Home Blog Page 3170

ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಶಾಕ್: ಹಲವರಿಗೆ ಗಾಯ

0

ಬೆಂಗಳೂರು: ಕರೆಂಟ್ ಶಾಕ್‌ನಿಂದ ದಿಢೀರ್ ನೂಕು ನುಗ್ಗಲು ಸೃಷ್ಟಿಯಾದ ಘಟನೆ ಹಾಸನಾಂಬೆ ದೇವಸ್ಥಾನದಲ್ಲಿ ಬಳಿ ನಡೆದಿದೆ.

ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್‌ 2 ರಿಂದ ತೆರೆದಿದ್ದು ಇಂದು ಬೆಳಗ್ಗೆಯಿಂದಲೂ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದರು. ಮಧ್ಯಾಹ್ನ 1.30ರ ವೇಳೆ ಉಚಿತ ದರ್ಶನದ ಸಾಲಿಗೆ ಹಾಕಿದ್ದ ಬ್ಯಾರಿಕೇಡ್‌ನಲ್ಲಿ ವಿದ್ಯುತ್‌ ಪ್ರವಹಿಸಿದೆ.

ಬ್ಯಾರಿಕೇಡ್‌ ವಿದ್ಯುತ್‌ ಪ್ರವಹಿಸಿದ್ದನ್ನು ಕಂಡು ಸಾಲಿನಲ್ಲಿದ್ದ ಭಕ್ತರು ಜೀವ ಉಳಿಸಿಕೊಳ್ಳಲು ಎದ್ನೋ ಬಿದ್ನೋ ಎಂದು ಸ್ಥಳದಿಂದ ಓಡಿದ್ದಾರೆ.

ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ವಯಂ ಸೇವಕರು ಮತ್ತು ಸ್ಥಳೀಯರು ಕೆಲವರನ್ನು ಹೊರಗೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

20 ಮಂದಿಗೆ ಕರೆಂಟ್‌ ಶಾಕ್‌ ಹೊಡೆದಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಅಡುಗೆ ಮನೆಯಲ್ಲಿ ಡ್ರಗ್ ತಯಾರಿಸಿ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್

0

ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ ಪದಾರ್ಥ ಬಳಸಿಕೊಂಡು ಸ್ಟೌ ಮೇಲಿಟ್ಟು ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ ಪ್ರೆಶರ್ ಕುಕ್ಕರ್‌ಗೆ ಪೈಪ್ ಅಳವಡಿಸಿ ಆವಿಯಿಂದ ಕ್ರಿಸ್ಟಲ್ ಬರುವಂತೆ ಮಾಡಿ ಎಂಡಿಎಂಎ ತಯಾರು ಮಾಡುತ್ತಿದ್ದ.

ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆರೋಪಿ ಬಳಿ 100 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.

ಆರೋಪಿ ಎಲ್ಲಿಂದ ಎಂಡಿಎಂಎ ತರಿಸುತ್ತಿದ್ದಾನೆ ಎಂದು ಪರಿಶೀಲನೆ ನಡೆಸಿದ ವೇಳೆ ಬೆಂಜಮಿನ್ ವಾಸವಿದ್ದ ಮನೆಯಲ್ಲೇ ಎಂಡಿಎಂಎ ಕ್ರಿಸ್ಟಲ್ ತಯಾರಿಸುತಿದ್ದ ವಿಚಾರ ಬೆಳಕಿಗೆ ಬಂದಿದೆ.

ಎಂಡಿಎಂಎ ತಯಾರು ಮಾಡಲು ಬೇಕಿದ್ದ ಕಚ್ಚಾವಸ್ತುಗಳನ್ನು ಖರೀದಿ ಮಾಡುತ್ತಿದ್ದ ಆರೋಪಿ ನಂತರ ಹಂತ ಹಂತವಾಗಿ ಎಂಡಿಎಂಎ ತಯಾರು ಮಾಡುತ್ತಿದ್ದ.

ಡ್ರಗ್ಸ್ ಡಿಮಾಂಡ್ ಎಷ್ಟು ಇದೆ, ಅಷ್ಟನ್ನು ತಯಾರು ಮಾಡಿ, ನಂತರ ಅದನ್ನು ಕೇವಲ ನೈಜೀರಿಯಾ ಮತ್ತು ಆಫ್ರಿಕಾ ಮೂಲದವರಿಗೆ ಮಾರಾಟ ಮಾಡುತ್ತಿದ್ದ ಎಂಬುದು ತಿಳಿದು ಬಂದಿದೆ.

ತಯಾರು ಮಾಡಿಟ್ಟಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 5 ಕೆಜಿ ಎಂಡಿಎಂಎ ಮತ್ತು ಅದನ್ನು ತಯಾರು ಮಾಡಲು ಬೇಕಾಗಿದ್ದ 5 ಕೆಜಿ ಕಚ್ಚಾವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

 

ಯುವತಿ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್: ಜಿಮ್ ಕೋಚ್ ಅರೆಸ್ಟ್​

0

ಬೆಂಗಳೂರು:- ಜಿಮ್ ಸೆಂಟರ್ ನಲ್ಲಿ ಯುವತಿ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್​​ ಮಾಡಿದ ಜಿಮ್ ಕೋಚ್ ಅರೆಸ್ಟ್​ ಮಾಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಫಿಟ್ನೆಸ್ ಸೆಂಟರ್ ನಲ್ಲಿ ಯುವತಿ ಸ್ನಾನ ಮಾಡೋದನ್ನು ಸೆರೆ ಹಿಡಿದ ಕಾಮುಕ ಜಿಮ್​​ ಕೋಚ್​​ನನ್ನು ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ.

ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫಿಟ್ನೆಸ್​ ಸೆಂಟರ್​ನಲ್ಲಿ ವರ್ಕ್​ ಔಟ್ ಮುಗಿಸಿದ್ದ ಯುವತಿ ಸ್ನಾನಕ್ಕೆಂದು ಬಾತ್​ ರೂಮ್​​​ ತೆರಳಿದ್ದರಂತೆ.

ಈ ವೇಳೆ ಜಿಮ್​ ಕೋಚ್​ ಬಾತ್​​ ರೂಮ್​​ನ ಕಿಟಕಿಯಲ್ಲಿ ಮೊಬೈಲ್​ ಇಟ್ಟು ವಿಡಿಯೋ ಮಾಡಲು ಯತ್ನಿಸಿದ್ದನಂತೆ. ಏನೋ ಶಬ್ದ ಆಯ್ತು ಅಂತ ಬಾತ್​ ರೂಮ್​​ನಿಂದ ಯುವತಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಅಲ್ಲಿ ಯಾರು ಇರಲಿಲ್ಲವಂತೆ.

ಇದರಿಂದ ಅನುಮಾನಗೊಂಡ ಯುವತಿ ಜಿಮ್​​ನಲ್ಲಿ ಅಳವಡಿಸಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಆರೋಪಿ ವಿಡಿಯೋ ಮಾಡಲು ಯತ್ನಿಸಿದ್ದು ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಘಟನೆ ಸಂಬಂಧ ಕೂಡಲೇ ಯುವತಿ ರಾಮಮೂರ್ತಿನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು ಪಿಟ್ನೆಸ್ ಕೋಚ್ ಸಿಬಿಯಾಚನ್ ನನ್ನು ಬಂಧನ ಮಾಡಿದ್ದಾರೆ

ಪಟಾಕಿ ಮಳಿಗೆ ಹಾಕಲು ಹೊಸ ನಿಯಮಾವಳಿ ಹಾಕಿದ್ದು ಕಾಂಗ್ರೆಸ್​​ ಸರ್ಕಾರದ ಹುನ್ನಾರ: ಬಿಜೆಪಿ ಶಾಸಕ

0

ಮಂಗಳೂರು: ಪಟಾಕಿ ಮಳಿಗೆ ಹಾಕಲು ಹೊಸ ನಿಯಮಾವಳಿ ಹಾಕಿದ್ದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ ಎಂದು ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ ಮಾಡಿದ್ದಾರೆ.

ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ. ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಅಡ್ಡಿ ಮಾಡುತ್ತಿದ್ದಾರೆ.

ಈ ಮೂಲಕ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ವಾಗ್ದಾಳಿ ಮಾಡಿದರು.

ಧಾರವಾಡ ಜಿಲ್ಲೆಯಲ್ಲಿ ನಿಷೇಧಿತ ಪಟಾಕಿ ಮಾರಾಟ, ಬಳಕೆಗೆ ನಿರ್ಬಂಧ

0

ಧಾರವಾಡ: ಜಿಲ್ಲೆಯಲ್ಲಿ ನಿಷೇಧಿತ ಪಟಾಕಿ ಮಾರಾಟ, ಬಳಕೆಗೆ ನಿರ್ಬಂಧಿ ವಿಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಿಯಮ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದಾರೆ. ಒಂದು ವೇಳೆ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮತ್ತು ಬಳಕೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

 

ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ: ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

0

ಮಂಡ್ಯ17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಮದ್ದೂರು ಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದ್ದು, ಸಹಪಾಠಿಗಳೇ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಪುನೀತ್‌ ಎಂಬಾತ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡಿದ್ದ.

ಪರಿಚಯದ ಬಳಿಕ ಪ್ರೀತಿ ಮಾಡುವುದಾಗಿ ನಂಬಿಸಿ, ಸಲುಗೆಯನ್ನು ಬೆಳೆಸಿಕೊಂಡಿದ್ದ. ಈ ನಡುವೆ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿದ್ದ ಕಾಮುಕ, ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದ. ಅತ್ಯಾಚಾರದ ವಿಡಿಯೊ ಮಾಡಿಕೊಂಡ ಕಿರಾತಕರು ಆನಂತರ ಅಪ್ರಾಪ್ತೆ ಮೊಬೈಲ್‌ಗೆ ಕಳುಹಿಸಿ ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದಾರೆ.

ಇವರ ಕಿರುಕುಳದಿಂದ ಕಂಗಲಾದ ಅಪ್ರಾಪ್ತೆ ನಡೆದಿದ್ದನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಅಪ್ರಾಪ್ತೆಯ ಪೋಷಕರಿಂದ ದೂರು ದಾಖಲಾದ ಬೆನ್ನಲ್ಲೇ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಸರಬರಾಜು ಸ್ಥಗಿತ: ಬಳ್ಳಾರಿ ಬಂದ್

0

ಬಳ್ಳಾರಿ: ತುಂಗಭದ್ರಾ ಜಲಾಶಯದ  ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು ಖಂಡಿಸಿ ರೈತ ಸಂಘ ಶುಕ್ರವಾರ ಕರೆ ನೀಡಿರುವ ಬಳ್ಳಾರಿ ಬಂದ್‌ ನಡೆಸಲಾಗುತ್ತದೆ.

ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ ವರೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಮಾಧವರೆಡ್ಡಿ ನೇತೃತ್ವದ ರೈತ ಸಂಘ  ಬಳ್ಳಾರಿ ಬಂದ್‌ಗೆ ಕರೆ ನೀಡಿದೆ.

ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನವೆಂಬರ್ ಅಂತ್ಯದವರೆಗೆ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ನಂತರ ಬೆಂಗಳೂರಿನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ನ.10ರ ವರೆಗೆ ಮಾತ್ರ ನೀಡಲಿದೆ ಎಂದು ಹೇಳಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.

ಪೆಟ್ರೋಲ್‌ ಬಂಕ್‌, ಹಾಲಿನ ಅಂಗಡಿಗಳು ಸೇರಿ ಅಗತ್ಯ ಸೇವೆಗಳು ಆರಂಭಗೊಂಡಿವೆ. ಹೊಟೇಲ್‌ಗಳು ವಿರಳ ಸಂಖ್ಯೆಯಲ್ಲಿ ತೆರೆದಿವೆ. ಬೀದಿ ಬದಿ ವ್ಯಾಪಾರಸ್ಥರು ವಹಿವಾಟನ್ನು ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.  ರೈತ ಸಂಘದ  ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಕಡಲೆ ಬೇಳೆ, ಈರುಳ್ಳಿ ಮಾರಾಟ: ಪ್ರಲ್ಹಾದ ಜೋಶಿ

0

ಹುಬ್ಬಳ್ಳಿ : ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಹೊರೆ ತಪ್ಪಿಸಲು ’ಭಾರತ್ ದಾಲ್’ ಎಂಬ ಬ್ರಾಂಡ್​ನಲ್ಲಿ ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಕಡಲೆ ಬೇಳೆ ಮತ್ತು ಈರುಳ್ಳಿ ಮಾರಾಟ ಮಾರಾಟ ಆರಂಭಿಸಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಸಾಲಿನಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ದೀಪಾವಳಿ ಉಡುಗೊರೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾರುಕಟ್ಟೆಯಲ್ಲಿ ಪ್ರತಿ ಕೇಜಿಗೆ ಅಂದಾಜು 120 ರೂ. ಗಳಿಗೆ ಮಾರಾಟವಾಗುವ ಕಡಲೆ ಬೇಳೆಯನ್ನು ಕೇವಲ ಕೇಜಿಗೆ 1 ಕೆಜಿ ಪ್ಯಾಕ್​ಗೆ 60 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ಅದರಂತೆ ಪ್ರತಿ ಕೇಜಿಗೆ 80 ರೂ.ಗಳಿಗೆ ಮಾರಾಟವಾಗುತ್ತಿರುವ ಈರುಳ್ಳಿಯನ್ನು ಕೇಜಿಗೆ 25 ರೂ. ನಂತೆ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಎರಡು ಹಾಗೂ ಧಾರವಾಡದಲ್ಲಿ ಒಂದು ಸಂಚಾರಿ ವಾಹನಗಳಲ್ಲಿ ಕಡಲೆ ಬೇಳೆ ಹಾಗೂ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ. ಈಗಾಗಲೇ 1,153 ಕ್ವಿಂಟಾಲ್ ಕಡಲೆ ಬೇಳೆ ಮತ್ತು 176 ಕ್ವಿಂಟಾಲ್ ಈರುಳ್ಳಿ ಮಾರಾಟ ಮಾಡಲಾಗಿದೆ.

ಕೇಂದ್ರ ಸರ್ಕಾರ ನಿತ್ಯ ಜೀವನಕ್ಕೆ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳ ವಿತರಣೆ ಯೋಜನೆ ಆರಂಭ ಮಾಡಿದೆ ಎಂದು ತಿಳಿಸಿರುವ ಜೋಶಿ, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ’ಭಾರತ್ ದಾಲ್’ ಬ್ರಾಂಡ್ ಯೋಜನೆಯನ್ನು ಅವಳಿ ನಗರದಲ್ಲಿಯೂ ಆರಂಭಿಸಿ ಸಂಚಾರಿ ವಾಹನಗಳ ಮೂಲಕ ಜನರ ಮನೆ ಬಾಗಿಲಿಗೆ ತಲುಪಿಸುತ್ತಿದೆ ಎಂದು ಹೇಳಿದ್ದಾರೆ. ಭಾರತ್ ದಾಲ್ ಅನ್ನು ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್​ನ (ನಾಫೆಡ್) ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪುನೀತ್ ರಾಜ್​ ಕುಮಾರ್ ಸಿನಿಮಾದ ಡೈರೆಕ್ಟರ್ ವಿರುದ್ಧ ದೂರು

0

ಬೆಂಗಳೂರು:- ಖ್ಯಾತ ನಿರ್ದೇಶಕರೊಬ್ಬರ ವಿರುದ್ಧ ವಂಚನೆ ದೂರು ದಾಖಲಾಗಿದೆ. ಪೃಥ್ವಿ, ಸವಾರಿ, ಸವಾರಿ-2, ಚಂಬಲ್ ಚಿತ್ರಗಳ ನಿರ್ದೇಶಕ ಜಾಕೋಬ್ ವರ್ಗೀಸ್ ಮೇಲೆ ದೂರು ದಾಖಲಾಗಿದೆ. ಎಚ್‌ಐವಿ ಬಾಧಿತ ಮಕ್ಕಳ ಜೀವನ ಕ್ರಮದ ಬಗ್ಗೆ ಸಂಸ್ಥೆ ಜಾಕೋಬ್‌ ಬಳಿ ವಿಡಿಯೋ ಮಾಡಿಸಿತ್ತು. ʼರನ್ನಿಂಗ್ ಪಾಸಿಟಿವ್ʼ ಎನ್ನುವ ಸಾಕ್ಷ್ಯಚಿತ್ರ ಮಾಡಲು ಫೌಂಡೇಶನ್ ಹಣ ನೀಡಿತ್ತು. ವಿಡಿಯೋ ಚಿತ್ರೀಕರಣ ಮಾಡಿದ್ದ ಜಾಕೋಬ್ ವರ್ಗೀಸ್ ಕಾಪಿರೈಟ್ಸ್ ಅನ್ನು ಸಂಸ್ಥೆಗೆ ನೀಡಿಲ್ಲ ಎಂದು ದೂರಲಾಗಿದೆ.

4 ವರ್ಷದ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ವಿಡಿಯೋ ಚಿತ್ರಿಕರಣ ಮಾಡಿದ್ದ ಜಾಕೋಬ್‌ಗೆ ವಿಡಿಯೋ ಚಿತ್ರಿಕರಣ ಮಾಡಲು ಹಂತ ಹಂತವಾಗಿ ಫೌಂಡೇಶನ್ ಹಣ ನೀಡಿತ್ತು. ಇದೀಗ ಕಾಪಿರೈಟ್ಸ್ ಸಂಸ್ಥೆಗೆ ನೀಡದೆ ತಾನೇ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿರುವ ಆರೋಪ ಬಂದಿದೆ.

ಆಸ್ಕರ್ ಅಕಾಡೆಮಿ ಅವಾರ್ಡ್ ವಿಭಾಗದಲ್ಲಿ ತಾನೇ ಕಾಪಿರೈಟ್ಸ್ ಮಾಲೀಕ ಎಂದು ಮಾಹಿತಿ ನೀಡಿದ್ದಾರೆ. ಆಯುಷ್ಮಾನ್ ಚಲನಚಿತ್ರ ಪ್ರಶಸ್ತಿಗೂ ಈ ಚಿತ್ರವನ್ನು ಆಯ್ಕೆ ಮಾಡಿಸಿ ಕಾಪಿರೈಟ್ಸ್ ಉಲ್ಲಂಘನೆ ಮಾಡಲಾಗಿದೆ. ಆ ಮೂಲಕ ಬೆಂಗಳೂರು ಸ್ಕೂಲ್ ಸ್ಪೋರ್ಟ್ಸ್ ಫೌಂಡೇಶನ್‌ಗೆ ಅರ್ಥಿಕ ನಷ್ಟ ಉಂಟುಮಾಡಲಾಗಿದೆ ಎಂದು ಅಶೋಕನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ, ಸಾಕ್ಷ್ಯಚಿತ್ರದ ಕಾಪಿರೈಟ್ಸ್ ನೀಡದೆ (ಬೆಂಗಳೂರು ಸ್ಕೂಲ್ ಸ್ಪೋರ್ಟ್ಸ್ ಫೌಂಡೇಶನ್‌ಗೆ ವಂಚನೆ ಮಾಡಲಾಗಿದೆ ಎಂದು ದೂರಲಾಗಿದೆ.

 

ಶಾಲೆಯಲ್ಲಿ ಅಡುಗೆಗೆಂದು ಒಲೆಯ ಮೇಲಿಟ್ಟಿದ್ದ ಕುಕ್ಕರ್ ಸ್ಫೋಟ

0

ಕಂಪ್ಲಿ:- ಅಡುಗೆಗೆಂದು ಒಲೆಯ ಮೇಲಿಟ್ಟಿದ್ದ ಕುಕ್ಕರ್ ಒಂದು ಸ್ಫೋಟಗೊಂಡ ಘಟನೆ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಪಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದೆ.

ಶಾಲೆಯ ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿತು.

ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ ಗೋಡೆಗೆ ತೊಗರಿಬೇಳೆ ಸಿಡಿದಿರುವುದು ಕಂಡು ಬಂತು.

ಇನ್ನು ಅಡುಗೆ ಕೆಲಸದಲ್ಲಿ ತೊಡಗಿಕೊಂಡಿದ್ದ ಲೋಕಮ್ಮ ಎಂಬುವವರ ಮುಖಕ್ಕೆ ಬಿಸಿನೀರು ಸಿಡಿದಿದೆ. ಇನ್ನುಳಿದ ಮೂವರು ಅಡುಗೆಯವರು ತಕ್ಷಣ ಹೊರಗಡೆ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಬಿಸಿಯೂಟ ತಯಾರಿಸುವ ಪಾತ್ರೆ, ಇತರೆ ಸಾಮಾನುಗಳು ತುಂಬಾ ಹಳತಾಗಿವೆ. ಸುಸ್ಥಿತಿಯಲ್ಲಿ ಇಲ್ಲದ ಕಾರಣ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ.

600 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರು ಪಾಠದ ಕಡೆ ಗಮನಹರಿಸಲು ಆಗದೇ ಬಿಸಿಯೂಟದ ಕಡೆಗೆ ಹೆಚ್ಚಿನ ಲಕ್ಷ್ಯ ಕೊಡಬೇಕಾದ ಸ್ಥಿತಿ ಇದೆ.

ಶಿಕ್ಷಕರು ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಇಸ್ಕಾನ್ ಬಿಸಿಯೂಟ ಸೌಲಭ್ಯ ಒದಗಿಸಬೇಕು ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಎಚ್. ಜಗದೀಶ್ ಸೇರಿದಂತೆ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

error: Content is protected !!