Home Blog Page 3168

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಯ್ಕೆ: ಶ್ರೀರಾಮುಲು ಹೇಳಿದ್ದೇನು..?

0

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಯ್ಕೆಯಾಗಿರುವುದರಿಂದ ಉಳಿದ ಆಕಾಂಕ್ಷಿಗಳಿಗೆ ನಿರಾಸೆಯಾಗುವುದು ಸಹಜ. ಆದರೆ ಅವರ ಆಯ್ಕೆಯಿಂದ ನಮಗೂ ಖುಷಿ ಇದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ.

ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ನಮಗೂ ಖುಷಿಯಾಗಿದೆ. ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ ಎಂದಿದ್ದಾರೆ.

ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಮೆಜೆಸ್ಟಿಕ್: ದೀಪಾವಳಿ ಹಬ್ಬಕ್ಕೆ ತೆರಳಲು ಮೆಜೆಸ್ಟಿಕ್‌ನತ್ತ ಪ್ರಯಾಣಿಕರ ದಂಡು

0

ಬೆಂಗಳೂರು:- ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಊರಿಗೆ ತೆರಳಲು ಪ್ರಯಾಣಿಕರು ಮುಂದಾಗಿದ್ದಾರೆ. ಇಂದೂ ಸಹ ಮೆಜೆಸ್ಟಿಕ್ ಕಡೆ ಪ್ರಯಾಣಿಕರ ದಂಡು ಅಗಮಿಸಿದೆ.

ರಾತ್ರಿ ಬಸ್ ಸಿಗದವರು ಸೀಟ್ ರಿಸರ್ವ್ ಮಾಡದವರು, ಬೆಳಗ್ಗೆ ತಮ್ಮೂರಿಗೆ ಕಡೆ ಪ್ರಯಾಣ ಮಾಡಲು ಆಗಮಿಸಿದ್ದಾರೆ.

ಬೆಳಗ್ಗೆಯಿಂದ ನೂರಕ್ಕೂ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ. ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ KSRTC ಹೆಚ್ಚುವರಿ ಬಸ್ ಬಿಡುತ್ತಿದೆ. ಬಳ್ಳಾರಿ, ಹುಬ್ಬಳ್ಳಿ, ದಾವಣಗೆರೆ, ಗುಲಬರ್ಗಾ, ಶಿವಮೊಗ್ಗ ಕಡೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ: ಸಿಟಿ ರವಿ ಅಸಮಾಧಾನ

0

ಬೆಂಗಳೂರು:- ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಯಡಿಯೂರಪ್ಪರ ಪುತ್ರ ಬಿವೈ ವಿಜಯೇಂದ್ರ ಆಯ್ಕೆ ಹಿನ್ನೆಲೆ ಮಾಜಿ ಶಾಸಕ ಸಿಟಿ ರವಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಮಧ್ಯಪ್ರದೇಶದಿಂದ ಕೆಂಪೇಗೌಡ ಏರ್ಪೋಟ್ ನಲ್ಲಿ ಬಂದಿಳಿದ ಬಳಿಕ ಮಾತನಾಡಿದ ಅವರು, ಪಕ್ಷ ನೇಮಕ ಮಾಡಿದೆ ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28 ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಬದಲಾಗದೆ ಇರೋದು ಕಾರ್ಯಕರ್ತ ಅನ್ನೂದು ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಎಂದರು.

ಇನ್ನೂ ನೂತನ ಅಧ್ಯಕ್ಷನ ಆಯ್ಕೆ ಬಗ್ಗೆ ಕಾಂಗ್ರೇಸ್ ಟ್ವಿಟ್ ವಿಚಾರವಾಗಿ ಮಾತನಾಡಿ, ಅಸಮಾಧಾನ ಬಗ್ಗೆ ಈಗ ನಾನು ಏನು ಮಾತನಾಡಲ್ಲ ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ.

ಬೂತ್ ಅಧ್ಯಕ್ಷನಿಂದ ರಾಷ್ಟ್ರಿಯಾ ಪ್ರಧಾನ ಕಾರ್ಯದರ್ಶಿ ವರೆಗೂ ಜವಬ್ದಾರಿ ನಿರ್ವಹಿಸಿದ್ದೀನಿ. ಈಗಾಗಲೆ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ ಎಂದು ಅಸಮಾಧಾನ ಹೊರ ಹಾಕಿ ತಲೆ ಮೇಲೆ‌ ಕೈಯಿಟ್ಟುಕೊಂಡು ಸಿಟಿ ರವಿ ಹೊರಟಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕನ್ನಡ ಬಾವುಟಕ್ಕಾಗಿ ‘ಎಕ್ಸ್’ ಅಭಿಯಾನ

0

ಬೆಂಗಳೂರು:- ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಇಂದು ಸಂಜೆ 5 ಗಂಟೆಯಿಂದ ‘ಎಕ್ಸ್’ ಅಭಿಯಾನ ಹಮ್ಮಿಕೊಂಡಿದೆ.

‘#ಕನ್ನಡಬಾವುಟ_ನಮ್ಮಗುರುತು’, ‘#KannadaFlag_MyPride’ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಈ ಅಭಿಯಾನ ನಡೆಯಲಿದೆ. ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಈ ಪ್ರಸ್ತಾವನೆಯನ್ನು ಅಂಗೀಕರಿಸಬೇಕೆಂದು ‘ಎಕ್ಸ್‌’ ಅಭಿಯಾನದ ಮೂಲಕ ಒತ್ತಾಯಿಸಲಾಗುವುದು ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

‘ಕನ್ನಡಿಗರಿಗೆ ಕನ್ನಡ ಬಾವುಟ ಮೊದಲ ಗುರುತು. ಭಾರತ ಒಕ್ಕೂಟದ ಭಾಗವಾಗಿ ನಮ್ಮದೇ ಆದ ಬಾವುಟವೊಂದನ್ನು ಹೊಂದುವುದಕ್ಕೆ ಅವಕಾಶ ಇರಬೇಕು‌.

ಈಗಾಗಲೇ ಕೋಟ್ಯಂತರ ಕನ್ನಡಿಗರು ಕನ್ನಡ ಬಾವುಟವನ್ನು ಆರಾಧಿಸುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರ ಕೂಡಲೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು’ ಎಂದು ‍ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಇರಲಿದೆ: ಜಗದೀಶ್ ಶೆಟ್ಟರ್

0

ಹುಬ್ಬಳ್ಳಿ: ಬಿಜೆಪಿಯವರು ಸಾಕಷ್ಟು ಭ್ರಮೆಯಲ್ಲಿದ್ದಾರೆ, ಈಗಾಗಲೇ ಬೇರೆ ಕಡೆ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50-60 ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಮಾಡುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಿಂದೆ ಏನೆ ಕಾರಣ ಇರಲಿ, ಅದಕ್ಕೆ ಜನ ಉತ್ತರ ನೀಡುತ್ತಾರೆ. ಈಗ ಸಿದ್ದರಾಮಯ್ಯ ಮುಖ್ಯ ಮಂತ್ರಿ ಇದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾರೋ ಮಾತನಾಡುತ್ತಾರೆ ಅಂತಾ ಚರ್ಚೆ ಮಾಡುವುದು ಸರಿಯಲ್ಲಾ. ಅದು ಬರೀ ಚರ್ಚೆ ಆಗುತ್ತೆ.

ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಇರಲಿದೆ ಎಂದು ಶೆಟ್ಟರ್‌ ಹೇಳಿದರು. ಇನ್ನೂ ವಿಜಯೇಂದ್ರ ರಾಜಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಗ್ಗೆ ಮಾತನಾಡಿದ ಶೆಟ್ಟರ್‌, ಇವಗ್ಯಾಕೆ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಆಯ್ತು, ಏನೋ ಅತ್ತು ಕರೆದು ಮಾಡಿರೋ ತರಹ ಕಾಣತ್ತೆ ಎಂದು ವ್ಯಂಗ್ಯವಾಡಿದರು.

ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ, ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಆದ್ರೆ ಇವಗ್ಯಾಕೆ ಆಯ್ಕೆ ಮಾಡಿದ್ರು? ಬಿಜೆಪಿ ಫೇಲ್ ಆಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಇಂದು ಕೋಲಾರಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ

0

ಕೋಲಾರ: ಕೋಲಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಯರಗೋಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಲಿದ್ದಾರೆ.

HAL ನಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.30 ಕ್ಕೆ ಯರಗೋಳ್ ಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರಿಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಕೃಷ್ಣಬೈರೇಗೌಡ, ಕೆಹೆಚ್ ಮುನಿಯಪ್ಪ ಹಾಗೂ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ.

ಅದರಂತೆ ಯರಗೋಳ್ ಡ್ಯಾ. ಪಕ್ಕದಲ್ಲಿಯೇ ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಳಿಸಿದ್ದು ಸುಮಾರು 15 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

ಜೊತೆಗೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೂ ಬಂಗಾರಪೇಟೆ, ಕೋಲಾರ, ಮಾಲೂರು ಹಾಗೂ ಮಾರ್ಗ ಮಧ್ಯೆಯ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದ್ದು, 2006 ರಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಯರಗೋಳ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು‌ .

ನಂತರ ಯೋಜನೆ ನೆನೆಗುದಿಗೆ ಬಿದ್ದಿದ್ದು ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ 2013 ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯೋಜನೆಯನ್ನ ಕೈಗೆತ್ತಿಕೊಂಡಿದ್ದು ಇದೀಗ 17 ವರ್ಷಗಳ ನಂತರ ಯರಗೋಳ್ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡಿದೆ.

ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ

0

ಕೋಲಾರ:- ಕಾಂಗ್ರೆಸ್ ನ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಳೆದ ವೆಂಕಟೇಶಪ್ಪ ಅವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ನಗರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಲದೆ ವೆಂಕಟೇಶಪ್ಪ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಿ.ವೆಂಕಟೇಶಪ್ಪ ಅವರು 1978,1983, 1999 ರಲ್ಲಿ ಶಾಸಕರಾಗಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. ಸಿ.ವೆಂಕಟೇಶಪ್ಪ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬುವನಹಳ್ಳಿ ಗ್ರಾಮದವರಾಗಿದ್ದಾರೆ. ಮೃತರ ಪಾರ್ಥೀವ ಶರೀರ ಸ್ವಗ್ರಾಮ ರವಾನೆ ಮಾಡಲಾಗಿದೆ. ಸಿ.ವೆಂಕಟೇಶಪ್ಪ ಅವರು ಆಗಿನ ಬೇತಮಂಗಲ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವೆಂಕಟೇಶಪ್ಪ ಅಪಾರ ಅಭಿಮಾನಿಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ- ವ್ಯಂಗ್ಯಭರಿತ ವಿಷ್ ಮಾಡಿದ ಕಾಂಗ್ರೆಸ್

0

ಬೆಂಗಳೂರು:- ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ವಿಜಯೇಂದ್ರ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಕಾಂಗ್ರೆಸ್​ ಘಟಕ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ಟೀಕಿಸಿದೆ. ಯಡಿಯೂರಪ್ಪನವರ ಮಗ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ.

ಇತ್ತ ರಾಜ್ಯ ಕಾಂಗ್ರೆಸ್​ ಘಟಕದ ಟ್ವೀಟ್​ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದ್ದು, ದಶಕಗಳಿಂದ ಒಂದು ಕುಟುಂಬಕ್ಕೆ ಜೀತ ಮಾಡುತ್ತಿರುವ ಪಕ್ಷದ ರಾಜ್ಯ ಘಟಕವೊಂದು ಈ ಮಾತು ಆಡುತ್ತಿರುವುದನ್ನೂ ನಂಬಬೇಕು ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.

KEA ಪರೀಕ್ಷೆ ಅಕ್ರಮ ಕೇಸ್: RD ಬಂಧನ, ಕಾನೂನು ಪ್ರಕ್ರಿಯೆಗೆ ಖಾಕಿ ಸಿದ್ಧತೆ

0

ಕಲಬುರಗಿ:- ಕಲಬುರ್ಗಿಯಲ್ಲಿ ನಡೆದಂತಹ KEA ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಬಂಧಿಸಿದ್ದೂ ಆಯ್ತು ಮಹಾರಾಷ್ಟ್ರದಿಂದ ಕಲಬುರಗಿಗೆ ಕರೆತಂದಿದ್ದೂ ಆಯ್ತು..

ಇದೀಗ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಅಶೋಕ ನಗರ ಪೋಲೀಸರು ಸಿದ್ಧತೆ ನಡೆಸಿದ್ದಾರೆ. ಇದೆಲ್ಲದರ ಜೊತೆಗೆ ಸ್ಪಾಟ್ ಮಹಜರು ಮತ್ತು ಮೆಡಿಕಲ್ ಚಕಪ್ ಮಾಡಿಸಲು ತಯಾರು ಮಾಡಿಕೊಂಡಿದ್ದಾರೆ. ಹೀಗೆ ಹಂತ ಹಂತವಾಗಿ ಎಲ್ಲವೂ ಅಂದುಕೊಂಡಂತೆ ಆದ್ರೆ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಬಲೆಗೆ ಬೀಳುವ ಸಾಧ್ಯತೆಗಳಿವೆ..

ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ – ಚಾಮರಾಜನಗರದಲ್ಲಿ ಕಾರ್ಯಕರ್ತರ ಸಂಭ್ರಮ

0

ಚಾಮರಾಜನಗರ:- ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದಲ್ಲಿ ಪಟಾಕಿ ಸಿಡಿಸಿ,ಸಿಹಿ ವಿತರಿಸಿ ಸಂಭ್ರಮಿಸಿದ್ದಾರೆ. ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮೂಡ್ಲೂಪುರ ನಂದೀಶ್ ನೇತೃತ್ವದಲ್ಲಿ ಅಭಿಮಾನಿಗಳಿಂದ ಸಂಭ್ರಮ ಮನೆ ಮಾಡಿದೆ.

ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪಗೆ ಜೈಕಾರ ಘೋಷಣೆ ಮೊಳಗಿದೆ. ಮಾಜಿ ಸಿ.ಎಂ.ಬಿಸವೈ ಹಾಗೂ ವಿಜಯೇಂದ್ರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ

error: Content is protected !!