Home Blog Page 3187

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ ಖಂಡಿಸಿ ಪ್ರೊಟೆಸ್ಟ್, ಅರೆಸ್ಟ್

0

ಕಲಬುರ್ಗಿ;- ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರದ ನಿರ್ಲಕ್ಷ ಆರೋಪ ಇದೀಗ ಕೇಳಿ ಬಂದಿದೆ. ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ ಹಿನ್ನಲೆ, ಕಲಬುರಗಿಯಲ್ಲಿ ಎಂಎಸ್ ಪಾಟೀಲ್ ಸೇರಿ ಹಲವರನ್ನು ಬಂಧಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಪಾಟೀಲ್ ಅವರು, ಸರ್ದಾರ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದರು.

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

0

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.

ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದರು.

ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಬಿಬಿಎಂಪಿ: “ಕರ್ನಾಟಕ ರಾಜ್ಯೋತ್ಸವಕ್ಕೆ ಮುಖ್ಯ ಆಯುಕ್ತರ ಚಾಲನೆ

0

ಬೆಂಗಳೂರು;- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ”ದ ಅಂಗವಾಗಿ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್  ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.

ಕರ್ನಾಟಕ ರಾಜ್ಯೋತ್ಸವ ವಿಶೇಷ ರೀತಿಯಲ್ಲಿ ಆಚರಣೆ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಧ್ವಜಾರೋಹಣ ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಕ್ರಮವಾಗಿ 05 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸಲಾಯಿತು.

(ಅ) ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು – ಹುಯಿಲಗೊಳ ನಾರಾಯಣರಾಯರು
(ಆ) ಎಲ್ಲಾದರು ಇರು ಎಂತಾದರು ಇರು – ಕುವೆಂಪು
(ಇ) ಒಂದೇ ಒಂದೇ ಕರ್ನಾಟಕ ಒಂದೇ – ದ.ರಾ.ಬೇಂದ್ರೆ
(ಈ) ಹೊತ್ತಿತೋ ಹೊತ್ತಿತೋ ಕನ್ನಡದ ದೀಪ – ಸಿದ್ದಯ್ಯ ಪುರಾಣಿಕ
(ಉ) ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ – ಚನ್ನವೀರ ಕಣವಿ

ಪಾಲಿಕೆ‌ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಮುಂದೆ ಕೆಂಪು ಮತ್ತು ಹಳದಿ ಬಣ್ಣದಲ್ಲಿ ಕರ್ನಾಟಕದ ನಕ್ಷೆಯ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯಲಾಯಿತು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಶಿವಾನಂದ ಕಲ್ಕೆರಿ, ಡಾ. ಕೆ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಜಂಟಿ ಆಯುಕ್ತರಾದ ಪ್ರತಿಭಾ, ಪೂರ್ಣಿಮಾ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಿಷ್ಟಾಚಾರ ಉಲ್ಲಂಘನೆ ಆರೋಪ: ಪ್ರವಾಸೋದ್ಯಮ ಅಧಿಕಾರಿ ಕೊಟ್ರೇಶ್ವರಿಗೆ ಜಿಲ್ಲಾಧಿಕಾರಿಯಿಂದ ನೋಟಿಸ್

0

ಗದಗ;- ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿಗೆ ಶಿಷ್ಟಾಚಾರ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ವಿವರಣೆ ಕೇಳಿ ನೋಟಿಸ್ ನೀಡಲಾಗಿದೆ.

ಗದಗ ಜಿಲ್ಲಾಧಿಕಾರಿಗಳಿಂದ ನೋಟಿಸ್ ಜಾರಿ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಪತ್ರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ಅ.21 ರಂದು ಗದಗ ನಗರದ ಭೀಷ್ಮಕೆರೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಹಾಯಿ ದೋಣಿ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿ. ಪ. ಸದಸ್ಯ ಎಸ್.ವಿ ಸಂಕನೂರ ಪ್ರವಾಸದಲ್ಲಿದ್ದಾಗ ಅವರ ಮನೆಗೆ ತಲುಪಿಸಲಾಗಿದೆ. ಆದ್ರೆ ಪ್ರವಾಸೋದಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಖುದ್ದಾಗಿ ಭೇಟಿ ನೀಡಿ ಆಮಂತ್ರಣ ನೀಡದ ಹಿನ್ನೆಲೆ, ಹಾಗೂ ಆಪ್ತಸಹಾಯಕರಿಗಾಗಲಿ ದೂರವಾಣಿ ಮೂಲಕ ಯಾವುದೇ ಮಾಹಿತಿ ನೀಡದ ಹಿನ್ನೆಲೆ, ವಿ. ಪ. ಸದಸ್ಯ ಎಸ್ ವಿ ಸಂಕನೂರ ಗದಗನಲ್ಲಿದ್ರೂ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಇದರಿಂದ ಅವಮಾನವಾಗಿ ನನ್ನ ಹಕ್ಕು ಚ್ಯುತಿಗೆ ಕಾರಣವಾಗಿದೆ ಎಂದು ಪತ್ರದಲ್ಲಿ ಸಂಕನೂರ ದೂರಿದ್ದಾರೆ.

ಪ್ರವಾಸೋದ್ಯಮ ಅಧಿಕಾರಿಗಳ ಮೇಲೆ ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲು ಉಲ್ಲೇಖಿತ ಪತ್ರ ಬರೆಯಲಾಗಿದೆ. ಮೇಲ್ನೋಟಕ್ಕೆ ಶಿಷ್ಟಾಚಾರ ಉಲ್ಲಂಘನೆಯಾಗಿರುವುದು ಕಂಡು ಬಂದಿರೋ ಹಿನ್ನೆಲೆ, ಕಾರಣ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದು? ಎಂಬ ಬಗ್ಗೆ ವಿವರಣೆಯನ್ನು 03 ದಿನಗಳೊಳಗಾಗಿ ಈ ಕಾರ್ಯಾಲಯಕ್ಕೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಂದ ನೋಟಿಸ್ ಜಾರಿ ಮಾಡಲಾಗಿದೆ.

ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ HK ಪಾಟೀಲ್ ಚಾಲನೆ

0

ಗದಗ;- 68ನೇ ಕನ್ನಡ ರಾಜ್ಯೋತ್ಸವ ಆಚರಣೆ ಗದಗ ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ನಡೆಯುತ್ತಿದೆ. ಗದಗ  ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ ಏರ್ಪಡಿಸಿದ್ದ ಧ್ವಜಾರೋಹಣವನ್ನು  ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರಿಂದ ನೆರವೇರಿಸಲಾಯಿತು.

ಪೊಲೀಸ್,  ಅಬಕಾರಿ, ಅಗ್ನಿಶಾಮಕ, ಎನ್ ಸಿ ಸಿ, ಸೇವಾದಳ, ಮಾಜಿ ಸೈನಿಕರಿಂದ ಆಕರ್ಷಕ ಪಥ ಸಂಚಲನ ನಡೆದಿದ್ದು, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪೊಲೀಸ್ ಇಲಾಖೆ ಕನ್ನಡದಲ್ಲೇ ಪಥ ಸಂಚಲನ ಕಮಾಂಡ್ ನೀಡಿದೆ.

ಆರ್ ಪಿ ಐ ಶಂಕರ ಚೌಧರಿಯಿಂದ ಕನ್ನಡದಲ್ಲೇ ಪರೇಡ್ ಕಮಾಂಡ್ ನಡೆದಿದೆ. ವಿ. ಪ. ಸದಸ್ಯ ಎಸ್ ವಿ ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

0

ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್​.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್​. ವಿ.ದೇಶಪಾಂಡೆ​ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

ಕರ್ನಾಟಕ ಸಂಭ್ರಮ -50: ಶಾಲಾ ಮಕ್ಕಳಿಂದ ಪ್ರಭಾತ ಪೇರಿ

0

ಲಕ್ಷ್ಮೇಶ್ವರ: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದ ಕರ್ನಾಟಕ ಸಂಭ್ರಮ-50 ಸಂಭ್ರಮದ ಹಿನ್ನೆಲೆಯಲ್ಲಿ ಗದಗ ಜಿಲ್ಲಾದ್ಯಾಂತ ಸಂಭ್ರಮ ಮನೆ ಮಾಡಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮತ್ತು ಗಂಡು ಮಕ್ಕಳ ಅವಳಿ ಶಾಲೆಗಳ ಮಕ್ಕಳಿಂದ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಹಾಗೂ ಪ್ರಭಾತ ಪೇರಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅವಳಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕ ಸಿಬ್ಬಂದಿಗಳು, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

error: Content is protected !!