Home Blog Page 3174

ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದೆ: ಎಚ್ ಕೆ ಪಾಟೀಲ್

0

ಕಲಬುರಗಿ: ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದ್ದು ಇದು ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆ ಆ ಬಗ್ಗೆ ಪುಸ್ತಕಗಳ ಪ್ರಕಟಣೆ ಸೇರಿದಂತೆ ಜನರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ‌ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿರುವ ಪುರಾತನ ನಾಗಾವಿ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಅವರು ಮಾತನಾಡಿದರು.

ಕನ್ನಡದ ಮೊಟ್ಟಮೊದಲ ವಿವಿ ಅಂದ್ರೆ ಅದು ನಾಗಾವಿ ವಿವಿ. ಇಲ್ಲಿ ಕಾನೂನು, ಗಣಿತ, ವೇದ, ಮನು ಸಾಹಿತ್ಯ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತಿತ್ತು. ಸುಮಾರು 1800 ವರ್ಷಗಳ ಹಿಂದೆ ವಿವಿ ಕೆಲಸ ಮಾಡುತ್ತಿತ್ತು ಎನ್ನುವುದೇ ಹಿರಿಮೆ ಎಂದು ಹೊಗಳಿದರು.

ಇಂತಹ ನಾಗಾವಿ ಪುನರುಜ್ಜೀವನ ಗೊಳ್ಳಬೇಕು ಇದಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದ ಎಂದು ಸಚಿವ ಪ್ರಿಯಾಂಕ್ ಅವರಿಗೆ ಭರವಸೆ ನೀಡಿದರು.

ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

0

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆಎನ್​ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್​ ನೀಡಿದರು. ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.

ಈ ರಾಜ್ಯವನ್ನು ಆಳುವವರೆಗೆ ದೇವರು ಜ್ಞಾನೋದಯ ನೀಡಲಿ: ಹೆಚ್ ಡಿ ಕುಮಾರಸ್ವಾಮಿ

0

ಹಾಸನ: ನಮ್ಮ ನಾಡಿನಲ್ಲಿ ಸಂಪತ್ತು ಹೇರಳವಾಗಿದ್ದು ಅದು ಸಮರ್ಪಕವಾಗಿ ಎಲ್ಲರಿಗೂ  ಸದ್ಬಳಕೆಯಾಗುವಂತೆ ಹಾಗೂ ಹಂಚಿಕೆಯಾಗುವಂತೆ ಈ ರಾಜ್ಯವನ್ನು ಆಳುವವರೆಗೆ ದೇವರು ಜ್ಞಾನೋದಯ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದ ಆದಿ ದೇವತೆ ಹಾಸನಾಂಬ ದೇಗುಲಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿಯೊಡನೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ, ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು,

ದೇವರಿಗೆ ಪೂಜೆ ಸಲ್ಲಿಸುವ ವೇಳೆ ಬರದ ಸಂಕಷ್ಟದಿಂದ ನೊಂದಿರುವ ನಾಡಿನ ಅನ್ನದಾತ ರೈತರಿಗೆ ಒಳ್ಳೆಯದಾಗಲಿ, ನಾಡಿನ ಎಲ್ಲ ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದ ಅವರು, ಬಡವರ ರೈತರ ದೀನದಲಿತರ ಸೇವೆ ಮಾಡಲು ಒಳ್ಳೆಯ ಆರೋಗ್ಯವನ್ನು ತಾಯಿ ನನಗೆ ಕರುಣಿಸಲಿ ಎಂದು  ಕೇಳಿಕೊಂಡಿರುವುದಾಗಿ ತಿಳಿಸಿದರು.

ಪತ್ರಕರ್ತರ ಪ್ರಶ್ನೆಯೆಂದಕ್ಕೆ ಉತ್ತರಿಸಿದ ಅವರು ಜೆ ಡಿ ಎಸ್ ನ ಎಲ್ಲಾ ಶಾಸಕರು ಹಾಸನಾಂಬ ದರ್ಶನಕ್ಕೆ ಆಗಮಿಸಲಿದ್ದು ಹಾಸನಾಂಬೆ ದೇವಿಯ ಪವಿತ್ರ ಕ್ಷೇತ್ರದಿಂದಲೇ ತಾವು ಒಗ್ಗಟ್ಟು ಪ್ರದರ್ಶನ ಮಾಡುವುದಾಗಿ ಇದೆ ವೇಳೆ ಘೋಷಿಸಿದರು. ಹಾಸನಾಂಬ ದೇಗುಲಕ್ಕೆ ತುಂಬಾ ತಂದೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೊಡನೆ ಭೇಟಿ ನೀಡುತ್ತಿದ್ದ ಸಂದರ್ಭವನ್ನು  ಹಾಗೂ ತಮ್ಮ ಅಜ್ಜಿ ಹಾಸನಾಂಬ ದೇವರ ದೀಪಕ್ಕಾಗಿ ಎಣ್ಣೆ ತಂದು ಕೊಡುತ್ತಿದ್ದ ದಿನಗಳನ್ನು ನೆನೆದರು.

ಪ್ರೀತಿಗೆ ಮನೆಯವರ ವಿರೋಧ: ಬೆಂಕಿ ಹಚ್ಚಿಕೊಂಡು ವಿವಾಹಿತ ಮಹಿಳೆ, ಪ್ರೇಮಿ ಆತ್ಮಹತ್ಯೆ

0

ಬೆಂಗಳೂರು: ತಮ್ಮ ಪ್ರೇಮಕ್ಕೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದರೆಂದು ಬೆಂಕಿ ಹಚ್ಚಿಕೊಂಡು ಪ್ರೇಮಿಯೊಂದಿಗೆ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಗುಬ್ಬಿ ನಿವಾಸದ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

ಸೌಮಿನಿ ದಾಸ್ (20), ಅಬಿಲ್ ಅಬ್ರಾಹಂ (29) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಫ್ಲ್ಯಾಟ್‌ನಲ್ಲಿ ಬೆಂಕಿ ಕಂಡು ಅಪಾರ್ಟ್ಮೆಂಟ್ ನಿವಾಸಿಗಳು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯಲ್ಲಿ ಬೆಂದು ಸೌಮಿನಿ ಕೊನೆಯುಸಿರೆಳೆದಿದ್ದಾಳೆ. ಭಾಗಶಃ ಸುಟ್ಟು ಹೋಗಿದ್ದ ಅಬ್ರಾಹಂನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಬ್ರಾಹಂ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಸೌಮಿನಿ ದಾಸ್ ಪಶ್ಚಿಮ ಬಂಗಾಳ ರಾಜ್ಯದವಳಾಗಿದ್ದು, ಕರಿಯಮ್ಮ ಆಗ್ರಹಾರ ಸಮೀಪದ ಖಾಸಗಿ ಕಾಲೇಜಿನಲ್ಲಿ 2ನೇ ವರ್ಷದ ನರ್ಸಿಂಗ್ ಓದುತ್ತಿದ್ದಳು.

ಎರಡು ವರ್ಷಗಳ ಹಿಂದೆಯೇ ಆಕೆಗೆ ವಿವಾಹವಾಗಿತ್ತು. ಇನ್ನು ನರ್ಸ್ ಸರ್ವೀಸ್ ಏಜೆನ್ಸಿ ನಡೆಸುತ್ತಿದ್ದ ಕೇರಳ ಮೂಲದ ಅಬ್ರಾಹಂಗೆ ಕೆಲ ತಿಂಗಳ ಹಿಂದೆ ಸೌಮಿನಿಯ ಪರಿಚಯವಾಗಿತ್ತು. ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ಸೌಮಿನಿ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದಳು.

3 ತಿಂಗಳ ಹಿಂದೆ ಅಬ್ರಾಹಂನನ್ನು ತನ್ನ ಪತಿಗೆ ಸೌಮಿನಿ ಪರಿಚಯ ಮಾಡಿಸಿದ್ದಳು. ದಿನಗಳು ಕಳೆಯುತ್ತಾ ಇವರಿಬ್ಬರ ಪರಿಚಯ ಪ್ರೇಮಕ್ಕೆ ತಿರುಗಿತ್ತು.

ಕೆಲ ದಿನಗಳ ಹಿಂದೆ ಸೌಮಿನಿ ಕೋಲ್ಕತ್ತಾಗೆ ಹೋಗಿದ್ದಳು. ಇದಾದ ಬಳಿಕ ಬೆಂಗಳೂರಿಗೆ ಬಂದಿದ್ದಳು. ನಂತರ ಇಬ್ಬರೂ 14 ದಿನಕ್ಕೆ ಫ್ಲ್ಯಾಟ್‌ವೊಂದನ್ನು ಬಾಡಿಗೆ ಪಡೆದಿದ್ದರು. ಬಳಿಕ ಸೌಮಿನಿ ಪ್ರೇಮದ ವಿಚಾರವನ್ನು ತನ್ನ ಪತಿಗೆ ತಿಳಿಸಿದ್ದಾಳೆ.

ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ ಎನ್ನಲಾಗಿದೆ. ಈ ವಿಚಾರಕ್ಕೆ ಸೌಮಿನಿ ಹಾಗೂ ಅಬ್ರಾಹಂ ಇಬ್ಬರೂ ಸಾಯಲು ತೀರ್ಮಾನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್‌ನಲ್ಲಿ ಪೆಟ್ರೋಲ್ ಸುರಿದುಕೊಂಡು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಮಂಡ್ಯದಲ್ಲಿ ಬತ್ತಿದ ನಾಲೆ -ನೀರಿನ ಸಮಸ್ಯೆಗೆ ಕಂಗಾಲಾದ ರೈತರು

0

ಮಂಡ್ಯ;- ಮಳೆ ಕೊರತೆ ಹಿನ್ನೆಲೆ, ನೀರಿನ ಸಮಸ್ಯೆಗೆ ಸಕ್ಕರೆನಾಡಿನ ರೈತರು ಕಂಗಾಲಾಗಿದ್ದಾರೆ. ನೀರಿಲ್ಲದೆ ಬೆಳೆ ಉಳಿಸಿಕೊಳ್ಳಲು ರೈತರಿಂದ ಹರಸಾಹಸ ನಡೆಯುತ್ತಿದ್ದು, ಬೆಳೆದ ಭತ್ತದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೂಲಕ ಗದ್ದೆಗೆ ನೀರು ಹಾಯಿಸಲಾಗುತ್ತಿದೆ.

ಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅನ್ನದಾತರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. KRS ಡ್ಯಾಂ ಅಚ್ಚುಕಟ್ಟು ಪ್ರದೇಶದ ಕಡೇ ಭಾಗ ಕೊಪ್ಪ ಹೋಬಳಿ. ಡ್ಯಾಂನಿಂದ ನಾಲೆಗೆ ನೀರು ಬಿಟ್ಟರೂ ಕೊಪ್ಪ ಹೋಬಳಿ ತಲುಪಬೇಕಾದರೆ 10ರಿಂದ12 ದಿನ ಬೇಕು. ನೀರು ತಲುಪಿ ಎರಡ್ಮೂರು ದಿನದಲ್ಲೇ ನಾಲೆಗಳಿಗೆ ನೀರು ಸ್ಥಗಿತವಾಗಿದೆ.

ಕಟ್ಟು ಪದ್ಧತಿಯಂತೆ 15 ದಿನಗಳಿಗೆ ಅಧಿಕಾರಿಗಳು ನೀರು ನಿಲ್ಲಿಸಿದ್ದಾರೆ. ಮತ್ತೊಂದೆಡೆ ಮಳೆಯೂ ಕೈಕೊಟ್ಟಿರೋದ್ರಿಂದ ಬೆಳೆ ಒಣಗುತ್ತಿದೆ. ಸಾಲಸೂಲ ಮಾಡಿ ಬೆಳೆದ ಬೇಳೆಗೆ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಮಹರ್ನಾವಮಿ ದೊಡ್ಡಿ,ಗುಡಿದೊಡ್ಡಿ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಕೆ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮದ ರೈತ ವೆಂಕಟೇಶ್ ತಮ್ಮ ಜಮೀನಿನಲ್ಲಿ ಬೆಳೆದಿರುವ ಭತ್ತದ ಬೆಳೆ, ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೂಲಕ ಹಣ ಕೊಟ್ಟು ಬೆಳೆಗೆ ರೈತ ನೀರುಣಿಸುತ್ತಿದ್ದಾರೆ. ಕೈಗೆ ಬಂದ ತುತ್ತನ್ನ ಉಳಿಸಿಕೊಳ್ಳುವಲ್ಲಿ ಹರಸಾಹಸ ರೈತ ವೆಂಕಟೇಶ್ ಹರಸಾಹಸ ಪಡುತ್ತಿದ್ದಾರೆ.

ರೈತರು 15ದಿನಕ್ಕೊಮ್ಮೆ ಬೆಳೆಗೆ 8 ಟ್ಯಾಂಕರ್ ನೀರುಣಿಸುತ್ತಿದ್ದಾರೆ. ಸುಮಾರು 800-1000ರೂ ಹಣ ಕೊಟ್ಟು ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ನಷ್ಟದ ಸುಳಿಗೆ ಸಿಲುಕಿ ಬೆಳೆ ಉಳಿಸಿಕೊಳ್ಳಲು ರೈತರು ಮುಂದಾಗಿದ್ದಾರೆ.

30 ಕುಂಟೆ ಜಮೀನಿನಲ್ಲಿ ರೈತ ಭತ್ತ ಬೆಳೆದಿದ್ದು, ತಮಿಳುನಾಡಿಗೂ ನೀರನ್ನು ಕೊಡುತ್ತೇವೆ, ರೈತರ ಬೆಳೆಗೂ ಕೂಡ ನೀರನ್ನು ಪೂರೈಸುತ್ತೇವೆ ಎಂಬ ಭರವಸೆ ನೀಡಿದ್ದ ಸರ್ಕಾರ.

ಸರ್ಕಾರದ ಬರವಸೆಯಂತೆ ನಾವು ಬೆಳೆಗಳನ್ನು ಬೇಲೆಯಲು ಪ್ರಾರಂಭಿಸಿದ್ದೆವು. ಈ ಹಿನ್ನೆಲೆಯಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಕೊಟ್ಟಿತೇ ವಿನಃ ನಮಗೆ ನೀರು ಕೋಡಲಿಲ್ಲ. ಹಾಗಾಗಿ ಸರ್ಕಾರವೇ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಭತ್ತ ಬರದಿದ್ರೂ ಪರವಾಗಿಲ್ಲ ಜಾನುವಾರಿಗೆ ಮೇವು ಸಿಗಲಿ ಎಂಬ ಸ್ಥಿತಿಗೆ ರೈತರು ಬಂದಿದ್ದಾರೆ. ಈಗಲಾದರೂ KRS ಅಚ್ಚುಕಟ್ಟು ಪ್ರದೇಶದ ಕಡೇ ಭಾಗಕ್ಕೆ ನೀರು ಒದಗಿಸುತ್ತಾರಾ ಅಧಿಕಾರಿಗಳು?*
ಒಣಗುತ್ತಿರುವ ಬೆಳೆ ರಕ್ಷಣೆಗೆ ಮುಂದಾಗುತ್ತಾ ಮಂಡ್ಯ ಜಿಲ್ಲಾಡಳಿತ? ಕಾದು ನೋಡಬೇಕಾಗಿದೆ.

ಮಂಡ್ಯದ ವಿಶ್ವೇಶ್ವರಯ್ಯ ನಾಲಾ ಸುರಂಗ ಭೂ ಕುಸಿತ

0

ಮಂಡ್ಯ;- ವಿಶ್ವೇಶ್ವರಯ್ಯ ನಾಲಾ ಸುರಂಗ ಭೂ ಕುಸಿತ ಉಂಟಾಗಿದೆ. ನಗರದಲ್ಲಿ ರಾತ್ರಿ ಸುರಿದ ಧಾರಕಾರ ಮಳೆಗೆ ಅವಘಡ ಸಂಭವಿಸಿದೆ. ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಘಟನೆ ಜರುಗಿದೆ.

ಘಟನೆಯಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. ರಾಜಣ್ಣ ಎಂಬುವವರ ಮನೆಯ ಹಿಂದೆ ಸುರಂಗ ಕುಸಿದಿದೆ. ಏಕಾಏಕಿ ಸುರಂಗ ಕುಸಿದ ಹಿನ್ನೆಲೆ ಮನೆ ಗೋಡೆ ಕುಸಿತವಾಗಿದೆ.

ಮಂಡ್ಯದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದ ಹಿನ್ನೆಲೆ ಅವಘಡ ಸಂಭವಿಸಿದೆ. ಹುಲಿಕೆರೆ ಬಳಿಯಿಂದ ವಿ.ಸಿ ನಾಲೆಗೆ ನಿರ್ಮಿಸಿರುವ ಸುರಂಗ ಮಾರ್ಗ ಇದಾಗಿದ್ದು, ಏಷ್ಯಾದ ಮೊದಲ ಸುರಂಗ ಮಾರ್ಗವೆಂದೆ ಹುಲಿಕೆರೆ ಬುಗ ಸುರಂಗ ಮಾರ್ಗ ಪ್ರಸಿದ್ದಿಯಾಗಿತ್ತು.

ಮದ್ದೂರು ಮಳವಳ್ಳಿ ತಾಲೂಕಿಗೆ ಈ ಸುರಂಗ ಮಾರ್ಗದ‌ ಮೂಲಕ ಹಾದು ಹೋಗಿರುವ ವಿಸಿ ನಾಲೆ ಎನ್ನಲಾಗಿದ್ದು, ವಿಸಿ ನಾಲೆಯ ಸುರಂಗ ಮಾರ್ಗದ ಭೂ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ.

ದ.ಕ ಜಿಲ್ಲೆಯ ಬೆಳ್ತಂಗಡಿಯ ತೆಕ್ಕಾರು ಗ್ರಾಮದಲ್ಲಿ “ಶ್ರೀ ಕೃಷ್ಣನ ” ಪವಾಡ..!

0

ಮಂಗಳೂರು: ಟಿಪ್ಪು ಸುಲ್ತಾನ್‌ ಧ್ವಂಸಗೊಳಿಸಿದ್ದಾನೆ ಎನ್ನಲಾದ ಶ್ರೀ ಭಗವದ್‌ ಗೋಪಾಲಕೃಷ್ಣ ದೇಗುಲ 15 ಅಡಿ ಆಳದಲ್ಲಿ ಪತ್ತೆಯಾಗಿದೆ. ಅದು ಕೂಡ ಶ್ರೀಕೃಷ್ಣನೇ ಹಿಂದೂ ವ್ಯಕ್ತಿಯೊಬ್ಬರ ಕನಸಲ್ಲಿ ಬಂದು ದೇಗುಲ ಇರುವ ಬಗ್ಗೆ ಸುಳಿವು ನೀಡಿದ್ದು, ಜಾಗದಲ್ಲಿ ಶೋಧನೆ ಮಾಡಿದಾಗ ದೇಗುಲದ ಅವಶೇಷಗಳು ಹಾಗೂ ಗೋಪಾಲಕೃಷ್ಣ ಮೂರ್ತಿ ಇರುವುದು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಪತ್ತೆಯಾಗಿದೆ. ಸಾಕ್ಷಾತ್ ವಿಷ್ಣುವೇ ಕನಸಿನಲ್ಲಿ ಬಂದು ಇರುವಿಕೆ ತೋರಿದ ರೋಚಕ ಸ್ಟೋರಿಯಾಗಿದೆ.

ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಸರ್ಕಾರಿ ಜಾಗದಲ್ಲಿ ದೇವರ ವಿಗ್ರಹ, ಪಾಣಿಪೀಠ, ಪಂಚಾಂಗದ ಕಲ್ಲುಗಳು ಪತ್ತೆಯಾಗಿವೆ. ಪ್ರಶ್ನಾ ಚಿಂತನೆ ಹಿನ್ನೆಲೆಯಲ್ಲಿ ಉತ್ಖನನದ ವೇಳೆ 15 ಅಡಿ ಆಳದಲ್ಲಿ ಪತ್ತೆಯಾಗಿದೆ. ತೆಕ್ಕಾರು ಗ್ರಾಮದ ಜನರನ್ನು ಅಚ್ಚರಿಗೆ ತಳ್ಳಿದ ದೇವರ ಪವಾಡ. ನೂರಾರು ವರ್ಷಗಳ ಹಿಂದೆಯೇ ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಗಿದೆ ಎನ್ನಲಾದ ಗೋಪಾಲಕೃಷ್ಣ ದೇವಸ್ಥಾನ ಈಗ ಪತ್ತೆಯಾಗಿದೆ.

ಟಿಪ್ಪು ಸುಲ್ತಾಲ್ ದಂಡಯಾತ್ರೆ ಬಂದಿದ್ದ ತೆಕ್ಕಾರು ಪ್ರದೇಶದಲ್ಲಿ ಹತ್ತಾರು ವರ್ಷಗಳ ಹಿಂದೆಯೇ ಗ್ರಾಮದಲ್ಲಿ ದೇವಸ್ಥಾನ ಇರೋ ಬಗ್ಗೆ ಪ್ರಶ್ನಾಚಿಂತನೆ ವೇಳೆ ಬಯಲಾಗಿದೆ. ಅಲ್ಲದೇ ಕೆಲ ಹಿರಿಯರ ಮಾಹಿತಿಯಂತೆ ಮುಸ್ಲಿಂ ವ್ಯಕ್ತಿಯ ಜಾಗದಲ್ಲಿ ದೇವಸ್ಥಾನವಿದ್ದ ಮಾಹಿತಿಯಿದೆ. ಹೀಗಾಗಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ಮಾಡಿಕೊಂಡು ದೇವಸ್ಥಾನ ಶೋಧ ಆರಂಭಿಸಿದ್ದ ಗ್ರಾಮಸ್ಥರು. ಆದರೆ, ನಿಖರ ಜಾಗದ ಮಾಹಿತಿ ಇಲ್ಲದ ಕಾರಣ ಗ್ರಾಮಸ್ಥರು ಸುಮ್ಮನಾಗಿದ್ದರು.

 

ಖಾಸಗಿ ಕ್ರಷರ್ ಗಳ ಹಾವಳಿಗೆ ಸರ್ಕಾರಿ ರಸ್ತೆಯೇ ದೋಖಾ

0

ಬಳ್ಳಾರಿ :ನಗರದಲ್ಲಿ ಸರ್ಕಾರಿ ಕಾಲುವೆಯ ರಸ್ತೆಗೆ ದೋಖಾ ಬಿದ್ದಿದೆ. ನಿರಂತರ ಬೃಹತ್ ಗಾಡಿಗಳ ಒಡಾಟದಿಂದ ಕಾಲುವೆಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಬೃಹತ್ ಲಾರಿಗಳಲ್ಲಿ ಕಲ್ಲು, ಬಿಂಚೆ ಸಾಗಾಟ ರಾಜಾರೋಷವಾಗಿ ಸಾಗಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ವಾಹನಗಳ ಓಡಾಟಕ್ಕೆ ಸಂಪೂರ್ಣ ನಿಷೇಧವಿದ್ದರು, ರಾಜಾರೋಷವಾಗಿ ಕ್ರಷರ್ ವಾಹನಗಳ ಓಡಾಟ ನಡೆಸಿದ್ದಾರೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಸ್ಥಳೀಯ ನಿವಾಸಿಗಳು ಹಲವು ಬಾರಿ ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಿಲ್ಲ….

ಜಿಲ್ಲೆಯ ನೂತನ ತಾಲೂಕಾದ ಕುರುಗೋಡಿನ ಶ್ರೀನಿವಾಸಪುರದಲ್ಲಿ ಬಳಿ ಘಟನೆ ಜರುಗಿದೆ. ಶ್ರೀನಿವಾಸಪುರ ಗ್ರಾಮದ ಬಳಿ ಇರುವ ಸುಮಾರು 3 ಕ್ರಷರ್ಗಳಿಂದಾಗಿ ಕಾಲುವೆಗೆ ಧಕ್ಕೆ ಉಂಟಾಗಿದೆ. ಬಾರಿ ತೂಕದ ಲೋಡ್ಗಳಿಂದಾಗಿ ಕಾಲುವೆ ಗಡ್ಡೆ ಕುಸಿತವಾಗಿದೆ. ರಸ್ತೆಯ ತುಂಬಾ ಕುಣಿಗಳ ರಾಶಿ, ಅಲ್ಲಲ್ಲಿ ಕಾಲುವೆಯ ಕಟ್ಟಡ ಬಿರುಕು ಬಿಟ್ಟಿದೆ. ಈ ಕುರಿತು ಹಲವು ಬಾರು ಎಚ್ ಎಲ್ ಸಿ ಕಾಲುವೆಯ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಿಲ್ಲ…

ನಂ-6, ಎಚ್.ಎಲ್.ಸಿ ಕಾಲುವೆಯ ಉಪಕಾಲುವೆ 6R ಕಾಲುವೆಯ ದುಸ್ಥಿತಿ ಉಂಟಾಗಿದೆ. ಈ ಉಪ- ಕಾಲುವೆಯಿಂದ ಲಕ್ಷ್ಮಿಪುರ, ಕೆರೆಕೆರೆ, ಮುಷ್ಠಗಟ್ಟಿ ಗ್ರಾಮದ ಹೋಲಗಳಿಗೆ ನೀರು ಹೋಗಲು ರೈತರು ಹರಸಾಹಸ ಪಡಬೇಕಾಹಿದೆ. ಕ್ರಸರ್ಗಳ ಧೂಳಿಗೆ ಸುತ್ತಲು ಇರುವ ಹೋಲಗಳ ಬೆಳೆಯ ಮೇಲೆ ಧೂಳು ಬೀಳುತ್ತಿದೆ. ಬೇಸತ್ತ ರೈತರು ಹಲವು ಬಾರಿ ಸ್ಥಳೀಯ ತಹಶೀಲ್ದಾರ್ ಅವರ ಗಮನಕ್ಕೆ ತಂದರು ಅಧಿಕಾರಿಗಳು ಮಾತ್ರ ಕಾರ್ಯಪ್ರವೃತರಾಗಿಲ್ಲ.

ಬೆಂಗಳೂರಿನಲ್ಲಿ ಸೋಮವಾರ ಭೀಕರ ಮಳೆ: ಎಲ್ಲೆಲ್ಲಿ ಎಷ್ಟು ಮಳೆ?, ಇಲ್ಲಿದೆ ಡೀಟೈಲ್ಸ್

0

ಬೆಂಗಳೂರು;- ನಗರದ ಹಲವು ಕಡೆಗಳಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಗೆ ನಿವಾಸಿಗಳು ಹೈರಾಣಾಗಿದ್ದಾರೆ. ಅನೇಕ ಕಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ, ಮರಗಳು ಧರೆಗೆ ಉರುಳಿವೆ. ಇನ್ನು ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆಯಾಗಿದೆ.

ಕಳೆದ ಎರಡೂ ಮೂರು ದಿನದಿಂದ ವಾತಾವರಣದಲ್ಲಿ ಬದಲಾವಣೆ ಹಾಗೂ ಬೆಳಿಗ್ಗೆಯಿಂದ ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದಿದ್ದ ಸಿಲಿಕಾನ್ ಸಿಟಿಗೆ ಇದ್ದಕ್ಕಿಂತೆ ಮಳೆರಾಯ ತಂಪೆರೆದಿದ್ದ. ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ಹೊತ್ತಲ್ಲಿ, ಇದ್ದಕ್ಕಿದ್ದಂತೆ ಮಳೆರಾಯ ಎಂಟ್ರಿಯಾಗಿದ್ದು ಅರ್ಧ ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಅಲ್ಲಲ್ಲಿ ಟ್ರಾಫಿಕ್ ಜಾಂ ಆಗುವಂತೆ ಮಾಡಿತ್ತು. ರಸ್ತೆಗಳೆಲ್ಲ ನದಿಗಳಂತಾಗಿದ್ದವು.

ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ. ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿದೆ. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​​ಮೆಂಟ್​ಗೆ ಮಳೆ ನೀರು ನುಗ್ಗಿ ಅಪಾರ್ಟ್​​ಮೆಂಟ್ ಸುತ್ತಲೂ ಇರುವ ಪಾರ್ಕಿಂಗ್ ಜಾಗ ಜಲಾವೃತಗೊಂಡಿದೆ. ಕಳೆದ ಬಾರಿಯೂ ಮಳೆ ಬಿದ್ದಾಗ ನೀರು ನುಗ್ಗಿ ಅವಾಂತರ ಆಗಿತ್ತು.

ಎಲ್ಲೆಲ್ಲಿ ಎಷ್ಟು ಮಳೆ?

ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆ

ಹಂಪಿ ನಗರದ ವ್ಯಾಪ್ತಿಯಲ್ಲಿ 86 ಮಿಲಿ ಮೀಟರ್ ಮಳೆಯಾಗಿದೆ

ನಾಗಪುರ ಬಡಾವಣೆಯಲ್ಲಿ 82.50 ಮಿಲಿ ಮೀಟರ್ ಮಳೆ ದಾಖಲು

ನಂದಿನಿ ಲೇಔಟ್​​ನಲ್ಲಿ 70.60 ಮಿ.ಮೀ.,ನಾಗೇನಹಳ್ಳಿ 71 ಮಿ.ಮೀ.

ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಲಿ ಮೀಟರ್ ಮಳೆ

ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 MM

ಕೊಟ್ಟಿಗೆಪಾಳ್ಯ 64 ಮಿ.ಮೀ.,
ಅಗ್ರಹಾರದಾಸರಹಳ್ಳಿ 64 ಮಿ.ಮೀ. ಮಳೆ

ಕಮ್ಮನಹಳ್ಳಿ (ಈಸ್ಟ್ ಜೋನ್) 6.95 ಸೆಂ.ಮೀ ಮಳೆ

ಮಾರುತಿ ಮಂದಿರ ವಾರ್ಡ್ 6.8 ಸೆಂ.ಮೀ ಮಳೆ.

ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 6.75 ಸೆಂ. ಮೀ ಮಳೆ

ನ.10 ರಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

0

ಬೆಳಗಾವಿ : ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇದೇ ತಿಂಗಳು 10ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅದಕ್ಕೂ ಮಣಿಯದಿದ್ದರೆ ಚಳಿಗಾಲ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ.

ರೈತರ ಪಂಪಸೆಟ್‌ಗಳಿಗೆ ವಿದ್ಯುತ್‌ ಪಡೆಯಬೇಕಾದರೇ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‌ಫಾರ್ಮ‌ರ್, ಕಂಬ ಮತ್ತು ತಂತಿ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ರೈತರೇ ಖರೀದಿಸಬೇಕೆಂದು ಆದೇಶ ಹೊರಡಿಸಿದ್ದು ಖಂಡನೀಯ. ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂ. ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್‌ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ ಎಂದು ಆರೋಪಿಸಿದರು.

ವಿದ್ಯುತ್‌ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಅಧಿಕಾರಕ್ಕೆ ಬಂದ ಐದು ತಿಂಗಳಲ್ಲಿ ಯಾರು ಸಿಎಂ ಆಗಬೇಕು. ಎಷ್ಟು ಮಂದಿಯನ್ನು ಹೊಸದಾಗಿ ಡಿಸಿಎಂ ಮಾಡಬೇಕೆಂದಷ್ಟೇ ಚರ್ಚೆ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇನೆ ಎಂದು ಆತಂಕಗೊಂಡಿದ್ದು, ಇದರಿಂದಾಗಿಯೇ ರಾಜ್ಯದ ರೈತರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ನಿಮ್ಮ ರಾಜಕೀಯ ದೊಂಬರಾಟ ನಿಲ್ಲಿಸಿ, ರಾಜ್ಯದ ರಾಜಕೀಯ ಇತಿಹಾಸದಲ್ಲಿ ರೈತ ವಿರೋಧಿ ನಿರ್ಣಯ ಕೈಗೊಂಡ ಸರ್ಕಾರ ಉಳಿದ ಉದಾಹರಣೆ ಇಲ್ಲ ಎಂದು ಈರಣ್ಣ ಕಡಾಡಿ ತಿಳಿಸಿದರು.

ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ಎಂದು ಘೋಷಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದುರ್ದೈವ ಮತ್ತು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೋಗಿದ್ದಾರೆ. ಆದರೆ ಹಗಲು ಹೊತ್ತಿನಲ್ಲಿ ವಿದ್ಯುತ್‌ ಪೂರೈಕೆಯಾಗದೇ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೋಗುವಂತಾಗಿದೆ ಎಂದು ಈರಣ್ಣ ಕಡಾಡಿ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಯಾವುದೇ ರೀತಿ ಅನುಕೂಲ ಆಗಿಲ್ಲ. ಶಕ್ತಿ ಯೋಜನೆ ಕೊಟ್ಟ ಬಳಿಕ ಎಷ್ಟು ಬಸ್ ಹೆಚ್ಚಿಸಬೇಕೆಂದು ಯೋಚಿಸಲಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಅಲ್ಲದೇ 200 ಯೂನಿಟ್ ಎಂದು ಹೇಳಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲೂ ಮೋಸ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೊಡುತ್ತಿರುವ ಐದು ಕೆಜಿ ಅಕ್ಕಿ ರಾಜ್ಯ ಸರ್ಕಾರದ್ದು ಎಂದು ಎಂದು ಹೇಳಿಕೊಳ್ಳುತ್ತಿದ್ದಾರೆ. ಯುವನಿಧಿ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ ಎಂದು ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದರು.

ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರಕ್ಕೆ ಜಿಲ್ಲೆಗೆ ಅಧ್ಯಕ್ಷರಿದ್ದಾರೆ. ಅವರವರ ಇತಿಮಿತಿಯೊಳಗೆ ನಮ್ಮ ಶಾಸಕರು, ಪದಾಧಿಕಾರಿಗಳು ದಿನನಿತ್ಯ ಹೋರಾಟ ಮಾಡುತ್ತಿದ್ದೇವೆ. ಹಾಗಾಗಿ, ಯಾವುದೂ ಕೆಲಸ ನಿಂತಿಲ್ಲ ಎಂದ ಈರಣ್ಣ ಕಡಾಡಿ, ಜಿಲ್ಲಾ ಬಿಜೆಪಿಯಲ್ಲಿ ಬಣಗಳೇ ಇಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ ಎಂದರು.

error: Content is protected !!