿ ನೋಡುಗರ ಗಮನ ಸೆಳೆದಿವೆ.

ಡಿಜಿಟಲ್ ಕ್ಷೇತ್ರದಲ್ಲಿ ಒಂದು ಸ್ಥಾನವನ್ನು ಯಶಸ್ವಿಯಾಗಿಸಿ, ಸಕ್ಕತ್ ಸ್ಟುಡಿಯೋ ಈಗ ಸಿನಿಮಾ ಜಗತ್ತಿಗೆ ಕಾಲಿಡುವ ಮೂಲಕ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ತನ್ನ ಮೊಟ್ಟಮೊದಲ ಚಿತ್ರದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಚಿತ್ರದ ಮಹೂರ್ತಕ್ಕೆ ಆಗಮಿಸಿ ಕ್ಲಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದರು.

ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ “ದಿ ಬೆಸ್ಟ್ ಆಕ್ಟರ್” ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ದಿವಂಗತ ಸಂಚಾರಿ ವಿಜಯ್ ನಟಿಸಿರುವ ‘ಪುಕ್ಸಟ್ಟೆ ಲೈಫ್ “ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಇದೀಗ ಸಕ್ಕತ್ ಸ್ಟುಡಿಯೋದ ಮೊದಲ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಮುಂಬರುವ ವಾರದಲ್ಲಿ ವಿಶಿಷ್ಟ ಶೀರ್ಷಿಕೆ, ಪರಿಕಲ್ಪನೆ ಮತ್ತು ತಾರಾಗಣವನ್ನು ಅನಾವರಣಗೊಳಿಸಲು ಯೋಜಿಸಿದೆ. ಇದು ಒಂದು ಅದ್ಭುತವಾದ ಸಿನಿಮೀಯ ಅನುಭವದ ಭರವಸೆಯನ್ನು ಈ ತಂಡ ನೀಡುತ್ತದೆ. ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ನಿರ್ಮಾಣವಾಗಬೇಕು ಹಾಗು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿರುವ ಪ್ರೇಕ್ಷಕ ವರ್ಗ, ಝೀ5ನ ಒಟಿಟಿ ಕ್ಷೇತ್ರದಲ್ಲಿ ಪ್ರದೀಪ್ ಅವರ ಹಿಂದಿನ ನಾಯಕತ್ವ ಮತ್ತು ಛಾಯಾಗ್ರಹಣ ಮತ್ತು ಕಥೆ ಹೇಳುವಿಕೆಯಲ್ಲಿ ನಾಗರಾಜ್ ಅವರ ಪ್ರಭಾವ, ಸೃಜನಶೀಲ ಮನಸ್ಸುಗಳನ್ನು ಒಳಗೊಂಡಿರುವ ತಂಡವು ನಿಸ್ಸಂದೇಹವಾಗಿ ‘ಸಕ್ಕತ್’ ಕನ್ನಡ ಚಿತ್ರವನ್ನು ಪ್ರೇಕ್ಷಕನಿಗೆ ನೀಡುತ್ತಾರೆಂಬ ಭರವಸೆ ಮೂಡಿಸಿದೆ.

 

error: Content is protected !!