Home Blog Page 3172

ನಿಂತಿದ್ದ ಕ್ರೂಸರ್‌ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

0

ತುಮಕೂರು: ಕ್ರೂಸರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಗಂಗಾವತಿ ಮೂಲದ ಶಂಕರ್​(35), ಸತೀಶ್​(40) ಮೃತರು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್‌ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್‌ ಕಾರಿನ ಹಿಂಬದಿಯ ಟೈಯರ್‌ ಪಂಚ್ಚರ್‌ ಆಗಿತ್ತು.

ಹೀಗಾಗಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಟೈಯರ್‌ ಬದಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ.

ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ: ಬಿ.ಎಸ್.ಯಡಿಯೂರಪ್ಪ

0

ಬೆಂಗಳೂರು: ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್​​​ ಸೂಚನೆ ಕೊಟ್ಟಿದೆ.

ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್​ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್​ ಸೂಚಿಸಿದೆ ಎಂದು ತಿಳಿಸಿದರು. ಪಕ್ಷದ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಮಾತನಾಡಿ, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸ್ತೇನೆ ಎಂದು ತಿಳಿಸಿದರು.

ಟಿಹೆಚ್‌ ಡಿಸಿಎಲ್‌ ಜತೆ 15,000 ಕೋಟಿ ರೂ. ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ

0

ಬೆಂಗಳೂರು: ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳನ್ನು ಕೈಗೊಳ್ಳುವ ಸಂಬಂಧ ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ಜತೆ ರಾಜ್ಯ ಸರ್ಕಾರ ಸಹಿ ಹಾಕಿದೆ.

ಇಂಧನ ಸಚಿವ ಕೆ ಜೆ ಜಾರ್ಜ್ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್‌ ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

“ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗಳನ್ನು ಪರಿಹರಿಸಲು ಈ ಒಪ್ಪಂದ ಪೂರಕವಾಗಿದ್ದು, ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಬದ್ಧ,” ಎಂದು ಇಂಧನ ಸಚಿವರು ತಿಳಿಸಿದರು.

“ದಿಲ್ಲಿಯಲ್ಲಿ ಈ ಹಿಂದೆ ಕೇಂದ್ರ ಇಂಧನ ಸಚಿವ ಆರ್‌ಕೆ ಸಿಂಗ್ ಮತ್ತು ಟಿಹೆಚ್‌ಡಿಸಿಎಲ್‌ನ ಸಿಎಂಡಿ ಆರ್.ಕೆ. ವಿಷ್ಣೋಯ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಒಪ್ಪಂದ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿತ್ತು. ಅದರ ಫಲವಾಗಿ ನಾವು ಇಂದು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಒಪ್ಪಂದದಂತೆ ಆದ್ಯತೆ ಮೇರೆಗೆ ಕರ್ನಾಟಕಕ್ಕೆ ವಿದ್ಯುತ್‌ ಒದಗಿಸುವುದಾಗಿ ಟಿಹೆಚ್‌ಡಿಸಿಎಲ್‌ ಭರವಸೆ ನೀಡಿದೆ,”ಎಂದರು.

“ಕದ್ರಾ ಅಣೆಕಟ್ಟು ಜಲಾಶಯದಲ್ಲಿ 100 ಮೆಗಾವ್ಯಾಟ್‌ ಸಾಮರ್ಥ್ಯದ ಫ್ಲೋಟಿಂಗ್‌ ಸೋಲಾರ್ ಪಿವಿ ಸ್ಥಾವರದ ಅಭಿವೃದ್ಧಿ, 170 ಮೆಗಾವ್ಯಾಟ್ ಸಾಮರ್ಥ್ಯದ ಗ್ರೌಂಡ್‌ ಮೌಂಟೆಡ್‌ ಯೋಜನೆ, ಕೆಪಿಸಿಎಲ್ ಆವರಣದಲ್ಲಿ ಮೇಲ್ಛಾವಣಿ ಸೌರ ಪಿವಿ ಸ್ಥಾವರ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್‌ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕ ಸ್ಥಾಪನೆ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ”, ಎಂದು ಸಚಿವರು ವಿವರಿಸಿದರು.

“ನವೀಕರಿಸಬಹುದಾದ ಇಂಧನ ಮತ್ತು ಹೈಡ್ರೋ ಮತ್ತು ಪಂಪ್ ಹೈಡ್ರೋ ವಲಯದಲ್ಲಿ ಅಪಾರ ಅನುಭವ ಇರುವ ಟಿಹೆಚ್‌ಡಿಸಿಎಲ್‌ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಯೋಜನೆ ಕೈಗೊಳ್ಳುವ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಮುಂದಿನ ಹಂತದಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಕಾರ್ಯಸಾಧ್ಯತೆಯ ಅಧ್ಯಯನ ಕೈಗೊಳ್ಳಲಾಗುವುದು ಮತ್ತು ಎಲ್ಲ ಅಗತ್ಯ ಅನುಮೋದನೆಗಳನ್ನು ಪಡೆಯುವುದಾಗಿ ಟಿಹೆಚ್‌ಡಿಸಿಎಲ್‌ ಮುಖ್ಯಸ್ಥರು ಭರವಸೆ ನೀಡಿದ್ದಾರೆ,” ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ ತಿಳಿಸಿದರು.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು, ಆದರೂ ಅಧಿಕಾರಿಗಳ ಮೀನಾಮೇಷ

0

ದೊಡ್ಡಬಳ್ಳಾಪುರ: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಿದರೂ ಅಧಿಕಾರಿಗಳು ಮಾತ್ರ ಮೀನಾಮೇಷ ಎಣಿಸುತ್ತಿದ್ದಾರೆ.

ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಕಳೆದ 4 ನಾಲ್ಕು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.15 ರಿಂದ 20 ಮಕ್ಕಳು ಅಂಗನವಾಡಿ ಕೇಂದ್ರದಲ್ಲಿದ್ದು ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಬೇಕಾದ ಸೌಲಭ್ಯಗಳ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ 2022 ರಲ್ಲಿ ಖನಿಜ ಪ್ರತಿಷ್ಠಾನ ನಿಧಿ ಯೋಜನೆಯಡಿ 10 ಲಕ್ಷ ಮತ್ತು ನರೇಗಾ ಯೋಜನೆಯಡಿ 05 ಲಕ್ಷ ಹಣ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಂಜೂರಾಗಿದೆ.

ಆದರೆ ಮಂಜೂರಾತಿಯಾಗಿ ವರ್ಷಗಳೆ ಕಳೆದರು ಸಂಭಂದಿಸಿದ ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ.

‘ಕಟ್ಟಡ ನೆಲಸಮ ಮಾಡುವಂತೆ ಗ್ರಾಮ ಪಂಚಾಯತಿಗೆ ಆದೇಶ’

ಶೀಥಿಲಾವಸ್ಥೆ ಹಂತಕ್ಕೆ ತಲುಪಿರುವ ಅಂಗನವಾಡಿ ಕಟ್ಟಡವನ್ನು ನೆಲಸಮ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಅಕ್ಟೋಬರ್ 2022 ರಲ್ಲಿ ಆದೇಶ ನೀಡಿರುತ್ತಾರೆ. ಇದನ್ನು ಪರಿಗಣಿಸದೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಎದ್ದು ಕಾಣುತ್ತಿದೆ.

ಒಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆಗಳ ಗೂಡಾಗಿರುವ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಮಕ್ಕಳು ಪಾಠ ಕೇಳುವ ಪರಿಸ್ಥಿತಿ ಬಂದಿದೆ. ಇನ್ನಾದರು ಎಚ್ಚೆತ್ತುಕೊಂಡು ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿ ಮಕ್ಕಳಿಗೆ ಅನುಕೂಲ ಮಾಡಿಕೊಡುವುದು ಸೂಕ್ತವಾಗಿದೆ.

ಸಂಕ್ರಾಂತಿಗೆ ಬರ್ತಿದೆ ಶಿವಣ್ಣ & ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ

0

ಧನುಷ್, ಶಿವರಾಜ್‌ಕುಮಾರ್ ಅಭಿನಯದ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಡಿಸೆಂಬರ್‌ನಲ್ಲಿ ತೆರೆಗೆ ಬರಬೇಕಿತ್ತು.

ಇದೀಗ 2024ರ ಸಂಕ್ರಾಂತಿ ಹಬ್ಬದ ಪ್ರಯುಕ್ತ (ಜನವರಿ 2ನೇ ವಾರ) ತೆರೆಗೆ ಬರಲಿದೆ. ಆ ಸಮಯಕ್ಕೆ ಈಗಾಗಲೇ ದಕ್ಷಿಣ ಭಾರತದ ಹಲವು ಸಿನಿಮಾಗಳು ತೆರೆಗೆ ಬರಲು ರಿಲೀಸ್ ಡೇಟ್ ಘೋಷಣೆ ಮಾಡಿವೆ. ಅವುಗಳ ಸಾಲಿಗೆ ಕ್ಯಾಪ್ಟನ್ ಮಿಲ್ಲರ್ ಕೂಡ ಸೇರಿಕೊಂಡಿದೆ.

ಧನುಷ್ ಅವರ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು ಅರುಣ್ ಮಾದೇಶ್ವರನ್ ನಿರ್ದೇಶನ ಮಾಡಿದ್ದು, ಇದು ಧನುಷ್ ಅವರ ವೃತ್ತಿಜೀವನದ ಅತ್ಯಂತ ಬಿಗ್‌ ಬಜೆಟ್ ಸಿನಿಮಾವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಪ್ರೇಕ್ಷಕರ ಮನಸೂರೆಗೊಂಡಿದೆ.

ಈ ಪ್ಯಾನ್ ಇಂಡಿಯಾ ಚಲನಚಿತ್ರವು 2024ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು 1930-40ರ ಬ್ಯಾಕ್‌ಡ್ರಾಪ್‌ನಲ್ಲಿ ಚಿತ್ರೀಕರಿಸಲಾಗಿದೆ. ಜೈಲರ್ ಬಳಿಕ ಡಾ ಶಿವರಾಜ್‌ಕುಮಾರ್ ನಟಿಸಿರುವ ಎರಡನೇ ತಮಿಳು ಸಿನಿಮಾ ಇದಾಗಿದೆ.

ಸಂದೀಪ್ ಕಿಶನ್, ಪ್ರಿಯಾಂಕಾ ಅರುಳ್ ಮೋಹನ್ ಮುಂತಾದವರು ನಟಿಸಿದ್ದಾರೆ. ಟಿ ಜಿ ತ್ಯಾಗರಾಜನ್, ಸೆಂಥಿಲ್ ತ್ಯಾಗರಾಜನ್ ಮತ್ತು ಅರ್ಜುನ್ ತ್ಯಾಗರಾಜನ್ ಜಂಟಿಯಾಗಿ ನಿರ್ಮಿಸಿರುವ ಈ ಸಿನಿಮಾಕ್ಕೆ ಜಿ ಸರವಣನ್ ಮತ್ತು ಸಾಯಿ ಸಿದ್ಧಾರ್ಥ್ ಸಹ ಹಣ ಹಾಕಿದ್ದಾರೆ. ಹಾಡುಗಳಿಗೆ ಜಿ ವಿ ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದು, ಸಿದ್ಧಾರ್ಥ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಮಹಿಳೆಯನ್ನು ರಕ್ಷಿಸಿದ ಪೊಲೀಸರು

0

ಚಿಕ್ಕಬಳ್ಳಾಪುರ: ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೊಲೀಸರು ರಕ್ಷಿಸಿ ಮಾನವಿಯತೆ ಮೇರೆದಿದ್ದಾರೆ.

ಹೌದು, ತಾಲೂಕಿನ ಎಲ್ಲೋಡು ಗ್ರಾಮದ ಮಹಿಳೆ ಕಳೆದ ಹಲವು ದಿನಗಳ ಹಿಂದೆ ಅದೇ ಗ್ರಾಮದ ವ್ಯಕ್ತಿಯನ್ನು ಪ್ರೀತಿಸಿ ಮದುವೆ ಆಗಿ, ಬಾಗೇಪಲ್ಲಿ ಪಟ್ಟಣದಲ್ಲಿ ವಾಸವಿದ್ದು, ಇತ್ತೀಚಗೆ ತನ್ನ ಗಂಡನಿಗೆ ಅಪಘಾತವಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,

ಪೋಷಕರ ವಿರೋಧದ ನಡುವೆಯೂ ವಿವಾಹವಾದ ದಂಪತಿ ಕಷ್ಟಗಳನ್ನೆ ಎದುರಿಸಿಕೊಂಡು ಬರುತ್ತಿದ್ದೆನೆ, ಜತೆಗೆ ತನ್ನ ಅಕ್ಕ ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾಳೆ ಎಂದು ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು ಅ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಅ ವಿಡಿಯೋ ನೋಡಿದ ಗುಡಿಬಂಡೆ ‌ಪೊಲೀಸರಾದ ದಕ್ಷಿಣ ಮೂರ್ತಿ ಮತ್ತು ಮುರಳಿ ಅವರು ಮಹಿಳೆ ಬಳಸುತ್ತಿದ್ದ ಮೊಬೈಲ್ ಲೊಕೇಷನ್ ಬಳಸಿಕೊಂಡು ಮಹಿಳೆಯನ್ನು ಗುಡಿಬಂಡೆ ಕೆರೆಯ ಬಳಿ‌ ಪತ್ತೆ ಹಚ್ಚಿದ್ದಾರೆ,

ಇನ್ನು ಮಹಿಳೆ ಸ್ಲೀಪಿಂಗ್ ಮಾತ್ರೆ‌ ಸೇವಿಸಿದ್ದು, ಗುಡಿಬಂಡೆ ಪೊಲೀಸರು ಕೂಡಲೇ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಮಹಿಳೆ ಪ್ರಾಣ ರಕ್ಷಸಿದ್ದಾರೆ.

ಒಟ್ಟಾರೆ ಮಹಿಳೆಯ ವಿಡಿಯೋ ನೋಡಿ ಕೆಲವೇ ಗಂಟೆಗಳಲ್ಲಿ ಮಹಿಳೆಯನ್ನು ಪತ್ತೆ ಹಚ್ಚಿ ಮಹಿಳೆಯ ಪ್ರಾಣ ಉಳಿಸಿದ ಪೊಲೀಸರಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಮಹದೇವಪುರ ಆರ್ ಐ ವಸಂತ್

0

ಬೆಂಗಳೂರು: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ ಈ ಮೊದಲೇ ಚೆಕ್‍ನಲ್ಲಿ 4 ಲಕ್ಷ ರೂ. ಹಣವನ್ನು ಪಡೆದಿದ್ದ ಎಂದು ತಿಳಿದು ಬಂದಿದೆ.

ಬುಧವಾರ ಖಾಸಗಿ ಹೋಟೆಲ್‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ.

ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್‌ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

 

KSRTC ಬಸ್- ಮಿನಿ ಬಸ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

0

ಚಿಕ್ಕಬಳ್ಳಾಪುರ: KSRTC ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ (Road accident) ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.  ಮೂವರ ಸ್ಥಿತಿ ಗಂಭೀರವಾಗಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚಿನ್ನಸಂದ್ರ ಗೇಟ್ ಬಳಿ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಒಬ್ಬ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಅಪಘಾತದ ರಭಸಕ್ಕೆ ಮಿನಿ ಬಸ್ ನಜ್ಜುಗುಜ್ಜಾಗಿ ಛಿದ್ರ ಛಿದ್ರವಾಗಿದೆ. ಕೈವಾರ ಮೂಲದ ಇಲ್ಲು (40) ಮೃತ ವ್ಯಕ್ತಿ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ಚಿಂತಾಮಣಿ – ಬೆಂಗಳೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ʼಗೆ ಕೂದಲು ಸಿಲುಕಿ ಮಹಿಳೆ ಸಾವು..!

0

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದೊಡ್ಡ ಘೋರ ದುರಂತ ಸಂಭವಿಸಿದೆ. ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ಗೆ ಮಹಿಳೆಯೊಬ್ಬರ ಜಡೆ ಸಿಲುಕಿಕೊಂಡು ಮಹಿಳೆಯ ತಲೆಯೇ ಕಟ್ ಆಗಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವಾಗ ಈ ಅವಘಡ ಸಂಭವಿಸಿದೆ.

ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ 33 ವರ್ಷದ ಶ್ವೇತಾ ಮೃತ ಮಹಿಳೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪೇಂಟ್ ಬೆರೆಸುವ ಗ್ರೈಂಡರ್ ಗೆ ಮಹಿಳೆಯ ಜಡೆ ಸಿಲುಕಿಕೊಂಡಿದೆ ಮಹಿಳೆ ಕೂಗಿಕೊಂಡರು ಅವರನ್ನು ರಕ್ಷಿಸಲು ಸಾಧ್ಯವಾಗಿಲ್ಲ, ನೋಡ ನೋಡುತ್ತಿದ್ದಂತೆಯೇ ಮಹಿಳೆಯ ತಲೆಯೇ ಗ್ರೈಂಡರ್ ಗೆ ಸಿಲುಕಿ ಕಟ್ ಆಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿದ್ದಕ್ಕೆ ಸ್ಪಷ್ಟನೆ ನೀಡಿದ ಡಾ.ಎಚ್.ಸಿ. ಮಹದೇವಪ್ಪ

0

ಧಾರವಾಡ: ಸಚಿವ ಹೆಚ್‌ಸಿ ಮಹದೇವಪ್ಪ ಅವರು ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಬಳಿಕ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದ್ದಾರೆ.

ಈ ಬಗ್ಗೆ ವಿವರಿಸಿದ ಅವರು, ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.

ಆಪರೇಷನ್ ಕಮಲ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮಹದೇವಪ್ಪ, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೇ ಹೆಚ್ಚು ಮಾಹಿತಿ ಇದೆ ಎಂದರು.

error: Content is protected !!