Home Blog Page 3168

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಸಮಾಧಾನ ಮೂಡಿಸುತ್ತಿದ್ದರೆ, ಸಾವು ಆತಂಕ ಮೂಡಿಸುತ್ತಿದೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ಹೇರಿದ್ದರಿಂದಾಗಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತ ಸಾಗುತ್ತಿದೆ. ಆದರೆ, ಮರಣ ಮೃದಂಗ ಮಾತ್ರ ಆತಂಕ ಮೂಡಿಸುತ್ತಿದೆ.
ಇಂದು 22,758 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, 588 ಜನ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 26,399ಕ್ಕೆ ಏರಿಕೆ ಕಂಡಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22,758 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 6,243 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಸೋಂಕಿಗೆ 350 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 38,224 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 20,22,172ಕ್ಕೆ ಏರಿಕೆಯಾಗಿದೆ.

ಮಾಸ್ಕ್ ಧರಿಸದೆ ಕಾರಿನಲ್ಲಿ ಹೊರಟಿದ್ದ ವೈದ್ಯೆಗೆ ಬಿತ್ತು ದಂಡ!

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅನಾವಶ್ಯಕವಾಗಿ ಹೊರಗೆ ಬಂದವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಯಾರು ಎಷ್ಟೇ ದೊಡ್ಡ ವ್ಯಕ್ತಿಯಾದರೂ ಪೊಲೀಸರು ಮಾತ್ರ ದಂಡ ವಿಧಿಸುತ್ತಿದ್ದಾರೆ. ಇಲ್ಲಿಯ ಹಳೆ ಕೋರ್ಟ್ ಸರ್ಕಲ್ ಬಳಿ ಮಾಸ್ಕ್ ಧರಸದೆ ಕಾರಿನಲ್ಲಿ ಪ್ರಯಾಣಿಸುತಿದ್ದ ವೈದ್ಯೆಗೆ ಉಪನಗರ ಠಾಣೆ ಪೊಲೀಸರು ದಂಡ ಹಾಕಿದ್ದಾರೆ.

ಬೆಳಿಗ್ಗೆಯಿಂದಲೇ ಪೊಲೀಸರು ಸಾಕಷ್ಟು ರೀತಿಯ ಕೋವೀಡ್ ಹಾಗೂ ವಿಪತ್ತು ನಿರ್ವಹಣೆ ನಿಯಮ ಪಾಲಿಸದವರ ಮೇಲೆ ಮುಲಾಜಿಲ್ಲದೆ ದಂಡ ಹಾಕುತ್ತಿದ್ದರು. ಆದರೆ, ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕಿದ್ದ ವೈದ್ಯರೇ ಮಾಸ್ಕ್ ಧರಿಸಿರಲಿಲ್ಲ ಹೀಗಾಗಿ ಪೊಲೀಸರು ದಂಡ ಹಾಕಿದ್ದಾರೆ.

ಕಾರಿನಲ್ಲಿ ಹೊರಟ್ಟಿದ್ದ ವೈದ್ಯೆ ಮಾಸ್ಕ್ ಧರಿಸಿರಲಿಲ್ಲ. ಆಗ ಉಪನಗರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರವಿಚಂದ್ರ್ ಬಡಫಕೀರಪ್ಪನವರ ಹಾಗೂ ಪ್ರೋಬಷನೇರಿ ಪಿಎಸ್ ಐ ಉಮೇಶಗೌಡ ಪಾಟೀಲ ದಂಡ ಕಟ್ಟುವಂತೆ ಹೇಳಿದ್ದಾರೆ. ಆ ಸಂದರ್ಭದಲ್ಲಿ ವೈದ್ಯೆ ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಕೊನೆಗೆ ದಂಡದ ರಶೀದಿ ಹರಿದ ಮೇಲೆ ಅನಿವಾರ್ಯವಾಗಿ ದಂಡ ಕಟ್ಟಿ ವೈದ್ಯೆ ತೆರಳಿದ್ದಾರೆ.

ನಗರದ ಹೊಸೂರು ಸರ್ಕಲ್ ಬಳಿಯ ದುರ್ಗಾದೇವಿ ದೇವಸ್ಥಾನದ ಹತ್ತಿರ ಖಾಸಗಿ ಸಂಸ್ಥೆಯ ಮಾರುತಿ ಪಾರ್ಸಲ್ ಸರ್ವಿಸ್ ಲಾರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಲಾರಿ ಚಾಲಕನಿಗೆ ದಂಡ ವಿಧಿಸಲಾಗಿದೆ.

ನೂರಾರು ಕೆಜಿ ಅನ್ನ ಚಲ್ಲಿ ಮೌಢ್ಯ ಮೆರದ ಜನ!

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ರಾಜ್ಯದಲ್ಲಿ ಕೊರೊನಾ ತಾಂಡವಾಡುತ್ತಿದೆ. ಇಲ್ಲಯವರೆಗೆ ನಗರ ಪ್ರದೇಶಗಳಲ್ಲಿ ತನ್ನ ಅಟ್ಟಹಾಸ ಮೆರೆದಿದ್ದ. ಸೋಂಕು ಈಗ ಗ್ರಾಮೀಣ ಭಾಗದಲ್ಲಿ ಕೂಡ ತನ್ನ ಕಬಂಧಬಾಹು ಚಾಚುತ್ತಿದೆ. ಹೀಗಾಗಿ ಸರ್ಕಾರ ಕೊರೊನಾ ಕಟ್ಟಿ ಹಾಕಲು ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇದರ ಮಧ್ಯೆ ಜನರು ಮೌಢ್ಯದ ಮೊರೆ ಹೋಗುತ್ತಿದ್ದಾರೆ.

ಈಗಾಗಲೇ ಹಲವೆಡೆ ಜನರು ದೇವರಿಗೆ ಬಲಿ, ಪೂಜೆ, ಹೋಮ – ಹವನ ನಡೆಸುತ್ತಿದ್ದಾರೆ. ಹಲವೆಡೆ ಊರಿನ ನಾಲ್ಕು ದಿಕ್ಕುಗಳಿಗೂ ಮಂತ್ರಿಸಿದ ತೆಂಗಿನ ಕಾಯಿ ಕಟ್ಟಿದ್ದಾರೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಅನ್ನವನ್ನೇ ಮಣ್ಣುಪಾಲು ಮಾಡಿದ್ದಾರೆ.
ಜಲ್ಲೆಯ ಕಗ್ಗಲ್ಲು ಗ್ರಾಮದಲ್ಲಿ ಈ ರೀತಿಯ ಕಾರ್ಯ ನಡೆದಿದೆ. ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ನೂರಾರು ಕೆಜಿ ಅನ್ನವನ್ನು ಊರ ಹೊರಗೆ ಎಸೆದಿದ್ದಾರೆ. ಪ್ರತಿ ಮನೆಯಿಂದ ಐದು ಕೆಜಿ ಅಕ್ಕಿಯಿಂದ ಅನ್ನ ಮಾಡಿ ಸಂಗ್ರಹಿಸಿ ರಾತ್ರೋ ರಾತ್ರಿ ನೆಲಕ್ಕೆ ಸುರಿದಿದ್ದಾರೆ.

ಈ ರೀತಿಯಾಗಿ ಅನ್ನ ಎಸೆದರೆ ಸಾಂಕ್ರಾಮಿಕ ರೋಗ ಊರಿಗೆ ಬರುವುದಿಲ್ಲ ಎಂಬುವುದು ಗ್ರಾಮಸ್ಥರ ನಂಬಿಕೆಯಾಗಿದೆ. ಸಾಂಕ್ರಾಮಿಕ ರೋಗಗಳು ಬಂದ ಸಂದರ್ಭದಲ್ಲಿ ತಮ್ಮ ಹಿರಿಯರ ಕಾಲದಿಂದಲೂ ಈ ರೀತಿಯ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನ ಯಾವಾಗ? – ಕಾಂಗ್ರೆಸ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದರಲ್ಲಿರುವ ವ್ಯಕ್ತಿ ನಾನೇ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ಬಂಧನ ಯಾವಾಗ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಲೈಂಗಿಕ ಕ್ರಿಯೆ ನಡೆದಿರುವ ದೃಶ್ಯಾವಳಿಗಳನ್ನು ಹೊಂದಿರುವ ಸಿಡಿಯಲ್ಲಿ ಇರುವ ವ್ಯಕ್ತಿ ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ಬಂಧನ ಯಾವಾಗ ಎಂಬುವುದನ್ನು ಸರ್ಕಾರ ತಿಳಿಸಬೇಕಿದೆ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

‘ನಾನವನಲ್ಲ’ ಎಂದವರು ಈಗ ‘ನಾನೇ ಅವನು’ ಎನ್ನುತ್ತಿದ್ದಾರೆ. ಆ ಸಿಡಿ ಅಸಲಿ ಎಂದು ಹೇಳಿರುವ ರಮೇಶ್ ಜಾರಕಿಹೊಳಿ ಅವರು, ಸಿಡಿ ನಕಲಿ ಎಂದು ಹೇಳಿದ್ದೆ? ಎಸ್ ಐಟಿ ರಚನೆ ಮಾಡಿಸಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ಆರೋಪಿ ಒಪ್ಪಿಕೊಂಡಿದ್ದಾಯಿತು. ಇನ್ನಾದರೂ ಸಂತ್ರಸ್ತೆಯ ದೂರಿನ ಮೆರೆಗೆ ಬಂಧಿಸಿ ಕಾನೂನು ಪಾಲಿಸುವಿರಾ? ಇನ್ನಾದರೂ ನಿಮ್ಮ ಪ್ರಾಮಾಣಿಕತೆ ತೋರಿಸಿ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಡಿ ಲೇಡಿ ಕುಟುಂಬಸ್ಥರಿಗೆ ನೊಟೀಸ್ ನೀಡಿದ ಸಿಸಿಬಿ ಪೊಲೀಸರು!

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿಯ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದಾರೆ. ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನಲ್ಲಿ ತಿಳಿಸಿದ್ದಾರೆ.

ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸಿಡಿ ಯುವತಿಯ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಆ ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಹೀಗಾಗಿ ಜಿಲ್ಲೆಯ ನಿಡಗುಂದಿಯಲ್ಲಿರುವ ಯುವತಿ ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ.
ಮೇ. 21ರಂದು ಸಂತ್ರಸ್ತೆ ಕುಟುಂಬಸ್ಥರಿಗೆ ನೊಟೀಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯ್ ಕುಮಾರ್ ಅವರು ಯುವತಿ ಕುಟುಂಬಸ್ಥರಿಗೆ ನೀಡಿದ್ದಾರೆ. ಲಾಕ್ ಡೌನ್ ನಂತರ ವಿಚಾರಣೆಗೆ ಹಾಜರಾಗಬೇಕೆಂದು ನೊಟೀಸ್ ನಲ್ಲಿ ಸೂಚಿಸಲಾಗಿದೆ.

ಇತ್ತೀಚೆಗಷ್ಟೇ ರಮೇಶ್ ಜಾರಕಿಹೊಳಿ ಅವರು ಸಿಡಿಯಲ್ಲಿರುವವನು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.

ಹಳ್ಳಿಗಳಿಗೆ ನುಗ್ಗಿದ ಸೋಂಕು…ಸೋಂಕು ರಹಿತ ಕಾಯಿಲೆಗಳಿಂದ ಸಾಯುತ್ತಿರುವ ಜನ!

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಇಲ್ಲಿಯವರೆಗೆ ನಗರ ಪ್ರದೇಶದಲ್ಲಿ ತನ್ನ ಅಟ್ಟಹಾಸ ಮೆರೆದಿದ್ದ ಮಹಾಮಾರಿ, ಸದ್ಯ ಗ್ರಾಮೀಣ ಭಾಗಕ್ಕೆ ಎಗ್ಗಿಲ್ಲದೆ ಎಂಟ್ರಿ ಕೊಟ್ಟಿದೆ. ಆದರೆ, ಜನರು ಮಾತ್ರ ಆಸ್ಪತ್ರೆಗೆ ಹೋಗದೆ, ಸಾವು – ನೋವುಗಳನ್ನು ತಂದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಹಳ್ಳಿಗಳಲ್ಲಿ ಚಿತ್ರ – ವಿಚಿತ್ರ ಖಾಯಿಲೆಗಳು ಕಾಣಿಸಿಕೊಳ್ಳುತ್ತಿವೆ.

ಜಿಲ್ಲೆಯ ಗೋಕಾಕ್ ಹಾಗೂ ಮೂಡಲಗಿ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 20 ದಿನಗಳಲ್ಲಿ ಕೋವಿಡ್ ಹಾಗೂ ಇನ್ನಿತರ ರೋಗಗಳಿಂದ ಸುಮಾರು 700ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

ಮೂಡಲಗಿ ತಾಲೂಕಿನ ಮುನ್ಯಾಳ, ವಡ್ಡೆರಹಟ್ಟಿ, ರಾಜಾಪುರ, ತುಕ್ಕಾನಟ್ಟಿ ಗ್ರಾಮಗಳಲ್ಲಿಯೇ ಕೇವಲ 15 ದಿನಗಳಲ್ಲಿ ಸುಮಾರು 186 ಜನರು ಸಾವನ್ನಪ್ಪಿದ್ದಾರೆ. ಸರಣಿ ಸಾವಿನಿಂದ ಜನ ಕಂಗಾಲಾಗಿದ್ದಾರೆ.

ಕೊರೊನಾ ಸೇರಿದಂತೆ ಇನ್ನಿತರ ರೋಗಗಳಿಂದ ಜನ ಬಳಲುತ್ತಿದ್ದರೂ ಆಸ್ಪತ್ರೆಗೆ ತೆರಳುತ್ತಿಲ್ಲ. ಹೀಗಾಗಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಲ್ಲದೇ, ಮನೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಘಟನೆಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮನ್ನೇಕೋಟೆ ಗ್ರಾಮದಲ್ಲಿ 25 ದಿನಗಳಲ್ಲಿ ಸುಮಾರು 15 ಜನ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ಕದಡಿ ಗ್ರಾಮದಲ್ಲಿ 10 ದಿನಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದ ಹಳ್ಳಿಗಳಲ್ಲಿನ ಜನ ತುಂಬಾ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಯಾಸ್ ಚಂಡಮಾರುತ – ರಾಜ್ಯದಲ್ಲಿ ಇರಲಿದೆ ಮಳೆರಾಯನ ಅಬ್ಬರ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಯಾಸ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದಿನಿಂದ ಮೇ. 29ರ ವರೆಗೆ ಮಳೆರಾಯನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಈಗ ಯಾಸ್ ಚಂಡಮಾರುತದ ಪರಿಣಾಮ ಬಂಗಾಳ ಕೊಲ್ಲಿಯಲ್ಲಿ ‌ಪ್ರಭಲ ಚಂಡಮಾರುತ ಕಾಣಿಸಿಕೊಂಡಿದೆ.

ಯಾಸ್ ಚಂಡಮಾರುತದಿಂದಾಗಿ ಮೇ. 26ರಂದು ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವ್ಯಾಪಕ ಹಾನಿ ಸಂಭವಿಸುವ ಸಾಧ್ಯತೆ ಇದೆ. ಅಪ್ಪಳಿಸುವ ಸಮಯದಲ್ಲಿ, ಗಾಳಿಯ ವೇಗವು 155 ಕಿ.ಮೀ ನಿಂದ 185 ಕಿ.ಮೀ ವೇಗದಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ರೈತರಿಂದ ಕರಾಳ ದಿನ ಆಚರಣೆ!

ವಿಜಯಸಾಕ್ಷಿ ಸುದ್ದಿ, ಮೈಸೂರು

ರಾಜ್ಯದಲ್ಲಿ ರೈತರ ಹೋರಾಟಕ್ಕೆ ಮತ್ತೆ ಜೀವ ಬಂದಂತಾಗಿದೆ. ಮೇ. 26ರಂದು ರಾಜ್ಯಾದ್ಯಂತ ಕರಾಳ ದಿನಾಚರಣೆಗೆ ಕರೆ ನೀಡಲಾಗಿದೆ. ಈ ಕುರಿತು ಜಿಲ್ಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ರೈತರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಕರಾಳ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ.

ಕರಾಳ ದಿನಾಚರಣೆಯ ಹಿನ್ನೆಲೆಯಲ್ಲಿ ಮೇ. 26ರಂದು ಪ್ರತಿಯೊಬ್ಬರ ರೈತರ ಮನೆಯ ಮೇಲೆ ಕಪ್ಪು ಬಾವುಟ ಹಾರಿಸಬೇಕು. ಅಲ್ಲದೇ, ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ, ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಅಲ್ಲದೇ, ಪ್ರತಿಕೃತಿ ದಹನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು 7 ವರ್ಷಗಳೇ ಕಳೆದಿವೆ. ಆದರೆ, ಇಂತಹ ಕೆಟ್ಟ ಹಾಗೂ ದುಷ್ಟ ಸರ್ಕಾರವನ್ನೇ ಇಲ್ಲಿಯವರೆಗೆ ರೈತ ಸಂಕುಲ ಕಂಡಿಲ್ಲ. ಈ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದು ಅವರು ಕಿಡಿಕಾರಿದ್ದಾರೆ.

ಮುಂದುವರಿದ ಶುಭಸುದ್ದಿ, ಗುಣಮುಖರ ಸಂಖ್ಯೆಯಲ್ಲಿ ಗಣನೀಯ ಏರಿಕೆ, ನಾಲ್ವರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಸೋಂಕು ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗುತ್ತಿದೆ. ನಿನ್ನೆಯಿಂದ ಎರಡು ನೂರರ ಗಡಿ ದಾಟಿದ್ದ ಸೋಂಕಿನ ಸಂಖ್ಯೆ, ಇವತ್ತು ಕೂಡ ಎರಡು ನೂರರ ಗಡಿ ದಾಟಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಹೆಚ್ಚು.

ಇಂದಿನ 259 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 21665 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -93, ಮುಂಡರಗಿ-27, ನರಗುಂದ-31, ರೋಣ-24, ಶಿರಹಟ್ಟಿ-70, ಹೊರಜಿಲ್ಲೆಯ-14 ಸೇರಿದಂತೆ 259 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 222 ಕ್ಕೇರಿದೆ.

ಗದಗ ತಾಲೂಕಿನ ಕಳಸಾಪೂರ ನಿವಾಸಿ
75 ವರ್ಷದ ವ್ಯಕ್ತಿ ಮೇ-14 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 23 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 62 ವರ್ಷದ ವ್ಯಕ್ತಿ ಮೇ -12 ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 24 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಕಳಸಾಪೂರ ನಿವಾಸಿ 68 ವರ್ಷದ ವ್ಯಕ್ತಿ ಮೇ 14 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 24 ರಂದು ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಾಳ ನಿವಾಸಿ 40 ವರ್ಷದ ವ್ಯಕ್ತಿ ಮೇ 16 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 24 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಕೂಡ ದಾಖಲೆಯ 447 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 18388 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 3055 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಚಂದನವನದ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ ಇನ್ನಿಲ್ಲ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಂಗಭೂಮಿ, ಸಿನಿಮಾ ಹಾಗೂ ಧಾರಾವಾಹಿಯ ಹಿರಿಯ ಕಲಾವಿದ ಬಿ.ಎಂ. ಕೃಷ್ಣೇಗೌಡ(80) ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೃಷ್ಣೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ಸೋಂಕಿನಿಂದ ಗುಣಮುಕರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗಿನ ಜಾವ 4.15ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರನ್ನು ಸಾವನ್ನಪ್ಪಿದ್ದಾರೆ. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ತಿಂಗಳು ಕೃಷ್ಣೇಗೌಡರ ಪುತ್ರ ಸತೀಶ್ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.

ಮುಖ್ಯಮಂತ್ರಿ ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿ ಅಭಿನಯಿಸುವ ಮೂಲಕ ಕೃಷ್ಣೇ ಗೌಡ ಅವರು ಖ್ಯಾತಿ ಪಡೆದಿದ್ದರು. ಕನ್ನಡ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರು.
ಹಿರಿಯ ಕಲಾವಿದರನ್ನು ಕಳೆದುಕೊಂಡ ಚಂದನವನ ತಬ್ಬಲಿಯಾದಂತಾಗಿದೆ. ಹೀಗಾಗಿ ಹಲವು ನಟ – ನಟಿಯರು ಇವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

error: Content is protected !!