ಮರಾಠಿ ನಟಿ ಸೋನಾಲಿ ಕುಲಕರ್ಣಿ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿ ಅವರ ತಂದೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಹಾರಾಷ್ಟ್ರದ ಪುಣೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಟಿ ಸೋನಾಲಿ ಕುಲಕರ್ಣಿ ಅವರ ಅಪಾರ್ಟ್ ಮೆಂಟ್ ನಲ್ಲಿ ದರೋಡೆ ಮಾಡಲು ಆ ದುಷ್ಕರ್ಮಿ ಯತ್ನಿಸಿದ್ದಾನೆ. ಅಪಾರ್ಟ್ ಮೆಂಟ್ ನ ಮೇಲ್ಛಾವಣಿ ಮೂಲಕ ಆತ ಮನೆಯೊಳಗೆ ನುಗ್ಗಿದ್ದಾನೆ. ಇದನ್ನು ಗಮನಿಸಿದ ನಟಿಯ ತಂದೆ ಆ ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ದುಷ್ಕರ್ಮಿ ಚಾಕುವಿನಿದಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ನಟಿಯ ತಂದೆಗೆ ಗಾಯಗಳಾಗಿವೆ. ಮನೆಯವರ ಕೂಗಾಟ ಕಂಡು ಅಕ್ಕಪಕ್ಕದವರು ಓಡಿ ಬಂದು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನನ್ನು 28 ವರ್ಷದ ಅಜಯ್ ಶೆಗ್ಟೆ ಎಂದು ಗುರುತಿಸಲಾಗಿದೆ. ಆದರೆ, ಈ ವ್ಯಕ್ತಿ ನಾನು ಸೋನಾಲಿ ಅವರ ಅಭಿಮಾನಿ ಎಂದು ಹೇಳಿದ್ದಾನೆ.
ಬಿಜೆಪಿ ಕಾರ್ಯಕರ್ತನ ಬೈಕ್ ತಡೆದಿದ್ದಕ್ಕೆ ಅಮಾನತಾಗಿದ್ದ ಬೆಟಗೇರಿ ಠಾಣೆಯ ಮಹಿಳಾ ಎಎಸ್ಐ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಮೇ 17ರಂದು ಬೆಟಗೇರಿಯ ಟಿಂಗಿನಕಾಯಿ ಬಜಾರ್‌ನಲ್ಲಿ ಲಾಕ್ ಡೌನ್ ಇದ್ದರೂ ಬೈಕ್‌ನಲ್ಲಿ ಬಂದಿದ್ದ ಅಬ್ಬಿಗೇರಿ ಗ್ರಾಮದ ಬಿಜೆಪಿ ಕಾರ್ಯಕರ್ತನನ್ನು ಕರ್ತವ್ಯದಲ್ಲಿ ಇದ್ದ ಮಹಿಳಾ ಎಎಸ್ಐ ಎನ್.ಸಿ. ಮೂಲಿಮನಿ ತಡೆದಿದ್ದರು.
ಬೈಕ್ ತಡೆದಿದ್ದೇ ದೊಡ್ಡ ಅಪರಾಧ ಎಂಬಂತೆ ಬಡಪಾಯಿ ಮಹಿಳಾ ಎಎಸ್ಐ ಮೇ 18ರಂದು ಅಮಾನತಾಗಿದ್ದರು. ತಾನಾಯಿತು, ತಮ್ಮ ಕರ್ತವ್ಯವಾಯಿತು ಎಂದು ಯಾರ ಮುಲಾಜಿಗೂ ಬಗ್ಗದೆ ಇಡೀ ಠಾಣೆಯ ಸಿಬ್ಬಂದಿಗೆ ಅಚ್ಚುಮೆಚ್ಚಿನವರಾಗಿದ್ದ ಮೂಲಿಮನಿ ಅವರನ್ನು ಅಮಾನತು ಮಾಡಿರುವುದರಿಂದ ಅನೇಕ ಪೊಲೀಸರು, ಅಧಿಕಾರಿಗಳಿಗೆ ದಿಗ್ಬ್ರಮೆ ಆಗಿತ್ತು. ಸೀದಾ ಸಾದಾ ನೌಕರಿ ಮಾಡೋರಿಗೆ ಈ ರೀತಿ ಆದ್ರೆ ನಮ್ಮಂಥವರ ಪರಿಸ್ಥಿತಿ ಹೇಗೆ ಎಂದು ಆತಂಕಕ್ಕೆ ಒಳಗಾಗಿದ್ದರು.
`ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್, ಶಾಸಕರೇ ಇದು ಸರೀನಾ?’ ಎಂಬ ಶಿರೋನಾಮೆಯಲ್ಲಿ ವಿಜಯಸಾಕ್ಷಿ ವೆಬ್ ಪೋರ್ಟಲ್ ನಲ್ಲಿ ಮೇ-21 ರ ಮುಂಜಾನೆ 9 ಗಂಟಿಗೆ ಸುದ್ದಿ ಬಿತ್ತರಿಸಲಾಗಿತ್ತು. ಇದನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಮೇ 21ರ ಮುಂಜಾನೆ 11 ಗಂಟೆ ಸುಮಾರಿಗೆ ಸಸ್ಪೆಂಡ್ ಆಗಿದ್ದ ಮಹಿಳಾ ಎಎಸ್ಐ ಎನ್ ಸಿ ಮೂಲಿಮನಿ ಅವರಿಂದ ಅಮಾನತು ಆದೇಶ ಹಿಂಪಡೆಯಲು ಮನವಿ ಸ್ವೀಕರಿಸಿದ್ದರು.
ಸೌಮ್ಯ ಸ್ವಭಾವದ ಎಸ್ಪಿ ಯತೀಶ್ ಎನ್. ಅವರು ವಿಚಾರಣೆಯನ್ನು ಬಾಕಿ ಇರಿಸಿ ಅಮಾನತು ಆದೇಶ ರದ್ದು ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೋಮವಾರ ಮೇ 24ರಂದು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನ ಬೈಕ್ ತಡೆದಿದ್ದಕ್ಕೆ ಅಮಾನತಾಗಿದ್ದ ಬೆಟಗೇರಿ ಠಾಣೆಯ ಮಹಿಳಾ ಎಎಸ್ಐ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ.
ಮೇ 17ರಂದು ಬೆಟಗೇರಿಯ ಟಿಂಗಿನಕಾಯಿ ಬಜಾರ್‌ನಲ್ಲಿ ಲಾಕ್ ಡೌನ್ ಇದ್ದರೂ ಬೈಕ್‌ನಲ್ಲಿ ಬಂದಿದ್ದ ಅಬ್ಬಿಗೇರಿ ಗ್ರಾಮದ ಬಿಜೆಪಿ ಕಾರ್ಯಕರ್ತನನ್ನು ಕರ್ತವ್ಯದಲ್ಲಿ ಇದ್ದ ಮಹಿಳಾ ಎಎಸ್ಐ ಎನ್.ಸಿ. ಮೂಲಿಮನಿ ತಡೆದಿದ್ದರು.
ತಡೆದಿದ್ದೇ ದೊಡ್ಡ ಅಪರಾಧ ಎಂಬಂತೆ ಬಡಪಾಯಿ ಮಹಿಳಾ ಎಎಸ್ಐ ಮೇ 18ರಂದು ಅಮಾನತಾಗಿದ್ದರು. ತಾನಾಯಿತು, ತಮ್ಮ ಕರ್ತವ್ಯವಾಯಿತು ಎಂದು ಯಾರ ಮುಲಾಜಿಗೂ ಬಗ್ಗದೆ ಇಡೀ ಠಾಣೆಯ ಸಿಬ್ಬಂದಿಗೆ ಅಚ್ಚುಮೆಚ್ಚಿನವರಾಗಿದ್ದ ಮೂಲಿಮನಿ ಅವರನ್ನು ಅಮಾನತು ಮಾಡಿರುವುದರಿಂದ ಅನೇಕ ಪೊಲೀಸರು, ಅಧಿಕಾರಿಗಳಿಗೆ ದಿಗ್ಬ್ರಮೆ ಆಗಿತ್ತು. ಸೀದಾ ಸಾದಾ ನೌಕರಿ ಮಾಡೋರಿಗೆ ಈ ರೀತಿ ಆದ್ರೆ ನಮ್ಮಂಥವರ ಪರಿಸ್ಥಿತಿ ಹೇಗೆ ಎಂದು ಆತಂಕಕ್ಕೆ ಒಳಗಾಗಿದ್ದರು.
`ಕಾರ್ಯಕರ್ತನ ಬೈಕ್ ತಡೆದ ಮಹಿಳಾ ಎಎಸ್ಐ ಸಸ್ಪೆಂಡ್, ಶಾಸಕರೇ ಇದು ಸರೀನಾ?’ ಎಂಬ ಶಿರೋನಾಮೆಯಲ್ಲಿ ವಿಜಯಸಾಕ್ಷಿ ವೆಬ್ ಪೋರ್ಟಲ್ ನಲ್ಲಿ ಮೇ-21 ರ ಮುಂಜಾನೆ 9 ಗಂಟಿಗೆ ಸುದ್ದಿ ಬಿತ್ತರಿಸಲಾಗಿತ್ತು. ಇದನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಮೇ 21ರ ಮುಂಜಾನೆ 11 ಗಂಟೆ ಸುಮಾರಿಗೆ ಸಸ್ಪೆಂಡ್ ಆಗಿದ್ದ ಮಹಿಳಾ ಎಎಸ್ಐ ಎನ್ ಸಿ ಮೂಲಿಮನಿ ಅವರಿಂದ ಅಮಾನತು ಆದೇಶ ಹಿಂಪಡೆಯಲು ಮನವಿ ಸ್ವೀಕರಿಸಿದ್ದರು.
ಸೌಮ್ಯ ಸ್ವಭಾವದ ಎಸ್ಪಿ ಯತೀಶ್ ಎನ್. ಅವರು ವಿಚಾರಣೆಯನ್ನು ಬಾಕಿ ಇರಿಸಿ ಅಮಾನತು ಆದೇಶ ರದ್ದು ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೋಮವಾರ ಮೇ 24ರಂದು ಆದೇಶ ಹೊರಡಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 4 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಅರ್ಜಿಗಳನ್ನು ಮೇ. 25 ರಿಂದ ಜೂನ್ 25ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು.
ಅಭ್ಯರ್ಥಿಗಳು ಪಿಯುಸಿ, 10+2, ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಹಾಗೂ ಬುಡಕಟ್ಟು ಜನಾಂಗ, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ. 400 ಹಾಗೂ ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು ರೂ. 200 ಅರ್ಜಿ ಶುಲ್ಕವನ್ನು ಕಟ್ಟಬೇಕು. ಅರ್ಜಿ ಶುಲ್ಕ ಪಾವತಿಸಲು ಜೂನ್ 28 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಬಹುದು.
ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಚಿವ ಪಾಟೀಲ್, ಮೇ27 ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಮಂಗಳವಾರ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ಮಾಡಲಾಗುವುದು ಎಂದು ಸಿ ಸಿ ಪಾಟೀಲ್ ಹೇಳಿದರು.
ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವರು, ಜನರು ಸಹಕಾರ ನೀಡಬೇಕು. ಅಂದಾಗ ಮಾತ್ರ ಕೊರೊನಾ ಸೋಂಕು ನಿಯಂತ್ರಣ ಮಾಡಲು ಸಾಧ್ಯ ಎಂದರು.
ಕಠಿಣ ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ, ಹಣ್ಣು, ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು ಎಂದರಲ್ಲದೇ ಎಲ್ಲಾ ಬಗೆಯ ಮಾರುಕಟ್ಟೆಗಳ ಬಂದ್ ಇರಲಿವೆ ಎಂದು ಸ್ಪಷ್ಟ ಪಡಿಸಿದರು.
ತಳ್ಳುಗಾಡಿವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ವ್ಯಾಪಾರ ಮಾಡಬೇಕು, ಜನರೂ ಸಹ ಮಾಸ್ಕ್ ಧರಿಸಿಯೇ ವ್ಯಾಪಾರ ಮಾಡಬೇಕು ಎಂದರು.
ಹಾಲು ಮಾರಾಟ ಪ್ರತಿದಿನ ಬೆಳಿಗ್ಗೆ 8 ಗಂಟೆಯವರೆಗೆ ಅವಕಾಶವಿದ್ದು, ಕಿರಾಣಿ ಸಾಮಾನುಗಳಿಗೆ ಹೋಂ ಡಿಲೆವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದರು.
ರೈತರು ರೈತಾಪಿ ವಸ್ತುಗಳನ್ನು ಖರೀದಿ ಮಾಡಲು ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶವಿದೆ. ನಗರ ಹಾಗೂ ಹಳ್ಳಿಗಳಲ್ಲಿಯೂ ಸಹ ಎಲ್ಲಾ ಬಗೆಯ ಹೋಟೆಲ್ ಗಳೂ ಬಂದ್ ಇರಲಿವೆ.
ಹೊಟೇಲ್, ಇದ್ದರೆ ಗ್ರಾಮಾಂತರ ಪ್ರದೇಶದಲ್ಲಿ ಪಿಡಿಒ ಹಾಗೂ ತಲಾಟೆ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದ ಸಚಿವ ಪಾಟೀಲ್,
ಬಾರ್ ಹಾಗೂ ವೈನ್ ಶಾಪ್ ಗೂ ಸಹ 1 ನೇ ತಾರೀಖಿನವರೆಗೂ ಬಂದ್ ಇರಲಿವೆ ಎಂದರು. ಮಾಂಸದಂಗಡಿಗಳೂ ಕೂಡ ಬಂದ್ ಇರಲಿವೆ ಎಂದು ಸಚಿವ ಸಿ ಸಿ ಪಾಟೀಲ್ ಹೇಳಿದರು.
ಅಂಚೆ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಕದ ಹಾಕಿಕೊಂಡು ಕಚೇರಿಯಲ್ಲಿ ಕೆಲಸ ಮಾಡಲು ಅವಕಾಶ ಇದೆ. ಜನರಿಗೆ ಡಿಪಾಸಿಟ್ ಹಾಗೂ ಹಣ ತೆಗೆಯಲು ಅವಕಾಶವಿಲ್ಲ.
ಲಸಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಸಚಿವ ಪಾಟೀಲ್, ಕೋವ್ಯಾಕ್ಸಿನ್ ಎರಡನೇ ಡೋಸ್ ಗೆ ಮಾತ್ರ ಅವಕಾಶವಿದೆ. ಕೋವಿಶೀಲ್ಡ್ ಗೆ 12 ರಿಂದ 16 ವಾರವಾಗಿದ್ದರೆ ಎರಡನೇ ಡೋಸ್ ಗೆ ಅವಕಾಶವಿದೆ ಎಂದರು.
ಅನಾವಶ್ಯಕವಾಗಿ ವಾಹನಗಳು ಬಂದರೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ.
ಮದುವೆ ಸೇರಿದಂತೆ ಎಲ್ಲಾ ಬಗೆಯ ಶುಭ ಕಾರ್ಯಗಳಿಗೂ ಕಡಿವಾಣ ಹಾಕಲಾಗಿದೆ. ಪೂರ್ವ ನಿಗದಿತ ಮದುವೆಗೆಳಿಗೆ ಷರತ್ತಿಗೊಳಪಟ್ಟು ಅನುಮತಿ ನೀಡಲಾಗುವುದು ಎಂದರು.
ಅಕ್ಕಪಕ್ಕದ ಜಿಲ್ಲೆಗಳಿಂದ ಜನರು ಬರುತ್ತಿರುವ ಹಿನ್ನೆಲೆ ಕೊರೊನಾ ಹೆಚ್ಚಳ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಸದ್ಯಕ್ಕೆ ಜಿಲ್ಲೆಯಲ್ಲಿ ಕೊರೊನಾ ತಹಬದಿಗೆ ಬರುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮದ ಅಂಗವಾಗಿ ಲಾಕ್ ಡೌನ್ ಮಾಡಲು ಉದ್ದೇಶಿಸಿಲಾಗಿದೆ ಎಂದರು.
ಸಾಲದ ವಿಚಾರವಾಗಿ ಮಡದಿಯೊಂದಿಗೆ ಜಗಳ ಮಾಡಿದ ಪತಿರಾಯ ತಡರಾತ್ರಿ ನೇಣಿಗೆ ಶರಣಾದ ಘಟನೆ ಬೇಪಾರಿ ಪ್ಲಾಟ್ ನಲ್ಲಿ ನಡೆದಿದೆ.
ಅಮೀರ್ ಮಹಮ್ಮದ್ ಅಲಿ ಮನಿಯಾರ್ (28) ನೇಣಿಗೆ ಶರಣಾದ ವ್ಯಕ್ತಿ.
ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ಕುರಿತು ಜಗಳ ಮಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ.
ಆದ್ರೆ ಇದು ಆತ್ಮಹತ್ಯೆಯೋ ಅಥವಾ ಘಟನೆಗೆ ಬೇರೆ ಏನಾದರೂ ಕಾರಣವಿರಬಹುದೇ ಎಂಬುದನ್ನು ಪೊಲೀಸರ ತನಿಖೆಯಿಂದಲೇ ಹೊರಬೀಳಬೇಕಿದೆ. ಘಟನೆಯ ಸುದ್ದಿ ತಿಳಿದು ಸ ಹಳೆಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿನ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿದ್ದ ವೃದ್ಧೆಯೊಬ್ಬರನ್ನು ಆಂಬುಲೆನ್ಸ್ ಚಾಲಕ ನಡು ರಸ್ತೆಯಲ್ಲಿಯೇ ಬಿಟ್ಟು ಹೋದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸೋಮವಾರಪೇಟೆ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ 60 ವರ್ಷದ ಪೊನ್ನಮ್ಮ ಎಂಬುವವರು ಉಸಿರಾಟದ ತೊಂದರೆಯಿಂದಾಗಿ ಮೇ. 15ರಂದು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಗುಣಮುಖರಾಗಿದ್ದರು. ಆ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.
ಆದರೆ, ಪೊನ್ನಮ್ಮ ಅವರನ್ನು ಕರೆತಂದ ಆಂಬುಲೆನ್ಸ್ ಚಾಲಕ ಮಾತ್ರ ಅವರನ್ನು ಮನೆಯವರೆಗೆ ಬಿಡದೆ ಐಗೂರು ಜಂಕ್ಷನ್ನರಲ್ಲಿ ಬಿಟ್ಟು ತೆರಳಿದ್ದಾನೆ. ಅಲ್ಲಿಂದ ವೃದ್ಧೆಯ ಮನೆ 2 ಕಿ.ಮೀ ದೂರವಿದೆ. ಅನಿವಾರ್ಯವಾಗಿ ವೃದ್ಧೆ ನಡೆದುಕೊಂಡೆ ತೆರಳಿದ್ದಾರೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಹಾಗೂ ಸಂಜೆ ಹೊತ್ತು ಆಗಿದ್ದರಿಂದಾಗಿ ಈ ರಸ್ತೆಯಲ್ಲಿ ಯಾವುದೇ ಜನ ಸಂಚಾರ ಇರಲಿಲ್ಲ. ಇಲ್ಲಿ ಸಂಜೆ ಹೊತ್ತು ಕಾಡಾನೆಗಳ ಭಯ ಕೂಡ ಇರುತ್ತದೆ. ಒಂದು ವೇಳೆ ವೃದ್ಧೆ ಭಯದಿಂದ ಹಾಗೂ ಅಸ್ವಸ್ಥತೆಯಿಂದ ನಿತ್ರಾಣಗೊಂಡರೆ ಯಾರು ಹೊಣೆ? ಅಲ್ಲದೇ, ಆಸ್ಪತ್ರೆಯಿಂದ ಬಿಡುಗಡೆಯಾದ ಕುರಿತು ಕೂಡ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೊರೊನಾದಿಂದಾಗಿ ವೃದ್ಧರು, ಮಹಿಳೆಯರು, ಯುವತಿಯರು, ಮಕ್ಕಳು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಅವರನ್ನು ದಾರಿ ಮಧ್ಯೆ ಹೀಗೆ ಬಿಟ್ಟು ಹೋದರೆ ಏನು ಮಾಡುವುದು? ಆಸ್ಪತ್ರೆಗಳಿಗೆ ಹಾಗೂ ಚಾಲಕರಿಗೆ ಪರಿಜ್ಞಾನವಿರಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಖಾಸಗಿ ಆಸ್ಪತ್ರೆಯ ಯಡವಟ್ಟು ಹಾಗೂ ಗ್ರಾಮಸ್ಥರ ಆಮಾನವೀಯತೆಯಿಂದಾಗಿ ಇಲ್ಲೊಂದು ಕುಟುಂಬ ಕಣ್ಣೀರು ಹಾಕುವಂತಾಗಿದೆ. ಅಂತ್ಯ ಸಂಸ್ಕಾರಕ್ಕೆಂದು ಬಂದ ಕುಟುಂಬಸ್ಥರಿಗೆ ಗ್ರಾಮಸ್ಥರು ಗ್ರಾಮದೊಳಗೆ ಬಿಡುತ್ತಿಲ್ಲ.
ಜಿಲ್ಲೆಯ ರೋಣ ತಾಲೂಕಿನ ಬಾಸಲಾಪೂರ ಗ್ರಾಮದಲ್ಲಿಯೇ ಇಂತಹ ಮನಕಲುಕುವ ಘಟನೆ ನಡೆದಿದೆ. ಗ್ರಾಮದಲ್ಲಿನ ವ್ಯಕ್ತಿಯೊಬ್ಬರು ಬಾದಾಮಿ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈ ವ್ಯಕ್ತಿ ಕೊರೊನಾದಿಂದ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದರು ಎನ್ನಲಾಗಿದೆ. ಆದರೆ, ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಮಾತ್ರ ಕೋವಿಡ್ ನ ಯಾವುದೇ ನಿಯಮ ಪಾಲಿಸದೆ ಶವ ಹಸ್ತಾಂತರಿಸಿದ್ದರು.
ಆಂಬುಲೆನ್ಸ್ ನಲ್ಲಿ ಸ್ವಗ್ರಾಮಕ್ಕೆ ಶವ ಆಗಮಿಸಿತ್ತು. ಶವ ಬಂದ ಕೂಡಲೇ ಗ್ರಾಮಸ್ಥರು, ಕೋವಿಡ್ ನಿಂದಲೇ ಈ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೀಗಾಗಿ ಒಳಗೆ ಪ್ರವೇಶ ಮಾಡಲು ಅವಕಾಶ ನೀಡುವುದಿಲ್ಲ. ಎಂದು ವಾಹನವನ್ನು ಹೊರಗಡೆಯೇ ನಿಲ್ಲಿಸಿದ್ದಾರೆ. ಹೀಗಾಗಿ ಶವದ ಜೊತೆಗೆ ರಸ್ತೆಯಲ್ಲಿಯೇ ಕುಟುಂಬಸ್ಥರು ಕಣ್ಣೀರು ಹಾಕುವಂತಾಯಿತು. ಅಲ್ಲದೇ, ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕೂಡ ಗ್ರಾಮಸ್ಥರು ಬಿಡುತ್ತಿಲ್ಲ. ಹೀಗಾಗಿ ಕುಟುಂಬಸ್ಥರು ಆಂಬುಲೆನ್ಸ್ ನಲ್ಲಿಯೇ ಶವ ಇಟ್ಟುಕೊಂಡು ಕಣ್ಣೀರು ಹಾಕುತ್ತಿದ್ದಾರೆ.
ಕೊರೊನಾ ದೇಶಕ್ಕೆ ಕಾಲಿಟ್ಟ ದಿನದಿಂದಲೂ ವೈದ್ಯರು ಜೀವದ ಹಂಗು ತೊರೆದು ಹಗಲಿರುಳು ಸೇವೆ ಮಾಡುತ್ತಿದ್ದಾರೆ. ಅಪಾಯವಿದೆ ಎಂದು ತಿಳಿದಿದ್ದರೂ ಯಾವುದನ್ನು ಅವರು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ತಮ್ಮ ಜೀವ ಅಷ್ಟೇ ಅಲ್ಲ, ತಮ್ಮ ಕುಟುಂಬಸ್ಥರ ಜೀವವನ್ನು ಪಣಕ್ಕಿಟ್ಟು ಅವರು ಮಹಾಮಾರಿಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಹೀಗೆ ಸೇವೆ ಮಾಡುತ್ತ ಹಲವರು ವೈದ್ಯರು ಇಹಲೋಕ ಕೂಡ ತ್ಯಜಿಸಿದ್ದಾರೆ. ಹೀಗೆ ಬೆಳಗಾವಿ ಚಿಲ್ಡ್ರನ್ಸ್ ಪ್ರೈವೆಟ್ ಲಿಮಿಟೆಡ್ ಆಸ್ಪತ್ರೆಯಲ್ಲಿ ರೆಸಿಡೆಂಟ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದ ವೈದ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಜೊತೆಗೆ ಅವರ ತಾಯಿಯು ಮೃತಪಟ್ಟಿದ್ದಾರೆ.
ವೈದ್ಯ ಹಾಗೂ ತಾಯಿ ಕೇವಲ ನಾಲ್ಕು ದಿನಗಳ ಅಂತರದಲ್ಲಿಯೇ ಮಹಾಮಾರಿಗೆ ಬಲಿಯಾಗಿದ್ದಾರೆ. ಡಾ.ಮಹೇಶ್ ಪಾಟೀಲ್ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ಅದಕ್ಕೆ ಬಲಿಯಾಗಿದ್ದಾರೆ. ಅವರಿಗೆ ಒಂದೂವರೆ ವರ್ಷದ ಹೆಣ್ಣು ಮಗು ಹಾಗೂ ಪತ್ನಿ ಇದ್ದರು. ಅವರ ತಾಯಿ ಸುಮಿತ್ರಾ ಪಾಟೀಲ್ ಮೃತಪಟ್ಟಿದ್ದಾರೆ. ಇದೀಗ ಅನಾರೋಗ್ಯದಿಂದ ತಂದೆ ಕಲಗೌಡ ಪಾಟೀಲ್ ಹಾಸಿಗೆ ಹಿಡಿದಿದ್ದಾರೆ. ಕೊವಿಡ್ ಸೋಂಕಿತ ಮಗುವಿಗೆ ಚಿಕಿತ್ಸೆ ನೀಡಿದ್ದ ಡಾ. ಮಹೇಶ್ ಪಾಟೀಲ್ ಅವರಿಗೆ ಸೋಂಕು ತಗುಲಿತ್ತು. ಹೀಗಾಗಿ ಅವರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗ ಡಾ. ಮಹೇಶ್ ಅವರ ತಂದೆ ಹಾಗೂ ತಾಯಿಗೂ ಸೋಂಕು ಹರಡಿತ್ತು. ಉಸಿರಾಟದ ತೊಂದರೆಯಿಂದ ಮೊದಲು ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗ ದಾಖಲಾದ ಎರಡೇ ದಿನಕ್ಕೆ ಮತ್ತೊಂದು ಆಸ್ಪತ್ರೆಗೆ ತಾಯಿ ಸುಮಿತ್ರಾ ಪಾಟೀಲ್ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸುಮಿತ್ರಾ ಕೊನೆಯುಸಿರೆಳೆದಿದ್ದರು. ತಾಯಿ ಸಾವನ್ನಪ್ಪಿದ ನಾಲ್ಕು ದಿನಕ್ಕೆ ಮಗ ಡಾ.ಮಹೇಶ್ ಪಾಟೀಲ್ (37) ಸಾವನ್ನಪ್ಪಿದ್ದಾರೆ. ಆದರೆ, ತಮ್ಮ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಕೊರೊನಾಗೆ ಬಲಿಯಾದರೂ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಮಾತ್ರ ವೈದ್ಯರ ಕುಟುಂಬಕ್ಕೆ ನೆರವಿಗೆ ಬಂದಿಲ್ಲ.
ಬಿ.ಎಲ್. ಸಂತೋಷ್ ಭಾಷಣದ ವೀಡಿಯೋ ಲಿಂಕ್ ಹಂಚಿಕೊಳ್ಳಲು ಮನವಿ
ಹಲವರ ಆಕ್ಷೇಪ: ವಿವಿಯ ಮುಖವಾಣಿಯಲ್ಲ ಎಂದ ಕುಲಪತಿ
ವಿಜಯಸಾಕ್ಷಿ ಸುದ್ದಿ, ಗದಗ
ನಗರದಲ್ಲಿರುವ ರಾಜ್ಯದ ಏಕೈಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತನ್ನ ಮೂಲ ಆಶಯಗಳನ್ನು ಬದಿಗೊತ್ತಿ, ಬಲಪಂಥೀಯ ವಿಚಾರಧಾರೆಗಳನ್ನು ಹರಿಬಿಡುವ ಕೇಂದ್ರವಾಗುತ್ತಿದೆಯೇ ಎನ್ನುವ ಪ್ರಶ್ನೆಯೀಗ ಎದ್ದಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ, ವಿವಿ ಹಾಗೂ ಮಾಧ್ಯಮ ಮಿತ್ರರ ಸಂವಹನಕ್ಕಾಗಿ ಇರುವ ವಾಟ್ಸ್ ಆಪ್ ಗ್ರೂಪ್‌ನಲ್ಲಿ ಆರೆಸ್ಸೆಸ್ ಪ್ರಮುಖ, ಬಿ.ಜೆ.ಪಿ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕಾರ್ಯಕ್ರಮವೊಂದರ ಪೋಸ್ಟ್ ವೈರಲ್ ಮಾಡಲಾಗಿದೆ.
ಪ್ರಜ್ಞಾಪ್ರವಾಹ ಎನ್ನುವ ಫೇಸ್ ಬುಕ್ ಪೇಜ್‌ನ ಕರ್ನಾಟಕ ವಿಭಾಗದಿಂದ ಪ್ರಸಾರವಾಗಿರುವ ಬಿ.ಎಲ್. ಸಂತೋಷ್ ಅವರ ಭಾಷಣದ ಸಂಪೂರ್ಣ ವಿಡಿಯೋದ ಲಿಂಕ್ ಹಾಕಿಕ್ಕಲ್ಲದೆ, ಅದನ್ನು ಶೇರ್ ಮಾಡಿ ಎನ್ನುವ ಮನವಿಯನ್ನೂ ಮಾಡಲಾಗಿದೆ. ಈ ಮೂಲಕ ಬಲಪಂಥೀಯ ವಿಚಾರಧಾರೆಯನ್ನು ಪ್ರಸಾರ ಮಾಡಲಾಗುತ್ತಿದೆ ಎನ್ನುವ ಆರೋಪಗಳೀಗ ಕೇಳಿಬಂದಿವೆ.
ವಿಶ್ವವಿದ್ಯಾಲಯದ ಕಾರ್ಯಕ್ರಮ, ನೋಟಿಸ್, ಕುಂದು –ಕೊರತೆಯ ಸಂವಹನಗಳು ಈ ಗ್ರೂಪ್‌ನಲ್ಲಿ ನಡೆಯುತ್ತಿರುತ್ತವೆ. ಇಲ್ಲಿಯವರೆಗೆ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿ ಚರ್ಚಿಸಲಾಗುತ್ತಿತ್ತು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಎಲ್ಲ ಮಾಧ್ಯಮಗಳ ಪ್ರತಿನಿಧಿಗಳು, ವಿವಿಯ ಕುಲಪತಿಗಳು ಸಹ ಈ ಗ್ರೂಪ್‌ನಲ್ಲಿದ್ದಾರೆ.
ವಿಶ್ವವಿದ್ಯಾಲಯದ ವಿಚಾರಧಾರೆಗಳು ಜನರಿಗೆ ಮುಟ್ಟಲಿ ಎಂಬ ಕಾರಣಕ್ಕೆ ಇಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ತಮ್ಮ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ, ಈ ಗ್ರೂಪ್‌ನಲ್ಲಿ ಕೋವಿಡ್ ಸಂದರ್ಭದಲ್ಲಿ ಆತ್ಮನಿರ್ಭರತೆ, ವಿಶ್ವ ಬಂಧುತ್ವ ಮತ್ತು ರಾಜಕಾರಣ ಎಂಬ ವಿಚಾರದ ಬಗ್ಗೆ ಪ್ರಜ್ಞಾ ಪ್ರವಾಹ ಕರ್ನಾಟಕ ವಿಭಾಗದ ವತಿಯಿಂದ ಫೇಸ್ಬುಕ್ ಲೈವ್‌ನಲ್ಲಿ ಆಯೋಜಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಾತನಾಡಿರುವ ವಿಷಯವನ್ನು ಹಂಚಿಕೊಳ್ಳಲಾಗಿದೆ.
ಮೊದಲು ಈ ವಿಷಯವನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ, ಈ ಸುದ್ದಿಯನ್ನು ಬೇರೆ ಬೇರೆ ಗ್ರೂಪ್‌ಗಳಿಗೆ ಶೇರ್ ಮಾಡಿ ಎಂದು ಮನವಿ ಮಾಡಲಾಗಿತ್ತು. ಹಲವು ಮಾಧ್ಯಮ ಮಿತ್ರರು ಈ ಕುರಿತು ಪ್ರಶ್ನಿಸಿದಾಗ, ಶೇರ್ ಮಾಡದಂತೆ ಮನವಿ ಮಾಡಿಕೊಳ್ಳಲಾಯಿತು. ಆದರೆ ಆ ಲಿಂಕ್ ಅನ್ನು ಮಾತ್ರ ಗ್ರೂಪ್‌ನಿಂದ ತೆಗೆಯಲಿಲ್ಲ. ವಿಶ್ವವಿದ್ಯಾಲಯದ ಗ್ರೂಪ್‌ಗೂ ಬಿಜೆಪಿಯ ವಿಷಯಕ್ಕೂ ಏನು ಸಂಬಂಧ? ಈ ಗ್ರೂಪ್ ಅನ್ನು ಬಲಪಂಥೀಯ ವಿಚಾರಧಾರೆಗಳನ್ನು ಹಂಚಿಕೊಳ್ಳಲು ಬಳಸಲಾಗುತ್ತಿದೆಯೇ? ಎಂಬ ಪ್ರಶ್ನೆಗಳನ್ನು ಈಗ ಹಲವರು ಎತ್ತಿದ್ದಾರೆ.
ಭಾಷಣದಲ್ಲಿ ಏನಿದೆ?
ಬಿ.ಎಲ್. ಸಂತೋಷ್ ಅವರು, ರಾಜಕೀಯವನ್ನು ಲಾಬಿಯ ರೀತಿಯಲ್ಲಿ ನೋಡದೆ, ದಿವಾಳಿತನದ ಹಿನ್ನೆಲೆಯಲ್ಲಿ ನೋಡಬೇಕಿದೆ. ಸರ್ಕಾರದ ನಿರ್ಲಕ್ಷ್ಯ ಕೊರೊನಾ ಹರಡಲು ಕಾರಣ ಎಂಬ ಆರೋಪಗಳನ್ನು ವಿಪಕ್ಷಗಳು, ಬುದ್ಧಿಜೀವಿಗಳು ಮಾಡಿದರು. ಆದರೆ ಅದರಲ್ಲಿ ಹುರುಳಿಲ್ಲ. ಏಕೆಂದರೆ ಚುನಾವಣಾ ಸಮಾವೇಶ ಯಾವುದೇ ದೊಡ್ಡ ಕಾರ್ಯಕ್ರಮ ಇರದಿದ್ದರೂ ಮಹಾರಾಷ್ಟ್ರದ ಗ್ರಾಮೀಣ ಭಾಗಗಳಲ್ಲಿ ಸೋಂಕು ಏರಿಕೆಯಾಯಿತು. ನವದೆಹಲಿ, ಛತ್ತೀಸ್‌ಘಡಗಳಲ್ಲಿಯೂ ಯಾವುದೇ ದೊಡ್ಡ ಕಾರ್ಯಕ್ರಮಗಳಿರಲಿಲ್ಲ. ಆದರೂ ಅಲ್ಲೆಲ್ಲ ಸೋಂಕು ಹೆಚ್ಚಿತು. ಈ ವೈಜ್ಞಾನಿಕ ತರ್ಕದ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಸಮಾವೇಶ, ಕುಂಭಮೇಳದಿಂದ ಕೋವಿಡ್ ಹರಡಿತು ಎಂಬ ವಾದ ಹುರುಳಿಲ್ಲದ್ದು ಎಂಬುದಕ್ಕೆ ಇದು ಸಾಕ್ಷಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಧಾಟಿಯಲ್ಲಿರುವ, ಪ್ರಧಾನಿ ಮೋದಿ ಅವರ ತಪ್ಪು ನಿರ್ಧಾರಗಳಿಂದ ಕೊರೊನಾ ಬಂದಿಲ್ಲ. ಅದು ಹರಡಲು ಬಿಜೆಪಿ ಸರ್ಕಾರ ಕಾರಣವಲ್ಲ. ಬುದ್ಧಿಜೀವಿಗಳು ಹಾಗೂ ವಿರೋಧ ಪಕ್ಷಗಳ ನಾಯಕರು ಮೋದಿ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದ್ದಾರೆ ಎಂಬ ರೀತಿಯಲ್ಲಿ ಅವರು ವಿಡಿಯೋದಲ್ಲಿ ಚರ್ಚೆ ಮಾಡಿದ್ದಾರೆ.
ಈ ವಿಷಯವು ಗ್ರೂಪ್‌ನಲ್ಲಿ ಹರಿದಾಡಿದ್ದು, ಶೇರ್ ಮಾಡಲು ಕೂಡ ಮನವಿ ಮಾಡಲಾಗಿತ್ತು. ಹೀಗಾಗಿಯೇ ಈ ವಿಶ್ವವಿದ್ಯಾಲಯ ಬಲಪಂಥೀಯ ವಿಚಾರಧಾರೆಗಳನ್ನು ಪ್ರಚುರಪಡಿಸುತ್ತಿದೆಯೇ? ಎಂಬ ಅನುಮಾನ ಈಗ ಹಲವರನ್ನು ಕಾಡುತ್ತಿದೆ.
ಈ ವಿಷಯಕ್ಕೂ ವಿವಿಗೂ ಸಂಬಂಧವಿಲ್ಲ
ಈ ಗ್ರೂಪ್ ವಿಶ್ವವಿದ್ಯಾಲಯದ ಮುಖವಾಣಿಯಲ್ಲ. ಇದು ಪ್ರಶಾಂತ್ ಮೇರವಾಡೆಯವರು ಮಾಡಿರುವ ಗ್ರೂಪ್. ಸೋಷಿಯಲ್ ಮೀಡಿಯಾಗಳಲ್ಲಿ ಎಲ್ಲರೂ ಅವರವರ ಅಭಿಪ್ರಾಯಗಳನ್ನು ಹಂಚಿಕೊಳ್ತಾರೆ. ಹಾಗೆ ಅವರೂ ಹಂಚಿಕೊಂಡಿರಬಹುದು. ವಿವಿಗೆ ಇಂತಹ ಯಾವುದೇ ವಿಚಾರಗಳನ್ನು ವ್ಯಕ್ತಿಗತವಾಗಿ ಪ್ರಚಾರ ಮಾಡುವ ಉದ್ದೇಶವಿಲ್ಲ. ರಾಷ್ಟ್ರೀಯ ವಿಚಾರವಾದ ಆತ್ಮನಿರ್ಭರದ ವಿಷಯವನ್ನು ಗ್ರಾಮೀಣ ಹಾಗೂ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಪ್ರಚಾರ ಮಾಡುತ್ತೇವೆ. ಆದರೆ ಈ ವಿಷಯಕ್ಕೂ ವಿಶ್ವವಿದ್ಯಾಲಯಕ್ಕೂ ಸಂಬಂಧವಿಲ್ಲ.